Tag: Vatal Nagraj

  • ಆ ರಜನಿಕಾಂತ್‍ಗೆ ಬುದ್ಧಿಯಿಲ್ಲ, ಶೂಟಿಂಗ್‍ಗೂ ಕೂಡ ಕರ್ನಾಟಕಕ್ಕೆ ಬರಬಾರದು: ವಾಟಾಳ್ ನಾಗರಾಜ್

    ಆ ರಜನಿಕಾಂತ್‍ಗೆ ಬುದ್ಧಿಯಿಲ್ಲ, ಶೂಟಿಂಗ್‍ಗೂ ಕೂಡ ಕರ್ನಾಟಕಕ್ಕೆ ಬರಬಾರದು: ವಾಟಾಳ್ ನಾಗರಾಜ್

    ಮೈಸೂರು: ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

    ರಜನಿಕಾಂತ್ ಅವರ ಕಾವೇರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಜನಿಕಾಂತ್ ಒಬ್ಬ ಕನ್ನಡ ದ್ರೋಹಿಯಾಗಿದ್ದು, ತಮಿಳುನಾಡಿನ ಏಜೆಂಟ್ ಆಗಿದ್ದಾರೆ. ರಜನಿಕಾಂತ್ ಶೂಟಿಂಗ್‍ಗೂ ಕೂಡ ಕರ್ನಾಟಕಕ್ಕೆ ಬರಬಾರದು. ಅವರ ಮನೆಗೆ ಬರಬೇಕಾದರೆ ಬರಲಿ. ಅವರೇನು ಗೌನ್ ಹಾಕೊಂಡು ಬರೋಕಾಗುತ್ತಾ? ಹಾಗೇನಾದರೂ ಬಂದರೆ ನಾವು ಹೋರಾಟ ಮಾಡುತ್ತೇವೆ ಎಂದು ತಿರುಗೇಟು ನೀಡಿದರು.

    ಆ ರಜಿನಿಕಾಂತ್‍ಗೆ ಬುದ್ಧಿ ಇಲ್ಲ. ಸಿನಿಮಾ ನಟನಿಂದ ನೇರವಾಗಿ ರಾಜಕಾರಣಿ ತರಹ ಮಾತನಾಡುತ್ತಿದ್ದಾರೆ. ಈಗಾಗಲೇ ಅವರಿಗೆ ಎಚ್ಚರಿಕೆ ಕೊಟ್ಟಿದೆ. ಮತ್ತೆ ಹೀಗೆ ಮಾತನಾಡಿದರೆ ಹೋರಾಟ ಮಾಡಬೇಕಾಗುತ್ತದೆ ಎಂದರು.

    ಕರ್ನಾಟಕದಲ್ಲಿ ಯಾವುದೇ ಪಕ್ಷ ಆಡಳಿತಕ್ಕೆ ಬಂದರೂ ಸರಿ, ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನವನ್ನು ಅನುಷ್ಟಾನಕ್ಕೆ ತರಬೇಕು. ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದು, ನಿರ್ವಹಣಾ ಮಂಡಳಿ ಅಥವಾ ಪ್ರಾಧಿಕಾರವೆಂಬ ತಾಂತ್ರಿಕ ಚೌಕಟ್ಟನ್ನು ಪ್ರದರ್ಶಿಸಬಾರದು ಎಂದು ರಜನಿಕಾಂತ್ ಚೆನ್ನೈನಲ್ಲಿ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಕರ್ನಾಟಕದ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಸಿಕ್ಕ ವಿಜಯ: ರಜನಿಕಾಂತ್

  • ಹ್ಯಾಟ್ರಿಕ್ ಠೇವಣಿ ಕಳೆದುಕೊಂಡ ಕನ್ನಡ ಹೋರಾಟಗಾರ ವಾಟಾಳ್!

    ಹ್ಯಾಟ್ರಿಕ್ ಠೇವಣಿ ಕಳೆದುಕೊಂಡ ಕನ್ನಡ ಹೋರಾಟಗಾರ ವಾಟಾಳ್!

    ಚಾಮರಾಜನಗರ: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಮ್ಮ ಠೇವಣಿ ಕಳೆದುಕೊಂಡಿದ್ದಾರೆ.

    ವಾಟಾಳ್ ನಾಗರಾಜ್ ಚಾಮರಾಜನಗರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಈಗ ವಾಟಾಳ್ ತಮ್ಮ ಹ್ಯಾಟ್ರಿಕ್ ಠೇವಣಿ ಕಳೆದುಕೊಂಡಿದ್ದಾರೆ.

    ಈ ಬಾರಿಯ ಚುನಾವಣೆಯಲ್ಲಿ ವಾಟಾಳ್ ನಾಗರಾಜ್ 5977 ಮತ ಪಡೆದಿದ್ದು, ಕಳೆದ ಎರಡು ಚುನಾವಣೆಯಲ್ಲೂ ಠೇವಣಿ ಕಳೆದುಕೊಂಡಿದ್ದರು.

  • ಬೆಂಗಳೂರು ಬಂದ್: ಬಿಜೆಪಿಗೆ ವಾಟಾಳ್ ನಾಗರಾಜ್ ಡೆಡ್‍ಲೈನ್

    ಬೆಂಗಳೂರು ಬಂದ್: ಬಿಜೆಪಿಗೆ ವಾಟಾಳ್ ನಾಗರಾಜ್ ಡೆಡ್‍ಲೈನ್

    ಬೆಂಗಳೂರು: ಮಹದಾಯಿ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಬಗೆ ಹರಿಸುವ ಭರವಸೆಯನ್ನು ನೀಡದೇ ಇದ್ದರೆ ಫೆ.4 ರಂದು ಬೆಂಗಳೂರು ಬಂದ್ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ರಾಜ್ಯ ಬಿಜೆಪಿಗೆ ಡೆಡ್‍ಲೈನ್ ನೀಡಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಜನವರಿ 25ರಂದು ಸ್ವಯಂ ಪ್ರೇರಿತವಾಗಿ ಕರ್ನಾಟಕ ಬಂದ್ ನಡೆಸಿದ್ದೇವೆ. ಇದಕ್ಕೆ ಯಾವ ಸರ್ಕಾರ ಕೂಡ ಬೆಂಬಲ ನೀಡಿರಲಿಲ್ಲ. ಆದರೆ ಬಿಜೆಪಿ ನಾಯಕರು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ನಾಲಗೆ ಸರಿ ಇಲ್ಲ. ಹಾದಿಬೀದಿಯಲ್ಲಿ ಮಾತನಾಡುವುದನ್ನು ಬಿಟ್ಟು ಪ್ರಧಾನ ಮಂತ್ರಿ ಬಳಿ ಮಾತನಾಡಿ ಸಮಸ್ಯೆ ಬಗೆಹರಿಸಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

    ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಫೆ. 4ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಹೀಗಾಗಿ 3ನೇ ತಾರೀಖಿನ ಒಳಗಡೆ ಮಹದಾಯಿ ನೀರಿನ ಸಮಸ್ಯೆಯನ್ನು ನಾನು ಬಗೆಹರಿಸುತ್ತೇನೆ ಎಂದು ಭರವಸೆ ಕೊಡಿಸಿ. ಇಲ್ಲದೇ ಇದ್ದರೆ 4ರಂದು ಬೆಂಗಳೂರು ಬಂದ್ ಮಾಡಬೇಕಾಗುತ್ತದೆ. ನಮಗೆ ಸ್ಪಷ್ಟವಾದ ಭರವಸೆ ಕೊಡಿಸಬೇಕು. ಶನಿವಾರ ಮಧ್ಯಾಹ್ನದ ತನಕ ಕಾಯುತ್ತೇವೆ. ಮಧ್ಯಾಹ್ನದ ಒಳಗಡೆ ಭರವಸೆ ಸಿಗದೇ ಹೋದರೆ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ವಾಟಾಳ್ ನಾಗರಾಜ್ ಡೆಡ್‍ಲೈನ್ ನೀಡಿದ್ದಾರೆ,

    ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿ ಪ್ರಧಾನಮಂತ್ರಿಯವರಿಗೆ ಪತ್ರ ಬರೆಯುವಂತೆ ಮನವಿ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

  • ಲಕ್ಷ್ಮೀ ಹೆಬ್ಬಾಳ್ಕರ್ ಕನ್ನಡಿಗರ ಪಾಲಿಗೆ ಪಿಶಾಚಿ, ದೆವ್ವ: ವಾಟಾಳ್ ನಾಗರಾಜ್

    ಲಕ್ಷ್ಮೀ ಹೆಬ್ಬಾಳ್ಕರ್ ಕನ್ನಡಿಗರ ಪಾಲಿಗೆ ಪಿಶಾಚಿ, ದೆವ್ವ: ವಾಟಾಳ್ ನಾಗರಾಜ್

    ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ಕೆಟ್ಟ ಮಹಿಳೆಯಾಗಿದ್ದು, ಕನ್ನಡಿಗರ ಪಾಲಿಗೆ ಪಿಶಾಚಿ ಮತ್ತು ದೆವ್ವ ಎಂದು ವಾಟಾಳ್ ನಾಗರಾಜ್ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

    ಮಹಾರಾಷ್ಟ್ರಕ್ಕೆ ಜೈ ಎನ್ನುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕನ್ನಡ ಒಕ್ಕೂಟ, ಪ್ರವೀಣ್ ಶೆಟ್ಟಿ ಬಣ, ಕರವೇ ಕಾರ್ಯಕರ್ತರು, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಗರದ ಮೌರ್ಯ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಮತ್ತು ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

    ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್‍ಗೆ ಇಪ್ಪತ್ತೆಂಟು ಗಂಟೆಗಳ ಕಾಲ ಗಡುವು ನೀಡುತ್ತೇವೆ. ಹೆಬ್ಬಾಳ್ಕರ್ ಅವರನ್ನು ಮಹಿಳಾ ಅಧ್ಯಕ್ಷ ಗಿರಿಯಿಂದ ಕೆಳಗಿಳಿಸಿ ಇಲ್ಲದಿದ್ದರೆ ನಾವು ಬೆಳಗಾವಿಯಿಂದ ಗಡಿಪಾರು ಮಾಡುವುದ್ದಕ್ಕೆ ಜಿಲ್ಲಾಡಳಿತಕ್ಕೆ ಹೇಳುತ್ತೇವೆ ಎಂದು ಆಗ್ರಹಿಸಿದರು.

     

    ಒಂದು ವೇಳೆ ಹುದ್ದೆಯಿಂದ ಕೆಳಗಡೆ ಇಳಿಸದೇ ಇದ್ದಲ್ಲಿ, ಬೆಳಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್‍ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಆಕೆಗೆ ತಲೆ ಸರಿಯಿಲ್ಲ ಆಕೆಯನ್ನು ನಿಮ್ಹಾನ್ಸ್‍ಗೆ ಸೇರಿಸಬೇಕು ಎಂದು ವಾಟಾಳ್ ನಾಗರಾಜ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ ಗೋವಿಂದು ಮಾತನಾಡಿ, ಲಕ್ಷ್ಮೀ ಹೆಬ್ಬಾಳ್ಕರ್‍ಗೆ ನಾಚಿಕೆಯಾಗಬೇಕು. ಕನ್ನಡಿಗರ ಮಾನ ಮರ್ಯಾದೆ ಹರಾಜು ಹಾಕಿದ್ದಾರೆ. ಅವರ ನಾಟಕದ ಕ್ಷಮೆ ನಮಗೆ ಬೇಕಾಗಿಲ್ಲ, ಅದನ್ನು ನಾವು ಒಪ್ಪಿಕೊಳ್ಳುವುದ್ದಿಲ್ಲ. ಲಕ್ಷ್ಮೀ ಅವರನ್ನು ಗಡಿಪಾರು ಮಾಡಲಿ ಮತ್ತು ಅವರ ರಾಜೀನಾಮೆ ಪಡೆದುಕೊಳ್ಳಬೇಕು. ಮುಖ್ಯಮಂತ್ರಿಗಳೇ, ಪರಮೇಶ್ವರ್, ದಿನೇಶ್ ಗುಂಡುರಾವ್ ಹೆಬ್ಬಾಳ್ಕರ್ ವಿರುದ್ಧ ಏನ್ ಕ್ರಮ ಕೈಗೊಳ್ಳುತ್ತೀರಾ ಎಂದು ಪ್ರಶ್ನಿಸಿ ಕಿಡಿಕಾರಿದರು.

    ಇಂಧನ ಸಚಿವ ಡಿಕೆ ಶಿವಕುಮಾರ್ ಲಕ್ಷ್ಮಿ ಅವರ ಸಮರ್ಥನೆಗೆ ಇಳಿದಿದ್ದಾರೆ. ನಿಮಗೆ ಮರಾಠಿ ಬರುತ್ತಾ? ಭಾಷೆ ಬರದೆ ಇದ್ದರೆ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತಿರಾ? ಗ್ಲಾಮರ್ ಮತ್ತು ದುಡ್ಡು ಇದೆ ಅಂತಾ ಆಟವಾಡುತ್ತಿದ್ದೀರ? ಕನ್ನಡ ಪರ ಏನು ಕೆಲಸ ಮಾಡಿದ್ದೀರಾ? ಸಂಬಾಜಿ ಪಾಟೀಲ್ ಕನ್ನಡಿಗರ ಶವ ಯಾತ್ರೆ ಮಾಡುತ್ತೀನಿ ಎಂದಾಗ ಎಲ್ಲಿ ಹೋಗಿತ್ತು ನಿಮ್ಮ ಆಕ್ರೋಶ? ಶನಿವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ದೊಡ್ಡ ಹೋರಾಟ ಮಾಡುತ್ತೇವೆ. ಆಕೆಯನ್ನು ಪಕ್ಷದಿಂದ ಕಿತ್ತು ಹಾಕದಿದ್ದರೆ ಉಗ್ರಹೋರಾಟ ನಡೆಸುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.