Tag: varuna

  • ಮುಡಾ ಟೆನ್ಷನ್‌ ನಡುವೆಯೇ ವರುಣಾಕ್ಕೆ ಸಿಎಂ ಭರ್ಜರಿ ಗಿಫ್ಟ್‌

    ಮುಡಾ ಟೆನ್ಷನ್‌ ನಡುವೆಯೇ ವರುಣಾಕ್ಕೆ ಸಿಎಂ ಭರ್ಜರಿ ಗಿಫ್ಟ್‌

    ಮೈಸೂರು: ಮುಡಾ ಟೆನ್ಷನ್‌ ನಡುವೆಯೂ (MUDA Scam) ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿಗೆ (Mysuru) ಭೇಟಿ ನೀಡಿದ್ದಾರೆ. ಅಲ್ಲದೇ ವರುಣಾ ಕ್ಷೇತ್ರದಲ್ಲಿ (Varuna) 313 ಕಾಮಗಾರಿಗಳಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

    ವರುಣಾ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂ.ಹಣವನ್ನು ಸಿಎಂ ಘೋಷಣೆ ಮಾಡಿದ್ದಾರೆ. ವರುಣಾ ಕ್ಷೇತ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಕ್ಷೇತ್ರ. ಹೀಗಾಗಿ ಸ್ವ ಕ್ಷೇತ್ರದ ಅಭಿವೃದ್ಧಿಗೆ ಭರ್ಜರಿ ಗಿಫ್ಟ್ ನೀಡುತ್ತಿದ್ದಾರೆ. ಟಿ.ನರಸೀಪುರ- ನಂಜನಗೂಡು ರಸ್ತೆಯ ತಾಯೂರು ಗೇಟ್ ಬಳಿ (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ.

    ಮುಡಾ ಟೆನ್ಷನ್ ನಡುವೆಯೆ ಸಿಎಂ ಸ್ವಕ್ಷೇತ್ರದ ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಿರುವುದು ಸ್ವಕ್ಷೇತ್ರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

    ಒಂದು ಕಡೆ ಲೋಕಾಯುಕ್ತ ತನಿಖೆ, ಮತ್ತೊಂದು ಕಡೆ ಮುಡಾ ತನಿಖೆಗೆ ಇಡಿ ಎಂಟ್ರಿ ಕೊಟ್ಟಿದೆ. ಇದರ ಜೊತೆಗೆ ಈಗ ಸಿಎಂ ಪತ್ನಿ ಮೇಲೆ ಇನ್ನೊಂದು ಭೂ ಹಗರಣದ ಸುಳಿ ತಿರುಗುತ್ತಿದೆ. ಇಂತಹ ಭೂ ಟೆನ್ಷನ್ ನಡುವೆ ಸಿಎಂ ಸಿದ್ದರಾಮಯ್ಯ ತಮ್ಮ ತವರೂರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ವರುಣಾ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದಾರೆ.

  • ಮುಡಾ ಹಣ ವರುಣ ಕ್ಷೇತ್ರಕ್ಕೆ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

    ಮುಡಾ ಹಣ ವರುಣ ಕ್ಷೇತ್ರಕ್ಕೆ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

    ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ (MUDA Scam) ಸಂಕಷ್ಟ ನಿಲ್ಲುವಂತೆ ಕಾಣ್ತಿಲ್ಲ. ಮುಡಾ ಹಣವನ್ನು ವರುಣ ಕ್ಷೇತ್ರದ (Varuna Constituency) ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

    ಸಿಎಂ ಮೌಖಿಕ ಆದೇಶದ ಮೇರೆಗೆ ಕಾನೂನು ಮೀರಿ ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮೈಸೂರು ಮೂಲದ ಪಿ.ಎಸ್. ನಟರಾಜು ದೂರುಕೊಟ್ಟಿದ್ದಾರೆ.  ಇದನ್ನೂ ಓದಿ: ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ – ಜಗನ್ ಅವಧಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ!

    ಪ್ರಾಧಿಕಾರದ ಸಭೆಯ ಕಡತದಲ್ಲೇ ಈ ವಿಚಾರ ಉಲ್ಲೇಖವಾಗಿದೆ. ಆರ್ಥಿಕವಾಗಿ ನಷ್ಟದಲ್ಲಿದ್ದರೂ ಮುಡಾದ 450 ಕೋಟಿ ರೂ. ಮೊತ್ತದ ಕಾಮಗಾರಿ ಕೈಗೊಂಡು ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಸೂಚಿಸಬೇಕೆಂದು ಎಂದು ನಟರಾಜ್ ಕೋರಿದ್ದಾರೆ.

    ದೂರಿನ ಹಿನ್ನೆಲೆಯಲ್ಲಿ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಶೀಘ್ರ ವರದಿ ಸಲ್ಲಿಸುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸೆ.5ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

  • ಬಿಜೆಪಿ ಮುಖಂಡ, ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

    ಬಿಜೆಪಿ ಮುಖಂಡ, ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

    ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ (Kapu Siddalingaswamy) ಇಂದು ಮುಂಜಾನೆ ನಿಧನರಾಗಿದ್ದಾರೆ.

    ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.

    2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸೋಲುಂಡಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

    ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಇತ್ತೀಚಿಗಷ್ಟೇ ಬಿಎಸ್ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.

  • ಸಿಎಂ ತವರಿನಲ್ಲಿ ಮೂವರಲ್ಲಿ ಕಾಲರಾ ಪತ್ತೆ

    ಸಿಎಂ ತವರಿನಲ್ಲಿ ಮೂವರಲ್ಲಿ ಕಾಲರಾ ಪತ್ತೆ

    – 4 ಬೋರ್‌ವೆಲ್ ತಾತ್ಕಾಲಿಕ ಸ್ಥಗಿತ

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ತವರು ಜಿಲ್ಲೆಯಲ್ಲಿ ಕಾಲರಾ (Cholera) ರೋಗ ಪತ್ತೆಯಾಗಿದೆ.

    ಒಂದೇ ಗ್ರಾಮದ ಮೂವರಲ್ಲಿ ಕಾಣಿಸಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕೆಲವರಲ್ಲಿ ವಾಂತಿ-ಭೇದಿ ಆರಂಭವಾಗಿದೆ. ಈ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಿದೆ.

    ಕಳೆದ ಒಂದು ವಾರದಿಂದ ಇಲಾಖೆ ಸತತ 114 ಜನರನ್ನ ಪರೀಕ್ಷೆಗೊಳಪಡಿಸಿತ್ತು. ಈ ವೇಳೆ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ. ಗ್ರಾಮಕ್ಕೆ ಡಿಎಚ್‍ಓ ಶಿವಕುಮಾರ್ ಸ್ವಾಮಿ ಸೆರಿದಂತೆ ಹಿರಿಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: PublicTV Explainer: ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ರೋಗ ಯಾವುದು ಗೊತ್ತಾ?

    ಬೋರ್ ವೆಲ್ ನೀರಿನಿಂದ ಕಾಲರ ಬಂದಿರುವ ಶಂಕೆ ವ್ಯಕ್ತವಾಗುತ್ತಿದೆ. ಇದರಿಂದ ಗ್ರಾಮದ ನಾಲ್ಕು ಬೋರ್‍ವೆಲ್ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಆರೋಗ್ಯ ಅಧಿಕಾರಿಗಳು ನೀರಿನ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದಾರೆ. ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ಮುಂಜಾಗೃತ ಕ್ರಮವಾಗಿ 6 ಜನ ವೈದ್ಯರು, ಅಂಬುಲೆನ್ಸ್ ವಾಹನ ನಿಯೋಜನೆ ಮಾಡಲಾಗಿದೆ.

  • ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

    ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

    ಬೆಂಗಳೂರು: ಪುತ್ರ ಯತೀಂದ್ರ (Yathindra) ತಂದೆ ಸಿದ್ದರಾಮಯ್ಯನವರ (Siddaramaiah) ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್‌ (Mahadev) ಅವರು ಮುಖ್ಯಮಂತ್ರಿಯವರ ಹತ್ತಿರ ಸಂಬಂಧಿ ಆಗಿದ್ದಾರೆ.

    ಮೂಲತಃ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ.

    ಮಹದೇವ ಅವರು ಯತೀಂದ್ರ ಅವರ ಆಪ್ತರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಮಹದೇವ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಯತೀಂದ್ರ ಅವರು ನೇಮಿಸಿದ್ದಾರೆ ಎನ್ನಲಾಗುತ್ತಿದೆ. ಈಗ ಮಹದೇವ್ ಎಂದು ಕರೆಯಲಾಗುತ್ತಿದ್ದರೂ ಅವರ ಮೂಲ ಹೆಸರು ಮಾದೇ ಸ್ವಾಮಿ.  ಇದನ್ನೂ ಓದಿ: ಹಳಿಯಲ್ಲಿ ಕಬ್ಬಿಣದ ರಾಡ್, ದೊಡ್ಡ ಮರದ ದಿಮ್ಮಿ – ಮೈಸೂರಿನಲ್ಲಿ ತಪ್ಪಿತು ಭಾರೀ ರೈಲು ದುರಂತ

     

    ಏನಿದು ವಿವಾದ?
    ಬುಧವಾರ ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು.

    ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದಾರೆ.

    ಆರಂಭದಲ್ಲಿ ಅಪ್ಪ ಹೇಳಿ ಅಂತಾ ಯತೀಂದ್ರ ಸಿದ್ದರಾಮಯ್ಯ ಮಾತು ಶುರುಮಾಡಿದ್ದಾರೆ. ಈ ವೇಳೆ “ವಿವೇಕಾನಂದ ಯಾರು?” ಎಂದು ಸಿಎಂ ಪ್ರಶ್ನೆ ಕೇಳಿದ್ದಾರೆ. ಆಗ ಯತೀಂದ್ರ, ಆ ಮಹದೇವ್‌ ಅವರಿಗೆ‌ ಪೋನ್ ನೀಡುವಂತೆ ಸಿಎಂಗೆ ಹೇಳುತ್ತಾರೆ.

    ಮಹದೇವ್‌ಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು ಅದು ಅಂತಾ ಪ್ರಶ್ನಿಸಿದ್ದಾರೆ. ನನಗೆ ಅದೆಲ್ಲಾ ಗೊತ್ತಿಲ್ಲ‌. ನಾನು ಕೊಟ್ಟಿರುವ ನಾಲ್ಕು, ಐದು ಮಾತ್ರ ಮಾಡುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

    ಸಿಎಂ ಸಿದ್ದರಾಮಯ್ಯನವರ (CM Siddaramaiah) ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ (YST) ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಂದೆಯ ಜೊತೆ ಮಾತನಾಡುತ್ತಿರುವ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಜೊತೆಗೆ ಮತ್ತೆ ವಿಪಕ್ಷಗಳ ಟೀಕೆಗೆ ಗುರಿಯಾಗಿದೆ.

  • ಹಲೋ ಅಪ್ಪ, ನಾನು ಕೊಟ್ಟಿರೋದು ನಾಲ್ಕೋ ಐದೋ ಅಷ್ಟು ಮಾತ್ರ ಮಾಡಿ – ಯತೀಂದ್ರ ಮಾತಿನ ಮರ್ಮ ಏನು?

    ಹಲೋ ಅಪ್ಪ, ನಾನು ಕೊಟ್ಟಿರೋದು ನಾಲ್ಕೋ ಐದೋ ಅಷ್ಟು ಮಾತ್ರ ಮಾಡಿ – ಯತೀಂದ್ರ ಮಾತಿನ ಮರ್ಮ ಏನು?

    ಮೈಸೂರು: ಸಿಎಂ ಸಿದ್ದರಾಮಯ್ಯನವರ (CM Siddaramaiah) ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ (YST) ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಂದೆಯ ಜೊತೆ ಮಾತನಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಬುಧವಾರ ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು.

     

    ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದಾರೆ.

    ಆರಂಭದಲ್ಲಿ ಅಪ್ಪ ಹೇಳಿ ಅಂತಾ ಯತೀಂದ್ರ ಸಿದ್ದರಾಮಯ್ಯ ಮಾತು ಶುರುಮಾಡಿದ್ದಾರೆ. ಈ ವೇಳೆ “ವಿವೇಕಾನಂದ ಯಾರು?” ಎಂದು ಸಿಎಂ ಪ್ರಶ್ನೆ ಕೇಳಿದ್ದಾರೆ. ಆಗ ಯತೀಂದ್ರ, ಆ ಮಹದೇವ ಅವರಿಗೆ‌ ಪೋನ್ ನೀಡುವಂತೆ ಸಿಎಂಗೆ ಹೇಳುತ್ತಾರೆ.

    ಮಹದೇವ್‌ಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು ಅದು ಅಂತಾ ಪ್ರಶ್ನಿಸಿದ್ದಾರೆ. ನನಗೆ ಅದೆಲ್ಲಾ ಗೊತ್ತಿಲ್ಲ‌. ನಾನು ಕೊಟ್ಟಿರುವ ನಾಲ್ಕು, ಐದು ಮಾತ್ರ ಮಾಡುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

    ಕಳೆದ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ನಿಂತು ಶಾಸಕರಾಗಿ ಆಯ್ಕೆ ಆಗಿದ್ದರು. ಆದರೆ ಈ ಬಾರಿ ಈ ಕ್ಷೇತ್ರವನ್ನು ತಂದೆಗೆ ಬಿಟ್ಟು ಕೊಟ್ಟಿದ್ದರು.

     

  • ವರುಣಾದಲ್ಲಿ ಕುಕ್ಕರ್ ಹಂಚಿಕೆ : ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿ

    ವರುಣಾದಲ್ಲಿ ಕುಕ್ಕರ್ ಹಂಚಿಕೆ : ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿ

    ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ (Siddaramaiah) ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ (Yatindra) ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ (Election Commission) ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

    ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.  ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ

    ಯತೀಂದ್ರ ಹೇಳಿದ್ದೇನು?
    ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.

    ಆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಬೆಂಬಲ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ ಎಂದು ಯತೀಂದ್ರ ತಿಳಿಸಿದ್ದರು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವರುಣಾ ಕ್ಷೇತ್ರದ ಮತದಾರರಿಗೆ ಎಲೆಕ್ಷನ್ ವೇಳೆ ಉಡುಗೊರೆ ಕೊಟ್ಟಿದ್ರು ಸಿದ್ದು – ತಂದೆ ಗಿಫ್ಟ್‌ ಬಗ್ಗೆ ಯತೀಂದ್ರ ಮಾಹಿತಿ

    ವರುಣಾ ಕ್ಷೇತ್ರದ ಮತದಾರರಿಗೆ ಎಲೆಕ್ಷನ್ ವೇಳೆ ಉಡುಗೊರೆ ಕೊಟ್ಟಿದ್ರು ಸಿದ್ದು – ತಂದೆ ಗಿಫ್ಟ್‌ ಬಗ್ಗೆ ಯತೀಂದ್ರ ಮಾಹಿತಿ

    ಮೈಸೂರು: ವರುಣಾ (Varuna) ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) ಅವರು ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಾ? ಇದೇ ಅಂಶವೇ ಅವರ ಗೆಲುವಿಗೆ ಕಾರಣವಾಯ್ತಾ ಎಂಬ ಪ್ರಶ್ನೆಗೆ ಖುದ್ದ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೌದು ಎನ್ನುವ ಉತ್ತರವನ್ನು ಕೊಟ್ಟು, ಬಾಯಿತಪ್ಪಿ ಚುನಾವಣಾ ಸತ್ಯ ಬಹಿರಂಗಪಡಿಸಿದ್ದಾರೆ.

    ವರುಣಾ ಕ್ಷೇತ್ರದ ಚುನಾವಣೆ ವೇಳೆ ಕೊಟ್ಟ ಗಿಫ್ಟ್ ಬಗ್ಗೆ ಬಹಿರಂಗ ಸಭೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆ ನೀಡಿದ್ದಾರೆ. ಚುನಾವಣೆ ವೇಳೆ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಸಾವಿರಾರು ಜನರಿಗೆ ಕುಕ್ಕರ್, ಐರನ್ ಬಾಕ್ಸ್ ವಿತರಣೆ ಮಾಡಲಾಗಿತ್ತು ಎಂಬ ಸತ್ಯವನ್ನು ಅವರೇ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಮತ್ತೆ ತಮಿಳುನಾಡಿಗೆ ಹರಿದ ಕಾವೇರಿ – KRS, ಕಬಿನಿಯಿಂದ 3,000 ಕ್ಯೂಸೆಕ್‌ಗೂ ಅಧಿಕ ನೀರು ಬಿಡುಗಡೆ

    ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.

    ಆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಬೆಂಬಲ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ ಎಂದು ಯತೀಂದ್ರ ಹೇಳಿದ್ದಾರೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಪುತ್ರ ಯತೀಂದ್ರಗೆ ವರುಣದಲ್ಲಿ ಫುಲ್ ಡಿಮ್ಯಾಂಡ್

    ಸಿಎಂ ಪುತ್ರ ಯತೀಂದ್ರಗೆ ವರುಣದಲ್ಲಿ ಫುಲ್ ಡಿಮ್ಯಾಂಡ್

    ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿನಿಧಿಸಿರುವ ವರುಣ (Varuna) ಕ್ಷೇತ್ರದಲ್ಲಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಫುಲ್ ಆಕ್ಟೀವ್ ಆಗಿದ್ದಾರೆ. ಸಿಎಂ ಪುತ್ರನಿಗೆ ಮನವಿ ಪತ್ರ ಕೊಡಲು ಜನ ಎಲ್ಲಾ ಕಡೆ ಮುಗಿಬೀಳುತ್ತಿದ್ದಾರೆ.

    ಸಿದ್ದರಾಮಯ್ಯ ಸಿಎಂ ಆದ ಬಳಿಕ ತಮ್ಮ ಕ್ಷೇತ್ರದ ಮೇಲೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಈಗ ಮೈಸೂರಿನಲ್ಲಿ (Mysuru) ಭಾರೀ ಡಿಮ್ಯಾಂಡ್ ವ್ಯಕ್ತವಾಗಿದೆ. ಇದನ್ನೂ ಓದಿ: ಪೊಲೀಸ್‌ ವರ್ಗಾವಣೆ ಸಭೆಯಲ್ಲಿ ವೈಎಸ್‌ಟಿ ಟ್ಯಾಕ್ಸ್‌ನವರಿಗೆ ಏನು ಕೆಲಸ? – ಹೆಚ್‌ಡಿಕೆಯಿಂದ ಮಿಡ್‌ನೈಟ್‌ ಬಾಂಬ್‌

    ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಸುಮಾರು 3 ಗಂಟೆಗೂ ಹೆಚ್ಚು ಕಾಲ ವರುಣ ಕ್ಷೇತ್ರದ ಜನರ ಬಳಿ ಮನವಿ ಪತ್ರ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಭ್ರಷ್ಟರಿಗೆ ಲೋಕಾಯುಕ್ತ ನ್ಯಾಯಮೂರ್ತಿ ಶಾಕ್- ಬೆಂಗಳೂರಿನ 45 ಕಡೆ ಏಕಕಾಲದಲ್ಲಿ ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಭಾಗಿ – ಅಹವಾಲು ಕೊಡಲು ಮುಗಿಬಿದ್ದ ಜನ

    ಸರ್ಕಾರಿ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಭಾಗಿ – ಅಹವಾಲು ಕೊಡಲು ಮುಗಿಬಿದ್ದ ಜನ

    ಮೈಸೂರು: ವರುಣಾ (Varuna) ಕ್ಷೇತ್ರದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಭಾಗಿಯಾಗಿದ್ದಾರೆ. ಸದ್ಯ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಅವರು ಸರ್ಕಾರಿ (Government) ಕಾರ್ಯಕ್ರಮ ಉದ್ಘಾಟಿಸಿದ್ದಾರೆ.

    ವರುಣಾ ಕ್ಷೇತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿದ್ದಾರೆ. ಆದರೆ ಕ್ಷೇತ್ರದ ತುಂಬಲ ಗ್ರಾಮದಲ್ಲಿ ನಡೆದ ನೂತನ ಹಾಲಿನ ಡೈರಿ ಮೇಲ್ಛಾವಣಿ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಅವರು ಪಾಲ್ಗೊಂಡಿದ್ದರು. ಬಳಿಕ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನೂತನ ಸಂಜೀವಿನಿ ಕಟ್ಟಡ ಉದ್ಘಾಟನೆಯಲ್ಲೂ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಮುಖ ತೊಳೆಯಲು, ಬಟ್ಟೆ ಬದಲಿಸಲೂ ಅವಕಾಶ ಕೊಡಲಿಲ್ಲ: ಪೊಲೀಸರ ನಡೆಗೆ ಬಿಜೆಪಿ ಕಾರ್ಯಕರ್ತೆ ಆಕ್ರೋಶ

    ಕಾರ್ಯಕ್ರಮದಲ್ಲಿ ಭಾಗಿಯಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸೇಬಿನ ಹಾರ ಹಾಕಿ ಜನರು ಅದ್ದೂರಿ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಅವರಿಗೆ ಅಹವಾಲು ನೀಡಲು ಸಾರ್ವಜನಿಕರು ಮುಗಿಬಿದ್ದಿದ್ದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗಿಡ, ಮರ ಬೆಳೆಸೋದು ಕಡ್ಡಾಯ – ಆರೋಗ್ಯ ಇಲಾಖೆ ಆದೇಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]