Tag: Varaha Rupam

  • ಕಾಂತಾರ ಸಿನಿಮಾದ ‘ವರಾಹ ರೂಪಂ’ ಕಾಪಿರೈಟ್ಸ್ ಪ್ರಕರಣ ರದ್ದು

    ಕಾಂತಾರ ಸಿನಿಮಾದ ‘ವರಾಹ ರೂಪಂ’ ಕಾಪಿರೈಟ್ಸ್ ಪ್ರಕರಣ ರದ್ದು

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ‘ವರಾಹ ರೂಪಂ’ (Varaha Roopam) ಹಾಡಿನ ಹಕ್ಕು ಸ್ವಾಮ್ಯ ಉಲ್ಲಂಘನೆ ಪ್ರಕರಣ ಹಲವು ತಿಂಗಳುಗಳಿಂದ ಕೇರಳ (Kerala) ಹೈಕೋರ್ಟಿನಲ್ಲಿ ನಡೆಯುತ್ತಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಸಿಕ್ಕಿದ್ದು, ದೂರು ದಾರರು ಮತ್ತು ಪ್ರತಿವಾದಿಗಳು ಸಂಧಾನ ಮಾಡಿಕೊಂಡಿರುವ ಕಾರಣದಿಂದಾಗಿ ಕೇರಳ ಹೈಕೋರ್ಟ್ ಈ ಪ್ರಕರಣವನ್ನೇ ರದ್ದು ಮಾಡಿದೆ.

    ಕಾಂತಾರ ಸಿನಿಮಾ ತಂಡದ ಪರವಾಗಿ ವಾದ ಮಂಡಿಸುತ್ತಿದ್ದ ವಿಜಯ್ ವಿ ಪೌಲ್, ಸಿನಿಮಾ ಟೀಂ ಮತ್ತು ಮಾತೃಭೂಮಿ ಪಬ್ಲಿಷರ್ಸ್ ನಡುವಿನ ಸಂಧಾನವನ್ನು ಕೋರ್ಟ್ ಗಮನಕ್ಕೆ ತಂದರು. ಹಾಗಾಗಿ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದು ಮಾಡುವಂತೆ ಮನವಿ ಮಾಡಿಕೊಂಡರು. ಈ ಮನವಿಯನ್ನು ಪರಿಗಣಿಸಿ ಕೇರಳ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿದೆ.

    ವರಾಹ ರೂಪಂ ಪ್ರಕರಣವು ಮೊದಲ ಕೆಳ ಹಂತದ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಕೇರಳದ ಥೈಕ್ಕುಡಂ ಬ್ರಿಡ್ಜ್ ನವರು ತಮ್ಮ ನವಸರಂ ಹಾಡಿನ ನಕಲು ಎಂದು ದಾವೆ ಹೂಡಿದ್ದರು. ಕೆಳ ಹಂತದ ನ್ಯಾಯಾಲಯವು ವರಾಹ ರೂಪಂ ಹಾಡನ್ನು ಚಿತ್ರಮಂದಿರ ಮತ್ತು ಓಟಿಟಿಯಲ್ಲಿ ಪ್ರಸಾರ ಮಾಡಬಾರದು ಎಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಚಿತ್ರತಂಡ ಕೇರಳ ಹೈಕೋರ್ಟ್ ಮೆಟ್ಟಿಲು ಏರಿತ್ತು. ಚಿತ್ರತಂಡದ ವಿರುದ್ಧ ತಾತ್ಕಾಲಿಕ ಆದೇಶವೊಂದು ಹೊರ ಬಿದ್ದಿತ್ತು. ತಾತ್ಕಾಲಿಕವಾಗಿ ತಡೆ ಹಿಡಿದು ಆನಂತರ ಬಳಸಿಕೊಳ್ಳಲು ಅನುಮತಿ ನೀಡಿತ್ತು. ಇದೀಗ ಎಲ್ಲವೂ ಸುಖಾಂತ್ಯವಾಗಿದೆ.

    ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದ್ದ ಈ ಗೀತೆ ಸಿನಿಮಾ ಗೆಲುವಿಗೆ ಭಾರೀ ಸಾಥ್ ನೀಡಿತ್ತು. ಅಲ್ಲದೇ, ಕೇಳುಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಅಪಾರ ಸಂಖ್ಯೆಯಲ್ಲಿ ಈ ಹಾಡನ್ನು ಡೌನ್ ಲೋಡ್ ಕೂಡ ಮಾಡಿಕೊಂಡಿದ್ದರು ಕೇಳುಗರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳ ಪೊಲೀಸ್ ಮುಂದೆ ಹಾಜರಾದ ರಿಷಬ್ ಶೆಟ್ಟಿ ಮತ್ತು ಟೀಮ್

    ಕೇರಳ ಪೊಲೀಸ್ ಮುಂದೆ ಹಾಜರಾದ ರಿಷಬ್ ಶೆಟ್ಟಿ ಮತ್ತು ಟೀಮ್

    ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಮತ್ತು ಇಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಕೇರಳ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಫೆ.12 ಮತ್ತು 13 ರಂದು ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು ಎಂದು ಕೇರಳ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಹಾಗಾಗಿ ನಿನ್ನೆ ಮತ್ತು ಇಂದು ವಿಚಾರಣೆಗಾಗಿ ಇಬ್ಬರೂ ಹಾಜರಾಗಿದ್ದಾರೆ.

    ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕನ್ನಡದ ನಿರ್ದೇಶಕ ರಿಷಬ್ ಮತ್ತು ಕಾಂತಾರ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಮೇಲೆ ದೂರು ದಾಖಲಾಗಿತ್ತು. ದೂರಿನ ಅನ್ವಯ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಕೇರಳ ಪೊಲೀಸರು ನೋಟಿಸ್ ನೀಡಿದ್ದರು. ನಿನ್ನೆ ಮತ್ತು ಇಂದು ಇಬ್ಬರೂ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತನಿಖಾಧಿಕಾರಿ ಡಿಸಿಪಿ ಕೈಇ ಬೈಜು ತಿಳಿಸಿದ್ದಾರೆ. ಇದನ್ನೂ ಓದಿ: ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

    ಮೊನ್ನೆಯಷ್ಟೇ ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

    ಆದರೆ, ಸುಪ್ರೀಂ ಕೋರ್ಟ್ ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ  50 ಸಾವಿರ ಬಾಂಡ್  ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್

    ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್

    ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

    ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ  50 ಸಾವಿರ ಬಾಂಡ್  ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ. ಇದನ್ನೂ ಓದಿ: ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

    ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ಮೊನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

    ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು

    ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು

    ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎಂದು ಷರತ್ತು ಹಾಕಿದ್ದಾರೆ.  ಅಲ್ಲದೇ, ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿದ್ದಾರೆ.

    ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ನಿನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

    ನ್ಯಾಯಾಲಯ ಹಾಕಿದ ಷರತ್ತುಗಳು :

    1. ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು.
    2. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು.
    3. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ.
    4. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡು ಡಿಲಿಟ್: ಕಾಪಿ ವಿವಾದಕ್ಕೆ ಟ್ವಿಸ್ಟ್

    ‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡು ಡಿಲಿಟ್: ಕಾಪಿ ವಿವಾದಕ್ಕೆ ಟ್ವಿಸ್ಟ್

    ಕಾಂತಾರ (Kantara) ಸಿನಿಮಾದ ವರಾಹ ರೂಪಂ (Varaha Rupam) ಹಾಡನ್ನು ಕಾಪಿ ಮಾಡಲಾಗಿದೆ ಎನ್ನುವ ವಿಚಾರ ಹಲವು ದಿನಗಳಿಂದ ಸದ್ದು ಮಾಡುತ್ತಿದೆ. ನಮ್ಮ ಹಾಡನ್ನು ಕಾಪಿ ಮಾಡಲಾಗಿದೆ ಎಂದು ಮಲಯಾಳಂ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ಕಂಪನಿಯು ಹೇಳಿತ್ತು. ನ್ಯಾಯಾಲಯಕ್ಕೂ ದೂರು ಸಲ್ಲಿಕೆಯಾಗಿತ್ತು. ಆದರೆ, ನಿರ್ದೇಶಕ ರಿಷಬ್ ಶೆಟ್ಟಿ ಅದಕ್ಕೆ ಒಪ್ಪಿರಲಿಲ್ಲ. ನವರಸಮ್ ಆಲ್ಬಂನಿಂದ ಕದ್ದಿಲ್ಲ ಎಂದೇ ಹೇಳುತ್ತಾ ಬಂದಿದ್ದರು. ಆದರೆ, ನಿನ್ನೆಯಿಂದ ನಿರ್ಮಾಣ ಸಂಸ್ಥೆಯ ಯ್ಯೂಟ್ ನಿಂದ ಹಾಡನ್ನು ಡಿಲಿಟ್ (Delete) ಮಾಡಲಾಗಿದೆ.

    ಕಾಂತಾರ ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಹಾಡನ್ನು (Song) ನಾವು ಕದ್ದಿಲ್ಲ. ಸುಖಾಸುಮ್ಮನೆ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಯಾರೇ ಕೇಳಿದರೂ, ನಾವು ಅದನ್ನು ಕದ್ದ ಹಾಡಲ್ಲ ಎಂದು ಸಾಬೀತು ಪಡಿಸುತ್ತೇವೆ ಎಂದು ರಿಷಬ್ ಶೆಟ್ಟಿ (Rishabh Shetty) ಪ್ರತಿಕ್ರಿಯೆ ನೀಡಿದ್ದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಅವರು, ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದು ನುಡಿದಿದ್ದರು. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

    ಕಾಂತಾರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.

    ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿತ್ತು.

    ಇನ್ನೂ ಕೋರ್ಟ್ ಆದೇಶದ ಪ್ರತಿ ಚಿತ್ರತಂಡಕ್ಕೆ ಸಿಗದೇ ಇರುವ ಕಾರಣದಿಂದಾಗಿ ಥಿಯೇಟರ್ ನಲ್ಲಿ ಈ ಹಾಡು ಕೇಳಿ ಬರುತ್ತಿದೆ. ಆದೇಶ ಪ್ರತಿ ಸಿಕ್ಕ ನಂತರ ಯಾವ ನಿರ್ಧಾರ ತಗೆದುಕೊಳ್ಳುತ್ತಾರೋ ಕಾದು ನೋಡಬೇಕು. ಅಷ್ಟೇ ಅಲ್ಲದೇ, ಮೊನ್ನೆಯಷ್ಟೇ ಬ್ಯಾಂಡ್ ನ ಸದಸ್ಯರೊಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡು, ‘ಕ್ರೆಡಿಟ್ ಕೊಟ್ಟು ಈ ಹಾಡನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ, ಮ್ಯೂಸಿಕ್ ಸಂಸ್ಥೆ ಆ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ.

    ಎರಡೆರಡು ಕೋರ್ಟಿನಿಂದ ಈ ಹಾಡಿಗೆ ತಡೆಯಾಜ್ಞೆ ನೀಡಿದೆ. ಆದರೂ, ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಮಾತಿಗೆ ಚಿತ್ರತಂಡ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತದೆಯೋ ಕಾದು ನೋಡಬೇಕು. ಅಷ್ಟರಲ್ಲಿ ಸಂಧಾನ ಏನಾದರೂ ನಡೆದರೂ ಅಚ್ಚರಿ ಪಡಬೇಕಿಲ್ಲ ಎನ್ನಲಾಗುತ್ತಿದೆ. ಆದರೆ, ಹಾಡನ್ನೇ ಹೊಂಬಾಳೆ ಸಂಸ್ಥೆ ತಗೆದುಹಾಕಿದೆ.

    Live Tv
    [brid partner=56869869 player=32851 video=960834 autoplay=true]

  • ‘ವರಾಹ ರೂಪಂ’ ಮ್ಯೂಸಿಕ್ ಕದ್ದಿಲ್ಲ: ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ‘ವರಾಹ ರೂಪಂ’ ಮ್ಯೂಸಿಕ್ ಕದ್ದಿಲ್ಲ: ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಕಾಂತಾರ (Kantara) ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಮ್ಯೂಸಿಕ್ ನಾವು ಕದ್ದಿಲ್ಲ. ಸುಖಾಸುಮ್ಮನೆ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಯಾರೇ ಕೇಳಿದರೂ, ನಾವು ಅದನ್ನು ಕದ್ದಿಲ್ಲ ಎಂದು ಸಾಬೀತು ಪಡಿಸುತ್ತೇವೆ ಎಂದು ರಿಷಬ್ ಶೆಟ್ಟಿ (Rishabh Shetty) ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಆಗಮಿಸಿದ್ದ ರಿಷಬ್ ಶೆಟ್ಟಿ ದಂಪತಿ, ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದು ನುಡಿದಿದ್ದಾರೆ.

    ಕಾಂತಾರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ (Varaha Rupam) ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.

    ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ (Palakkad Court) ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ (Injunction) ನೀಡಿದೆ.

    ಇನ್ನೂ ಕೋರ್ಟ್ ಆದೇಶದ ಪ್ರತಿ ಚಿತ್ರತಂಡಕ್ಕೆ ಸಿಗದೇ ಇರುವ ಕಾರಣದಿಂದಾಗಿ ಥಿಯೇಟರ್ ನಲ್ಲಿ ಈ ಹಾಡು ಕೇಳಿ ಬರುತ್ತಿದೆ. ಆದೇಶ ಪ್ರತಿ ಸಿಕ್ಕ ನಂತರ ಯಾವ ನಿರ್ಧಾರ ತಗೆದುಕೊಳ್ಳುತ್ತಾರೋ ಕಾದು ನೋಡಬೇಕು. ಅಷ್ಟೇ ಅಲ್ಲದೇ, ಮೊನ್ನೆಯಷ್ಟೇ ಬ್ಯಾಂಡ್ ನ ಸದಸ್ಯರೊಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡು, ‘ಕ್ರೆಡಿಟ್ ಕೊಟ್ಟು ಈ ಹಾಡನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ, ಮ್ಯೂಸಿಕ್ ಸಂಸ್ಥೆ ಆ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ.

    ಎರಡೆರಡು ಕೋರ್ಟಿನಿಂದ ಈ ಹಾಡಿಗೆ ತಡೆಯಾಜ್ಞೆ ನೀಡಿದೆ. ಆದರೂ, ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಮಾತಿಗೆ ಚಿತ್ರತಂಡ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತದೆಯೋ ಕಾದು ನೋಡಬೇಕು. ಅಷ್ಟರಲ್ಲಿ ಸಂಧಾನ ಏನಾದರೂ ನಡೆದರೂ ಅಚ್ಚರಿ ಪಡಬೇಕಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರದ ‘ವರಾಹ ರೂಪಂ’ ಹಾಡಿಗೆ ಮತ್ತೊಂದು ತಡೆಯಾಜ್ಞೆಯ ಸಂಕಷ್ಟ

    ಕಾಂತಾರದ ‘ವರಾಹ ರೂಪಂ’ ಹಾಡಿಗೆ ಮತ್ತೊಂದು ತಡೆಯಾಜ್ಞೆಯ ಸಂಕಷ್ಟ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ (Varaha Rupam) ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ  ನೀಡಿತ್ತು.

    ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ (Palakkad Court) ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ  (Injunction)ನೀಡಿದೆ. ಇದನ್ನೂ ಓದಿ:`ಬಾಹುಬಲಿ’ ಪ್ರಭಾಸ್‌ಗೆ ಶಾಕ್ ಕೊಟ್ಟ ಜಿಎಸ್‌ಟಿ ಅಧಿಕಾರಿಗಳು

    ಇನ್ನೂ ಕೋರ್ಟ್ ಆದೇಶದ ಪ್ರತಿ ಚಿತ್ರತಂಡಕ್ಕೆ ಸಿಗದೇ ಇರುವ ಕಾರಣದಿಂದಾಗಿ ಥಿಯೇಟರ್ ನಲ್ಲಿ ಈ ಹಾಡು ಕೇಳಿ ಬರುತ್ತಿದೆ. ಆದೇಶ ಪ್ರತಿ ಸಿಕ್ಕ ನಂತರ ಯಾವ ನಿರ್ಧಾರ ತಗೆದುಕೊಳ್ಳುತ್ತಾರೋ ಕಾದು ನೋಡಬೇಕು. ಅಷ್ಟೇ ಅಲ್ಲದೇ, ಮೊನ್ನೆಯಷ್ಟೇ ಬ್ಯಾಂಡ್ ನ ಸದಸ್ಯರೊಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡು, ‘ಕ್ರೆಡಿಟ್ ಕೊಟ್ಟು ಈ ಹಾಡನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ, ಮ್ಯೂಸಿಕ್ ಸಂಸ್ಥೆ ಆ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ.

    ಎರಡೆರಡು ಕೋರ್ಟಿನಿಂದ ಈ ಹಾಡಿಗೆ ತಡೆಯಾಜ್ಞೆ ನೀಡಿದೆ. ಆದರೂ, ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಮಾತಿಗೆ ಚಿತ್ರತಂಡ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತದೆಯೋ ಕಾದು ನೋಡಬೇಕು. ಅಷ್ಟರಲ್ಲಿ ಸಂಧಾನ ಏನಾದರೂ ನಡೆದರೂ ಅಚ್ಚರಿ ಪಡಬೇಕಿಲ್ಲ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ತಂಡದ ವಿರುದ್ಧ ಹಣಕ್ಕಾಗಿ ನಾವು ಕದ್ದಿರುವ ಆರೋಪ ಮಾಡಿಲ್ಲ: ವಿಯಾನ್

    ‘ಕಾಂತಾರ’ ತಂಡದ ವಿರುದ್ಧ ಹಣಕ್ಕಾಗಿ ನಾವು ಕದ್ದಿರುವ ಆರೋಪ ಮಾಡಿಲ್ಲ: ವಿಯಾನ್

    ಕಾಂತಾರ (Kantara) ಸಿನಿಮಾದ ‘ವರಾಹ ರೂಪಂ’ ಹಾಡಿಗೆ ಕದ್ದಿರುವ ಆರೋಪ ಕೇಳಿ ಬಂದಿತ್ತು. ಈ ಹಾಡನ್ನು ತಮ್ಮ ನವರಸಂ (Navarasam) ಗೀತೆಯಿಂದ ಕದ್ದಿರುವುದಾಗಿ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ದುಡ್ಡಿಗಾಗಿ ಅವರು ಆ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಇದೀಗ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸದಸ್ಯರು ಉತ್ತರಿಸಿದ್ದು, ನಮಗೆ ಯಾವುದೇ ಹಣ ಬೇಕಿಲ್ಲ. ಕ್ರೆಡಿಟ್ ಕೊಟ್ಟು ಉಚಿತವಾಗಿ ಬಳಸಿಕೊಳ್ಳಬಹುದು ಎಂದು ತಂಡದ ಸದಸ್ಯ ವಿಯಾನ್ ಹೇಳಿಕೆ ನೀಡಿದ್ದಾರೆ.

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ (Varaha Rupam) ಹಾಡನ್ನು ಸಿನಿಮಾದಲ್ಲಿ ಬಳಸದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿತ್ತು. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರೂ, ಕೇರಳದ ಕೋಝಿಕ್ಕೋಡ್ ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ (Thaikudam Bidge Band) ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೋಝಿಕೋಡ್ ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

    ಈ ಕುರಿತು ಸ್ವತಃ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ‘ನಮ್ಮ ನವರಸಂ ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ’ ಎಂದು ಈ ಹಿಂದೆ ಬ್ಯಾಂಡ್ ಆರೋಪ ಮಾಡಿತ್ತು. ಕಾಂತಾರ ಟೀಮ್ ಹಾಡನ್ನು ಪ್ರೇರಿತವಾಗಿ ತಗೆದುಕೊಂಡಿಲ್ಲ, ಕೃತಿಚೌರ್ಯ ಮಾಡಿದೆ ಎಂದೂ ಹೇಳಿದ್ದರು. ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ ‘ವರಾಹ ರೂಪಂ’  ಹಾಡಿಗೆ ಕೊಯಿಕ್ಕೋಡು ಕೋರ್ಟ್ ತಡೆಯಾಜ್ಞೆ

    ಕಾಂತಾರ ‘ವರಾಹ ರೂಪಂ’ ಹಾಡಿಗೆ ಕೊಯಿಕ್ಕೋಡು ಕೋರ್ಟ್ ತಡೆಯಾಜ್ಞೆ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ (Varaha Rupam) ಹಾಡನ್ನು ಸಿನಿಮಾದಲ್ಲಿ ಬಳಸದಂತೆ ತಡೆಯಾಜ್ಞೆ ನೀಡಲಾಗಿದ್ದು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿದೆ. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು. ಆದರೂ, ಕೇರಳದ ಕೊಯಿಕ್ಕೋಡು  ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ.

    ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ (Thaikudam Bidge Band) ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೊಯಿಕ್ಕೋಡು ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    ಈ ಕುರಿತು ಸ್ವತಃ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ‘ನಮ್ಮ ನವರಸಂ (Navarasam) ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ’ ಎಂದು ಈ ಹಿಂದೆ ಬ್ಯಾಂಡ್ ಆರೋಪ ಮಾಡಿತ್ತು. ಕಾಂತಾರ ಟೀಮ್ ಹಾಡನ್ನು ಪ್ರೇರಿತವಾಗಿ ತಗೆದುಕೊಂಡಿಲ್ಲ, ಕೃತಿಚೌರ್ಯ ಮಾಡಿದೆ ಎಂದೂ ಹೇಳಿದ್ದರು. ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]