https://youtu.be/qM5eQdcWkqs
Tag: Veerappa Moily
-

ಮೊಯ್ಲಿ ಅವರು ಸುಮ್ ಸುಮ್ನೆ ಏನೂ ಹೇಳಲ್ಲ, ಸಾಕಷ್ಟು ಯೋಚಿಸಿ ಅಳೆದು ತೂಗಿ ಮಾತಾಡ್ತಾರೆ- ಪ್ರತಾಪ್ ಸಿಂಹ
ನವದೆಹಲಿ: ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧವೇ ಟ್ವೀಟ್ ಮಾಡಿರುವುದು ಇದೀಗ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕ ಮೊಯ್ಲಿ ಅವರು ಸುಮ್ ಸುಮ್ನೆ ಏನೂ ಮಾತನಾಡುವುದಿಲ್ಲ. ಸಾಕಷ್ಟು ಯೋಚಿಸಿ ಅಳೆದು ತೂಗಿ ಮಾತನಾಡುತ್ತಾರೆ. ಸಾಕಷ್ಟು ಹತಾಸೆಯಿಂದ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ದರೋಡೆ ಗೊತ್ತಾಗುತ್ತಿದೆ ಅಂತ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಆರೋಪ ನಿಜವಾಗಿದೆ. ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಾಕ್ಷಿ ಕೇಳಿದ್ರು. ಸಿಎಂಗೆ ಮೊಯ್ಲಿ ಅವರೇ ಉತ್ತರ ಕೊಟ್ಟಿದ್ದಾರೆ. ಮೊಯ್ಲಿ ಅವರ ಮೇಲೆ ಒತ್ತಡ ಹೇರಿದ ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದಾರೆ. ನಿರ್ಭೀತಿಯಿಂದ ಟ್ವೀಟ್ ಮಾಡಿರುವುದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ; ವೀರಪ್ಪ ಮೊಯ್ಲಿ ಟ್ವೀಟ್ 10% ಕಮಿಷನ್ ಸರ್ಕಾರದ ಆರೋಪಕ್ಕೆ ಸಾಕ್ಷಿ : ಬಿಎಸ್‍ವೈ

ಇದೇ ವೇಳೆ ಕಾವೇರಿ ಸಭೆ ಮುಂದೂಡಿಕೆ ವಿಚಾರದ ಕುರಿತು ಮಾತನಾಡಿದ ಅವರು, ಸರಕಾರ ಏಕಾಏಕಿ ಸಭೆ ರದ್ದು ಮಾಡಿದೆ. ಮೊಯ್ಲಿ ಹೇಳಿಕೆಯಿಂದ ಮುಜುಗರ ತಪ್ಪಿಸಲು ಸಭೆ ಮುಂದೂಡಿಕೆ ಮಾಡಲಾಗಿದೆ. ಸಿಎಂಗೆ ಭಯ ಇಲ್ಲದೇ ಇದ್ದರೆ ಸಭೆ ನಡೆಸಬೇಕಿತ್ತು. ಸಭೆ ಮುಂದೂಡುವ ತುರ್ತು ಅರ್ನಿವಾರ್ಯತೇ ಏನಿತ್ತು ಎಂದು ಸಂಸದರು ಪ್ರಶ್ನಿಸಿದ್ರು.
ಮೊಯ್ಲಿ ಟ್ವೀಟ್ ನಲ್ಲೇನಿತ್ತು?: `ಕಾಂಟ್ರಾಕ್ಟರ್‍ಗಳ ಕೈಲಿ ಕಾಂಗ್ರೆಸ್ ಟಿಕೆಟ್’ ಅಂತ ಬರೆದು ಕಾಂಗ್ರೆಸ್‍ನಲ್ಲಿ ಹಣದ ಹೊಂದಾಣಿಕೆಯಿಂದ ಅಭ್ಯರ್ಥಿಗಳನ್ನು ನಿರ್ಧರಿಸುವಂತಾಗಿದೆ ಅಂತ ಪಕ್ಷದ ವಿರುದ್ಧ ನೇರವಾಗಿ ಮೊಯ್ಲಿ ತಮ್ಮ ಟ್ವೀಟ್ ನಲ್ಲಿ ಆರೋಪ ಮಾಡಿದ್ದರು. ಈ ಟ್ವೀಟನ್ನು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದರು. ಮೊಯ್ಲಿ ಟ್ವೀಟ್ ಮಾಡಿದ್ದ ಬೆನ್ನಲ್ಲೇ ಮಗ ಹರ್ಷ ಮೊಯ್ಲಿ ಅವರು ಕೂಡ ಅದೇ ಟ್ವೀಟನ್ನು ತಮ್ಮ ಖಾತೆಯಲ್ಲೂ ರಿಟ್ವೀಟ್ ಮಾಡಿದ್ದರು. ಈ ವಿಚಾರ ಸುದ್ದಿಯಾಗುತ್ತಿದ್ದ ಬೆನ್ನಲ್ಲೇ ಇದೀಗ ಟ್ವೀಟ್ ಡಿಲೀಟ್ ಮಾಡಿದ್ದಾರೆ.
-

ಟ್ವೀಟ್‍ಗೆ ನನಗೂ ಯಾವುದೇ ಸಂಬಂಧವಿಲ್ಲ, ಕೈ ಗೆಲುವಿನ ವಾತಾವರಣವನ್ನು ಕೆಡಿಸಲು ವಿರೋಧಿಗಳ ಕೆಲ್ಸ: ಮಹದೇವಪ್ಪ
ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಟ್ವೀಟ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಸಚಿವ ಮಹದೇವಪ್ಪ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಪ್ರಕರಣ ತಿರುಗಿಸಲು ನೋಡಿದ ಸಚಿವರು, ಕಾಂಗ್ರೆಸ್ ಗೆ ಗೆಲುವಿನ ವಾತಾವಣ ಇದೆ. ಇದನ್ನು ಕೆಡಿಸಲು ವಿರೋಧಿಗಳ ಇಂತಹ ಕೆಲಸ ಮಾಡಿರಬಹುದು. ಬಿಜೆಪಿ ನಾಯಕರು ದಾಖಲೆ ಇಲ್ಲದೇ ಎಂದಿನಂತೆ ಹಳೇ ಆರೋಪ ಮಾಡುತ್ತಾರೆ. ನಾನು ಪಕ್ಷದ ಕೆಲಸ, ಸರ್ಕಾರದ ಕೆಲಸ ಮಾತ್ರ ಮಾಡುತ್ತೇನೆ ಅಷ್ಟೇ ಎಂದು ಹೇಳಿದರು.

ಗಾಂಧಿ ಭವನ ರಸ್ತೆಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸೋಷಿಯಲ್ ಮೀಡಿಯಾ ಬಗ್ಗೆ ನನಗೆ ಗೊತ್ತಿಲ್ಲ. ಮೊಯ್ಲಿ ಅವರು ಟ್ವೀಟ್ ಮಾಡಿದ್ದು ಯಾಕೆ? ಡಿಲೀಟ್ ಮಾಡಿದ್ದು ಯಾಕೆ ಎನ್ನುವುದು ನನಗೆ ಗೊತ್ತಿಲ್ಲ. ಅವರೇನು ಚಿಕ್ಕ ಹುಡುಗ ಅಲ್ಲ. ನಾನು ಪಕ್ಷದ ಕಾರ್ಯಕರ್ತ. ಮೊಯ್ಲಿ ಅವರೇ ಟ್ವೀಟ್ ನನ್ನದಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಮತ್ತೇನು ಹೇಳಲ್ಲ. ಬೇಕಿದ್ದರೆ ಮೊಯ್ಲಿ ಅವರನ್ನು ನೀವೇ ಕೇಳಿಕೊಳ್ಳಿ ಎಂದರು.
ಕಾಂಟ್ರಾಕ್ಟ್ ಒಬ್ಬರಿಗೆ ಟಿಕೆಟ್ ಕೊಡಿಸುವ ವಿಚಾರ ಹಾಗೂ ಮೊಯ್ಲಿ ಮಗನಿಗೆ ಟಿಕೆಟ್ ತಪ್ಪಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರಾ ಎನ್ನುವ ಪ್ರಶ್ನೆಗೆ, ಯಾರಿಗೆ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಮೊಯ್ಲಿ ಅವರು ಹಿರಿಯ ನಾಯಕರಾಗಿದ್ದು, ಅವಶ್ಯಕತೆ ಬಿದ್ದರೆ ನಾನೇ ಅವರ ಜೊತೆ ಮಾತನಾಡುತ್ತೇನೆ. ವಿವಾದದಿಂದ ನನಗೇನು ಆಗಿಲ್ಲ. ನಾನು ಸಂತೋಷವಾಗಿಯೇ ಇದ್ದೇನೆ ಎಂದು ಉತ್ತರಿಸಿದರು. ಇದನ್ನೂ ಓದಿ: ವೀರಪ್ಪ ಮೊಯ್ಲಿ ಟ್ವೀಟ್ 10% ಕಮಿಷನ್ ಸರ್ಕಾರದ ಆರೋಪಕ್ಕೆ ಸಾಕ್ಷಿ : ಬಿಎಸ್‍ವೈ
ಟಿಕೆಟ್ ನಿರ್ಧಾರ ಆಗಿಲ್ಲ: ಮುಂಬರುವ ಚುನಾವಣೆಯಲ್ಲಿ ನನ್ನನ್ನು ಸೇರಿದಂತೆ ಯಾರಿಗೂ ಇನ್ನು ಟಿಕೆಟ್ ನಿರ್ಧಾರ ಆಗಿಲ್ಲ. ಟಿಕೆಟ್ ಸಂಬಂಧ ಸಭೆಗಳು ನಡೆಯುತ್ತಿವೆ. ನನ್ನ ಮಗ ಕೂಡಾ ಟಿಕೆಟ್ ಆಕಾಂಕ್ಷಿ. ಯಾವ ಕ್ಷೇತ್ರ ಅಂತ ಇನ್ನು ನಿರ್ಧಾರ ಆಗಿಲ್ಲ. ನನ್ನ ಹಾಗೂ ನನ್ನ ಮಗನ ಸ್ಪರ್ಧೆಯ ಕ್ಷೇತ್ರದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರೋದು ಸುಳ್ಳು. ನನ್ನ ಹಾಗೂ ಮಗನ ಸ್ಪರ್ಧೆಯನ್ನ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು.
-

ವೀರಪ್ಪ ಮೊಯ್ಲಿ ಟ್ವೀಟ್ 10% ಕಮಿಷನ್ ಸರ್ಕಾರದ ಆರೋಪಕ್ಕೆ ಸಾಕ್ಷಿ : ಬಿಎಸ್‍ವೈ
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿರುವ ಟ್ವೀಟ್ ಸಿದ್ದರಾಮಯ್ಯ ಅವರ ಸರ್ಕಾರ 10% ಸರ್ಕಾರ ಆಗಿದೆ ಎನ್ನುವುದಕ್ಕೆ ಸಾಕ್ಷಿ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂಪ್ಪ ಟ್ವೀಟ್ ಮಾಡಿದ್ದಾರೆ.
At last someone’s conscience in @INCKarnataka prodded him to speak up! @moilyv ji is right. We have been saying that @siddaramaiah is #10PercentCM. With contractors filling PWD min's deep pockets, state's coffers & roads are in tatters. Congress veteran’s view validates our point https://t.co/OpaWh1ZwPG
— B.S.Yediyurappa (@BSYBJP) March 16, 2018
ರಾಜ್ಯದ ಕಾಂಗ್ರೆಸ್ ಸರ್ಕಾರ 10% ಸರ್ಕಾರ ಎಂದು ಸಾಬೀತು ಪಡಿಸಲು ನಾವು ಈಗಾಗಲೇ ಹಲವು ದಾಖಲೆಗಳ ಹಾಗೂ ಪುರಾವೆಗಳನ್ನು ಒದಗಿಸಿದ್ದೇವು. ಆದರೆ ಸಿಎಂ ಅವುಗಳನ್ನು ಸುಳ್ಳು ಎಂದು ಪ್ರತಿಪಾದಿಸಿದ್ದರು. ಇಂದು ಕಾಂಗ್ರೆಸ್ ಹಿರಿಯ ನಾಯಕರೇ ಇದಕ್ಕೆ ಸಾಕ್ಷಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಯೋಜನೆ ನಡೆಯಬೇಕಾದರು ಕಮಿಷನ್ ನೀಡಬೇಕೆಂಬ ಸತ್ಯ ಹೊರಬಂದಿದೆ. ಪಿಡಬ್ಲೂಡಿ ಸಚಿವರು ಗುತ್ತಿಗೆದಾರರೊಂದಿಗೆ ಸೇರಿ ತಮ್ಮ ಬೊಕ್ಕಸವನ್ನು ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಬಿಎಸ್‍ವೈ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
`ಕಾಂಟ್ರಾಕ್ಟರ್ ಗಳ ಕೈಲಿ ಕಾಂಗ್ರೆಸ್ ಟಿಕೆಟ್’ ಎಂದು ಬರೆದು ಕಾಂಗ್ರೆಸ್‍ನಲ್ಲಿ ಹಣದ ಹೊಂದಾಣಿಕೆಯಿಂದ ಅಭ್ಯರ್ಥಿಗಳನ್ನು ನಿರ್ಧರಿಸುವಂತಾಗಿದೆ ಅಂತ ಪಕ್ಷದ ವಿರುದ್ಧ ನೇರವಾಗಿ ಮೊಯ್ಲಿ ತಮ್ಮ ಟ್ವೀಟ್ ನಲ್ಲಿ ಆರೋಪ ಮಾಡಿದ್ದರು. ಈ ಟ್ವೀಟನ್ನು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದರು. ಅಲ್ಲದೇ ಮೊಹ್ಲಿ ಅವರ ಟ್ವೀಟ್ ಗೆ ಅವರ ಪುತ್ರ ಸಹ ಮರುಟ್ವೀಟ್ ಮಾಡಿದ್ದರು.
ನವದೆಹಲಿಯಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಟ್ವೀಟ್ ಮಾಡಿರುವುದು ನಾನಲ್ಲ. ಇದು ನನ್ನ ಅನಧಿಕೃತ ಟ್ವೀಟ್ ಖಾತೆಯಾಗಿದೆ. ನನ್ನ ಮಗ ಕೂಡ ಇಂತಹ ಟ್ವೀಟ್ ಮಾಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
#10PercentCM ಸಿದ್ದರಾಮಯ್ಯನವರದ್ದು 'ಕಮಿಷನ್ ಸರ್ಕಾರ' ಎಂದು ಇಲ್ಲಿ ತನಕ ಹಲವಾರು ಪುರಾವೆ ಒದಗಿಸಿದ್ದೇವೆ. ಆದರೂ CM ರವರು ಅದೆಲ್ಲಾ ಸುಳ್ಳು ಎಂದು ಪ್ರತಿಪಾದಿಸುತ್ತ ಮತ್ತೆ ಮತ್ತೆ ಹಸಿ ಸುಳ್ಳುಗಳ ಬೇಲಿ ಕಟ್ಟುತ್ತಿದ್ದಾರೆ.
"ಸುಳ್ಳಿನ ಬೇಲಿಯ ಮುಳ್ಳು ಚುಚ್ಚುವುದೆಂದೆಂದೂ
ಸುಳ್ಳಿನ ಬೇಲಿಗಿಂತ ದಿಟದ
ಬಯಲೇ ಲೇಸು ಕೇಳೆನ್ನ ಮತ್ತಿತಾಳಯ್ಯ"— B.S.Yediyurappa (@BSYBJP) March 15, 2018

-

ಟ್ವೀಟ್ ಮಾಡಿದ್ದು ನಾನಲ್ಲ, ನಾನು ಏನೂ ಹೇಳಲ್ಲ: ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ
ನವದೆಹಲಿ: ಕಾಂಗ್ರೆಸ್ ವಿರುದ್ಧವೇ ಟ್ವೀಟ್ ಮಾಡಿ ತಮ್ಮ ಅಸಮಾಧಾನ ಹೊರಹಾಕಿದ್ದ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರು ಪ್ರತಿಕ್ರಿಯಿಸಿದ್ದಾರೆ.
ನವದೆಹಲಿಯಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಟ್ವೀಟ್ ಮಾಡಿರುವುದು ನಾನಲ್ಲ. ಇದು ನನ್ನ ಅನಧಿಕೃತ ಟ್ವೀಟ್ ಖಾತೆಯಾಗಿದೆ. ನನ್ನ ಮಗ ಕೂಡ ಇಂತಹ ಟ್ವೀಟ್ ಮಾಡಿಲ್ಲ ಅಂತ ಹೇಳಿದ್ದಾರೆ.
ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಯಾರು ಈ ರೀತಿಯ ಟ್ವೀಟ್ ಮಾಡಿದ್ದಾರೆ ಅಂತ ಗೊತ್ತಿಲ್ಲ. ಖಾತೆ ಹ್ಯಾಕ್ ಆಗಿದೆಯಾ ಅಂತಾನೂ ಹೇಳಲ್ಲ. ಒಟ್ಟಿನಲ್ಲಿ ಇದು ನನ್ನ ಅನಧಿಕೃತ ಟ್ವೀಟ್ ಆಗಿದೆ ಅಂದಿದ್ದಾರೆ.

ಮಗ ರಿಟ್ವೀಟ್ ಮಾಡಿರುವ ಬಗ್ಗೆ ಮಾತನಾಡುತ್ತೇನೆ. ಪಕ್ಷದ ವಿಚಾರದಲ್ಲಿ ಈ ರೀತಿ ಇಲ್ಲ. ಮತ್ತೊಮ್ಮೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ ಅಂತ ಪ್ರತಿಕ್ರಿಯಿಸಿದ್ದಾರೆ.`ಕಾಂಟ್ರಾಕ್ಟರ್‍ಗಳ ಕೈಲಿ ಕಾಂಗ್ರೆಸ್ ಟಿಕೆಟ್’ ಅಂತ ಬರೆದು ಕಾಂಗ್ರೆಸ್‍ನಲ್ಲಿ ಹಣದ ಹೊಂದಾಣಿಕೆಯಿಂದ ಅಭ್ಯರ್ಥಿಗಳನ್ನು ನಿರ್ಧರಿಸುವಂತಾಗಿದೆ ಅಂತ ಪಕ್ಷದ ವಿರುದ್ಧ ನೇರವಾಗಿ ಮೊಯ್ಲಿ ತಮ್ಮ ಟ್ವೀಟ್ ನಲ್ಲಿ ಆರೋಪ ಮಾಡಿದ್ದರು. ಈ ಟ್ವೀಟನ್ನು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದರು.
-

ಕಾಂಟ್ರಾಕ್ಟರ್ ಗಳ ಕೈಲಿ ಕಾಂಗ್ರೆಸ್ ಟಿಕೆಟ್- ಪಕ್ಷದ ಹಣ ಪ್ರಭಾವ ಬಿಚ್ಚಿಟ್ಟ ಮೊಯ್ಲಿ!
ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿಯೇ ಕಾಂಗ್ರೆಸ್‍ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಇದೀಗ ಕಾಂಗ್ರೆಸ್ ಪಕ್ಷದ ಹಣದ ಪ್ರಭಾವ ಬಿಚ್ಚಿಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ವೀರಪ್ಪ ಮೊಯ್ಲಿ, `ಕಾಂಟ್ರಾಕ್ಟರ್‍ಗಳ ಕೈಲಿ ಕಾಂಗ್ರೆಸ್ ಟಿಕೆಟ್’ ಎಂದಿದ್ದಾರೆ. ಕಾಂಗ್ರೆಸ್‍ನಲ್ಲಿ ಹಣದ ಹೊಂದಾಣಿಕೆಯಿಂದ ಅಭ್ಯರ್ಥಿಗಳನ್ನು ನಿರ್ಧರಿಸುವಂತಾಗಿದೆ ಅಂತ ಪಕ್ಷದ ವಿರುದ್ಧ ನೇರವಾಗಿ ಅವರು ಆರೋಪ ಮಾಡಿದ್ದಾರೆ.

ಈ ಟ್ವೀಟನ್ನು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದಾರೆ. ಈ ಮೂಲಕ ಕೇಂದ್ರ ಹಾಗೂ ರಾಜ್ಯದ ನಾಯಕರಿಗೆ ನೇರವಾಗಿ ತಲುಪಿಸುವ ಜೊತೆಗೆ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಈ ಮೂಲಕ ಮೊಯ್ಲಿ ಅವರು ಶಾಸಕ ಅಶೋಕ್ ಖೇಣಿ ಅವರ ಕಾಂಗ್ರೆಸ್ ಸೇರ್ಪಡೆಗೆ ಪರೋಕ್ಷವಾಗಿ ಸಿಡಿದೆದ್ದಿದ್ದಾರೆ. ಈ ಹಿಂದೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಖೇಣಿ ಹಾಗೂ ಹಾಲಿ ಶಾಸಕರಿಗೆ ಟಿಕೆಟ್ ಕೊಡೋ ವಿಚಾರದಲ್ಲಿ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಆದ್ರೆ ಇದೀಗ ವೀರಪ್ಪ ಮೊಯ್ಲಿ ನೇರವಾಗಿ ಲೋಕೋಪಯೋಗಿ ಸಚಿವ ಮಹದೇವಪ್ಪ ಅವರನ್ನೇ ಟಾರ್ಗೆಟ್ ಮಾಡಿರುವುದು ತೀವ್ರ ಕುತೂಹಲ ಹುಟ್ಟಿಸಿದೆ.
https://twitter.com/moilyv/status/974322120586158080
https://twitter.com/HarshaMoilyINC/status/974327614306443264
-

ರಾಜಕಾರಣಿಯ ಗೆಟಪ್‍ನಲ್ಲಿ ಹರ್ಷ ಮೊಯ್ಲಿ ಎಂಟ್ರಿ- ಪಾರ್ಟಿ ಹೇಳಿದ್ರೆ ಸ್ಪರ್ಧೆಗೆ ಸಿದ್ಧ ಅಂದ್ರು
ಉಡುಪಿ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿ ರಾಜಕಾರಣಕ್ಕೆ ಎಂಟ್ರಿ ಕೊಡೋದು ಪಕ್ಕಾ ಆಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸೋದು ನಿಶ್ಚಿತ ಎಂಬ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಚುನಾವಣೆಗಿನ್ನು ಎರಡು ತಿಂಗಳು ಬಾಕಿ ಇರುವಂತೆ ಕಣ ರಂಗೇರುತ್ತಿದೆ. ಉಡುಪಿ ಜಿಲ್ಲೆಯಲ್ಲೇ ಕಾಂಗ್ರೆಸ್‍ಗೆ ಕಗ್ಗಂಟಾಗಿರೋದು ಕಾರ್ಕಳ ವಿಧಾನಸಭಾ ಕ್ಷೇತ್ರ. ಮೂರು ಮಂದಿ ಪ್ರಬಲ ಆಕಾಂಕ್ಷಿಗಳು ಕಾಂಗ್ರೆಸ್‍ಗೆ ನುಂಗಲಾರದ- ಉಗುಳಲೂ ಸಾಧ್ಯವಾಗದೆ ಬಿಸಿ ತುಪ್ಪದಂತಾಗಿದ್ದಾರೆ. ಈ ನಡುವೆ ವೀರಪ್ಪ ಮೊಯ್ಲಿ ಪುತ್ರ, ಕ್ಷೇತ್ರದ ಓರ್ವ ಪ್ರಬಲ ಟಿಕೆಟ್ ಆಕಾಂಕ್ಷಿ ಹರ್ಷ ಮೊಯ್ಲಿ ಸಾರ್ವಜನಿಕವಾಗಿ ಉಡುಪಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜನೆಯ ಹಿಂದುಳಿದವರ ಸಮಾವೇಶಕ್ಕೆ ಹರ್ಷ ಮೊಯ್ಲಿ ರಾಜಕಾರಣಿಯ ಗೆಟಪ್‍ನಲ್ಲಿ ಬಂದಿಳಿದಿದ್ದಾರೆ. ಹರ್ಷ ಮೊಯ್ಲಿ ಆಗಮನ, ನಾಯಕರ ಜೊತೆ ಮಾತುಕತೆಗಳನ್ನು ನೋಡಿದ್ರೆ ಟಿಕೆಟ್ ಮೊಯ್ಲಿ ಪುತ್ರನಿಗೆ ಪಕ್ಕಾ ಆದಂತಿದೆ. ಮೊಯ್ಲಿ ಪುತ್ರನಿಗೆ ಕಾರ್ಕಳದಲ್ಲಿ ಟಿಕೆಟ್ ಕೊಟ್ಟರೆ ಪಕ್ಷದೊಳಗೆ ಭಿನ್ನಮತ ಆಗೋದ್ರಲ್ಲಿ ಸಂಶಯವೇ ಇಲ್ಲ.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ಈ ಬಾರಿ ಕೈ ಪಕ್ಷದ ಪ್ರಬಲ ಆಕಾಂಕ್ಷಿ. ಕಳೆದ ಎರಡು ವರ್ಷದಿಂದ ಉದಯ ಕುಮಾರ್ ಶೆಟ್ಟಿ ಕ್ಷೇತ್ರದಲ್ಲಿ ಎಲ್ಲಾ ತರದ ಸಿದ್ಧತೆ ನಡೆಸಿದ್ದಾರೆ. 25 ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಮತದಾರರ ಬೆಂಬಲ ಇದೆ, ಮಲಗಿದ್ದ ಕಾಂಗ್ರೆಸ್ಸನ್ನು ಬಡಿದೆಬ್ಬಿಸಿದ್ದೇನೆ ಎಂದು ಹೇಳಿರುವ ಉದಯ ಕುಮಾರ್ ಶೆಟ್ಟಿ, ಕೊನೆಯ ಹಂತದಲ್ಲಿ ಟಿಕೆಟ್ ಕೈತಪ್ಪಿದರೆ ಅಸಮಾಧಾನಗೊಳ್ಳೋದು ಗ್ಯಾರೆಂಟಿಯಾಗಿದೆ.

ಕಾರ್ಕಳದಲ್ಲಿ ಎರಡು ಬಾರಿ ಗೆದ್ದು, ಎರಡು ಬಾರಿ ಸೋತ ನಾನು ಶುದ್ಧ ಹಸ್ತ. 45 ವರ್ಷದಿಂದ ಪಕ್ಷದ ಶಿಸ್ತಿನ ಸಿಪಾಯಿಯಂತೆ ದುಡಿದಿದ್ದೇನೆ. ನನಗೆ ಅವಕಾಶ ಕೊಟ್ಟರೆ ಮತ್ತೆ ಕಾರ್ಕಳದಲ್ಲಿ ತುಷ್ಠೀಕರಣದ ರಾಜಕಾರಣಕ್ಕೆ ಮುಕ್ತಿ ಕೊಡುತ್ತೇನೆ ಎಂದು ಮಾಜಿ ಶಾಸಕ ಗೋಪಾಲ ಭಂಡಾರಿ ಹೇಳುತ್ತಿದ್ದಾರೆ. ವೀರಪ್ಪ ಮೊಯ್ಲಿಯೇ ಮುಂದೆ ನಿಂತು ಈ ಬಾರಿ ಟಿಕೆಟ್ ನನ್ನ ಮಗನಿಗೆ ಅಂತ ಹೇಳಿದ್ರೆ ಮೊಯ್ಲಿ ಶಿಷ್ಯ ಭಂಡಾರಿ ಸೈಲೆಂಟಾಗ್ತಾರೆ.
ಕಾರ್ಕಳಕ್ಕೆ ಒಬ್ಬ ಕಾಂಗ್ರೆಸ್ ನ ಎಂಎಲ್ ಎ ಬೇಕು. ಈಗಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವಧಿಯಲ್ಲಿ ಏನೂ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕ ಇದ್ದರೆ ಅಲ್ಲಿ ಹೆಚ್ಚಿನ ಅಭಿವೃದ್ಧಿ ಆಗುತ್ತದೆ. ಕೆಪಿಸಿಸಿ, ಎಐಸಿಸಿ ಸೆಲೆಕ್ಟ್ ಮಾಡೋಡು. ನನಗೆ ಟಿಕೆಟ್ ಫೈನಲ್ ಆಗಿದೆ ಎಂಬೂದು ಸರಿಯಲ್ಲ. ಕಾರ್ಕಳದಲ್ಲಿ ಹಲವಾರು ನಾಯಕರಿದ್ದಾರೆ. ಎಲ್ಲರಿಗೂ ನನಗೆ ಟಿಕೆಟ್ ಸಿಕ್ಕರೆ ಕೆಲಸ ಮಾಡಬಹುದು ಎಂಬ ಆಕಾಂಕ್ಷೆಯಿದೆ. ಅದು ತಪ್ಪೂ ಅಲ್ಲ. ರಾಜಕೀಯದಲ್ಲಿ ಅಕಾಂಕ್ಷೆಗಳು ತಪ್ಪಲ್ಲ. ಕಾಂಗ್ರೆಸ್ ವಿನ್ ಆಗ್ಬೇಕು ಅನ್ನೋದು ಎಲ್ಲರ ಆಕಾಂಕ್ಷೆ. ಒಂದು ವೇಳೆ ಪಾರ್ಟಿ ಹೇಳಿದರೆ ನಾನು ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ ಹರ್ಷ ಮೊಯ್ಲಿ ಹೇಳಿದ್ದಾರೆ.
-

ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಸತ್ಯಾಗ್ರಹ
ಉಡುಪಿ: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಜಿಲ್ಲೆಯ ಕಾರ್ಕಳದಲ್ಲಿ ಬಿಜೆಪಿ ಧರಣಿ ಸತ್ಯಾಗ್ರಹ ಮಾಡಿದೆ.
ಕಾರ್ಕಳ ತಾಲೂಕಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, 24 ಗಂಟೆಗಳ ಧರಣಿ ಸತ್ಯಾಗ್ರಹ ಮಾಡಿದೆ. ಅಹೋರಾತ್ರಿ ಧರಣಿ ಕುಳಿತ ಜಿಲ್ಲಾ ಬಿಜೆಪಿ ವೀರಪ್ಪ ಮೊಯ್ಲಿ ವಿರುದ್ಧ ಹರಿಹಾಯ್ದಿದೆ.
ಕಾರ್ಕಳ ಮೂಲದ ಮಾಜಿ ಸಿಎಂ, ಸಂಸದ ವೀರಪ್ಪ ಮೊಯ್ಲಿ 6 ಬಾರಿ ಕಾರ್ಕಳದಿಂದ ಶಾಸಕರಾಗಿ ಒಂದು ಬಾರಿ ಸಿಎಂ ಆಗಿದ್ದಾರೆ. ಆದ್ರೆ ಅಧಿಕಾರದಲ್ಲಿದ್ದಾಗ ಮೊಯ್ಲಿ ತಮ್ಮ ಕ್ಷೇತ್ರದಲ್ಲಿ ಮಾಡಿದ್ದ ಗುದ್ದಲಿ ಪೂಜೆಗಳು, ಶಿಲಾನ್ಯಾಸಗಳ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. 2014 ರಲ್ಲಿ ಶಿಲಾನ್ಯಾಸ ಮಾಡಿದ್ದ ಪುರಭವನ ಕಾಣೆಯಾಗಿದೆ. ಪುರಭವನ ಹುಡುಕಿಕೊಡಿ ಅಂತ ಬಿಜೆಪಿ ಪ್ರತಿಭಟನೆ ನಡೆಸಿತು. ಇನ್ನೂ ಕಾಮಗಾರಿಗಳು ಆರಂಭವಾಗದ ಹಿನ್ನೆಲೆಯಲ್ಲಿ ಶಾಸಕ ವಿಪಕ್ಷ ಮುಖ್ಯ ಸಚೇತಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು.

ಶಂಕುಸ್ಥಾಪನೆ ಮಾಡೋದು ಸಾಧನೆಯಲ್ಲ ಅದೊಂದು ವೈಫಲ್ಯ. ಕೆಲಸ ಮಾಡದ ರಾಜಕಾರಣಿಗಳ ಬಗ್ಗೆ ಜನ ನಂಬಿಕೆ ಇಡಲ್ಲ. ಓಟು ಹಾಕಲ್ಲ ಅಂತ ಕಿಡಿಕಾರಿದರು. ಇದಕ್ಕೂ ಮೊದಲು ಕಾರ್ಕಳದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ಬೈಕ್ ಯಾತ್ರೆ, ಪಾದಯಾತ್ರೆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಯಿತು. ನಗರದ ಬಂಡೀಪುರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮೊಯ್ಲಿ ವಿರುದ್ಧ ಆರೋಪಗಳ ಸುರಿಮಳೆ ಜೊತೆ ದಿನಪೂರ್ತಿ ಧಿಕ್ಕಾರ ಕೂಗಿದ್ರು.


-

ಹರ್ಯಾಣ ಸಿಎಂ ತೆಗಳಿ, ಪಂಜಾಬ್ ಸಿಎಂ ಕ್ರಮವನ್ನು ಹೊಗಳಿದ ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ: ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ವಿರುದ್ಧ ವಾಗ್ದಾಳಿ ನಡೆಸಿ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಸಂಸದ ವೀರಪ್ಪ ಮೊಯ್ಲಿ ಹೊಗಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂಸಾಚಾರವನ್ನು ನಿಭಾಯಿಸಲು ಆಗದ ಮನೋಹರ್ ಲಾಲ್ ಖಟ್ಟರ್ ಹರ್ಯಾಣದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಯೋಗ್ಯ ಎಂದು ಸಂಸದ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.
ಗುಪ್ತಚರ ಮಾಹಿತಿ ಇದ್ದರೂ ಅಲ್ಲಿ ಸೂಕ್ತ ಮಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿಲ್ಲ. ಹಿಂಸಾಚಾರ ನಡೆಸುವ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಕ್ರಮಗಳನ್ನು ಕೈಗೊಳ್ಳದ ಕಾರಣ ಮುಖ್ಯಮಂತ್ರಿ ಆಗಿರಲು ಖಟ್ಟರ್ ಆಯೋಗ್ಯ ಎಂದು ವಾಗ್ದಾಳಿ ನಡೆಸಿದರು.
ಪಂಜಾಬ್ ನಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಸರ್ಕಾರ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿತ್ತು ಎಂದು ಹೇಳುವ ಮೂಲಕ ಅಮರಿದಂದರ್ ಸಿಂಗ್ ಅವರನ್ನು ವೀರಪ್ಪ ಮೊಯ್ಲಿ ಸಮರ್ಥಿಸಿಕೊಂಡರು.
CM @mlkhattar visited public & security personnel injured during the civil unrest in Panchkula today. pic.twitter.com/L8Sa8tLdu2
— CMO Haryana (@cmohry) August 25, 2017
Met BSF & Punjab Police personnel standing guard in areas in Zirakpur ahead of #RamRahimVerdict, situation is under control. pic.twitter.com/RQkP0oGsJ3
— Capt.Amarinder Singh (@capt_amarinder) August 25, 2017
-

ಡಾ.ಕೆ.ಸುಧಾಕರ್ ರಾಜೀನಾಮೆ- ಸಂಸದ ವೀರಪ್ಪ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ
ಚಿಕ್ಕಬಳ್ಳಾಪುರ: ಡಾ.ಕೆ.ಸುಧಾಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶಾಸಕ ಸುಧಾಕರ್ ಬೆಂಬಲಿತ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಾಸಕ ಸುಧಾಕರ್ ರಾಜೀನಾಮೆ ಘೋಷಣೆಗೆ ಚಿಕ್ಕಬಳ್ಳಾಪುರ ಸಂಸದ ಮೊಯ್ಲಿಯೂ ಕೂಡ ಕಾರಣಕರ್ತರು ಅಂತ ಸುಧಾಕರ್ ಬೆಂಬಲಿಗರು ವೀರಪ್ಪ ಮೊಯ್ಲಿ ಗೃಹಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಶಂಕರಮಠ ಎದುರಿನ ಸಂಸದ ಮೊಯ್ಲಿ ಗೃಹ ಕಚೇರಿ ಮೇಲೆ ಕಳೆದ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಇದ್ರಿಂದ ಕಚೇರಿಯ ಹಲವು ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಪೊಲೀಸರು ಮೊಯ್ಲಿ ಗೃಹಕಚೇರಿ ಎದುರು ಮೊಕ್ಕಾಂ ಹೂಡಿದ್ದಾರೆ.

ಶಾಸಕ ಸುಧಾಕರ್ ರವರ ತಂದೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರೂ ಆಗಿರುವ ಕೇಶವರೆಡ್ಡಿಯನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವಂತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೂಚನೆ ನಿಡಿದ್ದರು. ಇದ್ರಿಂದ ಬೇಸತ್ತ ಸುಧಾಕರ್ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವಿಟರ್ ನಲ್ಲಿ ಘೋಷಣೆ ಮಾಡಿದ್ರು. ಅಧ್ಯಕ್ಷ ಸ್ಥಾನದಿಂದ ಕೆಳಗಿಸಳಿಸುವಂತೆ ಗೌರಿಬಿದನೂರು ಶಾಸಕ ಶಿವಶಂಕರರೆಡ್ಡಿ, ಸಂಸದ ಮೊಯ್ಲಿ ಒತ್ತಾಯಿಸಿದ್ರು ಎನ್ನಲಾಗಿದೆ.
I am resigning as Chikkaballapur MLA at 11am tmrw. Indebted to people of Chikkaballapur, my party, KPCC president, Mistry, @CMofKarnataka
— Dr Sudhakar K (@DrSudhakar_) July 6, 2017






