Tag: Varun

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕಾವ್ಯ ಶಾ-ನಿರ್ಮಾಪಕ ವರುಣ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕಾವ್ಯ ಶಾ-ನಿರ್ಮಾಪಕ ವರುಣ್

    ಸ್ಯಾಂಡಲ್‌ವುಡ್ ನಟಿ ಕಾವ್ಯ ಶಾ ಕೊನೆಗೂ ಹಸೆಮಣೆ ಏರಿದ್ದಾರೆ. ಇಂದು ಗುರುಹಿರಿಯರ ಸಮ್ಮುಖದಲ್ಲಿ ಕಾವ್ಯ ಶಾ ಮತ್ತು ವರುಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾವಿ ಪತಿ ತಂದೆಯ ಅಕಾಲಿಕ ಮರಣದಿಂದ ಮದುವೆಯನ್ನು ಮುಂದೂಡಲಾಗಿತ್ತು. ಇದೀಗ ಈ ಜೋಡಿ ಹಸೆಮಣೆ ಏರಿದ್ದಾರೆ.

    ಕಿರುತೆರೆ ಮತ್ತು ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ ಕಾವ್ಯ ಶಾ ಎರಡು ಬಾರಿ ಮದುವೆ ಮುಂದೂಡಲಾಗಿತ್ತು. ಇಂದು ಕಾವ್ಯ ಮತ್ತು ನಿರ್ಮಾಪಕ ವರುಣ್ ಹಸೆಮಣೆ ಏರಿದ್ದಾರೆ. ಪುನೀತ್ ರಾಜ್‌ಕುಮಾರ್ ಜತೆ ಒಳ್ಳೆಯ ಒಡನಾಟ ಹೊಂದಿದ್ದ ವರುಣ್, ಪುನೀತ್ ಅಕಾಲಿಕ ನಿಧನದ ನಿಮಿತ್ತ ಮದುವೆ ಮುಂದೂಡಲಾಗಿತ್ತು. ಬಳಿಕ ಏಪ್ರಿಲ್ 18ರಂದು ಕಾವ್ಯ ಮತ್ತು ವರುಣ್ ಮದುವೆ ನಿಶ್ಚಯವಾಗಿತ್ತು. ಮದುವೆ ಹಿಂದಿನ ದಿನ ವರುಣ್ ತಂದೆ ಅಕಾಲಿಕ ನಿಧನದಿಂದ ಮತ್ತೆ ಮದುವೆ ಮುಂದೂಡಲಾಗಿತ್ತು. ಇದನ್ನೂ ಓದಿ: ಶ್ರದ್ಧಾ ಶ್ರೀನಾಥ್ ಗುಡ್ ಬೈ ಹೇಳಿದ್ದು ಯಾಕೆ.?

    ಕಾವ್ಯ ಶಾ ಮತ್ತು ನಿರ್ಮಾಪಕ ವರುಣ್ ಇಂದು (ಜೂ.9) ಬೆಂಗಳೂರಿನ ನಂದಿ ಗ್ರೌಂಡ್ಸ್‌ನಲ್ಲಿ ಗುರು ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ಆಗಿದ್ದಾರೆ. ಮದುವೆಗೆ ಲೂಸ್ ಮಾದ ಯೋಗಿ ಅವರು ಕೂಡ ಬಂದು ಶುಭ ಹಾರೈಸಿದ್ದಾರೆ. ಸಾಕಷ್ಟು ಚಿತ್ರರಂಗದ ಗಣ್ಯರು ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಿ ಶುಭಹಾರೈಸಿದ್ದಾರೆ. ಒಟ್ನಲ್ಲಿ ಈ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ.

  • ಭಾವಿ ಪತಿಯ ತಂದೆ ನಿಧನ: ನಟಿ ಕಾವ್ಯ ಶಾ ಮದುವೆ ಮುಂದೂಡಿಕೆ

    ಭಾವಿ ಪತಿಯ ತಂದೆ ನಿಧನ: ನಟಿ ಕಾವ್ಯ ಶಾ ಮದುವೆ ಮುಂದೂಡಿಕೆ

    ಅಂದುಕೊಂಡಂತೆ ಆಗಿದ್ದರೆ ಇಂದು (ಏ.18) ನಟಿ ಕಾವ್ಯ ಶಾ ಮತ್ತು ಬಹುಕಾಲದ ಸ್ನೇಹಿತ ವರುಣ್ ವಿವಾಹ ಮಹೋತ್ಸವ ಇಂದು ನಡೆಯಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ನಂದಿ ಗ್ರೌಂಡ್ಸ್ ಸಿದ್ಧಗೊಂಡಿತ್ತು. ಆದರೆ, ರವಿವಾರ ರಾತ್ರಿ ಭಾವಿ ಮಾವ ಅಕಾಲಿಕ ಮರಣ ಹೊಂದಿದ್ದಾರೆ. ಹಾಗಾಗಿ ಕಾವ್ಯ ಶಾ ಅವರ ಮದುವೆಯನ್ನು ಮುಂದೂಡಲಾಗಿದೆ. ಇದನ್ನೂ ಓದಿ : ನಾನೇಕೆ ಡ್ರಗ್ಸ್ ತಗೆದುಕೊಳ್ಳುತ್ತಿದ್ದೆ? ಅಸಲಿ ಕಾರಣ ಬಿಚ್ಚಿಟ್ಟ ಸಂಜಯ್ ದತ್

    ವರುಣ್ ಮತ್ತು ಕಾವ್ಯ ಶಾ ಈ ಹಿಂದೆಯೇ ಹಸೆಮಣೆ ಏರಬೇಕಿತ್ತು. ಆರು ತಿಂಗಳ ಹಿಂದೆಯೇ ಮನೆಯಲ್ಲಿ ಮದುವೆ ನಿಶ್ಚಿಯವಾಗಿತ್ತು. ಆ ವೇಳೆಯಲ್ಲಿ ಪುನೀತ್ ರಾಜ್ ಕುಮಾರ್ ನಿಧನರಾದರು. ಪುನೀತ್ ಅವರಿಗೆ ಆಪ್ತರಾಗಿದ್ದ ವರುಣ್, ಆ ನೋವಿನಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಕೊಳ್ಳಲಿಲ್ಲ. ಹಾಗಾಗಿ ಅಂದು ಕೂಡ ಈ ಜೋಡಿಯ ಮದುವೆ ಮುಂದೂಡಲಾಗಿತ್ತು. ಇದನ್ನೂ ಓದಿ : ‘ದಿ ಡೆಲ್ಲಿ ಫೈಲ್ಸ್’ : 1984ರ ಗಲಭೆಯೇ ಕಥಾವಸ್ತು ಎಂದ ವಿವೇಕ್ ಅಗ್ನಿಹೋತ್ರಿ

    ವರುಣ್ ಮತ್ತು ಮತ್ತು ಕಾವ್ಯ ಶಾ ಆತ್ಮಿಯ ಸ್ನೇಹಿತರು. ಸ್ನೇಹವೇ ಪ್ರೀತಿಗೆ ತಿರುಗಿತ್ತು. ಹಲವು ವರ್ಷಗಳ ಕಾಲ ಪ್ರೇಮಿಗಳಾಗಿದ್ದವರು ಇದೀಗ ಸಪ್ತಪದಿ ತುಳಿಯಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ವಿಧಿಯಾಟ ಬೇರೆಯೇ ಆಟವಾಡಿದೆ. ಸಂಭ್ರಮ ತುಂಬಿದ್ದ ಮನೆಗಳಲ್ಲಿ ಶೋಕ ಆವರಿಸಿಕೊಂಡಿದೆ. ಇದನ್ನೂ ಓದಿ : ಅಜ್ಞಾತವಾಸಿಯಾದ ರಂಗಾಯಣ ರಘು ಮತ್ತು ಪಾವನಾ

    ಇಂದು ವರುಣ್ ಅವರ ತಂದೆಯ ಅಂತ್ಯಕ್ರಿಯೆ ನಡೆಯಲಿದ್ದು, ನಂತರದ ದಿನಗಳಲ್ಲಿ ಮದುವೆ ದಿನಾಂಕವನ್ನು ತಿಳಿಸುವುದಾಗಿ ಕಾವ್ಯ ಶಾ ಮತ್ತು ವರುಣ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಲು ಅವರು ಮನವಿ ಮಾಡಿಕೊಂಡಿದ್ದಾರೆ.

  • ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ

    ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ

    ನ್ನಡ, ತಮಿಳು ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಕಾವ್ಯ ಶಾ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರೆ. ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳೆಯನನ್ನೇ ಅವರು ಬಾಳ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಏಪ್ರಿಲ್ ಎರಡನೇ ವಾರದಲ್ಲಿ ಬೆಂಗಳೂರಿನಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. ಇದನ್ನೂ ಓದಿ : ಬೆಳಗಾವಿ ಭಾಗದ ದಿಟ್ಟ ಅಧಿಕಾರಿಯ ಪಾತ್ರದಲ್ಲಿ ಧನಂಜಯ್

    ಕಾವ್ಯ ಶಾ ಮದುವೆ ಆಗುತ್ತಿರುವ ಹುಡುಗ ವರುಣ್. ಮಾಧ್ಯಮ ಕ್ಷೇತ್ರದಲ್ಲೇ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಜತೆಗೆ ಕನ್ನಡದ ಬಹುತೇಕ ಸ್ಟಾರ್ ನಟರ ಜತೆ ಇವರಿಗೆ ಒಡನಾಟವಿದೆ. ಜೀ ಕನ್ನಡ ವಾಹಿನಿ ಸೇರಿದಂತೆ ಕನ್ನಡದ ನಾನಾ ವಾಹಿನಿಗಳ ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿದ್ದಾರೆ ವರುಣ್. ಇದನ್ನೂ ಓದಿ : Exclusive – ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಕಾವ್ಯ ಶಾ ಮತ್ತು ವರುಣ್ ಭೇಟಿಯಾಗಿದ್ದು ಹತ್ತು ವರ್ಷಗಳ ಹಿಂದೆ ನಡೆದ ಫ್ಯಾಶನ್ ಶೋನಲ್ಲಿ. ಆಗ ಕಾವ್ಯ ಆ ಶೋ ಸ್ಪರ್ಧಿ. ಅಲ್ಲಿಂದ ಶುರುವಾದ ಇಬ್ಬರ ಸ್ನೇಹ, ಆನಂತರ ಪ್ರೇಮಕ್ಕೆ ತಿರುಗಿದೆ. ಈಗ ಜತೆಯಾಗಿ ಬದುಕು ನಡೆಸಲು ಹೊರಟಿದೆ ಜೋಡಿ. ಇದನ್ನೂ ಓದಿ : ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕಾವ್ಯ ಶಾ, “ಹಲವು ವರ್ಷಗಳಿಂದ ನಾವಿಬ್ಬರೂ ಗೆಳೆಯರು. ಒಬ್ಬರಿಗೊಬ್ಬರನ್ನು ಅರ್ಥ ಮಾಡಿಕೊಂಡಿದ್ದೇವೆ. ಕುಟುಂಬದ ಒಪ್ಪಿಗೆ ಪಡೆದುಕೊಂಡು ಮದುವೆ ಆಗುತ್ತಿದ್ದೇವೆ. ಇದೊಂದು ರೀತಿಯಲ್ಲಿ ಲವ್ ಕಂ ಅರೇಂಜ್ಡ್ ಮದುವೆ’ ಎಂದರು. ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಈಗಾಗಲೇ ಮದುವೆಗೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದಾರಂತೆ ಕಾವ್ಯ. ಸದ್ಯದಲ್ಲಿಯೇ ಸ್ಯಾಂಡಲ್ ವುಡ್ ಮತ್ತು ಟಾಲಿವುಡ್  ಸಿಲಿಬ್ರಿಟಿಗಳ ಕೈಗೆ ಇವರ ಮದುವೆ ಆಹ್ವಾನ ಪತ್ರಿಕೆ ಕೈ ಸೇರಲಿದೆ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ಮೂಕಜ್ಜಿಯ ಕನಸು, ತಮಿಳಿನ ತಾರೈ ತಪ್ಪಟ್ಟೈ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಕಾವ್ಯ, ಫಿಟ್ ನೆಸ್ ಬಗ್ಗೆ ತಮ್ಮದೇ ಆದ ಸ್ಟುಡಿಯೋ ಹೊಂದಿದ್ದಾರೆ. ಈ ಮೂಲಕ ಫಿಟ್ನೆಸ್ ಮಂತ್ರವನ್ನೂ ಅವರು ಅಭಿಮಾನಿಗಳ ಜತೆ ಸದಾ ಹಂಚಿಕೊಳ್ಳುತ್ತಲೇ ಇರುತ್ತಾರೆ.

  • ಪ್ರಿಯತಮನ ಜೊತೆ ‘ಅರಗಿಣಿ’ ಖ್ಯಾತಿಯ ನಟಿ ಎಂಗೇಜ್

    ಪ್ರಿಯತಮನ ಜೊತೆ ‘ಅರಗಿಣಿ’ ಖ್ಯಾತಿಯ ನಟಿ ಎಂಗೇಜ್

    ಬೆಂಗಳೂರು: ಕಿರುತೆರೆ ನಟಿ ನವ್ಯಾ ರಾವ್ ಸದ್ಯದಲ್ಲೇ ತಮ್ಮ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ನಟಿ ನವ್ಯಾ ರಾವ್ 2013ರಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅರಗಿಣಿ’ ಸೀರಿಯಲ್‍ನಲ್ಲಿ ಅಭಿನಯಿಸಿದ್ದರು. ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿ ನಟಿ ಮೇಘನಾ ಮತ್ತು ಹರೀಶ್ ನಟಿಸಿದ್ದರು. ನೆಗೆಟಿವ್ ಪಾತ್ರದಲ್ಲಿ ಹೀರೋ ಸಿದ್ದಾರ್ಥ್ ಗರ್ಲ್‍ಫ್ರೆಂಡ್ ಆಗಿ ನವ್ಯಾ ರಾವ್, ಪೂಜಾ ಸಿಂಧ್ಯಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಿದ್ದಾರ್ಥ್ ಮತ್ತು ಖುಷಿಯ ಮಧ್ಯೆ ವಿಲನ್ ಆಗಿ ಪೂಜಾ ಸಿಂಧ್ಯಾ ತೆರೆ ಮೇಲೆ ಮಿಂಚಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ.

    ನವ್ಯಾ ಸ್ನೇಹಿತರೊಬ್ಬರ ಮದುವೆಯಲ್ಲಿ ವರುಣ್ ಎಂಬುವವರನ್ನು ಭೇಟಿ ಮಾಡಿದ್ದರು. ಅಲ್ಲಿ ಇವರಿಬ್ಬರಿಗೂ ಪರಿಚಯವಾಗಿ ಸ್ನೇಹಿತರಾಗಿದ್ದರು. ನಂತರ ವರುಣ್, ನವ್ಯಾಗೆ ಪ್ರಪೋಸ್ ಮಾಡಿದ್ದಾರೆ. ಆಗ ನವ್ಯಾ ಕೂಡ ಅವರ ಪ್ರೀತಿಯನ್ನು ಒಪ್ಪಿಕೊಂಡಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಮನೆಯಲ್ಲಿ ಪ್ರೀತಿಯ ವಿಚಾರವನ್ನು ತಿಳಿಸಿದ್ದಾರೆ. ಎರಡು ಮನೆಯವರು ಕೂಡ ಖುಷಿಯಿಂದ ಒಪ್ಪಿಕೊಂಡು ಬೇಗ ಮದುವೆ ಮಾಡಲು ನಿರ್ಧರಿಸಿದ್ದಾರೆ.

    ಅದರಂತೆಯೇ 2020 ಮಾರ್ಚ್ 18ರಂದು ಬೆಂಗಳೂರಿನ ನಂದನಾ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನವ್ಯಾ ಮತ್ತು ವರುಣ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ನಿಶ್ಚಿತಾರ್ಥದ ಫೋಟೋಗಳನ್ನು ನವ್ಯಾ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಿಶೇಷ ಅಂದರೆ ಇವರಿಬ್ಬರ ಪರಿಚಯ ಆಗಿ ಕೇವಲ 8 ತಿಂಗಳು ಕಳೆದಿದೆ. ಅಷ್ಟು ಬೇಗ ಮದುವೆಯಾಗುತ್ತಿದ್ದಾರೆ.

    ವರುಣ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಕೊರೊನಾ ವೈರಸ್ ಸಮಸ್ಯೆ ಮುಗಿದ ನಂತರ ಜೂನ್ 7 ಮತ್ತು 8ರಂದು ಬೆಂಗಳೂರಿನಲ್ಲಿಯೇ ಈ ಜೋಡಿ ಮದುವೆಯಾಗಲಿದೆ ಎಂದು ತಿಳಿದುಬಂದಿದೆ.

    ನಟಿ ನವ್ಯಾ ಮೊದಲಿಗೆ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಇದಾದ ಬಳಿಕ ಅವರಿಗೆ ‘ಅರಗಿಣಿ’ ಧಾರಾವಾಹಿಯಲ್ಲಿ ನೆಗೆಟಿವ್ ಶೇಡ್‍ನಲ್ಲಿ ಕಾಣಿಸಿಕೊಳ್ಳಲು ಅವಕಾಶ ಬಂದಿತ್ತು. ಈ ಮೂಲಕ ನವ್ಯಾ ಕಿರುತೆರೆಗೆ ಕಾಟ್ಟಿದ್ದರು. ನವ್ಯಾ ಕನ್ನಡ ಮಾತ್ರವಲ್ಲದೇ ತೆಲುಗು ಸೀರಿಯಲ್‍ನಲ್ಲೂ ಅಭಿನಯಿಸಿದ್ದಾರೆ. ಸದ್ಯಕ್ಕೆ ನವ್ಯಾ ‘ರಾಮಸೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

    https://www.instagram.com/p/B-KaDVwpa41/