Tag: Vamana

  • ದೀಪಾವಳಿ 2025 – ಬಲಿಪಾಡ್ಯಮಿ ಹಬ್ಬದ ಮಹತ್ವ ಏನು?

    ದೀಪಾವಳಿ 2025 – ಬಲಿಪಾಡ್ಯಮಿ ಹಬ್ಬದ ಮಹತ್ವ ಏನು?

    ದೀಪ ಪ್ರತಿಪದ ಉತ್ಸವವೇ ದೀಪಾವಳಿ. ದೀಪ ಎಂದರೆ ಬೆಳಕು, ಪ್ರತಿಪದ ಎಂದರೆ ಆರಂಭ ಮತ್ತು ಉತ್ಸವ ಎಂದರೆ ಹಬ್ಬ. ದೀಪಾವಳಿ (Deepavali) ಒಂದೇ ದಿನಕ್ಕೆ ಮುಗಿಯುವ ಹಬ್ಬವಲ್ಲ. ಒಟ್ಟು ಮೂರು ದಿನ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಮೊದಲ ದಿನ ಮನೆಯವರೆಲ್ಲರೂ ಎಣ್ಣೆ ಸ್ನಾನ ಮಾಡುವ ನರಕ ಚತುದರ್ಶಿ, ಎರಡನೇ ದಿವಸ ಅಮಾವಾಸ್ಯೆ, ಮೂರನೇ ದಿನವೇ ಬಲಿ ಪಾಡ್ಯಮಿ. ದೀಪಾವಳಿ ಬಲಿಪಾಡ್ಯಮಿಯೊಂದಿಗೆ (Balipadyami) ಈ ಮೂರು ದಿನಗಳ ಹಬ್ಬ ಮುಗಿಯುತ್ತದೆ.

    ಅಮಾವಾಸ್ಯೆಯ ನಂತರದ ಪಾಡ್ಯದಂದು ರಾಕ್ಷಸರ ಅರಸನಾದ ಬಲೀಂದ್ರನ ಪೂಜೆಯನ್ನು ನಡೆಸುವುದರಿಂದ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯಲಾಗುತ್ತದೆ. ಹಿರಣ್ಯ ಕಶ್ಯಪುವಿನ ವಂಶಸ್ಥನಾದ ಇವನು ದಾನವನಾದರೂ ಈ ದಿನ ಬಲೀಂದ್ರನನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ.

    ಪ್ರಜೆಗಳನ್ನು ಬಹಳ ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಾನಶೂರ ದೈತ್ಯರಾಜ ಬಲಿ ಚಕ್ರವರ್ತಿ (Bali Maharaja) ಮಹಾವಿಷ್ಣುವಿನ ಮಹಾನ್‌ ಭಕ್ತ. ರಾಕ್ಷಸ ರಾಜನಾದರೂ ದಾನ ಧರ್ಮದಿಂದ ಹೆಸರುವಾಸಿಯಾಗಿದ್ದ ಬಲಿ ಮಹಾರಾಜನಿಗೆ ತನ್ನ ರೀತಿಯಲ್ಲಿ ಬೇರೆ ಯಾರು ಪ್ರಜೆಗಳನ್ನು ನೋಡಿಕೊಳ್ಳುವುದಿಲ್ಲ ಎಂಬ ಅಹಂಕಾರ ಇತ್ತು. ಬಲಿ ರಾಜನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದ. ಇವರ ಕಾಟ ಹೆಚ್ಚಾಗುತ್ತಿದ್ದಂತೆ ಹೇಗಾದರೂ ಮಾಡಿ ಬಲಿಯನ್ನು ಸಂಹಾರ ಮಾಡಬೇಕೆಂದು ದೇವತೆಗಳು ವಿಷ್ಣುವಿನ ಬಳಿ ಪ್ರಾರ್ಥನೆ ಮಾಡುತ್ತಾರೆ.  ಇದನ್ನೂ ಓದಿ:  ಭಾರತದಲ್ಲಿ ಮಾತ್ರವಲ್ಲ, ಈ ದೇಶಗಳಲ್ಲಿಯೂ ದೀಪಾವಳಿ ಆಚರಣೆ ಬಲು ಜೋರು!

    ದೇವತೆಗಳಿಗೆ ಅಭಯ ನೀಡಿದ ವಿಷ್ಣು ವಾಮನನ (ಬಾಲಕ) ರೂಪದಲ್ಲಿ ಬಲಿ ಮಹಾರಾಜನ ಬಳಿ ಬಂದು ದಾನವನ್ನು ಕೇಳುತ್ತಾನೆ. ಬಲೀಂದ್ರ ರಾಜ ಕೊಡುಗೈ ದಾನಿ. ನಿನಗೆ ಏನು ಬೇಕೆಂದು ಕೇಳು ಎಂದು ವಾಮನನಿಗೆ (Vamana) ಹೇಳುತ್ತಾನೆ. ಆಗ ವಾಮನ, ನನ್ನ ಮೂರು ಹೆಜ್ಜೆ ಊರುವಷ್ಟು ಭೂಮಿಯನ್ನು ದಾನವಾಗಿ ನೀಡಬಹುದೇ ಎಂದು ಕೇಳುತ್ತಾನೆ.

    ಪ್ರಜಾಪರಿಪಾಲನೆಯಲ್ಲಿ ಹೆಸರು ಮಾಡಿರುವ ನನಗೆ ಈ ಪುಟ್ಟ ಬಾಲಕನ ಬೇಡಿಕೆಯನ್ನು ಈಡೇರಿಸುವ ಯೋಗ್ಯತೆ ಇಲ್ವಾ ಎಂಬ ಅಹಂಕಾರದಿಂದ ಬಲೀಂದ್ರ ಮಹಾರಾಜ ವಾಮನನಿಗೆ, ನೀನು ಕೇಳಿದ ಮೂರು ಹೆಜ್ಜೆ ಊರುವಷ್ಟು ಜಾಗ ನೀಡುತ್ತೇನೆ ಎಂದು ವಚನವನ್ನು ಕೊಡುತ್ತಾನೆ.

     

    ಭೂಮಿಯನ್ನು ದಾನ ಪಡೆಯುವಾಗ ವಾಮನಮೂರ್ತಿ ಆಕಾಶದ ಉದ್ದಕ್ಕೂ ಬೆಳೆಯುತ್ತಾನೆ. ಒಂದು ಪಾದವನ್ನು ಭೂಮಿ ಮೇಲೆ, ಮತ್ತೊಂದು ಪಾದವನ್ನು ಆಕಾಶದ ಮೇಲೆ ಇರಿಸುತ್ತಾನೆ. ಇನ್ನೊಂದು ಪಾದ ಇಡಲು ಜಾಗ ಕಾಣುತ್ತಿಲ್ಲ ಎಲ್ಲಿ ಇಡಬೇಕು ಎಂದು ಕೇಳಿದಾಗ ಬಲಿ ಚಕ್ರವರ್ತಿಗೆ ಜ್ಞಾನೋದಯವಾಗಿ ನನ್ನ ತಲೆ ಮೇಲೆ ಪಾದ ಇಡು ಎಂದು ಹೇಳುತ್ತಾನೆ. ನನ್ನ ತಲೆ ಮೇಲೆ ನಿಮ್ಮ ಪಾದ ಇಡುವ ಮೂಲಕ ನನ್ನಲ್ಲಿರುವ ಅಹಂಕಾರವೆಲ್ಲ ನಾಶವಾಗಲಿ ಎಂದು ವಾಮನನ ಬಳಿ ಬಲಿ ಕ್ಷಮೆ ಕೇಳುತ್ತಾನೆ. ವಾಮನ ತನ್ನ ಪಾದವನ್ನು ಬಲೀಂದ್ರ ಮಹಾರಾಜನ ಮೇಲೆ ಇರಿಸಿ ಪಾತಾಳಕ್ಕೆ ಕಳುಹಿಸುತ್ತಾನೆ.

    ತಲೆ ಮೇಲೆ ಕಾಲನ್ನು ಇಡುವ ಮುನ್ನ ವಾಮನ ಬಳಿ ಬಲಿ, ನಾನು ನನ್ನ ಮಕ್ಕಳಂತೆ ಪ್ರಜೆಗಳನ್ನು ನೋಡಿದ್ದೇನೆ. ಹೀಗಾಗಿ ಪ್ರಜೆಗಳನ್ನು ನೋಡಲು ಅವಕಾಶ ನೀಡಬೇಕೆಂದು ಪ್ರಾರ್ಥನೆ ಮಾಡಿಕೊಳ್ಳುತ್ತಾನೆ. ಈ ಪ್ರಾರ್ಥನೆ ಸ್ವೀಕರಿಸಿದ ವಾಮನ ಅಸ್ತು ಎಂದು ಹೇಳಿ ತಲೆಯ ಮೇಲಿಟ್ಟು ಬಲಿ ಚಕ್ರವರ್ತಿಯನ್ನು ಪಾತಾಳಕ್ಕೆ ತುಳಿದುಬಿಡುತ್ತಾನೆ.

    ಬಲಿಯ ಭಕ್ತಿಯನ್ನು ಮತ್ತು ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಅದೇನೆಂದರೆ ಆಶ್ವಯುಜ ಮಾಸದಲ್ಲಿ ಮೂರು ದಿವಸಗಳ ಕಾಲ ನೀನು ಭೂಲೋಕಕ್ಕೆ ಬರಬಹುದು. ಅಲ್ಲಿ ನಿನ್ನನ್ನು ಜನತೆ ಪೂಜೆ ಮಾಡುವರು. ಇದರ ಫಲವಾಗಿಯೇ ದೀಪಾವಳಿ ಸಮಯದಲ್ಲಿ ಎಲ್ಲರೂ ದೀಪ ಹಚ್ಚಿ ಬಲೀಂದ್ರ ಪೂಜೆ ಕೈಗೊಳ್ಳುತ್ತಾರೆ. ಆಶ್ವಯುಜ ಕೃಷ್ಣ ಚತುರ್ದಶಿ, ಅಮಾವಾಸ್ಯೆ ಮತ್ತು ಕಾರ್ತಿಕ ಶುದ್ಧ ಪಾಡ್ಯ. ಇದನ್ನು ಬಲಿರಾಜ್ಯವೆಂದು ಹೇಳುತ್ತಾರೆ. ಆ ರೀತಿ ಆಚರಿಸಲ್ಪಡುವ ಕೊನೆಯ ದಿನವೇ ಬಲಿಪಾಡ್ಯಮಿ. ಈ ಅವಧಿಯಲ್ಲಿ ಬಲಿ ಚಕ್ರವರ್ತಿ ಪಾತಾಳದಿಂದ ಭೂಲೋಕ ಸಂಚಾರಕ್ಕೆ ಬರುತ್ತಾನೆಂಬ ನಂಬಿಕೆಯಲ್ಲಿ ಬಲೀಂದ್ರ ಪೂಜೆ ನಡೆಯುತ್ತದೆ.

    ದೀಪಾವಳಿಯ ದಿನದಂದು ಪ್ರಜೆಗಳನ್ನು ನೋಡಲು ಬಲೀಂದ್ರ ಮಹಾರಾಜ ಬರುತ್ತಾನೆ ಎಂಬ ನಂಬಿಕೆಯಿಂದ ಜನರು ಅಭ್ಯಂಜನ ಸ್ನಾನಾದಿಗಳನ್ನು ಮಾಡಿಕೊಂಡು ಮನೆಯ ಎಲ್ಲ ಪಾತ್ರೆಗಳಲ್ಲಿ ಶುದ್ಧವಾದ ನೀರನ್ನು ತುಂಬಿಸುತ್ತಾರೆ. ಎಣ್ಣೆ ಸ್ನಾನ ಮಾಡುವಾಗ ಸಪ್ತ ಚಿರಂಜೀವಿಗಳನ್ನು ಹೇಳುವ ಅಶ್ವತ್ಥಾಮೋ ಬಲಿರ್ವ್ಯಾಸೋ ಹನೂಮಾಶ್ಛ ವಿಭೀಷಣಃ | ಕೃಪಃ ಪರಶುರಾಮಶ್ಚ ಸಪ್ತೇತೇಃ ಚಿರಂಜೀವಿನಃ | ಶ್ಲೋಕವನ್ನು ಹೇಳುತ್ತಾರೆ. ಹಿಂದೂ ಪುರಾಣಗಳ ಪ್ರಕಾರ ರಾಮಾಯಣ ಮತ್ತು ಮಹಾಭಾರತಗಳಿಗೆ ಸಂಬಂಧಿಸಿದ ಏಳು ಪೌರಾಣಿಕ ವ್ಯಕ್ತಿಗಳನ್ನು ಚಿರಂಜೀವಿಗಳು ಎಂದು ನಂಬಲಾಗಿದೆ. ಅಶ್ವತ್ಥಾಮ, ಬಲೀಂದ್ರ, ವೇದವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯ, ಪರಶುರಾಮನನ್ನು ಸ್ತುತಿಸಿದರೆ ಆಯಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ.

  • ದೀಪಾವಳಿ ವಿಶೇಷ – ಬಲಿಪಾಡ್ಯಮಿಯನ್ನು ಯಾಕೆ ಆಚರಿಸಲಾಗುತ್ತದೆ? ಏನಿದು ಪುರಾಣ ಕಥೆ?

    ದೀಪಾವಳಿ ವಿಶೇಷ – ಬಲಿಪಾಡ್ಯಮಿಯನ್ನು ಯಾಕೆ ಆಚರಿಸಲಾಗುತ್ತದೆ? ಏನಿದು ಪುರಾಣ ಕಥೆ?

    ದೀಪಾವಳಿಯನ್ನು (Deepavali) ಒಟ್ಟು ಮೂರು ದಿನ ಆಚರಿಸಲಾಗುತ್ತದೆ. ಮೊದಲ ದಿನ ಮನೆಯವರೆಲ್ಲರೂ ಎಣ್ಣೆ ಸ್ನಾನ ಮಾಡುವ ನರಕ ಚತುದರ್ಶಿ, ಮರು ದಿವಸ ಅಮಾವಾಸ್ಯೆ, ಮೂರನೇ ದಿನವೇ ಬಲಿ ಪಾಡ್ಯಮಿ. ದೀಪಾವಳಿ ಬಲಿಪಾಡ್ಯಮಿಯೊಂದಿಗೆ (Balipadyami) ಈ ಮೂರು ದಿನಗಳ ಹಬ್ಬ ಮುಗಿಯುತ್ತದೆ. ಅಮಾವಾಸ್ಯೆಯ ನಂತರದ ಪಾಡ್ಯದಂದು ದಾನವ ಅರಸನಾದ ಬಲೀಂದ್ರನ ಪೂಜೆಯನ್ನು ನಡೆಸುವುದರಿಂದ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯಲಾಗುತ್ತದೆ. ಹಿರಣ್ಯ ಕಶ್ಯಪುವಿನ ವಂಶಸ್ಥನಾದ ಇವನು ದಾನವನಾದರೂ ಈ ದಿನ ಬಲೀಂದ್ರನನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ.

    ಪೌರಾಣಿಕ ಕಥೆಯ ಪ್ರಕಾರ ಮಹಾವಿಷ್ಣುವಿನ ಭಕ್ತ, ದಾನಶೂರ ದೈತ್ಯರಾಜ ಬಲಿ ಚಕ್ರವರ್ತಿ (Bali Maharaja) ಪ್ರಜೆಗಳನ್ನು ಅತ್ಯಂತ ಯೋಗಕ್ಷೇಮದಿಂದ ನೋಡಿಕೊಳ್ಳುತ್ತಿರುತ್ತಾನೆ. ರಾಕ್ಷಸ ರಾಜನಾದರೂ ದಾನ ಧರ್ಮದಿಂದ ಹೆಸರುವಾಸಿಯಾಗಿದ್ದ ಬಲಿ ಮಹಾರಾಜನಿಗೆ ತನ್ನ ರೀತಿಯಲ್ಲಿ ಬೇರೆ ಯಾರು ಪ್ರಜೆಗಳನ್ನು ನೋಡಿಕೊಳ್ಳುವುದಿಲ್ಲ ಎಂಬ ಅಹಂಕಾರ ತಲೆಗೆ ಏರುತ್ತದೆ. ಬಲಿ ರಾಜನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳನ್ನು ಪರೋಕ್ಷವಾಗಿ ಆತ ಪ್ರೋತ್ಸಾಹ ನೀಡುತ್ತಿರುತ್ತಾನೆ. ಇವರ ಕಾಟ ಹೆಚ್ಚಾಗುತ್ತಿದ್ದಂತೆ ಹೇಗಾದರೂ ಮಾಡಿ ಬಲಿಯನ್ನು ಸಂಹಾರ ಮಾಡಬೇಕೆಂದು ದೇವತೆಗಳು ವಿಷ್ಣುವಿನ ಮೊರೆ ಹೋಗುತ್ತಾರೆ.

    ದೇವತೆಗಳಿಗೆ ಅಭಯ ನೀಡಿದ ವಿಷ್ಣು ವಾಮನನ (ಬಾಲಕ) ರೂಪದಲ್ಲಿ ಬಲಿ ಮಹಾರಾಜನ ಬಳಿ ಬಂದು ದಾನವನ್ನು ಕೇಳುತ್ತಾನೆ. ಬಲೀಂದ್ರ ರಾಜ ಕೊಡುಗೈ ದಾನಿ. ನಿನಗೆ ಏನು ಬೇಕೆಂದು ಕೇಳು ಎಂದು ವಾಮನನಿಗೆ (Vamana) ಹೇಳುತ್ತಾನೆ. ಆಗ ವಾಮನ, ನನ್ನ ಮೂರು ಹೆಜ್ಜೆ ಊರುವಷ್ಟು ಭೂಮಿಯನ್ನು ದಾನವಾಗಿ ನೀಡಬಹುದೇ ಎಂದು ಕೇಳುತ್ತಾನೆ.  ಇದನ್ನೂ ಓದಿ: ದೀಪಾವಳಿ: ವ್ಯಾಪಾರ ವೃದ್ಧಿಗೆ ಮಾಡಿ ಧನಲಕ್ಷ್ಮಿ ಪೂಜೆ

    ಪ್ರಜಾಪರಿಪಾಲನೆಯಲ್ಲಿ ಹೆಸರು ಮಾಡಿರುವ ನನಗೆ ಈ ಪುಟ್ಟ ಬಾಲಕನ ಬೇಡಿಕೆಯನ್ನು ಈಡೇರಿಸುವ ಯೋಗ್ಯತೆ ಇಲ್ವಾ ಎಂಬ ಅಹಂಕಾರದಿಂದ ಬಲೀಂದ್ರ ಮಹಾರಾಜ ವಾಮನನಿಗೆ, ನೀನು ಕೇಳಿದ ಮೂರು ಹೆಜ್ಜೆ ಊರುವಷ್ಟು ಜಾಗ ನೀಡುತ್ತೇನೆ ಎಂದು ವಚನವನ್ನು ಕೊಡುತ್ತಾನೆ.

    ಭೂಮಿಯನ್ನು ದಾನ ಪಡೆಯುವಾಗ ವಾಮನಮೂರ್ತಿ ಆಕಾಶದ ಉದ್ದಕ್ಕೂ ಬೆಳೆಯುತ್ತಾನೆ. ಒಂದು ಪಾದವನ್ನು ಭೂಮಿ ಮೇಲೆ, ಮತ್ತೊಂದು ಪಾದವನ್ನು ಆಕಾಶದ ಮೇಲೆ ಇರಿಸುತ್ತಾನೆ. ಇನ್ನೊಂದು ಪಾದ ಇಡಲು ಜಾಗ ಕಾಣುತ್ತಿಲ್ಲ ಎಲ್ಲಿ ಇಡಬೇಕು ಎಂದು ಕೇಳಿದಾಗ ಬಲಿ ಚಕ್ರವರ್ತಿಗೆ ಜ್ಞಾನೋದಯವಾಗಿ ನನ್ನ ತಲೆ ಮೇಲೆ ಪಾದ ಇಡು ಎಂದು ಹೇಳುತ್ತಾನೆ.

    ನನ್ನ ತಲೆ ಮೇಲೆ ನಿಮ್ಮ ಪಾದ ಇಡುವ ಮೂಲಕ ನನ್ನಲ್ಲಿರುವ ಅಹಂಕಾರವೆಲ್ಲ ನಾಶವಾಗಲಿ ಎಂದು ವಾಮನನ ಬಳಿ ಬಲಿ ಕ್ಷಮೆ ಕೇಳುತ್ತಾನೆ. ವಾಮನ ತನ್ನ ಪಾದವನ್ನು ಬಲೀಂದ್ರ ಮಹಾರಾಜನ ಮೇಲೆ ಇರಿಸಿ ಪಾತಾಳಕ್ಕೆ ಕಳುಹಿಸುತ್ತಾನೆ.

    ತಲೆ ಮೇಲೆ ಕಾಲನ್ನು ಇಡುವ ಮುನ್ನ ವಾಮನ ಬಳಿ ಬಲಿ, ನಾನು ನನ್ನ ಮಕ್ಕಳಂತೆ ಪ್ರಜೆಗಳನ್ನು ನೋಡಿದ್ದೇನೆ. ಹೀಗಾಗಿ ಪ್ರಜೆಗಳನ್ನು ನೋಡಲು ಅವಕಾಶ ನೀಡಬೇಕೆಂದು ಪ್ರಾರ್ಥನೆ ಮಾಡಿಕೊಳ್ಳುತ್ತಾನೆ. ಈ ಪ್ರಾರ್ಥನೆ ಸ್ವೀಕರಿಸಿದ ವಾಮನ ಅಸ್ತು ಎಂದು ಹೇಳಿ ತಲೆಯ ಮೇಲಿಟ್ಟು ಬಲಿ ಚಕ್ರವರ್ತಿಯನ್ನು ಪಾತಾಳಕ್ಕೆ ತುಳಿದುಬಿಡುತ್ತಾನೆ.  ಇದನ್ನೂ ಓದಿ: ದೀಪಾವಳಿಯಲ್ಲಿ ಗೋಪೂಜೆಯ ಮಹತ್ವವೇನು?

     

    ಬಲಿಯ ಭಕ್ತಿಯನ್ನು ಮತ್ತು ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಅದೇನೆಂದರೆ ಆಶ್ವಯುಜ ಮಾಸದಲ್ಲಿ ಮೂರು ದಿವಸಗಳ ಕಾಲ ನೀನು ಭೂಲೋಕಕ್ಕೆ ಬರಬಹುದು. ಅಲ್ಲಿ ನಿನ್ನನ್ನು ಜನತೆ ಪೂಜೆ ಮಾಡುವರು. ಇದರ ಫಲವಾಗಿಯೇ ದೀಪಾವಳಿ ಸಮಯದಲ್ಲಿ ಎಲ್ಲರೂ ದೀಪ ಹಚ್ಚಿ ಬಲೀಂದ್ರ ಪೂಜೆ ಕೈಗೊಳ್ಳುತ್ತಾರೆ. ಆಶ್ವಯುಜ ಕೃಷ್ಣ ಚತುರ್ದಶಿ, ಅಮಾವಾಸ್ಯೆ ಮತ್ತು ಕಾರ್ತಿಕ ಶುದ್ಧ ಪಾಡ್ಯ. ಇದನ್ನು ಬಲಿರಾಜ್ಯವೆಂದು ಹೇಳುತ್ತಾರೆ. ಆ ರೀತಿ ಆಚರಿಸಲ್ಪಡುವ ಕೊನೆಯ ದಿನವೇ ಬಲಿಪಾಡ್ಯಮಿ. ಈ ಅವಧಿಯಲ್ಲಿ ಬಲಿ ಚಕ್ರವರ್ತಿ ಪಾತಾಳದಿಂದ ಭೂಲೋಕ ಸಂಚಾರಕ್ಕೆ ಬರುತ್ತಾನೆಂಬ ನಂಬಿಕೆಯಲ್ಲಿ ಬಲೀಂದ್ರ ಪೂಜೆ ನಡೆಯುತ್ತದೆ.

    ದೀಪಾವಳಿಯ ದಿನದಂದು ಪ್ರಜೆಗಳನ್ನು ನೋಡಲು ಬಲೀಂದ್ರ ಮಹಾರಾಜ ಬರುತ್ತಾನೆ ಎಂಬ ನಂಬಿಕೆಯಿಂದ ಜನರು ಅಭ್ಯಂಜನ ಸ್ನಾನಾದಿಗಳನ್ನು ಮಾಡಿಕೊಂಡು ಮನೆಯ ಎಲ್ಲ ಪಾತ್ರೆಗಳಲ್ಲಿ ಶುದ್ಧವಾದ ನೀರನ್ನು ತುಂಬಿಸುತ್ತಾರೆ. ಎಣ್ಣೆ ಸ್ನಾನ ಮಾಡುವಾಗ ಸಪ್ತ ಚಿರಂಜೀವಿಗಳನ್ನು ಹೇಳುವ ಅಶ್ವತ್ಥಾಮೋ ಬಲಿರ್ವ್ಯಾಸೋ ಹನೂಮಾಶ್ಛ ವಿಭೀಷಣಃ | ಕೃಪಃ ಪರಶುರಾಮಶ್ಚ ಸಪ್ತೇತೇಃ ಚಿರಂಜೀವಿನಃ | ಶ್ಲೋಕವನ್ನು ಹೇಳುತ್ತಾರೆ. ಹಿಂದೂ ಪುರಾಣಗಳ ಪ್ರಕಾರ ರಾಮಾಯಣ ಮತ್ತು ಮಹಾಭಾರತಗಳಿಗೆ ಸಂಬಂಧಿಸಿದ ಏಳು ಪೌರಾಣಿಕ ವ್ಯಕ್ತಿಗಳನ್ನು ಚಿರಂಜೀವಿಗಳು ಎಂದು ನಂಬಲಾಗಿದೆ. ಅಶ್ವತ್ಥಾಮ, ಬಲೀಂದ್ರ, ವೇದವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯ, ಪರಶುರಾಮನನ್ನು ಸ್ತುತಿಸಿದರೆ ಆಯಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ.

     

  • ಅರಮನೆ ನಗರಿಯಲ್ಲಿ ‘ವಾಮನ’ ಟೀಸರ್ ರಿಲೀಸ್

    ಅರಮನೆ ನಗರಿಯಲ್ಲಿ ‘ವಾಮನ’ ಟೀಸರ್ ರಿಲೀಸ್

    ನ್ವೀರ್ (Dhanveer) ಮತ್ತು ರೀಷ್ಮಾ ನಾಣಯ್ಯ ಅಭಿನಯದ ‘ವಾಮನ’ (Vamana) ಚಿತ್ರ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಅದಕ್ಕೂ ಮುನ್ನ ಚಿತ್ರದ  ಟೀಸರ್ (Teaser) ಗುರುವಾರ ಮೈಸೂರಿನಲ್ಲಿ (Mysore) ಬಿಡುಗಡೆಯಾಗಿದೆ. ಈ ಸಮಾರಂಭದಲ್ಲಿ ಹುಣಸೂರು ಶಾಸಕ ಹರೀಶ್ ಗೌಡ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಮುಖ್ಯ ಅತಿಥಿಗಳಾಗಿ  ಆಗಮಿಸಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್ ರಾಮನ್, ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಜನರಿಂದ ಮೆಚ್ಚುಗೆ ಪಡೆದಿವೆ. ಇದೊಂದು ಆಕ್ಷನ್ ಚಿತ್ರ. ಚಿತ್ರದಲ್ಲಿ ಆಕ್ಷನ್ ಹೇಗಿರುತ್ತದೆ ಎಂದು ತೋರಿಸುವುದಕ್ಕೆ ಈ ಟೀಸರ್ ಬಿಡುಗಡೆ ಮಾಡಿದ್ದೇವೆ. ಈ ಚಿತ್ರದಲ್ಲಿ ಒಟ್ಟು ನಾಲ್ಕು ಫೈಟ್ ಗಳಿವೆ. ಮೂರು ಫೈಟ್ ಗಳಿಗೆ ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ. ಇನ್ನೊಂದು ಫೈಟ್ ಕಥೆ ಜೊತೆಜೊತೆಯಾಗಿ ಸಾಗುತ್ತದೆ. ಈ ಫೈಟ್ ಪ್ರೇಕ್ಷಕರಿಗೆ ಬೇರೆ ತರಹದ ಅನುಭವ ಕೊಡುತ್ತದೆ ಎಂಬ ನಂಬಿಕೆ ನನಗಿದೆ. ಸಾಹಸ ದೃಶ್ಯವನ್ನು ವಿಕ್ರಮ್ ಮೋರ್ ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಜ್ ಮತ್ತು ವಿಕ್ರಮ್ ಮೋರ್ ಜೊತೆಗೆ ಜಾಲಿ ಬಾಸ್ಟಿನ್ ಅವರ ನೆರವು ಮತ್ತು ಮಾರ್ಗದರ್ಶನವಿದೆ. ಈ ಮೂವರೂ ಸಾಹಸ ನಿರ್ದೇಶಕರಿಗೆ ನಮ್ಮ ಚಿತ್ರತಂಡದಿಂದ ಧನ್ಯವಾದಗಳು’ ಎಂದರು.

    ಮುಂದುವರೆದು ಮಾತನಾಡಿದ ನಿರ್ದೇಶಕರು, ‘ಚಿತ್ರ  ಬಿಡುಗಡೆಗೆ ಧನ್ವೀರ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಹಬ್ಬ ಆಗುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ವಾಮನ ಅಂದರೆ ದಶಾವತಾರದಲ್ಲಿ ಬರುವ ಐದನೇ ಅವತಾರ. ದುಷ್ಟತ್ವವೇ ಸರ್ವಸ್ವ ಎನ್ನುವ ಜನರ ವಿರುದ್ಧ ವಾಮನ ಹೇಗೆ ಹೋರಾಡುತ್ತಾನೆ ಎಂಬುದು ಚಿತ್ರದ ಕಥೆ. ಇಲ್ಲಿ ರೌಡಿಸಂ, ಭೂಗತಲೋಕ ಮತ್ತು ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಕಥೆ ಸಾಗುತ್ತಿದೆ. ಈ ಚಿತ್ರದ ಹೈಲೈಟ್ ಅಂದರೆ ಸೆಂಟಿಮೆಂಟ್ ದೃಶ್ಯಗಳು. ಈ ಚಿತ್ರದಲ್ಲಿ ಒಂದು ಅದ್ಭುತವಾದ ಸಂದೇಶವಿದೆ’ ಎಂದರು.

    ಈ ಚಿತ್ರದಲ್ಲಿ ನನ್ನದು ಎರಡು ತರಹ ಶೇಡ್ ಗಳಿರುವ ಪಾತ್ರ. ಚಿತ್ರದಲ್ಲೊಂದು ಒಳ್ಳೆಯ ಸಂದೇಶವಿದೆ. ನಿರ್ದೇಶಕರು ಮೂಲತಃ ಒಳ್ಳೆಯ ಬರಹಗಾರರು. ಅವರೊಂದು ಎಳೆಯನ್ನು ಹೇಳಿದ್ದರು. ಬಹಳ ಇಷ್ಟವಾಗಿ, ಅದನ್ನು ಬೆಳೆಸಿ ಎಂದು ಹೇಳಿದ್ದೆ. ಆ ಎಳೆ ಚಿತ್ರವಾಗಿ, ಇದೀಗ ಬಿಡುಗಡೆಗೆ ಬಂದಿದೆ. ಇಂದು ಗಣ್ಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಟೀಸರ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ಸೇರಿದಂತೆ ಬೇರೆ ಊರುಗಳಲ್ಲಿ ಸಹ ಚಿತ್ರದ ಪ್ರಮೋಷನ್ ಮಾಡುತ್ತೇವೆ ಎಂದು ನಾಯಕ ಧನ್ವೀರ್ ತಿಳಿಸಿದ್ದಾರೆ.

    ಈ ಚಿತ್ರದಲ್ಲಿ ನನ್ನದು ಬಹಳ ಮುದ್ದಾದ ಮತ್ತು ಅಷ್ಟೇ ಸರಳವಾದ ಪಾತ್ರ. ನನಗಂತೂ ಬಹಳ ಇಷ್ಟವಾದ ಪಾತ್ರ ಇದು. ಚಿತ್ರ ನೋಡಿದ ಜನರಿಗೂ ಇಷ್ಟವಾಗುತ್ತೆ ಎಂಬ ನಂಬಿಕೆ ಇದೆ ಎಂದು ನಾಯಕಿ  ರೀಷ್ಮಾ ನಾಣಯ್ಯ (Reeshma Nanaiah) ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಮನ ಸಿನಿಮಾದ ‘ರಾಕ್ಷಸಿ’ ಹಾಡು ರಿಲೀಸ್ ಮಾಡಿದ ಅಭಿಷೇಕ್

    ವಾಮನ ಸಿನಿಮಾದ ‘ರಾಕ್ಷಸಿ’ ಹಾಡು ರಿಲೀಸ್ ಮಾಡಿದ ಅಭಿಷೇಕ್

    ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ (Dhanveer) ನಟನೆಯ ಬಹುನಿರೀಕ್ಷಿತ ‘ವಾಮನ’ (Vamana) ಸಿನಿಮಾದ ಎರಡನೇ ಹಾಡು (Song) ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ‘ವಾ..ವಾ..ವಾ..ವಾಮನ’ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್  ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಹಾಡಿಗೆ ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದು, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಹಾಡಿದ್ದಾರೆ. ಮುದ್ದು ರಾಕ್ಷಸಿ ಹಾಡಿಗೆ ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.

    ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಚೇತನ್‌ ಗೌಡ ಅದ್ಧೂರಿಯಾಗಿ ನಿರ್ಮಿಸಿರುವ ವಾಮನ ಸಿನಿಮಾವನ್ನು ಯುವ ನಿರ್ದೇಶಕ ಶಂಕರ್‌ ರಾಮನ್‌ ರಚಿಸಿ ನಿರ್ದೇಶಿಸಿದ್ದಾರೆ. ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ಮುದ್ದು ರಾಕ್ಷಸಿ ಮೆಲೋಡಿ ಹಾಡನ್ನು ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ 9Abhishek Ambarish) ರಿಲೀಸ್ ಮಾಡಿ ಗೆಳೆಯನ ಚಿತ್ರಕ್ಕೆ ಸಾಥ್ ಕೊಟ್ಟರು. ಇದನ್ನೂ ಓದಿ:ಕೆರಿಯರ್‌ನಲ್ಲಿ ಪ್ರಚಾರ ಬೇಕು ಅಂದ್ರೆ ಇದನ್ನೆಲ್ಲಾ ಮಾಡಬೇಕು- ತಮನ್ನಾ ಭಾಟಿಯಾ

    ಅಭಿಷೇಕ್ ಅಂಬರೀಷ್, ನಾನು ಈಗಷ್ಟೇ ಮುದ್ದು ರಾಕ್ಷಸಿ ಹಾಡು ನೋಡಿದೆ. ಒಂದು ಸಾಂಗ್ ಹಿಟ್ ಆಗಬೇಕು ಅಂದರೆ ಅದರ ಕ್ರೆಡಿಟ್ ಹೀರೋಗೂ ಅಲ್ಲ ಹೀರೋಯಿನ್ ಗೂ ಅಲ್ಲ. ಮ್ಯೂಸಿಕ್ ಡೈರೆಕ್ಟರ್, ಲಿರಿಕ್ಸಿಸ್ಟ್ ಗೆ ಸೇರಬೇಕು. ಅವರ ಎಫರ್ಟ್ ಜಾಸ್ತಿ ಇರುತ್ತದೆ. ನಮ್ಮ ಗೆಳೆಯ ಧನ್ವೀರ್ ಇಷ್ಟು ಚೆನ್ನಾಗಿ ರೋಮ್ಯಾನ್ಸ್ ಮಾಡ್ತಾನೆ ಅಂತ ಗೊತ್ತಿರಲಿಲ್ಲ. ಬೈ ಟು ಲವ್ ಸಿನಿಮಾದಲ್ಲಿ ಸ್ವಲ್ಪ ನೋಡಿದ್ದೆ. ಈಗ ವಾಮನ ಮುಖಾಂತರ ಕಂಪ್ಲೀಟ್ ಕಮರ್ಷಿಯಲ್ ಪ್ಯಾಕೇಜ್, ಕ್ಯೂಟ್ ಲವರ್ ಬಾಯ್ ರೀತಿ ಕಾಣಿಸುತ್ತಿದ್ದಾನೆ ಎಂದರು.

    ಧ್ವನೀರ್ ಗೌಡ ಮಾತನಾಡಿ, ಒಂದೇ ಒಂದು ಫೋನ್ ಕಾಲ್ ಗೆ ಬಂದು ಮುದ್ದು ರಾಕ್ಷಸಿ ಹಾಡನ್ನು ಅಭಿಷೇಕ್ ಅಂಬರೀಶ್ ಅವರು ಲಾಂಚ್ ಮಾಡಿಕೊಟ್ಟಿದ್ದಾರೆ. ಭೂಷಣ್ ಮಾಸ್ಟರ್ ಕೊರಿಯೋಗ್ರಫಿಗೆ ಹೆಜ್ಜೆ ಹಾಕಿದ್ದೇನೆ ಎಂದರು.  ವಾಮನ ನಿರ್ಮಾಪಕ ಚೇತನ್ ಗೌಡ ಮಾತನಾಡಿ, ಎಲ್ಲರಿಗೂ ಧನ್ಯವಾದ..ಈ ಸಮಾರಂಭವನ್ನು ಇಷ್ಟು ಯಶಸ್ವಿಯಾಗಿ ನಡೆಸಿಕೊಟ್ಟಿದ್ದೀರಾ. ನಾನು ಮೊದಲ ಸಾಂಗ್ ಬಿಡುಗಡೆ ಟೈಮ್ ನಲ್ಲಿ ಸಿನಿಮಾ ಬಗ್ಗೆ ಎಲ್ಲವನ್ನೂ ಹೇಳಿದ್ದೇನೆ. ಈ ಹಾಡನ್ನು ನೋಡಿ ಸಪೋರ್ಟ್ ಮಾಡಿ. ಕನ್ನಡ ಸಿನಿಮಾಗಳನ್ನು ನೋಡಿ ಕನ್ನಡ ಚಿತ್ರರಂಗ ಬೆಳೆಸಿ ಎಂದರು.

    ನಿರ್ದೇಶಕ ಶಂಕರ್ ರಾಮನ್ ಮಾತನಾಡಿ, ಮೊದಲ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈ ಸಾಂಗ್ ನಿಮಗೆ ಡೆಡಿಕೇಟ್ ಗೆ ಮಾಡುತ್ತಿದ್ದೇವೆ. ಅಜನೀಶ್ ಲೋಕನಾಥ್ ಸಂಗೀತ, ವಿ ನಾಗೇಂದ್ರ ಪ್ರಸಾದ್ ಮುದ್ದಾದ ಸಾಹಿತ್ಯ, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಧ್ವನಿ ಕೂಡಿಸಿದ್ದು, ಭೂಷಣ್ ಮಾಸ್ಟರ್ ಕೊರಿಯೋಗ್ರಫ್ ಮಾಡಿದ್ದಾರೆ. ಮನೆಗೆ ಹೋಗ್ತಾ ನೀವು ಮುದ್ದು ಮುದ್ದು ರಾಕ್ಷಸಿ ಹಾಡುತ್ತಾ ಹೋಗಿ ಎಂದರು.

    ವಾಮನ ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ (Reeshma Nanaiah) ಅಭಿನಯಿಸಿದ್ದು, ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್ ಮುಕ್ತಾಯ

    ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್ ಮುಕ್ತಾಯ

    ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆದಿದೆ.

    ನಿರ್ದೇಶಕ ಶಂಕರ್ ರಾಮನ್ ಮಾತನಾಡಿ ಇದು ನನ್ನ ಮೊದಲ ಸಿನಿಮಾ. ಹಲವು ಸಿನಿಮಾದಲ್ಲಿ ರೈಟರ್ ಆಗಿ ಕೆಲಸ ಮಾಡಿದ್ದೇನೆ. ‘ವಾಮನ’ ಸಿನಿಮಾ ಸತತ ಒಂದು ವರ್ಷದ ಜರ್ನಿ. ಇವತ್ತು ಹೀರೋ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯಲಾಗ್ತಿದೆ ಈ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆಯುತ್ತಿದ್ದೇವೆ.  72 ದಿನಗಳ ಕಾಲ ಶೂಟ್ ಮಾಡಿದ್ದೇವೆ. ಕಲಾವಿದರು, ತಾಂತ್ರಿಕ ಬಳಗ ತುಂಬಾ ಸಪೋರ್ಟಿವ್ ಆಗಿದ್ದಾರೆ. ಪಕ್ಕಾ ಕಮರ್ಶಿಯಲ್ ಸಿನಿಮಾವಿದು. ಪ್ರತಿಯೊಬ್ಬನಲ್ಲೂ ಒಬ್ಬ ಒಳ್ಳೆಯವನು ಕೆಟ್ಟವನು ಇರ್ತಾನೆ. ಒಳ್ಳೆಯವನಾಗಬೇಕಾ..? ಕೆಟ್ಟವನಾಗಬೇಕಾ ಎನ್ನೋದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು. ಒಳ್ಳೆಯವನು, ಕೆಟ್ಟದರ ನಡುವಿನಲ್ಲಿ ಭಿನ್ನತೆಯಲ್ಲಿ ಆತ ಯಾರೇ ಆಗಿದ್ರು ಆತನಿಗೆ ಸಲ್ಲಬೇಕಾದ ಶಿಕ್ಷೆ ಅಥವಾ ಸೆಟಲ್ ಮೆಂಟ್ ಸಿಕ್ಕೇ ಸಿಗುತ್ತೆ ಅನ್ನೋದನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಈ ಸಿನಿಮಾವನ್ನು ಇಲ್ಲಿವರೆಗೆ ಸುಸೂತ್ರವಾಗಿ ನಡೆಸಿಕೊಂಡು ಬರಲು ಸಾಧ್ಯವಾಗಿದ್ದು ನಿರ್ಮಾಪಕ ಚೇತನ್ ಗೌಡ ಅವರ ಸಹಕಾರದಿಂದ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ನಾಲ್ಕು ಸಾಂಗ್, ನಾಲ್ಕು ಫೈಟ್ ಇದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು. ಇದನ್ನೂ ಓದಿ: ಸಿನಿಮಾ ಸಕ್ಸಸ್ ಸೆಲೆಬ್ರೇಶನ್ ಸಂಭ್ರಮದಲ್ಲಿ `ಕಾಂತಾರ’ ಟೀಮ್

    ನಟ ಧನ್ವೀರ್ ಗೌಡ ಮಾತನಾಡಿ ಇವತ್ತು ಚಿತ್ರೀಕರಣ ಕಂಪ್ಲೀಟ್ ಆಗುತ್ತಿದೆ. ಒಂದೊಳ್ಳೆ ಕಂಟೆಂಟ್, ಕಥೆ ಇಟ್ಕೊಂಡು, ಒಂದೊಳ್ಳೆ ತಂಡದ ಜೊತೆ, ನಿರ್ಮಾಣ ಸಂಸ್ಥೆ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಇದೆ. ಈ ಕಥೆ ಮೂಲಕ ಕರ್ನಾಟಕ ಜನತೆಯನ್ನು ರಂಜಿಸಲು ಬರ್ತಿದ್ದೇವೆ. ಚಿತ್ರದಲ್ಲಿ ಗುಣ ಪಾತ್ರ ಮಾಡಿದ್ದೇನೆ. ಗ್ರೇ ಶೇಡ್ ಪಾತ್ರ. ಬ್ಯಾಡ್ ಬಾಯ್ ಅಲ್ಲ, ಗುಡ್ ಬಾಯ್ ಕೂಡ ಅಲ್ಲ ಆ ರೀತಿಯ ಪಾತ್ರ. ಇದು ನನ್ನ ಮೂರನೇ ಸಿನಿಮಾ ಎಲ್ಲರ ಆಶೀರ್ವಾದ ಈ ಸಿನಿಮಾ ಮೇಲೆ ಇರಲಿ ಎಂದು ತಿಳಿಸಿದ್ರು.  ನಿರ್ಮಾಪಕ ಚೇತನ್ ಗೌಡ ಮಾತನಾಡಿ ಈದು ಈಕ್ವಿನಾಕ್ಸ್ ಗ್ಲೋಬಲ್ ಸಂಸ್ಥೆ ಮೊದಲ ಸಿನಿಮಾ. ಸತತ 72 ದಿನಗಳ ಚಿತ್ರೀಕರಣ ಇಂದು ಮುಕ್ತಾಯಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಕೂಡ ನಡೆಯುತ್ತಿದೆ. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಲಿದ್ದೇವೆ ಎಂದು ತಿಳಿಸಿದ್ರು.

    ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಚೇತನ್ ಗೌಡ ‘ವಾಮನ’ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಶಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಸಂಪತ್, ಆದಿತ್ಯ ಮೆನನ್, ಅಚ್ಯುತ್ ಕುಮಾರ್, ಅವಿನಾಶ್, ತಾರಾ, ಶಿವರಾಜ್. ಕೆ. ಆರ್. ಪೇಟೆ, ಪೆಟ್ರೋಲ್ ಪ್ರಸನ್ನ, ಕಾಕ್ರೋಚ್ ಸುದಿ, ಜ್ಯೂನಿಯರ್ ಸಲಗ ಶ್ರೀಧರ್, ಸಚ್ಚಿತಾನಂದ,  ಅರುಣ್ ಒಳಗೊಂಡ ದೊಡ್ಡ ತಾರಾಬಳಗವಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜು, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ನೃತ್ಯ ನಿರ್ದೇಶಕ ಭೂಷಣ್ ನೃತ್ಯ ಸಂಯೋಜನೆ ಜೊತೆಗೆ ದನ್ವೀರ್ ಸ್ನೇಹಿತನ ಪಾತ್ರದಲ್ಲೂ ಸಹ ಮಿಂಚಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಾಮನ ಟೀಸರ್ ರಿಲೀಸ್, ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

    ವಾಮನ ಟೀಸರ್ ರಿಲೀಸ್, ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

    ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.

    1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ ತುಣುಕು ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದ್ದು, ಶಂಕರ್ ರಾಮನ್ ಸಾರಥ್ಯದಲ್ಲಿ ಚಿತ್ರ ಮೂಡಿ ಬರ್ತಿದೆ. ಧನ್ವೀರ್ ಗೆ ಜೋಡಿಯಾಗಿ ಏಕ್ ಲವ್ ಯಾ ಬೆಡಗಿ ರೀಷ್ಮಾ ನಾಣಯ್ಯ ನಟಿಸ್ತಿದ್ದಾರೆ. ಈಗಾಗಲೇ 70 ದಿನ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸದ್ಯ ಬಾಕಿ ಉಳಿದ ಭಾಗದ ಚಿತ್ರೀಕರಣದಲ್ಲಿ ನಿರತವಾಗಿದೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ತಂದೆಯಾದ `ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಂದು ಗೌಡ

    ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಖ್ಯಾತಿ ಗಳಿಸಿರುವ ಚೇತನ್ ಕುಮಾರ್ ತಮ್ಮದೇ ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ ಟೈನ್ಮೆಂಟ್ ನಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಷಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಖಳನಾಯಕನಾಗಿ ಸಂಪತ್ ನಟಿಸುತ್ತಿದ್ದು, ಉಳಿದಂತೆ ಅಚ್ಯುತ್ ಕುಮಾರ್, ತಾರಾ, ಶಿವರಾಜ್ ಕೆ ಆರ್ ಪೇಟೆ ಮತ್ತು ಕಾಕ್ರೋಚ್ ಸುದಿ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇನ್ ಸಿಂಹ ಕ್ಯಾಮೆರಾ ಕೈಚಳಕ, ಸುರೇಶ್ ಆರ್ಮುಖ ಸಂಕಲನ, ಅರ್ಜುನ್ ರಾಜ್ ಆಕ್ಷನ್ ಸಿನಿಮಾಕ್ಕಿದೆ.

    Live Tv

     

  • ಧನ್ವೀರ್ ನಟನೆಯ ‘ವಾಮನ’ ಸಿನಿಮಾದ ಫಸ್ಟ್ ಲುಕ್ ಆಗಸ್ಟ್ 15ರಂದು ರಿಲೀಸ್

    ಧನ್ವೀರ್ ನಟನೆಯ ‘ವಾಮನ’ ಸಿನಿಮಾದ ಫಸ್ಟ್ ಲುಕ್ ಆಗಸ್ಟ್ 15ರಂದು ರಿಲೀಸ್

    ವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಷಿಯಲ್ ಸಿನಿಮಾವಾಗಿರುವ ವಾಮನ ಟೀಸರ್ ಇದೇ 15ಕ್ಕೆ ರಿಲೀಸ್ ಆಗ್ತಿದೆ. ನಿರ್ಮಾಪಕ ಚೇತನ್ ಕುಮಾರ್ ಹುಟ್ಟುಹಬ್ಬ ಹಾಗೂ ಸ್ವಾತಂತ್ರ್ಯದ ವಿಶೇಷ ಉಡುಗೊರೆಯಾಗಿ ವಾಮನ ಟೀಸರ್ ಚಿತ್ರರಸಿಕರ ಮಡಿಲು ಸೇರಲಿದೆ. ಕನ್ನಡ, ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿರುವ ಶಂಕರ್ ರಾಮನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಧ್ವನೀರ್ ಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ಬಣ್ಣ ಹಚ್ಚಿದ್ದಾರೆ. ಈಗಾಗಲೇ 70 ದಿನದ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಶೀರ್ಘದಲ್ಲಿಯೇ ಬಾಕಿ ಉಳಿದ ಚಿತ್ರೀಕರಣ ಮುಗಿಸಲಿದೆ.

    ಬಜಾರ್, ಬೈ ಟು ಲವ್ ಸಿನಿಮಾ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹು ನಿರೀಕ್ಷಿತ ಸಿನಿಮಾ ವಾಮನ ನಾನಾ ವಿಚಾರಗಳಿಂದ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ನಿರ್ದೇಶಕ ಶಂಕರ್ ರಾಮನ್, ಇಡೀ ತಂಡದ ಶ್ರದ್ಧೆ ಹಾಗೂ ಪರಿಶ್ರಮದಿಂದ ರೂಪಗೊಳ್ಳುತ್ತಿರುವ  ಈ ಸಿನಿಮಾವನ್ನು ಅತೀವ ಆಸಕ್ತಿ ಹಾಗೂ ಕಲಾ ಪ್ರೇಮದಿಂದ ಚೇತನ್ ಕುಮಾರ್ ‌ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಾಪತ್ತೆಯಾದ ಲೋಕೇಶ್

    ಹತ್ತಾರು ವರ್ಷಗಳಿಂದ ಬಚ್ಚಿಟ್ಟುಕೊಂಡಿದ್ದ ಸಿನಿಮಾ ಕನಸನ್ನು ವಾಮನ ಮೂಲಕ ನನಸು ಮಾಡಿಕೊಳ್ಳುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಖ್ಯಾತಿ ಗಳಿಸಿರುವ ಚೇತನ್ ಕುಮಾರ್ ಸಿನಿಮಾ ಮೇಲಿನ ವ್ಯಾಮೋಹ ಹೆಚ್ಚಿಸಿಕೊಂಡೇ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಮೂಲತಃ ದೇವನಹಳ್ಳಿಯವರಾದ ಇವರು, ಆರಂಭದಿಂದಲೂ ಸಿನಿಮಾ ಪ್ರೇಮಿ. ಚಿತ್ರದ ನಾಯಕ ಧನ್ವೀರ್ ಆತ್ಮೀಯ ಗೆಳೆಯ. ಈ ಎರಡು ನಂಟು ಇವರನ್ನು ಸಿನಿಮಾ ಮಾಡುವ ಉತ್ಸುಕತೆ ಹೆಚ್ಚಿಸಿದೆ. ಹೀಗಾಗಿ ನಿರ್ದೇಶಕರು ಹೇಳಿದ ಕಥೆಗೆ ಫಿದಾ ಅದ್ಧೂರಿಯಾಗಿ ವಾಮನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ತಮ್ಮದೇ ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ ಟೈನ್ಮೆಂಟ್ ನಡಿ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ವಾಮನ ತಮ್ಮ ಡ್ರೀಮ್ ಪ್ರಾಜೆಕ್ಟ್ ಎನ್ನುವ ನಿರ್ಮಾಪಕ ಚೇತನ್ ಕುಮಾರ್, ಮುಂದಿನ ದಿನಗಳಲ್ಲಿ ದೊಡ್ಡ ದೊಡ್ಡ ಸಿನಿಮಾ ನಿರ್ಮಾಣ ಮಾಡುವ ಕನಸು ಕಟ್ಟಿಕೊಂಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಈಗಾಗಲೇ ನಾಲ್ಕೈದು ಕಥೆ ಕೇಳಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ವಾಮನ ಸಿನಿಮಾಗೆ ಎಂಟ್ರಿ ಕೊಟ್ಟ ಸಂಪತ್: ಮೂರು ಶೇಡ್ ಪಾತ್ರದಲ್ಲಿ ಖಳನಟ

    ವಾಮನ ಸಿನಿಮಾಗೆ ಎಂಟ್ರಿ ಕೊಟ್ಟ ಸಂಪತ್: ಮೂರು ಶೇಡ್ ಪಾತ್ರದಲ್ಲಿ ಖಳನಟ

    ನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗ್ಲೇ ಎರಡು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಈಗ ಮೂರನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಇದೀಗ ವಾಮನ ಬಳಗಕ್ಕೆ ಮತ್ತೊಬ್ಬ ಸದಸ್ಯ ಎಂಟ್ರಿ ಕೊಟ್ಟಿದ್ದಾರೆ. ಬಹುಭಾಷಾ ನಟ, ಖಳನಾಯಕನ ಪಾತ್ರಧಾರಿ ಸಂಪತ್ ವಾಮನ ತಂಡ ಸೇರಿಕೊಂಡಿದ್ದಾರೆ.

    ವಾಮನ ಪಾತ್ರದಲ್ಲಿ ಸಂಪತ್ ಖಳನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಇಡೀ ಮಾಫಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಅತ್ಯಂತ ಕ್ರೂರಿಯಾಗಿ ಬದುಕುವ ವಿಲನ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂರು ಶೇಡ್ ನಲ್ಲಿ ಸಂಪತ್ ಅಬ್ಬರಿ ಬೊಬ್ಬಿರಿಯಲಿದ್ದು, ಅವರ ಪಾತ್ರಕ್ಕಾಗಿಯೇ ಪ್ರತ್ತೇಕ್ಷವಾಗಿ ಕಾಸ್ಟ್ಯೂಮ್ ಡಿಸೈನ್ ಎನ್ನುತ್ತಾರೆ ನಿರ್ದೇಶಕ ಶಂಕರ್. ಇದನ್ನೂ ಓದಿ: ಬಿಗ್‌ಬಿ ಮೊಮ್ಮಗಳ ಜೊತೆ `ಗಲ್ಲಿಬಾಯ್’ ನಟನ ಡೇಟಿಂಗ್ ಸ್ಟೋರಿ

    ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ಬರಹಗಾರನಾಗಿ, ಸಂಭಾಷಣೆಗಾರನಾಗಿ ಗುರುತಿಸಿಕೊಂಡಿರುವ ಶಂಕರ್ ರಾಮನ್ ಎಸ್ ವಾಮನ ಸಿನಿಮಾ ಮೂಲಕ ನಿರ್ದೇಶನದ ಮೊದಲ ಹೆಜ್ಜೆ ಇಟ್ಟಿದ್ದು, ಶಂಕರ್ ಕನಸಿಗೆ ಫ್ಯಾಷನೇಟೇಡ್ ಪ್ರೊಡ್ಯೂಸರ್ ಚೇತನ್ ಗೌಡ ಸಾಥ್ ಕೊಟ್ಟಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ ನಡಿ ಮೂಡಿ ಬರ್ತಿರುವ ಮಾಸ್ ಆಕ್ಷನ್ ಎಂಟರ್ಟೇನರ್ ವಾಮನ ಸಿನಿಮಾದಲ್ಲಿ ಧನ್ವೀರ್ ಗೆ ಜೋಡಿಯಾಗಿ ರಚನಾ ರೈ ನಟಿಸ್ತಿದ್ದು, ಮಹೇನ್ ಸಿಂಹ ಛಾಯಾಗ್ರಾಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಃ ಸಂಕಲನ, ಅರ್ಜುನ್ ರಾಜ್, ಜಾಲಿ ಬಾಸ್ಟಿನ್ ಸಾಹಸಸಿನಿಮಾಕ್ಕಿದೆ.

    ಲೈವ್ ಲೋಕೇಷನ್ ನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ಸ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿವೆ. ವಾಮನ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿರುವ ನಿರ್ಮಾಪಕ ಚೇತನ್ ಗೌಡ, ದೊಡ್ಡ ಮಟ್ಟದ ಸಿನಿಮಾ ಮಾಡುವ ಆಸಕ್ತಿ-ಶಕ್ತಿ ಎರಡು ಅವರಲಿದೆ ಎನ್ನುತ್ತಾರೆ ನಿರ್ದೇಶಕ ಶಂಕರ್.