Tag: Veerappa Moily

  • ‘ಸುಳ್ಳು’ಗಳೇ ಮೊಯ್ಲಿಯ ಮನೆ ದೇವರು: ಶಾಸಕ ವಿಶ್ವನಾಥ್ ಲೇವಡಿ

    ‘ಸುಳ್ಳು’ಗಳೇ ಮೊಯ್ಲಿಯ ಮನೆ ದೇವರು: ಶಾಸಕ ವಿಶ್ವನಾಥ್ ಲೇವಡಿ

    ಚಿಕ್ಕಬಳ್ಳಾಪುರ: ಮಹಾನ್ ಸುಳ್ಳಿನ ಸರದಾರರಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಎಂ.ವೀರಪ್ಪ ಮೊಯ್ಲಿ ಈ ಬಾರಿಯೂ ನಮ್ಮ ಕೆಲಸಗಳನ್ನ ಹೈಜಾಕ್ ಮಾಡಿಕೊಂಡಿದ್ದು, ಸುಳ್ಳುಗಳನ್ನೇ ತಮ್ಮ ಮನೆ ದೇವರನ್ನಾಗಿ ಮಾಡಿಕೊಂಡಿದ್ದಾರೆ. ಆದರೆ ಈ ಬಾರಿ ಅವರ ಮನೆ ದೇವರು ಅವರಿಗೆ ಕೈ ಕೊಡಲಿದ್ದಾರೆಂದು ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕು ಕೊತ್ತಕೋಟೆ ಗ್ರಾಮದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ಸಭೆಯಲ್ಲಿ ಪಾಲ್ಗೊಂಡು ಎಸ್.ಆರ್.ವಿಶ್ವನಾಥ್ ಮಾತನಾಡಿದರು. ನಮಗೆ ಸುಳ್ಳು ಹೇಳಿ ಅಭ್ಯಾಸವಿಲ್ಲ. ಆದರೂ ಕೆಲ ವೇಳೆ ಸಣ್ಣ ಪುಟ್ಟ ಸುಳ್ಳು ಹೇಳುತ್ತೇವೆ. ಆದರೆ ಯಲಹಂಕ ಕ್ಷೇತ್ರದಲ್ಲಿ ಶಾಸಕರ ಅನುದಾನದಲ್ಲಿ ಮಾಡಿದ ಕೆಲಸಗಳನ್ನು ಸಂಸದ ವೀರಪ್ಪ ಮೊಯ್ಲಿ ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದ ಕಾಮಗಾರಿಗಳಿಗೂ ಅವರದ್ದೇ ಫೋಟೋ ಹಾಕಿಕೊಂಡಿದ್ದಾರೆ. ಇದನ್ನು ನಂಬಲು ಜನ ಏನು ಗುಗ್ಗು ಅಂದುಕೊಂಡಿದ್ದಾರಾ ಎಂದು ಖಾರವಾಗಿ ಪ್ರಶ್ನಿಸಿದರು.

    ವೀರಪ್ಪ ಮೊಯ್ಲಿ ಬಿಡುಗಡೆ ಮಾಡಿರುವ ಸಾಧನೆಗಳ ಪುಸ್ತಕವೇ ಅವರಿಗೆ ಮಾರಕವಾಗಲಿದೆ. ಸದಾ ಸುಳ್ಳನ್ನೇ ಹೇಳುತ್ತಿರುವ ಮೊಯ್ಲಿ ಇನ್ನು 10 ವರ್ಷವಾದರೂ ಎತ್ತಿನಹೊಳೆ ನೀರು ತರಲ್ಲ. ಅವರ ವಿರುದ್ಧ ಕ್ಷೇತ್ರದ ಜನ ಬಹಳಷ್ಟು ಬೇಸತ್ತು ಹೋಗಿದ್ದಾರೆ. ಸೀಟು ಹಂಚಿಕೆ ಬಗ್ಗೆ ದೋಸ್ತಿ ಪಕ್ಷಗಳು ಗುದ್ದಾಡುತ್ತಿರುವುದರಿಂದ ಮೊಯ್ಲಿ ಅವರಿಗೆ ಅವರಿಗೆ ಟಿಕೆಟ್ ಸಿಗುವುದೇ ಅನುಮಾನವಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಚುನಾವಣಾ ಉತ್ಸಾಹವೇ ಇಲ್ಲ. ಈ ಬಾರಿ ಬಿಜೆಪಿಗೆ ಒಳ್ಳೆಯ ವಾತಾವರಣವಿದ್ದು, ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡರು ಅವರು ಈ ಬಾರಿ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವ ಭರವಸೆ ಇದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿ ಓರ್ವ ದರೋಡೆಕೋರ: ವೀರಪ್ಪ ಮೊಯ್ಲಿ

    ಪ್ರಧಾನಿ ಮೋದಿ ಓರ್ವ ದರೋಡೆಕೋರ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಮೋದಿ 48,000 ಕೋಟಿ ರೂಪಾಯಿ ದರೋಡೆ ಮಾಡಿದ್ದಾರೆ ಅಂತ ಸಂಸದ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.

    ನಗರದ ಶಿಡ್ಲಘಟ್ಟ ವೃತ್ತದಲ್ಲಿ ರಫೆಲ್ ಯುದ್ಧ ವಿಮಾನ ಖರೀದಿ ವಿಚಾರ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ಮೊಯ್ಲಿ, ಈ ಹಿಂದೆ ಯುಪಿಎ ಸರ್ಕಾರ ಸರ್ಕಾರಿ ಸ್ವಾಮ್ಯದ ಎಚ್ ಎ ಎಲ್ ಕಂಪೆನಿಗೆ ರಫೆಲ್ ಯುದ್ಧ ವಿಮಾನ ತಯಾರಿಗೆ ಅವಕಾಶ ಮಾಡಿಕೊಟ್ಟಿತ್ತು. ಪ್ರಧಾನಿ ಮೋದಿ ಈಗ ತಮ್ಮ ಸ್ನೇಹಿತ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಂಪೆನಿಗೆ ಯುದ್ಧ ವಿಮಾನ ನಿರ್ಮಾಣ ಗುತ್ತಿಗೆ ಕೊಡಿಸಿದ್ದಾರೆ. ಮೋದಿಯವರೇ ಮುಂದೆ ನಿಂತು ಈ ಕೆಲಸ ಮಾಡಿದ್ದಾರೆ. ಇದು ದೇಶದ ಅತ್ಯಂತ ದೊಡ್ಡ ಹಗರಣವಾಗಿದ್ದು, 48,000 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಅಂತ ಕೇಂದ್ರ ಸರ್ಕಾರದ ವಿರುದ್ಧ ಮೊಯ್ಲಿ ವಾಗ್ದಾಳಿ ನಡೆಸಿದರು.

    ಈ ಹಗರಣದ ಹಣದಲ್ಲಿ ಮೋದಿ ಏನ್ ಬೇಕಾದರೂ ಮಾಡುತ್ತಾರೆ. ಕರ್ನಾಟಕದಲ್ಲಿ ಅಪರೇಷನ್ ಕಮಲ ಮಾಡೋಕೆ ಒಬ್ಬ ಎಂಎಲ್‍ಎ ಗೆ 50 ಕೋಟಿ ರೂ. ಕೊಡುತ್ತಾರಂತೆ. ಅದಲ್ಲದೆ ಚುನಾವಣೆಗೆ 50 ಕೋಟಿ ಕೊಡುತ್ತಾರಂತೆ. ಹೀಗೆ ಇಂತಹ ಹಣವನ್ನ ಮೋದಿ, ಅಮಿತ್ ಶಾ ಚುನಾವಣೆಗೆ ಬಳಸುತ್ತಾರೆ ಅಂತ ಆಕ್ರೋಶ ವ್ಯಕ್ತಪಡಿಸಿದರು. ಈ ಹಗರಣದ ಬಗ್ಗೆ ರಾಹುಲ್ ಗಾಂಧಿ ಮೊದಲೇ ಹೇಳುತ್ತಿದ್ದರು. ಆದರೆ ದರೋಡೆಕೋರ ಮೋದಿಗೆ ಯಾವುದೇ ನಾಚಿಕೆ ಗೌರವ ಇಲ್ಲ ಅಂತ ಮೋದಿ ವಿರುದ್ಧ ಖಾರವಾಗಿ ಮಾತನಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ರಾಹುಲ್ ಹೇಳಿದಂತೆ ಎಚ್‍ಡಿಕೆಯವರೇ 5 ವರ್ಷ ಸಿಎಂ ಆಗಿರ್ತಾರೆ- ವೀರಪ್ಪ ಮೊಯ್ಲಿ

    ರಾಹುಲ್ ಹೇಳಿದಂತೆ ಎಚ್‍ಡಿಕೆಯವರೇ 5 ವರ್ಷ ಸಿಎಂ ಆಗಿರ್ತಾರೆ- ವೀರಪ್ಪ ಮೊಯ್ಲಿ

    ಹಾಸನ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕುಮಾರಸ್ವಾಮಿಯವರೇ 5 ವರ್ಷ ಸಿಎಂ ಎಂದು ಹೇಳಿ ಆಗಿದೆ. ಅದರಂತೆ ಕುಮಾರಸ್ವಾಮಿ ಅಷ್ಟು ದಿನ ರಾಜ್ಯದ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಮಾಜಿ ಸಿಎಂ ಎಂ.ವೀರಪ್ಪಮೊಯ್ಲಿ ಹೇಳಿದ್ದಾರೆ.

    ಜಿಲ್ಲೆ ಶ್ರವಣಬೆಳಗೊಳದಲ್ಲಿ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಕೊನೇ ದಿನದ ಅಭಿಷೇಕದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾರು ಏನೇ ಮಾಡಿದ್ರೂ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರು ಹೇಳಿದಂತೆ ಎಚ್‍ಡಿಕೆ ಅವರೇ 5 ವರ್ಷ ಸಿಎಂ ಆಗಿರುತ್ತಾರೆ. ಸರಕಾರ ಸುಭದ್ರವಾಗಿರಲಿದೆ ಎಂದರು.

    ಯಾರೋ ಒಬ್ಬಿಬ್ಬರಿಂದ ಸರಕಾರ ಉರುಳಿಸಲು ಸಾಧ್ಯವಿಲ್ಲ ಎಂದ ಮೊಯ್ಲಿ, ಸಮ್ಮಿಶ್ರ ಸರಕಾರ ಆಪತ್ತಿನಲ್ಲಿದೆ ಅನ್ನೋದು ಊಹಾಪೋಹ. ಸರ್ಕಾರ ಉರುಳಿಸಲು ಯತ್ನಿಸುವವರು ನಾಶವಾಗುತ್ತಾರೆ ಎಂದು ಎಚ್ಚರಿಸಿದರು.

    ಈ ಹಿಂದೆ ಯಡಿಯೂರಪ್ಪ ಬಿಜೆಪಿಯಿಂದ ಹೊರ ಹೋಗಿ ಕೆಜೆಪಿ ಕಟ್ಟಿ, ಕಮಲ ಪಕ್ಷಕ್ಕೆ ಶಾಪ ಹಾಕಿ ಹೋಗಿದ್ರು. ನಮ್ಮಪ್ಪನಾಣೆ ಮತ್ತೆಂದೂ ಬಿಜೆಪಿಗೆ ಬರೋದಿಲ್ಲ ಎಂದು ಹೇಳಿದ್ರು. ಆದರೀಗ ಮತ್ತೆ ಬಿಜೆಪಿಗೆ ಬಂದಿದ್ದಾರೆ. ಅವರು ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಯತ್ನಿಸಿದ್ರೆ ಅವರಿಗೆ ಮಾತ್ರವಲ್ಲ, ಬಿಜೆಪಿಗೂ ಕೆಟ್ಟ ಹೆಸರು ಬರಲಿದೆ. ವಾಮಾಚಾರದ ಮೂಲಕ ಸರ್ಕಾರ ಬೀಳಿಸಲು ಯತ್ನಿಸಿದ್ರೆ ಅವರಿಗೇ ಒಳ್ಳೆದಾಗೋದಿಲ್ಲ ಎಂದು ಖಡಕ್ ಆಗಿ ನುಡಿದರು.

    ಮೋದಿ ವಿರುದ್ಧ ಟೀಕೆ:
    ಇದೇ ವೇಳೆ ಪ್ರಧಾನಿ ಮೋದಿ ಕಾರ್ಯವೈಖರಿಯನ್ನು ಟೀಕಿಸಿದ ಅವರು, ಕೇವಲ ಚುನಾವಣೆ ಬಂದಾಗ ಮಾತ್ರ ಅವರಿಗೆ ಕರ್ನಾಟಕ ನೆನಪಾಗಲಿದೆ. ಮೋದಿ ಒಬ್ಬ ಸರ್ವಾಧಿಕಾರಿ. ಕೇಂದ್ರ ಸರಕಾರದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ಟೀಕಿಸಿದರು. ಕೇಂದ್ರ ಸರ್ಕಾರ ಐಟಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ವಿಪಕ್ಷಗಳನ್ನ ಬಗ್ಗು ಬಡಿಯೋ ಯತ್ನ ನಡೆಸುತ್ತಿದೆ. ಇದಕ್ಕೆ ಸಚಿವ ಡಿಕೆಶಿ ಅವರ ಮೇಲೆ ನಡೆದ ದಾಳಿ ಸಾಕ್ಷಿ. ಇದೆಲ್ಲವೂ ಭವಿಷ್ಯದಲ್ಲಿ ಬಿಜೆಪಿಗೇ ಮುಳುವಾಗಲಿದೆ ಎಂದು ಎಚ್ಚರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯ, ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತೆ- ವೀರಪ್ಪ ಮೊಯ್ಲಿ

    ರಾಜ್ಯ, ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತೆ- ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದರೆ ಬಿಜೆಪಿ ಸರ್ವನಾಶವಾಗುತ್ತದೆ ಅಂತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೀರಪ್ಪ ಮೊಯ್ಲಿ ಶಾಪ ಹಾಕಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದ್ರೆ ಬಿಜೆಪಿ ಸರ್ವನಾಶವಾಗುತ್ತದೆ. ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದ್ರೆ ರಾಜ್ಯ ಹಾಗೂ ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತದೆ ಅಂತ ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರ ಬೀಳಿಸುವ ಕೆಲಸಕ್ಕೆ ಬಿಜೆಪಿ ಕೈ ಹಾಕಲ್ಲ ಅನ್ನೋ ವಿಶ್ವಾಸವಿದೆ. ಯಾಕಂದ್ರೆ ಅಪರೇಷನ್ ಕಮಲ ಮಾಡಿ ಬಿಜೆಪಿ ಈಗಾಗಲೇ ವಿಫಲವಾಗಿದೆ. ಹಿಂದೆ ಅಪರೇಷನ್ ಕಮಲ ಮಾಡಿ ಬಿಜೆಪಿ ಪಕ್ಷ ಒಡೆದು ಹೋಯಿತು. ತದನಂತರ ಹೀನಾಯವಾಗಿ ಬಿಜೆಪಿಯವರು ಸೋತರು. ವಾಮಮಾರ್ಗದಿಂದ ಅಧಿಕಾರ ಹಿಡಿದ್ರೆ ಆ ವ್ಯಕ್ತಿ ಹಾಗೂ ಪಕ್ಷಕ್ಕೆ ನಷ್ಟವಾಗುತ್ತದೆ ಅಂದ್ರು.

    ಇದೇ ವೇಳೆ ಸತೀಶ್-ರಮೇಶ್ ಜಾರಕೊಹೊಳಿ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಯಾವ ಒಬ್ಬ ವ್ಯಕ್ತಿಯಿಂದ ಕಾಂಗ್ರೆಸ್ ಪಕ್ಷವನ್ನು ಒಡೆಯಲು ಸಾಧ್ಯವಿಲ್ಲ. ಸುಲಭವಾಗಿ 137 ವರ್ಷದ ಕಾಂಗ್ರೆಸ್ ಪಕ್ಷ ಒಡೆಯಲು ಆಗುವುದಿಲ್ಲ. 25 ಶಾಸಕರು ಬಿಜೆಪಿ ಪಕ್ಷ ಸೇರುವುದು ಅಂತ ಹೇಳಲಾಗುತ್ತಿರುವುದೆಲ್ಲ ಸುಳ್ಳು. ಜನರ ಬಳಿ ಹೋಗಿ ಅಧಿಕಾರ ಸಂಪಾದನೆ ಮಾಡಬೇಕು. ವಾಮಮಾರ್ಗದಿಂದ ಅಧಿಕಾರ ಹಿಡಿದ್ರೆ ಆಧಿಕಾರ ಶಾಶ್ವತ ಅಲ್ಲ ತಾತ್ಕಾಲಿಕ ಅಂತ ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ- ವೀರಪ್ಪ ಮೊಯ್ಲಿ

    ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ- ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. 5 ವರ್ಷನೂ ಎಚ್‍ಡಿ ಕುಮಾರಸ್ವಾಮಿ ಅವರೇ ಸಿಎಂ ಆಗಿರಬೇಕು ಅಂತ ಮಾಜಿ ಮುಖ್ಯಮಂತ್ರಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕಿನ ಐತಿಹಾಸ ಪ್ರಸಿದ್ಧ ನಂದಿಗಿರಿಧಾಮದಲ್ಲಿ ನಂದಿ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ್ರು. ಈ ವೇಳೆ ಸಿಎಂ ಹುದ್ದೆ ಖಾಲಿ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಎಚ್‍ಡಿಕೆ 5 ವರ್ಷ ಅವಧಿ ಪೂರ್ಣ ಮಾಡಲಿದ್ದಾರೆ: ಸತೀಶ್ ಜಾರಕಿಹೊಳಿ

    ಮುಖ್ಯಮಂತ್ರಿ ಸ್ಥಾನವನ್ನು ಎಚ್‍ಡಿ ಕುಮಾರಸ್ವಾಮಿ ಅವರು ಸಾಕಷ್ಟು ದಿನ ಪೂರೈಸುತ್ತಾರೆಯೋ ಇಲ್ಲವೋ ಎಂಬಂತಹ ಚರ್ಚೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಕೂಡ ಮತ್ತೆ ಸಿಎಂ ಆಗುತ್ತೇನೆ ಅನ್ನೋ ಹೇಳಿಕೆಯನ್ನು ನೀಡಿದ್ದಾರೆ. ಈ ಮಧ್ಯೆ ವೀರಪ್ಪ ಮೊಯ್ಲಿ ಅವರೇ 5 ವರ್ಷಗಳ ಕಾಲ ಅಧಿಕಾರವನ್ನು ನಡೆಸುತ್ತಾರೆ. ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಅಂದ್ರು. ಇದನ್ನೂ ಓದಿ:

    ಎಚ್‍ಡಿ ಕುಮಾರಸ್ವಾಮಿ ಅವರೇ ಸಿಎಂ ಆಗಿ ಮುಂದುವರಿಯಬೇಕು ಅಂತ ಈಗಾಗಲೇ ಹೇಳಿಯಾಗಿದೆ. ಒಟ್ಟಿನಲ್ಲಿ ಎಚ್‍ಡಿಕೆ ಅಧಿಕಾರವಧಿ ಪೂರ್ಣಗೊಳಿಸುವುದಿಲ್ಲ ಎಂಬ ಚರ್ಚೆ ಅಪ್ರಸ್ತುತ ಅಂತ ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಚಿಕ್ಕಬಳ್ಳಾಪುರದಿಂದ ವೀರಪ್ಪ ಮೊಯ್ಲಿ ಶಿಫ್ಟ್..?

    ಚಿಕ್ಕಬಳ್ಳಾಪುರದಿಂದ ವೀರಪ್ಪ ಮೊಯ್ಲಿ ಶಿಫ್ಟ್..?

    ಚಿಕ್ಕಬಳ್ಳಾಪುರ: 2019ರ ಲೋಕಸಭಾ ಚುನಾವಣೆಯ ತಯಾರಿ ಎಲ್ಲ ಪಕ್ಷಗಳಲ್ಲಿ ಗರಿ ಗೆದರಿದ್ದು, ಕೆಲ ನಾಯಕರು ಕ್ಷೇತ್ರ ಹುಡುಕಾಟದಲ್ಲಿ ಇದ್ದರೆ, ಮತ್ತೆ ಕೆಲವರು ಕ್ಷೇತ್ರ ಬದಲಾವಣೆಗೆ ಮುಂದಾಗುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಹಾಗು ಮಾಜಿ ಕೇಂದ್ರ ಸಚಿವರಾಗಿರುವ ವೀರಪ್ಪ ಮೊಯ್ಲಿ ಕ್ಷೇತ್ರ ಬದಲಾವಣೆಗೆ ಮುಂದಾಗುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ. ಇಷ್ಟು ದಿನ ವಿಧಾನಸಭಾ ಚುನಾವಣೆ, ಸಮ್ಮಿಶ್ರ ಸರ್ಕಾರ ರಚನೆ, ಸಂಪುಟ ರಚನೆಯ ವಿಷಯಗಳಲ್ಲಿ ಮಗ್ನರಾಗಿದ್ದ ನಾಯಕರು ಲೋಕಸಭ ಚುನಾವಣೆಯತ್ತ ಮುಖ ಮಾಡುತ್ತಿದ್ದಾರೆ. ಸೂಕ್ತ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ರೆ ಮಾತ್ರ ಗೆಲುವು ಸಾಧ್ಯ ಅಂತಾ ಅರಿತಿರೋ ರಾಜಕೀಯ ನಾಯಕರು ಲೆಕ್ಕಾಚಾರ ಅನುಗುಣವಾಗಿ ಕ್ಷೇತ್ರಗಳ ಆಯ್ಕೆ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ.

    2019ರ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆಯನ್ನು ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ ಕಾಂಗ್ರೆಸ್ ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆ ಮೈತ್ರಿ ರಚಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರ ಏನಾದ್ರೂ ಜೆಡಿಎಸ್ ಪಾಲಾಗುವ ಸಾಧ್ಯತೆಗಳಿವೆಯಂತೆ. ಮುನ್ಸೂಚನೆ ಗೊತ್ತಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸರ್ವೇ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಬಿಜೆಪಿ ಪ್ರಾಬಲ್ಯವುಳ್ಳ ಕ್ಷೇತ್ರ:
    ವೀರಪ್ಪ ಮೊಯ್ಲಿ ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದರೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರನ್ನ ಎದುರಿಸಬೇಕು. ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಜೆಪಿ ಪ್ರಾಬಲ್ಯವನ್ನು ಹೊಂದಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಬಿಜೆಪಿ ನಾಯಕರೇ ಆಯ್ಕೆಯಾಗಿ ಬಂದಿದ್ದಾರೆ. ಶಾಸಕರಾದ ಸಿ.ಟಿ ರವಿ, ಸುರೇಶ್, ಕುಮಾರಸ್ವಾಮಿ, ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಮೆಂಡನ್, ರಘುಪತಿ ಭಟ್, ಸುನಿಲ್ ಕುಮಾರ್ ಎಲ್ಲ ಪ್ರಬಲ ನಾಯಕರು ಉಡುಪಿ-ಚಿಕ್ಕಮಗಳೂರು ಲೋಕಸಭಾ ವ್ಯಾಪ್ತಿಯಲ್ಲಿ ಬರುತ್ತಾರೆ.

    ರಾಜ್ಯ ರಾಜಕಾರಣಕ್ಕೆ ಮರಳುವ ಉದ್ದೇಶದಿಂದ ಶೋಬಾ ಕರಂದ್ಲಾಜೆ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ಸುದ್ದಿಯೊಂದು ಬಿಜೆಪಿ ಅಂಗಳದಲ್ಲಿ ಹರಿದಾಡುತ್ತಿದೆ. ಇತ್ತ ಉಡುಪಿ-ಚಿಕ್ಕ ಮಗಳೂರು ಕ್ಷೇತ್ರ ತೆರವಾದರೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಸ್ಪರ್ಧಿಸುವ ಇಚ್ಚೆಯನ್ನು ವ್ಯಕ್ತಪಡಿಸುತ್ತಿದ್ದಾರಂತೆ. ಇತ್ತ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಜೀವರಾಜ್ ಉಡುಪಿ-ಚಿಕ್ಕ ಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲನೇ ನಾಯಕರಾಗಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಬ್ಬರು ಜೀವರಾಜ್ ಅವರಿಗೆ ಬೆಂಬಲ ಸೂಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

    ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ಸಹ ಕ್ಷೇತ್ರ ಬದಲಾವಣೆಗೆ ಚಿಂತಿಸುತ್ತಿದ್ದು, ಮಂಡ್ಯದಿಂದ ಬೆಂಗಳೂರು ಉತ್ತರ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಒಂದು ವೇಳೆ ರಮ್ಯಾ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ರೆ, ಎದುರಾಳಿಯಾಗಿ ಬಿಜೆಪಿ ಶೋಭಾ ಕರಂದ್ಲಾಜೆ ಅವರನ್ನು ಚುನಾವಣಾ ಕಣಕ್ಕಿಳಿಸುವುದರ ಬಗ್ಗೆ ಚಿಂತನೆಯೂ ನಡೆಸುತ್ತಿದೆ. ತಮ್ಮ ಸ್ವಕ್ಷೇತ್ರ ಬಿಟ್ಟು ಬಂದ್ರೆ, ಖಾಲಿಯಾಗುವ ಕ್ಷೇತ್ರದ ಟಿಕೆಟ್‍ಗಾಗಿ ಡಿ.ವಿ.ಸದಾನಂದಗೌಡ ಮತ್ತು ಜೀವರಾಜ್ ನಡುವೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗುತ್ತಿದೆ.

    ಲೋಕಸಭೆ ಅಧಿವೇಶನದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯದ 28 ಕ್ಷೇತ್ರಗಳಿಂದ ಬಿಜೆಪಿ ಸ್ಪರ್ಧೆಗೆ ಇಳಿಯಲಿದೆ. ಆದರೆ ಶೋಭಾ ಕರಂದ್ಲಾಜೆ ಮತ್ತು ಡಿ.ವಿ.ಸದಾನಂದಗೌಡ ಅವರ ಮತಕ್ಷೇತ್ರಗಳ ಬದಲಾವಣೆ ಆಗುತ್ತದೆ ಎನ್ನುವುದು ಕೇವಲ ಊಹಾಪೋಹ ಅಷ್ಟೇ. ಆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

  • 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನೇ ಬದಲಿಸಬೇಕು- ವೀರಪ್ಪ ಮೊಯ್ಲಿ

    2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನೇ ಬದಲಿಸಬೇಕು- ವೀರಪ್ಪ ಮೊಯ್ಲಿ

    ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಪ್ರಧಾನಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಲೋಕಸಭಾ ಸದಸ್ಯ ವೀರಪ್ಪ ಮೊಯ್ಲಿ  ಹೇಳಿದ್ದಾರೆ.

    ಚಿಕ್ಕಬಳ್ಳಾಪುದಲ್ಲಿ ಮಾತನಾಡಿದ ಅವರು ನೋಟು ಅಮಾನ್ಯೀಕರಣದಿಂದ ದೇಶದ ಅರ್ಥಿಕ ಪರಿಸ್ಥಿತಿ ಆಧೋಗತಿಗೆ ತಲುಪಿದೆ. ಎಫ್‍ಡಿಐ ಕಡಿಮೆ ಆಗಿ, ರೂಪಾಯಿ ಮೌಲ್ಯ ಕನಿಷ್ಠ ಮಟ್ಟದಲ್ಲಿದೆ. ಹಾಗಾಗಿ 2019 ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೋದಿಯನ್ನೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ ಎಂದು ಹೇಳಿದರು.

    ದೇಶದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ. ನೋಟು ಬ್ಯಾನ್ ನಿಂದ ಕಪ್ಪು ಹಣಕ್ಕೆ ಕಡಿವಾಣ ಹಾಕಲಾಗಿಲ್ಲ. ನೋಟು ಅಮಾನ್ಯೀಕರಣ ಕೂಡ ಕಪ್ಪು ಹಣವನ್ನು ಬಿಳಿ ಹಣ ಮಾಡುವ ಯೋಜನೆಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.

    ಪ್ರಧಾನಿ ನೆರೇಂದ್ರ ಮೋದಿ ನೇತೃತ್ವದ ಸರ್ಕಾರ ಭಾಷಣದ ಸರ್ಕಾರ. ಅದು ಕೇವಲ ಆಶ್ವಾಸನೆಗಳನ್ನು ಕೊಡುವ ಸರ್ಕಾರ ಎಂದು ಕಿಡಿ ಕಾರಿದರು.

    ದೇಶದಲ್ಲಿನ ಕಪ್ಪುಹಣವನ್ನು ಹೊರತರುವ ದೃಷ್ಟಿಯಿಂದ ಮೋದಿ ನೇತೃತ್ವದ ಸರ್ಕಾರ ನೋಟು ಅಮಾನ್ಯೀಕರಣ ಮಾಡಿತು. ಆದರೆ ದೇಶದಲ್ಲಿ ಕಪ್ಪು ಹಣ ಈಗಲೂ ಹೆಚ್ಚಾಗುತ್ತಿದೆ. ಇನ್ನು ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವುದಾಗಿ ಮೋದಿ ಹೇಳಿದ್ದರು. ಆದರೆ ಕಪ್ಪುಹಣ ತರುವ ಬದಲು ಮತ್ತೆ ದೇಶದಲ್ಲಿ ಕಪ್ಪುಹಣ ಹೆಚ್ಚಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

  • ಮುಂದಿನ ದಿನದಲ್ಲಿ ಕಾಂಗ್ರೆಸ್ ಜಾತಕ ಬಿಚ್ಚಿಡುತ್ತೇನೆ- ಪರಮೇಶ್ವರ್, ಮೊಯ್ಲಿ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

    ಮುಂದಿನ ದಿನದಲ್ಲಿ ಕಾಂಗ್ರೆಸ್ ಜಾತಕ ಬಿಚ್ಚಿಡುತ್ತೇನೆ- ಪರಮೇಶ್ವರ್, ಮೊಯ್ಲಿ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

    ಬೆಂಗಳೂರು: ಕಾಂಗ್ರೆಸ್ ನ ಜಾತಕವನ್ನ ಮುಂದಿನ ದಿನಗಳಲ್ಲಿ ಬಿಚ್ಚಿಡುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

    ಬಿಜೆಪಿ ಸೇರ್ಪಡೆಗೊಂಡು ಮಾತನಾಡಿದ ಅವರು, ನನ್ನ ಭತ್ತಳಿಕೆಯಲ್ಲಿ ಇನ್ನು ಅಸ್ತ್ರಗಳಿವೆ. ಇವೆಲ್ಲವನ್ನು ಮುಂದಿನ ದಿನಗಳಲ್ಲಿ ಬಿಚ್ಚಿಡುತ್ತೇನೆ. ಕಾಂಗ್ರೆಸ್‍ನಲ್ಲಿ ತತ್ವ ಸಿದ್ದಾಂತಗಳನ್ನು ಮಾರಿಕೊಂಡವರಿಗೆ ಬೆಲೆ. ನಾನು ಪಕ್ಷ ಬಿಟ್ಟಿದ್ದಕ್ಕೆ ಕಾಂಗ್ರೆಸ್ ನವರು ಉತ್ತರ ಕೊಡಬೇಕು ಎಂದರು.

    40 ವರ್ಷ ಕಾಂಗ್ರೆಸ್ ಗಾಗಿ ದುಡಿದಿದ್ದೇನೆ. ಆದರೆ ಬಿ ಫಾರಂ ನೋಡಿಯೇ ಇಲ್ಲ. ಬಿ ಫಾರಂ ಪಡೆಯದೇ ಇರುವಷ್ಟು ಕಳಪೆ ನಾನಲ್ಲ. ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ. ನನ್ನನ್ನು ಅಲ್ಲಿ ನಡೆಸಿಕೊಂಡ ರೀತಿ ಸರಿಯಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಕಾಂಗ್ರೆಸ್ ನಲ್ಲಿ ಟಿಕೆಟ್‍ಗಳನ್ನು ಮಾರಾಟ ಮಾಡಲಾಗುತ್ತಿದೆ. ಡಾ.ಪರಮೇಶ್ವರ್ ಅವರು ಚೇಲಾಗಳನ್ನ ಇಟ್ಟುಕೊಂಡು ಮಹದೇವಪುರ, ನೆಲಮಂಗಲ ಟಿಕೆಟ್ ಸೇಲ್ ಮಾಡಿದ್ದಾರೆ. ದೇವನಹಳ್ಳಿ, ಯಲಹಂಕ ಟಿಕೆಟ್ ವೀರಪ್ಪ ಮೊಯ್ಲಿ ಅವರಿಂದ ಸೇಲ್ ಆಗಿದೆ ಎಂದು ನೇರ ಆರೋಪ ಮಾಡಿದರು.

    ಮಲ್ಲಿಕಾರ್ಜುನ ಖರ್ಗೆ ದೊಡ್ಡ ನಾಯಕ ಆದರೆ ಅವರ ಮಾತು ಕಾಂಗ್ರೆಸ್ ನಲ್ಲಿ ನಡೆಯೋದಿಲ್ಲ. ವೀರಪ್ಪ ಮೊಯ್ಲಿಗೆ ದಲಿತರನ್ನ ಕಂಡರೆ ಆಗೋದಿಲ್ಲ. ದಲಿತ ಮುಖ್ಯಮಂತ್ರಿ ಆಗಬೇಕು ಅಂತ ಮಾತಾಡಿದ್ದಕ್ಕೆ ನನ್ನನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

  • ಮಾಜಿ ಸಿಎಂ ವೀರಪ್ಪ ಮೊಯ್ಲಿಗೆ ಶ್ರದ್ಧಾಂಜಲಿ- ಕಣ್ಣೀರಿಟ್ಟ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಭಂಡಾರಿ

    ಮಾಜಿ ಸಿಎಂ ವೀರಪ್ಪ ಮೊಯ್ಲಿಗೆ ಶ್ರದ್ಧಾಂಜಲಿ- ಕಣ್ಣೀರಿಟ್ಟ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಭಂಡಾರಿ

    ಉಡುಪಿ: ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾರ್ಕಳ ವಿಧಾನಸಭಾ ಕಾಂಗ್ರೆಸ್‍ನ ಒಳ ಜಗಳ ವಿಪರೀತಕ್ಕೇರಿದೆ. ವೀರಪ್ಪ ಮೊಯ್ಲಿ ಬಣ ಮತ್ತು ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯಕುಮಾರ್ ಶೆಟ್ಟಿ ಬಣದ ಕಿತ್ತಾಟ ಜೋರಾಗಿದೆ. ಇದರ ನಡುವೆ ವೀರಪ್ಪ ಮೊಯ್ಲಿ ಮತ್ತು ಅಭ್ಯರ್ಥಿ ಗೋಪಾಲ ಪೂಜಾರಿಯವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ನಡೆದಿದೆ.

    ವೀರಪ್ಪ ಮೊಯ್ಲಿಯವರ ಜನನ ದಿನಾಂಕ ಮತ್ತು ಟಿಕೆಟ್ ಘೋಷಣೆಯಾದ ಏಪ್ರಿಲ್ 15ರ ದಿನಾಂಕವನ್ನು ನಮೂದಿಸಿ ಮೊಯ್ಲಿ ಮರಣ ಹೊಂದಿದ್ದಾರೆ ಎಂದು ಬರೆಯಲಾಗಿದೆ. ಕೆಲ ಕಿಡಿಗೇಡಿಗಳು ಫೋಟೋಗಳನ್ನು ವಾಟ್ಸಪ್, ಫೇಸ್ ಬುಕ್‍ನಲ್ಲೂ ಹರಿಬಿಡುತ್ತಿದ್ದಾರೆ. ಈ ನಡುವೆ ಮುನಿಯಾಲು ಉದಯಕುಮಾರ್ ಶೆಟ್ಟಿ ಬೆಂಬಲಿಗರು ಗೋಪಾಲ ಭಂಡಾರಿಯವರ ಮನೆಗೆ ತೆರಳಿ ಕಣದಿಂದ ಹಿಂದೆ ಸರಿಯುವಂತೆ ಒತ್ತಾಯ ಮಾಡಿದ್ದಾರೆ.

    ತಾವು ಬಿ ಫಾರಂ ಹಿಂದಕ್ಕೆ ನೀಡಿ, ಸ್ಪರ್ಧೆಯಿಂದ ಹಿಂದೆ ಸರಿಯದಿದ್ದರೆ ಬೂತ್ ನಲ್ಲಿ ಕಾರ್ಯಕರ್ತರು ಪ್ರಚಾರಕ್ಕೆ ಸಿಗದಂತೆ ಮಾಡುತ್ತೇವೆ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. ಮನೆಗೆ ತೆರಳಿ ಬಹಳ ಒತ್ತಡ ಹೇರಿದ್ದಾರೆ ಎಂದು ಗೋಪಾಲ ಭಂಡಾರಿ ಬೆಂಬಲಿಗರು ದೂರಿದ್ದಾರೆ. ಈ ಎರಡು ವಿಚಾರಗಳನ್ನು ಕಂಡು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಭಂಡಾರಿ ಕಣ್ಣೀರಿಟ್ಟಿದ್ದಾರೆ. ಕಳೆದ 40 ವರ್ಷದ ರಾಜಕಾರಣದಲ್ಲಿ, 10 ವರ್ಷದ ಶಾಸಕತ್ವದಲ್ಲಿ ನಯಾ ಪೈಸೆ ಲಂಚದ ಹಣ ಪಡೆದಿಲ್ಲ. ಒಂದು ರೂಪಾಯಿಯನ್ನು ಯಾರಿಂದಲೂ ಪಡೆದಿಲ್ಲ. ನನಗೆ, ನಮ್ಮೆಲ್ಲರ ಮುಖಂಡ ವೀರಪ್ಪ ಮೊಯ್ಲಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅಪಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನನ್ನ ಕುಟುಂಬಕ್ಕೆ, ಮಕ್ಕಳಿಗೆ- ಹೆಂಡತಿಗೆ ಹೀನಾಯವಾಗಿ ಬೈಯ್ಯಲಾಗುತ್ತಿದೆ ಎಂದು ಆರೋಪಿಸಿ ಕಣ್ಣೀರಿಟ್ಟಿದ್ದಾರೆ. ಪ್ರಚಾರದ ವೇಳೆ ಬೂತ್ ಸಭೆಯಲ್ಲಿ ಮಾತನಾಡಿದ ಗೋಪಾಲ ಭಂಡಾರಿಯವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಧಮ್ಕಿಗೆಲ್ಲ ನಾನು ಹೆದರೋದಿಲ್ಲ, ಭ್ರಷ್ಟಾಚಾರದಿಂದ ಮಾಡಿದ ಹಣ ನನ್ನಲ್ಲಿಲ್ಲ. ಸಾಲದಲ್ಲಿರುವ ನಾನು ಜನಸೇವೆ ಮಾಡುತ್ತೇನೆ ಎಂದು ಗೋಪಾಲ ಭಂಡಾರಿ ಹೇಳಿದ್ದಾರೆ. ಸದ್ಯ ಈ ವಿಚಾರ ಭಾರೀ ಚರ್ಚೆಯಲ್ಲಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಉದಯಕುಮಾರ್ ಶೆಟ್ಟಿ, ನನ್ನ ಬೆಂಬಲಿಗರು ಪರಿಸ್ಥಿತಿಯನ್ನು ಮನವರಿಗೆ ಮಾಡಿದ್ದಾರೆ. ನನಗೆ ಅವಕಾಶ ಮಾಡಿಕೊಡಿ ಎಂದು ಮನವರಿಗೆ ಮಾಡಿದ್ದಾರೆ. ಧಮ್ಕಿ ಹಾಕುವ ಕೆಲಸ ಮಾಡಿಲ್ಲ ಎಂದಿದ್ದಾರೆ.

  • ಮಗ ಹರ್ಷನಿಗೆ ಟಿಕೆಟ್ ಕೊಡಬೇಡಿ – ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ವೀರಪ್ಪ ಮೊಯ್ಲಿ ಮನವಿ

    ಮಗ ಹರ್ಷನಿಗೆ ಟಿಕೆಟ್ ಕೊಡಬೇಡಿ – ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ವೀರಪ್ಪ ಮೊಯ್ಲಿ ಮನವಿ

    ಬೆಂಗಳೂರು: ಮಾಜಿ ಸಿಎಂ ವೀರಪ್ಪ ಮೊಯ್ಲಿ, ತಮ್ಮ ಮಗನಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಿಕೊಡಬೇಡಿ ಎಂದು ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಸ್ವತಃ ವೀರಪ್ಪ ಮೊಯ್ಲಿ ಅವರು ಸಭೆಯಲ್ಲಿ ತಮ್ಮ ಮಗನ ಟಿಕೆಟ್ ಕುರಿತ ಅರ್ಜಿಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ. ಅದ್ದರಿಂದ ಅವರ ಅರ್ಜಿಯನ್ನು ಸ್ಕ್ರೀನಿಂಗ್ ಕಮಿಟಿ ಪಟ್ಟಿಯಿಂದ ಕೈಬಿಟ್ಟಿರುವುದಾಗಿ ತಿಳಿಸಿದರು. ಈ ಸಭೆಯಲ್ಲಿ ಶಾಸಕ ಅಶೋಕ್ ಖೇಣಿ ಹೆಸರು ಸ್ಕ್ರೀನಿಂಗ್ ಕಮಿಟಿಗೆ ಶಿಫಾರಸು ಮಾಡಲಾಗಿದೆ.

    ಕಳೆದ ಕೆಲ ದಿನಗಳ ಹಿಂದೆ ವೀರಪ್ಪ ಮೊಯ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಟ್ವೀಟ್ ಮಾಡಿ ಭಾರೀ ಸುದ್ದಿಯಾಗಿದ್ದರು. ಅಲ್ಲದೇ ಈ ಘಟನೆ ಕಾಂಗ್ರೆಸ್ ಪಕ್ಷಕ್ಕೆ ಬಾರಿ ಮುಜುಗರವನ್ನು ಉಂಟುಮಾಡಿತ್ತು. ಸದ್ಯ ವೀರಪ್ಪ ಮೊಯ್ಲಿ ಅವರೇ ತಮ್ಮ ಮಗ ಹರ್ಷ ಮೊಯ್ಲಿಗೆ ಟಿಕೆಟ್ ಬೇಡ ಎಂದು ಹೇಳಿದರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

    ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ಆಕಾಂಕ್ಷಿಯಾಗಿದ್ದ ಹರ್ಷ ಮೊಯ್ಲಿಗೆ ಟಿಕೆಟ್ ನಿರಾಕರಿಸಿದ ಕಾರಣವೇ ಅವರು ಪಕ್ಷದ ವಿರುದ್ಧ ಟ್ವೀಟ್ ಮಾಡಿದ್ದರು ಎನ್ನಲಾಗಿತ್ತು. ಈ ಬಾರಿ ಉಡುಪಿಯ ಕಾರ್ಕಳದಿಂದ ಸ್ಪರ್ಧೆ ನಡೆಸಲು ಹರ್ಷ ಮೊಯ್ಲಿ ಸಿದ್ಧತೆ ನಡೆಸಿದ್ದರು ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿತ್ತು.