Tag: Vellore

  • ಚಿಕಿತ್ಸೆಗೂ ಮುನ್ನ ಸಮಂತಾ ಟೆಂಪಲ್ ರನ್: ಆರೋಗ್ಯಕ್ಕಾಗಿ ನಟಿಯ ಪ್ರಾರ್ಥನೆ

    ಚಿಕಿತ್ಸೆಗೂ ಮುನ್ನ ಸಮಂತಾ ಟೆಂಪಲ್ ರನ್: ಆರೋಗ್ಯಕ್ಕಾಗಿ ನಟಿಯ ಪ್ರಾರ್ಥನೆ

    ಕ್ಷಿಣ ಭಾರತದ ಖ್ಯಾತ ನಟಿ ಸಮಂತಾ, ಚಿಕಿತ್ಸೆಗಾಗಿ ಅಮೆರಿಕಾಗೆ ಹೋಗುವ ಮುನ್ನ ಹಲವು ದೇವಸ್ಥಾನಗಳಿಗೆ ಭೇಡಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮೊನ್ನೆಯಷ್ಟೇ ಅವರು ವೆಲ್ಲೂರಿನ ಶ್ರೀ ಲಕ್ಷ್ಮೀ ನಾರಾಯಣ ಗೋಲ್ಡನ್ ಟೆಂಪಲ್ (Sri Lakshmi Narayana Golden Temple) ಗೆ ಭೇಟಿ ನೀಡಿದ್ದಾರೆ. ಈ ಹಿಂದೆಯೇ ಅವರು ಆರೋಗ್ಯಕ್ಕಾಗಿ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.

    ವೆಲ್ಲೂರಿನ (Vellore) ದೇವಸ್ಥಾನದಲ್ಲಿ ಫ್ರೆಂಡ್ಸ್ ಜೊತೆ ಕಾರಿನಲ್ಲಿ ತೆರಳಿದ್ದ ಸಮಂತಾ, ಆ ಪ್ರಯಾಣದ ಕುರಿತಾಗಿ ಅವರು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಇಷ್ಟದ ಫ್ರೆಂಡ್ಸ್ ಜೊತೆ ಇಷ್ಟದ ಹಾಡುಗಳು ಕೂಡ ಜೊತೆಯಾಗಿದ್ದವು ಎಂದು ಅವರು ಪೋಸ್ಟ್ ಮಾಡಿದ್ದಾರೆ. ಸಮಂತಾ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅನೇಕರು ಹಾರೈಸಿದ್ದಾರೆ. ದೇವರು ನಿಮ್ಮೊಂದಿಗೆ ಇದ್ದಾನೆ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ.

    ಸಮಂತಾ (Samantha), ಒಪ್ಪಿಕೊಂಡಿದ್ದ ಸಿನಿಮಾಗಳನ್ನ ಮುಗಿಸಿಕೊಟ್ಟಿದ್ದಾರೆ. ಈಗ ತಮ್ಮ ಆರೋಗ್ಯದ ಕಡೆ ಗಮನ ವಹಿಸುತ್ತಿದ್ದಾರೆ. ಡಿವೋರ್ಸ್ ನಂತರ ಒಂದಲ್ಲಾ ಒಂದು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಸಮಂತಾ ಸೂಕ್ತ ಚಿಕಿತ್ಸೆಗಾಗಿ ಅಮೆರಿಕಾಗೆ (America) ಹಾರಿದ್ದಾರೆ ಎಂದು ಹೇಳಲಾಗುತ್ತಿದೆ. ದೇವಸ್ಥಾನಗಳನ್ನು ಭೇಟಿ ಮಾಡಿದ ನಂತರ ಅವರು ವಿಮಾನ ಏರಿದ್ದಾರೆ ಎನ್ನುವುದು ಅವರ ಆಪ್ತರ ಮಾಹಿತಿ.

    ಮೊನ್ನೆಯಷ್ಟೇ ಅವರೊಂದು ಪೋಸ್ಟ್ ಹಾಕಿದ್ದರು. ಜೊತೆಗೆ ತಮ್ಮ ಆರೋಗ್ಯ ಸುಧಾರಣೆಗೆ ಹೊಸ ಮಾದರಿಯ ಥೆರಪಿಯೊಂದನ್ನ ಮಾಡಿಸುತ್ತಿದ್ದಾರೆ. ಇದು ಆಮ್ಲಜನಕ ಥೆರಪಿಯಾಗಿದ್ದು, ಇದರ ಫೋಟೋವನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಆ ಕುರಿತು ಸಮಂತಾ ವಿವರಣೆಯನ್ನೂ ನೀಡಿದ್ದರು.

    ನಾಗಚೈತನ್ಯ (NagaChaitanya) ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಮೇಲೆ ಮಯೋಸಿಟಿಸ್ ಕಾಯಿಲೆಯಿಂದ ಸಮಂತಾ ಬಳಲುತ್ತಿದ್ದರು. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಚರ್ಮದ ಸಮಸ್ಯೆ, ಶ್ವಾಸಕೋಶದ ಸಮಸ್ಯೆಯನ್ನ ನಟಿ ಎದುರಿಸುತ್ತಿದ್ದರು. ಹಾಗಾಗಿ ಸಿನಿಮಾಗೆ ಕೊಂಚ ಬ್ರೇಕ್ ನೀಡಿ, ತಮ್ಮ ಹೆಲ್ತ್ ಕಡೆ ನಟಿ ಗಮನ ಕೊಡ್ತಿದ್ದಾರೆ.

    ಹೆಚ್‌ಬಿಓಟಿ ಹೆಸರಿನ ಚಿಕಿತ್ಸೆಯನ್ನು ಸ್ಯಾಮ್ ಪಡೆದುಕೊಳ್ಳುತ್ತಿದ್ದಾರೆ. ಹೆಚ್‌ಬಿಓಟಿ ಎಂದರೆ ಹೈಪರ್‌ಬ್ಯಾರಿಕ್ ಆಕ್ಸಿಜನ್ ಥೆರಪಿ ಎಂದರ್ಥ. ಈ ಚಿಕಿತ್ಸಾ ವಿಧಾನದಲ್ಲಿ ವ್ಯಕ್ತಿಗೆ ಪ್ರತ್ಯೇಕವಾಗಿ ಶುದ್ಧ ಆಮ್ಲಜನಕವನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನ ವೇಗದಲ್ಲಿ ನೀಡಲಾಗುತ್ತದೆ. ಈ ಥೆರಪಿ ಮಾಡಿಸಲು ವಿಶೇಷವಾದ ಕೋಣೆ ಅಥವಾ ಚೇಂಬರ್‌ಗಳನ್ನು ನಿರ್ಮಿಸಿ ಅದರಲ್ಲಿ ಚಿಕಿತ್ಸೆ ಪಡೆಯುವವರನ್ನು ಕೂರಿಸಿ ಅಥವಾ ಮಲಗಿಸಿ ವೇಗವಾಗಿ ಶುದ್ಧ ಆಮ್ಲಜನಕವನ್ನು ಅವರ ದೇಹಕ್ಕೆ ಹರಿಸಲಾಗುತ್ತದೆ. ಈ ಚಿಕಿತ್ಸೆಯಿಂದ ಶ್ವಾಸಕೋಶಗಳು ಹೆಚ್ಚು ಆಮ್ಲಜನಕವನ್ನು ಹೀರಿಕೊಳ್ಳುತ್ತವೆ ಹಾಗೂ ರಕ್ತದಲ್ಲಿಯೂ ಆಮ್ಲಜನಕದ ಪ್ರಮಾಣ ಹೆಚ್ಚಾಗುತ್ತದೆ. ಚರ್ಮವು ಶುಷ್ಕವಾಗಿ ಬಿಳಿಚಿಕೊಳ್ಳುವುದರಿಂದ ರಕ್ಷಿಸುತ್ತದೆ. ರಕ್ತದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಶ್ವಾಸಕೋಶದ ಸೋಂಕುಗಳು ನಿವಾರಣೆಯಾಗುತ್ತದೆ. ಗಾಯಗಳು, ನೋವುಗಳು ಬೇಗನೆ ಮಾಯಲು, ವಾಸಿಯಾಗಲು ಪ್ರಾರಂಭವಾಗುತ್ತವೆ.

    ನಟಿ ಸಮಂತಾ, ವಿಜಯ್ ದೇವರಕೊಂಡ (Vijay Devarakonda) ಜೊತೆಗಿನ ‘ಖುಷಿ’ (Kushi)  ಸಿನಿಮಾ ಮುಗಿಸಿ ಕೊಟ್ಟಿದ್ದಾರೆ. ವರುಣ್ ಧವನ್ ಜೊತೆಗಿನ ಸಿಟಾಡೆಲ್ (Citadel) ಕೂಡ ಶೂಟಿಂಗ್ ಮುಗಿದಿದೆ. ಇಂಗ್ಲೀಷ್‌ನ ಒಂದು ಸಿನಿಮಾ, ಬಾಲಿವುಡ್ ಚಿತ್ರವೊಂದನ್ನ ನಟಿ ಓಕೆ ಎಂದಿದ್ದಾರೆ. ಸಮಂತಾ ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಮತ್ತೆ ಸಿನಿಮಾ ಮಾಡಲಿದ್ದಾರೆ. ಅಲ್ಲಿಯವರೆಗೂ ನಟಿ ಬ್ರೇಕ್‌ ತೆಗೆದುಕೊಳ್ಳಲಿದ್ದಾರೆ.

    ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸಮಂತಾ, ದಿನಕ್ಕೊಂದು ಪೋಸ್ಟ್ ಮಾಡಿ ತಮ್ಮ ಅಂತರಾಳದ ದುಗುಡಗಳನ್ನು ಅಭಿಮಾನಿಗಳ ಮುಂಚೆ ಬಿಚ್ಚಿಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದ ಮೂಲಕ ಸದಾ ಅಭಿಮಾನಿಗಳ ಜೊತೆ ಕನೆಕ್ಟ್ ಆಗುವ ಸಮಂತಾ, ಈ ಬಾರಿ ಆರು ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದಿನಕ್ಕೂ ಅವು ಯಾತನೆಯ ದಿನಗಳು ಎಂದಿದ್ದಾರೆ.

     

    ಆರೋಗ್ಯದ ಸಮಸ್ಯೆಯಿಂದಾಗಿ ಸಿನಿಮಾ ರಂಗಕ್ಕೆ ಒಂದು ವರ್ಷಗಳ ಕಾಲ ಗೈರಾಗಿದ್ದ ಸಮಂತಾ, ಟ್ರೀಟ್ ಮೆಂಟ್ ನಂತರ ಮತ್ತೆ ಬಂದಿದ್ದರು. ಒಪ್ಪಿಕೊಂಡಿದ್ದ ಪ್ರಾಜೆಕ್ಟ್ ಗಳನ್ನು ಅವರು ಮುಗಿಸಿಕೊಡಬೇಕಿತ್ತು. ಹಾಗಾಗಿ ಆರು ತಿಂಗಳ ಕಾಲ ನೋವಿನಲ್ಲೇ ಕೆಲಸ ಮಾಡಿದ್ದಾರೆ. ಇನ್ನೂ ಸಾಧ್ಯವಿಲ್ಲ ಅನಿಸಿ, ಒಂದಷ್ಟು ಪ್ರಾಜೆಕ್ಟ್ ಗಳಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ವಾಪಸ್ಸು ಮಾಡಿ ಮತ್ತೆ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಸದ ತೊಟ್ಟಿಯಲ್ಲಿ ಹೆಣ್ಣು ಮಗು ಪತ್ತೆ – ಸ್ಥಳೀಯರಿಂದ ರಕ್ಷಣೆ

    ಕಸದ ತೊಟ್ಟಿಯಲ್ಲಿ ಹೆಣ್ಣು ಮಗು ಪತ್ತೆ – ಸ್ಥಳೀಯರಿಂದ ರಕ್ಷಣೆ

    ಚೆನ್ನೈ: ಹೆಣ್ಣುಮಗುವನ್ನು ಕಸದ ತೊಟ್ಟಿಯಲ್ಲಿ ನಿರ್ದಾಕ್ಷಿಣ್ಯವಾಗಿ ಪೋಷಕರು ಬಿಟ್ಟು ಹೋಗಿರುವ ಘಟನೆ ವೆಲ್ಲೂರಿನಲ್ಲಿ ನಡೆದಿದೆ.

    ಮಗು ಅಳುತ್ತಿರುವ ಶಬ್ದವನ್ನು ಕೇಳಿ ಸ್ಥಳೀಯರು ಕಸದ ತೊಟ್ಟಿಯನ್ನು ಪರಿಶೀಲಿಸಿದಾಗ ಕಸದ ರಾಶಿಯ ಮಧ್ಯೆ ಮಗು ಪತ್ತೆಯಾಗಿದೆ. ಕೂಡಲೇ ಸ್ಥಳೀಯರು ವೆಲ್ಲೂರು ಉತ್ತರ ಠಾಣೆಯ ಪೊಲೀಸರಿಗೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಾಚ್ ಆರ್ಡರ್ ಮಾಡಿ ಬಂದಿದ್ದು ಕಾಂಡೋಮ್!

    ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಮಗು ಪತ್ತೆಯಾದ ಸ್ಥಳದ ಪಕ್ಕದಲ್ಲಿ ಬಟ್ಟೆಗಳಿರುವ ಸಣ್ಣ ಬ್ಯಾಗ್ ಕಂಡು ಬಂದಿದೆ. ಇದೀಗ ಮಗುವನ್ನು ವೆಲ್ಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗು ಚೇತರಿಸಿಕೊಳ್ಳುತ್ತಿದೆ. ಸದ್ಯ ಘಟನೆ ಕುರಿತಂತೆ ಪ್ರಾಥಮಿಕ ತನಿಖೆ ವೇಳೆ ಮಗುವಿಗೆ ಕೇವಲ ಎರಡ್ಮೂರು ದಿನವಾಗಿರಬಹುದು ಎಂದು ಶಂಕಿಸಲಾಗಿದ್ದು, ಇದೀಗ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದದ್ದಾರೆ ಹಾಗೂ ಮಗುವಿನ ಪೋಷಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    POLICE JEEP

    ಇದೇ ರೀತಿ ಇತ್ತೀಚೆಗಷ್ಟೇ ನವಜಾತ ಶಿಶುವೊಂದನ್ನು ವಿಮಾನದ ಟಾಯ್ಲೆಟ್‍ನಲ್ಲಿ ಪೇಪರ್‌ನಿಂದ ಸುತ್ತಿ ಅಲ್ಲಿದ್ದ ಕಸದ ಬುಟ್ಟಿಗೆ ಎಸೆದು ಹೋದ ಘಟನೆ ಮಾರಿಷಸ್‍ನಲ್ಲಿ ನಡೆದಿತ್ತು. ಏರ್‍ಮರಿಷಸ್ ಏರ್‌ಬಸ್ 330-900 ವಿಮಾನವನ್ನು ತಪಾಸಣೆ ನಡೆಸುವ ವೇಳೆ ಟಾಯ್ಲೆಟ್‍ನಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಆ ಬಳಿಕ ಈ ಸಂಬಂಧ ಮಡಗಾಸ್ಕರ್‌ನ ಮಹಿಳೆಯನ್ನು(20) ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಇದನ್ನೂ ಓದಿ: ವಿಮಾನದ ಟಾಯ್ಲೆಟ್‍ನಲ್ಲಿ ನವಜಾತ ಶಿಶು ಪತ್ತೆ

    ಬಂಧಿತ ಮಹಿಳೆ ನಾನು ಆ ಮಗವಿಗೆ ಜನ್ಮನೀಡಿಲ್ಲ ಎಂದು ವಾದಿಸುತ್ತಿದ್ದು, ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆ ಮಾಡಲು ಮುಂದಾಗಿದ್ದರು. ಅಂತರಾಷ್ಟ್ರೀಯ ವಿಮಾನ ಪ್ರಯಾಣದ ನಿಯಮದ ಪ್ರಕಾರ 28 ವಾರದ ಬಳಿಕ ಗರ್ಭಿಣಿ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ಇಲ್ಲದ ಕಾರಣ ಮಹಿಳೆ ಸುಳ್ಳು ಹೇಳಿರುವುದಾಗಿ ತಿಳಿಸಿ ಮಗು ತನ್ನದೇ ಎಂದು ಒಪ್ಪಿಕೊಂಡಳು. ನಂತ ಇಬ್ಬರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

  • ವೆಲ್ಲೂರು ಲೋಕಸಭಾ ಚುನಾವಣೆ ರದ್ದು

    ವೆಲ್ಲೂರು ಲೋಕಸಭಾ ಚುನಾವಣೆ ರದ್ದು

    ಚೆನ್ನೈ: ತಮಿಳುನಾಡಿನ ವೆಲ್ಲೂರು ಲೋಕಸಭಾ ಚುನಾವಣೆ ರದ್ದುಗೊಳಿಸಲು ಚುನಾವಣಾ ಆಯೋಗ ಸಲ್ಲಿಸಿದ್ದ ಪತ್ರಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಒಪ್ಪಿಗೆ ಸೂಚಿಸಿದ್ದಾರೆ.

    ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಡಿಎಂಕೆ ಮುಖಂಡರ ಮನೆಯಲ್ಲಿ ಕಳೆದ ಎರಡು ವಾರಗಳಿಂದ ಅಪಾರ ಪ್ರಮಾಣದಲ್ಲಿ ಅಕ್ರಮ ಹಣ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಲು ಅನುಮತಿ ಕೋರಿ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಪತ್ರ ಬರೆದಿತ್ತು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಚುನಾವಣಾ ಆಯೋಗವು, ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದುಗೊಳಿಸಲು ಏಪ್ರಿಲ್ 14ರಂದು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿತ್ತು. ಅವರು ಶಿಫಾರಸನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದೆ.

    ಈ ಮೂಲಕ ಇದೇ ಮೊದಲ ಬಾರಿಗೆ ಹಣ ದುರ್ಬಳಕೆ ಆರೋಪದ ಮೇಲೆ ರಾಷ್ಟ್ರಪತಿಗಳಿಂದ ಅನುಮತಿ ಪಡೆದು ಲೋಕಸಭಾ ಕ್ಷೇತ್ರವೊಂದರ ಚುನಾವಣೆ ರದ್ದು ಮಾಡಲಾಗಿದೆ.

    ಆಗಿದ್ದೇನು?:
    ತಮಿಳುನಾಡಿನಲ್ಲಿ ವೆಲ್ಲೂರು ಸೇರಿದಂತೆ 38 ಲೋಕಸಭಾ ಕ್ಷೇತ್ರ ಚುನಾವಣೆ ಏಪ್ರಿಲ್ 18ರಂದು ನಿಗದಿಯಾಗಿತ್ತು. ವೆಲ್ಲೂರು ಕ್ಷೇತ್ರದಿಂದ ಒಟ್ಟು 23 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಆದರೆ ಡಿಎಂಕೆ ನಾಯಕ ದೊರೈ ಮುರುಗನ್ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆಯು ಏಪ್ರಿಲ್ 10ರಂದು ದಾಳಿ ಮಾಡಿತ್ತು. ಈ ವೇಳೆ ಅವರ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಹಣ ಪತ್ತೆಯಾಗಿತ್ತು. ಹೀಗಾಗಿ ಈ ಹಣವು ದೊರೈ ಮುರುಗನ್ ಅವರಿಗೆ ಸೇರಿದ್ದು ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿದ್ದವು.

    ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದರಿಂದ ಹಣದಿಂದ ಮತದಾರರನ್ನು ಓಲೈಸುವ ಪ್ರಯತ್ನ ನಡೆಸಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಚುನಾವಣಾ ಆಯೋಗವು ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದು ಮಾಡಲು ಅನುಮತಿ ಕೋರಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿತ್ತು.

  • ಕಂತೆ ಕಂತೆ ನೋಟು ಪತ್ತೆ – ವೆಲ್ಲೂರು ಲೋಕಸಭಾ ಚುನಾವಣೆ ರದ್ದು?

    ಕಂತೆ ಕಂತೆ ನೋಟು ಪತ್ತೆ – ವೆಲ್ಲೂರು ಲೋಕಸಭಾ ಚುನಾವಣೆ ರದ್ದು?

    ಚೆನ್ನೈ: ಡಿಎಂಕೆ ಮುಖಂಡರ ಮನೆಯಲ್ಲಿ ಕಳೆದ ಎರಡು ವಾರಗಳಿಂದ ಅಪಾರ ಪ್ರಮಾಣದಲ್ಲಿ ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

    ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದೆ. ಈ ಮೂಲಕ ಹಣದಿಂದ ಮತದಾರರನ್ನು ಓಲೈಸುವ ಪ್ರಯತ್ನ ನಡೆಸಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಚುನಾವಣಾ ಆಯೋಗವು ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದು ಮಾಡಲು ಅನುಮತಿ ಕೋರಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದೆ. ರಾಷ್ಟ್ರಪತಿಗಳು ಪತ್ರಕ್ಕೆ ಸಹಿ ಹಾಕಿದರೆ ಚುನಾವಣೆ ರದ್ದಾಗಲಿದೆ.

    ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 18ರಂದು ನಡೆಯಲಿದೆ. ಅಷ್ಟೇ ಅಲ್ಲದೆ ವೆಲ್ಲೂರು ವ್ಯಾಪ್ತಿಯ ಅಂಬೂರ್ ಹಾಗೂ ಗುಡಿಯಾಟ್ಯಾಮ್ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಕೂಡ ನಡೆಯಲಿದೆ. ಆದರೆ ಈ ಎರಡೂ ಕ್ಷೇತ್ರಗಳ ಚುನಾವಣೆ ರದ್ದು ಮಾಡಲಾಗುತ್ತದೆಯೋ ಇಲ್ಲವೋ ಎನ್ನುವುದು ಸ್ಪಷ್ಟವಾಗಿಲ್ಲ.

    ಡಿಎಂಕೆ ನಾಯಕ ದೊರೈ ಮುರುಗನ್ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ದಾಳಿಯ ಮಾಡಿತ್ತು. ಈ ವೇಳೆ ಅವರ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಹಣ ಪತ್ತೆಯಾಗಿತ್ತು. ಹೀಗಾಗಿ ಈ ಹಣವು ದೊರೈ ಮುರುಗನ್ ಅವರಿಗೆ ಸೇರಿದ್ದು ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿದ್ದವು.

    ಐಟಿ ದಾಳಿಯನ್ನು ಖಂಡಿಸಿದ್ದ ಡಿಎಂಕೆ ನಾಯಕರು, ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಆರೋಪಿಸಿದ್ದರು. ಇತ್ತ ದೊರೈ ಮುರುಗನ್ ಅವರು ಐಟಿ ರೇಡ್‍ನಿಂದ ಚುನಾವಣೆ ಪ್ರಚಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗೆ ದೂರು ನೀಡಿದ್ದಾರೆ.

  • ಬಿಜೆಪಿ ನಾಯಕ ಎಫ್‍ಬಿ ಪೋಸ್ಟ್ ಹಾಕಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ಪೆರಿಯರ್ ಪ್ರತಿಮೆ ಧ್ವಂಸ- ಇಬ್ಬರ ಬಂಧನ

    ಬಿಜೆಪಿ ನಾಯಕ ಎಫ್‍ಬಿ ಪೋಸ್ಟ್ ಹಾಕಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ಪೆರಿಯರ್ ಪ್ರತಿಮೆ ಧ್ವಂಸ- ಇಬ್ಬರ ಬಂಧನ

    ಚೆನ್ನೈ: ಇಲ್ಲಿನ ಬಿಜೆಪಿ ನಾಯಕ ಫೇಸ್‍ಬುಕ್‍ನಲ್ಲಿ ವಿವಾದಿತ ಪೋಸ್ಟ್ ಹಾಕಿದ ಬೆನ್ನಲ್ಲೇ ತಮಿಳುನಾಡಿನ ವೆಲ್ಲೂರಿನಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ.

    ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ತಿರುಪಟ್ಟೂರ್ ಕಾರ್ಪೋರೇಶನ್ ಕಚೇರಿ ಒಳಗಿದ್ದ ಪೆರಿಯಾರ್ ಪ್ರತಿಮೆಯ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿದೆ. ಈ ವೇಳೆ ಪ್ರತಿಮೆಯ ಕನ್ನಡಕ ಹಾಗೂ ಮೂಗನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಬಿಜೆಪಿ ನಗರ ಕಾರ್ಯದರ್ಶಿ ಮುತ್ತುಕುಮಾರನ್ ಹಾಗೂ ಫ್ರಾನ್ಸಿಸ್ ಬಂಧಿತ ಆರೋಪಿಗಳು ಎಂದು ವರದಿಯಾಗಿದೆ. ಈ ಇಬ್ಬರೂ ಸುತ್ತಿಗೆಯಿಂದ ಪ್ರತಿಮೆಯನ್ನ ಧ್ವಂಸ ಮಾಡಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

    ತ್ರಿಪುರಾದಲ್ಲಿ ಲೆನಿನ್ ಪ್ರತಿಮೆ ಧ್ವಂಸ ಆಯ್ತು ಈಗ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗಳ ಸರದಿ ಅಂತ ಬಿಜೆಪಿ ಮುಖಂಡ ಹೆಚ್.ರಾಜಾ ಫೇಸ್‍ಬುಕ್‍ನಲ್ಲಿ ಪೋಸ್ಟ್ ನಲ್ಲಿ ಬರೆದುಕೊಂಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಪೆರಿಯಾರ್ ಪ್ರತಿಮೆ ಮೇಲೆ ದಾಳಿ ನಡೆದಿದೆ.