Tag: Veerendra Hegde

  • ವಾಸ್ತವಿಕ ವಿಚಾರ, ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹ ಇರಬೇಕು: ವೀರೇಂದ್ರ ಹೆಗ್ಗಡೆ

    ವಾಸ್ತವಿಕ ವಿಚಾರ, ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹ ಇರಬೇಕು: ವೀರೇಂದ್ರ ಹೆಗ್ಗಡೆ

    ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆಯ ಜವಾಬ್ದಾರಿ ದೊಡ್ಡದು. ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆ ಇರುವುದು ಉತ್ತಮ ವಿಚಾರ. ಇಂದು ಪತ್ರಿಕೆಗಳಲ್ಲಿ ಭಾಷಣದ ವಿಷಯವನ್ನು ಕುತೂಹಲ ಆಸಕ್ತಿಯಿಂದ ಓದುವಂತಹ ವಿಷಯಗಳು ಪ್ರಕಟವಾಗುತ್ತದೆ. ಆದರೆ ಪತ್ರಕರ್ತರು ಓದುಗರಿಗೆ ಮನದಟ್ಟು ಮಾಡುವಂತಹ ವರದಿಗಳನ್ನು ನೀಡುತ್ತಿದ್ದಾರೆ. ವಾಸ್ತವಿಕ ವಿಚಾರ ಮತ್ತು ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹವಿದ್ದಾಗ ಓದುಗರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.

    ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಸಂತ ಮಹಲ್‍ನಲ್ಲಿ ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿರು. ಬಳಿಕ ಮಾತನಾಡಿ,ಪತ್ರಕರ್ತರಲ್ಲಿ ತಾಳ್ಮೆ, ಸಹನೆ ಇರಬೇಕು. ಪತ್ರಕರ್ತರಿಗೆ ಒತ್ತಡ ಇರುವುದು ಸಹಜ. ಓದುಗರಿಗೆ ನೀಡುವ ವರದಿಯು ಉಪಯುಕ್ತ ಮತ್ತು ಪರಿಣಾಮ ಬೀರುವಂತಾಗಬೇಕು. ಇಂದು ಸಾವಿರಾರು ಮಂದಿ ಪತ್ರಕರ್ತರು ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಸಮಾಜಕ್ಕೆ ತಿಳಿಯಬೇಕು ಮತ್ತು ಅವರಿಗೆ ಸಿಗಬೇಕಾದ ವೇತನ, ಆರೋಗ್ಯ ಭದ್ರತೆ, ವೃದ್ಧಾಪ್ಯ ವೇತನ ಸರಿಯಾಗಿ ಸಿಗುವಂತಾಗಲು ಇಂತಹ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಗಳು ಸಹಕಾರಿಯಾಗಲಿ ಎಂದರು.

    ಇಂದಿನ ದಿನಪತ್ರಿಕೆಗಳ ಗುಣಮಟ್ಟ ಮತ್ತು ವರದಿಗಳನ್ನು ಒಂದು ತಿಂಗಳ ಬಳಿಕವೂ ಓದುವಂತಿರುತ್ತದೆ. ಹಿಂದೆ ದಿನಪತ್ರಿಕೆ ಎಂದರೆ ಒಂದೆರಡು ದಿವಸ ಓದಿ ಬಿಡುವಂತಾಗಿತ್ತು. ವರದಿ ನೀಡುವುದರ ಜೊತೆಗೆ ಪತ್ರಿಕೆ ಮಾರಾಟದ ಬಗ್ಗೆಯೂ ಕಾಳಜಿ ಅಗತ್ಯ ಎಂದು ಹೇಳಿದರು.

    ಈ ಬಗ್ಗೆ ಶಾಸಕ ಹರೀಶ್ ಪೂಂಜಾ ಮಾತನಾಡಿ, ಉತ್ತಮ ಸಮಾಜ ನಿರ್ಮಾಣಗೊಳ್ಳಲು ಪತ್ರಿಕೆ ಮತ್ತು ಪತ್ರಕರ್ತರ ಪ್ರಯತ್ನ ಕಾರಣ. ಇಂದು ರಾಜಕಾರಣಿಗಳ ಒಳಿತು, ಕೆಡುಕುಗಳನ್ನು ಹೇಳುವಂತಹ ಸಾಮಥ್ರ್ಯವಿರುವುದು ಪತ್ರಕರ್ತರಿಗೆ ಮಾತ್ರ. ಮಂಗಳೂರಿನಲ್ಲಿ ನಡೆಯುವಂತಹ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದರು.

    ರಾಜ್ಯಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಮಾತನಾಡಿ, ಮಾಧ್ಯಮಗಳು ಜನರಲ್ಲಿ ಸಂಶಯ ಮೂಡುವಂತೆ ವರ್ತಿಸಬಾರದು. ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕರಾವಳಿ ಭಾಗವು ಪತ್ರಿಕೆಗೆ ನೀಡಿದ ಕೊಡುಗೆ ಅಪಾರವಾದುದು. ಇದಕ್ಕಾಗಿಯೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಇದಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಸಹಕಾರ ನೀಡುವ ಭರವಸೆ ನೀಡಿರುವುದು ಸಮ್ಮೇಳನಕ್ಕೆ ಶಕ್ತಿ ತುಂಬಿದಂತಾಗಿದೆ ಎಂದರು.

    ಇತ್ತ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಪ್ರಾಸ್ತವಿಕವಾಗಿ ಮಾತನಾಡಿ, ಜಿಲ್ಲಾ ಪತ್ರಕರ್ತರ ಸಂಘವು ಪತ್ರಿಕಾ ವೃತ್ತಿಯೊಂದಿಗೆ ಸಾಮಾಜಿಕ ಚಿಂತನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪತ್ರಕರ್ತರ ಗ್ರಾಮವಾಸ್ತವ್ಯದ ಮೂಲಕ ಸರಕಾರಿ ಶಾಲೆ ಉಳಿಸುವ ಅಭಿಯಾನ, ಅಂತರ್ಜಲ ಹೆಚ್ಚಿಸುವ ಕಾರ್ಯಕ್ರಮ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ಮಾಡುತ್ತಿದೆಯಲ್ಲದೆ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ರಾಜ್ಯ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಉಪಸ್ಥಿತರಿದ್ದರು. ಪತ್ರಕರ್ತ ಡಿ.ಪಿ ಹರೀಶ್ ರೈ ನಿರೂಪಿಸಿ, ಜಿಲ್ಲಾ ಪತ್ರಕರ್ತರ ಸಂಘದ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಬಳಿಕ ರಾಜ್ಯ ಪತ್ರಕರ್ತರ ಸಂಘ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

  • ಗ್ರಾಮವಾಸ್ತವ್ಯ ಸಂಪರ್ಕ ಸಭೆಯಾಗಿ ಪರಿವರ್ತನೆಯಾಗಲಿ: ಡಾ. ವೀರೇಂದ್ರ ಹೆಗ್ಗಡೆ

    ಗ್ರಾಮವಾಸ್ತವ್ಯ ಸಂಪರ್ಕ ಸಭೆಯಾಗಿ ಪರಿವರ್ತನೆಯಾಗಲಿ: ಡಾ. ವೀರೇಂದ್ರ ಹೆಗ್ಗಡೆ

    ಮಂಗಳೂರು: ಗ್ರಾಮ ವಾಸ್ತವ್ಯದಲ್ಲಿ ಇರುವ ಸಿಎಂ ಕನಿಷ್ಠ ಒಂದು ಗಂಟೆ ಕಾಲ ಜನರ ಸಮಸ್ಯೆ ಆಲಿಸಬೇಕು. ಸಾಧ್ಯವಾದರೆ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಲಹೆ ನೀಡಿದ್ದಾರೆ.

    ಈ ಬಗ್ಗೆ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಕೆಲವು ಬಾರಿ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೊಡುತ್ತಾರೆ. ಆದರೆ ಬಹುತೇಕರಿಗೆ ಸಮಸ್ಯೆಗಳ ಬಗ್ಗೆ ಗೊತ್ತಿರಲ್ಲ. ಗ್ರಾಮ ವಾಸ್ತವ್ಯ ಸಂಪರ್ಕ ಸಭೆಯಾಗಿಯೂ ಪರಿವರ್ತನೆಯಾದರೆ ಹಳ್ಳಿಗಳ ಸಮಸ್ಯೆ ತಿಳಿಯುತ್ತೆ. ಗ್ರಾಮ ವಾಸ್ತವ್ಯದ ಮೂಲಕ ಈ ರೀತಿ ಮಾಹಿತಿ ಸಂಗ್ರಹಿಸುವುದು ಒಂದು ಉತ್ತಮ ನಡೆ ಎಂದರು.

    ಈ ಹಿಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೂಡ ಇಂತಹ ಜನಸಂಪರ್ಕವನ್ನು ಆರಂಭಿಸಿದ್ದರು. ಅಲ್ಲದೆ ಆತ್ಮಹತ್ಯೆಯಂತಹ ಪ್ರಕರಣಗಳು ನಡೆದ ಬಳಿಕ ಪರಿಹಾರ ನೀಡುವ ಬದಲು ಮೊದಲೇ ಸಮಸ್ಯೆ ತಿಳಿದುಕೊಳ್ಳಬೇಕು. ಅಲ್ಲದೆ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಅಧಿಕಾರಿಗಳು ಸಿಎಂ ಅವರನ್ನು ಸುತ್ತುವರಿಯಬಾರದು. ಜನರೊಂದಿಗೆ ಮುಕ್ತವಾಗಿ ಮಾತನಾಡಲು ಅವಕಾಶ ಕೊಡಬೇಕು. ಜನರೊಂದಿಗೆ ನೇರವಾಗಿ ಮಾತುಕತೆ ನಡೆಸಿದರೆ ಜ್ವಲಂತ ಸಮಸ್ಯೆ ಅರಿವಿಗೆ ಬರುತ್ತೆ ಎಂದು ಸಲಹೆ ನೀಡಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಬರದನಾಡಿಗೆ ವೀರೇಂದ್ರ ಹೆಗ್ಗಡೆ ಭಗೀರಥ – ಬಯಲುಸೀಮೆಗೆ ನೀರುಣಿಸಿದ ಜೀವದಾತ

    ಬರದನಾಡಿಗೆ ವೀರೇಂದ್ರ ಹೆಗ್ಗಡೆ ಭಗೀರಥ – ಬಯಲುಸೀಮೆಗೆ ನೀರುಣಿಸಿದ ಜೀವದಾತ

    ಚಿಕ್ಕಬಳ್ಳಾಪುರ: ರಾಜ್ಯದ ಹಲವೆಡೆ ಬರ ತಾಂಡವವಾಡುತ್ತಿದೆ. ಬರದ ಎಫೆಕ್ಟ್ ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೂ ತಟ್ಟಿತ್ತು. ಭಕ್ತಾದಿಗಳು ಸ್ವಲ್ಪ ದಿನ ಧರ್ಮಸ್ಥಳ ಪ್ರವಾಸ ಮುಂದೂಡಿ ಎಂದು ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿದ್ದರು. ಆದರೆ ಧರ್ಮಸ್ಥಳದ ಧರ್ಮಾಧಿಕಾರಿ ಈಗ ಭಗೀರಥರಾಗಿದ್ದಾರೆ.

    ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯ 300ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಇದೆ. ಜಿಲ್ಲೆಯ ಯಾವ ಹಳ್ಳಿಗೆ ಹೋದರೂ ಖಾಲಿ ಕೊಡಗಳ ದರ್ಶನವಾಗುತ್ತದೆ. ಜೀವಜಲಕ್ಕಾಗಿ ಜನ-ಜಾನುವಾರುಗಳ ಪರದಾಡುವಂತಾಗಿದೆ. ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರೂ ಸಾಕಾಗುತ್ತಿಲ್ಲ. ಇಂತಹ ಹೊತ್ತಲ್ಲಿ ಚಿಕ್ಕಬಳ್ಳಾಪುರಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ದೇವರಂತೆ ಬಂದಿದ್ದಾರೆ.

    ಜಿಲ್ಲಾಡಳಿತದ ಜೊತೆ ಕೈ ಜೋಡಿಸಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಜಿಲ್ಲೆಯ 37 ಹಳ್ಳಿಗಳಲ್ಲಿ ಸ್ವಯಂಪ್ರೇರಿತವಾಗಿ ಸಮರ್ಪಕವಾಗಿ ವಾರಕ್ಕೆ 2 ಬಾರಿ ಕುಡಿಯವ ನೀರು ಪೂರೈಸುವ ಕೆಲಸ ಮಾಡುತ್ತಿದೆ. ತೀವ್ರ ಬರಗಾಲದಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರದಿಂದ ಕೊರೆಸಿರುವ ಅರ್ಧಕ್ಕಿಂತಲೂ ಹೆಚ್ಚು ಬೋರ್‍ವೆಲ್‍ಗಳು ನೀರಿಲ್ಲದೇ ನಿಂತು ಹೋಗಿವೆ.

    ಕೆಲವು ಖಾಸಗಿಯವರ ನೀರು ಸಿಕ್ಕಿದ್ರೂ ಬೆಳೆಗಳಿಗೆ ನೀರಿಲ್ಲ ಎಂದು ಅವರ್ಯಾರು ನೀರು ಕೊಡಲ್ಲ. ಅಡುಗೆ ಮಾಡುವುದಕ್ಕೆ, ಜನರ ನಿತ್ಯ ಕರ್ಮಗಳಿಗೆ ಸೇರಿ ಜಾನುವಾರುಗಳಿಗೂ ಗುಟುಕು ನೀರಿಲ್ಲ. ಹನಿ ನೀರಿಲ್ಲದ ಹೊತ್ತಲ್ಲಿ ಆಪತ್ಬಾಂಧವರಂತೆ ಬಂದು ನೀರು ಕೊಟ್ಟು ದಾಹ ನೀಗಿಸ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಕಾರ್ಯ ಎಲ್ಲರೂ ಮೆಚ್ಚುವಂತಾಗಿದೆ.

  • 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    ಮಂಗಳೂರು: 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತಿದ್ದೇವೆ.

    ನಾವು ಈ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದ್ದರು ಕೂಡ ಶೌಚಾಲಯಗಳಿಗೆ ನೀರು ಕೊಡಬೇಕಾಗುತ್ತದೆ. ನಮ್ಮ ವಸತಿಯಲ್ಲಿ ಇರುವವರಿಗೆ ಶೌಚಾಲಯದಲ್ಲಿ ನೀರು ಕೊಡಲೇಬೇಕು. ಶಾಲೆಗಳಿಗೆ ರಜೆ ಇರುವುದರಿಂದ ಎಲ್ಲರೂ ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಬಂದರೂ ಸಾಕಷ್ಟು ನೀರು ಬೇಕಾಗುತ್ತದೆ. ಹಾಗಾಗಿ ಧರ್ಮಸ್ಥಳಕ್ಕೆ ಈಗಲೆ ಯಾರೂ ಬರಬೇಡಿ ಎಂದು ವಿನಂತಿ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಮೊದಲ ಬಾರಿಗೆ ಧರ್ಮಸ್ಥಳ ಕ್ಷೇತ್ರಕ್ಕೂ ತಟ್ಟಿದ ನೀರಿನ ಅಭಾವದ ಬಿಸಿ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಾಲಿಕವಾಗಿ ನೀರಿದೆ. ಅದು ನೇತ್ರಾವತಿ ಕಿಂಡಿ ಅಣೆಕಟ್ಟಿನಲ್ಲಿ ತಾತ್ಕಾಲಿಕ ನೀರು ಹಾಗೂ ತೀರ್ಥದ ಗುಂಡಿಯಲ್ಲಿ ಸ್ವಲ್ಪ ನೀರಿದೆ. ಮುಂದೆ ಮಳೆ ಬರದಿದ್ದರೆ ಮಂಜುನಾಥನಿಗೂ ಬರದ ಬಿಸಿ ತಟ್ಟಲಿದೆ. ಅಲ್ಲಿನ ತೀರ್ಥ ಗುಂಡಿಯಲ್ಲೂ ನಾಲ್ಕು ಅಡಿ ನೀರು ಕಡಿಮೆ ಆಗಿದೆ. ಹಿಂದೆಯೂ ಈ ರೀತಿ ಆಗಿದೆ. ಆದರೆ ಇಷ್ಟು ತೀವ್ರವಾಗಿ ಆಗಿರಲಿಲ್ಲ. ಉಪನದಿಗಳಲ್ಲಿ ನೀರು ಬತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ಆಗಿದೆ. ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದರು.

    ಇದೇ ವೇಳೆ ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಆಗಿದೆ ಎಂದು ವೀರೇಂದ್ರ ಹೆಗ್ಗಡೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

  • ವೀಕೆಂಡ್ ವಿಥ್ ರಮೇಶ್ ಸೀಸನ್ 4 ಏಪ್ರಿಲ್ 20ರಿಂದ ಶುರು!

    ವೀಕೆಂಡ್ ವಿಥ್ ರಮೇಶ್ ಸೀಸನ್ 4 ಏಪ್ರಿಲ್ 20ರಿಂದ ಶುರು!

    ಟ ನಿರ್ದೇಶಕ ರಮೇಶ್ ಅರವಿಂದ್ ನಡೆಸಿಕೊಡುತ್ತಿದ್ದ ಜನಪ್ರಿಯ ಟಾಕ್ ಶೋ ವೀಕೆಂಡ್ ವಿಥ್ ರಮೇಶ್ ಮತ್ತೆ ಬರುತ್ತಿದೆ. ಇದೇ ಏಪ್ರಿಲ್ 20ರಿಂದ ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9.30ರಿಂದ ಈ ಕಾರ್ಯಕ್ರಮ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

    ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ವೀಕೆಂಡ್ ವಿಥ್ ರಮೇಶ್ ಈಗಾಗಲೇ 3 ಸೀಸನ್‍ಗಳಲ್ಲಿ ಪ್ರಸಾರಗೊಂಡು ಅತ್ಯಂತ ಜನಪ್ರಿಯತೆ ಪಡೆದಿತ್ತು. ಹಲವಾರು ಸಾಧಕರು ಹಾಟ್ ಸೀಟ್‍ನಲ್ಲಿ ಕುಳಿತು ತಾವು ನಡೆದು ಬಂದ ಹಾದಿಯನ್ನು ಮೆಲುಕು ಹಾಕಿದ್ದರು. ಅವರ ಸಾಧನೆಯ ಹಾದಿ ಇತರ ಪ್ರತಿಭೆಗಳಿಗೆ ಒಂದು ಸ್ಫೂರ್ತಿಯಾಗಿತ್ತು. ಅಂತಹ ವಿಭಿನ್ನ ಶೈಲಿಯ ಕಾರ್ಯಕ್ರಮಕ್ಕೆ ಮತ್ತೆ ಚಾಲನೆ ದೊರೆಯುತ್ತಿದೆ.

    4ನೇ ಸೀಸನ್‍ನ ಮೊದಲ ಸಂಚಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದುವರೆಗೆ ಜೀ ತಂಡ ನಡೆಸಿದ ಅವಿರತ ಪ್ರಯತ್ನದ ಫಲವಾಗಿ ವೀರೇಂದ್ರ ಹೆಗಡೆಯವರು ಬಂದಿದ್ದಾರೆ. ಮೊನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ವೀಕೆಂಡ್ ವಿಥ್ ರಮೇಶ್ ಫೋನ್ ಫ್ರೋಮೋ ಮೇಕಿಂಗ್ ಮೀಡಿಯಾ ಹಾಗೂ ಮೊದಲ ಸಂಚಿಕೆಯ ಝಲಕ್‍ನ ಪ್ರದರ್ಶನ ನಡೆಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಜೀ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹಾಗೂ ರಮೇಶ್ ಅರವಿಂದ್ ಈ ಕಾರ್ಯಕ್ರಮದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡರು. ರಾಘವೇಂದ್ರ ಹುಣಸೂರು ಮಾತನಾಡಿ ವೀಕೆಂಡ್ ವಿಥ್ ರಮೇಶ್ 2014ರಲ್ಲಿ ಆರಂಭವಾಗಿತ್ತು. ಈವರೆಗೆ ನಡೆದ 3 ಸೀಸನ್‍ಗಳಲ್ಲಿ 65 ಜನ ಸೆಲೆಬ್ರಿಟಿಗಳು ಇಲ್ಲಿಗೆ ಬಂದು ತಮ್ಮ ಜೀವನದ ಸಾಧನೆಯ ಹಾದಿಯನ್ನು ಮೆಲುಕು ಹಾಕಿದ್ದಾರೆ. ಅವರೆಲ್ಲರೂ ಹಲವಾರು ಸಂದರ್ಶನಗಳಲ್ಲಿ ಭಾಗವಹಿಸಿದ್ದರು. ಇದು ನನ್ನ ಬದುಕಿನ ಬೆಸ್ಟ್ ಇಂಟರ್‍ವ್ಯೂ ಎಂದು ಹೇಳಿದ್ದಾರೆ. ಇಷ್ಟು ಜನ ಸಾಧಕರನ್ನು ಕರೆತರುವುದರೊಂದಿಗೆ ಅವರಿಗೆ ಸಂಬಂಧಿಸಿದ ವ್ಯಕ್ತಿಗಳನ್ನು ಸಂಪರ್ಕಿಸಿ ಮರೆಯಲಾಗದ ಘಟನೆಗಳನ್ನು ತೋರಿಸುವುದು ಇದೆಲ್ಲಾ ರೀಸರ್ಚ್ ಟೀಮ್ ಪಟ್ಟ ಶ್ರಮದ ಫಲ. 10 ಸೆಕೆಂಡ್‍ಗಳ ಈ ಫ್ರೋಮೋವನ್ನು ಕುಶಾಲನಗರದ ಮಂದಾಲಪಟ್ಟಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ ಎಂದು ಹೇಳಿದರು.

    ಕಾರ್ಯಕ್ರಮದ ನಿರೂಪಕ ರಮೇಶ್ ಅರವಿಂದ್ ಮಾತನಾಡಿ, ಇಲ್ಲಿ ಬರುವ ಒಬ್ಬೊಬ್ಬರ ಕಥೆಯೂ ರೋಚಕ. ಪ್ರೀತಿಯಿಂದ ರಮೇಶ್, ಖುಶಿಯಿಂದ ರಮೇಶ್, ನಂತರ ವೀಕೆಂಡ್ ವಿಥ್ ರಮೇಶ್ ಬಂದಿದೆ. ಇಲ್ಲಿ ಬರುವ ಎಲ್ಲರ ಸಾಧನೆಯ ಬಗ್ಗೆ ತಿಳಿದುಕೊಳ್ಳುವ ಅದ್ಭುತವಾದ ಅವಕಾಶ ನನಗೆ ಸಿಕ್ತು ಎಂದು ಹೇಳಿದರು. ವೀಕೆಂಡ್ ವಿಥ್ ರಮೇಶ್ ಇದೇ 20 ರಿಂದ ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9.30 ರಿಂದ ಪ್ರಸಾರವಾಗಲಿದೆ.

    ಮುಂದಿನ ಸಂಚಿಕೆಗಳಲ್ಲಿ ನಟಿ ಪ್ರೇಮ, ಮಾಲಾಶ್ರೀ, ರಾಘಣ್ಣ ಅಲ್ಲದೆ ರಾಹುಲ್ ದ್ರಾವಿಡ್, ಅನಿಲ್‍ಕುಂಬ್ಳೆ ಮೊದಲಾದ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂದು ಜೀ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹೇಳಿದರು.

  • ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ – ವೀರೇಂದ್ರ ಹೆಗ್ಗಡೆ ಅಸಮಾಧಾನ

    ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ – ವೀರೇಂದ್ರ ಹೆಗ್ಗಡೆ ಅಸಮಾಧಾನ

    ಮಂಗಳೂರು: ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ.

    ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಪ್ರವೇಶದಿಂದ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯ ಮತ್ತೆ ಓಪನ್

    ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

    44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಧರ್ಮಸ್ಥಳಕ್ಕೆ ಸಚಿವ ಯು.ಟಿ ಖಾದರ್ ಭೇಟಿ

    ಧರ್ಮಸ್ಥಳಕ್ಕೆ ಸಚಿವ ಯು.ಟಿ ಖಾದರ್ ಭೇಟಿ

    ದಕ್ಷಿಣಕನ್ನಡ: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇಂದು ಧರ್ಮಸ್ಥಳಕ್ಕೆ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ ಖಾದರ್ ಭೇಟಿ ನೀಡಿದ್ದಾರೆ.

    ದೇವಸ್ಥಾನದ ಒಳಗೆ ಹೋಗದೆ ಹುಂಡಿಗೆ ಕಾಣಿಕೆ ಹಾಕಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಖಾದರ್ ಅವರನ್ನು ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಸಚಿವರ ಜೊತೆಗಿದ್ದರು.

    ನಂತರ ಧರ್ಮಸ್ಥಳ ಕ್ಷೇತ್ರದ ಸಮೀಪದಲ್ಲಿರುವ ಕನ್ಯಾಡಿ ಕ್ಷೇತಕ್ಕೆ ಭೇಟಿ ನೀಡಿದ ಸಚಿವರು ಶ್ರೀರಾಮನಿಗೆ ನಮಿಸಿದರು. ಇದೇ ವೇಳೆ ಮಾತನಾಡಿದ ಸಚಿವರು, ರಾಜ್ಯದ ಜನ ಯಾವುದೇ ಪಕ್ಷಕ್ಕೆ ಸಂಪೂರ್ಣ ಬಹುಮತ ಕೊಟ್ಟಿಲ್ಲದ ಕಾರಣ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಂದಿನ 5 ವರ್ಷಗಳ ಕಾಲ ಜನ ಸಾಮಾನ್ಯರ ಕೆಲಸ ಮತ್ತು ರಾಜ್ಯದ ಅಭಿವೃದ್ಧಿಯ ದೃಷ್ಟಿಯನ್ನಿಟ್ಟುಕೊಂಡು ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದರು.

    ಸರ್ಕಾರದಲ್ಲಿ ಯು.ಟಿ ಖಾದರ್ ಅವರಿಗೆ ನಗರಾಭಿವೃದ್ಧಿ ಹಾಗೂ ವಸತಿ ಖಾತೆಯನ್ನು ನೀಡಲಾಗಿದೆ. ಈ ಖಾತೆಗಳಿಗೆ ಸಂಬಂಧಿಸಿದಂತೆ ಜನಸಾಮನ್ಯರ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

  • ಎರಡನೇ ಬಾರಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

    ಎರಡನೇ ಬಾರಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

    ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಧರ್ಮಸ್ಥಳ ಮಂಜುನಾಥ ಸನ್ನಿಧಿಗೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು.

    ಪಂಚೆ, ಶಲ್ಯ ಧರಿಸಿ ಮಂಜುನಾಥನ ದರ್ಶನ ಪಡೆದು ಸನ್ನಿಧಿ ಅತಿಥಿ ಗೃಹದಲ್ಲಿ ಕ್ಷೇತ್ರದ ಊಟ ಸೇವಿಸಿದರು. ಈ ವೇಳೆ ರಾಹುಲ್‍ಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸಾಥ್ ನೀಡಿದರು.

    ಬಳಿಕ ಮಾತನಾಡಿದ ವೀರೇಂದ್ರ ಹೆಗ್ಗಡೆ, ರಾಹುಲ್ ಗಾಂಧಿ ಮಂಜುನಾಥ ಸ್ವಾಮಿಗೆ ಫಲಕಾಣಿಕೆ ಅರ್ಪಿಸಿದರು. ಕ್ಷೇತ್ರಕ್ಕೆ ರಾಹುಲ್ ಗಾಂಧಿ ನೀಡಿದ ಎರಡನೇ ಭೇಟಿ ಇದಾಗಿದೆ. ಒಂಭತ್ತು ವರ್ಷಗಳ ಹಿಂದೆ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಬಂದಿದ್ದರು. ಇಂದು ದೇವಸ್ಥಾನದ ಸಿಬ್ಬಂದಿಯ ಗುರುತು ಹಿಡಿದಿದ್ದಾರೆ ಎಂದರು.