Tag: Varsha Raut

  • ಇಡಿ ವಿಚಾರಣೆಗೆ ಹಾಜರಾದ ಸಂಜಯ್ ರಾವತ್ ಪತ್ನಿ ವರ್ಷಾ

    ಇಡಿ ವಿಚಾರಣೆಗೆ ಹಾಜರಾದ ಸಂಜಯ್ ರಾವತ್ ಪತ್ನಿ ವರ್ಷಾ

    ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜತ್ ರಾವರ್ ಅವರ ಪತ್ನಿ ವರ್ಷಾ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ್ದ ಹಿನ್ನೆಲೆ ಶನಿವಾರ ಬೆಳಗ್ಗೆ ವರ್ಷಾ ರಾವತ್ ಇಡಿ ಕಚೇರಿಗೆ ಆಗಮಿಸಿದ್ದಾರೆ.

    2 ದಿನಗಳ ಹಿಂದೆ ಮುಂಬೈನ ವಿಶೇಷ ನ್ಯಾಯಾಲಯ ಸಂಜಯ್ ರಾವತ್ ಅವರ ಇಡಿ ಕಸ್ಟಡಿಯನ್ನು ಆಗಸ್ಟ್ 8ರ ವರೆಗೆ ವಿಸ್ತರಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವರ್ಷಾ ರಾವತ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಇದನ್ನೂ ಓದಿ: ಪ್ರತಿ ಮಗುವಿಗೆ ಶಿಕ್ಷಣ, ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತದ ನಿರ್ಮಾಣವಾಗದು: ಕೇಜ್ರಿವಾಲ್

    4 ತಿಂಗಳ ಹಿಂದೆ ಮುಂಬೈನ ಗೊರೆಗಾಂವ್‌ನಲ್ಲಿರುವ ಪಾತ್ರಾ ಚಾವ್ಲ್‌ನ ಮರು ಅಭಿವೃದ್ಧಿಯಲ್ಲಿ 1,000 ಕೋಟಿ ರೂ. ಹಗರಣ ಮಾಡಿರುವುದಾಗಿ ಆರೋಪಿಸಿರುವ ಇಡಿ ವರ್ಷಾ ರಾವತ್ ಹಾಗೂ ಸಂಜಯ್ ರಾವತ್ ಅವರ ಇಬ್ಬರು ಸಹಚರರಿಂದ 11 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಇದನ್ನೂ ಓದಿ: ಸಿದ್ದರಾಮೋತ್ಸವ ನಂತರ ಮುನಿಸು ಮರೆತು ಒಂದಾದ ಸಿದ್ದು, ಡಿಕೆ – ಜಂಟಿ ರೋಡ್ ಶೋ

    ಇಡಿ ಅಧಿಕಾರಿಗಳು ಸಂಜಯ್ ರಾವತ್ ಅವರನ್ನು ಬಂಧಿಸಿರುವ ಹಿನ್ನೆಲೆ ತಮ್ಮನ್ನು ಕಿಟಕಿಯಿಲ್ಲದ, ಉಸಿರಾಡಲು ಕಷ್ಟವಾದ ಕೋಣೆಯೊಳಗೆ ಇರಿಸಿದ್ದಾರೆ ಎಂದು ರಾವತ್ ನ್ಯಾಯಾಲಯದ ಮುಂದೆ ದೂರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭೂ ಹಗರಣ ಪ್ರಕರಣ – ಸಂಜಯ್ ರಾವತ್ ಪತ್ನಿಗೆ ಇಡಿ ಸಮನ್ಸ್

    ಭೂ ಹಗರಣ ಪ್ರಕರಣ – ಸಂಜಯ್ ರಾವತ್ ಪತ್ನಿಗೆ ಇಡಿ ಸಮನ್ಸ್

    ಮುಂಬೈ: ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಪತ್ನಿ ವರ್ಷಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಸಮನ್ಸ್ ಜಾರಿ ಮಾಡಿದೆ.

    ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನು ಹಣಕಾಸು ತನಿಖಾ ಸಂಸ್ಥೆ ಭಾನುವಾರ ಬಂಧಿಸಿತ್ತು. ಇದರ ಬೆನ್ನಲ್ಲೇ ಇಡಿ ಸಂಜಯ್ ರಾವತ್ ಅವರ ಪತ್ನಿಗೆ ಸಮನ್ಸ್ ಜಾರಿಗೊಳಿಸಿದೆ. ಇದನ್ನೂ ಓದಿ: ತೈವಾನ್ ಮೇಲೆ ಚೀನಾದಿಂದ ಕ್ಷಿಪಣಿ ದಾಳಿ

    ಪಿಎಂಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವರ್ಷ ರಾವತ್ ಅವರನ್ನು ಈ ವರ್ಷದ ಜನವರಿ ತಿಂಗಳಿನಲ್ಲಿ ಪ್ರಶ್ನಿಸಿತ್ತು. ಇದೀಗ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಕರೆದಿದೆ. ಇದನ್ನೂ ಓದಿ: 750 ಶಾಲಾ ವಿದ್ಯಾರ್ಥಿನಿಯರಿಂದ ತಯಾರಾಯ್ತು ಆಜಾದಿ ಸ್ಯಾಟಲೈಟ್

    ಸಂಜಯ್ ಕಸ್ಟಡಿ ವಿಸ್ತರಣೆ:
    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ರಾವತ್ ಅವರ ಇಡಿ ಕಸ್ಟಡಿಯನ್ನು ಮುಂಬೈ ನ್ಯಾಯಾಲಯ ಆಗಸ್ಟ್ 8 ರವರೆಗೆ ವಿಸ್ತರಿಸಿದೆ. ಇಡಿ ತನಿಖೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವ ಹಿನ್ನೆಲೆ ನ್ಯಾಯಾಲಯ ಕಸ್ಟಡಿ ವಿಸ್ತರಣೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]