Tag: Veerendra Puppy

  • ಅಕ್ರಮ ಹಣ ವರ್ಗಾವಣೆ ಕೇಸ್‌ – ʻಕೈʼ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ

    ಅಕ್ರಮ ಹಣ ವರ್ಗಾವಣೆ ಕೇಸ್‌ – ʻಕೈʼ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ

    ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್‌ ಆ್ಯಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ (Veerendra Puppy) ಅವರನ್ನ ಮತ್ತೆ 6 ದಿನ ಇಡಿ (ED – ಜಾರಿ ನಿರ್ದೇಶನಾಲಯ) ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ.

    ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (People’s Representatives Court) ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಅವರಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು ಎಂದು ಕೋರ್ಟ್‌  ಸೂಚಿಸಿದೆ. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

    veerendra puppy 2 1

    ಇದರೊಂದಿಗೆ ಶುದ್ಧವಾದ ಆಹಾರ, ನೀರು, ಮೆಡಿಸಿನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು, ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್‌ ಹೇಳಿದೆ. ಇದನ್ನೂ ಓದಿ: ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

    ವಿರೇಂದ್ರ ಪಪ್ಪಿ ಇಡಿ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಡಿ ಪರ ವಕೀಲ ಪ್ರಮೋದ್ ಚಂದ್ರ ವಾದ ಮಂಡಿಸಿದ್ರೆ, ಆರೋಪಿ ವಿರೇಂದ್ರ ಪಪ್ಪಿ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರು. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    veerendra puppy 5

    ಏನಿದು ಪ್ರಕರಣ?
    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ (ED Raid) ನಡೆಸಿತ್ತು.

  • ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ – ವೀರೇಂದ್ರ ಪಪ್ಪಿ 4 ದಿನ ಇಡಿ ಕಸ್ಟಡಿಗೆ

    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ – ವೀರೇಂದ್ರ ಪಪ್ಪಿ 4 ದಿನ ಇಡಿ ಕಸ್ಟಡಿಗೆ

    ಬೆಂಗಳೂರು: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚಿತ್ರದುರ್ಗ (Chitradurga) ಶಾಸಕ ವೀರೇಂದ್ರ ಪಪ್ಪಿಯವರನ್ನು (Veerendra Puppy) 35ನೇ ಸಿಸಿಹೆಚ್ ನ್ಯಾಯಾಲಯ 4 ದಿನ ಇಡಿ (Enforcement Directorate) ಕಸ್ಟಡಿಗೆ ಒಪ್ಪಿಸಿದೆ.

    ಜನಪ್ರತಿನಿಧಿಗಳ ನ್ಯಾಯಾಧೀಶರು ರಜೆಯಲ್ಲಿದ್ದ ಹಿನ್ನೆಲೆ 35ನೇ ಸಿಸಿಹೆಚ್ ಜಡ್ಜ್ ಮುಂದೆ ಇಡಿ ಹಾಜರುಪಡಿಸಿತ್ತು. ಶನಿವಾರ ವೀರೇಂದ್ರ ಪಪ್ಪಿ ಸಿಕ್ಕಿಂನ ಗ್ಯಾಂಗ್ಟಕ್‍ನಲ್ಲಿ ಬಂಧಿಸಲಾಗಿತ್ತು. ಶನಿವಾರ ರಾತ್ರಿಯೇ ಸಿಕ್ಕಿಂನಿಂದ ಬೆಂಗಳೂರಿಗೆ ಕರೆತಂದಿದ್ದ ಇಡಿ ಇವತ್ತು ಬೆಳಗ್ಗೆ ಬೌರಿಂಗ್ ಹಾಸ್ಪಿಟಲ್‍ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಶಾಂತಿನಗರ ಇಡಿ ಕಚೇರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

    ದಾಳಿ ವೇಳೆ ಶಾಸಕ ಪಪ್ಪಿ ಮನೆಯಲ್ಲಿ 12 ಕೋಟಿ ರೂ. ನಗದು, 1 ಕೋಟಿ ರೂ. ವಿದೇಶಿ ಹಣ, 6 ಕೋಟಿ ರೂ. ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, ಐಷಾರಾಮಿ ಕಾರು, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇಡಿ ಸೀಜ್ ಮಾಡಿತ್ತು. ಇಡಿ 14 ದಿನ ತಮ್ಮ ಕಸ್ಟಡಿಗೆ ನೀಡಿ ಅಂತ ರಿಮ್ಯಾಂಡ್‍ನಲ್ಲಿ ಮನವಿ ಮಾಡಿತ್ತು. ಇದೇ ವೇಳೆ ವಿರೇಂದ್ರ ಪಪ್ಪಿ ಸಹೋದರ ಕೆ.ಸಿ. ನಾಗರಾಜ್ ಹಾಗೂ ಬೆಂಬಲಿಗರು ಇಡಿ ಕಚೇರಿ ಮುಂದೆ ಜಮಾಯಿಸಿದ್ದರು.

    ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

    ವೀರೇಂದ್ರ ಪಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

  • ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

    ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

    – 12 ಕೋಟಿ ನಗದು, 6 ಕೋಟಿ ಮೌಲ್ಯದ ಚಿನ್ನ, 10 ಕೆ.ಜಿ ಬೆಳ್ಳಿ ವಶಕ್ಕೆ ಪಡೆದ ಇ.ಡಿ

    ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ (Sikkim) ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ.

    ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ಇ.ಡಿ ದಾಖಲೆ ಪರಿಶೀಲನೆ ಮಾಡಿದೆ. ಈ ವೇಳೆ 12 ಕೋಟಿ ನಗದು, 1 ಕೋಟಿ ವಿದೇಶಿ ಹಣ, 6 ಕೋಟಿ ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇ.ಡಿ ಸೀಜ್ ಮಾಡಿದೆ. ಇದನ್ನೂ ಓದಿ: ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

    ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ‌ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆದಾಯಿತು, ನಾರ್ಕೋ ಅನಾಲಿಸಿಸ್‌ ಟೆಸ್ಟ್‌ ಮಾಡ್ಬೇಕು: ಗಿರೀಶ್‌ ಮಟ್ಟಣ್ಣನವರ್‌

    ವೀರೇಂದ್ರ ಪಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.

    1 ಕೋಟಿ ಫಾರಿನ್ ಕರೆನ್ಸಿ ಪತ್ತೆ
    ಇದಲ್ಲದೇ ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊದಲ್ಲಿ ಕ್ಯಾಸಿನೊ ಆಭರಣ, ವಿವಿಧ ಬ್ಯಾಂಕುಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳು, ತಾಜ್, ಹಯಾತ್ ಮತ್ತು ಲೀಲಾ ಪಂಚತಾರಾ ಹೋಟೆಲ್‌ಗಳ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳು, 6 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇದರ ಜೊತೆಗೆ ಐಷಾರಾಮಿ ಕಾರು, 12 ಕೋಟಿ ಮೌಲ್ಯದ ಇಂಡಿಯನ್ ಕರೆನ್ಸಿ, 1 ಕೋಟಿ ಫಾರಿನ್ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಇಡಿ ದಾಳಿಗೆ ಕಾರಣ ಏನು?
    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ (ED Raid) ನಡೆಸಿತ್ತು. ಇದನ್ನೂ ಓದಿ: ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

  • ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

    ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

    ಬೆಂಗಳೂರು: ಅಕ್ರಮ ಆನ್‌ಲೈನ್ (Illegal Online) ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ (Offline Betting) ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್‌ ಶಾಸನ ವೀರೇಂದ್ರ ಪಪ್ಪಿ (K C Veerendra Puppy) ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ (Casino) ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ.  ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

     

    ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

    ಆರೋಪಿಯ ಸಹೋದರ ಕೆ ಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್‌ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ ಈ ಘಟಕಗಳು ಕೆ ಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ.

    ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಕಾಂಗ್ರೆಸ್‌ ನಾಯಕಿ ಕುಸುಮಾ ಎಚ್ ಅವರ ಸಹೋದರ ಅನಿಲ್ ಗೌಡ ವೀರೇಂದ್ರ ಪಪ್ಪಿ ಜೊತೆ ವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಅವರ ಮನೆಯ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗಿದೆ.

  • ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

    – ಮನೆ, ಕಂಪನಿಗಳಲ್ಲಿ ಮುಂದುವರೆದ ಶೋಧ

    ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ (Veerendra Puppy) ಅವರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆನ್ನಲ್ಲೇ ಸಿಕ್ಕಿಂನಲ್ಲಿ (Sikkim) ಶಾಸಕರನ್ನ ವಶಕ್ಕೆ ಪಡೆಯಲಾಗಿದೆ.

    ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ (Illegal Money Transfer), ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಬೆಳಿಗ್ಗೆಯೇ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋವಾ ಸೇರಿದಂತೆ 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ಈ ನಡುವೆ ಶಾಸಕರು ಸಿಕ್ಕಿಂನಲ್ಲಿ ಸ್ನೇಹಿತರೊಂದಿಗೆ ಇದ್ದಾಗ ವಶಕ್ಕೆ ಪಡೆಯಲಾಗಿದೆ.

    ಇಡಿ ದಾಳಿಗೆ ಕಾರಣ ಏನು?
    ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ (ED Raid) ನಡೆಸಿತ್ತು. ದಾಳಿ ವೇಳೆ ಶಾಸಕರು ಸಿಕ್ಕಿಂ ಪ್ರವಾಸದಲ್ಲಿರುವುದಾಗಿ ತಿಳಿದುಬಂದಿತ್ತು. ಹೊರತಾಗಿಯೂ ಅಧಿಕಾರಿಗಳ ಶೋಧ ಮುಂದುವರಿದಿದೆ.

    ಶಾಸಕರಿಗೆ ಸೇರಿದ ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್, ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್ ಕಂಪನಿಗಳು ಅಕ್ರಮ ಎಸಗಿವೆ ಎಂದು ಆರೋಪಿಸಲಾಗಿದೆ. ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶೋಧ ಕಾರ್ಯ ನಡೆಸುತ್ತಿದ್ದಾರೆ. 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಖಾಸಗಿ ವಾಹನಗಳಲ್ಲಿ ಆಗಮಿಸಿದ್ದಾರೆ. ಮಹತ್ವದ ದಾಖಲೆಗಳನ್ನ ತೆಗೆಯುವ ಪ್ರಯತ್ನ ಮಾಡಲಾಗಿದೆ.

    ಕುಸುಮಾ ಮನೆ ಮೇಲೂ ದಾಳಿ
    ಇನ್ನೂ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ಕಾಂಗ್ರೆಸ್‌ ಮುಖಂಡೆ ಕುಸುಮಾ ಹನುಮಂತ ರಾಯಪ್ಪ ಅವರ ಮುದ್ದಿಪಾಳ್ಯ ರಸ್ತೆಯಲ್ಲಿರುವ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ. ಶೋಧ ಮುಂದುವರಿದಿದೆ.

  • ಚಿತ್ರದುರ್ಗ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ

    ಚಿತ್ರದುರ್ಗ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ

    ಚಿತ್ರದುರ್ಗ: ಇಲ್ಲಿನ ಕಾಂಗ್ರೆಸ್‌ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ (Veerendra Puppy) ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಇಡಿ (ಜಾರಿ ನಿರ್ದೇಶನಾಲಯ) ದಾಳಿ (ED Raid) ನಡೆಸಿದೆ.

    ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರನಗರದಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ವಿರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿಯಾಗಿದೆ. ಇದನ್ನೂ ಓದಿ: ಕೋಲಾರದಲ್ಲಿ ಕೊಲೆ, ತಮಿಳುನಾಡಿನಲ್ಲಿ ಶವ ಪತ್ತೆ – 6 ವರ್ಷಗಳ ಬಳಿಕ ಪ್ರಕರಣ ಭೇದಿಸಿದ ಶಿಡ್ಲಘಟ್ಟ ಪೊಲೀಸ್‌

    ದಾಳಿ ನಡೆಸಿ ಶಾಕ್‌ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಎಚ್ಚೆತ್ತ ಕೃಷಿ ಅಧಿಕಾರಿಗಳು – ಎಪಿಎಂಸಿ ಆವರಣದ ಕಮರ್ಷಿಯಲ್ ಅಂಗಡಿಗಳಿಗೆ ಲಾಕ್

  • ಕಳಪೆ ಊಟ ಕೊಟ್ಟರೆ ವಾರ್ಡನ್‍ಗೆ ತಿನ್ನಿಸಿ, ಹೊಡೆಯಿರಿ – ಶಾಸಕರ ಹೇಳಿಕೆ ವೈರಲ್

    ಕಳಪೆ ಊಟ ಕೊಟ್ಟರೆ ವಾರ್ಡನ್‍ಗೆ ತಿನ್ನಿಸಿ, ಹೊಡೆಯಿರಿ – ಶಾಸಕರ ಹೇಳಿಕೆ ವೈರಲ್

    ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಭೇಟಿ ನೀಡಿದ್ದ ಶಾಸಕರೊಬ್ಬರು ವಾರ್ಡ್‍ನ್‍ಗೆ ಹೊಡೆಯಿರಿ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಕಾನೂನು ಪದವಿಯ ವಿದ್ಯಾರ್ಥಿಗಳು ಹಾಸ್ಟೆಲ್‍ನಲ್ಲಿ ಸರಿಯಾದ ಊಟದ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ (Veerendra Puppy) ಹಾಸ್ಟೆಲ್‍ಗೆ ಭೇಟಿ ನೀಡಿದ್ದರು. ಈ ವೇಳೆ ವಿದ್ಯಾರ್ಥಿಗಳು ಕೊಳೆತ ತರಕಾರಿ ಹಾಕಿದ ಉಪಾಹಾರ, ಊಟ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಚಿತ್ರದುರ್ಗ (Chitradurga) ಶಾಸಕರು, ಇನ್ನೊಮ್ಮೆ ಈ ರೀತಿ ಕಳಪೆ ಊಟ, ಉಪಾಹಾರ ಕೊಟ್ಟರೆ ಅದನ್ನು ವಾರ್ಡನ್‍ಗೆ ತಿನ್ನಿಸಿ. ಬಳಿಕ ರೂಮಲ್ಲಿ ಹಾಕಿ ಚೆನ್ನಾಗಿ ಹೊಡೆಯಿರಿ. ಏನಾದರೂ ಸಮಸ್ಯೆಯಾದರೆ ನಾನಿರುತ್ತೇನೆ ಯೋಚಿಸಬೇಡಿ ಎಂದಿದ್ದಾರೆ. ಶಾಸಕರು ಹೇಳಿದ್ದಾರೆ ಎನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಪ್ರೇಯಸಿ ಮೇಲೆ ಮಾರಣಾಂತಿಕ ಹಲ್ಲೆ – ಟೆಕ್ಕಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]