Tag: veena achaiah

  • ಮಡಿಕೇರಿಯಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ರಮೇಶ್ ‘ಕೈ’ ಲೀಲೆ

    ಮಡಿಕೇರಿಯಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ರಮೇಶ್ ‘ಕೈ’ ಲೀಲೆ

    ಮಡಿಕೇರಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಾಜಿ ಜಿಲ್ಲಾ ಅಧ್ಯಕ್ಷ ಹಾಗೂ ಹಾಲಿ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ ರಮೇಶ್ ಅವರು ಎಮ್‍ಎಲ್‍ಸಿ ವೀಣಾ ಅಚ್ಚಯ್ಯ ಅವರ ಕೈಹಿಡಿದುಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಮಡಿಕೇರಿ ಕೋಟೆ ಆವರಣದಲ್ಲಿ ನಡೆದ 71 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಟಿ.ಪಿ ರಮೇಶ್ ಮತ್ತು ವೀಣಾ ಅಚ್ಚಯ್ಯ ಅಕ್ಕ ಪಕ್ಕ ಕುಳಿತುಕೊಂಡಿದ್ದರು. ಈ ಸಂದರ್ಭದಲ್ಲಿ ರಮೇಶ್ ಅವರು ವೀಣಾ ಅಚ್ಚಯ್ಯ ಅವರ ಕೈಯನ್ನು ಹಿಡಿದುಕೊಳ್ಳುತ್ತಾರೆ. ಕೂಡಲೇ ವೀಣಾ ಅಚ್ಚಯ್ಯ ಮುಜುಗರಕ್ಕೀಡಾಗಿ ಕೈಯನ್ನು ಬಿಡಿಸಿಕೊಳ್ಳುತ್ತಾರೆ.

    ವೇದಿಕೆಯಲ್ಲಿ ಇರುವಾಗ ಎಂಎಲ್‍ಸಿ ವೀಣಾ ಅಚ್ಚಯ್ಯ ಅವರ ಮೇಲೆ ಕೈ ಹಾಕಿರುವುದು ಎಡೆಮಾಡಿಕೊಟ್ಟಿದ್ದು ವಿವಾದಕ್ಕೆ ಕಾರಣವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಅಗಿ ಹರಿದಾಡುತ್ತಿದೆ.