Tag: vande mataram

  • ಧರ್ಮಶಾಲಾ ಅಂಗಳದಲ್ಲಿ ವಂದೇ ಮಾತರಂ ಝೇಂಕಾರ – ಅದ್ಭುತ ವೀಡಿಯೋ ನೀವೇ ನೋಡಿ

    ಧರ್ಮಶಾಲಾ ಅಂಗಳದಲ್ಲಿ ವಂದೇ ಮಾತರಂ ಝೇಂಕಾರ – ಅದ್ಭುತ ವೀಡಿಯೋ ನೀವೇ ನೋಡಿ

    ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ಸ್ಟೇಡಿಯಂನಲ್ಲಿ (Dharamshala HPCA Stadium) ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ಪಂದ್ಯದ ವೇಳೆ ದೇಶಭಕ್ತಿಗೆ ಸಾಕ್ಷಿಯಾಗುವ ಬೆಳವಣಿಗೆಯೊಂದು ಕಂಡುಬಂದಿತು.

    ಆಸ್ಟ್ರೇಲಿಯಾ ಹಾಗೂ ಕಿವೀಸ್‌ (Aus Vs Nz) ನಡುವಿನ ಪಂದ್ಯ ಮುಕ್ತಾಯಗೊಂಡು ಆಸೀಸ್‌ ತಂಡ ರೋಚಕ ಜಯದ ಸಂಭ್ರಮದಲ್ಲಿತ್ತು. ಈ ಸಂದರ್ಭದಲ್ಲಿ ಸ್ಟೇಡಿಯಂನಲ್ಲಿ ಬಣ್ಣಗಳ ಬೆಳಕಿನೊಂದಿಗೆ ವಂದೇ ಮಾತರಂ ಗೀತೆ ಪ್ರಸಾರ ಮಾಡಲಾಗಿತ್ತು. 23 ಸಾವಿರ ಆಸನಗಳ ಸಾಮರ್ಥ್ಯವುಳ್ಳ ಧರ್ಮಶಾಲಾ ಕ್ರೀಡಾಂಗಣ ಸಂಪೂರ್ಣ ತುಂಬಿ ತುಳುಕುತ್ತಿತ್ತು. ಬಗೆ-ಬಗೆಯ ಬಣ್ಣಗಳ ಬೆಳಕಿನೊಂದಿಗೆ (Lightshow) ವಂದೇ ಮಾತರಂ ಗೀತೆ (Vande Mataram Song) ಪ್ರಸಾರವಾಗುತ್ತಿದ್ದಂತೆ ಶಿಳ್ಳೆ, ಚಪ್ಪಾಳೆ ಮಳೆಗರೆದ ಅಭಿಮಾನಿಗಳು ಎದ್ದು ನಿಂತು ಗೌರವ ಸೂಚಿಸಿದರು. ತಾವೂ ಸಹ ದನಿಗೂಡಿಸಿ ಹಾಡಿದರು. ಈ ಕುರಿತ ವೀಡಿಯೋ ತುಣುಕು ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: 23ನೇ ವಯಸ್ಸಿಗೆ ಸಚಿನ್‌ ದಾಖಲೆ ಸರಿಗಟ್ಟಿದ ಬೆಂಗಳೂರು ಯುವಕ ರಚಿನ್‌

    ಹಿಮದ ಅಂಗಳದಲ್ಲಿ ರನ್‌ ಪ್ರವಾಹ: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾದ ತಂಡವು 49.2 ಓವರ್‌ಗಳಿಗೆ 388 ರನ್‌ಗಳಿಗೆ ಆಲೌಟ್‌ ಆಯಿತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ನ್ಯೂಜಿಲೆಂಡ್‌ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 383 ರನ್‌ ಗಳಿಸಿ ವಿರೋಚಿತ ಸೋಲಿಗೆ ತುತ್ತಾಯಿತು. ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ತಂಡ 345 ರನ್‌ ಚೇಸ್‌ ಮಾಡಿದ್ದು, ಇದುವರೆಗಿನ ದಾಖಲೆಯಾಗಿತ್ತು. ಆದ್ರೆ ಕಿವೀಸ್‌ 383 ರನ್‌ವರೆಗೂ ಚೇಸ್‌ ಮಾಡಿ ಹೊಸ ದಾಖಲೆ ಸೃಷ್ಟಿಸಿತು. ಇದನ್ನೂ ಓದಿ: World Cup 2023: ರೋಚಕ ಪಂದ್ಯದಲ್ಲಿ ಆಸೀಸ್‌ಗೆ 5 ರನ್‌ಗಳ ಜಯ – ಹೋರಾಡಿ ಸೋತ ಕಿವೀಸ್‌

    ಕಿವೀಸ್‌ ಮತ್ತು ಆಸೀಸ್‌ ನಡುವಿನ ಪಂದ್ಯದಲ್ಲಿ ಒಟ್ಟು 32 ಸಿಕ್ಸರ್‌ ಹಾಗೂ 65 ಬೌಂಡರಿಗಳು ಸಿಡಿದಿವೆ. ಆಸೀಸ್‌ ಪರ 20 ಸಿಕ್ಸರ್‌, 32 ಬೌಂಡರಿ ದಾಖಲಾದರೆ, ಕಿವೀಸ್‌ ಪರ 33 ಬೌಂಡರಿ ಹಾಗೂ 12 ಸಿಕ್ಸರ್‌ಗಳು ಮಾತ್ರ ದಾಖಲಾಯಿತು. ಅಲ್ಲದೇ ಈ ಪಂದ್ಯದಲ್ಲಿ ಇತ್ತಂಡಗಳಿಂದಲೂ 771 ರನ್‌ ದಾಖಲಾಗಿದ್ದು, ವಿಶ್ವಕಪ್‌ನಲ್ಲೇ ದಾಖಲಾದ ಗರಿಷ್ಠ ಸ್ಕೋರ್‌ ಆಗಿದೆ. ಇದನ್ನೂ ಓದಿ: World Cup 2023: ಸಿಕ್ಸರ್‌, ಬೌಂಡರಿಗಳ ಸುರಿಮಳೆ – ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆಸೀಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಯಾಂಡಲ್ ವುಡ್ ನಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಡುಗಡೆಯಾಯಿತು ‘ವಂದೇ ಮಾತರಂ’  ಹಾಡು

    ಸ್ಯಾಂಡಲ್ ವುಡ್ ನಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಡುಗಡೆಯಾಯಿತು ‘ವಂದೇ ಮಾತರಂ’ ಹಾಡು

    ವ್ಯ ಪರಂಪರೆ ಹೊಂದಿರುವ ನಮ್ಮ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ‌. ದೇಶದಾದ್ಯಂತ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ.  ಈ ಸುಸಂದರ್ಭದಲ್ಲಿ ನಮ್ಮ ನಾಡಿನ ಸಾಂಸ್ಕೃತಿಕ ರಂಗದ ಗಣ್ಯರ ಸಮಾಗಮದಲ್ಲಿ ಮೂಡಿಬಂದಿರುವ “ವಂದೇ ಮಾತರಂ” ಎಂಬ ಅದ್ಭುತ ಗೀತೆ ಬಿಡುಗಡೆಯಾಗಿದೆ.

    ಹೆಸರಾಂತ ನಟ ಹಾಗೂ ರಾಜ್ಯಸಭಾ  ಸದಸ್ಯ ಜಗ್ಗೇಶ್ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶನ ಮಾಡಿದ್ದಾರೆ. ಪ್ರವೀಣ್ ಡಿ ರಾವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಶ್ರೀಶ ಕುದವಳ್ಳಿ ಛಾಯಾಗ್ರಹಣ ಮಾಡಿದ್ದಾರೆ. ಕಿಚ್ಚ ಸುದೀಪ, ಶಿವರಾಜಕುಮಾರ್,  ರವಿಚಂದ್ರನ್, ಜಗ್ಗೇಶ್, ರಮೇಶ್ ಅರವಿಂದ್,ಅನಂತನಾಗ್, ಅರ್ಜುನ್ ಸರ್ಜಾ,  ಗಣೇಶ್, ಶ್ರೀಮುರಳಿ, ಧನಂಜಯ, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ:ಬಾರ್ಸಿಲೋನದಲ್ಲಿ ನಯನತಾರಾ- ವಿಘ್ನೇಶ್ ಶಿವನ್ ದಂಪತಿ

    ನನಗೆ ಚಿಕ್ಕ ವಯಸ್ಸಿನಿಂದಲೂ “ಮಿಲೇ ಸುರ್ ಮೇರಾ ತುಮಾರ” ಹಾಡೆಂದರೆ  ಬಹಳ ಇಷ್ಟ. ಇಂತಹದೊಂದು ಹಾಡನ್ನು ನಮ್ಮ ಕನ್ನಡ ಕಲಾವಿದರ ಸಮಾಗಮದಲ್ಲಿ ಮಾಡಬೇಕೆಂಬ ಆಸೆಯಿತ್ತು. ಈಗ ಆ ಆಸೆ ಈಡೇರಿದೆ. ಗೆಳೆಯ ಶ್ರೀನಿಧಿ ಅವರು ಕೆಲವು ದಿನಗಳ ಹಿಂದೆ ಈ ಹಾಡಿನ ಬಗ್ಗೆ ಪ್ರಸ್ತಾಪಿಸಿದರು. ನಾನು ನಿರ್ಮಾಣಕ್ಕೆ ಮುಂದಾದೆ. ಕೇವಲ ಹದಿಮೂರು ದಿನಗಳಲ್ಲಿ ಈ ಹಾಡು ನಿರ್ಮಾಣವಾಗಿದೆ. ಸಂತೋಷ್ ಆನಂದ್ ರಾಮ್ ಸೊಗಸಾಗಿ ನಿರ್ದೇಶನ ಮಾಡಿದ್ದಾರೆ.

    ವಿಜಯ್ ಪ್ರಕಾಶ್ ಧ್ವನಿಯಲ್ಲಿ ಈ ಹಾಡನ್ನು ಕೇಳುವುದೆ ಆನಂದ. ಈ ಹಾಡಿನ‌ ನಿರ್ಮಾಣ ಆರಂಭವಾದಾಗ ನನ್ನ ಎಲ್ಲಾ ಕನ್ನಡ ಚಿತರಂಗದ ನಾಯಕ ಮಿತ್ರರನ್ನು ಫೋನ್ ಮೂಲಕ ಸಂಪರ್ಕಿಸಿ, ಈ ವಿಷಯ ಹೇಳಿದಾಗ ಬಹಳ ಪ್ರೀತಿಯಿಂದ ಬಂದು ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ನಾಯಕ ನಟರಷ್ಟೇ ಅಲ್ಲದೇ ವಿವಿಧ ಕ್ಷೇತ್ರಗಳ ಗಣ್ಯರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾಡಿನ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಹಲವು ಮಂತ್ರಿಗಳು ಈ ಹಾಡನ್ನು ಮೆಚ್ಚಿ ಶೇರ್ ಮಾಡಿದ್ದಾರೆ. ತಾವು ಕೂಡ ಈ ಹಾಡನ್ನು ಶೇರ್ ಮಾಡುವ ಮೂಲಕ ಹೆಚ್ಷಿನ ಜನರಿಗೆ ತಲುಪಿಸಿ ಎಂದು ಜಗ್ಗೇಶ್ ವಿನಂತಿಸಿದ್ದಾರೆ.  ಪ್ರಧಾನಮಂತ್ರಿಗಳಿಗೂ ಈ ಹಾಡನ್ನು ತೋರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಜಗ್ಗೇಶ್ ತಿಳಿಸಿದ್ದಾರೆ.

    “ವಂದೇ ಮಾತರಂ”  ಎಂದರೆ ಜಾತಿಮತಧರ್ಮ ಎಲ್ಲವನ್ನೂ ದಾಟಿ ನಾವೆಲ್ಲರೂ ಭಾರತಮಾತೆಯ ಮಕ್ಕಳು ಎನ್ನುವ ಸಾರಾಂಶ. ಭಾರತವನ್ನು ಯಾವ ರೀತಿಯಲ್ಲಿ ವಿವರಿಸಬಹುದು ಎಂದು ಹೋದಾಗ, ಅಲ್ಲಿ ನಾವು ಗೋಮಾತೆಯನ್ನು ತಾಯಿಯ ತರಹ ಪೂಜಿಸುತ್ತೇವೆ. ಆ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮೂಲಕ ಹಾಡು ಆರಂಭವಾಗುತ್ತದೆ ಅಲ್ಲಿ ಸುದೀಪ್ ಇದ್ದಾರೆ. ಹೀಗೆ ಭಾರತದ ಹಿರಿಮೆಯನ್ನು ಈ ಹಾಡಿನಲ್ಲಿ ತೋರಿಸುವ ಪ್ರಯತ್ನವನ್ನು ಹಿರಿಯ ನಟರಾದ ಅನಂತನಾಗ್, ರವಿಚಂದ್ರನ್, ರಮೇಶ್ ಅರವಿಂದ್, ಜಗ್ಗೇಶ್, ಅರ್ಜುನ್ ಸರ್ಜಾ ಹಾಗೂ ಯುವ ಪ್ರತಿಭೆಗಳಾದ ಗಣೇಶ್, ಶ್ರೀಮುರಳಿ, ಧ್ರುವ ಸರ್ಜಾ, ರಿಷಬ್ ಶೆಟ್ಟಿ, ಧನಂಜಯ ಅವರ ಮೂಲಕ ಮಾಡಿದ್ದೇವೆ. ಚಿತ್ರರಂಗದ ನಟರಷ್ಟೇ ಅಲ್ಲದೇ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಮುಂತಾದವರು ಭಾರತದ ಭವ್ಯ ಪರಂಪರೆಯನ್ನು ಬಿಂಬಿಸುವ ಈ ಹಾಡಿನಲ್ಲಿ ಭಾಗಿಯಾಗಿದ್ದಾರೆ‌. ನಾಲ್ಕುವರೆ ದಿನಗಳಲ್ಲಿ ಈ ಹಾಡಿನ ಚಿತ್ರೀಕರಣ ಮುಗಿದಿದೆ. ಸಹಕಾರ ನೀಡಿದ ನನ್ನ ತಂಡಕ್ಕೆ ಹಾಗೂ ಅಭಿನಯಿಸಿರುವ ಗಣ್ಯರಿಗೆ ಧನ್ಯವಾದ ಎನ್ನುತ್ತಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್.

    Live Tv
    [brid partner=56869869 player=32851 video=960834 autoplay=true]

  • ವಂದೇ ಮಾತರಂಗೆ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಅಶ್ವಿನಿ ಉಪಾಧ್ಯಾಯ ವಿರುದ್ಧ ‘ಹೈ’ ಗರಂ

    ವಂದೇ ಮಾತರಂಗೆ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಅಶ್ವಿನಿ ಉಪಾಧ್ಯಾಯ ವಿರುದ್ಧ ‘ಹೈ’ ಗರಂ

    ನವದೆಹಲಿ: ವಂದೇ ಮಾತರಂ ಗೀತೆಗೆ ಜನ ಗಣ ಮನ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ವಕೀಲ, ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ವಿರುದ್ಧ ದೆಹಲಿ ಹೈಕೋರ್ಟ್ ಗರಂ ಆಗಿದೆ. ಅರ್ಜಿ ಸಲ್ಲಿಕೆ ಬೆನ್ನಲ್ಲೇ ಮಾಧ್ಯಮಗಳಿಗೆ ದಾಖಲೆ ಬಿಡುಗಡೆ ಹಿನ್ನೆಲೆ ಕೋರ್ಟ್ ನಿಮ್ಮದು ಪ್ರಚಾರದ ತಂತ್ರವಲ್ಲದೇ ಇನ್ನೇನು ಎಂದು ಕೋರ್ಟ್‍ನಲ್ಲಿ ಛೀಮಾರಿ ಹಾಕಿತು.

    ಅಶ್ವಿನಿ ಉಪಾಧ್ಯಾಯ ನಿನ್ನೆ ದೆಹಲಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ಹಂಗಾಮಿ ಮುಖ್ಯ ನ್ಯಾ. ವಿಪಿನ್ ಸಂಘಿ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿ ಸಲ್ಲಿಕೆ ಬೆನ್ನಲ್ಲೇ ಮಾಧ್ಯಮಗಳಿಗೆ ದಾಖಲೆ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿತು. ಪ್ರಚಾರದ ಕಾರಣಕ್ಕೆ ಇಂತಹ ಪಿಐಎಲ್‍ಗಳನ್ನು ಮಾಡುತ್ತೀರಾ ಎಂದು ಪ್ರಶ್ನೆ ಮಾಡಿತು. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    court order law

    ಅಶ್ವಿನಿ ಉಪಾಧ್ಯಾಯ ಮನವಿ ಬಳಿಕ ಕೋರ್ಟ್ ವಿಚಾರಣೆ ಆರಂಭಿಸಿತು. ಈ ವೇಳೆ ವಾದ ಮಂಡಿಸಿದ ಅವರು, ವಂದೇ ಮಾತರಂ ಗೀತೆಯನ್ನು ನಿಯಂತ್ರಿಸುವ ಯಾವುದೇ ಕಾನೂನುಗಳಿಲ್ಲ, ರಾಷ್ಟ್ರೀಯ ಗೌರವ ಕಾಯಿದೆಯಲ್ಲಿ ಉಲ್ಲೇಖಿಸಲ್ಪಟ್ಟಿಲ್ಲ. ಇದರಿಂದಾಗಿ ಸಿನಿಮಾ, ಧಾರವಾಹಿ ಹಾಗೂ ರಾಕ್ ಬ್ಯಾಂಡ್‍ಗಳಲ್ಲೂ ಈ ಗೀತೆಯನ್ನು ಮನಸ್ಸಿಗೆ ತೋಚಿದಂತೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.

    ಶ್ಯಾಮ್ ನಾರಾಯಣ್ ಚೌಕ್ಸೆ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚನೆ ಮಾಡಿ ವರದಿ ಸಲ್ಲಿಕೆಗೆ ಸೂಚಸಿದೆ. ಆದರೆ ಅದು ಯಾವುದೇ ಪ್ರಗತಿಯನ್ನು ಕಂಡಿಲ್ಲ. 2017 ರಲ್ಲಿ ವಂದೇ ಮಾತರಂ ಗೀತೆಯನ್ನು ರಾಷ್ಟ್ರಗೀತೆ ಎಂದು ಗುರುತಿಸಿ ವಾರಕ್ಕೊಮ್ಮೆ ಶಾಲೆ ಕಾಲೇಜುಗಳಲ್ಲಿ ಹಾಡಲು ಸೂಚಿಸಿದೆ. ಆ ಆದೇಶ ಪಾಲನೆಯಾಗಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಹೀಗಾಗಿ ವಂದೇ ಮಾತರಂ ಗೀತೆಯನ್ನು ನಾಟಕೀಯವಾಗಿ ಬಳಕೆ ಮಾಡಬಾರದು. ಅದಕ್ಕೆ ರಾಷ್ಟ್ರಗೀತೆಯಷ್ಟೇ ಗೌರವ ನೀಡಬೇಕು ಮತ್ತು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಬಾರದು ಅಲ್ಲದೇ ಶಾಲೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಹಾಡಲು ಸೂಚಿಸಬೇಕು ಎಂದು ಮನವಿ ಮಾಡಿದರು.

    ವಾದ ಆಲಿಸಿದ ಪೀಠ, ಅರ್ಜಿ ವಿಚಾರಣೆ ನಡೆಸಲು ಅನುಮತಿ ನೀಡಿತು. ಅಲ್ಲದೇ ಎಲ್ಲ ಪ್ರತಿವಾದಿಗಳಿಗೆ ಪ್ರಕರಣ ಸಂಬಂಧ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿ ಆರು ವಾರಗಳಲ್ಲಿ ಸಮಯವನ್ನು ನೀಡಿದೆ. ನವೆಂಬರ್ 9 ರಂದು ಮತ್ತೆ ಈ ಬಗ್ಗೆ ವಿಚಾರಣೆ ನಡೆಯಲಿದ್ದು ಪ್ರಕರಣದ ವಿಸ್ತೃತ ವಿಚಾರಣೆ ನಡೆಯಲಿದೆ.

  • ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    ನವದೆಹಲಿ: ವಂದೇ ಮಾತರಂಗೂ ಜನ ಗಣ ಮನ ರಾಷ್ಟ್ರಗೀತೆಯಷ್ಟೇ ಗೌರವ ಸಿಗಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ದೆಹಲಿಯ ಹೈಕೋರ್ಟ್‌ಗೆ ಈ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಎಲ್ಲ ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ವಂದೇ ಮಾತರಂ ಹಾಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸುವಂತೆ ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ‘ವಂದೇ ಮಾತರಂ’ ನಮ್ಮ ಇತಿಹಾಸ, ಸಾರ್ವಭೌಮತೆ, ಏಕತೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ಯಾವುದೇ ನಾಗರಿಕರು ಯಾವುದೇ ಬಹಿರಂಗ ಅಥವಾ ರಹಸ್ಯ ಕೃತ್ಯದಿಂದ ಅಗೌರವ ತೋರಿದರೆ ಅದು ಸಮಾಜ ವಿರೋಧಿ ಚಟುವಟಿಕೆ ಮಾತ್ರವಲ್ಲದೇ ನಮ್ಮ ಹಕ್ಕುಗಳ ವಿನಾಶವಾಗುತ್ತದೆ. ದೇಶದ ಸಾರ್ವಭೌಮ ಪ್ರಜೆಯಾಗಿರಲು ವಂದೇ ಮಾತರಂ ಗೀತೆಗೆ ಗೌರವ ನೀಡಬೇಕು. ಇದಕ್ಕೆ ಅಗೌರವ ಕಂಡು ಬಂದಲ್ಲಿ ತಡೆಯಬೇಕು ಎಂದು ಕೋರಿದ್ದಾರೆ.

    ದೇಶದಲ್ಲಿ ಎಲ್ಲೆಡೆ ವಂದೇ ಮಾತರಂ ನುಡಿಸಿದಾಗ ಎಲ್ಲರೂ ಎದ್ದುನಿಂತು ರಾಷ್ಟ್ರಗೀತೆಗೆ ನೀಡುವಂತೆ ಗೌರವ ನೀಡಬೇಕು, ಇದನ್ನು ನಾಟಕೀಯಗೊಳಿಸಬಾರದು. ಅಲ್ಲದೇ ವಾಣಿಜ್ಯ ಉಪಯೋಗಕ್ಕೆ ಗೀತೆಯನ್ನು ಬಳಸಿಕೊಳ್ಳಬಾರದು ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಹಸ್ಯ ಬಯಲಾಗುತ್ತೆಂಬ ಭಯಕ್ಕೆ ಮಾಜಿ ಚಾಲಕನ ಹತ್ಯೆಗೈದ YSRCP ಮುಖಂಡ

  • ಭಾರತ್ ಮಾತಾ ಕೀ ಜೈ, ವಂದೇ ಮಾತರಂ: ಘೋಷಣೆ ಕೂಗಿದ ವಿದ್ಯಾರ್ಥಿಗಳು

    ಭಾರತ್ ಮಾತಾ ಕೀ ಜೈ, ವಂದೇ ಮಾತರಂ: ಘೋಷಣೆ ಕೂಗಿದ ವಿದ್ಯಾರ್ಥಿಗಳು

    ನವದೆಹಲಿ: ಬೀದರ್ ಮೂಲದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ 41 ಕರ್ನಾಟಕದ ವಿದ್ಯಾರ್ಥಿಗಳು ರೊಮೆನಿಯಾನಿಂದ ತಾಯ್ನಾಡಿಗೆ ಮರಳಿ ಬರುತ್ತಿರುವ ಖುಷಿಗೆ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಎಂದು ಘೋಷಣೆ ಕೂಗಿ ದೇಶಾಭಿಮಾನ ಮೆರೆದಿದ್ದಾರೆ.

    ನಗರದ ಶಶಾಂಕ್ ಹಾಗೂ ವಿವೇಕ್ ತಾಯ್ನಾಡಿಗೆ ಆಗಮಿಸಿದ್ದು ಅವರ ಪೋಷಕರಲ್ಲಿದ್ದ ಆತಂಕ ದೂರವಾಗಿದೆ. ನಿನ್ನೆ ಯುದ್ಧಭೂಮಿ ಖಾರ್ಕಿವ್‍ನ ಪಿಶಾಚಿನ್ ಎಂಬ ಸ್ಥಳದಿಂದ ಸತತ 45 ಗಂಟೆಗಳ ಕಾಲ ಪ್ರಯಾಣ ಮಾಡಿ ಕನ್ನಡಿಗರು ರೊಮೆನಿಯಾ ತಲುಪಿದ್ದರು. ಇದನ್ನೂ ಓದಿ: ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ

    ಸದ್ಯ ಕನ್ನಡಿಗರು ದೆಹಲಿಯ ಕರ್ನಾಟಕ ಭವನದಲ್ಲಿ ವಿಶ್ರಾಂತಿ ಪಡೆಯಲಿದ್ದು ಕೊರೊನಾ ಟೆಸ್ಟ್ ರಿಪೋರ್ಟ್ ಬಂದ ಬಳಿಕ ಬೀದರ್ ಮೂಲದ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆ ಕಡೆ ಪ್ರಯಾಣ ಮಾಡಲಿದ್ದಾರೆ. ಶಶಾಂಕ್ ಮತ್ತು ವಿವೇಕ್ ಇಂದು ಸಂಜೆ ದೆಹಲಿಯಿಂದ ಹೈದರಾಬಾದ್ ಅಥವಾ ಬೆಂಗಳೂರಿಗೆ ಬರುವ ಸಾದ್ಯತೆ ಇದೆ. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

  • ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ: ಅಖ್ತರ್ ಉಲ್ ಇಮಾನ್

    ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ: ಅಖ್ತರ್ ಉಲ್ ಇಮಾನ್

    ಪಾಟ್ನಾ: ಐವರು ಶಾಸಕರು ವಂದೇ ಮಾತರಂ ಹಾಡುವುದಕ್ಕೆ ನಿರಾಕರಿಸಿದ್ದು, ರಾಷ್ಟ್ರಗೀತೆ ಹಾಡುವುದಕ್ಕೆ ನಮಗೆ ಸಮಸ್ಯೆ ಇಲ್ಲ. ಆದರೆ ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಶಾಸಕ ಅಖ್ತರ್ ಉಲ್ ಇಮಾನ್ ಹೇಳಿದ್ದಾರೆ.

    ವಿಧಾನಸಭೆಯಲ್ಲಿ ಚಳಿಗಾಲದ ಅಧಿವೇಶನ ಅಂತ್ಯಗೊಂಡಿದ್ದು, ಕೊನೆಯ ದಿನದಂದು ವಂದೇ ಮಾತರಂ ಹಾಡುವುದಕ್ಕೆ ಎಂಐಎಂ ಶಾಸಕರು ನಿರಾಕರಿಸಿದ ಘಟನೆ ನಡೆದಿದೆ. ಐವರು ಶಾಸಕರು ವಂದೇ ಮಾತರಂ ಹಾಡುವುದಕ್ಕೆ ನಿರಾಕರಿಸಿದ್ದು, ರಾಷ್ಟ್ರಗೀತೆ ಹಾಡುವುದಕ್ಕೆ ನಮಗೆ ಸಮಸ್ಯೆ ಇಲ್ಲ. ಆದರೆ ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಶಾಸಕ ಅಖ್ತರ್ ಉಲ್ ಇಮಾನ್ ಹೇಳಿದ್ದಾರೆ. ಇದನ್ನೂ ಓದಿ: ನನಗೆ ತಿಳಿಯದೆ ಇರುವ ವಿಚಾರ ಹೇಳಿಕೊಡುವ ವ್ಯಕ್ತಿ ಆಕರ್ಷಕ – ಪತಿ ಬಗ್ಗೆ ದೀಪಿಕಾ ಮೆಚ್ಚುಗೆ

    ವಿಧಾನಸಭಾಧ್ಯಕ್ಷರು ವಂದೇ ಮಾತರಂ ಹೇಳುವಂತೆ ಸಭಾಸದಸ್ಯರಿಗೆ ಸೂಚಿಸುವ ಹೊಸ ಪದ್ಧತಿಯನ್ನು ಪ್ರಾರಂಭಿಸಿದ್ದಾರೆ. ಆದರೆ ಹಳೆಯ (ರಾಷ್ಟ್ರಗೀತೆ ಹಾಡುವ) ಪದ್ಧತಿ ಮುಂದುವರಿಯಬೇಕು. ಪ್ರತಿ ಸಂದರ್ಭದಲ್ಲಿಯೂ ರಾಷ್ಟ್ರಗೀತೆ ಅಥವಾ ರಾಷ್ಟ್ರೀಯ ಹಾಡನ್ನು ಹಾಡುವ ಕಾರಣವನ್ನು ಕೇಳಿದ್ದಾರೆ. ಕೆಲವರು ಸಸ್ಯಾಹಾರಿಗಳಾಗಿರುತ್ತಾರೆ. ಕೆಲವರು ಮಾಂಸಾಹಾರಿಗಳಾಗಿರುತ್ತಾರೆ. ಆಯ್ಕೆ ಮಾಡಿಕೊಳ್ಳುವುದು ಆ ವ್ಯಕ್ತಿಗೆ ಬಿಟ್ಟ ವಿಷಯ ಅಂತೆಯೇ ಹೊಸ ಪದ್ಧತಿಯನ್ನು ಪ್ರತಿ ಸಭಾಸದಸ್ಯನ ಮೇಲೆಯೂ ಹೇರುವಂತಿಲ್ಲ. ವಂದೇ ಮಾತರಂ ಹೇಳುವುದಕ್ಕೆ ನನ್ನ ಆಕ್ಷೇಪವಿದೆ ಎಂದು ತಿಳಿಸಿದ್ದಾರೆ.

    ದೇಶದ ಸಂವಿಧಾನದಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿರುವ ಅಖ್ತರ್ ಉಲ್ ಇಮಾನ್ ನಂಬಿಕೆ ಇರುವುದರಿಂದಲೇ ಚುನಾವಣೆ ಎದುರಿಸಿ ಪ್ರಜಾಪ್ರಭುತ್ವದ ಆಧಾರದಲ್ಲಿ ಗೆದ್ದು ಬಂದಿದ್ದೇನೆ. ಆದರೆ ನಮ್ಮ ಸಂವಿಧಾನ ಪ್ರತಿಯೊಬ್ಬ ನಾಗರಿಕನೂ ರಾಷ್ಟ್ರಗೀತೆಯನ್ನು ಹಾಡಬೇಕೆಂಬುದನ್ನು ಕಡ್ಡಾಯಗೊಳಿಸಿಲ್ಲ ಎಂದು ಹೇಳಿದ್ದಾರೆ.

    ಬಿಜೆಪಿ ಎಂಐಎಂ ನಡೆಗೆ ತೀವ್ರ ಟೀಕೆ ಮಾಡಿದ್ದು, ಇಮಾನ್ ಅವರ ಹೇಳಿಕೆಗಳು ಅವರ ಉದ್ದೇಶ, ಆಂತರ್ಯವನ್ನು ಸ್ಪಷ್ಟಪಡಿಸುತ್ತಿದೆ ಎಂದು ಹೇಳಿದೆ. ವಂದೇ ಮಾತರಂ ಹಾಡಲು ಎಂಐಎಂ ಶಾಸಕರು ನಿರಾಕರಿಸುವುದು ಆತಂಕಕಾರಿ ಎಂದು ಬಿಜೆಪಿ ಹೇಳಿದೆ.

  • ಒಂದೇ ವೇದಿಕೆಯಲ್ಲಿ 4,500 ಮಂದಿ ‘ವಂದೇ ಮಾತರಂ’ ಗೀತೆ ಗಾಯನ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ನಿರ್ಮಿಸಲು ಸಿದ್ಧತೆ

    ಒಂದೇ ವೇದಿಕೆಯಲ್ಲಿ 4,500 ಮಂದಿ ‘ವಂದೇ ಮಾತರಂ’ ಗೀತೆ ಗಾಯನ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ನಿರ್ಮಿಸಲು ಸಿದ್ಧತೆ

    ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಉಡುಪಿಯಲ್ಲಿ ಇಂದು ವಿಶ್ವದಾಖಲೆ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಒಂದೇ ವೇದಿಕೆಯಲ್ಲಿ 4500 ಮಂದಿ ಸಂಪೂರ್ಣ ವಂದೇ ಮಾತರಂ ಹಾಡನ್ನು ಗಾಯನ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡುವ ಹಾದಿಯಲ್ಲಿದ್ದಾರೆ.

    ಜಿಲ್ಲೆಯ ಸಂವೇದನಾ ಫೌಂಡೇಶನ್ಸ್ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು, ಮಲ್ಪೆ ಪೊಲೀಸ್ ಸ್ಟೇಷನ್ ಮೈದಾನದಿಂದ ಬೃಹತ್ ಮೆರವಣಿಗೆಯಲ್ಲಿ 1,750 ಅಡಿ ಉದ್ದದ ತಿರಂಗವನ್ನು ಸುಮಾರು ಒಂದು ಸಾವಿರ ಮಕ್ಕಳು ಹೊತ್ತು ಸಾಗುತ್ತಾರೆ. ಸುಮಾರು 10 ಸಾವಿರ ಮಂದಿ ರಸ್ತೆಯ ಇಕ್ಕೆಲಗಳಲ್ಲಿ ನಿಂತು ರಾಷ್ಟ್ರ ಧ್ವಜಕ್ಕೆ ಹೂವು ಹಾಕಿ ಗೌರವ ವಂದನೆ ಸಲ್ಲಿಸಲಿದ್ದಾರೆ.

    ಮಲ್ಪೆ ಬೀಚ್‍ವರೆಗೆ ಮೆರವಣಿಗೆ ಸಾಗಿ ಅಲ್ಲಿ 4500 ವಿದ್ಯಾರ್ಥಿಗಳು ಒಂದೇ ಬಾರಿ ವಂದೇ ಮಾತರಂ ಹಾಡುತ್ತಾರೆ. ಸಾಮೂಹಿಕ ಹಾಡಿಗೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಅಧಿಕಾರಿಗಳು ಸಾಕ್ಷಿಯಾಗಲಿದ್ದಾರೆ. ಈ ವಿಶೇಷ ಕಾರ್ಯಕ್ರಮಕ್ಕಾಗಿ ಆಂಧ್ರಪ್ರದೇಶದಿಂದ ಅರ್ಧ ಕಿಲೋಮೀಟರ್ ಉದ್ದದ ತಿರಂಗವನ್ನು ತರಿಸಿಕೊಳ್ಳಲಾಗಿದೆ.

    ಕಾರ್ಯಕ್ರಮದಲ್ಲಿ 40 ಭಜನಾ ಮಂಡಳಿ, ವಿವಿಧ ಸಂಘ ಸಂಸ್ಥೆಗಳು, 24 ಪದವಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಸೇವ್ ನೇಚರ್ ಎಂಬ ಬ್ಯಾಡ್ಜ್, ಸಮವಸ್ತ್ರ ತೊಟ್ಟು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ರಿಂದ ಸಂಜೆ ಆರು ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದೆ.

    ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ 25 ಸಾವಿರ ಜನ ಪಾಲ್ಗೊಳ್ಳಲಿದ್ದು, ಸಿನೆಮಾ ಕ್ಷೇತ್ರದ 20 ಹಿನ್ನೆಲೆ ಗಾಯಕರು ವಂದೇ ಮಾತರಂ ಹಾಡಿಗೆ ಧನಿಗೂಡಿಸಲಿದ್ದಾರೆ. ಮೂವರು ವಿದೇಶಿಗರು ವಂದೇ ಮಾತರಂ ಹಾಡೋದು ಮತ್ತೊಂದು ವಿಶೇಷ. ಟ್ಯಾಬ್ಲೋಗಳು, ಸಾಂಸ್ಕೃತಿಕ ತಂಡಗಳು, ಬೃಹತ್ ಶೋಭಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ.

    ಸಾಂಧರ್ಬಿಕ ಚಿತ್ರ

  • ಶಾಲಾ-ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ: ಮದ್ರಾಸ್ ಹೈಕೋರ್ಟ್

    ಶಾಲಾ-ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ: ಮದ್ರಾಸ್ ಹೈಕೋರ್ಟ್

    ಚೆನ್ನೈ: ತಮಿಳುನಾಡಿನ ಎಲ್ಲಾ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಾರಕ್ಕೆ ಕನಿಷ್ಠ ಒಂದು ಬಾರಿ ವಂದೇ ಮಾತರಂ ಹಾಡುವುದು ಕಡ್ಡಾಯ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

    ಪ್ರಕರಣವೊಂದರ ಇತ್ಯರ್ಥದ ವೇಳೆ ಮದ್ರಾಸ್ ಹೈಕೋರ್ಟ್ ಈ ಆದೇಶ ನೀಡಿದೆ. ವೀರಮಣಿ ಎಂಬವರು ರಾಜ್ಯ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ವಂದೇ ಮಾತರಂ ಯಾವ ಭಾಷೆಯಲ್ಲಿದೆ ಎಂಬ ಪ್ರಶ್ನೆಗೆ ಬೆಂಗಾಲಿ ಎಂದು ಉತ್ತರಿಸಿದ್ದರು. ಆದ್ರೆ ಆನ್ಸರ್ ಕೀನಲ್ಲಿ ಸಂಸ್ಕೃತ ಎಂಬ ಉತ್ತರ ನೀಡಲಾಗಿತ್ತು. ಇದನ್ನ ಪ್ರಶ್ನಿಸಿ ವೀರಮಣಿ ಕೋರ್ಟ್ ಮೆಟ್ಟಿಲೇರಿದ್ದರು. ವಂದೇ ಮಾತರಂ ಸಂಸ್ಕೃತದಲ್ಲಿದೆಯೋ ಬೆಂಗಾಲಿ ಭಾಷೆಯಲ್ಲಿದೆಯೋ ಎಂಬ ಬಗ್ಗೆ ಸ್ಪಷ್ಟೀಕರಣ ನೀಡಬೇಕೆಂದು ಕೋರಿದ್ದರು.

    ಜೂನ್ 13ರಂದು ಅಡ್ವೋಕೇಟ್ ಜನರಲ್ ಆರ್ ಮುತ್ತುಕುಮಾರಸ್ವಾಮಿ ಅವರು ಇದಕ್ಕೆ ಸ್ಪಷ್ಟೀಕರಣ ನೀಡಿ, ವಂದೇ ಮಾತರಂನ ಮೂಲ ಭಾಷೆ ಸಂಸ್ಕೃತ ಆದ್ರೆ ಬೆಂಗಲಿಯಲ್ಲಿ ಬರೆಯಲಾಗಿದೆ ಎಂದು ಹೇಳಿದ್ದರು.

     

    ಈ ಹಿನ್ನೆಲೆಯಲ್ಲಿ ವೀರಮಣಿ ಅವರು ಪರೀಕ್ಷೆಯಲ್ಲಿ ಕಳೆದುಕೊಂಡಿದ್ದ 1 ಅಂಕವನ್ನು ನೀಡಬೇಕೆಂದು ಕೋರ್ಟ್ ನಿರ್ಧರಿಸಿದೆ. ಅಲ್ಲದೆ ಎಲ್ಲಾ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಾರಕ್ಕೆ ಕನಿಷ್ಠ ಒಂದು ಬಾರಿ (ಪ್ರಮುಖವಾಗಿ ಸೋಮವಾರ ಅಥವಾ ಶುಕ್ರವಾರ) ವಂದೇ ಮಾತರಂ ಕಡ್ಡಾಯವಾಗಿ ಹಾಡಬೇಕು. ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು ಹಾಗೂ ಫ್ಯಾಕ್ಟರಿಗಳಲ್ಲಿ ತಿಂಗಳಿಗೆ ಕನಿಷ್ಠ ಒಂದು ಬಾರಿ ವಂದೇ ಮಾತರಂ ಹಾಡುವುದು ಕಡ್ಡಾಯ ಎಂದು ಕೋರ್ಟ್ ಹೇಳಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸರ್ಕಾರಿ ವೆಬ್‍ಸೈಟ್‍ಗಳಲ್ಲಿ ಲಭ್ಯವಿರುವಂತೆ ಮಾಡಲು ತಮಿಳು ಹಾಗೂ ಇಂಗ್ಲಿಷ್‍ನಲ್ಲಿ ವಂದೇ ಮಾತರಂನ ಭಾಷಾಂತರಿತ ಆವೃತ್ತಿಯನ್ನು ಅಪ್‍ಲೋಡ್ ಮಾಡಿ ಹಂಚಿಕೊಳ್ಳಬೇಕು ಎಂದು ಸಾರ್ವಜನಿಕ ಮಾಹಿತಿ ನಿರ್ದೇಶಕರಿಗೆ ಸೂಚಿಸಲಾಗಿದೆ.

    ಒಂದು ವೇಳೆ ಯಾವುದಾದ್ರೂ ಸಂಸ್ಥೆಗೆ ಅಥವಾ ವ್ಯಕ್ತಿಗೆ ವಂದೇ ಮಾತರಂ ಹಾಡುವುದಕ್ಕೆ ಕಷ್ಟವಾದ್ರೆ ಅವನು/ಅವಳಿಗೆ ಹಾಡಲು ಬಲವಂತ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶದಲ್ಲಿ ಹೇಳಿದೆ. ಇಂದಿನ ಯುವಕರೇ ದೇಶದ ನಾಳಿನ ಭವಿಷ್ಯ. ಈ ಆದೇಶವನ್ನು ಸಕಾರಾತ್ಮವಾಗಿ ಸ್ವೀಕರಿಸಿ ದೇಶದ ಪ್ರಜೆಗಳು ಇದನ್ನು ಪಾಲಿಸುತ್ತಾರೆಂದು ಈ ಕೋರ್ಟ್ ನಂಬಿರುತ್ತದೆ ಎಂದು ಆದೇಶದ ಕೊನೆಯಲ್ಲಿ ತಿಳಿಸಲಾಗಿದೆ.