Tag: Veer Savarkar

  • ನಾನು ಗಾಂಧಿವಾದಿಯಲ್ಲ, ಉಪವಾಸ ಸತ್ಯಾಗ್ರಹದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ: ಕಂಗನಾ ಮತ್ತೆ ವಿವಾದ

    ನಾನು ಗಾಂಧಿವಾದಿಯಲ್ಲ, ಉಪವಾಸ ಸತ್ಯಾಗ್ರಹದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ: ಕಂಗನಾ ಮತ್ತೆ ವಿವಾದ

    ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ ವರೆಗೆ ಹೊಸದಾಗಿ ನಾಮಕರಣಗೊಂಡ ಕರ್ತವ್ಯ ಪಥವನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್  (Kangana Ranaut) ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಂಗನಾ, ‘ನಾನು ಗಾಂಧಿವಾದಿಯಲ್ಲ, ನೇತಾವಾದಿ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು. ಅಲ್ಲದೇ, ಕೇವಲ ಉಪವಾಸ ಸತ್ಯಾಗ್ರಹದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಪರೋಕ್ಷವಾಗಿ ಮಹಾತ್ಮ ಗಾಂಧೀಜಿ ಅವರನ್ನು ಟೀಕಿಸಿದರು. ಗಾಂಧೀಜಿ (Gandhiji) ಬಗ್ಗೆ ಕಂಗನಾ ಆಡಿದ ಈ ಮಾತು ಗಾಂಧಿವಾದಿಗಳನ್ನು ಕೆರಳಿಸಿದೆ.

    ಮಾಧ್ಯಮಗಳ ಜೊತೆ ಮುಂದುವರೆದು ಮಾತನಾಡಿದ ಕಂಗನಾ, ‘ಸ್ವಾತಂತ್ರ್ಯ ಹೋರಾಟದಲ್ಲಿ ವೀರ ಸಾವರ್ಕರ್ (Veer Savarkar) ಹಾಗೂ ಸುಭಾಷ್ ಚಂದ್ರ ಬೋಸ್ (Subhash Chandra Bose) ರಂತಹ ವೀರ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಇವರು ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರು, ಅಧಿಕಾರಕ್ಕಾಗಿ ಅಲ್ಲ ಎಂದು ಮಾತನಾಡಿದರು. 2ನೇ ವಿಶ್ವ ಯುದ್ಧದಲ್ಲಿ ಭಾಗವಹಿಸಿ ದೇಶವನ್ನು ಹೀನಾಯ ಸ್ಥಿತಿಯಿಂದ ಮೇಲೆತ್ತಲು ನೇತಾಜಿ ತುಂಬಾ ಶ್ರಮ ಪಟ್ಟರು. ಅಂಥವರನ್ನು ನಾವು ನೆನೆಯಬೇಕು ಅಂದರು ಕಂಗನಾ. ಇದನ್ನೂ ಓದಿ:‘ಯಶೋದಾ’ ಟೀಸರ್ನಲ್ಲಿ ಸಮಂತಾ ಮತ್ತೊಂದು ಮುಖ ಅನಾವರಣ

    ಕರ್ತವ್ಯ ಪಥ ಬದಲಾವಣೆ ಕುರಿತು ಕಂಗನಾ ಮಾತನಾಡಿ, ರಾಜಪಥ (Rajpatha) ಅಂತ ಹೆಸರು ಕೇಳಿದಾಗೆಲ್ಲ ಏನೋ ಕಸಿವಿಸಿ ಆಗೋದು. ರಾಜಪಥ ಪದವೇ ಮಾದರಿ ಆದುದಲ್ಲ. ಹಾಗಾಗಿ ಕರ್ತವ್ಯದ ಪಥ ಹೆಸರು ಇಟ್ಟಿರುವುದು ಖುಷಿಯಾಗಿದೆ ಮತ್ತು ಹೆಮ್ಮೆ ತಂದಿದೆ ಅಂದರು. ಈ ರೀತಿಯಲ್ಲಿ ನಾನು ನೇರವಾಗಿ ಮಾತನಾಡಿ, ಕೆಲವರ ಕಂಗಣ್ಣಿಗೆ ಗುರಿಯಾಗಿರುವೆ. ಸತ್ಯ ನುಡಿದಾಗ ಇದೆಲ್ಲ ಸಹಜ. ನಾನು ಸತ್ಯ ನುಡಿಯುತ್ತಲೇ ಇರುವೆ ಅಂದರು.

    Live Tv
    [brid partner=56869869 player=32851 video=960834 autoplay=true]

  • ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ

    ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ

    ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ.

    ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

    ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ ಮಂಟಪಗಳಿಗೆ ತೆರಳಿ ಸಾವರ್ಕರ್ ಭಾವಚಿತ್ರ ವಿತರಿಸಲಾಗಿದೆ. ಇಂದು ರಾತ್ರಿ ವೇಳೆ ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ 378 ಗಣೇಶ ವಿಗ್ರಹಗಳು ಪ್ರತಿಷ್ಠಾಪನೆಗೊಳ್ಳಲಿವೆ. ಕೋವಿಡ್ ಹಿನ್ನೆಲೆ ಎರಡು ವರ್ಷ ಅದ್ಧೂರಿ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿತ್ತು. ಈ ಬಾರಿ ಗಣೇಶೋತ್ಸವ ಸಾವರ್ಕರ್ ಗಣೇಶ ಉತ್ಸವವನ್ನಾಗಿ ಆಚರಿಸಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ. ಇದನ್ನೂ ಓದಿ: ನಮ್ಮ ಭಾವನೆಗಳನ್ನು ವಿರೋಧಿಸಿದವರಿಗೆ ಕಪಾಳಮೋಕ್ಷವಾಗಿದೆ: ಮುತಾಲಿಕ್

    ಹಿಂದೂಪರ ಸಂಘಟನೆಗಳಿಗೆ ಸ್ಥಳೀಯ ಬಿಜೆಪಿ ಶಾಸಕರು, ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಗಣೇಶೋತ್ಸವಕ್ಕಿದೆ ತನ್ನದೇ ಆದ ಇತಿಹಾಸ ಇದ್ದು, 1905ರಲ್ಲಿ ಖುದ್ದು ಬಾಲಗಂಗಾಧರ ತಿಲಕ್‍ರಿಂದ ಬೆಳಗಾವಿಯಲ್ಲಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಪ್ರತಿ ವರ್ಷ 11 ದಿನಗಳ ಕಾಲ ನಡೆಯುವ ಅದ್ಧೂರಿ ಗಣೇಶೋತ್ಸವ ನಡೆಯುತ್ತಾ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ: ಪ್ರಮೋದ್ ಮುತಾಲಿಕ್

    ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ: ಪ್ರಮೋದ್ ಮುತಾಲಿಕ್

    ಧಾರವಾಡ: ಮಠ-ಮಂದಿರಗಳಿಗೆ ದುಡ್ಡು ಕೊಡುವುದನ್ನು ನಿಲ್ಲಿಸಿ, ಹಿಂದೂ ಸಂಘಟನೆಗಳಿಗೆ ಕೊಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಮನವಿ ಮಾಡಿದರು.

    ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ಮಠ ಮಂದಿರ ಬಿಟ್ಟು ಹಿಂದೂ ಸಂಘಟನೆಗಳಿಗೆ ಹಣ ಕೊಡಿ. ಹಿಂದೂ ಸಂಘಟನೆಗಳಿಗೆ ಬಲ ಕೊಡಿ. ಆಗ ನಿಮಗೆ ನಾವು ಹಿಂದೂ ರಾಷ್ಟ್ರ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

    ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಗೋ ಮಾತೆ, ಮಾತೆ ಎಂದು ಹೇಳುತ್ತಿದ್ದರು. ಅದಕ್ಕಾಗಿ ಗೋ ಹತ್ಯೆ ಕಾನೂನು ತಂದಿದ್ದಾರೆ. ಆದರೂ ಗೋಹತ್ಯೆ ನಡೆಯುತ್ತಿದೆ. ಆದರೆ ಒಂದೂ ಗೋಹತ್ಯೆ ಆಗದಂತೆ ಮಾಡುವ ಶಕ್ತಿ ಹಿಂದೂ ಸಂಘಟನೆಗಳಿಗಿದೆ. ಆದ್ದರಿಂದ ಹಿಂದೂ ಸಂಘಟನೆಗಳಿಗೆ ಸಮಾಜ ಬಲ ಕೊಡಬೇಕು ಎಂದು ತಿಳಿಸಿದರು.

    ಅಂದು ಹಿಂದುತ್ವದ ಹೋರಾಟಗಳು ಯಶಸ್ವಿಯಾಗಿದ್ದವು. ಇಂದು ಅದು ಆಗುತ್ತಿಲ್ಲ. ಅವತ್ತು ಶುದ್ಧ, ಚಾರಿತ್ರ್ಯ, ತ್ಯಾಗ, ಬಲಿದಾನದ ನಾಯಕರಿದ್ದರು. ಅದರ ಪರಿಣಾಮದಿಂದ ದುಷ್ಟ ಶಕ್ತಿಗಳ ನಾಶವಾಯಿತು. ಹಿಂದವೀ ಸಮಾಜ ನಿರ್ಮಾಣ ಆಗಿತ್ತು. ಅದಕ್ಕೆ ಛತ್ರಪತಿ ಶಿವಾಜಿ ಮಹಾರಾಜರೇ ಉದಾಹರಣೆಯಾಗಿದ್ದಾರೆ. ಆದರೆ ಇವತ್ತಿನ ನಾಯಕರು ಯಾರು ಎಂದು ಪ್ರಶ್ನಿಸಿದ ಅವರು, ನೀಚ, ನಿರ್ಲಜ್ಜ, ಲೂಟಿಕೋರರಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗಣೇಶ ಮೂರ್ತಿಯೊಂದಿಗೆ ಸಾವರ್ಕರ್ ಫೋಟೋವನ್ನೂ ಇಡ್ತೀವಿ – ಚಕ್ರವರ್ತಿ ಸೂಲಿಬೆಲೆ

    ಇಂದಿನ ನಾಯಕರು ಈ ದೇಶವನ್ನು ಬರ್ಬಾದ್ ಮಾಡುತ್ತಿದ್ದಾರೆ. ಈ ದೇಶವನ್ನು ಹಾಳು ಮಾಡುತ್ತಿದ್ದಾರೆ. ಅವರು ಇವರು ಅಲ್ಲ, ಎಲ್ಲರೂ ಅವರೇ ಆಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಾವು ಯೋಚನೆ ಮಾಡಬೇಕಿದೆ. ಇವತ್ತು ನಾವು ಯಾವ ರೀತಿ ನಾಯಕರು ಬೇಕು ಅಂತಾ ವಿಚಾರ ಮಾಡಬೇಕಿದೆ. ಶಿವಾಜಿಯಂತಹ ನಾಯಕರು ಬೇಕೋ?, ಅಥವಾ ಲೂಟಿಕೋರರು ಬೇಕೋ? ಅಂತಾ ನಿಶ್ಚಯ ಮಾಡಬೇಕಿದೆ. ಎಲ್ಲರಲ್ಲೂ ಇವತ್ತು ವೇದನೆ ಇದೆ. ಎಲ್ಲೋ ತಪ್ಪುತ್ತಿದ್ದೇವೆ ಎನ್ನುವ ವೇದನೆ ಇದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿದ್ಯುತ್ ಶಾಕ್‍ನಿಂದ ದಂಪತಿ ಸಾವು- ಪತ್ನಿ ಉಳಿಸಲು ಹೋಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • ದೇವರ ಜೊತೆ ನಾಸ್ತಿಕನಾಗಿರೋ ಸಾವರ್ಕರ್ ಫೋಟೋ ಇಡೋದು ಹಾಸ್ಯಸ್ಪದ: ಬಿ.ಕೆ ಹರಿಪ್ರಸಾದ್

    ದೇವರ ಜೊತೆ ನಾಸ್ತಿಕನಾಗಿರೋ ಸಾವರ್ಕರ್ ಫೋಟೋ ಇಡೋದು ಹಾಸ್ಯಸ್ಪದ: ಬಿ.ಕೆ ಹರಿಪ್ರಸಾದ್

    ಚಾಮರಾಜನಗರ: ವೀರಸಾವರ್ಕರ್ ಒಬ್ಬ ನಾಸ್ತಿಕ. ದೇವರ ಮೂರ್ತಿ ಜೊತೆ ನಾಸ್ತಿಕನ ಫೋಟೋ ಇಡೋದು ಹಾಸ್ಯಾಸ್ಪದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿ ಪ್ರಸಾದ್ ಟೀಕಿಸಿದ್ದಾರೆ.

    ಗಣೇಶೋತ್ಸವ ದಲ್ಲಿ ವೀರಸಾವರ್ಕರ್ ಫೋಟೋ ಇಡುವ ವಿಚಾರದ ಬಗ್ಗೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ಸಾವರ್ಕರ್ ಆತ್ಮಚರಿತ್ರೆ ಓದದೆ ಇರುವವರು ಕೇವಲ ರಾಜಕೀಯ ಹಿತಾಸಕ್ತಿಗೋಸ್ಕರ ಆತನ ಫೋಟೋ ಇಡೋದು ಹಾಸ್ಯಾಸ್ಪವಾಗಿದೆ ಎಂದು ಹೇಳಿದ್ದಾರೆ.

    ವೀರಸಾವರ್ಕರ್ ಗೆ ದೇವರ ಬಗ್ಗೆ ನಂಬಿಕೆ ಇರಲಿಲ್ಲ. ದೇವರು ದಿಂಡರ ಬಗ್ಗೆ ನಂಬಿಕೆ ಇಲ್ಲದ ವೀರಸಾವರ್ಕರ್ ಈ ದೇಶವನ್ನು ಹಾಳು ಮಾಡಿ ಬಿಟ್ಟರು ಎಂದರು.

    Live Tv
    [brid partner=56869869 player=32851 video=960834 autoplay=true]

  • ಸಾವರ್ಕರ್ ರಥಯಾತ್ರೆಗೆ ಬಿಎಸ್‌ವೈ ಚಾಲನೆ- ಸಿದ್ದರಾಮಯ್ಯಗೆ ಠಕ್ಕರ್ ಕೊಡಲು ಬಿಜೆಪಿ ಪ್ಲ್ಯಾನ್

    ಸಾವರ್ಕರ್ ರಥಯಾತ್ರೆಗೆ ಬಿಎಸ್‌ವೈ ಚಾಲನೆ- ಸಿದ್ದರಾಮಯ್ಯಗೆ ಠಕ್ಕರ್ ಕೊಡಲು ಬಿಜೆಪಿ ಪ್ಲ್ಯಾನ್

    ಮೈಸೂರು: ಸ್ವಾತಂತ್ರ್ಯ ಸೇನಾನಿ ಸಾವರ್ಕರ್ ವಿಚಾರದಲ್ಲಿ ದೊಡ್ಡ ವಿವಾದ ಸೃಷ್ಟಿಸಿರುವ ಕಾಂಗ್ರೆಸ್‍ಗೆ ಮೈಸೂರಿನ ಸಾವರ್ಕರ್ ಪ್ರತಿಷ್ಠಾನ ರಥ ಯಾತ್ರೆ ಮೂಲಕ ತಿರುಗೇಟು ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಥಯಾತ್ರೆಗೆ ಮಾಜಿ ಸಿಎಂ ಬಿಎಸ್‌ವೈ ಚಾಲನೆ ನೀಡಿದರು.

    ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಸಾವರ್ಕರ್ ರಥ ಯಾತ್ರೆ ಆರಂಭವಾಗಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಈ ರಥ ಯಾತ್ರೆಗೆ ಚಾಲನೆ ನೀಡಿದರು. ಈ ರಥವೂ ಮೈಸೂರಿನ ಅನೇಕ ಭಾಗಗಳಲ್ಲಿ ಸಂಚರಿಸಲಿದೆ. ರಥದಲ್ಲಿ ಸಾವರ್ಕರ್ ಅವರ ಜೀವನ ಚರಿತ್ರೆಯ ಅಂಶಗಳನ್ನು ಮೂಡಿಸಲಿದ್ದು, ಸಾವರ್ಕರ್ ಇತಿಹಾಸವನ್ನು ಜನರಿಗೆ ಮುಟ್ಟಿಸುವ ಉದ್ದೇಶದಿಂದ ಈ ರಥಯಾತ್ರೆ ಆಯೋಜಿಸಲಾಗಿದೆ. ಇದನ್ನೂ ಓದಿ: ಮನೆ ಮನೆಗೆ ಸಾವರ್ಕರ್ ಅಭಿಯಾನ ಆರಂಭ – 6 ರೂ.ಗೆ ಪುಸ್ತಕ ಬಿಡುಗಡೆ

    ಮೈಸೂರಲ್ಲಿ ಇಂದಿನಿಂದ 8 ದಿನ ಸಾವರ್ಕರ್ ರಥ ಯಾತ್ರೆ ನಡೆಯಲಿದೆ. ದೊಡ್ಡ ಎಲ್‍ಇಡಿ ಪರದೆಯನ್ನು ರಥದಲ್ಲಿ ಅಳವಡಿಸಿದ್ದು, ಎಲ್‍ಇಡಿಯಲ್ಲಿ ಸಾವರ್ಕರ್ ಕುರಿತು ಟಿವಿಗಳಲ್ಲಿ ಬಂದ ಚರ್ಚೆಗಳು, ಸಾವರ್ಕರ್ ಅವರ ಜೀವನ ಪ್ರಮುಖ ಅಂಶಗಳ ವೀಡಿಯೋಗಳನ್ನು ಹಾಕಲಾಗುತ್ತಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಈ ರಥ ನಿಲ್ಲಲಿದ್ದು, ಜನರಿಗೆ ಸಂಕ್ಷಿಪ್ತವಾಗಿ ಸಾವರ್ಕರ್ ಅವರ ಜೀವನವನ್ನು ತಿಳಿಸುವ ಕೆಲಸ ಮಾಡಲಾಗುತ್ತದೆ. ಈ ಮೂಲಕ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ತವರಲ್ಲೇ ಸಿದ್ದರಾಮಯ್ಯ ಅವರಿಗೆ ಠಕ್ಕರ್‌ ನೀಡಲು ಬಿಜೆಪಿ ಸಿದ್ಧವಾಗಿದೆ.  ಇದನ್ನೂ ಓದಿ: ಮುಸ್ಲಿಮರನ್ನು ಕೇಳಲು ತೊಡೆ ನಡುಗುತ್ತಾ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಪ್ರಶ್ನೆ

    Live Tv
    [brid partner=56869869 player=32851 video=960834 autoplay=true]

  • ಮನೆ ಮನೆಗೆ ಸಾವರ್ಕರ್ ಅಭಿಯಾನ ಆರಂಭ – 6 ರೂ.ಗೆ ಪುಸ್ತಕ ಬಿಡುಗಡೆ

    ಮನೆ ಮನೆಗೆ ಸಾವರ್ಕರ್ ಅಭಿಯಾನ ಆರಂಭ – 6 ರೂ.ಗೆ ಪುಸ್ತಕ ಬಿಡುಗಡೆ

    ಬೆಂಗಳೂರು: ಸಾವರ್ಕರ್ ಗಣೇಶೋತ್ಸವಕ್ಕೆ ಕರೆಕೊಟ್ಟ ಯುವಾ ಬಿಗ್ರೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯಿಂದ ಈಗ ಸಾವರ್ಕರ್ ಪುಸ್ತಕವನ್ನು ಮನೆ ಮನೆಗೆ ತಲುಪಿಸಲು ಮುಂದಾಗಿದ್ದಾರೆ.

    ಕೇವಲ ಆರು ರೂಪಾಯಿಗೆ ಸಾವರ್ಕರ್ ಪುಸ್ತಕವನ್ನು ಮಾರಾಟ ಮಾಡುವುದಾಗಿ ಹೇಳಿದ್ದಾರೆ. ಸಾವರ್ಕರ್ ಯಾತನೆ ಸಾಹಸ ಅವಮಾನಗಳ ಬಗ್ಗೆ ಬರೆದಿರುವ ಪುಸ್ತಕವನ್ನು ಅತಿ ಕಡಿಮೆ ಬೆಲೆಯಲ್ಲಿ ತಲುಪಿಸಲಿದ್ದೇವೆ ಎಂದು ಸೂಲಿಬೆಲೆ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶನ ಹಬ್ಬದಂದೇ ಅದ್ಧೂರಿ ಸಾವರ್ಕರ್‌ ಉತ್ಸವ ಆಚರಣೆಗೆ ಸಿದ್ಧತೆ

    ಪೋಸ್ಟ್‌ನಲ್ಲಿ ಏನಿದೆ?
    ಸಾವರ್ಕರ್ ಸಾಹಸ, ಯಾತನೆ ಮತ್ತು ಅವಮಾನಗಳ ಕುರಿತ ಪುಟ್ಟ ಕೃತಿಯೊಂದು ಸಿದ್ಧವಾಗಿದೆ. ಈ ಕೃತಿಯನ್ನು ಎಲ್ಲರಿಗೂ ಕೈಗೆಟುಕುವಂತೆ ಆರೇ ರೂಪಾಯಿಗೆ ಕೊಡಬೇಕೆಂದು ನಿಶ್ಚಯಿಸಲಾಗಿದೆ. ಹೀಗಾಗಿ ಈ ಪುಸ್ತಕವನ್ನು ಹಂಚಬೇಕೆಂದು ಬಯಸುವವರು ಈ ಸಂಖ್ಯೆಗೆ ವಾಟ್ಸಪ್ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಡಬಹುದು. ಒಂದು ಪ್ರತಿಗೆ ಆರು ರೂಪಾಯಿ ಇರುವುದರಿಂದ ಕನಿಷ್ಠ ನೂರು ಪ್ರತಿಗಳನ್ನಾದರೂ ತರಿಸಿಕೊಳ್ಳುವವರಿಗೆ ಮೊದಲ ಆದ್ಯತೆ. ಒಂದು-ಎರಡು ಪ್ರತಿಗಳು ಬೇಕಾದವರು ಸ್ಥಳೀಯ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಸಂಪರ್ಕಿಸಿ – 72597 44503, 91138 96395

    Live Tv
    [brid partner=56869869 player=32851 video=960834 autoplay=true]

  • ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ

    ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ

    ಬೆಳಗಾವಿ/ವಿಜಯಪುರ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಸಾವರ್ಕರ್ ವಿವಾದ ಜೋರಾಗಿದೆ. ಈ ಮಧ್ಯೆ ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ ನಡೆದಿದೆ.

    ಈ ಬಾರಿ ಗಣೇಶೋತ್ಸವವನ್ನು ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಿನ್ನೆಯಷ್ಟೇ ಹೇಳಿದ್ದರು. ಇದರ ಬೆನ್ನಲ್ಲೇ ಈ ಬಾರಿ ಬೆಳಗಾವಿಯ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವ ವೇಳೆ ಬೆಳಗಾವಿ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಪ್ರತಿಯೊಂದು ಗಣೇಶ ಮಂಟಪಗಳಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಫೋಟೋ ಇರಿಸುತ್ತೇವೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಇದನ್ನೂ ಓದಿ: ಐಸಿಸ್‍ನ ಮೊದಲ ಭಾರತೀಯ ಬಾಂಬರ್ ಬೆಂಗಳೂರಿನ ಟೆಕ್ಕಿ

    ವಿಜಯಪುರ ಜಿಲ್ಲೆಯಲ್ಲೂ ಈ ಬಾರಿಯ ಗಣೇಶೋತ್ಸವದಲ್ಲಿ ವೀರ ಸಾವರ್ಕರ್ ವಿಷಯ ಹಾಗೂ ಭಾವಚಿತ್ರ ರಾರಾಜಿಸಲಿವೆ. ಜಿಲ್ಲೆಯ ಸಾರ್ವಜನಿಕ ಗಣೇಶ ಮಂಟಪಗಳಲ್ಲಿ ವಿಶೇಷವಾಗಿ ಸಾವರ್ಕರ್ ಭಾವಚಿತ್ರ ಹಾಕಲು ಶ್ರೀರಾಮ ಸೇನೆ ಕಾರ್ಯಕರ್ತರು ಮುಂದಾಗಿದ್ದಾರೆ. ಅಲ್ಲದೆ ಗಣೇಶೋತ್ಸವದಲ್ಲಿ ಸಾವರ್ಕರ್ ಅವರ ಸ್ವಾತಂತ್ರ್ಯ ಹೋರಾಟ, ತ್ಯಾಗ, ಬಲಿದಾನ, ಅವರು ಅನುಭವಿಸಿದ ಸಂಕಷ್ಟಗಳ ವೀಡಿಯೋಗಳನ್ನು ಪ್ರಸಾರ ಮಾಡಲು ಮುಂದಾಗಿವೆ. ಇದರ ಜೊತೆಗೆ ಸಾವರ್ಕರ್ ಚರಿತ್ರೆಯ ಪುಸ್ತಕ, ನಾಟಕ ಸೇರಿದಂತೆ ಇನ್ನು ಹಲವು ಕಾರ್ಯಕ್ರಮಗಳನ್ನು ಮಾಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಯುಪಿಐ ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸಲ್ಲ: ಕೇಂದ್ರ ಸರ್ಕಾರ

    Live Tv
    [brid partner=56869869 player=32851 video=960834 autoplay=true]

  • ವಿಜಯಪುರ ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೋ ಪ್ರತ್ಯಕ್ಷ

    ವಿಜಯಪುರ ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೋ ಪ್ರತ್ಯಕ್ಷ

    ವಿಜಯಪುರ: ರಾಜ್ಯದಲ್ಲಿ ಸಾವರ್ಕರ್ ಪರ-ವಿರೋಧ ವಾದ ತಾರಕಕ್ಕೇರುತ್ತಿರುವ ನಡುವೆಯೇ ವಿಜಯಪುರದ ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೋ ರಾರಾಜಿಸಿದೆ.

    ಜಲನಗರದ ಕಚೇರಿ ಗೋಡೆಗಳ ಮೇಲೆ ಸಾವರ್ಕರ್ ಭಾವಚಿತ್ರ ಪ್ರತ್ಯಕ್ಷವಾಗಿದೆ. ರಾತ್ರೋರಾತ್ರಿ ಸಾವರ್ಕರ್ ಫೋಟೋ ಪ್ರತ್ಯಕ್ಷವಾಗಿದ್ದು, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ್ ನೇತೃತ್ವದಲ್ಲಿ ಕೃತ್ಯ ನಡೆಸಲಾಗಿದೆ ಎಂಬ ಆರೋಪವಿದೆ. ಈ ವಿವಾದ ಮತ್ತಷ್ಟು ತಾರಕಕ್ಕೇರುವ ಸಾಧ್ಯತೆಯನ್ನು ಅರಿತ ಪೊಲೀಸರು ಫೋಟೋಗಳನ್ನು ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಆಜಾನ್ ವಿರುದ್ಧ ಮತ್ತೆ ಸಮರ – 23ರಂದು ರಾಜ್ಯಾದ್ಯಂತ ಹೋರಾಟಕ್ಕೆ ಶ್ರೀರಾಮಸೇನೆ ಕರೆ

    ಸಾವರ್ಕರ್ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಂತೆ ರಾಜ್ಯದ ವಿವಿಧೆಡೆ ಸಾವರ್ಕರ್ ಫ್ಲೆಕ್ಸ್, ಫೋಟೋ ಹಾಕುವ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ. ಕೆಲದಿನಗಳ ಹಿಂದೆ ಸಿದ್ದರಾಮಯ್ಯ ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಸಾವರ್ಕರ್ ಫೋಟೋ ಪ್ರದರ್ಶಿಸಿ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಆ ಬಳಿಕ ಸಾವರ್ಕರ್ ಫೋಟೋ ಎಲ್ಲೆಡೆ ಕಂಡು ಬರುತ್ತಿದ್ದು, ಇದೀಗ ಸಾವರ್ಕರ್ ಫೋಟೋ ಕಾಂಗ್ರೆಸ್ ಕಚೇರಿಯ ಗೋಡೆಗಳ ಮೇಲೆ ಹಾಕಿರುವುದು ವಿವಾದಕ್ಕೆ ಇನ್ನಷ್ಟು ಬೆಂಕಿ ಹಚ್ಚಿದಂತಾಗಿದೆ. ಇದನ್ನೂ ಓದಿ: 23 ಏಮ್ಸ್‌ಗಳಿಗೆ ಸ್ವಾತಂತ್ರ್ಯ ಹೋರಾಟಗಾರರು, ಸ್ಥಳೀಯ ನಾಯಕರ ಹೆಸರಿಡಿ – ಕೇಂದ್ರಕ್ಕೆ ಪ್ರಸ್ತಾವ

    Live Tv
    [brid partner=56869869 player=32851 video=960834 autoplay=true]

  • ತಾಕತ್ ಇದ್ರೆ ಟಿಪ್ಪು ಫೋಟೋವನ್ನ ನಿಮ್ಮ ಮನೇಲಿ ಹಾಕಿ: ಕಾಂಗ್ರೆಸ್ಸಿಗರಿಗೆ ರೇಣುಕಾಚಾರ್ಯ ಸವಾಲು

    ತಾಕತ್ ಇದ್ರೆ ಟಿಪ್ಪು ಫೋಟೋವನ್ನ ನಿಮ್ಮ ಮನೇಲಿ ಹಾಕಿ: ಕಾಂಗ್ರೆಸ್ಸಿಗರಿಗೆ ರೇಣುಕಾಚಾರ್ಯ ಸವಾಲು

    ದಾವಣಗೆರೆ: ಕಾಂಗ್ರೆಸ್ ಅವರಿಗೆ ತಾಕತ್ ಇದ್ದರೆ ಟಿಪ್ಪು ಫೋಟೋವನ್ನು ನಿಮ್ಮ ಮನೆ, ಕಚೇರಿಗಳಲ್ಲಿ ಹಾಕಿಕೊಳ್ಳಿ ಎಂದು ಕಾಂಗ್ರೆಸ್ ಮುಖಂಡರಿಗೆ ಶಾಸಕ ರೇಣುಕಾಚಾರ್ಯ ಸವಾಲು ಹಾಕಿದರು.

    ಹೊನ್ನಾಳಿಯ ನಿವಾಸದ ಮುಂಭಾಗದಲ್ಲಿ ಸಾವರ್ಕರ್‌ ಫೋಟೋವನ್ನು ಹಾಕಿಕೊಂಡು ನಂತರ ಮಾತನಾಡಿದ ಅವರು, ನಾವು ಸಾವರ್ಕರ್ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರ ಫೋಟೋವನ್ನು ನಮ್ಮ ಮನೆಗಳಲ್ಲಿ, ಕಚೇರಿಗಳಲ್ಲಿ ಹಾಕಿಕೊಳ್ಳುತ್ತೇವೆ. ಅದೇ ರೀತಿ ಕಾಂಗ್ರೆಸ್‍ನವರು ಟಿಪ್ಪು ಫೋಟೋವನ್ನು ಕಚೇರಿ, ಮನೆಗಳಲ್ಲಿ ಹಾಕಿಕೊಳ್ಳಿ ಎಂದ ಅವರು, ಸತ್ತವರ ಜಯಂತಿ ಮಾಡಲು ಇಸ್ಲಾಂ ಧರ್ಮದಲ್ಲಿ ಅವಕಾಶ ಇಲ್ಲ. ಸತ್ತವರ ಫೋಟೋಗಳನ್ನು ಅವರ ಮನೆಯಲ್ಲಿ ಹಾಕಿಕೊಳ್ಳುವುದಿಲ್ಲ ಎಂದು ತಿಳಿಸಿದರು.

    Congress

    ವೀರ ಸಾವರ್ಕರ್ ನಾವೆಲ್ಲಾ ಫೋಟೋಗಳನ್ನು ಮನೆಗಳಲ್ಲಿ ಹಾಕಿಕೊಳ್ಳತ್ತಿದ್ದೇವೆ. ಇದು ಹೆಮ್ಮೆಯ ಸಂಗತಿಯಾಗಿದ್ದು ಏರಿಯಾಗಳಲ್ಲಿ, ನಗರ ಪ್ರದೇಶಗಳಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ಮಾಡುತ್ತೇವೆ. ವೀರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾನೀಯರಾಗಿದ್ದಾರೆ. ಸಾವರ್ಕರ್ ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಹೇಳುತ್ತಾರೆ. ಆದರೆ ಟಿಪ್ಪು ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರೆ ಹೇಳಲಿ. ಅದೇ ರೀತಿ ಕಾಂಗ್ರೆಸ್‍ನವರು ನಾವು ಹಿಂದೂ ಎಂದು ಹೇಳಿಕೊಳ್ಳಿ ನೋಡೋಣ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?

    ಸಿದ್ದರಾಮಯ್ಯನವರ ಕಾರಿಗೆ ಕೊಡಗಿನಲ್ಲಿ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸದ ಅವರು, ಮೊಟ್ಟೆ ಎಸೆದವನು ಕಾಂಗ್ರೆಸ್‍ನಲ್ಲಿ ಇದ್ದರು ಎಂದು ಅವರೇ ಒಪ್ಪಿಕೊಂಡಿದ್ದಾರೆ. ಬಿಜೆಪಿ ನಾಯಕರು ಪ್ರವಾಸ ಮಾಡಲಿ ಪ್ರತಿಭಟನೆ ಮಾಡ್ತಿವಿ ಎಂದು ಡಿಕೆಶಿ ಹೇಳುತ್ತಾರೆ. ನಾವು ಕೂಡ ಸವಾಲ್ ಹಾಕ್ತಿವಿ ಬೇಕಿದ್ರೆ ಪ್ರತಿಭಟನೆ ಮಾಡಿಸಿ ನೋಡೋಣ ಎಂದರು.

    ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತ ಅಲ್ಲ, ಕಾಂಗ್ರೆಸ್‍ನವರು. ಸಿದ್ದರಾಮಯ್ಯನವರ ಪ್ರವಾಸ ಮಾಡುವುದನ್ನು ಬಿಜೆಪಿ ಕಾರ್ಯಕರ್ತರು ತಡೆಯುವುದಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಕ್ಕೆ ಹೇಗೆ ಅಧಿಕಾರ ಇದೆಯೋ ಹಾಗೇ ವಿರೋಧ ಪಕ್ಷಕ್ಕೆ ಇದೆ. ಧರ್ಮ ಧರ್ಮದ ನಡುವೆ ಬೆಂಕಿ ಇಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ನಮಗೆ ಸಂಘರ್ಷ ಬೇಕಾಗಿಲ್ಲ ಸಾಮರಸ್ಯಬೇಕು ಎಂದು ಹೇಳಿದರು. ಇದನ್ನೂ ಓದಿ: ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    Live Tv
    [brid partner=56869869 player=32851 video=960834 autoplay=true]

  • ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    ಬೆಂಗಳೂರು: ಸಿದ್ದರಾಮಯ್ಯನವರು ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್‌ರಂತಹ ಸ್ವಾತಂತ್ರ್ಯ ಸೇನಾನಿಗಳನ್ನು ಅವಹೇಳನ ಮಾಡುತ್ತಿರುವುದನ್ನು ಜನ ಗಮನಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

    ಧರ್ಮ ವಿಭಜನೆಗೆ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿ.ವೈ. ವಿಜಯೇಂದ್ರ ಅವರು, ತಮ್ಮ ಅವಧಿಯ ಜನ ವಿರೋಧಿ ಆಡಳಿತ ಹಾಗೂ ರಾಜಕಾರಣದ ವೈಫಲ್ಯ ಮುಚ್ಚಿಕೊಳ್ಳಲು ಧರ್ಮ ರಾಜಕಾರಣಕ್ಕೆ ಕೈ ಹಾಕಿ ಮುಖಭಂಗ ಅನುಭವಿಸಿ ತಕ್ಕ ಬೆಲೆ ತೆತ್ತ ಮಾನ್ಯ ಸಿದ್ದರಾಮಯ್ಯನವರೇ, ಪಶ್ಚಾತ್ತಾಪದ ಮಾತು ನಿಮ್ಮಿಂದ ಯಾರೂ ನಿರೀಕ್ಷಿಸುವುದಿಲ್ಲ. ಆದರೆ ಧರ್ಮಗುರುಗಳ ದರ್ಶನಕ್ಕೆ ತೆರಳಿ ಅಲ್ಲಿಯೂ ವಿತಂಡ ವಿವಾದ ಸೃಷ್ಟಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ನಡೆಯುವ ಅಕ್ರಮ ತಡೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

    ಸಿದ್ದರಾಮಯ್ಯನವರೇ ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್‌ರಂತಹ ಸ್ವಾತಂತ್ರ್ಯ ಸೇನಾನಿಗಳನ್ನು ಅವಹೇಳನ ಮಾಡುವ ಮೂಲಕ ಮತಾಂಧರನ್ನು ಎತ್ತಿ ಕಟ್ಟುವ ನಿಮ್ಮ ರಾಜಕೀಯ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಧರ್ಮರಾಜಕಾರಣದ ಬಿಸಿ ಅನುಭವಿಸಿಯೂ ಮತ್ತದೇ ಹಾದಿಯಲ್ಲಿ ಸಾಗಿರುವ ನಿಮಗಾಗಿ ಬಹುದೊಡ್ಡ ಕಂದಕ ಕಾಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಸಿನಿಮಾ ನೋಡಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ – ನವ ವಿವಾಹಿತೆ ಸ್ಥಳದಲ್ಲೇ ಸಾವು, ಪತಿ ಗಂಭೀರ

    ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದು, ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದಿದ್ದರು. ಇದೇ ವೇಳೆ ಶ್ರೀಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ. ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ. ರಾಜ್ಯ ಜನರ ಅಭಿವೃದ್ದಿಗೆ ಆದ್ಯತೆ ನೀಡುತ್ತೇನೆ ಎಂದಿದ್ದರು.

    ಇದಾದ ನಂತರ ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯನವರು ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿತ್ತು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಾನು ಯಾವುದೇ ಪಶ್ಚಾತಾಪದ ಮಾತುಗಳನ್ನು ಆಡಿಲ್ಲ. ನಾವು ಲಿಂಗಾಯಿತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೀನಿ ಅಷ್ಟೇ. ಇದು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ. ಶ್ಯಾಮನೂರು ಶಿವಶಂಕರಪ್ಪ ಅವರು ವೀರಶೈವ ಧರ್ಮ ಮಾಡಿ ಅಂತ ಅರ್ಜಿ ಕೊಟ್ಟರು ಆಗಿನಿಂದ ಇದು ಶುರುವಾಯ್ತು ಅಷ್ಟೇ ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]