Tag: veerendra heggade

  • ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ

    ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ

    ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ (Dharmasthala) ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನ್ನಿಧ್ಯವನ್ನ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ (Jagdeep Dhankhar) ಮಂಗಳವಾರ ಲೋಕಾರ್ಪಣೆ ಮಾಡಿದರು.

    ಪತ್ನಿ ಸಮೇತರಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಧನ್‌ಕರ್, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕಾಂಪ್ಲೆಕ್ಸ್ ಉದ್ಘಾಟಿಸಿ ಅಮೃತವರ್ಷಿಣಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದನ್ನೂ ಓದಿ: ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ

    ವೇದಿಕೆಯಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪರಾಷ್ಟ್ರಪತಿ ಕ್ಷೇತ್ರ ಕೆಲಸ ಕಾರ್ಯಗಳನ್ನ ಪ್ರಶಂಸಿಸಿ, ಇನ್ನಷ್ಟು ಒಳ್ಳೆ ಕಾರ್ಯ ನಡೆಯಲಿ ಎಂದು ಹಾರೈಸಿದರು.

    ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಮಂಜುನಾಥ ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಿದ್ದಾರೆ. ಲಕ್ಷಾಂತರ ಜನರು ಧರ್ಮಸ್ಥಳಕ್ಕೆ ಆಗಮಿಸುತ್ತಾರೆ. ಭಕ್ತರು ನಿಲ್ಲುವುದಕ್ಕಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಲಾಗಿದೆ. ಇದು ಕೇವಲ ಕಟ್ಟಡ ಮಾತ್ರ ಅಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಎಲ್ಲ ಜನರಿಗೆ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ. ಧಾರ್ಮಿಕ ಸಂಸ್ಥೆಗಳು ಈ ದೇಶದಲ್ಲಿ ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿವೆ. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿ. ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ

    ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪೊಟೆಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ‍್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ‍್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದರು.

    ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ, ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ, ಅತ್ಯುನ್ನತ ನಾಗರಿಕತೆ ನಮ್ಮದು. ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ಸಾಮಾಜಿಕ ಸದ್ಭಾವ ಎಲ್ಲಿಂದ ಬರಬೇಕು, ಭಾರತ ಮಾತೆ ಒಂದೇ ಎಂದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಹೇಳಿದರು.

  • ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ

    ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ

    – ಮಂಜುನಾಥ ಸ್ವಾಮಿಯ ದರ್ಶನಕ್ಕಿಲ್ಲ ಇನ್ನು ಕಷ್ಟ
    – ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ಅತ್ಯಾಧುನಿಕ ಕ್ಯೂ ಕಾಂಪ್ಲೆಕ್ಸ್

    ಮಂಗಳೂರು: ರಾಜ್ಯದ ಪುಣ್ಯ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಸರತಿ ಸಾಲಿನಲ್ಲೇ ನಿಲ್ಲಬೇಕಿತ್ತು. ಅದರಲ್ಲೂ ವೀಕೆಂಡ್, ರಜಾ ದಿನ, ವಿಶೇಷ ಹಬ್ಬ ಬಂದರೆ ಸರತಿ ಸಾಲಿನಲ್ಲಿ ನಿಲ್ಲುವ ಕಷ್ಟ ಹೇಳ ತೀರದು. ಭಕ್ತರ ಈ ಕಷ್ಟವನ್ನರಿತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು (Veerendra Heggade) ಇದಕ್ಕೊಂದು ಬದಲಿ ಆರಾಮದಾಯಕ ವ್ಯವಸ್ಥೆಯನ್ನು ಮಾಡಿದ್ದಾರೆ. ಅವರ ಪರಿಕಲ್ಪನೆಯ ಈ ವ್ಯವಸ್ಥೆ ರಾಜ್ಯದಲ್ಲೇ ಪ್ರಥಮ ಎನಿಸಿಕೊಂಡಿದ್ದು ಇಂದು ಲೋಕಾರ್ಪಣೆಗೊಳ್ಳಲಿದೆ.

    ತಿರುಪತಿ, ಶಿರಡಿ ಕ್ಷೇತ್ರಗಳಲ್ಲಿ ಕ್ಯೂ ಕಾಂಪ್ಲೆಕ್ಸ್ ಮೂಲಕ ನೀವು ತೆರಳಿ ದೇವರ ದರ್ಶನ ಪಡೆದಿರಬಹುದು. ಇದೀಗ ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಮೊದಲು ಎಂಬಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಕ್ಯೂ ಕಾಂಪ್ಲೆಕ್ಸ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ನಿಮಿಷಕ್ಕೆ 1,000 ಬುಲೆಟ್ ಸಿಡಿಸುತ್ತೆ ಮೇಡ್ ಇನ್ ಇಂಡಿಯಾ ಗನ್ – ಯುರೋಪ್ ದೇಶಗಳಿಂದ ಭಾರೀ ಬೇಡಿಕೆ

    ಇಲ್ಲಿಯವರೆಗೆ ಮಕ್ಕಳು, ಮಹಿಳೆಯರು, ವಯಸ್ಸಾದವರು ಸೇರಿದಂತೆ ಎಲ್ಲರೂ ಸಣ್ಣದಾದ ಈ ಸರತಿ ಸಾಲಿನಲ್ಲಿ ನಿಂತುಕೊಂಡೇ ಸಾಗಬೇಕಾಗಿತ್ತು. ಭಕ್ತರ ಈ ಕಷ್ಟವನ್ನರಿತ ಶ್ರೀ ಕ್ಷೇತ್ರ ಈಗ ಆಕರ್ಷಕವಾದ ವಿನ್ಯಾಸದ ತನ್ನದೇ ಪರಿಕಲ್ಪನೆಯ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಿದೆ. ದೇವಸ್ಥಾನದ (Manjunatha Swamy Temple) ಹಿಂಭಾಗದಲ್ಲಿ ಬರೋಬ್ಬರಿ 2,75,177 ಚದರ ಅಡಿ ವಿಸ್ತೀರ್ಣದ ಎರಡು ಅಂತಸ್ತಿನ ಕ್ಯೂ ಕಾಂಪ್ಲೆಕ್ಸ್ ತಲೆ ಎತ್ತಿದೆ.

    ಕಾಂಪ್ಲೆಕ್ಸ್‌ ವಿಶೇಷತೆ ಏನು?
    ಶ್ರೀ ಸಾನ್ನಿಧ್ಯ ಹೆಸರಿನ ಈ ಕಾಂಪ್ಲೆಕ್ಸ್ ಬಹಳಷ್ಟು ವಿಶಿಷ್ಟತೆಯಿಂದ ಕೂಡಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಲ್ಲದೇ ವಿಶಾಲವಾದ ಭವನದಲ್ಲಿ ಕುರ್ಚಿಯಲ್ಲಿ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು. ಎರಡು ಅಂತಸ್ಥಿನಲ್ಲಿ ತಲಾ 8 ರಂತೆ ಒಟ್ಟು 16 ವಿಶಾಲ ಭವನಗಳಿದ್ದು ಪ್ರತಿ ಭವನದಲ್ಲಿ 800 ಮಂದಿಯಂತೆ ಸುಮಾರು 12ಸಾವಿರ ಮಂದಿ ತಂಗಲು ಅವಕಾಶವಿದೆ.

    ಇಡೀ ಸಂಕೀರ್ಣ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ. ಕ್ಯೂ ಕಾಂಪ್ಲೆಕ್ಸ್‌ ಪ್ರವೇಶಿಸುತ್ತಿದ್ದಂತೆ ಎ.ಐ ತಂತ್ರಜ್ಞಾನದ ಕ್ಯಾಮೆರಾ ಎಲ್ಲಾ ಭಕ್ತರ ಸಂಖ್ಯೆಗಳನ್ನು ಲೆಕ್ಕ ಹಾಕುತ್ತದೆ. ಆರಂಭದಲ್ಲೆ ಸೇವಾ ರಶೀದಿ ಕೌಂಟರ್ ಇದ್ದು ಬಳಿಕ ಕೊಠಡಿಗೆ ಎಂಟ್ರಿ ನೀಡಲಾಗುತ್ತದೆ. ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದ್ದು, ಸ್ಟೇನ್ಲೆಸ್ ಸ್ಟೀಲ್ ಕುರ್ಚಿಗಳಿವೆ.

    ಭಕ್ತಾಧಿಗಳಿಗೆ ಮಾರ್ಗದರ್ಶನ ನೀಡಲು ಎಲ್ಲೆಡೆ ಡಿಜಿಟಲ್ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದ್ದು, ಭವನ ಸಂಖ್ಯೆ, ದರ್ಶನದ ಅವಧಿ, ದೇವಸ್ಥಾನದ ಇತಿಹಾಸ ಪ್ರಸಾರವಾಗುತ್ತಿರುತ್ತದೆ. ಪ್ರತಿ ಭವನದಲ್ಲಿಯೂ ಕ್ಯಾಂಟೀನ್, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೈಕೆ ಕೊಠಡಿ ಇದೆ.

    ವಿಶಾಲವಾದ ಭವನದಲ್ಲಿ ಕುರ್ಚಿ ಮೇಲೆ ಕುಳಿತು ನಿಗದಿತ ಸಮಯದಲ್ಲಿ ದೇವರ ದರ್ಶನಕ್ಕೆ ತೆರಳಬಹುದು. ಇದರಿಂದ 6-7 ಗಂಟೆ ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಒಂದೂವರೆ ಗಂಟೆಯೊಳಗೆ ದರ್ಶನ ಪಡೆಯಬಹುದು.

    ಸುಂದರ ಕಲಾಕೃತಿಗಳಿಂದ ಆಕರ್ಷಿಸುವ ಈ ಕ್ಯೂ ಕಾಂಪ್ಲೆಕ್ಸ್ ನ ಪ್ರತೀ ಕೊಠಡಿಯೊಳಗೂ ಸುಸಜ್ಜಿತ ಆಸನಗಳು, ಮಕ್ಕಳ ಆರೈಕೆ ಕೊಠಡಿ, ಟಿವಿ, ಉಚಿತ ಉಪಾಹಾರದ ವ್ಯವಸ್ಥೆ ಇದ್ದು ಇಡೀ ಕೊಠಡಿ 27 ಡಿಗ್ರಿ ಸೆಲ್ಸಿಯಸ್ ಕೂಲಿಂಗ್ ಸಿಸ್ಟಮ್‌ ಒಳಗೊಂಡಿರುವುದು ವಿಶೇಷ. ಇಂತಹ ಸುಸಜ್ಜಿತ ಆಧುನಿಕ ತಂತ್ರಜ್ಞಾನ ಕ್ಯೂ ಕಾಂಪ್ಲೆಕ್ಸ್ ಬೇರೆಲ್ಲೂ ಇಲ್ಲ ಅನ್ನೋ ಹೆಗ್ಗಳಿಕೆಗೂ ಪಾತ್ರವಾಗಿದೆ.

     

    ಇಂದು ಲೋಕಾರ್ಪಣೆ:
    ಕಳೆದ ಹಲವಾರು ವರ್ಷಗಳಿಂದ ಸರತಿ ಸಾಲಿನಲ್ಲೇ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆಯುತ್ತಿದ್ದ ಭಕ್ತರಿಗೆ, ಇನ್ನು ಮುಂದೆ ಉತ್ತಮ ರೀತಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಕ್ಯೂ ಕಾಂಪ್ಲೆಕ್ಸ್ ನ್ನು ಇಂದು ಮಧ್ಯಾಹ್ನ 2 ಗಂಟೆಗೆ ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಉದ್ಘಾಟಿಸಲಿದ್ದು, ಕೆಲವೇ ದಿನಗಳಲ್ಲಿ ಭಕ್ತರ ಉಪಯೋಗಕ್ಕೆ ಸಿಗಲಿದೆ.

     

  • ಸ್ವಯಂ ಪ್ರಚಾರ ಮಾಡಿಕೊಳ್ಳದೇ, ಪ್ರಶಸ್ತಿ ಸ್ವೀಕರಿಸದೇ ದೇಶಸೇವೆ ಮಾಡಿದ್ರು: ವಿರೇಂದ್ರ ಹೆಗ್ಗಡೆ ಸಂತಾಪ

    ಸ್ವಯಂ ಪ್ರಚಾರ ಮಾಡಿಕೊಳ್ಳದೇ, ಪ್ರಶಸ್ತಿ ಸ್ವೀಕರಿಸದೇ ದೇಶಸೇವೆ ಮಾಡಿದ್ರು: ವಿರೇಂದ್ರ ಹೆಗ್ಗಡೆ ಸಂತಾಪ

    ಹುಬ್ಬಳ್ಳಿ: ಮಾಜಿ ಪ್ರಧಾನಿ ಹಾಗೂ ಶ್ರೇಷ್ಠ ಆರ್ಥಿಕ ತಜ್ಞ ಡಾ. ಮನಮೋಹನ್‌ ಸಿಂಗ್‌ (ManMohan Singh) ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ (Veerendra Heggade) ಕಂಬನಿ ಮಿಡಿದರು.

    ಹುಬ್ಬಳ್ಳಿಯ (Hubballi) ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮನಮೋಹನ್‌ ಸಿಂಗ್‌ ಅವರು ಸ್ವಯಂ ಪ್ರಚಾರ ಮಾಡಿಕೊಳ್ಳದೇ, ಪ್ರಶಸ್ತಿಗಳನ್ನ ಸ್ವೀಕಾರ ಮಾಡದೇ ದೇಶಸೇವೆ ಮಾಡಿದರು. ರಾಜ್ಯ ಸಭೆಗೆ ವ್ಹೀಲ್‌ಚೇರ್‌ನಲ್ಲೇ ಬಂದು ಕುಳಿತುಕೊಳ್ಳುತ್ತಿದ್ದರು. ತಾವು ಪ್ರಧಾನಿಯಾಗಿದ್ದಾಗ ಅನೇಕ ಕಠಿಣ ಕಾನೂನುಗಳನ್ನ ಜಾರಿಗೊಳಿಸಿದರು. ಆರ್ಥಿಕತೆಯಲ್ಲಿ ಪ್ರಗತಿ ತಂದರಲ್ಲದೇ ದೇಶದ ಸುಸ್ಥಿರ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದರು ಎಂದು ಸ್ಮರಿಸಿದರು.

    ಈ ಹಿಂದೆ ಧರ್ಮಸ್ಥಳಕ್ಕೆ ಬಂದಿದ್ದಾಗ ʻಗ್ರಾಮ ಭಾರತʼ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರು ದೇಶದ ಪ್ರಧಾನಿ ಆದ ಬಳಿಕ ದೇಶ ಬಹಳ ಅದ್ಭುತ ಆರ್ಥಿಕ ಪ್ರಗತಿ ಕಂಡಿದೆ ಎಂದು ನುಡಿದರು.

    ಇಂದು ದೇಶ ಶ್ರೇಷ್ಠ ಆರ್ಥಿಕ ತಜ್ಞನನ್ನ ಕಳೆದುಕೊಂಡಿದೆ. ಆದ್ರೆ ಅವರು ಹಾಕಿದ ಬೀಜ ವೃಕ್ಷವಾಗಿ ಬೆಳೆದು ನಮ್ಮ ದೇಶಕ್ಕೆ ಶಕ್ತಿ ಕೊಡುತ್ತಿದೆ. ಹಾಗಾಗಿ ಇದು ಸಭೆಯಲ್ಲ, ಅವರಿಗೆ ಗೌರವ ಹಾಗೂ ಸಂತಾಪ ಸೂಚಿಸುವ ಕಾರ್ಯಕ್ರಮವಾಗಿದೆ. ದೇಶಕ್ಕಾಗಿ ದುಡಿದ ಅವರನ್ನ ನಾವೆಲ್ಲ ಸ್ಮರಿಸಬೇಕು ಎಂದು ನೆನೆದರು.

  • ಎಸ್‌ಡಿಎಂ ಲಾ ಕಾಲೇಜಿನ ಸುವರ್ಣ ಪಥ ಕಾನೂನು ಶಿಕ್ಷಣದ ವಿಕಸನಕ್ಕೆ ಹಿಡಿದ ಕೈಗನ್ನಡಿ :  ಅಟಾರ್ನಿ ಜನರಲ್ ಡಾ. ವೆಂಕಟ್ರಮಣಿ

    ಎಸ್‌ಡಿಎಂ ಲಾ ಕಾಲೇಜಿನ ಸುವರ್ಣ ಪಥ ಕಾನೂನು ಶಿಕ್ಷಣದ ವಿಕಸನಕ್ಕೆ ಹಿಡಿದ ಕೈಗನ್ನಡಿ : ಅಟಾರ್ನಿ ಜನರಲ್ ಡಾ. ವೆಂಕಟ್ರಮಣಿ

    ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ (SDM Law College) ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ದಿ. 15 ರಂದು ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಪೂರ್ವ ವಿದ್ಯಾರ್ಥಿ ಪುನರ್ ಮಿಲನ ಕಾರ್ಯಕ್ರಮ ನಡೆಯಿತು.

    ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರ (Veerendra Heggade) ಘನ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಸರಕಾರದ ಅಟಾರ್ನಿ ಜನರಲ್ ಡಾ. ಆರ್ ವೆಂಕಟ್ರಮಣಿ (R. Venkataramani) ಪ್ರದಾನ ಭಾಷಣ ಮಾಡಿದರು.

    ಭಾರತದ ಅಟಾರ್ನಿ ಜನರಲ್ ಡಾ. ವೆಂಕಟ್ರಮಣಿ ಮಾತನಾಡಿ, ಎಸ್‌ಡಿಎಂ ಕಾನೂನು ಕಾಲೇಜಿನ 50 ವರ್ಷಗಳ ಆಚರಣೆಯ ಭಾಗವಾಗಿರುವುದು ಸಂತಸ ತಂದಿದೆ. ಅಚಲ ವಿಶ್ವಾಸದಿಂದ, ಈ ಸಂಸ್ಥೆಯು ಒಂದು ಶತಮಾನವನ್ನು ಮೀರಿ ಬೆಳೆದಿದೆ, ಅಭಿವೃದ್ಧಿ ಹೊಂದಿದೆ. ಸುವರ್ಣ ಪಥ ಕಾರ್ಯಕ್ರಮ ಕಾನೂನು ಶಿಕ್ಷಣದ ವಿಕಸನಕ್ಕೆ ಹಿಡಿದ ಕೈಗನ್ನಡಿ. ಈ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವುದು ನನಗೆ ಹೆಮ್ಮೆಯ ಸಂಗತಿ ಎಂದು ಮಾರ್ಗದರ್ಶನ ನೀಡಿದ ಪ್ರಾಧ್ಯಾಪಕರಿಗೆ ಹೃತ್ಪೂರ್ವಕ ವಂದನೆ ಸಲ್ಲಿಸಿದರು.

    ಏಷ್ಯಾದಲ್ಲಿ ಕಾನೂನು ಶಿಕ್ಷಣ ಗಮನಾರ್ಹವಾಗಿ ಬೆಳೆದಿದೆ. ಕಾನೂನು ಶಿಕ್ಷಣದ ವಿಕಸನದಲ್ಲಿ ಹೆಗ್ಗಡೆಯವರ ಪಾತ್ರ ಮಹತ್ತರವಾದದ್ದು. ಪೂಜ್ಯ ಹೆಗ್ಗಡೆಯವರ ದೂರದೃಷ್ಟಿತ್ವದಿಂದ ಸಾಮಾನ್ಯರಿಗೂ ಕಾನೂನು ಶಿಕ್ಷಣ ಪಡೆಯುವುದು ಸಾಧ್ಯವಾಗಿದೆ. ಎಸ್‌ಡಿಎಂ ಸಂಸ್ಥೆಯ ಗುಣಮಟ್ಟದ ಶಿಕ್ಷಣದಿಂದ ಅಸಂಖ್ಯಾತ ವಿದ್ಯಾರ್ಥಿಗಳು ಕಾನೂನು ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿನ ಶಿಕ್ಷಣ ವ್ಯವಸ್ಥೆ ಅನೇಕರನ್ನು ಪ್ರೇರೇಪಿಸುತ್ತಿದೆ ಎಂದರು.

    ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ಪಠ್ಯ ಪುಸ್ತಕಗಳ ಕಲಿಕೆಯ ಜೊತೆಗೆ ಕ್ರೀಡೆ ಸೃಜನಾತ್ಮಕ ಕಲಿಕೆಗೂ ಒತ್ತುನಿಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬಹುದಾದ ವಿದ್ಯಾರ್ಥಿಗಳನ್ನು ರೂಪಿಸುತ್ತಿದೆ ಎಂದು ವೀರೇಂದ್ರ ಹೆಗ್ಗಡೆ ನುಡಿದರು.  ಇದನ್ನೂ ಓದಿ: Waqf: 150 ಕೋಟಿ ಆಫರ್| ವಿಜಯೇಂದ್ರ ಮೇಲಿನ ಸಿದ್ದರಾಮಯ್ಯ ಆರೋಪ ಸುಳ್ಳು: ಅನ್ವರ್ ಮಾಣಿಪ್ಪಾಡಿ

    ಒಂದು ಕಾಲದಲ್ಲಿ ಕಡಿಮೆ ಕಿಮ್ಮತ್ತು ಹೊಂದಿದ್ದ ವಕೀಲ ವೃತ್ತಿ ಇಂದು ಅತ್ಯಂತ ಗೌರವಾನ್ವಿತ ಹುದ್ದೆಗಳಲ್ಲಿ ಒಂದಾಗಿದೆ ಎಂದ ಅವರು ಎಸ್‌ಡಿಎಂ ಕಾನೂನು ಕಾಲೇಜು ಆರಂಭಿಸಿದ ದಿನಗಳನ್ನು ಮೆಲುಕು ಹಾಕುತ್ತಾ, ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಹೆಚ್ಚಿದ್ದ ಸಂದರ್ಭದಲ್ಲಿ ಕಾನೂನು ಶಿಕ್ಷಣದ ಪ್ರಾಮುಖ್ಯತೆಯನ್ನು ಅರಿತು ಕಾನೂನು ಕಾಲೇಜು ಆರಂಭಿಸಿ ಇದೀಗ ಕಾಲೇಜು ಯಶಸ್ವಿ ಐವತ್ತು ವರ್ಷ ಪೂರೈಸಿದೆ ಈ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳೆಲ್ಲ ಒಳ್ಳೆಯ ಹುದ್ದೆಯನ್ನು ಅಲಂಕರಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

    ಹೆಚ್ಚುವರಿ ಅಡ್ವೊಕೇಟ್ ಜನರಲ್ ಶಾಹುಲ್ ಹಮೀದ್ ರೆಹಮಾನ್, ಕೇರಳದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಆಂಟೋನಿ ಡೊಮಿನಿಕ್, ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾ. ಮೈಕೆಲ್ ಡಿ’ಕುನ್ಹಾ , ನಿವೃತ್ತ ಐಎಎಸ್ ಅಧಿಕಾರಿ ಶಾಮ್ ಭಟ್, ಸಿಂಬೋಸಿಸ್‌ ಕಾನೂನು ಶಾಲೆ ನಿರ್ದೇಶಕಿ ಡಾ ಶಶಿಕಲಾ ಗುರುಪುರ ಸೇರಿದಂತೆ ಪ್ರಮುಖ ಗಣ್ಯರು ಕಾನೂನು ದಿಗ್ಗಜರು,ಕಾಲೇಜಿನ ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

     

  • ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ರಾಖಿ ಕಟ್ಟಿದ ಶ್ರುತಿ

    ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ರಾಖಿ ಕಟ್ಟಿದ ಶ್ರುತಿ

    ಕ್ಷಾ ಬಂಧನದ (ಆ.19) ಹಿನ್ನೆಲೆಯಲ್ಲಿ ವಿಶೇಷ ಫೋಟೋಗಳನ್ನು ನಟಿ ಶ್ರುತಿ (Actress Shruthi) ಹಂಚಿಕೊಂಡಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರನ್ನು (Veerendra Heggade) ಭೇಟಿಯಾಗಿ ಶ್ರುತಿ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಈ ಕುರಿತು ನಟಿ ವಿಶೇಷ ನೋಟ್ ಅನ್ನು ಕೂಡ ಸೋಷಿಯಲ್ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ.

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ರಕ್ಷಾ ಬಂಧನದ ದಿನ ಅವರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ ನಿಮ್ಮೆಲರಿಗೂ ಒಳ್ಳೆಯದು ಮಾಡಲಿ ಎಂದು ನಟಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Shruthi (@shruthi__krishnaa)


    ಮಗಳು ಗೌರಿ (Gowri) ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ನಟಿ ರಾಖಿ ಕಟ್ಟಿ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ:ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಮೂಡಿ ಬಂದ ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್

    ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ, ‘ಕಾಟೇರ’ (Kaatera) ಸಿನಿಮಾ ಸಕ್ಸಸ್ ನಂತರ ಶ್ರುತಿ ‘ಗಿಚ್ಚಿ ಗಿಲಿ ಗಿಲಿ’ ಕಾರ್ಯಕ್ರಮದಲ್ಲಿ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಗಳು ಗೌರಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಮಗಳು ಸಿನಿಮಾಗೆ ಬರುವ ಬಗ್ಗೆ ನಟಿ ಅಧಿಕೃತವಾಗಿ ತಿಳಿಸಿದ್ದಾರೆ. ಸಿನಿಮಾ ಕುರಿತು ಮಾಹಿತಿ ಮುಂದಿನ ದಿನಗಳಲ್ಲಿ ಸಿಗಲಿದೆ.

  • ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ ರೇವಣ್ಣ

    ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ ರೇವಣ್ಣ

    -ಕಾನೂನಿನ ಬಗ್ಗೆ ಗೌರವ, ದೇವರ ಮೇಲೆ ನಂಬಿಕೆ ಇದೆ

    ಮಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D. Revanna) ಟೆಂಪಲ್ ರನ್ ಮುಂದುವರಿದಿದ್ದು, ಇಂದು (ಮೇ 27) ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಮುಂಜುನಾಥ ಸ್ವಾಮಿ ದೇವಸ್ಥಾನಕ್ಕೆ (Sri Manjunatheshwara Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಒಂದು ಗಂಟೆಗಳ ಕಾಲ ದೇವಸ್ಥಾನದ ಗರ್ಭಗುಡಿಯ ಮುಂಭಾಗದಲ್ಲೇ ನಿಂತು ಸರ್ವ ಸೇವೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು (Veerendra Heggade) ಭೇಟೆಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: ಮಧ್ಯರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ರೆಮಲ್ ಸೈಕ್ಲೋನ್ – ರೈಲು, ವಿಮಾನ ಹಾರಾಟ ಸ್ಥಗಿತ

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರುತ್ತೇನೆ. ನಾನು ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ, ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ.

    ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರೋ ಬಗ್ಗೆಯೂ ಗೊತ್ತಿಲ್ಲ. ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅಲ್ಲಿಂದ ಅವರು ತೆರಳಿದ್ದಾರೆ.

    ಭಾನುವಾರ (ಮೇ 26) ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಅತ್ತಿಗೆಯಿಂದ ದೂರ ಇರಿ ಅಂದಿದ್ದಕ್ಕೆ ಮೈದುನನ ಕಲ್ಲಿನಿಂದ ಜಜ್ಜಿ ಕೊಲೆಗೈದ್ರು!

  • ವಿಶ್ವದ ಏಕೈಕ ಮಂದಸ್ಮಿತ ಬಾಹುಬಲಿಗೆ ಗುರುವಾರ ಮಹಾಮಸ್ತಕಾಭಿಷೇಕ

    ವಿಶ್ವದ ಏಕೈಕ ಮಂದಸ್ಮಿತ ಬಾಹುಬಲಿಗೆ ಗುರುವಾರ ಮಹಾಮಸ್ತಕಾಭಿಷೇಕ

    ಮಂಗಳೂರು: ಇಲ್ಲಿನ ವೇಣೂರು ಬಾಹುಬಲಿ ಸ್ವಾಮಿಗೆ  (Venuru Bahubali) ಗುರುವಾರ ಮಹಾಮಸ್ತಕಾಭಿಷೇಕ ನಡೆಯಲಿದೆ. ಮಾ.1ರ ವರೆಗೆ ಈ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ನಡೆಯಲಿದೆ.

    ಮಹಾಮಸ್ತಕಾಭಿಷೇಕದ ಈ 9 ದಿನಗಳಲ್ಲೂ ಸಂಜೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ಸಂಜೆ 5:30ಕ್ಕೆ ಮಹಾಮಸ್ತಕಾಭಿಷೇಕ ಆರಂಭಗೊಳ್ಳಲಿದ್ದು, ಜಲ, ಕಷಾಯ, ಕಲ್ಕಚೂರ್ಣ, ಅರಶಿನ, ಶ್ರೀಗಂಧ, ಚಂದನ, ಅಷ್ಟಗಂಧ, ಹಾಲು, ಎಳನೀರು, ಕೇಸರಿ ದ್ರವ್ಯಗಳಿಂದ ಮಸ್ತಕಾಭಿಷೇಕ ನೆರವೇರಲಿದೆ. ಇದನ್ನೂ ಓದಿ: ಆಗುಂಬೆ ಘಾಟ್- ಒಂದು ಬಾರಿ ಹೋದ್ರೆ ಮತ್ತೆ ಮತ್ತೆ ಸೆಳೆಯುವ ಏಕೈಕ ಸ್ಥಳ

    ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ (Veerendra Heggade) ಅವರ ಅಧ್ಯಕ್ಷತೆಯಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ. ದಿಗಂಬರ ಮುನಿಶ್ರೀಗಳಾದ 108ನೇ ಅಮೋಘಕೀರ್ತಿ ಮಹರಾಜ್ ಮತ್ತು 108ನೇ ಅಮರಕೀರ್ತಿ ಮಹಾರಾಜ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K. Shivakumar) ಭಾಗವಹಿಸಲಿದ್ದಾರೆ.

    1604ರಲ್ಲಿ 35 ಅಡಿ ಎತ್ತರದ ಏಕಶಿಲಾ ಬಾಹುಬಲಿ ಮೂರ್ತಿಯನ್ನು ಅಜಿಲ ಅರಸ ತಿಮ್ಮಣ್ಣ ಪ್ರತಿಷ್ಠಾಪಿಸಿದ್ದರು. ವಿಶ್ವದಲ್ಲಿರುವ ಏಕೈಕ ಮಂದಸ್ಮಿತ ಬಾಹುಬಲಿ ಮೂರ್ತಿ ಇದಾಗಿದೆ. ಪ್ರತೀ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಇದನ್ನೂ ಓದಿ: ಬೆಳಗಾವಿ ಗಡಿವಿವಾದ: ಹೈವೋಲ್ಟೇಜ್ ಮೀಟಿಂಗ್ ಕರೆದ ಮಹಾರಾಷ್ಟ್ರ ಸರ್ಕಾರ

  • ಧರ್ಮಸ್ಥಳ, ಧರ್ಮಾಧಿಕಾರಿ ಕುಟುಂಬದ ವಿರುದ್ಧ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

    ಧರ್ಮಸ್ಥಳ, ಧರ್ಮಾಧಿಕಾರಿ ಕುಟುಂಬದ ವಿರುದ್ಧ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

    ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Dr. D Veerendra Heggade) ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆಯ ಆದೇಶ ನೀಡಿದೆ.

     

    ಸೌಜನ್ಯ (Soujanya Case) ಅತ್ಯಾಚಾರ, ಹತ್ಯೆಯ ಮರು ತನಿಖೆಗೆ ಒತ್ತಾಯಿಸಿ ಸಭೆ, ಪ್ರತಿಭಟನೆಗಳು ನಡೆಯುತ್ತಿದೆ. ಈ ವೇಳೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ದುರ್ಮರಣ

    ಶ್ರೀ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಬಗ್ಗೆ ಸಾಕಷ್ಟು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಹಲವು ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿದೆ. ಆದರೂ ಹೇಳಿಕೆಗಳನ್ನು ಮುಂದುವರಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ (Mahesh Shetty Thimarodi) ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.

    ಇನ್ನು ಮುಂದೆ ಅವಹೇಳನಕಾರಿ ಹೇಳಿಕೆ ನೀಡದಂತೆ ಆದೇಶಿಸಿದ ಹೈಕೋರ್ಟ್ (HighCourt), ಸರ್ಕಾರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಸೂಚಿಸಿದ್ದು, ಕೋರ್ಟ್ ಆದೇಶ ಉಲ್ಲಂಘಿಸದಂತೆ ಎಚ್ಚರ ವಹಿಸಲು ಸೂಚಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೌಜನ್ಯ ಕೊಲೆ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ- ಸಿದ್ದಸೇನ ಮುನಿ ಮಹಾರಾಜ

    ಸೌಜನ್ಯ ಕೊಲೆ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ- ಸಿದ್ದಸೇನ ಮುನಿ ಮಹಾರಾಜ

    ಬೆಳಗಾವಿ: ಧರ್ಮಸ್ಥಳದ ಸೌಜನ್ಯ (Dharmasthala Sowjanya Case) ಕೊಲೆ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ ನಡೆದಿದೆ ಎಂದು ಹಲಗಾ-ಬಸ್ತವಾಡ ಆಶ್ರಮದ ಬಾಲಾಚಾರ್ಯ ಸಿದ್ದಸೇನ ಮುನಿ ಮಹಾರಾಜ ಆರೋಪಿಸಿದ್ದಾರೆ.

    ತಾಲೂಕಿನ ಹಲಗಾ-ಬಸ್ತವಾಡ ಗ್ರಾಮದ ಆಶ್ರಮದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು. ಮೃತ ವಿದ್ಯಾರ್ಥಿನಿ ಸೌಜನ್ಯ ನಮ್ಮ ತಂಗಿ, ತಾಯಿಯ ಸಮಾನ. ಆಕೆಯ ಹತ್ಯೆಯಾಗಿ 10 ವರ್ಷಗಳೇ ಕಳೆದಿವೆ. ಆದರೂ ಆಕೆಯ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಪ್ರಕರಣದ ತನಿಖಾಧಿಕಾರಿಗಳು ನಿಜವಾದ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು. ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರನ್ನು ಎಳೆದು ತರಲಾಗುತ್ತಿದೆ ಎಂದರು.

    ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade) ಹೆಸರನ್ನು ಕೆಡಿಸುವ ಯತ್ನ ನಡೆದಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ದೇಶದ ಎಲ್ಲ ಭಾಗಗಳ ಎಲ್ಲ ಧರ್ಮದ ಭಕ್ತರು ಬರುತ್ತಾರೆ. ಜಾತಿ-ಧರ್ಮ ಮೀರಿದ ದೇಶದ ಪ್ರಮುಖ ಶ್ರದ್ಧಾ ಕೇಂದ್ರ ಧರ್ಮಸ್ಥಳ. ಆದರೆ ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಪ್ಪು ಚುಕ್ಕಿ ತರುವ ಕೆಲಸ ಯಾರೂ ಮಾಡಬಾರದು. ಕಾನೂನು ಪ್ರಕಾರ, ನಿಜವಾದ ಆರೋಪಿಗೆ ಶಿಕ್ಷೆ ಆಗಬೇಕೆಂದು ವೀರೇಂದ್ರ ಹೆಗ್ಗಡೆ ಕೂಡ ಹೇಳಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್‍ಗೆ ಹೋಗಿ ಆದರೂ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಬಾಲಾಚಾರ್ಯ ಸಿದ್ದಸೇನ ಮುನಿ ಮಹಾರಾಜ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೌಜನ್ಯಾ ಕೇಸ್ ಮರು ತನಿಖೆಯಾಗ್ಲಿ- ಧರ್ಮಸ್ಥಳದ ಗೌರವ, ಪ್ರತಿಷ್ಠೆಯನ್ನ ಹೇಗಾದ್ರೂ ಕಾಪಾಡ್ತೇವೆ: VHP

    ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಕಾಮಕುಮಾರ ಹತ್ಯೆ ಪ್ರಕರಣಕ್ಕೆ ವಿಚಾರಕ್ಕೆ ಮುನಿಗಳ ಹತ್ಯೆ ಪ್ರಕರಣ ಸಂಬಂಧ ದೇಶಾದ್ಯಂತ ಹೋರಾಟಗಳು ನಡೆದಿವೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ನೀಡಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

    ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

    – ಧರ್ಮಾಧಿಕಾರಿ ಮೇಲಿನ ಆರೋಪ ಸಹಿಸಲ್ಲ

    ಹುಬ್ಬಳ್ಳಿ: ಕರ್ನಾಟಕ ಶಾಂತಿದೋಟ ಇಂತಹ ಹಿಂಸೆ ನಡೆಯಬಾರದು. ಸೌಜನ್ಯ (Sowjanya Case) ಹತ್ಯೆ ಪ್ರಕರಣ ನನಗೆ ಸಾಕಷ್ಟು ನೋವು ಕೊಟ್ಟಿದೆ. ಇದನ್ನೇ ನೆಪವಾಗಿಟ್ಟುಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade) ಮೇಲೆ ಆರೋಪ ಮಾಡುವುದನ್ನು ನಾನು ಸಹಿಸುವುದಿಲ್ಲ ಅಂತ ಜೈನ ಮುನಿ ಗುಣದರನಂದಿ ಶ್ರೀ ಹೇಳಿದ್ದಾರೆ.

    ಹುಬ್ಬಳ್ಳಿ ಹೊರ ವಲಯದ ನವಗ್ರಹ ತೀರ್ಥ ಪೀಠದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣಿನ ಮೇಲೆ ಅತ್ಯಾಚಾರ, ಹತ್ಯೆ ಆಗಬಾರದು. ಎಲ್ಲರ ಜೀವ ಒಂದೇ. ಸೌಜನ್ಯ ಹತ್ಯೆಯನ್ನು ನಾನು ಖಂಡನೆ ಮಾಡುತ್ತೇನೆ. ಈ ಹತ್ಯೆ ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು. ಆದರೆ ವೀರೇಂದ್ರ ಹೆಗ್ಗಡೆಯವರ ಮೇಲೆ ಸುಮ್ಮನೆ ಸುಮ್ಮನೆ ಆರೋಪ ಸರಿಯಲ್ಲ ಎಂದರು.

    ಕರ್ನಾಟಕ ರಾಜ್ಯವನ್ನು ದೇಶಕ್ಕೆ ವಿಶ್ವಕ್ಕೆ ಪರಿಚಯ ಮಾಡಿದವರು, ಧರ್ಮಸ್ಥಳಕ್ಕೆ (Dharmasthala) ಅಪವಿತ್ರ ಶಬ್ದಗಳು ಬರಬಾರದು. ಪದೇ ಪದೇ ಅಪ್ರಚಾರ ಮಾಡಿ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಅವರ ವಿರುದ್ಧ ಈ ರೀತಿ ಅಪ್ರಚಾರ ಬೇಡ. ಯಾವುದೇ ಆಧಾರವಿಲ್ಲದೆ ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುವುದು ಸರಿಯಲ್ಲ. ನಾನು ಅವರ ಜೊತೆಗೆ ಫೋನ್ ನಲ್ಲಿ ಮಾತನಾಡಿದ್ದೇನೆ. ಅವರು ನನ್ನ ಬಳಿ ನೋವು ತೋಡಿಕೊಂಡಿದ್ದಾರೆ. ಅವರು ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆ ನೀಡಲಿ. ಹತ್ಯೆಯ ಬಗ್ಗೆ ಮತ್ತೆ ತನಿಖೆ ಮಾಡಲಿ. ನಮಗೆ ಸಂವಿಧಾನದ ಮತ್ತು ಸರ್ಕಾರದ ಮೇಲೆ ನಂಬಿಕೆಯಿದೆ ಎಂದು ಹೇಳಿದರು.

    ಧರ್ಮಸ್ಥಳಕ್ಕೆ ಹೋಗದಿರುವ ಬಗ್ಗೆ ಶುರುವಾಗಿರುವ ಅಭಿಯಾನದ ಬಗ್ಗೆ ಮಾತನಾಡಿದ ಅವರು, ನ್ಯಾಯ ಮತ್ತು ಧರ್ಮ ಬೇರೆ ವ್ಯವಸ್ಥೆ. ಧರ್ಮ ಪರಮಾತ್ಮ ವ್ಯವಸ್ಥೆ ಮಂಜುನಾಥ ಯಾವುದೇ ಪಾಪ ಮಾಡಿಲ್ಲ. ಯಾರಿಗೂ ಬಾ ಅಂತ ಕರೆಯವುದಿಲ್ಲ. ನಾಸ್ತಿಕರಿಗೆ ಈ ಬಗ್ಗೆ ಏನು ಹೇಳಿದರೂ ಅರ್ಥವಾಗವುದಿಲ್ಲ. ಯಾರಿಗೆ ದೇವರ ಮೇಲೆ ನಂಬಿಕೆಯಿದೆ ಅವರು ಬಂದೆ ಬರುತ್ತಾರೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]