Tag: Vaishno Devi Temple

  • ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌

    ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌

    ಬೆಂಗಳೂರು: ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್‌ (Kangana Ranaut) ಶುಕ್ರವಾರ ಬೆಂಗಳೂರಿನ (Bengaluru) ಶಿವೋಹಂ ಶಿವ ಮತ್ತು ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಪಾರ್ಥನೆ ಸಲ್ಲಿಸಿದ್ದರು.

    65 ಅಡಿ ಎತ್ತರದ ಭವ್ಯವಾದ ಶಿವನ ಪ್ರತಿಮೆ ಹಾಗೂ ಧ್ಯಾನ ಮಂದಿರವನ್ನು ಹೊಂದಿರುವ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದರು. ಆಧ್ಯಾತ್ಮಿಕತೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ನಟಿ ಅದೇ ಆವರಣದಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೂ ಹೋಗಿ ಸ್ವಲ್ಪ ಕಾಲಕಳೆದರು.ಇದನ್ನೂ ಓದಿ: ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್

    ಇದೇ ವೇಳೆ ದೇವಸ್ಥಾನದ ಸಂಸ್ಥಾಪಕ, ಆಧ್ಯಾತ್ಮಿಕ ನಾಯಕ ಏರ್-ಆತ್ಮನ್ ಇನ್ ರವಿ ಅವರ ಜೊತೆ ಮಾತುಕತೆ ನಡೆಸಿದರು. ಅವರ ಭೇಟಿ ಕುರಿತು ಮಾತನಾಡಿದ ಕಂಗನಾ, ಏರ್ ಆತ್ಮನ್ ಜೊತೆಗಿನ ಸಂಭಾಷಣೆ ಬಹಳ ಅರ್ಥಪೂರ್ಣವಾಗಿತ್ತು. ಅವರ ಆಂತರಿಕ ಆಧ್ಯಾತ್ಮಿಕ ದೃಷ್ಟಿಕೋನ ನನ್ನಲ್ಲಿ ಪ್ರತಿಧ್ವನಿಸುತ್ತದೆ. ನಾನು ಬೆಂಗಳೂರಿನಲ್ಲಿರುವಾಗಲೆಲ್ಲಾ, ಧ್ಯಾನ ಮಾಡಲು ಇಲ್ಲಿಗೆ ಬರಲು ಇಷ್ಟಪಡುತ್ತೇನೆ ಎಂದು ಹೇಳಿದರು.

    ಈ ಕುರಿತು ಏರ್-ಆತ್ಮನ್ ಇನ್ ರವಿ ಮಾತನಾಡಿ, ಕಂಗನಾ ರಣಾವತ್‌ ಅವರನ್ನು ಶಿವೋಹಂ ಶಿವ ದೇವಾಲಯಕ್ಕೆ ಸ್ವಾಗತಿಸುವುದು ಗೌರವದ ಸಂಗತಿ. ಜೀವನದಲ್ಲಿ ಆಂತರಿಕ ಶಾಂತಿಗಾಗಿ ಸುಂದರ ಆಲೋಚನೆಗಳು ಹೇಗಿರಬೇಕು ಎನ್ನುವುದರ ಬಗ್ಗೆ ಮಾತನಾಡಿದೆವು. ನಮ್ಮನ್ನು ನಾವು ದೈವಿಕ ಆತ್ಮ ಎಂದುಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಇದೆಲ್ಲವೂ ನಮ್ಮನ್ನು ನಾವು ಸಂತೋಷದ ಜೀವನಕ್ಕೆ ಕೊಂಡೊಯ್ಯುವ ಮಾರ್ಗವಾಗಿದೆ ಎಂದರು.ಇದನ್ನೂ ಓದಿ: Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

  • ಐವರು ಕೇಂದ್ರ ಸಚಿವರು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವಿದೆ: ಪರಮೇಶ್ವರ್

    ಐವರು ಕೇಂದ್ರ ಸಚಿವರು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವಿದೆ: ಪರಮೇಶ್ವರ್

    -ಸಂಪುಟದಲ್ಲಿ ದಲಿತ, ಒಬಿಸಿ ವರ್ಗದ ನಿರ್ಲಕ್ಷ್ಯ ಎಂದು ಅಸಮಾಧಾನ

    ಬೆಂಗಳೂರು: ರಾಜ್ಯದ ಐವರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿರುವುದನ್ನು ಸ್ವಾಗತಿಸುತ್ತೇನೆ. ಐವರು ರಾಜ್ಯದ ಸಮಸ್ಯೆಗಳನ್ನು ಕೇಂದ್ರದ ಮಟ್ಟದಲ್ಲಿ ಪರಿಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ (G.Parameshwar) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅವರು ವಿಫಲರಾದರೆ ಅವರಿಗೂ, ಅವರ ಪಕ್ಷಕ್ಕೂ ನಷ್ಟವಾಗಲಿದೆ. ನಮ್ಮ ಸಮಸ್ಯೆಗಳನ್ನು ಕೇಂದ್ರದಲ್ಲಿ ಬಗೆಹರಿಸದಿದ್ದರೆ ಸಹಜವಾಗಿ ಅವರನ್ನು ದೂರಬೇಕಾಗುತ್ತದೆ. ಇದಕ್ಕೆ ಅವರು ಅವಕಾಶ ಕೊಡುವುದಿಲ್ಲ ಎಂದು ಭಾವಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: NCP ನಾಯಕ ಪ್ರಫುಲ್‌ ಪಟೇಲ್‌ಗೆ ಬಿಗ್‌ ರಿಲೀಫ್‌ – 180 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಇಡಿ ಆದೇಶ ರದ್ದು!

    ನೂತನ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ವಿಚಾರವಾಗಿ, ಅವರು ಎರಡು ಸಲ ಸಿಎಂ ಆಗಿದ್ದವರು. ಈಗ ಕೇಂದ್ರದಲ್ಲಿ ಸಚಿವರಾಗಿ ಆಯ್ಕೆ ಆಗಿದ್ದಾರೆ. ಸ್ವಾಭಾವಿಕವಾಗಿ ಅವರಿಗೆ ಕೇಂದ್ರದ ಸಹಕಾರ ಇದ್ದೇ ಇರುತ್ತದೆ. ಇದನ್ನ ಉಪಯೋಗ ಮಾಡಿಕೊಂಡು ಅವರು ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

    ಕೇಂದ್ರದ ಸಂಪುಟದಲ್ಲಿ ರಾಜ್ಯದ ದಲಿತ ಹಾಗೂ ಒಬಿಸಿಗೆ ಪ್ರಾಮುಖ್ಯತೆ ಕೊಡದ ವಿಚಾರವಾಗಿ, ಕೇಂದ್ರದ ಬಿಜೆಪಿಗೆ ದಲಿತ, ಒಬಿಸಿ ಸಂಸದರು ಬೇಕಾಗಿಲ್ಲ ಎಂದು ಕಾಣುತ್ತದೆ. ರಾಜ್ಯದಿಂದ ದಲಿತ, ಒಬಿಸಿ ಸಮುದಾಯದವರೂ ಆಯ್ಕೆಯಾಗಿದ್ದಾರೆ. ಅವರಿಗೂ ಸಚಿವ ಸ್ಥಾನ ಕೊಡಬೇಕಿತ್ತು. ಈ ಎರಡೂ ಸಮುದಾಯಗಳನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

    ಹೆಚ್ಚುವರಿ ಡಿಸಿಎಂ ಹುದ್ದೆಗಳ ಚರ್ಚೆ ನಡೆದಿಲ್ಲ: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಚರ್ಚೆ ನಡೆಯುತ್ತಿಲ್ಲ. ಯಾರೋ ನಾಲ್ಕು ಜನ ಮಾತಾಡ್ತಾರೆ ಎಂದ ಮಾತ್ರಕ್ಕೆ ಅದು ಪಕ್ಷದ ವಿಚಾರ ಆಗಲ್ಲ. ಪಕ್ಷದಲ್ಲಿ ಅದರ ಬಗ್ಗೆ ಚರ್ಚೆ ನಡೆದಿಲ್ಲ. ಹೆಚ್ಚುವರಿ ಡಿಸಿಎಂ ಸೃಷ್ಟಿ ಮಾಡಬೇಕೋ ಬೇಡವೋ ಎಂಬುದನ್ನು ವರಿಷ್ಠರು ತೀರ್ಮಾನ ಮಾಡ್ತಾರೆ. ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ಹೈಕಮಾಂಡ್‍ಗೆ ಎನಿಸಿದರೆ ಈ ತೀರ್ಮಾನ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಜಮ್ಮು ಕಾಶ್ಮೀರದಲ್ಲಿ ವೈಷ್ಣೋದೇವಿ ದರ್ಶನಕ್ಕೆ (Vaishno Devi Temple) ತೆರಳಿದ್ದ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿಯಿಂದ 10 ಜನ ದುರ್ಮರಣ ಹೊಂದಿರುವ ವಿಚಾರವಾಗಿ, ಇದೊಂದು ದುರಾದೃಷ್ಟಕರ ಘಟನೆ. ಮೋದಿ ಪದಗ್ರಹಣ ಕಾರ್ಯಕ್ರಮದ ದಿನದಂದೇ ಈ ದಾಳಿಯಾಗಿದೆ. ಈ ದಾಳಿ ತಪ್ಪಿಸಲು ಹೋಗಿ ಬಸ್ ಕಂದಕಕ್ಕೆ ಬಿದ್ದಿದೆ. ಇದರಲ್ಲಿ ಭದ್ರತಾ ಲೋಪ ಆಗಿದೆ. ಯಾವುದೇ ಉಗ್ರರ ದಾಳಿ ನಡೆದಿಲ್ಲ, ಮಿಲಿಟರಿ ಆಪರೇಷನ್ ಇಲ್ಲ ಎನ್ನುತ್ತಿದ್ದರು. ಈಗ ಬೇರೆ ರೀತಿ ಆಗಿದೆ, ಇನ್ನಷ್ಟು ರಕ್ಷಣೆ ಕೊಡಬೇಕಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ – ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

  • ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ – ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

    ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ – ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ  (Jammu and Kashmir) ರಿಯಾಸಿಯಲ್ಲಿ (Reasi) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‍ನ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ.

    ಉಗ್ರ ಸಂಘಟನೆ ದಾಳಿ ಬಗ್ಗೆ ಸಂದೇಶವನ್ನು ರವಾನಿಸಿದೆ. ಸಂದೇಶದಲ್ಲಿ ಇದು ಆರಂಭ, ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ ಮೇಲೆ ಹೆಚ್ಚಿನ ದಾಳಿ ನಡೆಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ.

    ಭಯೋತ್ಪಾದಕರ ಪತ್ತೆಗೆ ಭಾರತೀಯ ಸೇನೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಂದಕಕ್ಕೆ ಬಿದ್ದ ನಂತರವೂ ಬಸ್ಸಿನ ಬಳಿ ಬಂದು ಗುಂಡಿನ ದಾಳಿ ನಡೆಸಿದ್ದ ಉಗ್ರರು : ಭಯಾನಕ ಅನುಭವ ಬಿಚ್ಚಿಟ್ಟ ಯತ್ರಾರ್ಥಿ

    ಭಾನುವಾರ (ಜೂ.9) ಮಾತಾ ವೈಷ್ಣೋ ದೇವಿ (Vaishno Devi Temple) ದೇಗುಲದ ಕತ್ರಾ ಮಾರ್ಗವಾಗಿ ಶಿವ ಖೋರಿ ದೇಗುಲದಿಂದ ಯಾತ್ರಾರ್ಥಿಗಳು ಬಸ್‍ನಲ್ಲಿ ಹಿಂತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದರು. ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಬಸ್ಸಿನ ಚಾಲಕನಿಗೆ ಬುಲೆಟ್ ತಗುಲಿ ವಾಹನ ಕಮರಿಗೆ ಉರುಳಿತ್ತು. ಘಟನೆಯಲ್ಲಿ ಬಸ್ ಕಂಡಕ್ಟರ್ ಮತ್ತು ಚಾಲಕ ಸೇರಿ 9 ಮಂದಿ ಸಾವನ್ನಪ್ಪಿದ್ದರು.

    ಭಾರತವು 2023 ರಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್‍ನ್ನು ಭಯೋತ್ಪಾದಕ ಸಂಘಟನೆ ಎಂದು ಗೊತ್ತುಪಡಿಸಿತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಈ ಸಂಘಟನೆ ಸ್ಥಾಪನೆಯಾಗಿತ್ತು. ಇದಾದ ಬಳಿಕ ಹಲವಾರು ಭಯೋತ್ಪಾಕ ಕೃತ್ಯಗಳಲ್ಲಿ ಸಂಘಟನೆ ಭಾಗಿಯಾಗಿತ್ತು. ಇದನ್ನೂ ಓದಿ: ಮಣಿಪುರದಲ್ಲಿ ಸಿಎಂ ಬೆಂಗಾವಲು ಪಡೆ ಮೇಲೆ ಬಂಡುಕೋರರಿಂದ ಗುಂಡಿನ ದಾಳಿ!

  • ಕಂದಕಕ್ಕೆ ಬಿದ್ದ ನಂತರವೂ ಬಸ್ಸಿನ ಬಳಿ ಬಂದು ಗುಂಡಿನ ದಾಳಿ ನಡೆಸಿದ್ದ ಉಗ್ರರು : ಭಯಾನಕ ಅನುಭವ ಬಿಚ್ಚಿಟ್ಟ ಯತ್ರಾರ್ಥಿ

    ಕಂದಕಕ್ಕೆ ಬಿದ್ದ ನಂತರವೂ ಬಸ್ಸಿನ ಬಳಿ ಬಂದು ಗುಂಡಿನ ದಾಳಿ ನಡೆಸಿದ್ದ ಉಗ್ರರು : ಭಯಾನಕ ಅನುಭವ ಬಿಚ್ಚಿಟ್ಟ ಯತ್ರಾರ್ಥಿ

    – ಹಿಂದೂಗಳಿದ್ದ ಬಸ್ಸನ್ನು ಹೊಂಚು ಹಾಕಿ ಸುತ್ತುವರಿದು ಗುಂಡಿನ ದಾಳಿ
    – 9 ಮಂದಿ ಬಲಿ, 33 ಮಂದಿಗೆ ಗಾಯ

    ಶ್ರೀನಗರ: ಬಸ್ಸು ಕಂದಕಕ್ಕೆ ಬಿದ್ದ ಮೇಲೂ ಉಗ್ರರು ಗುಂಡಿನ ದಾಳಿ ನಡೆಸಿದ್ದರು ಎಂದು ರಿಯಾಸಿಯಲ್ಲಿ (Reasi) ಬದುಕಿಳಿದ ವೈಷ್ಣೋದೇವಿ ಯಾತ್ರಾರ್ಥಿಗಳು (Vaishno Devi Temple) ತಿಳಿಸಿದ್ದಾರೆ.

    ರಸ್ತೆ ಬದಿಯಲ್ಲಿ ಅವಿತ್ತಿದ್ದ ಉಗ್ರರು ಹಿಂದೂಗಳು ತೆರಳುತ್ತಿದ್ದ ಬಸ್ಸಿನ ಮೇಲೆ ದಾಳಿ ನಡೆಸಿದ್ದಾರೆ. ಮೊದಲು ರಸ್ತೆ ಬದಿಯಿಂದ ದಾಳಿ ನಡೆಸಿದ್ದ ಉಗ್ರರು ಕಂದಕಕ್ಕೆ ಬಿದ್ದ ನಂತರ ಬಸ್ಸು ಬಳಿ ಬಂದು ಹಲವು ನಿಮಿಷ ಗುಂಡಿನ ದಾಳಿ ನಡೆಸಿದ್ದಾರೆ.

    ತಂಡದಲ್ಲಿ 6-7 ಮಂದಿ ಇದ್ದರು. ಎಲ್ಲ ಉಗ್ರರು ಮುಖಕ್ಕೆ ಮಾಸ್ಕ್‌ ಹಾಕಿದ್ದರು. ಆರಂಭದಲ್ಲಿ ಬಸ್ಸನ್ನು ಸುತ್ತುವರಿದು ಎಲ್ಲಾ ಕಡೆಯಿಂದ ದಾಳಿ ನಡೆಸಿದ್ದಾರೆ. ಕೆಳಕ್ಕೆ ಉರಳಿದ ನಂತರವೂ ಬಸ್‌ ಬಳಿ ಬಂದು 20 ನಿಮಿಷ ಗುಂಡಿನ ದಾಳಿ ಮಾಡಿದ್ದಾರೆ. ಗುಂಡಿನ ದಾಳಿ ವೇಳೆ ನಾವೆಲ್ಲ ಮೌನಕ್ಕೆ ಶರಣಾಗಿದ್ದೆವು. ಯಾವುದೇ ಧ್ವನಿ ಹೊರಬಾರದೇ ಇರುವುದನ್ನು ನೋಡಿದ ಉಗ್ರರು ಎಲ್ಲಾ ಪ್ರಯಾಣಿಕರು ಮೃತಪಟ್ಟಿರಬಹುದು ಎಂದು ಭಾವಿಸಿ ತೆರಳಿದ್ದಾರೆ ಎಂದು ಯಾತ್ರಾರ್ಥಿಯೊಬ್ಬರು ಹೇಳಿದ್ದಾರೆ. ದಾಳಿಯಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದು 33 ಮಂದಿ ಗಾಯಗೊಂಡಿದ್ದಾರೆ.

    ದಾಳಿ ಹೇಗಾಯ್ತು?
    ಜಮ್ಮು ಮತ್ತು ಕಾಶ್ಮೀರದ (Jammu and Kashmir Bus Attack) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ 6:10ರ ವೇಳೆಗೆ ಈ ಘಟನೆ ನಡೆದಿದೆ. ಶಿವಖೋಡಿಯ ಗುಹಾ ದೇವಾಲಯದಿಂದ ವೈಷ್ಣೋದೇವಿಯ ಕ್ಷೇತ್ರವಾದ ಕಟ್ರಾಗೆ ಹಿಂದೂಗಳು ಬಸ್ಸಿನಲ್ಲಿ ತೆರಳುತ್ತಿದ್ದರು.  ಇದನ್ನೂ ಓದಿ:ಮೋದಿ ಸಂಪುಟದಲ್ಲಿ ನಡ್ಡಾಗೆ ಸ್ಥಾನ – ಯಾರಾಗ್ತಾರೆ ಬಿಜೆಪಿ ಮುಂದಿನ ಅಧ್ಯಕ್ಷ?

    ರಸ್ತೆಯ ಪಕ್ಕದ ಅರಣ್ಯದಲ್ಲಿ ಅವಿತಿದ್ದ ಉಗ್ರರು ಬಸ್ಸಿನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಬಸ್ಸಿನ ಚಾಲಕನಿಗೆ ಬುಲೆಟ್ ತಗುಲಿದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಸು ಕಂದಕಕ್ಕೆ ಬಿದ್ದಿದೆ.


    ಶೋಧ ಆರಂಭ:
    ಈ ಪ್ರದೇಶ ಅರಣ್ಯವನ್ನು ಹೊಂದಿದ್ದು, ಈ ಜಾಗದಲ್ಲಿ ಅಡಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ತಿಂಗಳಿನಿಂದ ರಾಜೌರಿ ಮತ್ತು ಪೂಂಚ್‌ನಲ್ಲಿ ಇತರ ದಾಳಿಗಳನ್ನು ನಡೆಸಿಸಿದ ಉಗ್ರರು ಗುಂಪಿನ ಸದಸ್ಯರೇ ಈ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಭಯೋತ್ಪಾದಕರು ದಟ್ಟವಾದ ಕಾಡಿನಲ್ಲಿ ಅಡಗಿ ಬಸ್ಸು ಬರುವುದನ್ನೇ ಕಾಯುತ್ತಿದ್ದರು. ಸ್ಥಳೀಯ ಗ್ರಾಮಸ್ಥರ ನೆರವಿನೊಂದಿಗೆ ಪೊಲೀಸರು ರಾತ್ರಿ 8:10ರ ವೇಳೆಗೆ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

  • ವೈಷ್ಣೋದೇವಿ ದರ್ಶನಕ್ಕೆ ಮುಖ ಮುಚ್ಚಿಕೊಂಡು ಬಂದ ಶಾರುಖ್ ಖಾನ್

    ವೈಷ್ಣೋದೇವಿ ದರ್ಶನಕ್ಕೆ ಮುಖ ಮುಚ್ಚಿಕೊಂಡು ಬಂದ ಶಾರುಖ್ ಖಾನ್

    ಮ್ಮ ನಟನೆಯ ಪಠಾಣ್ ಸಿನಿಮಾದ ಚೊಚ್ಚಲು ಹಾಡು ರಿಲೀಸ್ ಆದ ಬೆನ್ನಲ್ಲೇ ಬಾಲಿವುಡ್ ನಟ ಶಾರುಖ್ ಖಾನ್ ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬೆಳಗ್ಗೆಯೇ ದೇವಸ್ಥಾನಕ್ಕೆ ಆಗಮಿಸಿದ್ದ ಶಾರುಖ್, ಮುಖ ಮುಚ್ಚಿಕೊಂಡು ದೇವರ ದರ್ಶನ ಪಡೆದಿದ್ದಾರೆ. ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

    ಬಾಡಿಗಾಡ್ ಜೊತೆ ಕಾರಿನಲ್ಲಿ ಬಂದಿಳಿದ ಶಾರುಖ್, ಕಾರಿನಿಂದ ಇಳಿದು ನೇರವಾಗಿ ವೈಷ್ಣೋದೇವಿ ದೇವಸ್ಥಾನದ ಒಳಗೆ ಹೋಗಿದ್ದಾರೆ. ದೇವಸ್ಥಾನದ ಒಳಗೆ ಬಾಡಿಗಾಡ್ ಜೊತೆ ಹೋಗುತ್ತಿರುವ ಶಾರುಖ್ ವಿಡಿಯೋ ಕೂಡ ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ಶಾರುಖ್ ಮುಖಕ್ಕೆ ಬಟ್ಟೆಯಿಂದ ಮುಚ್ಚಿದ್ದಾರೆ. ಶಾರುಖ್ ಬಂದಿರುವ ವಿಚಾರ ತಿಳಿಯುತ್ತಿದ್ದಂತೆಯೇ ಅಲ್ಲಿದ್ದವರು ಅವರನ್ನು ಸುತ್ತುವರೆದಿದ್ದಾರೆ. ಬಾಡಿಗಾಡ್ ಅಲ್ಲಿ ನೆರದಿದ್ದ ಜನರನ್ನು ಸರಿಸುತ್ತಾ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

    ಪಠಾನ್ ಸಿನಿಮಾ ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ.

    ನಿನ್ನೆ ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ  ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು. ಬಿಡುಗಡೆಯಾದ ಹಾಡಿಗೆ ಅಭಿಮಾನಿಗಳು ಕೂಡ ಜೈಕಾರ ಹಾಕಿದ್ದಾರೆ. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಇದು ಶಾರುಖ್ ಖಾನ್ ವೃತ್ತಿ ಜೀವನದ ಮಹತ್ವದ ಸಿನಿಮಾ ಎನ್ನಲಾಗುತ್ತಿದ್ದು, ಸತತ ಸೋಲಿನ ಬಳಿಕೆ ಬಾಲಿವುಡ್ ಗೆ ಈ ಸಿನಿಮಾ ಶಕ್ತಿ ತುಂಬಲಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಕಾಂಬಿನೇಷನ್ ಇರುವುದರಿಂದ ಬಾಕ್ಸ್ ಆಫೀಸಿನಲ್ಲೂ ಈ ಸಿನಿಮಾ ಹಿಟ್ ಆಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಇಂದು ಬಿಡುಗಡೆ ಆಗಿರುವ ಹಾಡು ಅಂಥದ್ದೊಂದು ಭರವಸೆಯನ್ನೂ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಸ ವರ್ಷದಂದೇ ದುರಂತ – ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದ 12 ಮಂದಿ ದುರ್ಮರಣ

    ಶ್ರೀನಗರ: ಹೊಸ ವರ್ಷ ಎಲ್ಲರಿಗೂ ಹರುಷ, ಶುಭ ತರಲೆಂದು ಎಲ್ಲರೂ ಪ್ರಾರ್ಥಿಸುತ್ತಾರೆ. ಆದರೆ ಹೊಸ ವರ್ಷದ ಆರಂಭದ ಸಂದರ್ಭದಲ್ಲೇ ದುರಂತ ಘಟನೆಯೊಂದು ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದಾಗಿ 12 ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕಾಗಿ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ನೂಕಾಟ ಆಗಿ ಕೆಲವರು ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

    ವೈಷ್ಣೋ ದೇವಿ ಭವನಕ್ಕೆ ಅನುಮತಿ ಇಲ್ಲದೇ ಸಾವಿರಾರು ಭಕ್ತರ ದಂಡು ಆಗಮಿಸಿದೆ. ಈ ವೇಳೆ ನೂಕುನುಗ್ಗಲಿನಿಂದ ಹಲವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದುರಂತಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾತಾ ವೈಷ್ಣೋ ದೇವಿ ಭವನದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ ಎಂದು ದುಃಖತಪ್ತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿಯೇ ಹೊಸ ವರ್ಷ ಆಚರಣೆ

    ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಯಿಂದಲೂ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಲಾಗಿದೆ.

    ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದ ಉಂಟಾದ ದುರಂತ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದು, ಸೂಕ್ತ ನಿಗಾ ವಹಿಸಲು ತಿಳಿಸಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

  • ವೈಷ್ಣೋ ದೇವಿ ದರ್ಶನ: ಪ್ರತಿದಿನ ಗರಿಷ್ಠ 50 ಸಾವಿರ ಭಕ್ತರು ಮಾತ್ರ ಅವಕಾಶ

    ವೈಷ್ಣೋ ದೇವಿ ದರ್ಶನ: ಪ್ರತಿದಿನ ಗರಿಷ್ಠ 50 ಸಾವಿರ ಭಕ್ತರು ಮಾತ್ರ ಅವಕಾಶ

    ನವದೆಹಲಿ: ಪವಿತ್ರ ಹಿಂದೂ ದೇವಾಲಯಗಳಲ್ಲಿ ಒಂದಾದ ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನದ ದರ್ಶನ ಪಡೆಯುವ ಭಕ್ತರ ಸಂಖ್ಯೆಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠವು (ಎನ್‍ಜಿಟಿ) ಮಿತಿ ವಿಧಿಸಿದ್ದು, ಪ್ರತಿದಿನ ಗರಿಷ್ಟ 50 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಬೇಕೆಂದು ಆದೇಶಿಸಿದೆ.

    ವೈಷ್ಣೋ ದೇವಾಲಯಕ್ಕೆ ತೆರಳಲು ಕತ್ತೆ ಹಾಗೂ ಇತರೇ ಪ್ರಾಣಿಗಳನ್ನು ಬಳಕೆ ಮಾಡುವ ಕುರಿತು ಪ್ರಶ್ನಿಸಿ ಎನ್‍ಜಿಟಿಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಸ್ವತಂತ್ರ ಕುಮಾರ್ ಅವರ ನ್ಯಾಯಪೀಠವು ದೇವಾಲಯದಲ್ಲಿ ದಿನ 50 ಸಾವಿರ ಭಕ್ತರು ಮಾತ್ರ ದರ್ಶನಕ್ಕೆ ಅನುಮತಿ ನೀಡಲಾಗುವುದು ಎಂದು ಹೇಳಿತು.

    ದೇವಿಯ ದರ್ಶನಕ್ಕೆ ತೆರಳುವ ವೇಳೆ ಉಂಟಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಈ ಕ್ರಮಕೈಗೊಂಡಿದ್ದು, ಸಂಖ್ಯೆಗಿಂತ ಜಾಸ್ತಿ ಭಕ್ತರು ಆಗಮಿಸಿದ್ದಲ್ಲಿ ಜಮ್ಮು ಕಾಶ್ಮೀರದ ಕತ್ರಾ ಅಥವಾ ಅರ್ಧಕುಮಾರಿಯಲ್ಲಿ ನೆಲೆ ಕಲ್ಪಿಸಬೇಕೆಂದು ಸೂಚಿಸಿದೆ.

    ಅಲ್ಲದೇ ದೇವಾಲಯಕ್ಕೆ ಭೇಟಿ ನೀಡಲು ನಿರ್ಮಾಣ ಮಾಡಲಾಗಿರುವ ಹೊಸ ಮಾರ್ಗದಲ್ಲಿ ಪ್ರಾಣಿಗಳನ್ನು ಬಳಕೆ ಮಾಡದಂತೆ ಎನ್‍ಜಿಟಿ ಸೂಚಿಸಿದೆ. ಹೊಸ ಮಾರ್ಗವು ನವೆಂಬರ್ 24 ರಿಂದ ಬಳಕೆಗೆ ಮುಕ್ತವಾಗಲಿದ್ದು, ಬ್ಯಾಟರಿ ಚಾಲಿತ ಕಾರು ಹಾಗೂ ಪಾದಚಾರಿಗಳು ಮಾತ್ರ ಈ ಮಾರ್ಗವನ್ನು ಬಳಸಬೇಕು, ಈ ನಿಯಮವನ್ನು ಉಲ್ಲಂಘಿಸಿದರೆ 2 ಸಾವಿರ ರೂ. ದಂಡವನ್ನು ವಿಧಿಸಲು ನಿರ್ದೇಶನ ನೀಡಿದೆ.


    ಇನ್ನು ದೇವಾಲಯಕ್ಕೆ ಹಳೆ ಮಾರ್ಗವಾಗಿ ಪ್ರಾಣಿಗಳ ಮೇಲೆ ಸಂಚಾರ ಮಾಡುವುದನ್ನು ಕ್ರಮೇಣ ಕಡಿಮೆ ಮಾಡಲಾಗುತ್ತದೆ. ಯಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಗಳ ಮೇಲಿನ ಸಂಚಾರವನ್ನು ನಿಷೇಧಿಸುವ ಕುರಿತು ಸರ್ಕಾರದ ಅಭಿಪ್ರಾಯ ನೀಡುವಂತೆ ಸೂಚಿಸಿದೆ.

    ಕತ್ರಾ ಪಟ್ಟಣದಿಂದ ಸುಮಾರು 46 ಕಿ.ಮೀ ದೂರದಲ್ಲಿ ದೇವಾಲಯವಿದೆ. ಪ್ರತಿವರ್ಷ ಸುಮಾರು 80 ಲಕ್ಷ ಜನರು ದೇವಿಯ ದರ್ಶನವನ್ನು ಪಡೆಯುತ್ತಾರೆ.