Tag: Varanasi court

  • ಬಾಬರಿ ಮಸೀದಿ ಕೇಸ್ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ: ಓವೈಸಿ

    ಬಾಬರಿ ಮಸೀದಿ ಕೇಸ್ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ: ಓವೈಸಿ

    ಹೈದರಾಬಾದ್: ಜ್ಞಾನವಾಪಿ ಮಸೀದಿ (Gyanvapi Masjid) ವಿಚಾರದಲ್ಲಿ ಅಸಮಾದಾನ ವ್ಯಕ್ತಪಡಿಸಿರುವ ಎಐಎಂಐಎಂ (AIMIM) ನಾಯಕ ಅಸಾದುದ್ದೀನ್ ಓವೈಸಿ (Asaduddin Owaisi)ವಾರಣಾಸಿ ನ್ಯಾಯಾಲಯದ ಆದೇಶವನ್ನು ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ನೀಡಿದ ತೀರ್ಪಿನೊಂದಿಗೆ ಹೋಲಿಸಿದ್ದಾರೆ.

    ಅಲ್ಲದೇ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋಗಲು ಕರೆ ನೀಡಿದ್ದು, ವಾರಣಾಸಿಯ ಅಂಜುಮನ್ ಮಸೀದಿ ಸಮಿತಿಯವರು ವಾರಣಾಸಿ ಜಿಲ್ಲಾ ನ್ಯಾಯಾಲಯದ (Varanasi Court) ತೀರ್ಪಿನ ವಿರುದ್ಧ ಹೈಕೋರ್ಟ್‌ (UP HighCourt)  ಮೇಲ್ಮನವಿ ಸಲ್ಲಿಸುವ ವಿಶ್ವಾಸವಿದೆ ಎಂದು ಓವೈಸಿ ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    ಈ ಕುರಿತು ಮಾಧ್ಯಮಗಳೊಂದಿಗೆ ಅವರಿಂದು ಮಾತನಾಡಿ, ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯದ ಆದೇಶವು ಅಸ್ಥಿರಗೊಳಿಸುವ ಪರಿಣಾಮ ಬೀರುತ್ತದೆ. ಇದರಿಂದ ದೇಶದಲ್ಲಿ ಸಮಸ್ಯೆಗಳೂ ಸೃಷ್ಟಿಯಾಗುತ್ತವೆ ಎಂದು ಓವೈಸಿ ಅಭಿಪ್ರಾಯಪಟ್ಟಿದ್ದಾರೆ.

    ಈಗ ದಾವೆಗಳ ಹೂಡುವ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬೆಳವಣಿಗೆಯು ಪ್ರಸ್ತುತ ಸಮಾಜವನ್ನು 1980 ಮತ್ತು 1990ರ ದಶಕಗಳ ಹಿಂದಕ್ಕೆ ಕೊಂಡೊಯ್ಯುತ್ತದೆ. ಈ ಅವಧಿಯ ದಶಕವನ್ನು ಮರುಪ್ರವೇಶಿಸಿದರೆ ದೇಶದಲ್ಲಿ ಅಸ್ಥಿರತೆ ಉಂಟಾಗುತ್ತದೆ ಎಂದು ಓವೈಸಿ ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    ಆರಾಧನಾ ಸ್ಥಳಗಳ ಕಾಯಿಯ್ದೆಯ ಪ್ರಸ್ತುತತೆ ಏನು? (The Places of Worship Act) ಬಾಬರಿ ಮಸೀದಿ ತೀರ್ಪಿನ ಸಂದರ್ಭದಲ್ಲಿ 1947ರ ಆಗಸ್ಟ್ 15ರ ನಂತರ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಈಗ ಈ ವಿಷಯಕ್ಕೆ ಕಾಯಿದೆ ಅಡ್ಡಿಯಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

    ಬಾಬರಿ ಮಸೀದಿ ಪ್ರಕರಣದ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ. ಬಾಬರಿ ಮಸೀದಿಯ ತೀರ್ಪು ಬಂದಾಗ, ನಂಬಿಕೆಯ ಆಧಾರದ ಮೇಲೆ ಈ ತೀರ್ಪು ನೀಡಿದ್ದರಿಂದ ದೇಶದಲ್ಲಿ ಸಮಸ್ಯೆಗಳು ಉಂಟಾಗುತ್ತವೆ ಎಂದು ಎಲ್ಲರಿಗೂ ಎಚ್ಚರಿಸಿದ್ದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಪ್ರಕರಣ: ಇಂದು ಕೋರ್ಟ್ ತೀರ್ಪು – ವಾರಣಾಸಿಯಲ್ಲಿ ಬಿಗಿಭದ್ರತೆ

    ಜ್ಞಾನವಾಪಿ ಪ್ರಕರಣ: ಇಂದು ಕೋರ್ಟ್ ತೀರ್ಪು – ವಾರಣಾಸಿಯಲ್ಲಿ ಬಿಗಿಭದ್ರತೆ

    ವಾರಣಾಸಿ: ಜ್ಞಾನವಾಪಿ ಮಸೀದಿಯ (Gyanvapi Masjid) ಆವರಣದಲ್ಲಿ ಇದೆ ಎನ್ನಲಾದ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದಿಯೇ, ಇಲ್ಲವೇ ಎನ್ನುವ ಬಗ್ಗೆ ವಾರಣಾಸಿ (Varanasi) ಜಿಲ್ಲಾ ನ್ಯಾಯಲಯ ಇಂದು ತೀರ್ಪು (Verdict) ನೀಡಲಿದೆ.

    GYANVAPI MOSQUE (1)

    ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕೋಮು ಸೂಕ್ಷ್ಮ ಪ್ರಕರಣದ ಆದೇಶವನ್ನು ಸೆಪ್ಟೆಂಬರ್ 12 ರವರೆಗೆ ಕಾಯ್ದಿರಿಸಿದ್ದರು. ಇದಕ್ಕೂ ಮುನ್ನ ಜ್ಞಾನವ್ಯಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್‍ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲೆ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು. ಮಸೀದಿಯ ಜಾಗದಲ್ಲಿ ಮಂದಿರಾ ಇದೆ ಎಂದು ಕೆಲವರು ವಾದಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಈ ನಡುವೆ ಐವರು ಮಹಿಳೆಯರು ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರ್ಟ್ ಮೇಟ್ಟಿಲೇರಿದ್ದರು. ಪ್ರಕರಣ ಗಂಭೀರವಾಗಿರುವ ಹಿನ್ನಲೆ ಸುಪ್ರೀಂಕೋರ್ಟ್ (Supreme Court) ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆ ನಡೆಸಲು ಸೂಚಿಸಿತ್ತು. ಈ ಐದು ಮಂದಿ ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಇದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಮಸೀದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಈ ಮಹಿಳೆಯರು ಸಲ್ಲಿರುವ ಅರ್ಜಿ ವಿಚಾರಣೆಗೆ ಯೋಗ್ಯವಾಗಿದಿಯೇ ಇಲ್ಲವೇ ಎನ್ನುವ ಬಗ್ಗೆ ಕೋರ್ಟ್ ಮೊದಲು ವಿಚಾರಣೆ ನಡೆಸಿತ್ತು, ಇಂದು ಈ ಬಗ್ಗೆ ಕೋರ್ಟ್ ಮೊದಲ ತೀರ್ಪು ನೀಡುತ್ತಿದೆ. ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿದ್ದಲ್ಲಿ ಮಾತ್ರ ಕೋರ್ಟ್ ಪೂಜೆಗೆ ಅವಕಾಶ ನೀಡಬೇಕಾ ಎನ್ನುವ ಅರ್ಜಿಯ ವಿಚಾರಣೆ ನಡೆಸಲಿದೆ.

    ಈ ಹಿಂದೆ ಏನಾಗಿತ್ತು:
    ಮುಸ್ಲಿಮರ ಪರ ವಾದ ಮಂಡಿಸಿದ ವಕೀಲರು 1991ರ ವಿಶೇಷ ಪೂಜಾ ಸ್ಥಳ ಕಾಯ್ದೆಯನ್ನು ಪ್ರಮುಖವಾಗಿ ವಿಚಾರಣೆ ವೇಳೆ ಉಲ್ಲೇಖಿಸಿದ್ದರು. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ದೇಶದ ಯಾವುದೇ ಧಾರ್ಮಿಕ ಸ್ಥಳದಲ್ಲಿ ಸದ್ಯ ಚಾಲ್ತಿಯಲ್ಲಿ ಇರುವ ಯಾವುದೇ ಧರ್ಮದ ಆಚರಣೆಯ ಧಾರ್ಮಿಕ ಸ್ವರೂಪವನ್ನು ಬದಲಿಸುವಂತಿಲ್ಲ. 1947ರ ಆಗಸ್ಟ್ 15ರ ನಂತರ ಯಾವ ಧಾರ್ಮಿಕ ಸ್ಥಳದಲ್ಲಿ ಯಾವ ಧರ್ಮದ ಆಚರಣೆ ಇತ್ತೋ, ಅದೇ ಆಚರಣೆ ಮುಂದೆಯೂ ನಿರಂತರವಾಗಿ ಮುಂದುವರೆಯಬೇಕು. ಈ ಕಾಯಿದೆಯ ಅನ್ವಯ ಜ್ಞಾನವ್ಯಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಸಾಧ್ಯವಿಲ್ಲ. ಜ್ಞಾನವ್ಯಾಪಿ ಮಸೀದಿ 16-17 ಶತಮಾನದ ಪುರಾತನ ಧಾರ್ಮಿಕ ಪ್ರದೇಶವಾಗಿರುವ ಈ ಹಿನ್ನಲೆ ಈ ನಿಯಮ ಅನ್ವಯವಾಗಲಿದೆ. ಒಂದು ವೇಳೆ ಪೂಜೆಗೆ ಅವಕಾಶ ನೀಡಿದ್ದಲ್ಲಿ ದೇಶದಲ್ಲಿ ಇಂತಹ ಹತ್ತಾರು ವಿವಾದಾತ್ಮಕ ಪ್ರದೇಶಗಳಲ್ಲೂ ಪೂಜೆ ಅವಕಾಶ ಕೇಳುವ ಸಾಧ್ಯತೆಗಳಿರುತ್ತದೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ವಝುಖಾನದಲ್ಲಿ ಪತ್ತೆಯಾಗಿರುವುದು ನೀರಿನ ಕಾರಂಜಿ ಮತ್ತು ಅಲ್ಲಿ ಯಾವುದೇ ಶೃಂಗಾರ ಗೌರಿ ಮೂರ್ತಿಗಳಿಲ್ಲ, ಅದು ಹಳೆಯ ವಾಸ್ತು ಶಿಲ್ಪ ಶೈಲಿಯಾಗಿದೆ ಎಂದು ವಾದ ಮಂಡಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್

    ಸೂಕ್ಷ್ಮ ವಿಚಾರವಾಗಿರುವ ಜ್ಞಾನವಾಪಿ ಮಸೀದಿ ವಿಚಾರದಲ್ಲಿ ವಾರಣಾಸಿಯ ಜಿಲ್ಲಾ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟ ಮಾಡಲಿದೆ. ಈ ಕಾರಣಕ್ಕಾಗಿ ಇಡೀ ನಗರದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಿಶ್ರ ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯುಲ್ಲಿ ನಿಯೋಜನೆಯಾಗಿದೆ. ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಮಸೀದಿ ವಿವಾದ – ಇಂದು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

    ಜ್ಞಾನವಾಪಿ ಮಸೀದಿ ವಿವಾದ – ಇಂದು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

    ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಕೈಬಿಡುವಂತೆ ಹಾಗೂ ಸಿವಿಲ್ ನ್ಯಾಯಾಲಯ ನಿರ್ದೇಶನ ಮೇರೆಗೆ ನಡೆಸಲಾಗಿರುವ ವಿಡಿಯೋಗ್ರಫಿ ಸರ್ವೆಯನ್ನು ಅನೂರ್ಜಿತಗೊಳಿಸುವಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ವಿಚಾರಣೆ ನಡೆಸಲಿದೆ.

    ನ್ಯಾ. ಅಜಯ್ ಕೃಷ್ಣ ವಿಶ್ವೇಶ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಎರಡು ದಿನಗಳ ಹಿಂದೆ ಮಧ್ಯಂತರ ಆದೇಶ ನೀಡಿದ್ದ ಕೋರ್ಟ್, ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ಮೊದಲು ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. ಇದನ್ನೂ ಓದಿ: ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

    ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಐದು ಮಂದಿ ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮಸೀದಿ ಆಡಳಿತ ಮಂಡಳಿ 1991 ರ ಪೂಜಾ ಸ್ಥಳಗಳ ನಿರ್ಬಂಧ ಕಾಯಿದೆ ಮತ್ತು ಆದೇಶ 7 ನಿಯಮ 11 ರ ಉಲ್ಲಂಘನೆಯಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು. ನಿಯಮಗಳ ಪ್ರಕಾರ ಸ್ವಾತಂತ್ರ್ಯದ ನಂತರ ಧಾರ್ಮಿಕ ಪ್ರದೇಶಗಳ ರಚನೆ ಧಕ್ಕೆ ತರಬಾರದು ಮತ್ತು ಅದು ಇರುವ ಸ್ಥಿತಿಯಲ್ಲಿ ಮುಂದುವರಿಸಬೇಕು. ಆದರೆ ನಿಯಮ ಬಾಹಿರವಾಗಿ ಸಿವಿಲ್ ಕೋರ್ಟ್ ವಿಡಿಯೋ ಸರ್ವೆಗೆ ಅನುಮತಿ ನೀಡಿದೆ. ಹೀಗಾಗಿ ವೀಡಿಯೋ ಸರ್ವೆಯನ್ನು ಪರಿಗಣಿಸಬಾರದು ಮತ್ತು ಪೂಜೆಗೆ ಅವಕಾಶ ಕಲ್ಪಿಸಬಾರದು ಎಂದು ವಾದ ಮಂಡಿಸಿದ್ದರು.

    ಅಲ್ಲದೇ ಪ್ರಕರಣದಲ್ಲಿ 1991 ರ ಕಾಯಿದೆ ಅನ್ವಯ ಆಗುವ ಬಗ್ಗೆ‌ ಮೊದಲು ತೀರ್ಮಾನ ಆಗಬೇಕು ಎಂದು ಒತ್ತಾಯಿಸಿದ್ದರು‌. ಇದಕ್ಕೆ ಒಪ್ಪಿರುವ ಕೋರ್ಟ್ ಇಂದಿನಿಂದ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸಲಿದೆ. ಈ ನಡುವೆ ಇಡೀ ಮಸೀದಿಯನ್ನು ಕೆಡವಿ ಆ ಪ್ರದೇಶವನ್ನು ದೇವಸ್ಥಾನದ ಸಪರ್ದಿಗೆ ನೀಡಬೇಕು ಹಾಗೂ ವಿವಾದಿತ ಪ್ರದೇಶದಲ್ಲಿ ಮುಸ್ಲಿಮರಿಗೆ ಪ್ರವೇಶ ನೀಡದಂತೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಕೆಯಾಗಿದೆ. ಮುಸ್ಲಿಮರ ಪ್ರವೇಶ ನಿಷೇಧ ಕೋರಿ ತುರ್ತು ವಿಚಾರಣೆಗೆ ತ್ವರಿತ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ವಂದೇ ಮಾತರಂಗೆ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಅಶ್ವಿನಿ ಉಪಾಧ್ಯಾಯ ವಿರುದ್ಧ ‘ಹೈ’ ಗರಂ

  • ಜ್ಞಾನವಾಪಿ ಮಸೀದಿ ವಿವಾದ – ವಾರಣಾಸಿ ಕೋರ್ಟ್‌ ವಿಚಾರಣೆಗೆ ಸುಪ್ರೀಂ ತಡೆ

    ಜ್ಞಾನವಾಪಿ ಮಸೀದಿ ವಿವಾದ – ವಾರಣಾಸಿ ಕೋರ್ಟ್‌ ವಿಚಾರಣೆಗೆ ಸುಪ್ರೀಂ ತಡೆ

    ನವದೆಹಲಿ: ಕಾಶಿ ವಿಶ್ವನಾಥ್‌ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ಸಿವಿಲ್‌ ಕೋರ್ಟ್‌ ನಡೆಸುತ್ತಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

    ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯ ಆವರಣದಲ್ಲಿ ವೀಡಿಯೋಗ್ರಫಿ ಸರ್ವೆಗೆ ಆದೇಶ ನೀಡಿದ ವಾರಣಾಸಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಇಂದು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. ಅಂಜುಮನ್ ಇಂತೇಜಾಮೀಯ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿತು. ಇದನ್ನೂ ಓದಿ: ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ

    SUPREME COURT

    ವಿಚಾರಣೆ ವೇಳೆ ವಾದ ಮಂಡಿಸಿದ ಹಿಂದೂಪರ ಸಂಘಟನೆಗಳ ವಕೀಲರು, ವಾರಣಾಸಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿದಾರರ ಪರ ವಕೀಲರು ಅನಾರೋಗ್ಯಕ್ಕೀಡಾಗಿದ್ದು ನಿನ್ನೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಾಳೆ ಅವರು ಕೋರ್ಟ್‌ಗೆ ಹಾಜರಾಗಲಿದ್ದು, ನಾಳೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸಿ ಎಂದು ಮನವಿ ಮಾಡಿದರು.

    ಈ ವೇಳೆ ಮಧ್ಯಪ್ರದೇಶ ಮಾಡಿದ ಮಸೀದಿ ಪರ ವಕೀಲರು, ವಾರಣಾಸಿ ಸಿವಿಲ್ ಕೋರ್ಟ್‌ನಲ್ಲಿ ಮಸೀದಿಯ ಗೋಡೆ ಕೆಡವಿ ಉತ್ಕನನ ನಡೆಸಲು ಮತ್ತು ವಝುಖಾನ ಕೆಳಭಾಗದಲ್ಲಿ ಪರಿಶೀಲನೆ ನಡೆಸಲು ಸೂಚನೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿಗಳು ವಿಚಾರಣೆಗೆ ಬರಲಿದೆ. ಇಂದು ಟ್ರಯಲ್ ಕೋರ್ಟ್ ಈ ಬಗ್ಗೆ ಆದೇಶ ನೀಡುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ

    ವಾದ ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ನಾಳೆ ಈ ಬಗ್ಗೆ ವಿಚಾರಣೆ ನಡೆಸಲಾವುದು ಅಲ್ಲಿಯವರೆಗೂ ವಾರಣಾಸಿ ಸಿವಿಲ್ ಕೋರ್ಟ್‌ಗೆ ಅರ್ಜಿದಾರರು ಹೋಗದಂತೆ ಹಾಗೂ ಆದೇಶಕ್ಕಾಗಿ ಕೋರ್ಟ್‌ಗೆ ಒತ್ತಾಯಿಸಿದಂತೆ ತಿಳಿಸಲು ಸೂಚನೆ ನೀಡಿತು. ಅಲ್ಲದೇ ಈ ಸಂಬಂಧ ಯಾವುದೇ ಆದೇಶಗಳನ್ನು ನೀಡದಂತೆ ಸಿವಿಲ್ ಕೋರ್ಟ್‌ಗೂ ಸೂಚನೆ ನೀಡಿತು.

    ಈ ಹಿಂದೆ ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್, ಪತ್ತೆಯಾಗಿರುವ ಶಿವಲಿಂಗವನ್ನು ಸಂರಕ್ಷಣೆ ಮಾಡಬೇಕು. ಈ ಭಾಗದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು ಎಂದು ಸೂಚಿಸಿ ಮಸೀದಿಯ ಭಾಗದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ

  • ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    ಲಕ್ನೋ: ವಾರಣಾಸಿ ನ್ಯಾಯಾಲಯವು ಇತ್ತೀಚಿಗೆ ಜ್ಞಾನವ್ಯಾಪಿ ಮಸೀದಿ ಸಂಕೀರ್ಣ ವೀಡಿಯೋ ಗ್ರಾಫಿಕ್ ಸಮೀಕ್ಷೆಗೆ ಆದೇಶ ನೀಡಿದೆ. ಇದು ಕಾಂಗ್ರೆಸ್ ಹಾಗೂ ಆಡಳಿತ ಪಕ್ಷ ಬಿಜೆಪಿ ನಡುವೆ ವಾಕ್ಸಮರ ಕಾರಣವಾಗಿದೆ. ಈ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಂಗೀತ್ ಸೋಮ್ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

    Sangeet som

    ವಾರಾಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲೇ ಇರುವ ಜ್ಞಾನವಾಪಿ ಮಸೀದಿಯನ್ನು ಬಾಬ್ರಿ ಮಸೀದಿಯಂತೆ ಕೆಡವಲಾಗುವುದು. ಅಂತಹ ಯಾವುದೇ ಮಸೀದಿಯನ್ನು ಬಿಡುವುದಿಲ್ಲ. ಎಲ್ಲವನ್ನೂ ಕೆಡವುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದು ಮದುವೆ ಅಂದಾಗ ಮನೆಯಿಂದ ಹೊರಹಾಕ್ದ!

    ಮೀರತ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಸಂಗೀತ್ ಸೋಮ್, 1992ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಈಗ ಜ್ಞಾನವ್ಯಾಪಿ ಮಸೀದಿಯ ಸರದಿ. 2022ರಲ್ಲಿ ನಾವು ಈ ಮಸೀದಿಯನ್ನು ಕೆಡವುತ್ತೇವೆ ಎಂದಿದ್ದಾರೆ.

    Sangeet som (1)

    ಮುಸ್ಲಿಂ ದಾಳಿಕೋರರು ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ್ದಾರೆ. ಅದನ್ನು ಹಿಂಪಡೆಯುವ ಸಮಯ ಈಗ ಬಂದಿದೆ. ಬಾಬರಿ ಮಸೀದಿ ಕೆಡವಿದ ದಿನವೇ ಮುಸ್ಲಿಮರಿಗೆ ಇದು ಗೊತ್ತಿರಬೇಕಿತ್ತು. ದೇಶವು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ಅವರಿಗೆ ತಿಳಿದಿರಬೇಕಿತ್ತು. ನಾವು ಅಂತಹ ಯಾವುದೇ ಮಸೀದಿಯನ್ನು ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎರಡೇ ದಿನದಲ್ಲಿ ಸಿಕ್ಸ್ ಪ್ಯಾಕ್ – ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

    ಇದು 1992ರ ಯುಗವಲ್ಲ, 2022ರ ಯುಗ ದೇಶದ ಯುವಶಕ್ತಿ ಅಂದಿಗಿಂತಲೂ 2 ಪಟ್ಟು ಹೆಚ್ಚಾಗಿದೆ. ಜೊತೆಗೆ ಇದು ಮತ್ತೊಂದು ನಿರ್ಧಾರ ಕೈಗೊಳ್ಳಲು ಉತ್ತಮ ನಿರ್ಧಾರ ಎಂದು ಕರೆ ನೀಡಿದ್ದಾರೆ.

    bjp mla sangeet som

    ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಸುರೇಂದ್ರ ರಜಪೂತ್, ಸಮಾಜದಲ್ಲಿ ಅಶಾಂತಿ ಮತ್ತು ವಿಭಜನೆಯನ್ನು ಸೃಷ್ಟಿಸಲು ಇದು ಬಿಜೆಪಿಯ ನಿಖರವಾದ ಗೇಮ್‌ಪ್ಲಾನ್. ಅದಕ್ಕಾಗಿಯೇ ಜ್ಞಾನವ್ಯಾಪಿ ಹಾಗೂ ತಾಜ್‌ಮಹಲ್ ವಿಷಯವನ್ನು ಎತ್ತಲಾಗಿದೆ. ಇಂತಹ ಹೇಳಿಕೆಗಳಿಂದ ಸಮಾಜಕ್ಕೆ ಹಾನಿಯಾಗುತ್ತಿದೆ. ನಾವು ಈಗಾಗಲೇ ತುಂಬಾ ಅಪಾಯಕಾರಿ ಸನ್ನಿವೇಶಕ್ಕೆ ಹೋಗುತ್ತಿದ್ದೇವೆ ಎಂಬುದನ್ನು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದಿದ್ದಾರೆ.