Tag: veerendra heggade

  • ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ, ಹಾಗೆ ಎಲ್ಲಾ ಕಷ್ಟಗಳೂ ಜಾರಿ ಹೋಗುತ್ತವೆ: ವೀರೇಂದ್ರ ಹೆಗ್ಗಡೆ

    ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ, ಹಾಗೆ ಎಲ್ಲಾ ಕಷ್ಟಗಳೂ ಜಾರಿ ಹೋಗುತ್ತವೆ: ವೀರೇಂದ್ರ ಹೆಗ್ಗಡೆ

    ಮಂಗಳೂರು: ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ. ಅದೇ ರೀತಿ ಮುಂದೆ ಎಲ್ಲಾ ಕಷ್ಟಗಳು ಜಾರಿ ಹೋಗುತ್ತವೆ ಎಂದು ಧರ್ಮಸ್ಥಳ (Dharmasthala ) ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು (Veerendra Heggade) ಹೇಳಿದ್ದಾರೆ.

    ಧರ್ಮಸ್ಥಳ ಅಮೃತವರ್ಷಿಣಿ ಸಭಾಂಗಣದಲ್ಲಿ ಎಸ್.ಡಿ.ಎಂ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ, ಇತ್ತೀಚೆಗೆ ನಡೆದ ಆಘಾತಗಳಿಂದ ನಾನು ಕೂಡ ಜರ್ಜರಿತಗೊಂಡಿದ್ದೇನೆ. ಅನಾವಶ್ಯಕವಾಗಿ ಷಡ್ಯಂತ್ರ ನಡೆಯುತ್ತಿದೆ. ಷಡ್ಯಂತ್ರ ಎಂದು ಕೋರ್ಟ್‍ನಲ್ಲೇ ಗೊತ್ತಾಗಿದೆ. ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ, ಆದು ಜಾರಿ ಕೆಳಗೆ ಬರಲೇ ಬೇಕು. ಅದೇ ರೀತಿ ಮುಂದಕ್ಕೆ ಎಲ್ಲಾ ಕಷ್ಟಗಳು ಹೋಗುತ್ತವೆ ಎಂದಿದ್ದಾರೆ. ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟ ಆರೋಪ – ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ

    ಹಳೆಯ ವಿದ್ಯಾರ್ಥಿಗಳು ಬಂದಿದ್ದು ತುಂಬಾ ಸಂತೋಷವಾಗಿದೆ. ಈ ವಿಚಾರದ ಬಗ್ಗೆ ಈಗ ಹೆಚ್ಚು ಮಾತನಾಡೋದಿಲ್ಲ. ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸುತ್ತೇವೆ. ಈ ಕಿರಿಕಿರಿಯಿಂದ ಗುಣಮಟ್ಟವನ್ನು ತ್ಯಾಗ ಮಾಡಲ್ಲ ಎಂದಿದ್ದಾರೆ.

    ಸಭೆಯಲ್ಲಿ ಹೆಗ್ಗಡೆ ಕುಟುಂಬಸ್ಥರು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮೋಹನ್ ಆಳ್ವಾ ಭಾಗಿಯಾಗಿದ್ದರು. ಇದನ್ನೂ ಓದಿ: ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್‌

  • ಸಹಕಾರಿ ಬಂಧುಗಳಿಂದ ಧರ್ಮಸ್ಥಳಕ್ಕೆ ಯಾತ್ರೆ – ಧರ್ಮಜಾಗೃತಿ ಸಮಾವೇಶ

    ಸಹಕಾರಿ ಬಂಧುಗಳಿಂದ ಧರ್ಮಸ್ಥಳಕ್ಕೆ ಯಾತ್ರೆ – ಧರ್ಮಜಾಗೃತಿ ಸಮಾವೇಶ

    ಮಂಗಳೂರು: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ (Dharmasthala) ಬಗ್ಯೆ ಆಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಯನ್ನು ಖಂಡಿಸಿ, ಜಾತಿ-ಮತ, ಪಕ್ಷ ಬೇಧ ಮರೆತು ಸರ್ವಸಹಕಾರಿಗಳೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಂಪೂರ್ಣ ಬೆಂಬಲಕ್ಕೆ ಹಾಗೂ ಧರ್ಮಸ್ಥಳದ ಪಾವಿತ್ರ ರಕ್ಷಣೆಗೆ ಸದಾ ಸಿದ್ಧರೂ, ಬದ್ಧರೂ ಆಗಿದ್ದು, ಧರ್ಮಸ್ಥಳದ ಜೊತೆ ಸದಾ ಇರುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ (Rajendra Kumar) ಭರವಸೆ ನೀಡಿದರು.

    ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಯ ಸಮಸ್ತ ಸಹಕಾರಿಗಳು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಧರ್ಮಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

    ಎಲ್ಲರೂ ಸದಾ ಪೂಜ್ಯ ಹೆಗ್ಗಡೆಯವರ ಜೊತೆಗಿದ್ದು, ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಧರ್ಮಸ್ಥಳ ಕ್ಷೇತ್ರದ ರಕ್ಷಣೆ ಎಲ್ಲಾ ಭಕ್ತರು ಹಾಗೂ ಅಭಿಮಾನಿಗಳ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದ್ದು, ಇಂತಹ ಪವಿತ್ರ ಸೇವೆಯಿಂದ ಭಕ್ತರ ಮನಸ್ಸಿಗೂ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.

    ಸತ್ಯದ ಜೊತೆಗೆ ನಾವಿದ್ದೇವೆ: ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಸತ್ಯ, ಧರ್ಮ, ನ್ಯಾಯ, ನೀತಿ ಸದಾ ನೆಲೆ ನಿಂತಿರುವ ಧರ್ಮಸ್ಥಳದ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಿದ್ದೇವೆ. ಸತ್ಯಮೇವ ಜಯತೇ ಎಂಬಂತೆ ಸತ್ಯಕ್ಕೆ ಸದಾ ಜಯವಿದೆ. ಸತ್ಯದ ಜೊತೆಗೆ ನಾವಿದ್ದೇವೆ ಎಂದು ಡಾ. ಮೋಹನ ಆಳ್ವ (Mohan Alva) ಭರವಸೆ ನೀಡಿದರು. ಹೆಗ್ಗಡೆಯವರ ನೇತೃತ್ವದಲ್ಲಿ ಹಲವು ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಧರ್ಮಸ್ಥಳ ಇಂದು ಇಡೀ ದೇಶಕ್ಕೆ ಮಾದರಿ ಸಂಸ್ಥೆಯಾಗಿದೆ ಎಂದು ಅವರು ಶ್ಲಾಘಿಸಿದರು.

    ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು (Veerendra Heggade) ಮಾತನಾಡಿ ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ, ಗೌರವ ಮತ್ತು ಅಭಿಮಾನ ತಮಗೆ ಹೆಚ್ಚಿನ ಉತ್ಸಾಹ ಮತ್ತು ಭರವಸೆ ಮೂಡಿಸಿದೆ.

    ಸಹಕಾರಿ ಕ್ಷೇತ್ರವನ್ನು ತಮ್ಮ ಮಾರ್ಗದರ್ಶಿತ್ವ ಮತ್ತು ನಾಯಕತ್ವದೊಂದಿಗೆ ಜನಪ್ರಿಯಗೊಳಿಸಿದ ರಾಜೇಂದ್ರ ಕುಮಾರ್ ಅವರ ಸೇವೆ, ಸಾಧನೆಯನ್ನು ಶ್ಲಾಘಿಸಿ ಸಮಾಜಕ್ಕೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಇಂತಹ ದಕ್ಷ, ಪ್ರಾಮಾಣಿಕ ಹಾಗೂ ನಿಷ್ವಾರ್ಥ ನಾಯಕರ ಅಗತ್ಯವಿದೆ. ಸಹಕಾರಿರಂಗವನ್ನು ರಾಜ್ಯಮಟ್ಟದ ಖ್ಯಾತಿಗೆ ಬೆಳೆಸಿರುವುದಕ್ಕೆ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

    ತಮ್ಮ ಸಂಸದರ ನಿಧಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ನೀಡಲಾಗಿದೆ. ಅಲ್ಲದೆ ಧರ್ಮಸ್ಥಳದಿಂದ ಎಲ್ಲಾ ಸಹಕಾರಿ ಸಂಘಗಳಿಗೂ ಸಕಾಲಿಕ ನೆರವು, ಪ್ರೋತ್ಸಾಹ ನೀಡಲಾಗುತ್ತದೆ ಎಂದರು. ಮಾಧ್ಯಮಗಳಲ್ಲಿ ಅಪಪ್ರಚಾರ ಹಾಗೂ ಸುಳ್ಳು ವದಂತಿ ಪ್ರಸಾರದಿಂದ ತಮಗೆ ಆಘಾತಕರವಾದ ನೋವು ಉಂಟಾಗಿದೆ. ಆದರೆ ಧಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಚಂದ್ರನಾಥ ಸ್ವಾಮಿ ಇಬ್ಬರೂ ಶಾಂತ ಸ್ವಭಾವದವರಾಗಿದ್ದು, ದೇವರ ಅನುಗ್ರಹ, ಧರ್ಮದೇವತೆಗಳು ಮತ್ತು ಅಣ್ಣಪ್ಪ ಸ್ವಾಮಿಯ ಅಭಯದಿಂದ ನೋವು ಮರೆಯಲು ಸಾಧ್ಯವಾಗಿದೆ. ಅಪವಾದ, ಅಪಪ್ರಚಾರ ಮಾಡಿದವರಿಗೂ ಅಭಿನಂದನೆ ಹೇಳಿದ ಹೆಗ್ಗಡೆಯವರು ಅವರಿಂದಾಗಿ ಪ್ರತಿದಿನ ಸಾವಿರಾರು ಮಂದಿ ಧರ್ಮಸ್ಥಳಕ್ಕೆ ಬಂದು ತಮ್ಮ ಪ್ರೀತಿ-ವಿಶ್ವಾಸ, ಗೌರವ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

    ಮಾಣಿಲದ ಮೋಹನದಾಸ ಸ್ವಾಮೀಜಿ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಬೆಳಪು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಸುಮಾರು ಹತ್ತು ಸಾವಿರ ಮಂದಿ ಜಾಥಾದಲ್ಲಿ ಬಂದಿದ್ದರು.

    ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಸ್ವಾಗತಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಧನ್ಯವಾದವಿತ್ತರು.

  • ನಮ್ಮ ಮೇಲೆ ಬಂದಿರುವ ಅಪವಾದಗಳು ಓಡಿ ಹೋಗುತ್ತವೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ನಮ್ಮ ಮೇಲೆ ಬಂದಿರುವ ಅಪವಾದಗಳು ಓಡಿ ಹೋಗುತ್ತವೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    – ಗ್ರಾಮೀಣ ಅಭಿವೃದ್ಧಿಯಿಂದ ಮಹಿಳೆಯರಿಗೆ ಶಕ್ತಿ ನೀಡಬೇಕು: ಧರ್ಮಾಧಿಕಾರಿ ಆಶಯ

    ಮಂಗಳೂರು: ನಮ್ಮ ಮೇಲೆ ಬಂದಿರುವ ಅಪವಾದಗಳು ಓಡಿ ಹೋಗುತ್ತವೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

    ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯುತ್ತಿರುವ ಜನ ಸೇನಾ ದೀಪಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮೇಲೆ ಬಂದಿರುವಂತಹ ಅಪವಾದಗಳು ಓಡಿ ಹೋಗುತ್ತವೆ. ಈ ದೀಪಾರಾಧನೆಯಿಂದ ಕ್ಷೇತ್ರದ ಅಪಾಯ ದೂರವಾಗುತ್ತದೆ. ನಾನು ಮಾತನಾಡಬಾರದು ಎಂದು ಕಾನೂನು ಇದೆ. ಹಾಗಾಗಿ, ನಾನು ಹೆಚ್ಚು ಮಾತನಾಡುವುದಿಲ್ಲ. ನಿಮ್ಮ ಭಕ್ತಿ ವಿಶೇಷವಾದದ್ದು. ಬಡತನ ಹೋಗಲಾಡಿಸಬೇಕೆಂಬುದು ನಮ್ಮ ಗುರಿ. ಗ್ರಾಮೀಣ ಅಭಿವೃದ್ಧಿಯಿಂದ ಮಹಿಳೆಯರಿಗೆ ಶಕ್ತಿ ನೀಡಬೇಕು. ಹಿಂದೂ ಧರ್ಮ ಸನಾತನ ಧರ್ಮ ಉಳಿಯಲಿ ಎಂದು ಆಶಯ ವ್ಯಕ್ತಪಡಿಸಿದರು.

    ನೀವೆಲ್ಲ ಬಂದು ಆತ್ಮವಿಶ್ವಾಸ ಹೆಚ್ಚಿಸಿದ್ದೀರಿ. ಪವನ್ ಕಲ್ಯಾಣ್ ಬರುತ್ತಾರೆ ಎಂಬ ವಿಚಾರ ಸಂತೋಷವಾಗಿತ್ತು. ಅವರ ಬಳಿ ಮಾತನಾಡಬೇಕೆಂಬ ಆಸೆ ಇತ್ತು. 21 ಸೀಟುಗಳನ್ನು ಪ್ರಥಮ ಬಾರಿಗೆ ಗೆದ್ದಿದ್ದಾರೆ. ಅಪರೂಪದ ರಾಜಕೀಯ ಸಾಧನೆ ಮಾಡಿದ್ದಾರೆ. ಸಿನಿಮಾ ನಟರಾದರೂ ಕೂಡ ದೇಶದ ಬಗ್ಗೆ ಒಳ್ಳೆಯ ಚಿಂತನೆ ಬಂದಿದ್ದಾರೆ. ಸನಾತನ ಧರ್ಮ ರಕ್ಷಣೆಗೆ ದುಡಿಯುತ್ತಿದ್ದಾರೆ. ಅನೇಕ ವಿಷಯಗಳನ್ನು ತಿಳಿದುಕೊಂಡಿದ್ದಾರೆ. ಮೊದಲನೇ ಚುನಾವಣೆಯಲ್ಲಿ ಗೆದ್ದು ಉಪಮುಖ್ಯಮಂತ್ರಿಯಾಗಿದ್ದಾರೆ. ಅವರನ್ನ ನೋಡುವ ಆಸೆ ಸಹಜವಾಗಿ ಇತ್ತು. ಅವರು ಬರುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ಅವರ ಕ್ಷೇತ್ರಕ್ಕೆ ಬಂದು ಹೋಗಲಿ. ಧರ್ಮಸ್ಥಳಕ್ಕೆ ಬರ್ತೇನೆ ಅಂದಮೇಲೆ ಅವರು ಬರಲೇಬೇಕು. ಮಾತು ಬಿಡ ಮಂಜುನಾಥ ಎಂಬ ಮಾತಿದೆ. ಅವರು ಸಾಮಾನ್ಯ ಮನುಷ್ಯರಲ್ಲ ಕಾಲ ಪುರುಷ. ಆಂಧ್ರಪ್ರದೇಶದಲ್ಲಿ ಎನ್‌ಟಿಆರ್ ಕೂಡ ಪ್ರಸಿದ್ಧರಾಗಿದ್ದರು. ಅದೇ ರೀತಿ ಇವರು ಕೂಡ ಪ್ರಸಿದ್ಧರಾಗುತ್ತಾರೆ. ಅಂತಹ ಭಾಗ್ಯ ಪವನ್ ಕಲ್ಯಾಣ್ ಅವರಿಗೆ ದೊರಕಲಿ. ದೀಪ ಕತ್ತಲೆಯನ್ನು ಹೋಗಲಾಡಿಸುತ್ತದೆ. ಆಗ ಬೆಳಕು ತನ್ನಷ್ಟಕ್ಕೆ ಬರುತ್ತದೆ ಎಂದು ಹೇಳಿದರು.

    ದೀಪಾರಾಧನೆಯಲ್ಲಿ ಧರ್ಮಾಧಿಕಾರಿ ವೀರೇಂದ್ರ ಅವರಿಗೆ ಹೇಮಾವತಿ ಹೆಗ್ಗಡೆ ಸಾಥ್ ನೀಡಿದರು. ಅಮೃತವರ್ಷಿಣಿ ಸಭಾಂಗಣದಲ್ಲಿ ನೂರಾರು ಅಭಿಮಾನಿಗಳು ಸೇರಿದ್ದರು. ಕರ್ನಾಟಕ ಹಾಗೂ ಆಂಧ್ರಪ್ರದೇಶದಿಂದ ಪವನ್ ಕಲ್ಯಾಣ್ ಅಭಿಮಾನಿಗಳು ಬಂದಿದ್ದರು. ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂದು ಜನಸೇನಾ ಕಾರ್ಯಕರ್ತರು ಘೋಷಣೆ ಕೂಗಿದರು.

  • ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ – ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌

    ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ – ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌

    – 2024 ಡಿಸೆಂಬರ್ ಅವಧಿಯಲ್ಲಿ ಸಭೆ ನಡೆಸಿದ್ದ ಜಯಂತ್‌, ರೀನಾ
    – ಮಹಿಳೆಯರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌

    ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala Temple) ವಿರುದ್ಧ ಷಡ್ಯಂತ್ರ ಎಸಗಿದ ಆರೋಪ ಹೊತ್ತಿರುವ ಬುರುಡೆ ಗ್ಯಾಂಗ್ ಸದಸ್ಯರು ಕಳೆದ ವರ್ಷ ಕೊಡಗು (Kodagu) ಜಿಲ್ಲೆಗೂ ಭೇಟಿ ನೀಡಿ ಜನತೆಯಲ್ಲಿ ಶ್ರೀ ಕ್ಷೇತ್ರದ ಬಗ್ಗೆ ಗೊಂದಲ ಮೂಡಿಸಿ ಹುನ್ನಾರ ನಡೆಸಿದ ವಿಚಾರ ಈಗ ಬೆಳಕಿಗೆ ಬಂದಿದೆ.

    ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕ್ಷೇತ್ರದ ಭಕ್ತರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ಸಮಗ್ರ ದಾಖಲೆ ನೀಡಿದ್ದರಿಂದ ವರಿಷ್ಠಾಧಿಕಾರಿಗಳು ಬುರುಡೆ ಗ್ಯಾಂಗ್ ಸದಸ್ಯರ ಕಪೋಲ ಕಲ್ಪಿತ ಕಾರ್ಯಾಚರಣೆಗೆ ಬ್ರೇಕ್ ಹಾಕುವಲ್ಲಿ ಯಶಸ್ವಿಯಾಗಿದ್ದರು. ವಿಫಲಗೊಂಡ ಬೆನ್ನಲ್ಲೇ ಗ್ಯಾಂಗ್‌ ಸದಸ್ಯರು ಜಿಲ್ಲೆಯಿಂದ ಕಾಲ್ಕಿತ್ತಿದ್ದರು.

    2024 ಡಿಸೆಂಬರ್ ಅವಧಿಯಲ್ಲಿ ಜಯಂತ್ ಟಿ(Jaynath.T) ರೀನಾ (Reena) ಸೇರಿದಂತೆ ಬೆಂಗಳೂರು ಮತ್ತು ಮಂಗಳೂರಿನ ಕೆಲವು ವ್ಯಕ್ತಿಗಳು ಕೊಡಗು ಜಿಲ್ಲೆಯ ವಿರಾಜಪೇಟೆ, ಶುಂಠಿ ಕೊಪ್ಪ ಕುಶಾಲನಗರ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿದ್ದರು. ಅಷ್ಟೇ ಅಲ್ಲದೇ ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನೆಯ ಮಹಿಳಾ ಸದಸ್ಯರನ್ನು ಭೇಟಿ ಮಾಡಿ ಅವರ ಮೂಲಕ ಕೆಲವು ಕಪೋಲ ಕಲ್ಪಿತ ದೂರುಗಳನ್ನು ಪಡೆದು ಪೊಲೀಸ್ ಠಾಣೆಗೆ ನೀಡುವಲ್ಲಿ ಬಹುತೇಕ ಯಶಸ್ವಿಯಾಗಿದ್ದರು. ಇದನ್ನೂ ಓದಿ:  ಎಸ್‌ಐಟಿ ವಿಚಾರಣೆಗೆ ಹಾಜರಾದ ಸೌಜನ್ಯ ಮಾವ ವಿಠಲ ಗೌಡ

    ಗ್ರಾಮೀಣ ಭಾಗದ ಮಹಿಳೆಯರಿಂದ ಕ್ಷೇತ್ರದ ಯೋಜನೆ ಬಗ್ಗೆ ತಪ್ಪು ಮಾಹಿತಿಗಳನ್ನ ಒಳಗೊಂಡಂತೆ ವಿಡಿಯೋ ದಾಖಲಿಸಿ ನಂತರ ಯೂಟ್ಯೂಬ್‌ನಲ್ಲಿ ಅಪ್ಲೋಡ್‌ ಮಾಡಿ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ಸಹ ನಡೆಸಿದ್ದರು.

    ವಿರಾಜಪೇಟೆ ಶುಂಠಿಕೊಪ್ಪ ಮತ್ತಿತರ ಕಡೆ ನೀಡಿರುವ ದೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ (Veerendra Heggade) ಮತ್ತು ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಕುಮಾರ್ (Anil Kumar) ಅವರುಗಳ ಹೆಸರನ್ನು ಸಹ ಉಲ್ಲೇಖಿಸಿದ್ದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾರೆ ಎಂದು ತಮಗೆ ಬೇಕಾದಂತೆ ಮಾಹಿತಿ ಕಲೆ ಹಾಕಿ ಕೆಲವು ಮಹಿಳೆಯರಿಂದ ಹೇಳಿಕೆ ಪಡೆದಿದ್ದರು. ಹೇಳಿಕೆ ಪಡೆದ ನಂತರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದರು. ವಿರಾಜಪೇಟೆ ಮತ್ತು ಶುಂಠಿಕೊಪ್ಪದಲ್ಲಿ ಎರಡು ಪ್ರಕರಣಗಳನ್ನು ದಾಖಲಿಸುವಲ್ಲಿ ಕೂಡ ಈ ತಂಡ ಬಹುತೇಕ ಯಶಸ್ವಿಯಾಗಿತ್ತು. ಇದನ್ನೂ ಓದಿ:  ನಮಗೆ ಬುರುಡೆ ಕೊಟ್ಟಿದ್ದು ಗಿರೀಶ್‌ ಮಟ್ಟಣ್ಣನವರ್‌: ಎಸ್‌ಐಟಿ ಮುಂದೆ ಜಯಂತ್‌ ಹೇಳಿಕೆ

    ಮೈಕ್ರೋ ಫೈನಾನ್ಸ್ ಬಗ್ಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ ಬಳಿಕ ಕೊಡಗು ಸೇರಿದಂತೆ ನೆರೆಯ ಮೈಸೂರು ಹಾಸನ, ಮಂಡ್ಯ ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬುರುಡೆ ಗ್ಯಾಂಗ್‌ ಹಲವು ಸಭೆಗಳನ್ನು ನಡೆಸಿತ್ತು. ಜಿಲ್ಲೆಯ ಪ್ರತಿ ಪೊಲೀಸ್ ಠಾಣೆಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಅನಿಲ್ ಕುಮಾರ್ ಅವರ ಮೇಲೆ ದೂರು ದಾಖಲಿಸಲು ರೆಡಿಮೇಡ್ ದೂರಿನ ಪ್ರತಿಗಳನ್ನು ಕೂಡ ವಿತರಣೆ ಸಹ ಮಾಡಲಾಗಿತ್ತು. ಆದರೆ ಮಹಿಳಾ ಸದಸ್ಯರು ಆಸಕ್ತಿ ತೋರಿಸದ ಕಾರಣ ಈ ಬುರುಡೆ ಗ್ಯಾಂಗ್‌ ಜಿಲ್ಲೆಯಿಂದ ಕಾಲ್ಕಿತ್ತಿತ್ತು.

  • ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆ ಭೇಟಿಯಾದ ಅಶೋಕ್

    ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆ ಭೇಟಿಯಾದ ಅಶೋಕ್

    ಮಂಗಳೂರು: ಧರ್ಮಸ್ಥಳ ಕುರಿತು ಅಪಪ್ರಚಾರ ಖಂಡಿಸಿ ಸೋಮವಾರ ಬಿಜೆಪಿ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದೆ. ಈ ನಡುವೆಯೇ ವಿಪಕ್ಷ ನಾಯಕ ಆರ್ ಅಶೋಕ್ (R Ashok), ಧರ್ಮಸ್ಥಳ (Dharmasthala) ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು (Veerendra Heggade) ಭೇಟಿಯಾಗಿದ್ದಾರೆ.

    ಧರ್ಮಸ್ಥಳದ ಬುರುಡೆ ರಹಸ್ಯದ ತನಿಖೆ ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಈ ನಡುವೆ ಬಿಜೆಪಿ ಧರ್ಮಸ್ಥಳದಲ್ಲಿ ಲಕ್ಷ ಜನ ಸೇರಿಸಿ ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. ಎಸ್‌ಐಟಿ ತನಿಖೆ ಷಡ್ಯಂತ್ರದಿಂದ ಕೂಡಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಎನ್‌ಐಎ ತನಿಖೆಗೆ ಒತ್ತಾಯಿಸಲಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ನಿಂತು ಬಿಜೆಪಿ ಬಹಿರಂಗ ರಣಕಹಳೆ ಮೊಳಗಿಸಲಿದೆ. ಇದನ್ನೂ ಓದಿ: ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

    ಧರ್ಮಸ್ಥಳದ ಬುರುಡೆ ರಹಸ್ಯವನ್ನ ಎಸ್‌ಐಟಿ ಭೇದಿಸಲು ಶುರು ಮಾಡಿ ಒಂದೂವರೆ ತಿಂಗಳಾಗುತ್ತಿದೆ. ಆರಂಭದಲ್ಲಿ ಸೈಲೆಂಟ್ ಆಗಿದ್ದ ಬಿಜೆಪಿ, ಇದೆಲ್ಲ ಬುರುಡೆ ಕಥೆ ಎಂದು ಹತ್ತು ದಿನದಲ್ಲಿ ನಿರ್ಧರಿಸಿತು. ಬಿಜೆಪಿ ನಾಯಕ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿಧಾನಸೌಧದಲ್ಲಿ ಇದೊಂದು ಷಡ್ಯಂತ್ರ ಎಂಬ ಶಂಖನಾದವನ್ನು ಮೊಳಗಿಸಿದ್ದರು. ಅಲ್ಲಿಂದ ಇವತ್ತಿನ ತನಕ ಬಿಜೆಪಿ ಧರ್ಮಸ್ಥಳ ಪ್ರಕರಣವನ್ನು ರಾಜ್ಯ ಸರ್ಕಾರದ ವಿರುದ್ಧದ ಅಸ್ತ್ರವೆಂದು ಪರಿಗಣಿಸಿದೆ. ಇದನ್ನೂ ಓದಿ: ನಾಳೆ ಎನ್‌ಐಎ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಧರ್ಮಸ್ಥಳ ಚಲೋ, ಜಾಗೃತಿ ಸಮಾವೇಶ

    ಧರ್ಮಸ್ಥಳ ದೇವಸ್ಥಾನದ ವಠಾರದಲ್ಲಿ ಸೋಮವಾರ ಬಿಜೆಪಿ ಬೃಹತ್ ಸಮಾವೇಶ ನಡೆಸುತ್ತದೆ. ಒಂದು ಲಕ್ಷಕ್ಕಿಂತ ಹೆಚ್ಚು ಜನ ಕ್ಷೇತ್ರಕ್ಕೆ ಭಕ್ತರು ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಧರ್ಮ ಜಾಗರಣೆಯ ನೇತೃತ್ವ ವಹಿಸಿದ್ದಾರೆ. ಸಮಾವೇಶ ಮೂಲಕ ಎನ್‌ಐಎ ತನಿಖೆಗೆ ಒತ್ತಾಯಿಸಲಾಗುತ್ತದೆ. ಇದನ್ನೂ ಓದಿ: ಡಿಕೆಶಿ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ: ಯತ್ನಾಳ್ ಹೊಸ ಬಾಂಬ್

    ಷಡ್ಯಂತ್ರಕ್ಕೆ ಹಣದ ಹೊಳೆ ಹರಿದು ಬಂದ ಆರೋಪವಿದೆ. ಇ.ಡಿ ಈ ಬಗ್ಗೆ ಗಮನ ಹರಿಸಲು ಒತ್ತಾಯಿಸಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಈಗಾಗಲೇ ಭಕ್ತರು ಕ್ಷೇತ್ರಕ್ಕೆ ಬಂದಿದ್ದಾರೆ. ದೇವರ ದರ್ಶನ ನಡೆಸಿ ಅನ್ನಪ್ರಸಾದ ಸ್ವೀಕರಿಸಿ ಸಮಾವೇಶದಲ್ಲಿ ಜನ ಭಾಗಿಯಾಗಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬಿಜೆಪಿಯವರು ಧರ್ಮಸ್ಥಳ ಬದಲು ದೆಹಲಿಯಲ್ಲಿ ಹೋರಾಟ ಮಾಡಲಿ: ಡಿಕೆಶಿ

  • ಹೆಣ್ಣುಮಕ್ಕಳು ಎಂತಹ ಹೋರಾಟಕ್ಕೂ ತಯಾರಿದ್ದಾರೆ, ಆದ್ರೆ ಅಗತ್ಯವಿಲ್ಲ – ಡಿ.ವೀರೇಂದ್ರ ಹೆಗ್ಗಡೆ

    ಹೆಣ್ಣುಮಕ್ಕಳು ಎಂತಹ ಹೋರಾಟಕ್ಕೂ ತಯಾರಿದ್ದಾರೆ, ಆದ್ರೆ ಅಗತ್ಯವಿಲ್ಲ – ಡಿ.ವೀರೇಂದ್ರ ಹೆಗ್ಗಡೆ

    – ಜನಿವಾರ ಧರಿಸೋದು ಜಾತಿ ವೇಷಕ್ಕಲ್ಲ ಎಂದ ಧರ್ಮಾಧಿಕಾರಿ
    – ಶ್ರೀಕ್ಷೇತ್ರದೊಂದಿಗೆ ನಾವಿದ್ದೇವೆ – ಜೈನ ಮಠಗಳ ಭಟ್ಟಾರಕರಿಂದ ಅಭಯ

    ಮಂಗಳೂರು: ಧರ್ಮಸ್ಥಳದ (Dharmasthala) ಬೆಳವಣಿಗೆಯಿಂದ ಪುರುಷರಿಗಿಂತ, ಮಹಿಳೆಯರೇ ಹೆಚ್ಚಾಗಿ ಕಣ್ಣೀರಿಟ್ಟಿದ್ದಾರೆ, ವೇದನೆ ಪಡ್ತಿದ್ದಾರೆ. ಕೆಲ ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟಕ್ಕೆ, ಪ್ರತಿಭಟನೆಗೂ ತಯಾರಿದ್ದಾರೆ. ಆದ್ರೆ ಅಂತಹ ಹೋರಾಟ ಅಗತ್ಯವಿಲ್ಲ. ಎಲ್ಲವೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ ಎಂದು ಧರ್ಮಸ್ಥಳದ‌ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

    ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ನಡೆದ ಜೈನ ಮುನಿಗಳ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜೈನ ಮಠಗಳ ಭಟ್ಟಾರಕರು ಪಾಲ್ಗೊಂಡಿದ್ದರು. ವಿವಿಧ ಜೈನ ಸಂಘ (Jains Union) ಸಂಸ್ಥೆಗಳಿಂದ ನೂರಾರು ಜನ ಭಾಗಿಯಾಗಿದ್ದರು. ಇದಕ್ಕೂ ಮುನ್ನ ಧರ್ಮಸ್ಥಳ ಪ್ರವೇಶದ್ವಾರದಿಂದ ದೇಗುಲದ ವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಜೈನ ಸಮುದಾಯದ ಮುನಿಗಳು, ಜೈನ ಮಠಗಳ ಭಟ್ಟಾರಕರ ನೇತೃತ್ವದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.

    ಈ ವೇಳೆ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ (Veerendra Heggade), ಇಂದು ಶ್ರೀ ಕ್ಷೇತ್ರಕ್ಕೆ ಬಹಳ ವಿಶೇಷವಾದ ಕಳೆ ಬಂದಿದೆ. ಇಷ್ಟೊಂದು ಆಶಯಧಾರಿಗಳು, ಆಶೀರ್ವಚನ ನೀಡುತ್ತಿರೋದು ತುಂಬಾ ದೊಡ್ಡದು. ಇಷ್ಟೊಂದು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಬಂದಿರೋದು ಸಂತಸ ತಂದಿದೆ. ಇಂದು ಮೂಡಬಿದ್ರೆ ಭಟ್ಟಾರಕರ ಪಟ್ಟಾಭೀಷೇಕದ ದಿನ, ಅವರು ಕೂಡ ನಿಮ್ಮೊಂದಿಗಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ ಇದಕ್ಕಿಂತ ದೊಡ್ಡ ಮಾತು ನನಗೆ ಬೇಡ ಎಂದು ತಿಳಿಸಿದರು.

    ಎಸ್‌ಐಟಿ ತನಿಖೆ ನಡೆಯುತ್ತಿರೋದ್ರಿಂದ ಹೆಚ್ಚು ಮಾತನಾಡಬಾರದು ಅಂತ ಆದೇಶ ಆಗಿದೆ. ಆದ್ರೆ ಭಕ್ತರೊಬ್ಬರು ನನಗೆ ಹೇಳ್ತಿದ್ದರು. ಈ ಬೆಳವಣಿಗೆ ಆದಾಗಿನಿಂದ ಪುರುಷರಿಗಿಂತ ಮಹಿಳೆಯರು ಹೆಚ್ಚು ಕಣ್ಣೀರು ಹಾಕಿದ್ದಾರೆ, ವೇದನೆ ಪಡ್ತಿದ್ದಾರೆ. ನಮಗೆ, ಕುಟುಂಬಕ್ಕೆ ನೆಮ್ಮದಿಯಿಲ್ಲ. ನೀವೇ ಏನಾದ್ರೂ ಮಾಡಿ ಅಂತ ಹೇಳಿಕೊಂಡಿದ್ರು. ಕೆಲ ಹೆಣ್ಣುಮಕ್ಕಳು ಯಾವುದೇ ರೀತಿಯ, ಹೋರಾಟಕ್ಕೆ, ಪ್ರತಿಭಟನೆಗೆ ತಯಾರಿದ್ದಾರೆ. ಆದ್ರೆ ಅಂತಹ ಹೋರಾಟ ಅಗತ್ಯವಿಲ್ಲ. ಎಲ್ಲವೂ ಸ್ವಾಮಿ ಮೇಲೆ ಬಿಟ್ಟದ್ದೇವೆ, ಅದರ ಫಲ ಈಗ ಸಿಗುತ್ತಿದೆ ಎಂದು ತಿಳಿಸಿದರು.

    ನಾವು ಮಾಡುವ ಪ್ರಯತ್ನಗಳಿಗೆ ಸ್ವಾಮಿಯ ಅನುಗ್ರಹ ಇದ್ದೇ ಇದೆ. ನಾವು ಸತ್ಯ ಬಿಟ್ಟು ಹಿಂದೆ ಹೋಗಿಲ್ಲ, ಮುಂದೆಯೂ ಹೋಗಲ್ಲ. ಆದ್ದರಿಂದ ಭಕ್ತರು ತಾಳ್ಮೆಯಿಂದಿರಬೇಕು, ಶಾಂತಿ ಕಾಪಾಡಬೇಕು ಎಂದು ಕರೆ ನೀಡಿದರು.

    ಜನಿವಾರ ಇರೋದು ಜಾತಿ ವೇಷಕ್ಕಲ್ಲ
    ಮುಂದುವರಿದು… ಸತ್ಯಕ್ಕೆ ಎರಡು ಮುಖ ಇಲ್ಲ, ಒಂದೇ ಮುಖ. ವ್ಯಕ್ತಿ ಯಾವುದೇ ಧರ್ಮವಾಗಲಿ, ಆ ಧರ್ಮಕ್ಕೆ ಶರಣಾಗಬೇಕು. ಇಲ್ಲದಿದ್ದರೆ ಅವರು ಅನುಯಾಯಿಗಳೇ ಅಲ್ಲ. ಇಷ್ಟೊಂದು ಜನ ಶ್ರೀಗಳು ನಮಗೆ ಧೈರ್ಯ ಕೊಟ್ಟಿದ್ದಾರೆ. ಎಲ್ಲರ ಮೇಲೂ ಮಂಜುನಾಥನ ಆಶೀರ್ವಾದ ಇಲ್ಲಲಿ ಎಂದರಲ್ಲದೇ ಜನಿವಾರ ಜಾತಿ ವೇಷಕ್ಕಲ್ಲ, ಮೂರು ಧರ್ಮಗಳ ಆಚರಿಸೋದಕ್ಕಾಗಿ ಜನಿವಾರ ಧಾರಣೆ ಮಾಡ್ತೀವಿ. ಅದೇ ರೀತಿ ದಶಲಕ್ಷಣ ಇರೋದು ಪೂಜೆಗಲ್ಲ ಪ್ರಾರ್ಥನೆ ಮಾಡೋಕೆ ಎಂದು ಕಿವಿಮಾತು ಹೇಳಿದರು.

    ಬಳಿಕ ರಾಜ್ಯದ ಜೈನ ಭಟ್ಟಾರಕರು ವೀರೇಂದ್ರ ಹೆಗ್ಗೆಡೆ ಅವರನ್ನ ಸನ್ಮಾನಿಸಿ ಗೌರವಿಸಿದರು.

  • ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ: ವೀರೇಂದ್ರ ಹೆಗ್ಗಡೆ

    ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ: ವೀರೇಂದ್ರ ಹೆಗ್ಗಡೆ

    – ಕ್ಷೇತ್ರದ ಮೇಲಿನ ಅಭಿಮಾನ ಹೀಗೆ ಇರಲಿ ಎಂದ ಧರ್ಮಾಧಿಕಾರಿ

    ಮಂಗಳೂರು: ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Veerendra Heggade) ಹೇಳಿದ್ದಾರೆ.

    ಧರ್ಮಸ್ಥಳ ಪ್ರಕರಣದಲ್ಲಿ (Dharmasthala Case) ಮಾಸ್ಕ್ ಮ್ಯಾನ್ (MaskMan) ಬಂಧನದ ಬಳಿಕ ಮಾತನಾಡಿದ ಅವರು, ಎಸ್‌ಐಟಿ (SIT) ತನಿಖೆ ಹಂತದಲ್ಲಿ ನಾನು ಹೆಚ್ಚು ಮಾತನಾಡಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸುವ ಎಲ್ಲರಿಗೂ ಧನ್ಯವಾದಗಳು ಎಂದರು. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ಪೊಲೀಸರ ವಶಕ್ಕೆ

    ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದು ಭಕ್ತರ ಬಳಿ ತುಳುವಿನಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ: ಇದು ಅಣ್ಣಪ್ಪ ಸ್ವಾಮಿಯ ಸತ್ಯ ದರ್ಶನ – ಹೆಗ್ಗಡೆ ಮಾತು ಮತ್ತೆ ವೈರಲ್

  • ಧರ್ಮಸ್ಥಳ ಕೇಸ್‌- ಮೊದಲ ಬಾರಿಗೆ ಮೌನ ಮುರಿದ ಸಿಎಂ

    ಧರ್ಮಸ್ಥಳ ಕೇಸ್‌- ಮೊದಲ ಬಾರಿಗೆ ಮೌನ ಮುರಿದ ಸಿಎಂ

    ಬೆಂಗಳೂರು: ವಿಧಾನಸಭೆಯಲ್ಲಿ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

    ಧರ್ಮಸ್ಥಳ ಬಗ್ಗೆ ಈಗ ಬಿಜೆಪಿಯವರು ಚಳವಳಿ ಮಾಡುತ್ತಿದ್ದಾರೆ. ಧರ್ಮಸ್ಥಳ ತನಿಖೆ ಬಗ್ಗೆ ವೀರೇಂದ್ರ ಹೆಗಡೆ (Veerendra Heggade) ಅವರೇ ಸ್ವಾಗತ ಮಾಡಿದ್ದಾರೆ. ಎಸ್‌ಐಟಿ ರಚನೆ ಮಾಡಿದಾಗ ಬಿಜೆಪಿಗರು ಮಾತನಾಡಲೇ ಇಲ್ಲ. 15 ಜಾಗದಲ್ಲಿ ಅಗೆದು ಎರಡು ಕಡೆ ಮಾತ್ರ ಅಸ್ಥಿಪಂಜರ ಪತ್ತೆಯಾಗಿತ್ತು. 13 ಕಡೆ ಏನೂ ಸಿಗದ ಬಳಿಕ ಬಿಜೆಪಿಯವರು ಮಾತನಾಡಲು ಶುರು ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ ಕೇಂದ್ರ ಮಧ್ಯಸ್ಥಿಕೆ ವಹಿಸುವಂತೆ ಅಮಿತ್ ಶಾಗೆ ಸ್ವಾಮೀಜಿಗಳಿಂದ ಪತ್ರ

     

    ಗೃಹ ಸಚಿವ ಪರಮೇಶ್ವರ್ ಕೂಡ ಯಾವುದೇ ಸಂಖ್ಯೆ ಹೇಳದೇ ಜಾರಿಕೊಂಡಿದ್ದರೂ ಈಗ ಸಿಎಂ ಎರಡು ಕಡೆ ಸಿಕ್ಕಿದೆ, 13 ಕಡೆ ಸಿಕ್ಕಿಲ್ಲ ಎಂದು ಅಧಿಕೃತವಾಗಿ ಹೇಳಿದ್ದಾರೆ. ಆದರೆ ಸಿಎಂ ತನಿಖೆಯ ಸಾರಾಂಶದ ಬಗ್ಗೆ ಯಾವುದೇ ವಿವರಣೆ ನೀಡಲಿಲ್ಲ.

  • ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈಗ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

    ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈಗ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

    ನೂರಾರು ಕೊಲೆಯಾಗಲು ಸಾಧ್ಯವೆ?
    – ಮೀನು ತಿಂದು ಭಕ್ತರ ಭಾವನೆಗೆ ಧಕ್ಕೆ ತಂದವರು ಈಗ ತನಿಖೆ ಮಾಡಿಸುತ್ತಿದ್ದಾರೆ

    ಮೈಸೂರು: ರಾಜ್ಯ ಸರ್ಕಾರ ಧರ್ಮಸ್ಥಳದ (Dharmasthala) ಧರ್ಮಾಧಿಕಾರಿ ಅವರನ್ನು ಅರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದು ಪ್ರತಾಪ್‌ ಸಿಂಹ (Pratap Simha) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ (Soujanya Case) ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ  ಆರಂಭಿಸಿದೆ ಎಂದು ಸ್ಫೋಟಕ ಆರೋಪ ಮಾಡಿದರು.

    ಧರ್ಮಸ್ಥಳದಲ್ಲಿ ಸಾವಿರಾರು ಕೊಲೆಯಾಗಿದೆ ಎನ್ನುತ್ತಾರೆ. ಇದು ವಾಸ್ತವದಲ್ಲಿ ಸಾಧ್ಯವೇ? ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ? ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ ಎಂದು ಆರೋಪಿಸಿದರು.  ಇದನ್ನೂ ಓದಿ: ನನಗೆ ಗನ್‌ಮ್ಯಾನ್ಭದ್ರತೆ ನೀಡಿ: ಎಸ್‌ಐಟಿ ಮುಂದೆ ದೂರುದಾರನಿಂದ ಬೇಡಿಕೆ

     

    ಒಂದೇ ಒಂದು ಸಾಕ್ಷಿ ಇಲ್ಲದೇ ಯಾಕೆ ವೀರೇಂದ್ರ ಹೆಗ್ಗಡೆ ಅವರನ್ನು ಆರೋಪಿ ಸ್ಥಾನಕ್ಕೆ ತರಲಾಗಿದೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು ಕಿಡಿಕಾರಿದರು.

    ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದುಕೊಂಡಿದ್ದು ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ಟೆಸ್ಟ್ ಮ್ಯಾಚ್‌ಗಿಂತಲೂ ಹೆಚ್ಚಾಗಿ ಧರ್ಮಸ್ಥಳದ ವಿಚಾರ ದಿನ‌ ನಡೆಯುತ್ತಿದೆ. ನಮ್ಮ ಧರ್ಮಾಧಿಕಾರಿ ಹೆಗ್ಗಡೆ ಅವರು ಯಾಕೆ ನಿಮಗೆ ಟಾರ್ಗೆಟ್? ಮೊದಲು ಅನಾಮಿಕನ ಪೂರ್ವಪರ ಬಹಿರಂಗ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿಅನಾಮಿಕ ಉಜಿರೆಯ ವ್ಯಕ್ತಿಯ ಮನೆಯಲ್ಲಿ ಉಳಿಯುತ್ತಿದ್ದಾನೆ, ನಿಮ್ಮ ವಶಕ್ಕೆ ಪಡೆಯಿರಿ: SITಗೆ ಮನವಿ

    ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ. ಮೂರು ತನಿಖಾ ಸಂಸ್ಥೆಯಿಂದ ತನಿಖೆಯಾಗಿದೆ. ಬೇರೆ ಇನ್ನೂ ಯಾವುದಾದರೂ ಮೂಲಕ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ ಎಂದು ತಿಳಿಸಿದರು.

     

  • ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಡಿಕೆಶಿ ಭೇಟಿ – ಧರ್ಮಾಧಿಕಾರಿಗಳ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ

    ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಡಿಕೆಶಿ ಭೇಟಿ – ಧರ್ಮಾಧಿಕಾರಿಗಳ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ

    ಮಂಗಳೂರು: ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಅವರು ರಾಜ್ಯದ ಒಂದಿಲ್ಲೊಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಲೇ ಇರುತ್ತಾರೆ. ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವರಲ್ಲಿ ಪ್ರಾರ್ಥಿಸುತ್ತಾರೆ.

    ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದ ಡಿಸಿಎಂ ಇಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ (Dharmasthala) ಒಂದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಿ, ಮಂಜುನಾಥಸ್ವಾಮಿಯ ದರ್ಶನ ಪಡೆದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಜೊತೆಗೆ ಹುಂಡಿಗೆ ಕಾಣಿಕೆಯನ್ನೂ ಅರ್ಪಿಸಿದ್ದಾರೆ. ಇದನ್ನೂ ಓದಿ: ನನ್ನ ಪ್ರಾರ್ಥನೆಗೆ ಫಲ ಸಿಕ್ಕಿದ್ದಕ್ಕೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ: ಡಿ.ಕೆ ಶಿವಕುಮಾರ್

    ಮಂಜುನಾಥನ ದರ್ಶನದ ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ (Veerendra Heggade) ಅವರನ್ನ ಭೇಟಿಯಾಗಿದ್ದಾರೆ. ಕಾಲಿಗೆ ಬಿದ್ದು ಆಶೀರ್ವಾದ ಸಹ ಪಡೆದಿದ್ದಾರೆ. ಬಳಿಕ ಕೆಲ ಕಾಲ ಗೌಪ್ಯ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ