Tag: Vamana Cinema

  • ದರ್ಶನ್ ಬಂದೋಬಸ್ತ್‌ಗೆ 3 ಲಕ್ಷ ರೂ. ಕಟ್ಟಿಸಿಕೊಂಡ್ರಾ ಪೊಲೀಸರು?

    ದರ್ಶನ್ ಬಂದೋಬಸ್ತ್‌ಗೆ 3 ಲಕ್ಷ ರೂ. ಕಟ್ಟಿಸಿಕೊಂಡ್ರಾ ಪೊಲೀಸರು?

    ಬೆಂಗಳೂರು: 3 ಲಕ್ಷ ರೂ. ಕಟ್ಟಿಸಿಕೊಂಡು ನಟ ದರ್ಶನ್‌ಗೆ (Darshan) ವಾಮನ (Vamana) ಚಿತ್ರ ವೀಕ್ಷಣೆಗೆ ಪೊಲೀಸರು ಅನುಮತಿ ಕೊಟ್ಟಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

    ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಜಿಟಿ ಮಾಲ್ ಚಿತ್ರಮಂದಿರಕ್ಕೆ ನಟ ದರ್ಶನ್, ಸ್ನೇಹಿತ ಧನ್ವೀರ್ (Dhanveer) ನಟನೆಯ ವಾಮನ ಸಿನಿಮಾ ನೋಡಲು ಬುಧವಾರ ರಾತ್ರಿ ಬಂದಿದ್ದರು. ಈ ವೇಳೆ ಚಿತ್ರಮಂದಿರದಲ್ಲಿ ಬಂದೋಬಸ್ತ್‌ಗೆ ಪೊಲೀಸರು ಸಂಬಂಧಪಟ್ಟವರಿಂದ 3 ಲಕ್ಷ ರೂ. ಹಣವನ್ನು ಬಂದೋಬಸ್ತ್ ಮ್ಯಾನೇಜ್ಮೆಂಟ್‌ಗೆ ಕಟ್ಟಿಸಿಕೊಂಡಿದ್ದಾರೆಂದು ಪೊಲೀಸ್ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಯಹೂದಿಗಳ ವಿರುದ್ಧ ಪೋಸ್ಟ್ ಹಾಕಿದ್ರೆ ವೀಸಾ, ಗ್ರೀನ್ ಕಾರ್ಡ್ ನೀಡಲ್ಲ – ವಲಸಿಗರಿಗೆ ಅಮೆರಿಕ ಎಚ್ಚರಿಕೆ

    ನಟ ದರ್ಶನ್ ಬರುವ ವಿಚಾರ ತಿಳಿದು ಚಿತ್ರಮಂದಿರದ ಬಳಿ ದರ್ಶನ್ ಅಭಿಮಾನಿಗಳು ಜಮಾವಣೆ ಆಗುತ್ತಿದ್ದಾರೆ. ತೆಲಂಗಾಣದಲ್ಲಿ ಪೊಲೀಸ್ ಭದ್ರತೆ ಇಲ್ಲದೆ ಹೋಗಿದ್ದರಿಂದ ಪುಷ್ಪ 2 ಸಿನಿಮಾ ವೀಕ್ಷಣೆಗೆ ಅಲ್ಲು ಅರ್ಜುನ್ ಬಂದಾಗ ಚಿತ್ರಮಂದಿರದಲ್ಲಿ ಕಾಲ್ತುಳಿತ ಸಂಭವಿಸಿತ್ತು. ಇದನ್ನೂ ಓದಿ: 64 ವಯಸ್ಸಿನ ಉಗ್ರ ರಾಣಾ ಫೋಟೊ ರಿಲೀಸ್‌

    ಅದೇ ರೀತಿ ದರ್ಶನ್ ಅಭಿಮಾನಿಗಳು ಜಮಾವಣೆ ಆಗಿ ನಾಳೆ ಅಹಿತಕರ ಘಟನೆಗೆ ಕಾರಣವಾಗಬಹುದೆಂದು ಚಿತ್ರಮಂದಿರದ ಬಳಿ ಭದ್ರತೆ ಮಾಡಬೇಕೆಂದು ಪೊಲೀಸರು 3 ಲಕ್ಷ ರೂ. ಹಣವನ್ನು ಬಂದೋಬಸ್ತ್ ಮ್ಯಾನೇಜ್ಮೆಂಟ್‌ಗೆ ಕಟ್ಟಿಸಿಕೊಂಡಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

  • ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

    ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

    ಶೋಕ್ದಾರ್ ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ಸಿಕ್ಕಿದೆ. ಧನ್ವೀರ್ ಗೆ ನಾಯಕಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲದ ಪ್ರಶ್ನೆಗೆ ಚಿತ್ರತಂಡ ಉತ್ತರ ಸಿಕ್ಕಿದೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    ಶಂಕರ್ ರಾಮನ್ ನಿರ್ದೇಶನದಲ್ಲಿ  ಮೂಡಿ ಬರ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವಿಟ್ ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್

    ತಮ್ಮ ಪಾತ್ರದ ಬಗ್ಗೆ ಹೆಚ್ಚೇನೂ ಗುಟ್ಟುಬಿಟ್ಟು ಕೊಡದ ರಚನಾ,  ಬಬ್ಲಿ ಪಾತ್ರದ ಮೂಲಕ ಅಭಿಮಾನಿಗಳನ್ನು ರಂಜಿಸುವುದಾಗಿ ಹೇಳಿಕೊಂಡಿದ್ದಾರೆ.  ಬ್ಯಾಡ್ಮಿಂಟನ್ ಫ್ಲೈಯರ್ ಆಗಿರುವ ಈ ತುಳುನಾಡ ಚೆಲುವೆ, ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ.  ಇದನ್ನೂ ಓದಿ : ನಟ ಶಾರುಖ್ ಖಾನ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಗುಜರಾತ್ ಹೈಕೋರ್ಟ್

    ಸದ್ಯ ವಾಮನ ಸಿನಿಮಾದಲ್ಲಿ ಧನ್ವೀರ್ ಗೆ ನಾಯಕಿಯಾಗಿ ನಟಿಸ್ತಿರುವ ರಚನಾ ರೈ, ಈಗಾಗಲೇ ಸೆಕೆಂಡ್ ಶೆಡ್ಯೂಲ್ಡ್ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ ನಡಿ ಮೂಡಿ ಬರ್ತಿರುವ ಮಾಸ್​ ಆಕ್ಷನ್ ಎಂಟರ್​ಟೇನರ್ ವಾಮನ ಸಿನಿಮಾಗೆ ಚೇತನ್ ಕುಮಾರ್ ಬಂಡವಾಳ ಹೂಡಿದ್ದು, ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸಂಭಾಷಣಾಗಾರನಾಗಿ ಕಾರ್ಯನಿರ್ವಹಿಸಿದ್ದ ಶಂಕರ್ ರಾಮನ್ ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.