Tag: Veer Savarkar

  • ನೀವು ಮನುಸ್ಮೃತಿ ಪರವೋ ಸಂವಿಧಾನದ ಪರವೋ? 50% ಮೀಸಲಾತಿ ಗೋಡೆಯನ್ನು ತೆಗೆಯುತ್ತೇವೆ: ರಾಹುಲ್‌ ಗಾಂಧಿ

    ನೀವು ಮನುಸ್ಮೃತಿ ಪರವೋ ಸಂವಿಧಾನದ ಪರವೋ? 50% ಮೀಸಲಾತಿ ಗೋಡೆಯನ್ನು ತೆಗೆಯುತ್ತೇವೆ: ರಾಹುಲ್‌ ಗಾಂಧಿ

    – ಸಂವಿಧಾನ ಚರ್ಚೆಯಲ್ಲಿ ಬಿಜೆಪಿಗೆ ಸವಾಲು
    – ಸಂವಿಧಾನದ ಪುಸ್ತಕದ ಜೊತೆ ಮನುಸ್ಮೃತಿಯನ್ನು ತಂದ ರಾಹುಲ್‌
    – ಬಿಜೆಪಿ ದೇಶದ ಹೆಬ್ಬೆರಳನ್ನು ಕತ್ತರಿಸಿದೆ

    ನವದೆಹಲಿ: ಭಾರತದ ಆಡಳಿತ ವ್ಯವಸ್ಥೆ ಮನುಸ್ಮೃತಿಯನ್ನು (Manusmriti) ಪಾಲಿಸಬೇಕು ಎಂದು ವೀರ್ ಸಾವರ್ಕರ್‌ (Savarkar) ಹೇಳಿದ್ದರು. ಈ‌ ವೀರ್ ಸಾವರ್ಕರ್‌ ಅನುಸರಿಸುವ ಬಿಜೆಪಿ (BJP) ನಾಯಕರು ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಸಂವಿಧಾನದ ಪರವೋ, ಸಾರ್ವಕರ್ ಪಾಲಿಸುವ ಮನುಸ್ಮೃತಿ ಪರವೋ ಎಂಬುದನ್ನು  ಸ್ಪಷ್ಟಪಡಿಸಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಆಗ್ರಹಿಸಿದ್ದಾರೆ.

    ಸಂವಿಧಾನ (Constitution) ಜಾರಿಗೆ ಬಂದು 75 ವರ್ಷವಾದ ಹಿನ್ನಲೆಯಲ್ಲಿ ಲೋಕಸಭೆಯಲ್ಲಿ ನಡೆಯುತ್ತಿರುವ ವಿಶೇಷ ಚರ್ಚೆಯಲ್ಲಿ ಮಾತನಾಡಿದ ಅವರು, ಹಿಂದೆ ಭಾರತ ಹೇಗೆ ನಡೆಯುತ್ತಿತ್ತು? ಈಗಲೂ ಹಾಗೆಯೇ ನಡೆಸಲು ಬಿಜೆಪಿ ನಾಯಕರು ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ಕೀಳುಜಾತಿಯವನು ಎನ್ನುವ ಕಾರಣಕ್ಕೆ ವಿದ್ಯೆಯನ್ನೇ ಕಲಿಸದೇ ದ್ರೋಣಚಾರ್ಯರು ಗುರುದಕ್ಷಣೆಯಾಗಿ ಏಕಲವ್ಯನಿಂದ ಹೆಬ್ಬೆರಳು ಪಡೆದರು. ಹೆಬ್ಬೆರಳು ಕೈಗೆ ಮುಖ್ಯವಾಗಿದೆ, ದ್ರೋಣಾಚಾರ್ಯರು ಹೇಗೆ ಏಕಲವ್ಯನ ಹೆಬ್ಬೆರಳು ಕತ್ತರಿಸಿದರೋ ಹಾಗೇ ನೀವೂ ದೇಶದ ಹೆಬ್ಬೆರಳು ಕತ್ತರಿಸಿದ್ದೀರಿ ಎಂದು ಆರೋಪಿದರು.

    ಅಗ್ನಿವೀರ್, ಪೇಪರ್ ಲೀಕ್ ಜಾರಿ ಮಾಡುವ ಮೂಲಕ ಭಾರತದ ಯುವಕರ ಹೆಬ್ಬೆರಳು ಕತ್ತರಿಸಿದ್ದೀರಿ. ಅದಾನಿ ಅವರಿಗೆ ಧಾರವಿ ಕೊಟ್ಟು ಅಲ್ಲಿ ಸಣ್ಣ ಪುಟ್ಟ ಉದ್ಯಮ ನಡೆಸುತ್ತಿದ್ದ ಜನರು ಹೆಬ್ಬೆರಳು ಕತ್ತರಿಸಿದ್ದೀರಿ. ಬೆಂಬಲ ಬೆಲೆ ಕೇಳುವ ರೈತರ ಮೇಲೆ ಟಿಯರ್ ಗ್ಯಾಸ್ ಬಳಕೆ ಮಾಡುವ ಮೂಲಕ ರೈತರ ಬೆರಳು ಕತ್ತರಿಸಲಾಗಿದೆ. ಸಂವಿಧಾನದಲ್ಲಿ ಜನರ ಬೆರಳು ಕತ್ತರಿಸಿ ಅವರ ಹಕ್ಕುಗಳನ್ನು ಕಿತ್ತುಕೊಳ್ಳಿ ಎಂದು ಹೇಳಿಲ್ಲ ಆದರೆ ನೀವು ಅವಕಾಶಗಳನ್ನು ಕಿತ್ತುಕೊಂಡಿದ್ದೀರಿ ಎಂದು ದೂರಿದರು.

    ಹತ್ರಾಸ್‌ನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಇತ್ತೀಚೆಗೆ ನಾನು ಆ ಯುವತಿಯ ಕುಟುಂಬವನ್ನು ಭೇಟಿ ಮಾಡಿದೆ. ಅಲ್ಲಿ ಗ್ಯಾಂಗ್ ರೇಪ್ ಮಾಡಿದವರು ಹೊರಗೆ ಸುತ್ತಾಡುತ್ತಿದ್ದಾರೆ. ಯುವತಿಯ ಕುಟುಂಬಸ್ಥರು ಮನೆಯಿಂದ ಹೊರಗೆ ಬಾರದಂತೆ ಮಾಡಲಾಗಿದೆ. ಯುವತಿಯ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಲಿಲ್ಲ. ಅತ್ಯಚಾರಿಗಳನ್ನು ಹೊರಗೆ ಸುತ್ತಲು ಬಿಡಿ ಎಂದು ಸಂವಿಧಾನ ಅಲ್ಲ ಮನುಸ್ಮೃತಿಯಲ್ಲಿ ಬರೆದಿದೆ. ಉತ್ತರ ಪ್ರದೇಶದಲ್ಲಿ ಮನುಸ್ಮೃತಿ ಜಾರಿಯಾಗಿದೆ ಎಂದು ಆಕ್ರೋಶ ಹೊರ ಹಾಕಿದರು.

    ಜಾತಿ, ಧರ್ಮ, ಸ್ಥಳ ಹೆಸರಿನ ಮೇಲೆ ತಾರತಮ್ಯ ಮಾಡಬಾರದು ಎಂದು ಸಂವಿಧಾನ ಹೇಳಿದೆ. ಆದರೆ ನೀವು ಹೋದ ಕಡೆ ಧರ್ಮಗಳ ನಡುವೆ ಜಗಳ ಹಚ್ಚುತ್ತಿದ್ದೀರಿ. ದ್ವೇಷ ಬೆಳೆಸುತ್ತಿದ್ದೀರಿ, ದಲಿತ ಕುಟುಂಬಗಳನ್ನು ಮನೆಯಲ್ಲಿ ಕೂಡಿ ಹಾಕಿದ್ದೀರಿ. ಇದು ಯಾವ ಸಂವಿಧಾನದಲ್ಲಿ ಬರೆದಿದೆ? ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆ ಇಲ್ಲ. ಇದಕ್ಕಾಗಿ ನಾವು ಜಾತಿ ಜನಗಣತಿ ಮಾಡಲು ನಿರ್ಧರಿಸಿದ್ದೇವೆ. ಬಳಿಕ ಭಾರತದಲ್ಲಿ ಹೊಸ ರೀತಿಯ ಅಭಿವೃದ್ಧಿಯಾಗಲಿದೆ ಹೊಸ ರೀತಿಯ ರಾಜಕೀಯ ಶುರುವಾಗಲಿದೆ 50% ಮೀಸಲಾತಿ ಗೋಡೆಯನ್ನು ಒಡೆದು ಹಾಕಲಿದ್ದೇವೆ ನೀವು ಏನ್ ಮಾಡಬೇಕು ಮಾಡಿ ಎಂದು ಸವಾಲು ಹಾಕಿದರು.

  • ಸಾವರ್ಕರ್ ಪತ್ನಿ ಪಾತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ

    ಸಾವರ್ಕರ್ ಪತ್ನಿ ಪಾತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ

    ಬಾಲಿವುಡ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಪ್ರೊಮೋ ರಿಲೀಸ್ ಆಗಿದ್ದು, ಸಾರ್ವಕರ್ ಪತ್ನಿಯಾಗಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ ಲೋಕಂಡೆ  (Ankita Lokande) ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅವರೇ ಸಾವರ್ಕರ್ ಪಾತ್ರವನ್ನೂ ನಿರ್ವಹಿಸಿದ್ದಾರೆ.

    ಈ ನಡುವೆ ಸಿನಿಮಾ ಬಗ್ಗೆ ಅಪಸ್ವರ ಕೇಳಿ ಬಂದಿದೆ. ನಿರ್ದೇಶಕರ ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ.

    ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್ ಬೋಸ್ ಇವರೆಲ್ಲರಿಗೂ ಸಾವರ್ಕರ್ ಸ್ಫೂರ್ತಿಯಾಗಿದ್ದರು ಎನ್ನುವ ಅರ್ಥದಲ್ಲಿ ಬರೆದಿದ್ದರು. ಈ ಬರಹವೇ ನೇತಾಜಿ ಕುಟುಂಬಕ್ಕೆ ಕೋಪ ತರಿಸಿದೆ.

    ನೇತಾಜಿ ಮರಿ ಮೊಮ್ಮಗ ಈ ಕುರಿತು ಮಾತನಾಡಿ, ‘ಸುಳ್ಳು ಇತಿಹಾಸವನ್ನು ಯಾರೂ ಹೇಳಬಾರದು. ಸಾವರ್ಕರ್ ಸಿದ್ಧಾಂತಕ್ಕೆ ನೇತಾಜಿ ವಿರೋಧಿಯಾಗಿದ್ದರು. ನೇತಾಜಿ ಜಾತ್ಯಾತೀತ  ಗುಣಗಳನ್ನು ಹೊಂದಿದವರು. ನಿಮ್ಮ ಸಿನಿಮಾ ಪ್ರಚಾರಕ್ಕೆ, ಗಿಮಿಕ್ ಗಾಗಿ ಸುಳ್ಳು ಹೇಳಬೇಡಿ. ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿ. ಇಲ್ಲವೇ ಸುಮ್ಮನಿದ್ದು ಬಿಡಿ’ ಎಂದು ಹೇಳಿದ್ದಾರೆ.

     

    ನೇತಾಜಿಗೆ ಪ್ರೇರಣೆ ಕಂಡಿತಾ ಸಾವರ್ಕರ್ ಅಲ್ಲ. ಅವರಿಗೆ ಪ್ರೇರಣೆ ಸ್ವಾಮಿ ವಿವೇಕಾನಂದರು. ಅವರು ಅಧ್ಯಾತ್ಮದ ಗುರು ಕೂಡ ಆಗಿದ್ದರು. ಮತ್ತೊಬ್ಬರು ಸ್ವಾತಂತ್ರ್ಯ ಹೋರಾಟಗಾರ ದೇಶಬಂಧು ಚಿತ್ತರಂಜನ್ ದಾಸ್. ಇವರ ಹೊರತಾಗಿ ಯಾರೂ ಅವರಿಗೆ ಸ್ಫೂರ್ತಿ ಆಗಿರಲಿಲ್ಲವೆಂದು ನೇತಾಜಿ ಮರಿಮೊಮ್ಮಗ ಹೇಳಿದ್ದಾರೆ. ಸಾವರ್ಕರ್ ಅವರನ್ನು ನೇತಾಜಿ ವಿರೋಧಿಸುತ್ತಲೇ ಬಂದಿದ್ದರು ಎಂದು ಗಟ್ಟಿಯಾಗಿ ಹೇಳಿದ್ದಾರೆ.

  • ಸ್ವಾತಂತ್ರ್ಯೋತ್ಸವ ದಿನ ಸಾವರ್ಕರ್‌ಗೆ ಜೈಘೋಷ – ಕ್ಷಮೆ ಕೇಳಿದ ಮುಖ್ಯ ಶಿಕ್ಷಕಿ

    ಸ್ವಾತಂತ್ರ್ಯೋತ್ಸವ ದಿನ ಸಾವರ್ಕರ್‌ಗೆ ಜೈಘೋಷ – ಕ್ಷಮೆ ಕೇಳಿದ ಮುಖ್ಯ ಶಿಕ್ಷಕಿ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ ಮಂಚಿ ಸರ್ಕಾರಿ ಶಾಲೆಯಲ್ಲಿ (Government School) ಸ್ವಾತಂತ್ರ್ಯೋತ್ಸವದ ದಿನ (Independence Day) ಮಕ್ಕಳಿಂದ ವೀರ ಸಾವರ್ಕರ್‌ಗೆ (Veer Savarkar) ಜೈಘೋಷ ಹಾಕಿಸಿದ್ದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

    ಅಂದು ಶಾಲಾ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಹಾಕಿಸಿದ್ದು ವೀರ ಸಾವರ್ಕರ್ ಗೂ ಜೈಕಾರ ಹಾಕಿಸಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೋರ್ವ ವೀಡಿಯೋ ಮಾಡಿ ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ ವೀರ ಸಾವರ್ಕರ್ ಗೆ ಜೈಕಾರ ಹಾಕಿಸಿದ್ದಾರೆಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದ. ಇದನ್ನೂ ಓದಿ: ಡಿಕೆಶಿ ರಾಜ್ಯದ ಸೂಪರ್ ಸಿಎಂ, ಸಿದ್ದರಾಮಯ್ಯರನ್ನ ಮುಗಿಸುವ ಎಲ್ಲ ಪ್ಲ್ಯಾನ್ ಮಾಡಿದ್ದಾರೆ: ಯತ್ನಾಳ್ ಬಾಂಬ್

    ಈ ವಿವಾದದ ಹಿನ್ನಲೆಯಲ್ಲಿ ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಸಭೆ ನಡೆದಿದ್ದು,ಮುಖ್ಯ ಶಿಕ್ಷಕಿಯನ್ನು(Teacher) ತರಾಟೆಗೆ ತೆಗೆದುಕೊಂಡು ಕ್ಷಮೆ ಕೇಳುವಂತೆ ಮುಸ್ಲಿಂ ವಿದ್ಯಾರ್ಥಿಗಳ ಪೋಷಕರು ಹಾಗೂ ಕೆಲ ರಾಜಕೀಯ ಮುಖಂಡರು ಆಗ್ರಹಿಸಿ ಗಲಾಟೆ ನಡೆಸಿದ್ದರು. ಕೊನೆಗೆ ಮನ ನೊಂದು ಮುಖ್ಯ ಶಿಕ್ಷಕಿ ಕ್ಷಮೆಯಾಚಿಸಿದ್ದರು.

    ಶಾಲೆಯಲ್ಲಿ ಆದ ವಿಚಾರವನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಬಗ್ಗೆ ಅಸಮಧಾನ ಹೊಂದಿದ್ದ ಮುಖ್ಯ ಶಿಕ್ಷಕಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ

    ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ

    ನವದೆಹಲಿ: ಡಾ.ಹೆಡ್ಗೆವಾರ್ (Dr.Hedgewar) ಮತ್ತು ಸ್ವತಂತ್ರ ವೀರ ಸಾವರ್ಕರ್ (Veer Savarkar) ಅವರ ಅಧ್ಯಾಯಗಳನ್ನು ಪಠ್ಯಪುಸ್ತಕಗಳಿಂದ (Textbook) ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿಕೆ ನೀಡಿದ್ದಾರೆ.

    ಶನಿವಾರ ನಡೆದ ವಿಡಿ ಸಾವರ್ಕರ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ (Textbook Revise) ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಟೀಕಿಸಿದರು. ಅಲ್ಲದೇ ಇದಕ್ಕಿಂತ ನೋವಿನ ಸಂಗತಿ ಇನ್ನೊಂದಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ಅವಧಿಯ ಪಠ್ಯಗಳಿಗೆ ಸರ್ಕಾರ ಕತ್ತರಿ- ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಠ್ಯಕ್ಕೆ ಬ್ರೇಕ್

    TEXTBOOK

    ಕರ್ನಾಟಕ ಸರ್ಕಾರ 6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಮತ್ತು ಕನ್ನಡ ಪಠ್ಯಪುಸ್ತಕಗಳ ಪರಿಷ್ಕರಣೆಯಲ್ಲಿ ಆರ್‌ಎಸ್‌ಎಸ್ (RSS) ಸಂಸ್ಥಾಪಕ ಹೆಡ್ಗೆವಾರ್ ಮತ್ತು ಹಿಂದುತ್ವದ ಸಿದ್ಧಾಂತವನ್ನು ಹೊಂದಿದ್ದ ವಿಡಿ ಸಾವರ್ಕರ್ ಅವರ ಅಧ್ಯಾಯಗಳನ್ನು ಕೈಬಿಡಲು ಕರ್ನಾಟಕ ಕ್ಯಾಬಿನೆಟ್ ಗುರುವಾರ ಅನುಮೋದನೆ ನೀಡಿದ ಬಳಿಕ ನಿತಿನ್ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ 2 ರಾಜ್ಯಗಳು – ಸರ್ಕಾರಕ್ಕೆ ಮತ್ತಷ್ಟು ತಲೆನೋವು

    ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಶಾಲಾ ಪಠ್ಯಕ್ರಮದಿಂದ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡ್ಗೆವಾರ್ ಮತ್ತು ವಿಡಿ ಸಾವರ್ಕರ್ ಅವರ ಪಠ್ಯಗಳನ್ನು ಕೈಬಿಡುವುದಾಗಿ ಜೂನ್ 15ರಂದು ಘೋಷಣೆ ಮಾಡಿದ್ದರು. ಕೆಬಿ ಹೆಡ್ಗೆವಾರ್ ಅವರ ಪಠ್ಯಕ್ರಮವನ್ನು ಕೈಬಿಡಲಾಗಿದೆ. ಕಳೆದ ವರ್ಷ ಬಿಜೆಪಿ (BJP) ಸರ್ಕಾರ ಏನೇ ಬದಲಾವಣೆಗಳನ್ನು ತಂದಿದ್ದರೂ ಸಹಿತ ನಾವು ಅದನ್ನು ಬದಲಾಯಿಸಿ ಮರುಪರಿಚಯಿಸಿದ್ದೇವೆ. ಎಲ್ಲಾ ವಿವರಗಳು ಶೀಘ್ರವೇ ಲಭ್ಯವಾಗಲಿದೆ ಎಂದರು. ಇದನ್ನೂ ಓದಿ: PublicTV Explainer: ಗೃಹಜ್ಯೋತಿ ಗ್ಯಾರಂಟಿ- ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ ಶಾಲಾ ಪಠ್ಯಪುಸ್ತಕಗಳ ಪಠ್ಯಕ್ರಮಗಳನ್ನು ಪರಿಷ್ಕರಣೆ ಮಾಡುವ ಸಲುವಾಗಿ ಸಂಪುಟ ಸಭೆ ನಡೆಸಿದ್ದು, 10ನೇ ತರಗತಿ ಕನ್ನಡ ಪಠ್ಯಪುಸ್ತಕದಿಂದ ಹೆಡ್ಗೆವಾರ್ ಮತ್ತು ಸಾವರ್ಕರ್ ಅಧ್ಯಾಯಗಳನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರೋದೇ ಲೇಸು ಎಂದಿದ್ದೆ: ನಿತಿನ್ ಗಡ್ಕರಿ

  • ಸಾವರ್ಕರ್  ಸಿನಿಮಾ: ನಿರ್ದೇಶಕನ ವಿರುದ್ಧ ನೇತಾಜಿ ಫ್ಯಾಮಿಲಿ ಕಿಡಿಕಿಡಿ

    ಸಾವರ್ಕರ್ ಸಿನಿಮಾ: ನಿರ್ದೇಶಕನ ವಿರುದ್ಧ ನೇತಾಜಿ ಫ್ಯಾಮಿಲಿ ಕಿಡಿಕಿಡಿ

    ಬಾಲಿವುಡ್ ನಟ, ನಿರ್ದೇಶಕ ರಣದೀಪ್ ಹೂಡಾ (Randeep Hooda) ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ.

    ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್ ಬೋಸ್ ಇವರೆಲ್ಲರಿಗೂ ಸಾವರ್ಕರ್ ಸ್ಫೂರ್ತಿಯಾಗಿದ್ದರು ಎನ್ನುವ ಅರ್ಥದಲ್ಲಿ ಬರೆದಿದ್ದರು. ಈ ಬರಹವೇ ನೇತಾಜಿ ಕುಟುಂಬಕ್ಕೆ ಕೋಪ ತರಿಸಿದೆ.

    ನೇತಾಜಿ ಮರಿ ಮೊಮ್ಮಗ ಈ ಕುರಿತು ಮಾತನಾಡಿ, ‘ಸುಳ್ಳು ಇತಿಹಾಸವನ್ನು ಯಾರೂ ಹೇಳಬಾರದು. ಸಾವರ್ಕರ್ ಸಿದ್ಧಾಂತಕ್ಕೆ ನೇತಾಜಿ ವಿರೋಧಿಯಾಗಿದ್ದರು. ನೇತಾಜಿ ಜಾತ್ಯಾತೀತ  ಗುಣಗಳನ್ನು ಹೊಂದಿದವರು. ನಿಮ್ಮ ಸಿನಿಮಾ ಪ್ರಚಾರಕ್ಕೆ, ಗಿಮಿಕ್ ಗಾಗಿ ಸುಳ್ಳು ಹೇಳಬೇಡಿ. ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿ. ಇಲ್ಲವೇ ಸುಮ್ಮನಿದ್ದು ಬಿಡಿ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ಚೆನ್ನೈ ಟೀಮ್ ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ವಿಘ್ನೇಶ್ ಶಿವನ್ ಪೋಸ್

    ನೇತಾಜಿಗೆ ಪ್ರೇರಣೆ ಕಂಡಿತಾ ಸಾವರ್ಕರ್ ಅಲ್ಲ. ಅವರಿಗೆ ಪ್ರೇರಣೆ ಸ್ವಾಮಿ ವಿವೇಕಾನಂದರು. ಅವರು ಅಧ್ಯಾತ್ಮದ ಗುರು ಕೂಡ ಆಗಿದ್ದರು. ಮತ್ತೊಬ್ಬರು ಸ್ವಾತಂತ್ರ್ಯ ಹೋರಾಟಗಾರ ದೇಶಬಂಧು ಚಿತ್ತರಂಜನ್ ದಾಸ್. ಇವರ ಹೊರತಾಗಿ ಯಾರೂ ಅವರಿಗೆ ಸ್ಫೂರ್ತಿ ಆಗಿರಲಿಲ್ಲವೆಂದು ನೇತಾಜಿ ಮರಿಮೊಮ್ಮಗ ಹೇಳಿದ್ದಾರೆ. ಸಾವರ್ಕರ್ ಅವರನ್ನು ನೇತಾಜಿ ವಿರೋಧಿಸುತ್ತಲೇ ಬಂದಿದ್ದರು ಎಂದು ಗಟ್ಟಿಯಾಗಿ ಹೇಳಿದ್ದಾರೆ.

  • ರಾಹುಲ್ ಗಾಂಧಿ ಕ್ಷಮೆ ಕೇಳದಿದ್ರೆ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

    ರಾಹುಲ್ ಗಾಂಧಿ ಕ್ಷಮೆ ಕೇಳದಿದ್ರೆ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

    ನವದೆಹಲಿ: ಸಾವರ್ಕರ್ ಬಗೆಗೆ ನೀಡಿರುವ ಹೇಳಿಕೆಗೆ ರಾಹುಲ್ ಗಾಂಧಿ (Rahul Gandhi) ಕ್ಷಮೆ ಯಾಚಿಸದಿದ್ದರೆ ನಾನು ಅವರ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲಿಸುತ್ತೇನೆ ಎಂದು ವೀರ್ ಸಾವರ್ಕರ್ (Veer Savarkar) ಅವರ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.

    ವೀರ್ ಸಾವರ್ಕರ್ ಬ್ರಿಟಿಷರ ಕ್ಷಮೆ ಯಾಚಿಸಿದರು ಎಂದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ (Congress) ಪಕ್ಷ ವೀರ್ ಸಾವರ್ಕರ್ ಅವರಿಗೆ ಅಗೌರವ ತೋರುತ್ತಿರುವುದು ಇದೇ ಮೊದಲಲ್ಲ. ಕ್ಷಮೆಯಾಚಿಸುವ ಬದಲು ಅವರು ಪುನರಾವರ್ತಿಸುತ್ತಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ರಾಹುಲ್ ಗಾಂಧಿ ವಿರುದ್ಧ ದಾದರ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ದೂರುಗಳನ್ನು ದಾಖಲಿಸಿದ್ದೇನೆ. ಐದು ವರ್ಷಗಳ ಹಿಂದೆ ವಿಡಿ ಸಾವರ್ಕರ್ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಕಳುಹಿಸುವಂತೆ ನ್ಯಾಯಾಲಯವು ಪೊಲೀಸ್ ಠಾಣೆಗೆ ಸೂಚಿಸಿದೆ. ಇದನ್ನೂ ಓದಿ: ಬಂಜಾರಾ, ಕೊರಚ, ಕೊರಮ, ಬೋವಿ ಶಾಶ್ವತವಾಗಿ ಎಸ್‌ಸಿ ಪಟ್ಟಿಯಲ್ಲಿರುತ್ತದೆ- ಪಿ.ರಾಜೀವ್

    ಭಾರತ್ ಜೋಡೋ ಯಾತ್ರೆ (Bharat Jodo Yatre) ಯಲ್ಲಿ ಸಾವರ್ಕರ್ ವಿರುದ್ಧ ಹೇಳಿಕೆ ನೀಡಿದ ನಂತರ ಎರಡನೇ ಪ್ರಕರಣ ದಾಖಲಿಸಿದೆ. ಈ ಬಾರಿಯೂ ನಾನು ದೂರು ನೀಡುತ್ತೇನೆ, ಸಾವರ್ಕರ್ ಅವರ ಹೆಸರನ್ನು ಮತ್ತೆ ಮತ್ತೆ ಕೆಡದಂತೆ ನಾವು ಈ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು. ಅದನ್ನು ನ್ಯಾಯಾಲಯಗಳ ಮೂಲಕ ಮಾಡುತ್ತೇನೆ ಎಂದರು.

    ಐತಿಹಾಸಿಕವಾಗಿ, ಸಾವರ್ಕರ್ ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸಾವರ್ಕರ್, ಬ್ರಿಟಿಷ್ ಅಧಿಕಾರಿಗಳಿಗೆ ಕ್ಷಮೆಯಾಚಿಸಿದ ಬಗ್ಗೆ ಪುರಾವೆಗಳಿದ್ದರೆ ನೀಡುವಂತೆ ರಾಹುಲ್ ಗಾಂಧಿಗೆ ರಂಜಿತ್ ಸಾವರ್ಕರ್‍ಗೆ ಸವಾಲು ಹಾಕಿದರು. ಇದನ್ನೂ ಓದಿ: ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲಿ: ರಾಗಾಗೆ ಸಾವರ್ಕರ್ ಮೊಮ್ಮಗ ಸವಾಲು

    ಮಾರ್ಚ್ 25 ರಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಲಂಡನ್ ನಲ್ಲಿ ನೀಡಿದ ಹೇಳಿಕೆಗಳಿಗೆ ಕ್ಷಮೆಯಾಚಿಸಬೇಕೇ ಎಂಬ ಪ್ರಶ್ನೆಗೆ ಉತ್ತರಿಸುವಾಗ “ನನ್ನ ಹೆಸರು ಸಾವರ್ಕರ್ ಅಲ್ಲ. ನನ್ನ ಹೆಸರು ಗಾಂಧಿ, ಗಾಂಧಿ ಯಾರಿಗೂ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು.

  • ಅಧಿವೇಶನ ಮುಗಿಸಿ ಅಂಡಮಾನ್ ಜೈಲಿಗೆ ಹೋಗಿ ಬನ್ನಿ: ಬಿ.ಕೆ ಹರಿಪ್ರಸಾದ್‌ಗೆ ರಘುಪತಿ ಭಟ್ ಸಲಹೆ

    ಅಧಿವೇಶನ ಮುಗಿಸಿ ಅಂಡಮಾನ್ ಜೈಲಿಗೆ ಹೋಗಿ ಬನ್ನಿ: ಬಿ.ಕೆ ಹರಿಪ್ರಸಾದ್‌ಗೆ ರಘುಪತಿ ಭಟ್ ಸಲಹೆ

    ಉಡುಪಿ: ಬೆಳಗಾವಿ (Belagavi) ವಿಧಾನಸೌಧದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಿರುವುದು ವಿಪಕ್ಷ ಕಾಂಗ್ರೆಸ್‌ಗೆ (Congress) ಇರುಸು ಮುರುಸು ತಂದಿದೆ. ಕೆಲ ಕಾಂಗ್ರೆಸ್ ನಾಯಕರು ಈ ಬಗ್ಗೆ ಸೈಲೆಂಟಾಗಿದ್ರೆ ಕೆಲವರು ತಗಾದೆ ಶುರು ಮಾಡಿದ್ದಾರೆ ಎಂದು ಬಿ.ಕೆ ಹರಿಪ್ರಸಾದ್‌ಗೆ ಉಡುಪಿ (Udupi) ಶಾಸಕ ರಘುಪತಿ ಭಟ್‌ (Raghupati Bhat) ತಿರುಗೇಟು ನೀಡಿದರು‌‌.

    ಸಾವರ್ಕರ್ ಬ್ರಿಟೀಷರ ತಟ್ಟೆ ಕಾಸಿಂದ ಜೀವನ ಮಾಡುತ್ತಿದ್ದರು ಎಂದು ನೀಡಿದ್ದ ಹೇಳಿಕೆ ವಿರುದ್ಧ ಶಾಸಕ ರಘುಪತಿ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಬಿ.ಕೆ ಹರಿಪ್ರಸಾದ್ (BK Hariprasad) ಬಾಲಿಶ ಹೇಳಿಕೆ ಕೊಡುತ್ತಿದ್ದಾರೆ. ಹರಿಪ್ರಸಾದ್ ಇತಿಹಾಸವನ್ನು ಒಮ್ಮೆ ಓದಬೇಕು‌. ಅಂಡಮಾನ್ ನಿಕೋಬಾರ್ ಜೈಲಿಗೆ ಒಮ್ಮೆ ಹೋಗಿ ಬನ್ನಿ. ಅಂಡಮಾನ್ ಜೈಲಿನ ಪರಿಸ್ಥಿತಿಯನ್ನು ನೋಡಿ ಬನ್ನಿ. ಕಾಲಾಪಾನಿ ಶಿಕ್ಷೆ ಹೇಗಿತ್ತು ಎಂಬುದನ್ನು ಅಲ್ಲಿ ಸೌಂಡ್ ಅಂಡ್ ಲೈಟ್ ಮೂಲಕ ತೋರಿಸಲಾಗುತ್ತದೆ ಎಂದರು.

    ಮುಸಲ್ಮಾನರನ್ನು ಓಲೈಸಲು ಕಾಂಗ್ರೆಸ್‌ನವರು ಸಾವರ್ಕರ್ ವಿರೋಧಿಸುತ್ತಾರೆ. ಸಾವರ್ಕರ್ ಹಿಂದೂ ಮಹಾಸಭಾ ನಾಯಕರಾಗಿದ್ದದ್ದೇ ಈ ವಿರೋಧಕ್ಕೆ ಕಾರಣ. ಸ್ವಾತಂತ್ರ ಹೋರಾಟದ ಸಂದರ್ಭ ಸಾವರ್ಕರ್ ಹಿಂದೂಗಳ ಪರವಾಗಿದ್ದರು. ಸಾವರ್ಕರ್ ಹಿಂದೂ ಪರ ಧೋರಣೆ ಕಾಂಗ್ರೆಸ್‌ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನ ಮುಗಿದ ಕೂಡಲೇ ಒಂದು ಸಮಿತಿ ರಚನೆ ಮಾಡಿ ಅಂಡಮಾನ್‌ಗೆ ಹೋಗಿ ಎಂದ ಅವರು, ಸಾವರ್ಕರ್ ಯೋಗ್ಯತೆ ಏನು ಅಂತ ದೇಶಕ್ಕೆ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

    ಸಾವರ್ಕರ್ ದೇಶ ವಿರೋಧಿಯಾಗಿ ಕೊನೆಯವರೆಗೂ ವರ್ತಿಸಿಲ್ಲ. ಸಾವರ್ಕರ್ ದೇಶಪ್ರೇಮ ಕಾಂಗ್ರೆಸ್ಸಿಗೆ ವಿಲನ್‌ನಂತೆ ಕಾಣುತ್ತದೆ. ಅಧಿವೇಶನ ಮುಗಿದ ಕೂಡಲೇ ಅಂಡಮಾನಿಗೆ ಪ್ರವಾಸ ಮಾಡಿ ಬನ್ನಿ. ನಾನು ಯುಪಿಎ ಸರ್ಕಾರ ಇದ್ದಾಗಲೇ ಅಂಡಮಾನಿಗೆ ಭೇಟಿ ಕೊಟ್ಟಿದ್ದೇನೆ. ಸಾವರ್ಕರ್‌ಗೆ ಬೈದರೆ ಮುಸ್ಲಿಂ ವೋಟ್ ಸಿಗುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಭಾರತದ ಮುಸಲ್ಮಾನರ ಕಾಂಗ್ರೆಸ್‌ಗೆ ವೋಟ್ ಹಾಕಲ್ಲ ಈಗ ಬದಲಾಗಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಾನಸಿಕ ಕಿರುಕುಳಕ್ಕೆ ಬೇಸತ್ತು ತಾಯಿ, ಮಗ, ಸೊಸೆ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಒಂದೇ ಏಟಿಗೆ ಎರಡು ಹಕ್ಕಿ – ಬಿಜೆಪಿ `ಸಾವರ್ಕರ್’ ಅಸ್ತ್ರ ಸೀಕ್ರೆಟ್ ಏನು?

    ಒಂದೇ ಏಟಿಗೆ ಎರಡು ಹಕ್ಕಿ – ಬಿಜೆಪಿ `ಸಾವರ್ಕರ್’ ಅಸ್ತ್ರ ಸೀಕ್ರೆಟ್ ಏನು?

    ಬೆಂಗಳೂರು: ರಾಜ್ಯ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿಯಿದ್ದು, ಈ ಬಾರಿ ಬಿಜೆಪಿಗೆ(Karnataka BJP) ಹಿಂದೂ ಅಸ್ತ್ರದ ಜೊತೆಗೆ ಸಾವರ್ಕರ್(Savarkar) ಕೂಡ ಒಂದು ಅಜೆಂಡಾ ಆಗುವ ಸಾಧ್ಯತೆ ಇದೆ.

    ಸೋಮವಾರದಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ(Belagavi Winter Session) ನಡೆಯಲಿದ್ದು, ಮತ್ತೆ ಸಾವರ್ಕರ್ ಸಮರ ಜೋರಾಗುವಂತಿದೆ. ವಿಧಾನಸಭೆಯಲ್ಲಿ ಗಾಂಧೀಜಿ, ನೆಹರೂ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ ಜೊತೆಗೆ ಸಾವರ್ಕರ್ ಫೋಟೋ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.

     

    ಈಗಾಗಲೇ ವಿಧಾನಸಭೆಯ ಸಿಬ್ಬಂದಿ ಎಲ್ಲಾ ಫೋಟೋಗಳಿಗೆ ಕರ್ಟನ್ ಹಾಕಿ ಮುಚ್ಚಿದ್ದಾರೆ. ಬೆಳಗ್ಗೆ 10:30ಕ್ಕೆ ಸ್ಪೀಕರ್ ಕಾಗೇರಿ ನೇತೃತ್ವದಲ್ಲಿ ಅಧಿವೇಶನ ಆರಂಭಕ್ಕೂ ಮುನ್ನವೇ ಸಾವರ್ಕರ್ ಫೋಟೋ ಅನಾವರಣವಾಗಲಿದೆ.

    ಈ ಬಗ್ಗೆ ಸ್ಪೀಕರ್ ಕಾಗೇರಿ ಪ್ರತಿಕ್ರಿಯಿಸಿ, ಕಾರಣಾಂತರಗಳಿಂದ ಫೋಟೋ ಅನಾವರಣ ವಿಳಂಬವಾಗಿದೆ. ಯಾರ ಭಾವಚಿತ್ರ ಎನ್ನುವುದು ನಾಳೆ ಬನ್ನಿ ನೋಡ್ತೀರಾ ಅಂತ ಕುತೂಹಲ ಉಳಿಸಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಗಾಂಧೀಜಿ ಮರ್ಡರ್ ಕೇಸಲ್ಲಿ ಇರೋ ವ್ಯಕ್ತಿ – ಸದನದಲ್ಲಿ ಅವರ ಫೋಟೋ ಅಗತ್ಯವಿಲ್ಲ: ಸಿದ್ದರಾಮಯ್ಯ


    ಸಚಿವ ಸಿಸಿ ಪಾಟೀಲರು, ಸಾವರ್ಕರ್ ದೇಶಾಭಿಮಾನಿ ಅಂತ ಎದೆ ತಟ್ಟಿ ಹೇಳ್ತೀನಿ ಅಂದ್ರೆ ವಿರೋಧಿಸೋದು ಮುಟ್ಟಾಳತನ ಎಂದರೆ ವಿಪಕ್ಷದವರು ಸಹಕರಿಸಲಿ ಅಂತ ಎಂಎಲ್‍ಸಿ ರವಿಕುಮಾರ್ ಆಗ್ರಹಿಸಿದ್ದಾರೆ.

    ಓಟರ್‌ಗೇಟ್‌-ಚಿಲುಮೆ ಹಗರಣ ಪ್ರಸ್ತಾಪಿಸಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್(Congress) ಪ್ಲಾನ್ ಮಾಡಿತ್ತು. ಬೆಳಗಾವಿ ಗಡಿ ವಿಚಾರದಲ್ಲಿ ಸರ್ಕಾರ ವಿಫಲ ಅಂತ ಬಿಂಬಿಸಲು ಕಾಂಗ್ರೆಸ್ ಮುಂದಾಗಿತ್ತು. ಈಗ ಸಾವರ್ಕರ್ ಭಾವಚಿತ್ರ ಅಳವಡಿಕೆಯಿಂದ ಬಿಜೆಪಿ ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ ತಂತ್ರ ಮಾಡಿದೆ ಎನ್ನಲಾಗುತ್ತಿದೆ. ಸಾವರ್ಕರ್ ಫೋಟೋವನ್ನು ಕಾಂಗ್ರೆಸ್ ವಿರೋಧಿಸಲು ಬಂದರೆ ಡಿಕೆಶಿಯ `ಕುಕ್ಕರ್’ ಬಾಂಬ್ ಪ್ರಯೋಗ ಮಾಡಲು ಮುಂದಾಗಿದೆ. ಬೆಳಗಾವಿಯಲ್ಲೇ ಸಾವರ್ಕರ್ ಕಿಡಿ ಹೊತ್ತಿಸಿ ಹಿಂದುತ್ವ ಅಜೆಂಡಾ ಫಿಕ್ಸ್ ಪ್ಲಾನ್ ಮಾಡಿದ ಎಂಬ ವಿಶ್ಲೇಷಣೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು?: ಹೆಚ್‍ಡಿಕೆ ಲೇವಡಿ

    ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು?: ಹೆಚ್‍ಡಿಕೆ ಲೇವಡಿ

    ಮಡಿಕೇರಿ: ಒಂದು ದೇಶ ಒಂದೇ ಭಾಷೆ ಹಿಂದಿ ಆಗಿರಬೇಕು. ಹಿಂದೂ ರಾಷ್ಟ್ರವಾಗಿರಬೇಕು ಎಂದು ಸಾತ್ಯಕಿ ಸಾವರ್ಕರ್ (Satyaki Ashok Savarkar) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy), ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಅವರ ಉಪದೇಶ ಕಟ್ಟಿಕೊಂಡು ನನಗೆ ಏನೂ ಆಗಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಸಾವರ್ಕರ್ (VD Savarkar) ಮೊಮ್ಮಗ ಯಾರು ಅವರು, ಯಾರು ಆ ಮನುಷ್ಯ ಅವನಿಗೆ ಏನು ಗೊತ್ತಿದೆ ಎಂದು ಪ್ರಶ್ನಿಸಿದರು. ಮೊದಲು ಜನರ ಬದುಕನ್ನು ಕಟ್ಟಲು ನೋಡಿ. ಕೊಡಗಿ (Kodagu) ನಲ್ಲಿ ಮೂರು ವರ್ಷದಿಂದ ಭೂಕುಸಿತದಿಂದ ಮನೆ, ಬೆಳೆ ಹಾಳಾಗಿದೆ. ಅವರಿಗೆ ಏನು ಕೊಟ್ಟಿದ್ದೀರಿ ಮೊದಲು ಹೇಳಿ. ಆಮೇಲೆ ನಿಮ್ಮ ಹಿಂದಿ ಭಾಷೆ ಬಗ್ಗೆ ಚರ್ಚೆ ಮಾಡಿ. ಸಾವರ್ಕರ್ ಮಗನೋ, ಮೊಮ್ಮಗನೋ ಇಲ್ಲಿಗೆ ಬಂದು ನಮಗೆ ಬೋಧನೆ ಮಾಡುವುದು ಏನಿದೆ. ಮೊದಲು ಜನರ ಬದುಕನ್ನು ಕಟ್ಟಲು ನೋಡಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹಿಂದೂಗಳು ಒಟ್ಟಾಗಿರಬೇಕೆಂಬುದು ಸಾವರ್ಕರ್ ಕನಸಾಗಿತ್ತು – ಮೊಮ್ಮಗ ಸಾತ್ಯಕಿ ಸಾವರ್ಕರ್

    ಇದೇ ಸಂದರ್ಭ ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ (Anand Mamani) ನಿಧನಕ್ಕೆ ಹೆಚ್‍ಡಿಕೆ ಸಂತಾಪ ಸೂಚಿಸಿದ್ದಾರೆ. ಆನಂದ ಮಾಮನಿ ಅವರು ಸರಳ ಸಜ್ಜನಿಕೆ, ಸೌಮ್ಯ ವ್ಯಕ್ತಿ, ಚಿಕ್ಕ ವಯಸ್ಸಿನಲ್ಲಿ ಈ ರೀತಿಯ ಸಾವು ಬರಬಾರದಿತ್ತು. ಅವರು ಬಿಜೆಪಿ ಪಕ್ಷಕ್ಕೆ ಸೇರುವುದಕ್ಕೆ ಮುನ್ನ ನಮ್ಮ ಪಕ್ಷದ ಕಾರ್ಯಕರ್ತರಾಗಿದ್ದರು. ಅವರ ತಂದೆ ನಮ್ಮ ಪಕ್ಷದ ವತಿಯಿಂದ 1997-98ರಲ್ಲಿ ವಿಧಾನಸಭೆ ಸಭಾಪತಿ ಆಗಿದ್ರು. ದೇವರು ಆ ಕುಟುಂಬಕ್ಕೆ ಮಾಮನಿ ಅಗಲಿಕೆಯ ನೋವನ್ನ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ: ಬಿ.ಎಲ್. ಸಂತೋಷ್‌

    ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ: ಬಿ.ಎಲ್. ಸಂತೋಷ್‌

    ಹುಬ್ಬಳ್ಳಿ: ದೇಶಕ್ಕೆ ಗಾಂಧೀಜಿ (Gandhiji) ಒಬ್ಬರಿಂದಲೇ ಸ್ವಾತಂತ್ರ್ಯ ಬಂದಿದ್ದಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ವೀರ ಸಾವರ್ಕರ್ (Veer Savarkar) ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ (BL Santosh)  ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ನಡೆದ ಸ್ವರಾಜ್-75 ಪುಸ್ತಕ ಬಿಡುಗಡೆ ಸಮಾರಂಭದ ಭಾಷಣದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ಒಬ್ಬರೇ ಹೋರಾಟವನ್ನು ಮಾಡಿಲ್ಲ. ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ದೇಶದ ಮೂಲೆ ಮೂಲೆಗಳಲ್ಲಿ ಸ್ವಾತಂತ್ರ್ಯ ಹೋರಾಟ ರೂಪುಗೊಂಡಿತ್ತು. ಅನೇಕ ಮಹನೀಯರು ತ್ಯಾಗ-ಬಲಿದಾನದಿಂದ ಸ್ವಾತಂತ್ರ್ಯ ಬಂದದ್ದು. ಆದರೆ ಕೆಲವು ಇತಿಹಾಸಕಾರರು ಸತ್ಯವನ್ನು ಹೇಳಲೇ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಪೋಸ್ಟ್‌ ಮಾಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

    ನೇತಾಜಿ ಸುಭಾಷ್ ಚಂದ್ರ ಬೋಸ್ ಪುತ್ಥಳಿ ಸ್ಥಾಪಿಸಲು 2014ನೇ ಇಸವಿ ಬರಬೇಕಾಯಿತು. ಈ ದೇಶ ವಾಮ ಪಂಥೀಯರಿಂದಲೇ ಹಾಳಾಗಿದ್ದು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: BJP ಹಿಂದೂ-ಮುಸ್ಲಿಂ, ದಲಿತ-ಬ್ರಾಹ್ಮಣರ ನಡುವೆ ಜಗಳ ತಂದಿಡುತ್ತಿದೆ: ಸುರ್ಜೇವಾಲಾ ಕಿಡಿ

    Live Tv
    [brid partner=56869869 player=32851 video=960834 autoplay=true]