Tag: Valmiki Development Corporation

  • ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು: ಪರಮೇಶ್ವರ್

    ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು: ಪರಮೇಶ್ವರ್

    ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ (Valmiki Development Corporation Scam) ಪ್ರಕರಣದಲ್ಲಿ ನಾಗೇಂದ್ರ (B Nagendra) ಬಂಧನ ವಿಚಾರವಾಗಿ ಗೃಹಸಚಿವ ಜಿ ಪರಮೇಶ್ವರ್  (G Parameshwar) ಪ್ರತಿಕ್ರಿಯಿಸಿದ್ದು, ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು. ತನಿಖೆಗೆ ನಮ್ಮ ತಕರಾರಿಲ್ಲ ಎಂದು ಹೇಳಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಡಿಯವರು (ED) ತನಿಖೆ ನಡೆಸುತ್ತಿದ್ದಾರೆ. ಅವರಿಗೆ ಏನು ಮಾಹಿತಿ ಸಿಕ್ಕಿದೆಯೋ ಆ ಆಧಾರದಲ್ಲಿ ಬಂಧಿಸಿದ್ದಾರೆ. ಇದು ಕಾನೂನಿನ ಪ್ರಕಾರ ನಡೆಯುವ ಪ್ರಕ್ರಿಯೆ. ಆದರೆ ಇದನ್ನು ರಾಜಕೀಯವಾಗಿ ಬಳಸಬಾರದು. ಸಿಐಡಿ ತನಿಖೆ ನಡೆಯುತ್ತಿತ್ತು. ಪ್ರಕರಣದಲ್ಲಿ ಇದ್ದಕ್ಕಿದ್ದಂತೆ ಇಡಿ ಪ್ರವೇಶ ಆಗಿದೆ ಎಂದರು. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯ, ಡಿಕೆಶಿಯೂ ಇದ್ದಾರೆ – ಕೇಂದ್ರ ಸಚಿವ ಜೋಶಿ ಬಾಂಬ್‌!

    ಇಡಿ ಬಂಧನದಿಂದ ತಪ್ಪಿಸಿಕೊಂಡು ಶಾಸಕ ದದ್ದಲ್ ಓಡಾಡುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ಎಸ್‌ಐಟಿಯವರು ನಾಗೇಂದ್ರ, ದದ್ದಲ್ ಇಬ್ಬರನ್ನೂ ಕರೆದು ವಿಚಾರಣೆ ಮಾಡಿದ್ದಾರೆ. ಅಗತ್ಯ ಕಂಡುಬಂದರೆ ಮತ್ತೆ ಕರೆಯುತ್ತಾರೆ. ದದ್ದಲ್ ಅವರು ಎಲ್ಲಿಗೂ ತಪ್ಪಿಸಿಕೊಂಡು ಹೋಗಿಲ್ಲ. ಇಲ್ಲೇ ಎಲ್ಲೋ ಅವರ ಕುಟುಂಬದವರ ಜೊತೆ ಇದ್ದಾರೆ. ಶುಕ್ರವಾರವೂ ನಾನು ದದ್ದಲ್ ಬಗ್ಗೆ ಕೇಳಿದಾಗ ಅವರು ಇಲ್ಲೇ ಅವರ ಕುಟುಂಬದವರ ಜೊತೆ ಇದ್ದಾರೆ ಎಂದು ಹೇಳಿದ್ದಾರೆ. ಎಸ್‌ಐಟಿಯವರೇ ಬಂಧನ ಮಾಡಲಿ ಅಂತ ಸಿಐಡಿ ಕಚೇರಿಗೆ ದದ್ದಲ್ ಹೋಗಿದ್ದ ವಿಚಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಗೆ ನಿತಿನ್‌ ಗಡ್ಕರಿ ಎಚ್ಚರಿಕೆ

    ವಾಲ್ಮೀಕಿ ನಿಗಮದ ಹಣ ಚುನಾವಣೆಗೆ ಬಳಕೆ ಆರೋಪದಲ್ಲಿ ಇಡಿ ದಾಳಿ ಆಗಿದೆ ಎಂಬ ವಿಚಾರದ ಕುರಿತು ಮಾತನಾಡಿ, ಇದು ನನಗೆ ಗೊತ್ತಿಲ್ಲ. ಇಡಿಯವರು ನಮ್ಮ ಪೊಲೀಸರಿಗೆ ಈ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ನಾವು ಊಹೆ ಮಾಡಿ ಹೇಳೋದು ಸರಿಯಲ್ಲ ಎಂದರು. ಬಿಜೆಪಿ ಮಾಜಿ ಎಮ್‌ಎಲ್‌ಸಿ ಡಿಎಸ್ ವೀರಯ್ಯ ಬಂಧನ ವಿಚಾರದ ಬಗ್ಗೆ ಮಾತನಾಡಿದ ಅವರು, ಅದೊಂದು 40-50 ಕೋಟಿ ರೂ. ಅವ್ಯವಹಾರದ ವಿಚಾರ. ವೀರಯ್ಯ ಅವರು ಹಿಂದೆ ದೇವರಾಜ ಅರಸು ನಿಗಮದ ಅಧ್ಯಕ್ಷರಾಗಿದ್ದಾಗ ಟ್ರಕ್ ಟರ್ಮಿನಲ್ ಸಂಸ್ಥೆಯಲ್ಲಿ ಅಕ್ರಮ ಆಗಿದೆ ಎಂದು ತನಿಖೆ ನಡೆಯುತ್ತಿದೆ. ಆ ತನಿಖೆ ಹಿನ್ನೆಲೆಯಲ್ಲಿ ವೀರಯ್ಯ ಅವರನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಹಿಂದಿನಿಂದ ಟ್ರಕ್‌ಗೆ ಡಿಕ್ಕಿ – ಮೂವರು ಸಾವು, 14 ಮಂದಿ ಗಂಭೀರ

    ನಾಳೆ ಕಾವೇರಿ ಸರ್ವಪಕ್ಷ ಸಭೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಾಳೆ ತಾಂತ್ರಿಕ ಸಮಿತಿ ಏನು ವರದಿ ಕೊಡುತ್ತೋ ನೋಡಬೇಕು. ಎಷ್ಟು ನೀರು ಬರುತ್ತಿದೆ, ಎಷ್ಟು ನೀರು ನಾವು ಕೊಡಲು ಸಾಧ್ಯ ಎಮದು ನಾಳೆ ಸಮಿತಿ ಹೇಳುತ್ತದೆ. ಅವರಿಗೆ ಕೊಡುವಷ್ಟು ನೀರು ನಮ್ಮಲ್ಲಿ ಇರಬೇಕಲ್ಲ. ಈಗ ತಾನೇ ಮಳೆ ಬರುತ್ತಿದೆ. ನೀರು ಬಂದ ನಂತರ ಎಷ್ಟು ಹಂಚಿಕೆ ಮಾಡಲು ಆಗುತ್ತದೆ ಎಂದು ನೋಡಬೇಕು ಎಂದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ಇಂಡಿಗೋ – ಪರಮೇಶ್ವರ್ ಪ್ರವಾಸ ರದ್ದು

  • ವಾಲ್ಮೀಕಿ ನಿಗಮದ ಹಗರಣ – ರಾಯಚೂರಿನಲ್ಲಿ ಇಡಿ ವಿಚಾರಣೆ ಅಂತ್ಯ

    ವಾಲ್ಮೀಕಿ ನಿಗಮದ ಹಗರಣ – ರಾಯಚೂರಿನಲ್ಲಿ ಇಡಿ ವಿಚಾರಣೆ ಅಂತ್ಯ

    ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ (Raichuru) ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಇ.ಡಿ (Enforcement Directorate) ಅಧಿಕಾರಿಗಳು ವಿಚಾರಣೆಯನ್ನು ನಿನ್ನೆ ರಾತ್ರಿ‌ 10:30 ರ‌ ಸುಮಾರಿಗೆ ಮುಕ್ತಾಯಗೊಳಿಸಿದ್ದಾರೆ.

    ರಾಯಚೂರಿನ ದದ್ದಲ್ ನಿವಾಸದಲ್ಲಿ ಇಡಿ ಅಧಿಕಾರಿಗಳ ಕಾರ್ಯಾಚರಣೆ ‌ಮುಕ್ತಾಯಗೊಂಡಿದೆ. ದದ್ದಲ್‌ ಅವರ ಮಾಜಿ ಪಿಎ ಪಂಪಣ್ಣ, ಅಳಿಯ ಚನ್ನಬಸವ, ಪತ್ನಿ, ಸಹೋದರಿಯನ್ನು ವಿಚಾರಣೆಗೆ ಒಳಪಡಿಸಿದ್ದ ಅಧಿಕಾರಿಗಳು ಸಾಕಷ್ಟು ಮಹತ್ವದ ದಾಖಲೆಗಳನ್ನ ಕಲೆ ಹಾಕಿದ್ದಾರೆ. ರಾಯಚೂರಿನಲ್ಲಿನ ತಪಾಸಣೆ ಹಾಗೂ ವಿಚಾರಣೆ ಮುಗಿದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್‌ – ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

    ವಿಚಾರಣೆ ಮುಗಿದ ಬಳಿಕ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ರಾಠೋಡ್‌ರನ್ನ ದದ್ದಲ್ ‌ಮನೆಯಲ್ಲಿಯೇ ಅಧಿಕಾರಿಗಳು ಬಿಟ್ಟು ಹೋಗಿದ್ದಾರೆ. ಇಡಿ ಅಧಿಕಾರಿಗಳು ಹೋದ ಬಳಿಕ ಪಂಪಣ್ಣ ತನ್ನ ಅಪಾರ್ಟ್‌ಮೆಂಟ್‌ಗೆ ಏಕಾಂಗಿಯಾಗಿ ಬಂದಿದ್ದಾರೆ.

    ಈ ವೇಳೆ ಮಾತನಾಡಿದ ಪಂಪಣ್ಣ ರಾಠೋಡ್, ಪ್ರಕರಣ ತನಿಖೆ ಹಂತದಲ್ಲಿದೆ. ಸಾರ್ವಜನಿಕವಾಗಿ ಮಾತನಾಡಬಾರದು ಅಂತಾ ಹೇಳಿದ್ದಾರೆ. ಕರೆದಾಗ ಬರಲು ಇ.ಡಿ ಅಧಿಕಾರಿಗಳು ಸೂಚನೆ ‌ನೀಡಿ ಹೋಗಿದ್ದಾರೆ ಎಂದು ಹೇಳಿದರು. ಎರಡು ದಿನಗಳಿಂದ ‌ಇಡಿ ಅಧಿಕಾರಿಗಳು ನನ್ನ ಮನೆಯಲ್ಲಿ ‌ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿ ಇದ್ದ ಆಫೀಸರ್ ಒಬ್ಬರು ನನ್ನ ಹೆಸರು ಹೇಳಿದ್ದಾರೆ. ಅವರು ಯಾಕೆ ನನ್ನ ಹೆಸರು ಹೇಳಿದ್ದಾರೆ ಅನ್ನೋದೆ ನನಗೆ ಅಚ್ಚರಿ ಎನಿಸಿದೆ. ನಿಗಮದ ಅಧಿಕಾರಿಗಳು ನನಗೆ ಪರಿಚಯ ಇದ್ದಾರೆ. ಇಲ್ಲಾ ಅಂತ ಹೇಳಲ್ಲ. ಆದರೆ ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನನಗೇನೂ ಗೊತ್ತಿಲ್ಲ: ಇ.ಡಿ ವಶಕ್ಕೆ ಪಡೆದಾಗ ಶಾಸಕ ನಾಗೇಂದ್ರ ಪ್ರತಿಕ್ರಿಯೆ

    ಎಸ್‌ಐಟಿ ತನಿಖೆ ವಿಚಾರಣೆಗೂ ಹೋಗಿ ಬಂದಿದ್ದೇನೆ. ‌ಇಡಿ ಅಧಿಕಾರಿಗಳು ಸಡನ್ ಆಗಿ ಬಂದರು. ನನ್ನ ಮನೆಯಲ್ಲಿ ‌ಪಿನ್ ಟೂ ಪಿನ್ ಚೆಕ್ ಮಾಡಿದರು. ನನ್ನ ಬಳಿ ಇದ್ದ ಕೆಲ ಮಾಹಿತಿ ಪಡೆದುಕೊಂಡು ಹೋಗಿದ್ದಾರೆ. ನಾನು ಎಲ್ಲಾ ದಾಖಲೆಗಳನ್ನು ಕೊಟ್ಟಿದ್ದೇನೆ. ಆಸ್ತಿಗೆ ಸಂಬಂಧಪಟ್ಟ ದಾಖಲೆಗಳ ಮಾಹಿತಿ ಪಡೆದಿದ್ದಾರೆ. ನಾನು ಸರ್ಕಾರಿ ನೌಕರ. ನನ್ನ ಬ್ಯಾಂಕ್ ವಹಿವಾಟುಗಳು ಹೆಚ್ಚಾಗಿ ಇಲ್ಲ. ತನಿಖೆಗೆ ಸಹಕಾರ ‌ನೀಡುವೆ ಎಂದು ತಿಳಿಸಿದ್ದಾರೆ.

  • ನನಗೇನೂ ಗೊತ್ತಿಲ್ಲ: ಇ.ಡಿ ವಶಕ್ಕೆ ಪಡೆದಾಗ ಶಾಸಕ ನಾಗೇಂದ್ರ ಪ್ರತಿಕ್ರಿಯೆ

    ನನಗೇನೂ ಗೊತ್ತಿಲ್ಲ: ಇ.ಡಿ ವಶಕ್ಕೆ ಪಡೆದಾಗ ಶಾಸಕ ನಾಗೇಂದ್ರ ಪ್ರತಿಕ್ರಿಯೆ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) ಬ್ಯಾಂಕ್‌ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ (Nagendra) ಪ್ರತಿಕ್ರಿಯೆ ನೀಡಿದರು.

    ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳಿಗೆ, ನನಗೇನೂ ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಅವರು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್‌ – ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

    ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತು. ಅಧಿಕಾರಿಗಳು, ಬಸನಗೌಡ ದದ್ದಲ್‌ ಅವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

    ಈ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್‌ ಅವರನ್ನು ಇ.ಡಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ನಂತರ ವಾಪಸ್‌ ಕಳುಹಿಸಿತ್ತು. ಇತ್ತ ಬಸನಗೌಡ ಅವರ ವಿಚಾರಣೆಯೂ ನಡೆದಿತ್ತು. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ – ಸಿಐಎಸ್‌ಎಫ್‌ ಅಧಿಕಾರಿಗೆ ಸ್ಪೈಸ್‌ಜೆಟ್‌ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ

  • ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿ – ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

    ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿ – ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

    ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮನವಿ ಮಾಡಿದ್ದಾರೆ.

    ಈ ಬಗ್ಗೆ ಪತ್ರ ಬರೆದಿರುವ ಅವರು, ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣ – ಬಳ್ಳಾರಿಯಲ್ಲಿ ನಾಗೇಂದ್ರ ಆಪ್ತರಿಗೆ ಡ್ರಿಲ್‌, 2 ಬ್ಯಾಗ್‌ ದಾಖಲೆಯೊಂದಿಗೆ ತೆರಳಿದ ಅಧಿಕಾರಿಗಳು

    ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು. ಅವರ ಕುಟುಂಬಕ್ಕೆ ನೆರವು ಖಾತ್ರಿಪಡಿಸಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು. ಸರ್ಕಾರದ ವಿವಿಧ ಅಭಿವೃದ್ಧಿ ನಿಧಿಗಳ ಮೇಲ್ವಿಚಾರಣೆ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ‌.

    ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಬಹುಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ನಾಗೇಂದ್ರ ವಿರುದ್ಧ ಆರೋಪ ಕೇಳಿಬಂದಿದೆ. ಪರಿಣಾಮವಾಗಿ ಅವರು ಸಚಿವ ಸ್ಥಾನವನ್ನು ಕಳೆದುಕೊಳ್ಳುವಂತಾಯಿತು. ಜೊತೆಗೆ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್‌ ವಿರುದ್ಧವೂ ಆರೋಪವಿದೆ. ಈ ಹಿನ್ನೆಲೆಯಲ್ಲಿ ಬುಧವಾರ ನಸುಕಿನ ವೇಳೆ ಇಬ್ಬರೂ ನಾಯಕರು ಹಾಗೂ ಅವರ ಆಪ್ತರ ಮನೆ, ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿ ಪರಿಶೀಲಿಸಿದೆ. ಜೊತೆಗೆ ನಿಗಮದ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: Valmiki Scam | ಮಾಲ್‌, ಪಾರ್ಕ್‌, ಜಂಕ್ಷನ್‌ನಲ್ಲಿ ಕೋಟಿ ಕೋಟಿ ಸಂದಾಯ

  • ವಾಲ್ಮೀಕಿ ನಿಗಮ ಹಗರಣ; ನಕಲಿ ಅಕೌಂಟ್‌ನ ಅಸಲಿ ಮಾಲೀಕರ ಪತ್ತೆ ಮಾಡಿದ ಸಿಐಡಿ

    ವಾಲ್ಮೀಕಿ ನಿಗಮ ಹಗರಣ; ನಕಲಿ ಅಕೌಂಟ್‌ನ ಅಸಲಿ ಮಾಲೀಕರ ಪತ್ತೆ ಮಾಡಿದ ಸಿಐಡಿ

    – ಹಗರಣದ ಮತ್ತೋರ್ವ ಆರೋಪಿ ಬಂಧನ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Corporation) ಹಗರಣದಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

    ಶ್ರೀನಿವಾಸ್ ಬಂಧಿತ ಆರೋಪಿ. ನಕಲಿ ಅಕೌಂಟ್‌ಗಳನ್ನು ಸೃಷ್ಟಿಸಿ ವಹಿವಾಟುಗಳನ್ನು ಮಾಡಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿದೆ. ಕೋಟಿ ಕೋಟಿ ಹಣ ವಹಿವಾಟು ಮಾಡಲು ಆರೋಪಿ ಸಹಾಯ ಮಾಡಿದ್ದ ಎನ್ನಲಾಗಿದೆ.

    ಹಗರಣ ಪ್ರಕರಣದ ಆರೋಪಿಗಳು ಒಂದೊಂದೇ ಸತ್ಯ ಬಾಯಿಬಿಡುತ್ತಿದ್ದಾರೆ. ವಾಲ್ಮೀಕಿ ನಿಗಮದ ಕೋಟ್ಯಂತರ ಹಣವನ್ನು ವಹಿವಾಟಿಗೆ 193 ಅಕೌಂಟ್‌ಗಳನ್ನು ಬಳಸಿಕೊಂಡಿದ್ದರು ಎನ್ನುವುದು ಬಯಲಾಗಿದೆ. ಹೈದರಾಬಾದ್ ಮೂಲದ ಸತ್ಯನಾರಾಯಣ ವರ್ಮ ಈ ಎಲ್ಲಾ ಯೋಜನೆಗೆ ಮಾಸ್ಟರ್ ಮೈಂಡ್ ಆಗಿದ್ದ.

    ಖಾತೆಯಿಂದ ಹೊರಗೆ ಬಂದಿದ್ದ ಹಣವನ್ನು 193 ನಕಲಿ ಖಾತೆಗಳಿಗೆ ವಹಿವಾಟು ಮಾಡಿದ್ದಾರೆ. ಬಾರ್‌ನ ಮಾಲೀಕರ ಅಕೌಂಟ್‌ಗಳಿಗೆ ಹಣ ಕಳುಹಿಸಿ ಪರ್ಸಂಟೇಜ್ ಲೆಕ್ಕದಲ್ಲಿ ಕೋಟಿ ಕೋಟಿ ಹಣವನ್ನು ಡ್ರಾ ಮಾಡಿ ಕೊಟ್ಟಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.

    ಹಗರಣದ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲಾಗಿದೆ. ಯಾರದ್ದೋ ಕಂಪನಿ ಹೆಸರಿನಲ್ಲಿ ಇನ್ಯಾರೋ ಖಾತೆ ತೆರೆದು ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಅಸಲಿ ಕಂಪನಿಗಳ ಮಾಲೀಕರ ಗಮನಕ್ಕೆ ಬಾರದ ರೀತಿಯಲ್ಲಿ ವಂಚನೆ ಮಾಡಲಾಗಿದೆ. ಅದೇ ಕಂಪನಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕೋಟಿ ಕೋಟಿ ಹಣ ವಹಿವಾಟು ಮಾಡಲಾಗಿದೆ. ನಕಲಿ ಅಕೌಂಟ್‌ನ ಅಸಲಿ ಮಾಲೀಕರನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

    ಅಸಲಿ ಮಾಲೀಕರನ್ನ ಕರೆಸಿ ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಯಲಾಗಿದೆ. ಅಸಲಿ ಮಾಲೀಕರಿಗೆ ತಮ್ಮ ಕಂಪನಿ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವುದು ಗೊತ್ತಿಲ್ಲ. ಅದರಲ್ಲೂ ಆ ಖಾತೆಯಲ್ಲಿ ಕೋಟಿ ಕೋಟಿ ಹಣ ಇತ್ತೆ ಎಂದು ಅವರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅಸಲಿ ಕಂಪನಿ ಮಾಲೀಕರಿಂದ ನಾಲ್ಕು ಎಫ್‌ಐಆರ್ ದಾಖಲಾಗಿದೆ.

    ವಿಜಯ್ ಕೃಷ್ಣ ಹಾಗೂ ನವೀನ್‌ರಿಂದ ಕೆಪಿ ಅಗ್ರಹಾರದಲ್ಲಿ ಎಫ್‌ಐಆರ್ ದಾಖಲಾಗಿದೆ. ಇದರ ಜೊತೆಗೆ ವಿಜಯನಗರ ಠಾಣೆಯಲ್ಲಿ ರಾಘವೆಂದ್ರ ಹಾಗೂ ರೇಖಾ ಎಂಬವರು ದೂರು ದಾಖಲಿಸಿದ್ದಾರೆ. ಒಂದೊಂದು ಅಕೌಂಟ್‌ನಲ್ಲಿ ಸುಮಾರು 5 ಕೋಟಿಯಂತೆ 20 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಹಣ ವರ್ಗಾವಣೆ ಮತ್ತೆ ಆ ಖಾತೆಗಳಿಂದ ಹಣ ಡ್ರಾ ಮಾಡಿಕೊಳ್ಳಲಾಗಿದೆ. ಈ ಖಾತೆಗಳಿಗೆ ವಾಲ್ಮೀಕಿ ನಿಗಮದ ಅಧಿಕೃತ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಸದ್ಯ ಈ ನಾಲ್ಕು ಎಫ್‌ಐಆರ್‌ಗಳ ಮೂಲ ಕಂಪನಿ ಮಾಲೀಕರು ಮಾಡಿಸಿದ್ದು, ಈ ಎಫ್‌ಐಆರ್‌ಗಳು ಎಸ್‌ಐಟಿಗೆ ವರ್ಗಾವಣೆಯಾಗಿದೆ.

  • ಬಹುಕೋಟಿ ಹಗರಣ ಕೇಸ್; ಇಡಿ ತನಿಖೆ ಬೆನ್ನಲ್ಲೇ ಎಸ್‌ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ!

    ಬಹುಕೋಟಿ ಹಗರಣ ಕೇಸ್; ಇಡಿ ತನಿಖೆ ಬೆನ್ನಲ್ಲೇ ಎಸ್‌ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ!

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ (Valmiki Development Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು (SIT officals) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

    ಸಾಯಿತೇಜ ಬಂಧಿತ ಆರೋಪಿ (Accused). ಚನ್ನಗಿರಿಯಲ್ಲಿ ಎಸ್‌ಐಟಿ ಅಧಿಕಾರಿಗಳು ಆರೋಪಿಯನ್ನ ಬಂಧಿಸಿದ್ದಾರೆ. ಮೃತ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಹೆಸರು ಉಲ್ಲೇಖಿಸಿದ್ದರಿಂದ ಸಾಯಿತೇಜ ಎಂಬಾತನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ತನಿಖೆ ಆರಂಭಿಸಿದ್ದ ಇಡಿ:
    ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಸೋಮವಾರವಷ್ಟೇ ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ತನಿಖೆ (ED Investigation) ಆರಂಭಿಸಿತ್ತು. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಜೈಲಿನಲ್ಲಿರುವ ನಟ ದರ್ಶನ್ ಭೇಟಿಗೆ ಯಾರಿಗೂ ಅವಕಾಶವಿಲ್ಲ!

    ಒಟ್ಟು 9 ಆರೋಪಿಗಳ ಬಂಧನ:
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಜಪಾನ್‌ ಅನ್ನು ಕಾಡುತ್ತಿದೆ ಮನುಷ್ಯನ ಮಾಂಸ ತಿನ್ನುವ ವೈರಸ್‌ – ಭಾರತಕ್ಕೂ ಇದೆಯಾ ಆತಂಕ?

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐ, ಇಡಿ ಸಹ ತನಿಖೆಗೆ ಎಂಟ್ರಿ ಆಗಿದೆ.

  • ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Development Corporation) ಬಹುಕೋಟಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ (ED Investigation) ಆರಂಭಿಸಿದೆ.

    ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ (CBI) ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಸ್ಫೋಟಕ ಟ್ವಿಸ್ಟ್‌ – ಸೂರಜ್ ರೇವಣ್ಣ ಪರ ದೂರು ನೀಡಿದ್ದ ದೂರುದಾರನೇ ನಾಪತ್ತೆ‌!

    ಒಟ್ಟು 9 ಆರೋಪಿಗಳ ಬಂಧನ:
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐ, ಇಡಿ ಸಹ ತನಿಖೆಗೆ ಎಂಟ್ರಿ ಆಗಿದೆ.

  • Exclusive: ವಾಲ್ಮೀಕಿ ನಿಗಮದ ಹಗರಣ ಕೇಸ್: ಎಂಡಿ ಪದ್ಮನಾಭ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ!

    Exclusive: ವಾಲ್ಮೀಕಿ ನಿಗಮದ ಹಗರಣ ಕೇಸ್: ಎಂಡಿ ಪದ್ಮನಾಭ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ!

    – ಉಡುಪಿ ಮೂಲದ ಮತ್ತೋರ್ವ ಆರೋಪಿ ಬಂಧನ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Development Corporation) 187 ಕೋಟಿ ರೂ. ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಎಸ್‌ಐಟಿ ದಾಳಿ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್‌ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ.

    ವಿಶೇಷ ತನಿಖಾ ತಂಡವು (SIT) ಪದ್ಮನಾಭ್‌ ಅವರಿಗೆ ಸೇರಿದ್ದ ಕೊಡಿಗೇನಹಳ್ಳಿ ಮನೆಯಲ್ಲಿ ದಾಳಿ ನಡೆಸಿದ ವೇಳೆ ಸುಮಾರು 3.60 ಕೋಟಿ ರೂ.ಗಳಷ್ಟು ಹಣ ಪತ್ತೆಯಾಗಿದೆ. ಸ್ಥಳದಲ್ಲಿ ಪತ್ತೆಯಾದ ಹಣವನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದೇ ವೇಳೆ ಪ್ರಕರಣದ ಮತ್ತೋರ್ವ ಆರೋಪಿ ಆಗಿರುವ ಉಡುಪಿ (Udupi) ಮೂಲದ ಜಗದೀಶ್‌ ಎಂಬಾತನನ್ನ ಬಂಧಿಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್

    ಇತ್ತೀಚೆಗಷ್ಟೇ ಹೈದರಾಬಾದ್ ಮೂಲದ ಚಂದ್ರಮೋಹನ್ ಎಂಬಾತನನ್ನು ಎಸ್‌ಐಟಿ ಬಂಧಿಸಿತ್ತು. ಪ್ರಕರಣದಲ್ಲಿ ಸತ್ಯನಾರಾಯಣ ವರ್ಮ ಎಂಬಾತ ಬಂಧನವಾಗಿತ್ತು. ವರ್ಮ ಬಳಿ 10 ಕೋಟಿ ನಗದು, 16 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಈತನೊಂದಿಗೆ ಕೈಜೋಡಿಸಿದ್ದ ಆರೋಪದ ಮೇಲೆ ಚಂದ್ರಮೋಹನ್‌ ಎಂಬಾತನನ್ನೂ ಬಂಧಿಸಲಾಗಿತ್ತು. 18 ನಕಲಿ ಅಕೌಂಟ್‌ಗಳ ರೂವಾರಿ ಚಂದ್ರಮೋಹನ್‌ನಿಂದ ಎಸ್‌ಐಟಿ ಅಧಿಕಾರಿಗಳು 8.60 ಕೋಟಿ ಹಣವನ್ನೂ ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿ ಅಂದಿದ್ದಾರೆ, ನನ್ನ ಹೆಸರು ಹೇಳಿಲ್ಲ- ಶರಣ ಪ್ರಕಾಶ್ ಪಾಟೀಲ್ ಫಸ್ಟ್ ರಿಯಾಕ್ಷನ್

    ಇದಕ್ಕೂ ಮುನ್ನವೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Karnataka Maharshi Valmiki Scheduled Tribe Development Corporation Ltd) ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಖಾತೆಗಳಲ್ಲಿನ ವಂಚನೆಯ ವಹಿವಾಟಿನ ಬಗ್ಗೆ ಬ್ಯಾಂಕ್ ಅರಿವು ಹೊಂದಿದೆ. ಅಕ್ರಮಗಳು ಬೆಳಕಿಗೆ ಬಂದಾಗ ಬ್ಯಾಂಕ್ ತಕ್ಷಣವೇ ಪ್ರಶ್ನಾರ್ಹ ವಹಿವಾಟುಗಳನ್ನು ವಂಚನೆ ಎಂದು ಘೋಷಿಸಿದೆ. ಸಂಪೂರ್ಣ ತನಿಖೆ ಮತ್ತು ಅಪರಾಧಿಗಳ ಪತ್ತೆಗಾಗಿ ಮೇ 30 ರಂದು ಕೇಂದ್ರೀಯ ತನಿಖಾ ದಳಕ್ಕೆ (CBI) ದೂರು ನೀಡಿದ್ದೇವೆ. ಮುಂದಿನ ವಿಚಾರಣೆಗಾಗಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ತ್ವರಿತವಾಗಿ ಪರಿಹರಿಸಲು ನಾವು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಅಂತಹ ಘಟನೆಗಳನ್ನು ತಡೆಯಲು ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ.

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು: ಎಂ.ಲಕ್ಷ್ಮಣ್

  • ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ; ಮತ್ತೋರ್ವ ಆರೋಪಿ ಬಂಧನ

    ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ; ಮತ್ತೋರ್ವ ಆರೋಪಿ ಬಂಧನ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಕೋಟ್ಯಂತರ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಹೈದರಾಬಾದ್ ಮೂಲದ ಚಂದ್ರಮೋಹನ್ ಎಂಬಾತನನ್ನು ಬಂಧಿಸಲಾಗಿದೆ. ಹೈದರಾಬಾದ್‌ನ ಹಳ್ಳಿಯೊಂದರಲ್ಲಿ ಆರೋಪಿ ಎಸ್‌ಐಟಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯನವರೇ ಎ1 ಆರೋಪಿ: ಅಶೋಕ್ ಗಂಭೀರ ಆರೋಪ

    ಪ್ರಕರಣದಲ್ಲಿ ಸತ್ಯನಾರಾಯಣ ವರ್ಮ ಎಂಬಾತ ಬಂಧನವಾಗಿತ್ತು. ವರ್ಮ ಬಳಿ 10 ಕೋಟಿ ನಗದು, 16 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿತ್ತು. ವರ್ಮ ಜೊತೆ ಕೈಜೋಡಿಸಿದ್ದ ಆರೋಪದ ಮೇಲೆ ಈಗ ಚಂದ್ರಮೋಹನ್‌ನನ್ನು ಬಂಧಿಸಲಾಗಿದೆ.

    ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಗಳಾದ ಸತ್ಯನಾರಾಯಣ ವರ್ಮ ಹಾಗೂ ಚಂದ್ರಮೋಹನ್ ಇಬ್ಬರನ್ನೂ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್

    18 ನಕಲಿ ಅಕೌಂಟ್‌ಗಳ ರೂವಾರಿ ಚಂದ್ರಮೋಹನ್. ಈಗಾಗಲೇ ಎಸ್‌ಐಟಿ ಅಧಿಕಾರಿಗಳು 8.60 ಕೋಟಿ ಹಣ ವಶಪಡಿಸಿಕೊಂಡಿದ್ದಾರೆ.

    ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ಹಣ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಈಗಾಗಲೇ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

  • ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯನವರೇ ಎ1 ಆರೋಪಿ: ಅಶೋಕ್ ಗಂಭೀರ ಆರೋಪ

    ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯನವರೇ ಎ1 ಆರೋಪಿ: ಅಶೋಕ್ ಗಂಭೀರ ಆರೋಪ

    – ಕಸಕ್ಕೂ ತೆರಿಗೆ ಹಾಕಲು ಸಿದ್ಧತೆ ಮಾಡಿಕೊಂಡಿದ್ದಾರೆಂದು ಆಕ್ರೋಶ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದ ಬಹುಕೋಟಿ ಹಗರಣದ ಹಿಂದೆ ಕೇವಲ ಬಿ.ನಾಗೇಂದ್ರ (B Nagendra) ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಒತ್ತಾಯಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಇವರಿಗೆ ಹಿಡಿತವಿಲ್ಲವೇ? ಈ ಹಣ ಹೈದರಾಬಾದ್‌ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ಧ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಸ್ಟಡಿ ಅವಧಿ ಅಂತ್ಯ – ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ಶಿಫ್ಟ್!

    ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ (Guarantee Scheme) ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ. ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಶಾಸಕರು ಅನುದಾನ ಯಾವಾಗ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಪಾಪರ್ ಆಗಿರುವ ಸರ್ಕಾರ ಎಲ್ಲಾ ಕಡೆ ಬಿಲ್ ಪಾವತಿ ಬಾಕಿ ಇರಿಸಿಕೊಂಡಿದೆ. ಬಿಜೆಪಿ ಸರ್ಕಾರವಿದ್ದಾಗ ಶಾಸಕರು ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್‌ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು, ಶಾಸಕರು ಹಾಗೂ ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದರು. ಇದನ್ನೂ ಓದಿ: ಐವರು ಕೇಂದ್ರ ಸಚಿವರು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವಿದೆ: ಪರಮೇಶ್ವರ್

    ಕಾಂಗ್ರೆಸ್ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ 187 ಕೋಟಿ ರೂ. ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ ಎಂದು ಹೇಳಿದರು. ಇದನ್ನೂ ಓದಿ: ಬೈಕ್‌ಗೆ ಲಾರಿ ಡಿಕ್ಕಿ – ಪತಿಯೊಂದಿಗೆ ದೇವರ ದರ್ಶನ ಮುಗಿಸಿ ಬರುತ್ತಿದ್ದ ಪತ್ನಿ ಸಾವು!

    ಕಸಕ್ಕೂ ತೆರಿಗೆ:
    ಈಗಾಗಲೇ ತೆರಿಗೆ ಭಾರದಿಂದ ಜನರು ಸುಸ್ತಾಗಿದ್ದಾರೆ. ಕಸಕ್ಕೂ ತೆರಿಗೆ ಹಾಕುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಮುಂದೆ ಹಾಲು, ಆಲ್ಕೋ ಹಾಲ್, ಬಸ್ ಟಿಕೆಟ್ ದರವನ್ನೂ ಹೆಚ್ಚಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಇನ್ನಷ್ಟು ಹೊಸ ತೆರಿಗೆಗಳನ್ನು ವಿಧಿಸಲಿದ್ದಾರೆ. ಇದರ ವಿರುದ್ಧವೂ ಬಿಜೆಪಿ ಪ್ರತಿಭಟಿಸಲಿದೆ. ಅಲ್ಪಸಂಖ್ಯಾತರು ಏನು ಮಾಡಿದರೂ ನಡೆಯುತ್ತದೆ ಎಂಬ ನಂಬಿಕೆ ಬಂದಿದೆ. ಹಿಂದೂಗಳ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದೆ ಹಾಗೂ ಮಾಫಿಯಾ ರೌಡಿಗಳಿಗೆ ಭಯ ಕಡಿಮೆಯಾಗಿದೆ. ಗೃಹ ಇಲಾಖೆ ದಿಕ್ಕು ದೆಸೆಯಿಲ್ಲದಂತೆ ನಡೆಯುತ್ತಿದೆ. ಜನರು ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ ಎಂದರು. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ – ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

    ನರೇಂದ್ರ ಮೋದಿಯವರು ಹಿಂದುಳಿದ ವರ್ಗದ ನಾಯಕರಾಗಿದ್ದು, ಸಚಿವ ಸಂಪುಟದಲ್ಲಿ ಎಲ್ಲ ಜಾತಿ ವರ್ಗಕ್ಕೆ ಸ್ಥಾನಮಾನ ನೀಡಿದ್ದಾರೆ. ಕರ್ನಾಟಕದ ಸಂಸದರಿಗೂ ಅವಕಾಶ ನೀಡಿರುವುದು ಅಭಿನಂದನೀಯ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಹೆಬ್ಬಾಗಿಲಾಗಿದ್ದು, ಇಲ್ಲಿಗೆ ಹೆಚ್ಚು ಅವಕಾಶ ನೀಡಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ನನ್ನ ಬಗ್ಗೆ ತಪ್ಪು ವರದಿಯಾಗಿದೆ, ಕೇರಳದ ಅಭಿವೃದ್ಧಿಗೆ ಬದ್ಧ: ರಾಜೀನಾಮೆ ವಿಚಾರಕ್ಕೆ ಸುರೇಶ್‌ ಗೋಪಿ ಸ್ಪಷ್ಟನೆ