Tag: varuna constituency

  • ಕೋಲಾರದಲ್ಲಿ ಮತ್ತೆ ʻಮುಂದಿನ ಸಿಎಂ ಸಿದ್ದರಾಮಯ್ಯʼ ಘೋಷಣೆ – ಕೈ ನಾಯಕರ ಭಾಷಣಕ್ಕೂ ಅಡ್ಡಿಪಡಿಸಿದ ಕಾರ್ಯಕರ್ತರು

    ಕೋಲಾರದಲ್ಲಿ ಮತ್ತೆ ʻಮುಂದಿನ ಸಿಎಂ ಸಿದ್ದರಾಮಯ್ಯʼ ಘೋಷಣೆ – ಕೈ ನಾಯಕರ ಭಾಷಣಕ್ಕೂ ಅಡ್ಡಿಪಡಿಸಿದ ಕಾರ್ಯಕರ್ತರು

    – ಹೈಕಮಾಂಡ್ ನಿರ್ಧಾರ ನನಗೆ ಬಹಳ ಮುಖ್ಯ ಎಂದ ಸಿದ್ದರಾಮಯ್ಯ

    ಕೋಲಾರ: ನಗರದಲ್ಲಿ ಶನಿವಾರ ನಡೆದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮತ್ತೆ ʻಮುಂದಿನ ಸಿಎಂ ಸಿದ್ದರಾಮಯ್ಯʼ, ʻಕೋಲಾರ ಶಾಸಕ ಸಿದ್ದರಾಮಯ್ಯʼ ಎಂಬ ಘೋಷಣೆಗಳು ಕೇಳಿಬಂದಿವೆ.

    ಏಪ್ರಿಲ್‌ 9ರಂದು ಕೋಲಾರದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಕಾರ್ಯಕ್ರಮದ ಕುರಿತು ಮುಖಂಡರ ಜೊತೆ ಇಲ್ಲಿನ ಖಾಸಗಿ ಭವನದಲ್ಲಿ ಪೂರ್ವಭಾವಿ ಸಭೆ‌ ಕರೆಯಲಾಗಿತ್ತು. ಸಭೆಗೆ ರಾಜ್ಯ ಕಾಂಗ್ರೆಸ್‌ (Congress) ಉಸ್ತುವಾರಿ ರಣದೀಪ್‌ ಸುರ್ಜೆವಾಲಾ (Randeep Surjewala), ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದರು. ಸಭೆಗೆ ಹಾಜರಾಗುತ್ತಿದ್ದಂತೆ ಕಾರ್ಯಕರ್ತರು ಮುಂದಿನ ʻಸಿಎಂ ಮತ್ತು ಕೋಲಾರದ ಶಾಸಕ ಸಿದ್ದರಾಮಯ್ಯʼ ಎಂದು ಘೋಷಣೆ ಕೂಗಿದರು, ಸಿದ್ದು ಸಿದ್ದು ಎಂದು ಜೈಕಾರ ಹಾಕುತ್ತಾ, ಸುರ್ಜೆವಾಲಾ ಅವರ ಭಾಷಣಕ್ಕೂ ಅಡ್ಡಿಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ರೆಡ್ ಸಿಗ್ನಲ್ – ಕೋಲಾರ ಕಾಂಗ್ರೆಸ್‌ನಲ್ಲಿ ಮತ್ತೆ ಆರಂಭವಾಯ್ತು ಗುಂಪುಗಾರಿಕೆ

    ಕೊನೆಗೆ ಸಿದ್ದರಾಮಯ್ಯ (Siddaramaiah) ಅವರೇ ಸ್ವತಃ ಮೈಕ್ ಹಿಡಿದು, ಸಭೆಯ ಗೌರವ ಕಾಪಾಡಿ, ಸುರ್ಜೆವಾಲಾ ಅವರ ಭಾಷಣಕ್ಕೆ ಅನುವು ಮಾಡಿಕೊಡಿ ಎಂದು ಮನವಿ ಮಾಡಿಕೊಂಡರು. ಇದಕ್ಕೂ ಕಾರ್ಯಕರ್ತರು ಜಗ್ಗದೇ ಇದ್ದಾಗ ಸಿದ್ದರಾಮಯ್ಯ ಸಿಡಿಮಿಡಿಗೊಂಡರು. ವರುಣಾ ಮತ್ತು ಕೋಲಾರ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಮಾನಸಿಕವಾಗಿ ಸಿದ್ದನಿದ್ದೇನೆ. ಆದ್ರೆ ಕೋಲಾರದ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ ಎನ್ನುವ ಮೂಲಕ ಹೈಕಮಾಂಡ್‌ನತ್ತ ಬೊಟ್ಟು ತೋರಿಸಿ, ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಇದನ್ನೂ ಓದಿ: ಆಗ ಭಾಷಣ ಮಾಡಿದ್ದಕ್ಕೆ ಅನರ್ಹತೆ; ಈಗ ಸತ್ಯಮೇವ ಜಯತೆ – ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಗಾ

    ನಂತರ ಭಾಷಣ ಮಾಡಿದ ಸಿದ್ದರಾಮಯ್ಯ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿರುವ ಸಂದರ್ಭದಲ್ಲಿ ದೇಶವನ್ನ ಉಳಿಸಬೇಕಾದ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಮೇಲಿದೆ. ರಾಹುಲ್ ಗಾಂಧಿ (Rahul Gandhi) ಅವರು ಸ್ವಾರ್ಥಕ್ಕಾಗಿ ಹೋರಾಟ ಮಾಡುತ್ತಿಲ್ಲ. ದೇಶದ ಜನತೆಯ ನೆಮ್ಮದಿ, ಐಕ್ಯತೆಗಾಗಿ ಹೋರಾಟ ಮಾಡುತ್ತಿದ್ದಾರೆ. ಆದ್ರೆ ಬಿಜೆಪಿ ತನ್ನ ದ್ವೇಷದ ಹಾಗೂ ಸೇಡಿನ ರಾಜಕಾರಣದಿಂದ ದೇಶದಲ್ಲಿ ಸಾಮರಸ್ಯ ಹಾಳು ಮಾಡುತ್ತಿದೆ. ರಾಹುಲ್ ಸದಸ್ಯತ್ವ ರದ್ದು ಮಾಡಿದ್ದು ಸಹ ಬೇರೆಯವರಿಗೆ ಹೆದರಿಕೆ ಉಂಟಾಗಲಿ ಎನ್ನುವ ಕಾರಣಕ್ಕೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ದೇಶದ ಜನರ ಸಂಪತ್ತನ್ನ ಕೊಳ್ಳೆ ಹೊಡೆದುಕೊಂಡು ಹೋದವರ ಬಗ್ಗೆ ರಾಹುಲ್ ಮಾತನಾಡಿದ್ದು ತಪ್ಪಾ? 2019ರ ಲೋಕಸಭೆ ಚುನಾವಣೆಯಲ್ಲಿ ಅಂದು ನಾನು ಸಹ ಬಂದಿದ್ದೇ ಕಳ್ಳರನ್ನ ಕಳ್ಳರು ಅಂದರೆ ಅದು ತಪ್ಪಾ? ಕಳ್ಳರನ್ನ ಕಳ್ಳ ಎನ್ನದೇ ಸಾಚಾ ಅನ್ನೋಕೆ ಆಗುತ್ತಾ? ಎಂದು ಕಿಡಿ ಕಾರಿದರು.

  • ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಫಿಕ್ಸಾ?

    ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಫಿಕ್ಸಾ?

    ಬೆಂಗಳೂರು: ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಂತೆಯೇ ಸಿದ್ದರಾಮಯ್ಯ (Siddaramaiah) ಸ್ಪರ್ಧಿಸುತ್ತಿರುವ ವರುಣಾ ಯುದ್ಧ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

    ಹೌದು, ವರುಣಾದಲ್ಲಿ ಸಿದ್ದರಾಮಯ್ಯಗೆ ಎದುರಾಗಿ ವಿಜಯೇಂದ್ರ (B Y Vijayendra) ಸ್ಪರ್ಧೆ ಫಿಕ್ಸಾ ಎಂಬ ಪ್ರಶ್ನೆ ಎದ್ದಿದೆ. ಯಾಕಂದರೆ ವರುಣಾ ಕ್ಷೇತ್ರ (Varuna Constituency) ದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಈ ಮೂಲಕ ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಸ್ಪರ್ಧೆಯ ಅಸ್ತ್ರ ಬಿಡಲು ಬಿಜೆಪಿ ಪ್ಲಾನ್ ಮಾಡಲಾಗುತ್ತಿದೆ.

    2018ರಲ್ಲಿ ವರುಣಾದಲ್ಲಿ ಹೈಕಮಾಂಡ್ ಟಿಕೆಟ್ ಮಿಸ್ ಮಾಡಿತ್ತು. ಆದರೆ 2023ರಲ್ಲಿ ವಿಜಯೇಂದ್ರ ಸ್ಪರ್ಧೆಗಿಳಿಸಲು ಬಿಜೆಪಿಯೇ ಆಸಕ್ತಿ ವಹಿಸಿದಂತಿದೆ. ಈಗಾಗಲೇ ಶಿಕಾರಿಪುರ (Shikaripura Constituency) ಸ್ಪರ್ಧೆಗೆ ತಯಾರಾಗ್ತಿರೋ ವಿಜಯೇಂದ್ರಗೆ ಪಕ್ಷದಿಂದ ವರುಣಾ ಆಫರ್ ಕೊಡಲಾಗುತ್ತಿದೆ. ಗುರುವಾರ ಆರ್ ಎಸ್‍ಎಸ್ ಮುಖಂಡರ ಜೊತೆಗೂ ವಿಜಯೇಂದ್ರ ಸೀಕ್ರೆಟ್ ಸಮಾಲೋಚನೆ ನಡೆಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕ ಎಡವಟ್ಟು

    ಮೊದಲು ಶಿಕಾರಿಪುರ ಫಿಕ್ಸ್ ಮಾಡುವಂತೆ ಹೈಕಮಾಂಡ್ ಬಳಿ ಯಡಿಯೂರಪ್ಪ (B S Yediyurappa) ಮನವಿ ಮಾಡಿದ್ದಾರೆ. ಈ ನಡುವೆ ವರುಣಾದಲ್ಲೂ ಸ್ಪರ್ಧೆಗೆ ವಿಜಯೇಂದ್ರ ರೆಡಿ ಎಂದು ಸಂದೇಶ ರವಾನಿಸಲಾಗಿದೆ. ಮುಂದಿನ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಶಿಕಾರಿಪುರದಲ್ಲಿ ಸ್ಪರ್ಧಿಸಲಿ. ಸಿದ್ದರಾಮಯ್ಯ ಕಟ್ಟಿಹಾಕಲು ವರುಣಾದಲ್ಲೂ ಕಣಕ್ಕಿಳಿಯಲಿ ಎಂದು ಬಿಎಸ್‍ವೈ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

    ವರುಣಾ ಜೊತೆಗೆ ಶಿಕಾರಿಪುರಕ್ಕೂ ಟಿಕೆಟ್ ಸಿಗುತ್ತಾ ಅಂತ ವರಿಷ್ಠರು ಸ್ಪಷ್ಟ ಪಡಿಸಬೇಕಿದೆ. ವರಿಷ್ಠರ ತೀರ್ಮಾನಕ್ಕಗಿ ಬಿಎಸ್‍ವೈ ಹಾಗೂ ವಿಜಯೇಂದ್ರ ಕಾದಿದ್ದಾರೆ. ಹಾಗಿದ್ರೆ ವಿಜಯೇಂದ್ರ ಸ್ಪರ್ಧೆ ಶಿಕಾರಿಪುರನಾ..? ವರುಣಾನಾ..? ಅಥವಾ ಎರಡೂ ಕ್ಷೇತ್ರದಿಂದನಾ..? ಎಂದು ಕುತೂಹಲ ಮೂಡಿದೆ.

  • ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ: ಸಿದ್ದರಾಮಯ್ಯ

    ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ: ಸಿದ್ದರಾಮಯ್ಯ

    ಮೈಸೂರು: ನನ್ನ ಕೊನೆ ಚುನಾವಣೆ ಹುಟ್ಟೂರುನಲ್ಲಿ ಆಗಬೇಕೆಂಬ ಆಸೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದರು.

    ಎಚ್‍ಡಿ ಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಬಿಜೆಪಿ (BJP) ಮತ್ತು ಜೆಡಿಎಸ್ (JDS) ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಘೋಷಣೆ – ಯುವಕನ ಬಂಧನ

    ವರುಣಾ ಕ್ಷೇತ್ರ (Varuna Constituency) ಸಿದ್ದರಾಮಯ್ಯಗೆ ಲಕ್ಕಿ ಕ್ಷೇತ್ರ ವಿಚಾರದ ಕುರಿತು ಮಾತನಾಡಿ, ವರುಣಾ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು. ಯಾವುದೇ ಒಂದು ಕ್ಷೇತ್ರ ಲಕ್ಕಿ ಅಂತ ಇಲ್ಲ. ವರುಣಾ ನನ್ನ ಹುಟ್ಟೂರು. ವರುಣಾ ಹೋಬಳಿ ಕಾರಣಕ್ಕೆ ವರುಣಾ ಕ್ಷೇತ್ರ ಅಂಥಾ ಕರೆಯುತ್ತಿದ್ದಾರೆ ಎಂದರು.

    ಹೈಕಮಾಂಡ್ ಗಳ ಜೊತೆ ಮಾತನಾಡಿದ್ದೇನೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ಹೈಕಮಾಂಡ್ ಜೊತೆಗೆ ಯಾರೂ ಮಾತನಾಡಿಲ್ಲ. ಈ ಬಾರಿ ನಾವು ಯಾರ ಜೊತೆಯೂ ಮಾತುಕತೆ ಮಾಡಲ್ಲ. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ ಎಂದು ತಿರುಗೇಟು ನೀಡಿದರು.

  • ಸಿದ್ದರಾಮಯ್ಯ ಎರಡು ಕ್ಷೇತ್ರದಿಂದ ಸ್ಪರ್ಧಿಸೋದು ಖಚಿತ – ಯತೀಂದ್ರ ಸಿದ್ದರಾಮಯ್ಯ

    ಸಿದ್ದರಾಮಯ್ಯ ಎರಡು ಕ್ಷೇತ್ರದಿಂದ ಸ್ಪರ್ಧಿಸೋದು ಖಚಿತ – ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕೋಲಾರ ಹಾಗೂ ವರುಣಾ ಎರಡೂ ಕ್ಷೇತ್ರದಿಂದ ಸ್ವರ್ಧಿಸಲು ನಿರ್ಧರಿಸಿದ್ದಾರೆ ಎಂದು ಶಾಸಕರೂ ಆಗಿರುವ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಖಚಿತಪಡಿಸಿದ್ದಾರೆ.

    ಮೈಸೂರಿನಲ್ಲಿ (Mysuru) `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಕೋಲಾರ (Kolar) ಬೇಡ ವರುಣಾದಲ್ಲಿ (Varuna) ಸ್ಪರ್ಧಿಸಿ ಅಂತಾ ಹೇಳಿತ್ತು. ಈ ಸಮಯದಲ್ಲಿ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದರೆ ಕಾಂಗ್ರೆಸ್‌ಗೆ (Congress) ಹಿನ್ನಡೆಯಾಗುತ್ತೆ ಅಂತಾ ಅಲ್ಲಿನ ನಾಯಕರು ಹೇಳಿದ್ದಾರೆ. ಇವತ್ತಿನ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಕೋಲಾರ ಬಿಡುವಂತಿಲ್ಲ. ಹೈಕಮಾಂಡ್ ಸೂಚನೆಯಂತೆ ವರುಣಾ ಕ್ಷೇತ್ರ (Varuna Constituency) ಬಿಡಲೂ ಆಗಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ಕೋಲಾರ – ವರುಣಾ ಎರಡೂ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾನು ಕ್ಷೇತ್ರ ಹುಡುಕಾಡ್ತಿಲ್ಲ, ನನ್ನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ – ಸಿದ್ದರಾಮಯ್ಯ

    ವರುಣಾ ಒಂದರಲ್ಲಿ ನಿಂತುಕೊಳ್ಳಿ ಅಂತಾ ನಾನು ಮೊದಲು ಸಲಹೆ ಕೊಟ್ಟಿದ್ದೆ. ಸಿದ್ದರಾಮಯ್ಯ ಅವರು ಯಾವುದೇ ಕ್ಷೇತ್ರದಲ್ಲಿ ನಿಂತರೂ ಅವರ ವೈರಿಗಳು ಒಂದಾಗಿ ಸೋಲಿಸಲು ಯತ್ನಿಸುತ್ತಾರೆ. ಸಿದ್ದರಾಮಯ್ಯ ವಿರುದ್ಧ ಅವರ ಶತ್ರುಗಳು ಹಣದ ಹೊಳೆ ಹರಿಸುತ್ತಾರೆ. ಎಲ್ಲಿ ನಿಂತರೂ ಶತ್ರುಗಳು ಒಂದಾಗುತ್ತಾರೆ. ಇದಕ್ಕೆಲ್ಲ ಹೆದರೋಕೆ ಆಗಲ್ಲ. ಸಿದ್ದರಾಮಯ್ಯ ಮಾಸ್ ಲೀಡರ್. ಆಕಸ್ಮಾತ್ ಅಧಿಕಾರಕ್ಕೆ ಬಂದರೆ ಸಾಮಾಜಿಕ ನ್ಯಾಯದ ಪರ ಕೆಲಸ ಮಾಡುತ್ತಾರೆ. ಇದನ್ನು ಸಹಿಸಲು ಬಲಪಂಥೀಯರಿಗೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಂಸದರಾಗಲು ಹೊರಟಿದ್ದ ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ?  

  • ನಾನು ಕ್ಷೇತ್ರ ಹುಡುಕಾಡ್ತಿಲ್ಲ, ನನ್ನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ – ಸಿದ್ದರಾಮಯ್ಯ

    ನಾನು ಕ್ಷೇತ್ರ ಹುಡುಕಾಡ್ತಿಲ್ಲ, ನನ್ನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ – ಸಿದ್ದರಾಮಯ್ಯ

    ಮೈಸೂರು: ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ. ಮನೆಯವರ ಅಭಿಪ್ರಾಯವನ್ನ ಕೇಳುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲೇ ಸ್ಪರ್ಧೆಸಿದರೂ ಗೆಲ್ಲುವ ವಿಶ್ವಾಸ ಇದೆ. ನಾನು ಕ್ಷೇತ್ರಕ್ಕಾಗಿ ಹುಡುಕಾಡುತ್ತಿಲ್ಲ. ನನ್ನನ್ನ ಕ್ಷೇತ್ರಗಳಿಗೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ. ಕ್ಷೇತ್ರ ಕೂತೂಹಲಕ್ಕೆ ಬುಧವಾರ (ಮಾ.22) ತೆರೆ ಬೀಳಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾರಕಾಸ್ತ್ರದಿಂದ ಹೊಡೆದು ಪತ್ನಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾದ!

    ಯುಗಾದಿ ಹಬ್ಬದ ದಿನ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅದರಲ್ಲಿ ನನ್ನ ಹೆಸರು ಇರುತ್ತೊ ಇಲ್ಲವೋ ಗೊತ್ತಿಲ್ಲ. ಆದ್ರೆ ವರುಣಾದಿಂದ (Varuna Constituency) ಯತೀಂದ್ರ ಹೆಸರು ಕ್ಲೀಯರ್ ಆಗಿದೆ. ಹೈ ಕಮಾಂಡ್ ಏನು ಮಾಡುತ್ತೊ ಗೊತ್ತಿಲ್ಲ. ನಾನು ಎಲ್ಲಾ ಆಯ್ಕೆಯನ್ನ ಹೈ ಕಮಾಂಡ್‌ಗೆ ಬಿಟ್ಟಿದ್ದೇನೆ. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ಯಾಮ್ ಈಸ್ ಬ್ಯಾಕ್, ಹೊಸ ಫೋಟೋಶೂಟ್‌ನಲ್ಲಿ ಸಮಂತಾ ಮಿಂಚಿಂಗ್

    ದಶಪಥ ಹೆದ್ದಾರಿ ಮಾಡಿದ್ದು ನಾವು: ಮುಂದುವರಿದು ಪ್ರಧಾನಿ ಮೋದಿ (NarendraModi) ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಅಡುಗೆ ಮಾಡಿದ್ದು ನಾವು ಅದನ್ನು ಬಡಿಸಲು ಈಗ ಪ್ರಧಾನಿ ಬರುತ್ತಿದ್ದಾರೆ. ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಜಗತ್ತೆ ಕಣ್ಣು ಮುಚ್ಚಿಕೊಂಡಂತೆ ಆಗುವುದಿಲ್ಲ. ಪ್ರಧಾನಿ ಮಾತುಗಳೆನ್ನೆಲ್ಲ ಜನ ನಂಬುವುದಿಲ್ಲ. ದಶಪಥ ರಸ್ತೆ ಮಾಡಿದ್ದು ನಾವು, ಐಐಟಿಗೆ ಜಾಗ ಕೊಟ್ಟು ಗುದ್ದಲಿ ಪೂಜೆ ಮಾಡಿದ್ದು ನಾನು. ಇವರು ಈಗ ಬರೀ ಉದ್ಘಾಟನೆಗೆ ಬರುತ್ತಿದ್ದಾರೆ. ಇದೆಲ್ಲಾ ಜನರಿಗೆ ಅರ್ಥವಾಗುತ್ತೆ ಎಂದು ಕುಟುಕಿದ್ದಾರೆ.

  • ಕೊನೆಯ ಸ್ಪರ್ಧೆ ತವರಲ್ಲೇ ಆಗಲಿ- ಸಿದ್ದು ಪರವಾಗಿ ದೆಹಲಿ ಅಂಗಳಕ್ಕೆ ಹೋಗಲು ಸಿದ್ಧವಾಯ್ತಾ ಟೀಂ ಮೈಸೂರು?

    ಕೊನೆಯ ಸ್ಪರ್ಧೆ ತವರಲ್ಲೇ ಆಗಲಿ- ಸಿದ್ದು ಪರವಾಗಿ ದೆಹಲಿ ಅಂಗಳಕ್ಕೆ ಹೋಗಲು ಸಿದ್ಧವಾಯ್ತಾ ಟೀಂ ಮೈಸೂರು?

    ಮೈಸೂರು/ಬೆಂಗಳೂರು: ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಈಗಾಗಲೇ ವರುಣಾ ಕ್ಷೇತ್ರಕ್ಕೆ ತಾನೇ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಆದ್ದರಿಂದ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಹೈಕಮಾಂಡ್ ನಿರ್ದೇಶನವಷ್ಟೇ ಬಾಕಿ ಇದೆ.

    ಈ ನಡುವೆ ಮತ್ತೆ ಸಿದ್ದರಾಮಯ್ಯ ಅವರು ವರುಣಾದಿಂದಲೇ (Varuna Constituency) ಸ್ಪರ್ಧಿಸುವಂತೆ ಬೆಂಬಲಿಗರಿಂದ ಒತ್ತಾಯ ಕೇಳಿಬಂದಿದೆ. ಸಿದ್ದರಾಮಯ್ಯ ಅವರ ಕೊನೆಯ ಸ್ಪರ್ಧೆ ಅದು ಜಿಲ್ಲೆಯಿಂದಲೇ ಆಗಲಿ, ಅದಕ್ಕಾಗಿ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸಲಿ ಎಂದು ಮೈಸೂರು ತಂಡ (Mysuru Team) ದೆಹಲಿ ಅಂಗಳಕ್ಕೆ ಹೋಗಲು ರೆಡಿಯಾಗಿದೆ. ಆದರೆ ಇದು ವೈಯಕ್ತಿಕ ಆಹ್ವಾನದ ಒತ್ತಡವೋ? ಅಥವಾ ಎರಡು ಕ್ಷೇತ್ರದ ಸ್ಪರ್ಧೆಯ ಒತ್ತಡವೋ? ಅನ್ನೋದು ತಿಳಿದಿಲ್ಲ. ಮತ್ತೊಮ್ಮೆ ಸಿದ್ದರಾಮಯ್ಯ ದ್ವಿಕ್ಷೇತ್ರ ಪಾಲಿಟಿಕ್ಸ್‌ಗೆ ಮೈಸೂರು ಟೀಂ ಮುನ್ನುಡಿ ಬರೆಯುತ್ತಾ ಅನ್ನೋದು ಪ್ರಶ್ನೆಯಾಗಿದೆ. ಇದನ್ನೂ ಓದಿ: ಪಾಗಲ್ ಪ್ರೇಮಿ ಕೊಲೆ ಕೇಸ್‌ಗೆ ಟ್ವಿಸ್ಟ್- ಪೊಲೀಸ್ ತನಿಖೆಯಲ್ಲಿ ಸ್ಫೋಟಕ ರಹಸ್ಯ ಬಯಲು

    ಸಿದ್ದರಾಮಯ್ಯ ಅವರು ಕೋಲಾರದಿಂದಾದರೂ ಸ್ಪರ್ಧೆ ಮಾಡಲಿ, ಬೇರೆ ಎಲ್ಲಿಂದಲಾದರೂ ಸ್ಪರ್ಧೆ ಮಾಡಲಿ, ಆದರೆ ತವರು ಜಿಲ್ಲೆ ಮೈಸೂರಿನಿಂದ ಸ್ಪರ್ಧೆ ಮಾಡಲೇಬೇಕು. ಅದರಲ್ಲೂ ಸ್ವಕ್ಷೇತ್ರ ವರುಣಾದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸಬೇಕು. ಇಂತಹದೊಂದು ಹಕ್ಕೊತ್ತಾಯಕ್ಕೆ ಸಿದ್ದರಾಮಯ್ಯ ಆಪ್ತರ ಬಗಳದ ಮೈಸೂರು ತಂಡ ಮುಂದಾಗಿದೆ. ಕೊನೆಯ ಚುನಾವಣೆ ಕೊನೆಯ ಸ್ಪರ್ಧೆ ವರುಣಾದಿಂದಲೇ ಆಗಲಿ ಎಂದು ಹೈಕಮಾಂಡ್ ಮೊರೆ ಹೋಗಲು ಸಿದ್ದರಾಮಯ್ಯ ಬೆಂಬಲಿಗರ ತಂಡ ಮುಂದಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: `ಕೈ’ಗೆ ಶಾಕ್ – ಚುನಾವಣಾ ರಾಜಕೀಯದಿಂದ ಶಾಸಕ ತನ್ವೀರ್ ಸೇಠ್ ನಿವೃತ್ತಿ

    ಸಿದ್ದರಾಮಯ್ಯ ಈಗಾಗಲೇ ಕೋಲಾರ ಸ್ಪರ್ಧೆ ಘೋಷಣೆ ಮಾಡಿದ್ದಾರೆ. ಈ ನಡುವೆ ಟೀಂ ಮೈಸೂರು ತವರು ಜಿಲ್ಲೆಯ ಸೆಂಟಿಮೆಂಟ್ ದಾಳ ಉರುಳಿಸಲು ಮುಂದಾಗಿದೆ. ಇದು ಸಿದ್ದರಾಮಯ್ಯ ಅವರ ಎರಡು ಕ್ಷೇತ್ರದ ಸ್ಪರ್ಧೆಗೆ ವೇದಿಕೆ ಹಾಕಿಕೊಡುತ್ತಾ ಅನ್ನೋ ಲೆಕ್ಕಾಚಾರ ಕೈ ಪಾಳಯದಲ್ಲಿ ಕೇಳಿ ಬರುತ್ತಿದೆ. ಸದ್ಯ ಸಿದ್ದರಾಮಯ್ಯ ಅವರ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

  • ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದ ಸಿದ್ದರಾಮಯ್ಯ ಪುತ್ರ ಯತೀಂದ್ರ

    ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದ ಸಿದ್ದರಾಮಯ್ಯ ಪುತ್ರ ಯತೀಂದ್ರ

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಹೀಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಹಾಲಿ ಶಾಸಕ ಯತೀಂದ್ರ ಹೇಳಿದ್ದಾರೆ.

    Live TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದರಾಮಯ್ಯ ಸ್ಪರ್ಧೆ ಕೋಲಾರದಿಂದ ಖಚಿತ, ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿː ಯತೀಂದ್ರ

    ಸಿದ್ದರಾಮಯ್ಯ ಸ್ಪರ್ಧೆ ಕೋಲಾರದಿಂದ ಖಚಿತ, ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿː ಯತೀಂದ್ರ

    ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಕೋಲಾರದಿಂದ ಸ್ಪರ್ಧಿಸುವುದು ಖಚಿತ. ಹಾಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯವರು ಈಗಾಗಲೇ ಕೋಲಾರದಿಂದ (Kolar) ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ. ಅವರ ಸ್ಪರ್ಧೆ ಕೋಲಾರದಿಂದ ಖಚಿತ, ವರುಣಾ ಕ್ಷೇತ್ರದಿಂದ (Varuna Constituency) ನಾನು ಸ್ಪರ್ಧೆ ಮಾಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: Earthquakeː ಟರ್ಕಿಯಲ್ಲಿ ಸಿಲುಕಿರೋದು ಬೆಂಗಳೂರು ಟೆಕ್ಕಿಯಲ್ಲ- ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

    yathindra siddaramaiah

    ವರುಣಾ ಕ್ಷೇತ್ರ (Varuna Constituency) ಯಾವಾಗಲು ಸಹ ಕಾಂಗ್ರೆಸ್ (Congress) ಭದ್ರಕೋಟೆ. ವರುಣಾ ಕ್ಷೇತ್ರ ರಚನೆ ಆದಾಗಿನಿಂದಲೂ ಇಲ್ಲಿ ಕಾಂಗ್ರೆಸ್ ಪಕ್ಷವೇ ಗೆದ್ದಿರೋದು. ಬಿಜೆಪಿಯಿಂದ ಯಾರೇ ಬಂದರೂ ನಮಗೆ ಭಯವಿಲ್ಲ. ಎಲ್ಲರೂ ಸಹ ಗೆಲ್ಲಬೇಕೆಂದು ಸ್ಟಾಟರ್ಜಿ ಮಾಡ್ತಾರೆ. ಅಂತಿಮವಾಗಿ ವರುಣಾ ಕ್ಷೇತ್ರದಲ್ಲಿ ನಾವೇ ಗೆಲ್ಲೋದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳ ಬಳಿ ಪ್ರೆಗ್ನೆನ್ಸಿ ಟೆಸ್ಟ್‌ ಕಿಟ್ ಪತ್ತೆ – ಆ್ಯಸಿಡ್ ಸುರಿದು ತಂದೆ, ತಾಯಿಯಿಂದ ಕೊಲೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k