Tag: varun singh passes away

  • ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

    ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

    ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು.

    ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರನ್ನು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಜೀವನ್ಮರಣ ಹೋರಾಟ ನಡೆಸುತ್ತಿರುವ ವರುಣ್ ಸಿಂಗ್ ಬರೆದಿದ್ದ ಸ್ಫೂರ್ತಿದಾಯಕ ಪತ್ರ ವೈರಲ್

    ವರುಣ್ ಸಿಂಗ್ 95% ಕ್ಕೂ ಹೆಚ್ಚು ಸುಟ್ಟ ಗಾಯಗಳೊಂದಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವರುಣ್ ಸಿಂಗ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ‌ ಏರ್‌ಲಿಫ್ಟ್ ಮೂಲಕ ಅವರನ್ನು ಕರೆ ತರಲಾಗಿತ್ತು.

    ವರುಣ್‌ ಸಿಂಗ್‌ ಅವರ ನಿಧನಕ್ಕೆ ಭಾರತೀಯ ವಾಯುಪಡೆ ತೀವ್ರ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ – ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ

    ಶೌರ್ಯ ಚಕ್ರ
    ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಈ ವರ್ಷದ ಸ್ವಾತಂತ್ರ್ಯ ದಿನದಂದು 2020 ರಲ್ಲಿ ವೈಮಾನಿಕ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಎಲ್‍ಸಿಎ ತೇಜಸ್ ಯುದ್ಧ ವಿಮಾನವನ್ನು ಸಮರ್ಥವಾಗಿ ಲ್ಯಾಂಡಿಂಗ್ ಮಾಡಿ ಅದರಲ್ಲಿದ್ದ ಯೋಧರ ಪ್ರಾಣ ಉಳಿಸಿದಕ್ಕಾಗಿ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗಿತ್ತು. ಲೈಟ್ ಕಾಂಬ್ಯಾಟ್ ಏರ್‍ಕ್ರಾಫ್ಟ್ ಸ್ಕ್ವಾಡ್ರನ್‍ನಲ್ಲಿ ಪೈಲಟ್ ಆಗಿದ್ದ ವಿಂಗ್ ಕಮಾಂಡರ್ ವರುಣ್ ಸಿಂಗ್, ಅವರ ಅಸಾಧಾರಣ ಶೌರ್ಯಕ್ಕಾಗಿ ಭಾರತದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯನ್ನು ಈ ವರ್ಷದ ಆಗಸ್ಟ್ 15 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೀಡಿ ಗೌರವಿಸಿದ್ದರು.