Tag: Valmiki Jayanti

  • ವಾಲ್ಮೀಕಿ ಜಯಂತಿ ಬ್ಯಾನರ್ ಕಿತ್ತ ಬಳ್ಳಾರಿ ಪಾಲಿಕೆ – ರಸ್ತೆ ತಡೆ ನಡೆಸಿ ಪ್ರತಿಭಟನೆ

    ವಾಲ್ಮೀಕಿ ಜಯಂತಿ ಬ್ಯಾನರ್ ಕಿತ್ತ ಬಳ್ಳಾರಿ ಪಾಲಿಕೆ – ರಸ್ತೆ ತಡೆ ನಡೆಸಿ ಪ್ರತಿಭಟನೆ

    ಬಳ್ಳಾರಿ: ವಾಲ್ಮೀಕಿ ಜಯಂತಿ ನಿಮಿತ್ತ ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ (Banner) ತೆರವು ಮಾಡಿದ್ದನ್ನು ಖಂಡಿಸಿ ವಾಲ್ಮೀಕಿ ಸಮುದಾಯದ (Valmiki Community) ಸದಸ್ಯರು ನಗರದ ಸಂಗಮ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

    ವಾಲ್ಮೀಕಿ ಜಯಂತಿ ಹಿನ್ನೆಲೆ ಮಹಾನಗರ ಪಾಲಿಕೆಯ (Ballari Municipal Corporation) ಪರವಾನಗಿ ಪಡೆದು ನಗರದ ಹಲವೆಡೆ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಆದರೆ ಬೆಳಗ್ಗೆ ಏಕಾಏಕಿ ನಗರದ 38 ಕಡೆಗಳಲ್ಲಿ ಹಾಕಲಾಗಿದ್ದ ಬ್ಯಾನರ್‌ಗಳನ್ನು ಕಿತ್ತು ಹಾಕಲಾಗಿದೆ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:  ಜಾತಿಗಣತಿಯಲ್ಲಿ ತಾಂತ್ರಿಕ ಸಮಸ್ಯೆ – ಹಿಂದೂ ವ್ಯಕ್ತಿಯ ಆಧಾರ್‌ ನಂಬರ್‌ ಹಾಕಿದ್ರೆ ಮುಸ್ಲಿಂ ಹೆಸರು!

     

    ಅನುಮತಿ ಪಡೆದು ಬ್ಯಾನರ್ ಅವಳಡಿಕೆ ಮಾಡಲಾಗಿದ್ದರೂ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದ್ದಾರೆ. ಅಧಿಕಾರಿಗಳು ಶಾಸಕ ಭರತ್ ರೆಡ್ಡಿ ಸೂಚನೆ ಮೇರೆಗೆ ಅಧಿಕಾರಿಗಳು ಬ್ಯಾನರ್‌ಗಳನ್ನ ತೆರವು ಮಾಡಿದ್ದಾರೆ ಎಂದು ಆರೋಪಿಸಿದ ಮುಖಂಡರು, ಬ್ಯಾನರ್ ತೆಗೆದ ಅಧಿಕಾರಿಗಳನ್ನ ಕೂಡಲೇ ಸಸ್ಪಂಡ್‌ ಮಾಡುವಂತೆ ಆಗ್ರಹಿಸಿದರು.

    ಘಟನಾ ಸ್ಥಳಕ್ಕೆ ಮಹಾನಗರ ಪಾಲಿಕೆ‌ ಆಯುಕ್ತ ಮಂಜುನಾಥ್ , ಎಸ್‌ಪಿ  ಶೋಭಾ‌‌ರಾಣಿ ದೌಡಾಯಿಸಿ, ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದರು. ಅಧಿಕಾರಿಗಳ ಸಮ್ಮುಖದಲ್ಲೇ ಸರ್ಕಾರಿ ವಾಲ್ಮೀಕಿ ಜಯಂತಿ ಬಹಿಷ್ಕರಿಸಿ , ಪ್ರತ್ಯೇಕ ಜಯಂತಿ ಮಾಡಲು ಪ್ರತಿಭಟನಕಾರರು ನಿರ್ಧರಿಸಿದರು.

  • MUDA Scam| ಸಿಎಂ ತಕ್ಷಣ ರಾಜೀನಾಮೆ ನೀಡಬೇಕು, ಸಿಬಿಐಗೆ ನೀಡದಿದ್ರೆ ಕೇಸ್‌ ಮುಚ್ಚಿ ಹಾಕ್ತಾರೆ: ಛಲವಾದಿ ನಾರಾಯಣಸ್ವಾಮಿ

    MUDA Scam| ಸಿಎಂ ತಕ್ಷಣ ರಾಜೀನಾಮೆ ನೀಡಬೇಕು, ಸಿಬಿಐಗೆ ನೀಡದಿದ್ರೆ ಕೇಸ್‌ ಮುಚ್ಚಿ ಹಾಕ್ತಾರೆ: ಛಲವಾದಿ ನಾರಾಯಣಸ್ವಾಮಿ

    – ನಿಗಮವನ್ನು ತಿಂದು ತೇಗಿದವರು ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದಾರೆ
    – ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನವನ್ನಾಗಿ ಆಚರಿಸಬೇಕಿತ್ತು

    ಬೆಂಗಳೂರು: ಮೈಸೂರು ಮುಡಾ (MUDA) ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ (CBI) ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಆಗ್ರಹಿಸಿಸಿದರು.

    ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೇ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು.

    ಕಾಂಗ್ರೆಸ್ಸಿನವರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು (Valmiki Jayanti) ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

    ಎಲ್ಲ ಕಡತಗಳನ್ನು ಹೆಲಿಕಾಪ್ಟರ್‌ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಬೇಕು. ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು. ಮಾನ್ಯ ಸುರೇಶ್ ಅವರೂ ರಾಜೀನಾಮೆ ನೀಡಬೇಕು. ಇಲ್ಲವಾದರೆ ಇಡಿ. ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಬಂಧಿಸಲಿ ಎಂದು ಛಲವಾದಿ ಒತ್ತಾಯಿಸಿದರು. ಇದನ್ನೂ ಓದಿ: ಮುಡಾದಲ್ಲಿ ಬರೋಬ್ಬರಿ 5,000 ಕೋಟಿ ಅವ್ಯವಹಾರ ಆಗಿದೆ – ಶಾಸಕ ಎ ಮಂಜು ಹೊಸ ಬಾಂಬ್‌

    ತಿಂದು ತೇಗಿದ್ದಾರೆ:
    ಭ್ರಷ್ಟಾಚಾರ (Corruption) ಅಪರಾಧವಲ್ಲ ಎಂಬ ಮನಸ್ಥಿತಿಗೆ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷ ಬಂದ ಹಾಗಿದೆ. ಕುರಿಗಳನ್ನು ಕಾಯಲು ತೋಳನನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದಂತಿದೆ. ಇವತ್ತು ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದ್ದರೂ ಜೈಲಿನಿಂದ ಬಂದವರು ವಿಜೃಂಭಿಸಿ ಬರುತ್ತಿದ್ದಾರೆ. ನಿನ್ನೆ ತಾನೇ ವಾಲ್ಮೀಕಿ ಜಯಂತಿ ನಡೆದಿದೆ. ಸಿದ್ದರಾಮಯ್ಯನವರು ವಾಲ್ಮೀಕಿ ಜಯಂತಿ ಮಾಡುವಾಗ ನನಗೇ ನಾಚಿಕೆ ಅನಿಸಿತ್ತು. ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು ವಾಲ್ಮೀಕಿ ಜಯಂತಿ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

    ಇಂದು ಬೆಳಿಗ್ಗೆ ಮುಡಾ ಕಚೇರಿ, ತಾಲೂಕು ಕಚೇರಿ ಮತ್ತು ದೇವರಾಜು ಅವರ ಮನೆಗೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮೂರು ಬಾರಿ ಮುಡಾ ಕಡತಗಳನ್ನು ಕೇಳಿದ್ದರೂ ಅಧಿಕಾರಿಗಳು ತಿರಸ್ಕರಿಸಿದ್ದೇ ಇದಕ್ಕೆ ಕಾರಣ ಎಂದು ವಿವರಿಸಿದರು.

     

    ಈ ಹಗರಣದಲ್ಲಿ ಸತ್ಯ ಹೊರಗಡೆ ಬರುವುದು ರಾಜ್ಯ ಸರ್ಕಾರಕ್ಕೆ ಬೇಕಾಗಿಲ್ಲ. ಮುಡಾ ನಿವೇಶನಗಳನ್ನು ಅವಶ್ಯಕತೆ ಇಲ್ಲದಿದ್ದರೂ ವಾಪಸ್ ಕೊಡಲಾಗಿದೆ. ಅಧ್ಯಕ್ಷರಾಗಿದ್ದ ಮರಿಗೌಡರನ್ನು ಎತ್ತಂಗಡಿ ಮಾಡಿಸಲಾಗಿದೆ. ಅಲ್ಲಿನ ಅಧಿಕಾರಿಗಳನ್ನು ಬೇರೆ ಬೇರೆ ಇಲಾಖೆಗಳಿಗೆ ಕಳುಹಿಸಲಾಗಿದೆ. ಮುಡಾದಲ್ಲಿ ಅಪಾರವಾದ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಇದೆಲ್ಲವೂ ತೋರಿಸುತ್ತದೆ ಎಂದು ವಿಶ್ಲೇಷಿಸಿದರು.

    ಮುಖ್ಯಮಂತ್ರಿ ಕುಟುಂಬವೇ ಪಾಲ್ಗೊಂಡ ಇಂಥ ಹಗರಣವನ್ನು ಮುಚ್ಚಿ ಹಾಕುವ ಉದ್ದೇಶ ಸರ್ಕಾರದ್ದು. ಮೊದಲು ಎಸ್‍ಐಟಿಗೆ ತನಿಖೆಯನ್ನು ಕೊಡಲಾಗಿತ್ತು. ಕೋರ್ಟ್ ಆದೇಶವಾಗಿದ್ದರೂ ಎಸ್‍ಐಟಿ ಈ ಕೇಸನ್ನು ವಾಪಸ್ ಪಡೆದಿಲ್ಲ. ಐಎಎಸ್ ಅಧಿಕಾರಿಗಳ ತಂಡ ತನಿಖೆ ಮಾಡಲಿದೆ ಎಂದು ಹೇಳಲಾಗಿತ್ತು. ಅದನ್ನೂ ವಾಪಸ್ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

    ಲೋಕಾಯುಕ್ತ ಕೂಡ ತನ್ನ ಕೆಲಸ ಪ್ರಾರಂಭಿಸಿತ್ತು. ಆದರೆ ಲೋಕಾಯುಕ್ತದ ಬಗ್ಗೆ ನನಗೆ ನನ್ನದೇ ಆದ ಅನುಮಾನವಿದೆ. ಇದುವರೆಗೂ ಕೂಡ ಯಾರನ್ನೂ ಕರೆದು ತನಿಖೆಗೆ ಒಳಪಡಿಸಿಯೇ ಇಲ್ಲ. ಕೋರ್ಟ್ ಆದೇಶಗಳನ್ನು ಮೀರಿ ಲೋಕಾಯುಕ್ತ ಇದರಲ್ಲಿ ಒಳಗೊಳ್ಳುತ್ತಿದೆ ಎಂದು ಅನುಮಾನ ಕಾಡುತ್ತಿದೆ ಎಂದು ನಾರಾಯಣಸ್ವಾಮಿ ಅನಿಸಿಕೆ ವ್ಯಕ್ತಪಡಿಸಿದರು.

     

  • ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿದ್ದರಾಮಯ್ಯ

    ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿದ್ದರಾಮಯ್ಯ

    ಬೆಂಗಳೂರು: ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ ಎಂದು ಮಹರ್ಷಿ ವಾಲ್ಮೀಕಿ ಬಗೆಗಿನ ಸುಳ್ಳು ಮಾಹಿತಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಐದು ಮಹನೀಯರಿಗೆ ಸಿಎಂ ವಾಲ್ಮೀಕಿ ಪ್ರಶಸ್ತಿ ವಿತರಣೆ ಮಾಡಿದರು.

    ಈ ವೇಳೆ ಮಾತನಾಡಿದ ಅವರು, ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ (Valmiki Jayanti) ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಅಂತಾ ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ಜಯಂತಿ; ಮಹರ್ಷಿಗಳ ಪ್ರತಿಮೆಗೆ ಸಿಎಂ ಪುಷ್ಪಾರ್ಚನೆ

    ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದರು. ರಾಮನ‌ ಮಕ್ಕಳಾದ ಲವ-ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.

    SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡ್ತೀನಿ ಅಂತಾ ತಿಳಿಸಿದರು. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ SCSP/TSP ಕಾಯ್ದೆಯನ್ನು ಜಾರಿಗೆ ತಂದಿಲ್ಲ. ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಅಂತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ

    ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ. ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ‌ ಜನತೆ ಅರ್ಥಮಾಡಿಕೊಳ್ಳಬೇಕು ಎಂದರು.

    ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಅಂತಾ ತಿಳಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ, ರಾಜಣ್ಣ, ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿ ಹಲವರು ಭಾಗಿಯಾಗಿದ್ದರು.

  • ಕಾಲು ತುಳಿದ ನೆಪವೊಡ್ಡಿ KSRTC ಚಾಲಕನ ಎದೆಗೆ ಕುಡುಗೋಲಿನಿಂದ ಕೊಚ್ಚಿ ಕೊಲೆ

    ಕಾಲು ತುಳಿದ ನೆಪವೊಡ್ಡಿ KSRTC ಚಾಲಕನ ಎದೆಗೆ ಕುಡುಗೋಲಿನಿಂದ ಕೊಚ್ಚಿ ಕೊಲೆ

    – ವಾಲ್ಮೀಕಿ ಜಯಂತಿ ಮೆರವಣಿಗೆ ವೇಳೆ ದುಷ್ಕೃತ್ಯ
    – ಎಂಟು ಮಂದಿಯಿಂದ ಓರ್ವನ ಹತ್ಯೆ
    – ಅಳಿಯನ ಮೇಲಿನ ಕೋಪಕ್ಕೆ ಮಾವ ಬಲಿ

    ಬಾಗಲಕೋಟೆ: ವಾಲ್ಮೀಕಿ ಜಯಂತಿ ಮೆರವಣಿಗೆ ವೇಳೆ ಯುವಕನ ಕಾಲು ತುಳಿದ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ನಿಮ್ಮ ಅಳಿಯ ಕಾಲು ತುಳಿದ ಎಂದು ನೆಪವಿಟ್ಟುಕೊಂಡು ಜಗಳಕ್ಕಿಳಿದ 8 ಮಂದಿ ದುಷ್ಕರ್ಮಿಗಳು ಕೆಎಸ್ಆರ್‌ಟಿಸಿ ಚಾಲಕರ ಎದೆಗೆ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾರೆ.

    ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಚಾಲಕ ಶಿವಪ್ಪ ಪೂಜಾರಿ(43) ಕೊಲೆಯಾದ ದುರ್ದೈವಿ. ಶೇಖರಪ್ಪ ಪೂಜಾರಿ, ಗ್ಯಾನೆಪ್ಪ ಪೂಜಾರಿ, ಶಿವಪ್ಪ ಯಲ್ಲಪ್ಪ ಇದ್ದಲಗಿ, ಮುತ್ತಪ್ಪ ಪೂಜಾರಿ, ಶ್ರೀಶೈಲ್ ಪೂಜಾರಿ ಸೇರಿದಂತೆ 8 ಜನರು ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಕೇವಲ ಕಾಲು ತುಳಿದ ಎಂಬ ಕಾರಣವನ್ನಿಟ್ಟುಕೊಂಡು ಶುರುವಾದ ಜಗಳ, ಮಾರಾಮಾರಿಗೆ ತಿರುಗಿ ಕೊನೆಗೆ 8 ಜನರು ಸೇರಿ ಶಿವಪ್ಪ ಅವರನ್ನು ಕೊಲೆ ಮಾಡಿದ್ದಾರೆ. ಇದನ್ನೂ ಓದಿ:ಸಿನಿಮಾ ಶೈಲಿಯಲ್ಲಿ ಯುವಕನ ಕೊಲೆಗೆ ಸಂಚು – ಕೈಗೆ ಚಾಕು ಇರಿತ

    ಸೋಮವಾರ ರಾತ್ರಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಮೆರವಣಿಗೆ ವೇಳೆ ಶಿವಪ್ಪ ಅವರ ಅಳಿಯ ಅಯ್ಯಪ್ಪ ಪೂಜಾರಿ ಹಾಗೂ ಕೆಲ ಯುವಕರು ಕುಣಿಯುತ್ತಿದ್ದರು. ಈ ವೇಳೆ ಗ್ಯಾನಪ್ಪಗೆ ಅಯ್ಯಪ್ಪ ಅವರ ಕಾಲು ಬಡಿದಿತ್ತು. ಇಷ್ಟಕ್ಕೆ ಸಿಟ್ಟಿಗೆದ್ದ ಗ್ಯಾನಪ್ಪ ಅಯ್ಯಪ್ಪ ಅವರ ಜೊತೆ ಜಗಳಕ್ಕೆ ನಿಂತುಕೊಂಡನು. ಆದರೆ ಅಲ್ಲಿದ್ದ ಹಿರಿಯರು ಇಬ್ಬರನ್ನೂ ಸಮಾಧಾನ ಮಾಡಿ ಕಳುಹಿಸಿದ್ದರು. ಇದನ್ನೂ ಓದಿ:ತುಂಬು ಗರ್ಭಿಣಿಗೆ ವರದಕ್ಷಿಣೆ ಕಿರುಕುಳ-ಪ್ರಶ್ನಿಸಿದ್ದಕ್ಕೆ ಅತ್ತೆ ಮೇಲೆ ಲಾಂಗ್ ಅಟ್ಯಾಕ್

    ಆದರೆ ಇಷ್ಟಕ್ಕೆ ಸುಮ್ಮನಾಗದ ಗ್ಯಾನಪ್ಪ, ನಿಮ್ಮ ಅಳಿಯನಿಗೆ ಬುದ್ಧಿ ಹೇಳು ಎಂದು ಶಿವಪ್ಪ ಅವರ ಜೊತೆ ಮಾತುಕತೆ ಶುರುಮಾಡಿದ್ದನು. ಆಗ ಮಾತುಕತೆ ಜಗಳಕ್ಕೆ ತಿರುಗಿ, ಮಾರಾಮಾರಿಯಾಗಿ ಕೊನೆಗೆ ಶಿವಪ್ಪ ಕೊಲೆಯಾಗಿದ್ದಾರೆ. ಜಗಳದಲ್ಲಿ ಅಳಿಯನ ಪರ ಮಾತಾಡೋಕೆ ಬಂದ ಶಿವಪ್ಪರನ್ನು 8 ಜನ ಸೇರಿ ಕೊಲೆ ಮಾಡಿದ್ದಾರೆ. ಕಟ್ಟಿಗೆಗಳಿಂದ ಹೊಡೆದು, ಕುಡಗೋಲಿನಿಂದ ಶಿವಪ್ಪನ ಎದೆಗೆ ಕೊಚ್ಚಿ ಕೊಲೆಗೈದಿದ್ದಾರೆ. ಇದನ್ನೂ ಓದಿ:ಪಬ್‍ಜಿ ಕೊಲೆ ಪ್ರಕರಣ – ತರಕಾರಿ ಕತ್ತರಿಸಿದಂತೆ ತಂದೆಯ ರುಂಡ, ಕಾಲು ಕತ್ತರಿಸಿದ ಮಗ

    ಸದ್ಯ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 8 ಮಂದಿ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

  • ಮಗನಿಂದಲೇ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಚ್‍ಡಿಡಿ

    ಮಗನಿಂದಲೇ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಚ್‍ಡಿಡಿ

    ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಸ್ವತಃ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

    ಹೌದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಲು ಶಿಫಾರಸ್ಸು ಮಾಡಿತ್ತು. ಹೀಗಾಗಿ ಸಮಿತಿ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಮಾಜಿ ಪ್ರಧಾನಿಯವರ ಹೆಸರನ್ನು ಅಂತಿಮಗೊಳಿಸಿತ್ತು.

    ಬುಧವಾರ ವಿಧಾನಸೌಧದಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿರುವ ಎಲ್ಲಾ ಸಾಧಕರಿಗೂ ಖುದ್ದು ಸಿಎಂ ಕುಮಾರಸ್ವಾಮಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಪ್ರಶಸ್ತಿ ಹಾಗೂ ಗೌರವ ಪಡೆದುಕೊಳ್ಳಲಿದ್ದಾರೆ.

    ಸಾಮಾನ್ಯವಾಗಿ ತಂದೆಯಿಂದ ಪುತ್ರನಿಗೆ ಪ್ರಶಸ್ತಿ ಸ್ವೀಕರಿಸುವುದನ್ನು ಕಾಣುತ್ತೇವೆ. ಆದರೆ ಬುಧವಾರ ನಡೆಯಲಿರುವ ಸಮಾರಂಭದಲ್ಲಿ ಪುತ್ರನ ಕೈಯಿಂದ ತಂದೆಯೊಬ್ಬರು ಪ್ರಶಸ್ತಿ ಸ್ವೀಕರಿಸುವ ಮೂಲಕ ವಿಶೇಷ ಹಾಗೂ ಅಪರೂಪದ ಸನ್ನಿವೇಶಕ್ಕೆ ವಿಧಾನಸೌದ ಸಜ್ಜಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv