Tag: Valsad

  • 19ರ ಯುವತಿ ಮೇಲೆ ಅತ್ಯಾಚಾರ, ಕೊಲೆ – ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಿದ್ದ ಸರಣಿ ಹಂತಕ ಅರೆಸ್ಟ್‌

    19ರ ಯುವತಿ ಮೇಲೆ ಅತ್ಯಾಚಾರ, ಕೊಲೆ – ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಿದ್ದ ಸರಣಿ ಹಂತಕ ಅರೆಸ್ಟ್‌

    ಗಾಂಧಿನಗರ: ಗುಜರಾತ್‌ನ ವಲ್ಸಾದ್‌ (Gujarat’s Valsad) ಜಿಲ್ಲೆಯಲ್ಲಿ 19 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಹರಿಯಾಣದ 29 ವರ್ಷದ ಸರಣಿ ಹಂತಕನನ್ನು ಗುಜರಾತ್‌ ಪೊಲೀಸರು (Gujarat Police) ಬಂಧಿಸಿದ್ದಾರೆ. ಈ ಅತ್ಯಾಚಾರ ಎಸಗುವುದಕ್ಕೂ ಮುನ್ನ ಹಂತಕ ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ರೈಲಿನಲ್ಲೇ ನಾಲ್ವರನ್ನು ಹತ್ಯೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಇದೇ ನವೆಂಬರ್‌ 14ರಂದು ಉದ್ವಾಡ ರೈಲು ನಿಲ್ದಾಣದ (Railway Station) ಸಮೀಪದ ಹಳಿಯ ಮೇಲೆ ಯುವತಿಯ ಶವ ಪತ್ತೆಯಾಗಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಹರಿಯಾಣದ ರೋಹ್ಟಕ್ ಮೂಲದ ರಾಹುಲ್ ಸಿಂಗ್ ಜಾಟ್ ಎಂಬಾತನ್ನ ನವೆಂಬರ್‌ 24ರಂದು ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಸಂತ್ರಸ್ತೆ ಆ ದಿನ ಟ್ಯೂಷನ್‌ ಮುಗಿಸಿ ಮನೆಗೆ ಬಂದಾಗ ಹಿಂದಿನಿಂದ ಹಲ್ಲೆ ನಡೆಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಬಳಿಕ ತಿಳಿಸಿದ್ದಾರೆ.

    ಹಂತಕ ಸುಳಿವು ಸಿಕ್ಕಿದ್ದು ಹೇಗೆ?
    ವಲ್ಸಾದ್ ಎಸ್ಪಿ ಕರಂರಾಜ್ ವಘೇಲಾ ಮಾತನಾಡಿ, ಅಪರಾಧ ನಡೆದ ಸ್ಥಳದಲ್ಲಿ ಹಂತಕ ಬಿಟ್ಟುಹೋಗಿದ್ದ ಟೀ ಶರ್ಟ್ ಮತ್ತು ಬ್ಯಾಗ್ ಪೊಲೀಸರಿಗೆ ಪ್ರಮುಖ ಸಾಕ್ಷ್ಯಗಳಾಗಿತ್ತು. ಅಲ್ಲದೇ ಸಿಟಿಟಿವಿಯಲ್ಲಿ ಆರೋಪಿ ಮುಖಚಹರೆ ಸೆರೆಯಾಗಿತ್ತು. ನಂತರ ಸೂರತ್‌ನ ಲಜ್‌ಪೋರ್ ಸೆಂಟ್ರಲ್ ಜೈಲಿನ ಅಧಿಕಾರಿ ಈತನ್ನ ಗುರುತಿಸಿದರು. ಈ ಹಿಂದೆ ನಾಲ್ಕು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ರಾಹುಲ್‌ ಇತ್ತೀಚೆಗಷ್ಟೇ ಜೈಲಿನಿಂದ ರಿಲೀಸ್‌ ಆಗಿದ್ದ. ಭಾನುವಾರ ರಾತ್ರಿ ಸ್ಥಳೀಯ ಮತ್ತು ರೈಲ್ವೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ವಲ್ಸಾದ್‌ನ ವಾಪಿ ರೈಲು ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಹಂತಕನ್ನ ಬಂಧಿಸಲಾಯಿತು ಎಂದು ವಿವರಿಸಿದ್ದಾರೆ.

    ಸರಣಿ ಹಂತಕನ ಬಗ್ಗೆ ಸ್ಫೋಟಕ ಮಾಹಿತಿ
    ಆರೋಪಿ ಜಾಟ್‌ ಕುರಿತು ಎಸ್ಪಿ ಹಲವು ಸ್ಫೋಟಕ ವಿಚಾರಗಳನ್ನ ತಿಳಿಸಿದ್ದಾರೆ. ಈತ ರೈಲಿನಲ್ಲಿ ಹೆಚ್ಚು ಪ್ರಯಾಣಿಸುತ್ತಿದ್ದ, ಒಂದು ಸ್ಥಳದಲ್ಲಿ ಇರುತ್ತಿರಲಿಲ್ಲ. ಈ ಹಿಂದೆ ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಮಹಾರಾಷ್ಟ್ರದ ರೈಲುಗಳಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ನಡೆದ ಲೂಟಿ, ಕೊಲೆ ಕೃತ್ಯಗಳನ್ನೂ ಎಸಗಿದ್ದ ಎಂದು ತಿಳಿಸಿದ್ದಾರೆ.

    ಜಾಟ್‌ನನ್ನ ಬಂಧನ ಮಾಡುವ ಹಿಂದಿನ ದಿನ ತೆಲಂಗಾಣದ ಸಿಕಂದರಾಬಾದ್‌ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರಿಂದ ಲೂಟಿ ಮಾಡಿದ್ದ. ಕಳೆದ ಅಕ್ಟೋಬರ್‌ನಲ್ಲೂ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ. ನಂತರ ಮಹಾರಾಷ್ಟ್ರದ ಸೋಲಾಪುರ ರೈಲು ನಿಲ್ದಾಣದ ಬಳಿ, ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದ ಬಳಿ ಕತಿಹಾರ್ ಎಕ್ಸ್‌ಪ್ರೆಸ್ ರೈಲು ಹಾಗೂ ಕರ್ನಾಟಕದಲ್ಲಿ ತಲಾ ಒಬ್ಬೊಬ್ಬರನ್ನು ಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಗುಜರಾತ್‌ನಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ – ಮಗುವಿನ ಅಪ್ಪನ ಸ್ನೇಹಿತನಿಂದಲೇ ಕೃತ್ಯ

    – ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ, ಆಕ್ರೋಶ

    ಗಾಂಧಿನಗರ: ಗುಜರಾತ್‌ನ (Gujarat) ವಲ್ಸಾದ್‌ನ ಉಮರ್ಗಾಮ್ (Umargam) ಪ್ರದೇಶದಲ್ಲಿ ಮೂರು ವರ್ಷದ ಮಗುವಿನ ಮೇಲೆ ಆಕೆಯ ತಂದೆಯ ಆಪ್ತ ಸ್ನೇಹಿತ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

    ಘಟನೆ ಬಳಿಕ ಕಾಮುಕ ಆರೋಪಿ ಎಸ್ಕೇಪ್‌ ಆಗಿದ್ದಾನೆ. ಇನ್ನೂ ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ರೊಚ್ಚಿಗೆದ್ದ ಸ್ಥಳೀಯ ನಿವಾಸಿಗಳು ಉಮರ್ಗಾಮ್ ಪೊಲೀಸ್ ಠಾಣೆಗೆ (Umargam Police Station) ಮುತ್ತಿಗೆ ಹಾಕಿದ್ದಾರೆ. ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನ ಬಂಧಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: 12 ನೂತನ ಕೈಗಾರಿಕಾ ಸ್ಮಾರ್ಟ್ ಸಿಟಿ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

    ಇದಾದ ನಂತರ ಪೊಲೀಸರು ಮಧ್ಯಾಹ್ನದ ಒಳಗೆ ಆರೋಪಿಯನ್ನು ಹಿಡಿದು ತರುವುದಾಗಿ ಊರಿನ ಜನರಿಗೆ ಭರವಸೆ ನೀಡಿದ್ದರು. ಆದಾಗ್ಯೂ ಜಗ್ಗದ ಜನ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಹಾಗೂ ಕಾಮುಕನಿಗೆ ಮರಣದಂಡನೆ ವಿಧಿಸುವಂತೆ ಪಟ್ಟು ಹಿಡಿದರು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಉಮರ್ಗಾಮ್‌ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದರು.

    ಸದ್ಯ ತನಿಖೆ ಮುಂದುವರಿಸುತ್ತಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಇತ್ತ ಸಂತ್ರಸ್ತ ಮಗುವಿನ ವೈದ್ಯಕೀಯ ಪರೀಕ್ಷೆ ನಡೆಸುವ ಜೊತೆಗೆ ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: Chikkaballapur | ಭೀಕರ ರಸ್ತೆ ಅಪಘಾತ – ಮದುವೆಗೆಂದು ತೆರಳುತ್ತಿದ್ದ ಅಪ್ಪ-ಅಮ್ಮ-ಮಗನ ದುರ್ಮರಣ

  • ನಿರ್ಜನ ಪ್ರದೇಶದಲ್ಲಿ ಅವರದ್ದೇ ಕಾರಿನಲ್ಲಿ ಸಿಕ್ಕಿದೆ ಜನಪ್ರಿಯ ಗಾಯಕಿ ವೈಶಾಲಿ ಮೃತದೇಹ

    ನಿರ್ಜನ ಪ್ರದೇಶದಲ್ಲಿ ಅವರದ್ದೇ ಕಾರಿನಲ್ಲಿ ಸಿಕ್ಕಿದೆ ಜನಪ್ರಿಯ ಗಾಯಕಿ ವೈಶಾಲಿ ಮೃತದೇಹ

    ಗುಜರಾತ್ ನ ಜನಪ್ರಿಯ ಗಾಯಕಿ, ನಟಿಯೂ ಆಗಿದ್ದ ವೈಶಾಲಿ ಬುಲ್ಸಾರ್ ಕಾಣೆಯಾಗಿದ್ದರು. ಎರಡು ದಿನಗಳ ಹಿಂದೆಯಷ್ಟೇ ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ವೈಶಾಲಿ ಪತಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವೈಶಾಲಿಗಾಗಿ ಹುಡುಕಾಟ ನಡೆಸಿದ್ದರು. ಕೊನೆಗೂ ವೈಶಾಲಿ ಹೆಣವಾಗಿ ದೊರೆತಿದ್ದಾರೆ. ಗುರಜಾರ್ ನ ಪರ್ಡಿ ತಾಲ್ಲೂಕಿನ ನಿರ್ಜನ ಪ್ರದೇಶವೊಂದರಲ್ಲಿ ನಿಂತಿದ್ದ ಅವರದ್ದೇ ಕಾರಿನಲ್ಲಿ ಅವರ ಮೃತದೇಹ ಸಿಕ್ಕಿದೆ.

    ವೈಶಾಲಿಯ ಕಾರು ವಲ್ಸಾಡ್ ಜಿಲ್ಲೆಯ ಪರ್ಡಿ ತಾಲ್ಲೂಕಿನ ಪಾರ್ ನದಿ ತೀರದಲ್ಲಿನ ನಿರ್ಜನ ಪ್ರದೇಶದಲ್ಲಿ ಕಂಡಿದ್ದು, ಕಾರು ನೋಡಿದ್ದ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಕಾರಿನ ಹಿಂಬದಿಯ ಸೀಟಿನಲ್ಲಿ ವೈಶಾಲಿಯ ಮೃತದೇಹ ದೊರೆತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆರ್ಯವರ್ಧನ್ ಗುರೂಜಿಯವರಲ್ಲಿ ಅಪ್ಪನ ಪ್ರೀತಿ ಕಂಡೆ: ರೂಪೇಶ್ ಭಾವುಕ

    ಪೊಲೀಸರ ಮಾಹಿತಿ ಪ್ರಕಾರ, ಗಾಯಕಿಯನ್ನು ಉಸಿರುಗಟ್ಟಿಸಿ ಕೊಂದಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಆಕೆಯ ಮೈಮೇಲೆ ಯಾವುದೇ ಗಾಯಗಳಿಲ್ಲ ಎಂದಿದ್ದಾರೆ. ಅಲ್ಲದೇ, ಸಾಯುವ ಸಂದರ್ಭದಲ್ಲಿ ಯಾವುದೇ ಪ್ರತಿರೋಧ ತೋರಿಸಿದ ಕುರುಹುಗಳೂ ಕಾಣುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಪತಿಯ ಹೇಳಿಕೆ ಪ್ರಕಾರ ವಲ್ಸಾಡ್ ನ ತಮ್ಮ ಮನೆಯಿಂದ ಹೊರಡುವಾಗ ಸ್ಥಳಿಯ ಅಯ್ಯಪ್ಪ ದೇವಸ್ಥಾನದ ಬಳಿ ಗೆಳೆಯರನ್ನು ಕಾಣಲು ಹೋಗುತ್ತಿರುವುದಾಗಿ ತಿಳಿಸಿದ್ದರಂತೆ ವೈಶಾಲಿ. ಆನಂತರ ಮನೆಗೆ ಬಾರದ ಹಿನ್ನೆಲೆಯಲ್ಲಿ ಪತಿ ದೂರು ದಾಖಲಿಸಿದ್ದರು. ಗಾಯಕಿಯಷ್ಟೇ ಅಲ್ಲ, ಸಂಗೀತ ಶಾಲೆಯನ್ನೂ ವೈಶಾಲಿ ನಡೆಸುತ್ತಿದ್ದು, ಅಪಾರ ಅಭಿಮಾನಿಗಳನ್ನು ಅವರು ಹೊಂದಿದ್ದರು.

    Live Tv
    [brid partner=56869869 player=32851 video=960834 autoplay=true]