Tag: Vasishtha Lion

  • ಡಿಯರ್ ವಿಕ್ರಮ್ ಟ್ರೈಲರ್ ರಿಲೀಸ್ : ನೀನಾಸಂ ಸತೀಶ್, ಶ್ರದ್ಧಾ ಶ್ರೀನಾಥ್ ಕಾಂಬಿನೇಷನ್ ಸಿನಿಮಾ

    ಡಿಯರ್ ವಿಕ್ರಮ್ ಟ್ರೈಲರ್ ರಿಲೀಸ್ : ನೀನಾಸಂ ಸತೀಶ್, ಶ್ರದ್ಧಾ ಶ್ರೀನಾಥ್ ಕಾಂಬಿನೇಷನ್ ಸಿನಿಮಾ

    ನೀನಾಸಂ ಸತೀಶ್ ನಾಯಕನಾಗಿ ನಟಿಸಿರುವ ಡಿಯರ್ ವಿಕ್ರಮ್ ಸಿನಿಮಾದ ಟ್ರೈಲರ್ ಇಂದು ಬೆಂಗಳೂರಿನಲ್ಲಿ ಬಿಡುಗಡೆ ಆಯಿತು. ಓಟಿಟಿಯಲ್ಲಿ ಈ ಸಿನಿಮಾ ನೇರವಾಗಿ ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮುನ್ನ ಟ್ರೈಲರ್ ಅನ್ನು ಇಂದು ಖಾಸಗಿ ಹೋಟೆಲ್ ನಲ್ಲಿ ಬಿಡುಗಡೆ ಮಾಡಲಾಯಿತು. ಪ್ರೇಮಕಥೆಯ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಸಿನಿಮಾ ಇದಾಗಿದೆ ಎನ್ನುವುದು ಟ್ರೈಲರ್ ನೋಡುವವರಿಗೆ ಗೊತ್ತಾಗಲಿದೆ.

    ನೀನಾಸಂ ಸತೀಶ್ ಜೊತೆ ಈ ಸಿನಿಮಾದಲ್ಲಿ ಶ್ರದ್ಧಾ ಶ್ರೀನಾಥ್ ನಾಯಕಿಯಾಗಿ ನಟಿಸಿದ್ದು, ವಸಿಷ್ಠ ಸಿಂಹ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಂದೀಶ್ ನಿರ್ದೇಶನದಲ್ಲಿ ಈ ಸಿನಿಮಾ ತಯಾರಾಗಿದೆ. ಈ ಸಿನಿಮಾಗೆ ಹಿಂದೆ ಗೋಧ್ರಾ ಎಂದು ಹೆಸರಿಡಲಾಗಿತ್ತು. ಸೆನ್ಸಾರ್ ಮಂಡಳಿಯ ಸಲಹೆ ಮೇರೆಗೆ ಡಿಯರ್ ವಿಕ್ರಮ್ ಎಂದು ಟೈಟಲ್ ಬದಲಾಯಿಸಲಾಗಿದೆ. ಈಗಾಗಲೇ ಟ್ರೈಲರ್ ರಿಲೀಸ್ ಆಗಿದ್ದು, ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಆಗಸ್ಟ್ 11ಕ್ಕೆ ಅಕ್ಷಯ್ ಕುಮಾರ್ ಮತ್ತು ಆಮೀರ್ ಖಾನ್ ನಡುವೆ ಬಿಗ್ ಫೈಟ್ : ಗೆಲುವು ಯಾರ ಪಾಲಿಗೆ?

    ಸತೀಶ್ ವೃತ್ತಿ ಜೀವನದ ಮಹತ್ವದ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಸತೀಶ್ ಹೋರಾಟಗಾರನ ಪಾತ್ರ ಮಾಡಿದ್ದಾರೆ. ಉಳಿದ ಪಾತ್ರಗಳ ಹಿನ್ನೆಲೆಯಲ್ಲಿ ಗೌಪ್ಯವಾಗಿ ಇಡಲಾಗಿದೆ. ಸಮಾಜದಲ್ಲಿ ನಡೆದ ಅನೇಕ ನೈಜ ಘಟನೆಗಳಿಗೆ ಹೋಲಿಕೆ ಆಗುವಂತಹ ದೃಶ್ಯಗಳನ್ನು ಕೂಡ ಈ ಸಿನಿಮಾದಲ್ಲಿ ಹೆಣೆಯಲಾಗಿದೆಯಂತೆ.

    Live Tv

  • ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಚಿತ್ರಕ್ಕೆ ಕಂಟಕ

    ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಚಿತ್ರಕ್ಕೆ ಕಂಟಕ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರಕ್ಕೆ ಕಂಟಕವೊಂದು ಎದುರಾಗಿದೆ. ಈ ಸಿನಿಮಾವನ್ನು ರಿಲೀಸ್ ಮಾಡದಂತೆ ಬೆಂಗಳೂರು ಭೂಗತ ಲೋಕದ ಮೊದಲ ಡಾನ್ ಎಂದು ಕರೆಯಲ್ಪಡುವ ಜಯರಾಜ್ ಪುತ್ರ ಅಜಿತ್ ಜಯರಾಜ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ : ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆ

    ಹೆಡ್ ಬುಷ್ ಸಿನಿಮಾ ಡಾನ್ ಜಯರಾಜ್ ಜೀವನವನ್ನು ಆಧರಿಸಿದ ಸಿನಿಮಾ ಎಂದು ಹೇಳಲಾಗಿತ್ತು. ಈ ಸಿನಿಮಾದ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಬರೆದಿದ್ದಾರೆ. ಅವರೇ ಈ ಹಿಂದೆ ಹೇಳಿದಂತೆ 1970ರ ಕಾಲದಲ್ಲಿ ಬೆಂಗಳೂರಿನಲ್ಲಿ ನಡೆದ ಭೂಗತ ಲೋಕದ ಕಥೆಯಿದೆ ಮತ್ತು ಅಲ್ಲಿ ಜಯರಾಜ್ ಇದ್ದಾರೆ ಎಂದು ಹೇಳಲಾಗಿತ್ತು. ಹಾಗಾಗಿ ತಮ್ಮ ತಂದೆಯ ಸಿನಿಮಾವನ್ನು ಯಾರೂ ಮಾಡದಂತೆ ಫಿಲ್ಮ್ ಚೇಂಬರ್ ಗೆ ಅಜಿತ್ ಜಯರಾಜ್ ಪತ್ರವೊಂದನ್ನು ಕೊಟ್ಟಿದ್ದಾರೆ. ಇದನ್ನೂ ಓದಿ : ಹಿರಿಯ ರಂಗಕರ್ಮಿ, ಏಣಗಿ ಬಾಳಪ್ಪನವರ ಪತ್ನಿ ಲಕ್ಷ್ಮೀಬಾಯಿ ನಿಧನ

    ಫಿಲ್ಮ್ ಚೇಂಬರ್ ಗೆ ಕೊಟ್ಟ ಪತ್ರದಲ್ಲಿ ‘ನನ್ನ ತಂದೆ ಜಯರಾಜ್ ಕುರಿತಾಗಿ ಸಿನಿಮಾ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ನಟ ಡಾಲಿ ಧನಂಜಯ್ ಅವರು ನನ್ನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಾಗಿ ನನ್ನ ತಂದೆಯ ಕುರಿತಾಗಿ ಯಾರೂ ಸಿನಿಮಾ ಮಾಡಬಾರದು. ಒಂದು ವೇಳೆ ಮಾಡಿದರೆ, ಕಾನೂನು ರೀತಿಯಲ್ಲಿ ಕ್ರಮ ತಗೆದುಕೊಳ್ಳುವುದಾಗಿ’ ಅವರು ಬರೆದಿದ್ದಾರೆ. ಇದನ್ನೂ ಓದಿ : ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲ

    ಇತ್ತೀಚೆಗಷ್ಟೇ ಹೆಡ್ ಬುಷ್ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಧನಂಜಯ್ ನಾಯಕನಾದರೆ, ಪಾಯಲ್ ರಜಪೂತ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್, ಶ್ರುತ ಹರಿಹರನ್, ಲೂಸ್ ಮಾದ ಯೋಗಿ, ವಸಿಷ್ಠ ಸಿಂಹ ಸೇರಿದಂತೆ ಹೆಸರಾಂತ ಕಲಾವಿದೇ ಈ ಸಿನಿಮಾದಲ್ಲಿ ಇದ್ದಾರೆ.