Tag: vehicle explosion

  • ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

    ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

    ಶ್ರೀನಗರ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟಗೊಂಡಿದ್ದು, ಮೂವರು ಸೈನಿಕರ ಸ್ಥಿತಿ ಗಂಭಿರವಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

    ಶೋಪಿಯಾನ್ ಜಿಲ್ಲೆಯಲ್ಲಿ ಖಾಸಗಿ ಬಾಡಿಗೆ ವಾಹನದಲ್ಲಿ ಮೂವರು ಸೈನಿಕರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ವಾಹನ ದಿಢೀರ್ ಸ್ಫೋಟಗೊಂಡಿದ್ದು, 3 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ – 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್

    ಕಾಶ್ಮೀರದ ಪೆÇಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದು, ಮೂವರು ಸೈನಿಕರು ಖಾಸಗಿ ವಾಹನದಲ್ಲಿ ಪ್ರಯಾಣಿಸುತ್ತಿದ್ದು, ದಿಢೀರ್ ಎಂದು ವಾಹನ ಸ್ಫೋಟಗೊಂಡಿದೆ. ಈ ಹಿನ್ನೆಲೆ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಈ ಸ್ಫೋಟ ಗ್ರೆನೇಡ್‍ನಿಂದಾಗಿ ಅಥವಾ ವಾಹನದೊಳಗೆ ಈಗಾಗಲೇ ಐಇಡಿ(ಸುಧಾರಿತ ಸ್ಫೋಟಕ ಸಾಧನ) ಅಳವಡಿಸಲಾಗಿದೆಯೇ ಅಥವಾ ಬ್ಯಾಟರಿ ಕಾರಣದಿಂದ ಈ ಸ್ಫೋಟ ಸಂಭವಿಸಿದ್ಯಾ ಎಂಬುದನ್ನು ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದರು.

    ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಹನ ಸುಟ್ಟು ಹೋಗಿದೆ. ಸ್ಫೋಟದ ತೀವ್ರತೆ ನೋಡಿದರೆ ಬ್ಯಾಟರಿ ಕಾರಣದಿಂದ ಸಂಭವಿಸಿರುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೂ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ಟ್ವೀಟ್ ಮಾಡಲಾಗಿದೆ. ಇದನ್ನೂ ಓದಿ: ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ 

    ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯ ಹೆಚ್ಚಾಗುತ್ತಿದೆ. ಅದರಲ್ಲಿಯೂ ಕಾಶ್ಮೀರಿ ಪಂಡಿತರನ್ನು ಉದ್ದೇಶಿಸಿ ಈ ದಾಳಿಗಳು ಹೆಚ್ಚಾಗುತ್ತಿವೆ. ಪರಿಣಾಮ ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಿಗಿ ಬಂದೋಬಸ್ತ್ ಹಾಕಲಾಗುತ್ತಿದೆ.