Tag: Veergati

  • ಅಂದು ಸಲ್ಮಾನ್ ಖಾನ್ ಜೊತೆ ನಟಿಸಿದ್ದ ನಟಿಗೆ ಇಂದು ಟೀ ಕುಡಿಯಲು ಹಣವಿಲ್ಲ!

    ಅಂದು ಸಲ್ಮಾನ್ ಖಾನ್ ಜೊತೆ ನಟಿಸಿದ್ದ ನಟಿಗೆ ಇಂದು ಟೀ ಕುಡಿಯಲು ಹಣವಿಲ್ಲ!

    ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಜೊತೆ ‘ವೀರ್ ಗತಿ’ ಚಿತ್ರದಲ್ಲಿ ನಟಿಸಿ ಆಗಿನ ಕಾಲದಲ್ಲಿ ಪ್ರಸಿದ್ಧ ನಟಿಯಾಗಿದ್ದ ಪೂಜಾ ದಡ್ವಾಲ್ ಆರ್ಥಿಕ ಸ್ಥಿತಿ ಹದಗೆಟ್ಟಿದೆ.

    ಪೂಜಾ 90ರ ದಶಕದ ನಟಿಯಾಗಿದ್ದು, ಸಲ್ಮಾನ್ ಖಾನ್ ಜೊತೆ ವೀರ್ ಗತಿ ಚಿತ್ರದಲ್ಲಿ ನಟಿಸಿದ್ದರು. ಆದರೆ ಈಗ ಪೂಜಾ ಆರೋಗ್ಯದ ಸಮಸ್ಯೆ ಹಾಗೂ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯಲು ಕೂಡ ಹಣವಿಲ್ಲದೇ ಪರದಾಡುತ್ತಿದ್ದಾರೆ.

    ನಾನು ಸುಮಾರು ಬಾರಿ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಆದರೆ ಅದು ಸಾಧ್ಯವಾಗಲಿಲ್ಲ. ನಾನು ಟಿಬಿ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು, ಮುಂಬೈನ ಶಿವಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದೇನೆ ಎಂದು ನಟಿ ಪೂಜಾ ತಿಳಿಸಿದ್ದಾರೆ.

    ನನಗೆ ಟಿಬಿ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆ ಇದೆ ಎಂದು 6 ತಿಂಗಳ ಹಿಂದೆ ನನಗೆ ತಿಳಿಯಿತು. ನಾನು ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಿ ಸಹಾಯ ಕೇಳಲು ಪ್ರಯತ್ನಿಸಿದೆ. ಆದರೆ ಅದು ಸಾಧ್ಯವಾಗಲಿಲ್ಲ. ಅವರು ನನ್ನ ಈ ವಿಡಿಯೋ ನೋಡಿದ್ದರೆ ಸಹಾಯ ಮಾಡಬಹುದೆಂಬ ಆಶಯವಿದೆ. ಕಳೆದ 15 ದಿನಗಳಿಂದ ನಾನು ಆಸ್ಪತ್ರೆಯಲ್ಲಿ ದಾಖಲಾಗಿದ್ದೇನೆ ಎಂದು ಪೂಜಾ ಹೇಳಿದ್ದಾರೆ.

    ನಾನು ಟಿಬಿ ಕಾಯಿಲೆಗೆ ತುತ್ತಾಗುವ ಮೊದಲು ಗೋವಾದ ಕೆಸಿನೋದಲ್ಲಿ ಹಲವು ವರ್ಷಗಳಿಂದ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದೆ. ಈಗ ನನ್ನ ಹತ್ತಿರ ಹಣವಿಲ್ಲ ಹಾಗೂ ಒಂದು ಕಪ್ ಟೀ ಕುಡಿಯಲು ನಾನು ಇನ್ನೊಬ್ಬರ ಹತ್ತಿರ ಹಣ ಕೇಳುತ್ತಿದ್ದೇನೆ ಎಂದು ನಟಿ ಪೂಜಾ ವಿಡಿಯೋದಲ್ಲಿ ತಿಳಿಸಿದ್ದಾರೆ.

    ಪೂಜಾ ಆರೋಗ್ಯದ ಸಮಸ್ಯಯಿಂದ ಬಳಲುತ್ತಿರುವುದನ್ನು ನೋಡಿ ಆಕೆಯ ಪತಿ ಹಾಗೂ ಮಕ್ಕಳು ಆಕೆಯನ್ನು ಬಿಟ್ಟು ದೂರ ಹೋಗಿದ್ದಾರೆ ಎಂದು ನಟಿಯ ಹತ್ತಿರದವರು ತಿಳಿಸಿದ್ದಾರೆ. ಪೂಜಾ ವೀರ್ ಗಟಿ ಚಿತ್ರ ಸೇರಿದಂತೆ ಹಿಂದೂಸ್ತಾನ್ ಹಾಗೂ ಸಿಂಧೂರ್ ಸೌಗಂದ್ ಚಿತ್ರದಲ್ಲಿ ನಟಿಸಿದ್ದಾರೆ.