ನವದೆಹಲಿ: ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಇಂದು ಭಾವುಕ ದಿನ, ಭಾವನಾತ್ಮಕ ಕ್ಷಣ. ನೂತನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಅವರು ಆಯ್ಕೆ ಆದ ಹಿನ್ನೆಲೆಯಲ್ಲಿ ವೆಂಕಯ್ಯ ನಾಯ್ಡು ಅವರು ಇಂದು ರಾಜ್ಯಸಭೆಯಲ್ಲಿ ಸಭಾಪತಿಯಾಗಿ ಕೊನೆಯ ದಿನದ ಕಲಾಪ ನಡೆಸಿದರು.
ತಮ್ಮ ಅವಧಿಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿ, ದೇಶಕ್ಕೆ ಮಾದರಿ ಎನ್ನುವಂತಹ ಉಪ ರಾಷ್ಟ್ರಪತಿಯಾಗಿರುವ ಮಾನ್ಯ ಶ್ರೀ ವೆಂಕಯ್ಯ ನಾಯ್ಡು ಅವರಿಗೆ ಶುಭಾಶಯಗಳು. ಅವರ ಮಾರ್ಗದರ್ಶನದಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಕಾರ್ಯ ರೂಪಕ್ಕೆ ತಂದ ಸಂತೋಷ ನಮಗಿದೆ. pic.twitter.com/ttLLMXlLX5
ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ ಕನ್ನಡದಲ್ಲೇ ಭಾಷಣ ಮಾಡುವ ಮೂಲಕ ಬೀಳ್ಕೊಡುಗೆ ನೀಡಿದ ಪ್ರಲ್ಹಾದ್ ಜೋಶಿಯವರು, ಕರ್ನಾಟಕದ ಜೊತೆಗಿನ ವೆಂಕಯ್ಯ ನಾಯ್ಡು ಅವರ ಬಾಂಧವ್ಯ, ಮಾತೃ ಭಾಷೆ ಬಗ್ಗೆ ಅವರಿಗಿದ್ದ ಅಭಿಮಾನ, ಪ್ರಾಸಬದ್ಧ ಭಾಷಣ, ವಿಶೇಷವಾಗಿ ದಕ್ಷಿಣ ಭಾರತದ ಡ್ರೆಸ್ ಕೋಡ್ ಪಾಲನೆಯಲ್ಲಿ ವೆಂಕಯ್ಯ ನಾಯ್ಡು ಅವರ ಶಿಸ್ತಿನ ಬಗ್ಗೆ ಜೋಶಿ ಸ್ಮರಿಸಿದರು.
ವೆಂಕಯ್ಯ ನಾಯ್ಡು ಅವರು ರಾಜ್ಯಸಭೆ ಸಭಾಪತಿಯಾಗಿ ಸದನದಲ್ಲಿ ಭಾರತದ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದರು. ರಾಜ್ಯಸಭೆಯಲ್ಲಿ ಸದಸ್ಯರು ತಮ್ಮ ಮಾತೃಭಾಷೆಯಲ್ಲಿ ಮಾತನಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಸುಮಾರು 22 ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡಲು ರಾಜ್ಯಸಭೆಯಲ್ಲಿ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ವೆಂಕಯ್ಯ ನಾಯ್ಡು ಅವರಿಗೆ ವಂದನಾ ಭಾಷಣದಲ್ಲಿ ಪ್ರಲ್ಹಾದ್ ಜೋಶಿ ತಮ್ಮ ಮಾತೃ ಭಾಷೆ ಕನ್ನಡದಲ್ಲಿಯೇ ಮಾತನಾಡುವ ಮೂಲಕ ನಾಯ್ಡು ಅವರು ಹಾಕಿದ್ದ ಮೇಲ್ಪಂಕ್ತಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ವೆಂಕಯ್ಯ ನಾಯ್ಡು ಸರಳ ಸ್ವಭಾವ, ಬೆಂಗಳೂರಿಗೆ ಬಂದ್ರೆ ಸಣ್ಣ ಜನಾರ್ದನ ಹೋಟೆಲ್‍ಗೆ ಹೋಗೋ ಅವರ ಸರಳತೆ, ಯಾವ ಹುದ್ದೆಯಲ್ಲಿದ್ರೂ ಜನಕ್ಕೆ ಮುಕ್ತವಾಗಿ ಸಿಗೋ ಅವರ ಸರಳತೆಯನ್ನೂ ಪ್ರಶಂಸಿದ್ರು. ದಣಿವರಿಯದ ನಾಯಕರಾದ ನಿಮ್ಮ ಮಾರ್ಗದರ್ಶನವಿರಲಿ ಅಂತ ವೆಂಕಯ್ಯ ನಾಯ್ಡುಗೆ ಜೋಶಿಯವರು ಇದೇ ವೇಳೆ ತುಂಬು ಹೃದಯದ ಶುಭಾಶಯ ಕೋರಿದ್ದು ವಿಶೇಷ.
Live Tv
[brid partner=56869869 player=32851 video=960834 autoplay=true]
ಡೆಹ್ರಾಡೂನ್: ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ಆರೋಪಿಸುತ್ತಾರೆ. ಶಿಕ್ಷಣ ಕೇಸರೀಕರಣಗೊಳಿಸುವುದರಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶ್ನಿಸಿದ್ದಾರೆ.
ದೇಶದ ಜನರು ತಮ್ಮ ?ವಸಾಹತುಶಾಹಿ ಮನಸ್ಥಿತಿ’ಯನ್ನು ಬಿಟ್ಟು ತಮ್ಮ ಸ್ವಂತ ಅಸ್ಮಿತೆ ಬಗ್ಗೆ ಹೆಮ್ಮೆ ಪಡುವುದನ್ನು ಕಲಿಯಬೇಕಿದೆ. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಿದರು. ಹೀಗಾಗಿ ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕøತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ನಮ್ಮ ರಾಷ್ಟ್ರ ಬೆಳವಣಿಗೆಯನ್ನು ನಿಧಾನಗೊಳಿಸಿತು. ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಹೆಚ್ಚಿನ ಜನಸಂಖ್ಯೆಯ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: 3 ಮಿಲಿಯನ್ ಬ್ಯಾರಲ್ ಕಚ್ಚಾ ತೈಲ ಆಮದಿಗೆ ರಷ್ಯಾದೊಂದಿಗೆ ಭಾರತ ಒಪ್ಪಂದ
ನಾವು ನಮ್ಮ ಪರಂಪರೆ, ಸಂಸ್ಕೃತಿ, ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಾವು ನಮ್ಮ ಬೇರುಗಳಿಗೆ ಹಿಂತಿರುಗಬೇಕು. ನಾವು ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ಧಿಕ್ಕರಿಸಬೇಕು. ನಮ್ಮ ಮಕ್ಕಳಿಗೆ ಭಾರತೀಯ ಅಸ್ಮಿತೆ ಬಗ್ಗೆ ಹೆಮ್ಮೆ ಪಡುವಂತೆ ಮಾಡಬೇಕು. ನಾವು ಸಾಧ್ಯವಾದಷ್ಟು ಭಾರತೀಯ ಭಾಷೆಗಳನ್ನು ಕಲಿಯಬೇಕು. ನಾವು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಗ್ರಂಥಗಳನ್ನು ತಿಳಿದುಕೊಳ್ಳಲು ಸಂಸ್ಕೃತವನ್ನು ಕಲಿಯಬೇಕು ಎಂದು ತಿಳಿಸಿದ್ದಾರೆ.
ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ನಿಮ್ಮ ಮಾತೃಭಾಷೆ ನಿಮ್ಮ ದೃಷ್ಟಿಯಂತಿದೆ. ಆದರೆ ವಿದೇಶಿ ಭಾಷೆಯ ನಿಮ್ಮ ಜ್ಞಾನವು ಕನ್ನಡಕವಿದ್ದಂತೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ಹೊಸ ಶಿಕ್ಷಣ ನೀತಿಯ ಕೇಂದ್ರವಾಗಿದೆ. ಇದು ಮಾತೃಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ ಎಂದಿದ್ದಾರೆ.
ನಾವು ಶಿಕ್ಷಣವನ್ನು ಕೇಸರಿಕರಣಗೊಳಿಸುತ್ತೇವೆ ಎಂದು ಆರೋಪಿಸುತ್ತಾರೆ. ಆದರೆ ಕೇಸರಿಕರಣದಲ್ಲಿ ತಪ್ಪೇನಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ ಕುಟುಂಬಕಂ (ಜಗತ್ತೇ ಒಂದು ಕುಟುಂಬ) ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಅಡಕವಾಗಿರುವ ತತ್ವಶಾಸ್ತ್ರಗಳು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ಸೂತ್ರಗಳಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ
ಮೂಲ ಬೇರಿನ ಬಾಂಧವ್ಯ ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಭಾರತ ಉತ್ತಮ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆಯ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿತು. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಇದು ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿದ ಯೋಧ ರಾಜ ಅಶೋಕನ ದೇಶ ಎಂದು ಬಣ್ಣಿಸಿದ್ದಾರೆ.
ಪ್ರಾಚೀನ ಭಾರತೀಯ ವಿಶ್ವವಿದ್ಯಾನಿಲಯಗಳಾದ ನಳಂದಾ ಮತ್ತು ತಕ್ಷಶಿಲಾದಲ್ಲಿ ಅಧ್ಯಯನ ಮಾಡಲು ವಿಶ್ವದ ಎಲ್ಲೆಡೆಯಿಂದ ಜನರು ಬರುತ್ತಿದ್ದ ಕಾಲವೊಂದಿತ್ತು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ. ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ ಯಾವುದೇ ಕಾಂಟ್ರವರ್ಸಿ ಬೇಡ. ಶಾಲೆಗಳು ಮಾಡಿರುವ ಕ್ರಮವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಲಹೆ ನೀಡಿದರು.
ಆನೇಕಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಶಾಲಾ ಕಾಲೇಜುಗಳು, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯನ್ನು ಹೊಂದಬೇಕು. ಪರಿಸರ ಕಾಳಜಿ, ರೇಡಿಯೋ, ಹವಮಾನ ಸೇರಿದಂತೆ ಹಲವು ವಿಚಾರವನ್ನು ಒಳಪಡಿಸಬೇಕು. ಇಡೀ ದೇಶದ ಶೈಕ್ಷಣಿಕ ಸಂಸ್ಥೆಗಳನ್ನು ಅಳವಡಿಸಬೇಕು. ಅಲ್ಲದೇ ನಮ್ಮ ಧರ್ಮದ ಬಗ್ಗೆ ತಿಳಿಸಬೇಕು ಎಂದರು.
ಆದರೆ ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಒಳ್ಳೆಯದಲ್ಲ. ನಾವೆಲ್ಲಾ ಭಾರತೀಯರು. ಶಾಲೆಯಲ್ಲಿ ಯಾವುದೇ ಜಾತಿ ಮತ ಭಾಷೆ ಇಲ್ಲ, ಭಾರತೀಯತೆ ನಮ್ಮದಾಗಬೇಕು ಎಂದು ಕಿವಿಮಾತು ಹೇಳಿದರು. ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್ ಹಿಡಿದ ದಂಪತಿ
ನಮ್ಮ ಮಾತೃಭಾಷೆಯನ್ನು ಮರೆಯಬಾರದು. ಇರುವೆಗಳಿಗೆ ಸಕ್ಕರೆ ಹಾಕಿ, ಹಾವಿಗೆ ಹಾಲೆರದು, ಪಶುಗಳಿಗೆ ಮೇವು ಹಾಕಿ, ತಿಲಕವಿಟ್ಟು ಗೌರವಿಸುವ ಸಂಸ್ಕಾರ ನಮ್ಮದು. ಎಲ್ಲಾ ಭಾಷೆಯನ್ನು ಕಲಿಯಬೇಕು. ಆದರೆ ಮೊದಲು ನಿಮ್ಮ ಮಾತೃ ಭಾಷೆ ಕಲೀರಿ. ಮೊದಲು ಕನ್ನಡ ಕಲೀರಿ. ಮಾತೃಭಾಷೆ ಎನ್ನುವುದು ಕಣ್ಣು ಇದ್ದಂತೆ. ಇತರ ಭಾಷೆ ಕನ್ನಡಕ ಇದ್ದಂತೆ, ಕಣ್ಣೇ ಇಲ್ಲದಿದ್ದರೇ ರಿಬಾನ್ ಗ್ಲಾಸ್ ಹಾಕಿದ್ರೂ ಏನ್ ಪ್ರಯೋಜನ ಎಂದು ತಿಳಿಸಿದರು. ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲ 2 ಸಾವಿರ ಶಿವ ದೇವಾಲಯಗಳಿಗೆ ವಿತರಣೆ
ನವದೆಹಲಿ: ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾದ ಬೆನ್ನಲ್ಲೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಶಿವರಾಜ್‍ಕುಮಾರ್ ಭೇಟಿಯಾಗಿದ್ದಾರೆ. ಮೈಸೂರಿನ ಶಕ್ತಿಧಾಮಕ್ಕೆ ಬರುವಂತೆ ಆಹ್ವಾನಿಸಿದರು. ಆಮಂತ್ರಣವನ್ನು ವೆಂಕಯ್ಯ ನಾಯ್ಡು ಸ್ವೀಕರಿಸಿದ್ದಾರೆ.
ಕೆಲವು ದಿನಗಳ ಹಿಂದೆ ಶಿವರಾಕುಮಾರ್, ಗೀತಾ ದಂಪತಿ ಚೆನ್ನೈಗೆ ತೆರಳಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಆಗಿದ್ದರು. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದನ್ನೂ ಓದಿ: ತಮಿಳುನಾಡು ಸಿಎಂ ಮನೆಗೆ ಶಿವರಾಜ್‍ಕುಮಾರ್ ದಂಪತಿ ಭೇಟಿ
ವೆಂಕಯ್ಯ ನಾಯ್ಡು ಮತ್ತು ಶಿವರಾಜ್‍ಕುಮಾರ್ ಅವರದ್ದು, ಸಹಜ ಭೇಟಿ ಎಂದು ಹೇಳಲಾಗುತ್ತಿದೆ. ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಶಿವಣ್ಣ ಅಧಿಕೃತ ಹೇಳಿಕೆ ನೀಡಬೇಕಿದೆ. ಎಂ.ಕೆ. ಸ್ಟಾಲಿನ್ ಅವರ ಜೊತೆ ಶಿವರಾಜ್‍ಕುಮಾರ್ ಮತ್ತು ಗೀತಾ ಅವರು ನಿಂತಿರುವ ಫೋಟೋ ಸಹ ಲಭ್ಯವಾಗಿತ್ತು. ಇದೀಗ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದಾರೆ.
ಮುಂಬೈ: ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿದಾಗಿನಿಂದ ಇಡಿ ಸೇರಿದಂತೆ ಇತರೆ ತನಿಖಾ ಇಲಾಖೆಗಳು ತಮ್ಮ ಪಕ್ಷದ ನಾಯಕರ ವಿರುದ್ಧ ದಾಳಿ ನಡೆಸುತ್ತಿದೆ ಎಂದು ಆರೋಪಿಸಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಶಿವಸೇನೆ ನಾಯಕ ಸಂಜಯ್ ರಾವತ್ ಪತ್ರ ಬರೆದಿದ್ದಾರೆ.
ಶಿವಸೇನೆ ಹಾಗೂ ಬಿಜೆಪಿ ಸುಮಾರು 25 ವರ್ಷಗಳ ಕಾಲ ಮೈತ್ರಿಯನ್ನು ಹೊಂದಿತ್ತು. ನಂತರ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದ ಮೈತ್ರಿಯನ್ನು ಕೊನೆಗೊಳಿಸಿತು. ಇದರಿಂದ ಬಿಜೆಪಿ ಜಾರಿ ನಿರ್ದೇಶನಾಲಯ ಸೇರಿದಂತೆ ಇತರೆ ತನಿಖಾ ಇಲಾಖೆಯನ್ನು ಬಳಸಿಕೊಂಡು ಶಿವಸೇನೆಯ ನಾಯಕರು ಮತ್ತು ಶಾಸಕರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಇಡಿ ಸಿಬ್ಬಂದಿ ಶಿವಸೇನೆಯ ಶಾಸಕರು ಸಂಸದರು, ನಾಯಕರು ಅವರ ಸ್ನೇಹಿತರು, ಸಂಬಂಧಿಕರು ಹಾಗೂ ಪರಿಚಯಸ್ಥರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ದಶಕಗಳಷ್ಟು ಹಳೆಯದಾದ ಮತ್ತು ಯಾವುದೇ ಸಂಬಂಧವಿಲ್ಲದ ಕೇಸ್‌ಗಳಲ್ಲಿ ಸರ್ಕಾರ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡುತ್ತಿದೆ. ಜೊತೆಗೆ ಅವರನ್ನು ಭಯಭೀತಗೊಳಿಸುವ ಉದ್ದೇಶದಿಂದ ತನಿಖೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಧರ್ಮನಿಂದನೆ ಆರೋಪ – ಹಿಂದೂ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಪಾಕ್!
ನಮಗೆ ನಮ್ಮದೇ ಆದ ಸಿದ್ಧಾಂತವನ್ನು ಹೊಂದಲು ಹಕ್ಕಿದೆ. ಅದು ರಾಜಕೀಯ ಪಕ್ಷಕ್ಕೆ ಸಂಬಂಧಿಸಿಲ್ಲ. ನಮ್ಮ ಶಾಸಕರು, ಸಂಸದರು, ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಪರಿಚಯಸ್ಥರಿಗೆ ಬೆದರಿಕೆ ನೀಡುವುದರ ಜೊತೆಗೆ ತನಿಖೆ ನಡೆಸುವ ವೇಷದಲ್ಲಿ ಮನೆ ಮೇಲೆ ದಾಳಿ ನಡೆಸಿ ಕಿರುಕುಳ ನೀಡುವುದರಲ್ಲಿ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಬೆಟ್ಟದಿಂದ ಜಾರಿ ಬಂಡೆ ಮಧ್ಯೆ ಬಿದ್ದ- 2 ದಿನ ಅನ್ನ, ನೀರು ಇಲ್ಲ
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
ಈ ಬಗ್ಗೆ ಟ್ವಿಟ್ಟರ್ ಮೂಲಕ ತಿಳಿಸಿದ ಅವರು, ನಾನು ಹೈದಾರಾಬಾದ್‍ನಲ್ಲಿದ್ದು, ಇಂದು ನನಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಇನ್ನೂ ಒಂದು ವಾರ ಐಸೋಲೇಷನ್ ಆಗಿರಲು ನಿರ್ಧರಿಸಿದ್ದೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಐಸೋಲೇಷನ್‌ಗೆ ಒಳಗಾಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ. ಕೊರೊನಾ ಮೊದಲ ಅಲೆ ವೇಳೆ 29 ಸೆಪ್ಟೆಂಬರ್ 2020 ರಲ್ಲೂ ಕೂಡ ವೆಂಕಯ್ಯ ನಾಯ್ಡುರಿಗೆ ಕೊರೊನಾ ಸೋಂಕು ತಗುಲಿತ್ತು. ಇದನ್ನೂ ಓದಿ: ರಾಜ್ಯದಲ್ಲಿಂದು 165 ಮಂದಿಗೆ ಓಮಿಕ್ರಾನ್ ದೃಢ
The Vice President, Shri M. Venkaiah Naidu, who is in Hyderabad, tested COVID positive today. He has decided to remain in self-isolation for a week. He has advised all those who came in contact with him to isolate themselves and get tested.
ಕೆಲದಿನಗಳ ಹಿಂದೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅವರಿಗೂ ಕೊರೊನಾ ಕಾಣಿಸಿಕೊಂಡಿತ್ತು. ಬಳಿಕ ಐಸೋಲೇಷನ್‌ಗೆ ಒಳಗಾಗಿದ್ದರು. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಕೊರೊನಾ ಹರಡದಂತೆ ತಡೆಯಲು ನಿಗಾ ವಹಿಸಿ: ಕೆ.ಎಸ್.ಈಶ್ವರಪ್ಪ
ಬೆಂಗಳೂರು: ಆಧುನಿಕ ತಂತ್ರಜ್ಞಾನ, ನಾವೀನ್ಯತೆ , ಸಂಶೋಧನೆ ಮತ್ತು ಜ್ಞಾನದ ಬೆಳವಣಿಗೆಗಳು ದೇಶದ ಕೃಷಿ ಸ್ಥಿತಿಯ ಸುಧಾರಣೆಗೂ ಹೆಚ್ಚು ಒತ್ತು ಕೊಟ್ಟು ಮುನ್ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹೇಳಿದರು.
‘ಭವಿಷ್ಯವನ್ನು ಮುನ್ನಡೆಸು’ (ಡ್ರೈವಿಂಗ್ ದ ನೆಕ್ಸ್ಟ್) ಘೋಷವಾಕ್ಯದ 24ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ಐ.ಟಿ. ಮತ್ತು ಬಿ.ಟಿ.ಯೊಂದಿಗೆ ಎಲ್ಲರೂ ಕರ್ತವ್ಯಪ್ರಜ್ಞೆಯನ್ನು (ಡ್ಯೂಟಿ) ಮೈಗೂಡಿಸಿಕೊಂಡಾಗ ದೇಶವು ಶಕ್ತಿಶಾಲಿಯಾಗಿ (ಮೈಟಿ) ಹೊರಹೊಮ್ಮುತ್ತದೆ. ಕೃಷಿಯು ದೇಶದ ಪ್ರಧಾನ ಕಸುಬಾಗಿರುವುದರಿಂದ ತಾಂತ್ರಿಕತೆಯು ಅದಕ್ಕೆ ಪೂರಕವಾಗಿರಬೇಕು ಎಂದರು. ಇದನ್ನೂ ಓದಿ: ತುಂಗಾನಗರ ಪೊಲೀಸರು ಏನು ದನ ಕಾಯುತ್ತಿದ್ದಾರಾ? : SPಗೆ ಈಶ್ವರಪ್ಪ ಪ್ರಶ್ನೆ
ಜಗತ್ತು ಈಗ ಜ್ಞಾನಾಧಾರಿತವಾಗಿ ರೂಪುಗೊಳ್ಳುತ್ತಿದ್ದು, ಕೋವಿಡ್ ನಂತರ ಡಿಜಿಟಲೀಕರಣಗೊಳ್ಳುತ್ತಿದೆ. ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳು ಎಷ್ಟೇ ಚೆನ್ನಾಗಿದ್ದರೂ ಅಂತಿಮವಾಗಿ ತಂತ್ರಜ್ಞಾನದ ಲಾಭಗಳನ್ನು ಸಮಾಜದ ಕಟ್ಟಕಡೆಯ ಮನುಷ್ಯನಿಗೆ ತಲುಪಿಸಬೇಕಾದ್ದು ಮುಖ್ಯ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಇದನ್ನು ಸಾಧಿಸಿಕೊಂಡು ಬಂದಿದೆ. ತಂತ್ರಜ್ಞಾನದ ಮೂಲಕ ಇಡೀ ವ್ಯವಸ್ಥೆಯನ್ನು ಪರಿವರ್ತಿಸಬೇಕೆಂಬುದೇ ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯೂ ಆಗಿದೆ ಎಂದರು.
ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಖಾಸಗಿ ವಲಯದ ಪಾತ್ರ ಬಹುಮುಖ್ಯವಾಗಿದೆ. ಇದಕ್ಕೆ ಪೂರಕವಾಗಿ ಪ್ರಧಾನಿಯವರು ಸುಧಾರಣೆ-ಸಾಧನೆ-ಪರಿವರ್ತನೆ ಎಂಬುದನ್ನೇ ಮಂತ್ರವಾಗಿಸಿಕೊಂಡು ನೀತಿಗಳನ್ನು ರೂಪಿಸುತ್ತಿದ್ದಾರೆ. ಜಗತ್ತಿನ ವಿಖ್ಯಾತ ಉದ್ದಿಮೆಗಳಲ್ಲೆಲ್ಲ ಭಾರತೀಯರು ನಾಯಕತ್ವ ವಹಿಸಿಕೊಂಡಿರುವುದು ಭಾರತೀಯರಾದ ನಮ್ಮ ಬೌದ್ಧಿಕ ಪ್ರಗತಿಯನ್ನು ದೃಢಪಡಿಸುತ್ತದೆ ಎಂದು ನಾಯ್ಡು ನುಡಿದರು. ಇದನ್ನೂ ಓದಿ: ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿಬರ್ತಾನೆ: ಜಗ್ಗೇಶ್
ನಿರ್ದಿಷ್ಟವಾಗಿ ಬೆಂಗಳೂರು ಮತ್ತು ಒಟ್ಟಾರೆ ಭಾರತ ದೇಶವು ಅತ್ಯಂತ ಕ್ರಿಯಾಶೀಲವಾಗಿವೆ. ಇದಕ್ಕೆ ತಕ್ಕಂತೆ ಭಾರತದ ಪರಂಪರೆ ಮತ್ತು ಸಂಸ್ಕೃತಿಯ ಸಾರವಾದ ಹಂಚಿಕೊಳ್ಳುವಿಕೆ ಮತ್ತು ಇನ್ನೊಬ್ಬರ ಬಗ್ಗೆ ಗಮನ ಹರಿಸುವಿಕೆ (ಕಾಳಜಿ) ಎರಡನ್ನೂ ನಾವು ತಂತ್ರಜ್ಞಾನದ ಧಾರೆಗಳ ಮೂಲಕ ಮುಂದುವರಿಸಿಕೊಂಡು ಹೋಗಬೇಕು. ತಾಂತ್ರಿಕತೆ ಹಾಗೂ ನಾವೀನ್ಯತೆಯು ಅಂತಿಮ ಸಮಾಜದಲ್ಲಿ ಸಂತೋಷವನ್ನುಂಟು ಮಾಡುವ ಉದ್ದೇಶ ಹೊಂದಿರಬೇಕು ಎಂದರು.
ರಾಜ್ಯಕ್ಕೆ ಮುಕ್ತ ಸ್ವಾಗತ: ಬೊಮ್ಮಾಯಿ: ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ಮತ್ತು ಒಟ್ಟಾರೆಯಾಗಿ ರಾಜ್ಯದಲ್ಲಿ ಮನುಷ್ಯನ ಪ್ರತಿಭೆಯ ವಿಕಸನಕ್ಕೆ ತಕ್ಕ ವಾತಾವರಣವಿದ್ದು, ಉದ್ಯಮಗಳ ಬೆಳವಣಿಗೆಗೆ ಪೂರಕವಾದ ರಚನಾತ್ಮಕ ನೀತಿಗಳಿವೆ. ಪ್ರತಿಯೊಂದು ಉದ್ಯಮವನ್ನೂ ರಾಜ್ಯವು ಮುಕ್ತವಾಗಿ ಸ್ವಾಗತಿಸಲಾಗುವುದು’ ಎಂದರು. ಇದನ್ನೂ ಓದಿ: ತುಂಗಾನಗರ ಪೊಲೀಸರು ಏನು ದನ ಕಾಯುತ್ತಿದ್ದಾರಾ? : SPಗೆ ಈಶ್ವರಪ್ಪ ಪ್ರಶ್ನೆ
ರಾಜ್ಯವು ಐಟಿ-ಬಿಟಿ ತಂತ್ರಜ್ಞಾನ, ಬಾಹ್ಯಾಕಾಶ, ವೈಮಾಂತರಿಕ್ಷ, ಸಂಶೋಧನೆ ಮತ್ತು ಅಭಿವೃದ್ಧಿ, ಸೆಮಿಕಂಡಕ್ಟರ್ ಹೀಗೆ ಎಲ್ಲದರಲ್ಲೂ ಇಡೀ ದೇಶಕ್ಕೇ ಅಗ್ರಸ್ಥಾನದಲ್ಲಿದೆ. ಇದರ ಜತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಯಲ್ಲೂ ಪ್ರಥಮ ಸ್ಥಾನದಲ್ಲಿದೆ. ಹೀಗಾಗಿ ರಾಜ್ಯವು ತಂತ್ರಜ್ಞಾನದ ಭವಿಷ್ಯದ ಬೆಳವಣಿಗೆಗೆ ಪ್ರಶಸ್ತ ತಾಣವಾಗಿದೆ ಎಂದು ವಿವರಿಸಿದರು.
ಹೊಸ ಕರ್ನಾಟಕದಿಂದ ಹೊಸ ಭಾರತವನ್ನು ಕಟ್ಟಬಹುದು. ಪ್ರಧಾನಿ ನೀಡಿರುವ ಆತ್ಮನಿರ್ಭರ ಭಾರತ ನಿರ್ಮಾಣದ ಕನಸು ನನಸಾಗಬೇಕು. ಮೇಕ್ ಇನ್ ಕರ್ನಾಟಕ’ದ ಮೂಲಕ ನಾವು ಮೇಕ್ ಇನ್ ಇಂಡಿಯಾವನ್ನು ಸಾಕಾರಗೊಳಿಸಬೇಕು. ಯಶಸ್ಸು ಎಂಬುದು ಸಾಧನೆಯ ಒಂದಂಶ ಮಾತ್ರ. ಹೀಗಾಗಿ ಯಶಸ್ಸಿಗಿಂತ ಸಾಧನೆ ಮುಖ್ಯವಾಗಿದ್ದು, ತಂತ್ರಜ್ಞಾನ ವಲಯದಲ್ಲಿರುವವರು ಸಾಧನೆಯನ್ನೇ ಗುರಿಯಾಗಿಸಿಕೊಳ್ಳಬೇಕು. ತಂತ್ರಜ್ಞಾನವು ಕೊನೆಗೆ ಜನರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು ತಂತ್ರಜ್ಞಾನದ ತೊಟ್ಟಿಲು: ಅಶ್ವತ್ಥನಾರಾಯಣ: ಸ್ವಾಗತ ಭಾಷಣ ಮಾಡಿದ ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು, ಕೋವಿಡ್ ಪಿಡುಗಿನ ನಂತರ ಅಭಿವೃದ್ಧಿಯ ಮಾನದಂಡಗಳು ಬದಲಾಗಿದ್ದು, ರಾಜ್ಯವು ಈ ಪರಿಸ್ಥಿತಿಯನ್ನು ತಂತ್ರಜ್ಞಾನದ ಬಲದಿಂದ ಸಕಾರಾತ್ಮಕವಾಗಿ ಬಳಸಿಕೊಳ್ಳುತ್ತಿದೆ ಎಂದರು.
ಉದ್ದಿಮೆಗಳ ಬೆಳವಣಿಗೆಗೆ ಸರರ್ಕಾರವು ಹಲವು ಅನುಕೂಲಕರ ನೀತಿಗಳನ್ನು ರೂಪಿಸಿದೆ. ಇದರಿಂದಾಗಿ ಐಟಿ, ಬಿಟಿ, ಯೂನಿಕಾರ್ನ್ ಉದ್ದಿಮೆಗಳಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ಮುಂಬರುವ ವರ್ಷಗಳಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ತುಂಗಾನಗರ ಪೊಲೀಸರು ಏನು ದನ ಕಾಯುತ್ತಿದ್ದಾರಾ? : SPಗೆ ಈಶ್ವರಪ್ಪ ಪ್ರಶ್ನೆ
ನವೋದ್ಯಮಗಳ ಸ್ಥಾಪನೆಯಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಅಗ್ರಪಂಕ್ತಿಯಲ್ಲಿದೆ. ನೀತಿ ಆಯೋಗದ ಸಮೀಕ್ಷೆಯಲ್ಲಿ ರಾಜ್ಯವು ಸತತ ಎರಡನೇ ವರ್ಷವೂ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಐಟಿ ರಫ್ತಿನಲ್ಲಿ ಕರ್ನಾಟಕವು ದೇಶದ ಶೇ.40ರಷ್ಟು ಕೊಡುಗೆಯ ಸಿಂಹಪಾಲನ್ನು ನೀಡುತ್ತಿದೆ ಎಂಬುದರ ಬಗ್ಗೆ ಗಮನಸೆಳೆದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್, ಐಟಿ, ಬಿಟಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಗಳ ಮುಖ್ಯಸ್ಥರಾದ ಕ್ರಮವಾಗಿ ಕ್ರಿಸ್ ಗೋಪಾಲಕೃಷ್ಣನ್, ಕಿರಣ್ ಮಜುಂದಾರ್ ಷಾ ಮತ್ತು ಪ್ರಶಾಂತ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ನೆಲಮಂಗಲದಲ್ಲಿ ಮಂಗಳಮುಖಿ ಆತ್ಮಹತ್ಯೆ – ಪೊಲೀಸರಿಂದ ತನಿಖೆ
ಉಳಿದಂತೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಕಿಂಡ್ರೆಲ್ ಕಂಪನಿಯ ಸಿಇಓ ಮಾರ್ಟಿನ್ ಶ್ರೋಟರ್ ಶೃಂಗವನ್ನು ಉದ್ದೇಶಿಸಿ ವರ್ಚುಯಲ್ ಮೂಲಕ ಮಾತನಾಡಿದರು.
ಬಿಟಿಎಸ್ ಶೃಂಗದಲ್ಲಿ ನೆರೆದಿರುವವರನ್ನು ನೋಡಿದರೆ ನನಗೆ ಗಗನನೌಕೆಯಲ್ಲಿ ಕುಳಿತು ಭವಿಷ್ಯ ಯಾನ ಮಾಡುತ್ತಿದ್ದೇನೆ ಅನ್ನಿಸುತ್ತಿದೆ. ಕರ್ನಾಟಕವು ಜ್ಞಾನದ ಅಧಿದೇವತೆಯಾದ ಸರಸ್ವತಿಯ ನೆಲೆವೀಡು. ಸರಸ್ವತಿಯನ್ನು ಹೊತ್ತಿರುವ ಹಂಸಪಕ್ಷಿಗಳು ಮಾನಸ ಸರೋವರದ ಎತ್ತರವನ್ನು ತಲುಪಬೇಕು. ಇದು ಉದ್ಯಮಿಗಳ ಗುರಿಯಾಗಬೇಕು. -ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ.
ರಾಜ್ಯವು ಮುಂಬರುವ ದಿನಗಳಲ್ಲಿ ಬಯೋಎಕಾನಮಿಯಲ್ಲೂ ದೇಶಕ್ಕೆ ಅಗ್ರ ಸ್ಥಾನವನ್ನು ಅಲಂಕರಿಸಲಿದೆ. ಜೀವವಿಜ್ಞಾನವನ್ನು ಉತ್ತೇಜಿಸಲು ಸದ್ಯದಲ್ಲೇ ಎಲಿಕ್ಸ್ ಪಾರ್ಕ್ ಸ್ಥಾಪನೆ ಮಾಡಲಾಗುವುದು. -ಡಾ.ಸಿ.ಎನ್.ಅಶ್ವತ್ಥನಾರಾಯಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಸಚಿವ
ಇಸ್ರೇಲ್ ನ ಪ್ರಾಯೋಗಿಕತೆ ಹಾಗೂ ಭಾರತದ ಕಲ್ಪನೆ ಎರಡೂ ಸೇರಿದರೆ ನಾವೀನ್ಯತೆಯಲ್ಲಿ ಕ್ರಾಂತಿ ಉಂಟುಮಾಡಬಹುದು. ಎರಡೂ ದೇಶಗಳು ಸೇರಿಕೊಂಡು ಜಗತ್ತಿನ ಸಮಸ್ಯೆಗಳಿಗೆ ತಂತ್ರಜ್ಞಾನವನ್ನು ಆಧರಿಸಿ ಪರಿಹಾರ ಕಂಡುಹಿಡಿಯಲು ಸಾಧ್ಯವಿದೆ. ಯಾರು ನಾವೀನ್ಯತೆಗೆ ತೆರೆದುಕೊಳ್ಳುತ್ತಾರೋ ಅವರದೇ ಮುಂದಿನ ಭವಿಷ್ಯ. -ನಫ್ತಾಲಿ ಬೆನೆಟ್, ಇಸ್ರೇಲ್ ಪ್ರಧಾನಿ.
ಬೆಂಗಳೂರು ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನದ ನೆಲೆಯಾಗಿದೆ. ಇಲ್ಲಿ ನಾವು ನಮ್ಮ ಕಾನ್ಸುಲೇಟ್ ಕಚೇರಿ ತೆರೆಯಲಿದ್ದೇವೆ. -ಸ್ಕಾಟ್ ಮಾರಿಸನ್, ಆಸ್ಟ್ರೇಲಿಯಾ ಪ್ರಧಾನಿ.
ಭಾರತದಲ್ಲೆ ನಡೆಯುತ್ತಿರುವ ತಾಂತ್ರಿಕ ಆವಿಷ್ಕಾರಗಳು ಇಡೀ ಜಗತ್ತಿನ ಉದ್ದಿಮೆಗಳನ್ನು ಬದಲಿಸುತ್ತಿವೆ. ನಾವು ಕರ್ನಾಟಕದೊಂದಿಗೆ ಬ್ಯಾಂಕಿಂಗ್ ಮತ್ತು ಟೆಲಿಕಾಂ ವಲಯಗಳಲ್ಲಿ ಸಹಕರಿಸಲು ಉತ್ಸುಕರಾಗಿದ್ದೇವೆ. -ಮಾರ್ಟಿನ್ ಶ್ರೋಟರ್, ಸಿಇಒ, ಅಮೆರಿಕದ ಕಿಂಡ್ರೆಲ್ ಕಂಪನಿ
ಕನ್ನಡದಲ್ಲಿ ಭಾಷಣ, ಪುನೀತ್ ನಿಧನಕ್ಕೆ ಸಂತಾಪ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕನ್ನಡದಲ್ಲೇ ಸರಾಗವಾಗಿ ತಮ್ಮ ಭಾಷಣ ಆರಂಭಿಸಿ, ಕೆಲಸಾಲುಗಳನ್ನು ಮಾತನಾಡಿ ಗಮನ ಸೆಳೆದರು. ಬಳಿಕ ಅವರು, ಇತ್ತೀಚೆಗೆ ಅಕಾಲಿಕವಾಗಿ ಅಗಲಿದ ಕನ್ನಡ ಚಿತ್ರರಂಗದ ಜನಪ್ರಿಯ ಮತ್ತು ಸಮಾಜಮುಖಿ ನಟ ಪುನೀತ್ ರಾಜಕುಮಾರ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಬಳ್ಳಾರಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತಮ್ಮ ಕುಟುಂಬ ಸಮೇತವಾಗಿ ಎರಡು ದಿನ ವಿಶ್ವವಿಖ್ಯಾತ ಹಂಪಿ ವೀಕ್ಷಣೆ ಮಾಡಲಿದ್ದಾರೆ.
ಆ.20 ಮತ್ತು 21 ರಂದು ತುಂಗಭದ್ರಾ ಡ್ಯಾಂ ಮತ್ತು ಐತಿಹಾಸಿಕ ಹಂಪಿ ಸ್ಮಾರಕಗಳ ವೀಕ್ಷಣೆಗೆ ಆಗಮಿಸುತ್ತಿದ್ದು ವೆಂಕಯ್ಯ ನಾಯ್ಡು ಅವರ ಜೊತೆಯಲ್ಲಿ ಅವರ ಧರ್ಮ ಪತ್ನಿ ಎಂ ಉಷಾ ಸಹ ಬರಲಿದ್ದಾರೆ. ಇದನ್ನೂ ಓದಿ: 1,250 ಕೋಟಿ ರೂ. ಜೊತೆ ಘನಿ ಪರಾರಿ – ಈಗ ಯುಎಇಯಲ್ಲಿ ಆಶ್ರಯ
ಸುಗಮ ಪ್ರವಾಸಕ್ಕಾಗಿ ಹಂಪಿಯಲ್ಲಿ ಹಲವು ರೀತಿ ಸಿದ್ಧತೆಗಳು ನಡೆಯುತ್ತಿದ್ದು, ಅ.20 ರಂದು ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊಸಪೇಟೆಯ ತಾಲೂಕು ಕ್ರೀಡಾಂಗಣಕ್ಕೆ ಸಂಜೆ 5:20 ಕ್ಕೆ ಆಗಮಿಸುವ ಅವರು ನಂತರ ತುಂಗಭದ್ರಾ ಡ್ಯಾಂ ವೀಕ್ಷಣೆ ಮಾಡಲಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್‌ರನ್ನು ಕಾಂಗ್ರೆಸ್ ಎರಡು ಬಾರಿ ಸೋಲಿಸಿತು: ಎ ನಾರಾಯಣ ಸ್ವಾಮಿ
ಭೇಟಿಯ ಬಳಿಕ ಕಮಲಾಪುರದ ಮಯೂರ ಭುವನೇಶ್ವರಿ ಹೊಟೇಲ್ ನಲ್ಲಿ ತಂಗಲಿದ್ದಾರೆ. ಆ.21 ರಂದು ಬೆಳಿಗ್ಗೆಯಿಂದ ಸಂಜೆವರಗೆ ಹಂಪಿಯ ಶ್ರೀವಿರೂಪಾಕ್ಷ ದೇವಸ್ಥಾನ, ಸಾಸುವೆಕಾಳು, ಕಡಲೇಕಾಳು ಗಣೇಶ, ಕೃಷ್ಣ ದೇವಸ್ಥಾನ, ಕಮಲ ಮಹಲ್, ಗಜಶಾಲೆ, ಮಹಾನವಮಿ ದಿಬ್ಬ, ವಿಜಯ ವಿಠ್ಠಲ ದೇವಸ್ಥಾನ ಮೊದಲಾದ ಸ್ಮಾರಕಗಳನ್ನು ವೀಕ್ಷಣೆ ಮಾಡಲಿದ್ದಾರೆ.
ಬೆಂಗಳೂರು: ಇಂದು ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗಳಾದ ವೆಂಕಯ್ಯನಾಯ್ಡು ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಸ್ತಕ ನೀಡಿ ಸ್ವಾಗತ ಕೋರಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೆಂಕಯ್ಯನಾಯ್ಡು ಅವರರನ್ನ ಸಿಎಂ ಸಂಭ್ರಮದಿಂದ ಸ್ವಾಗತಿಸಿದರು. ವಿಮಾನದ ಬಳಿಯೇ ತೆರಳಿದ ಸಿಎಂ ಬೊಮ್ಮಾಯಿವರು ವಿಶೇಷ ಹಾರ, ಶಾಲು ಸೇರಿದಂತೆ ಪುಸ್ತಕ ನೀಡಿ ಅವರನ್ನು ಬರ ಮಾಡಿಕೊಂಡರು. ಇನ್ನೂ ಇದೇ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಹ ಉಪರಾಷ್ಟ್ರಪತಿಗಳನ್ನ ಸ್ವಾಗತಿಸಿದರು. ಇದನ್ನೂ ಓದಿ:ರಕ್ತಪಾತ ತಡೆಗಾಗಿ ದೇಶ ತೊರೆದ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ
ಸಚಿವರಾದ ಅಶ್ವತ್ಥನಾರಾಯಣ್, ಸಂಸದ ಪಿ.ಸಿ.ಮೋಹನ್ ಸಹ ಆಗಮಿಸಿದ್ರು. ಮತ್ತೊಂದೆಡೆ ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಭಾರೀ ಪೊಲೀಸ್ ಬಂದೋಬಸ್ತ್ ನೊಂದಿಗೆ ಉಪರಾಷ್ಟ್ರಪತಿಗಳು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕಾಲಜ್ಞಾನಿಯಲ್ಲ, ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ: ಸಿ.ಟಿ.ರವಿ ವ್ಯಂಗ್ಯ
ಬೆಂಗಳೂರಿಗೆ ಆಗಮಿಸಿದ ಮಾನ್ಯ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡು ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ನವದೆಹಲಿ: ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೆಸರಿನ ಎದುರಿಗೆ ಬ್ಲೂ ಬ್ಯಾಡ್ಜ್ ಅಥವಾ ಟಿಕ್ ಮಾರ್ಕ್ ಬರುತ್ತದೆ. ನೀಲಿ ಬಣ್ಣದ ಟಿಕ್ ಮಾರ್ಕ್ ಇದ್ದರೆ ಸಂಬಂಧಪಟ್ಟವರ ಅಧಿಕೃತ ಟ್ವಿಟ್ಟರ್ ಖಾತೆ ಎಂದರ್ಥವಾಗುತ್ತದೆ. ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಅಧಿಕೃತ ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ಮಾಯವಾಗಿದೆ ಎನ್ನುವ ಸುದ್ದಿ ಹೊರ ಬೀಳುತ್ತಿದ್ದಂತೆ ಪುನಃ ಬ್ಲೂ ಟಿಕ್ ಮಾರ್ಕ್ ಹಾಕಲಾಗಿದೆ.
Twitter removes blue badge from Vice President Venkaiah Naidu’s personal verified account
ವೆಂಕಯ್ಯ ನಾಯ್ಡು ಅವರ ಹೆಸರಲ್ಲಿ ಹಲವು ಖಾತೆಗಳು ಇರುವ ಕಾರಣ, ಅಧಿಕೃತ ಖಾತೆಯೆ ಬಗ್ಗೆ ಗೊಂದಲ ಆಗಬಾರದು ಎಂಬ ಕಾರಣಕ್ಕೆ ಈ ದೃಢೀಕರಣ ಬ್ಯಾಡ್ಜ್‍ನ್ನು ನೀಡಲಾಗುತ್ತದೆ. ಆದರೆ ಸದ್ಯ ಎಂ.ವೆಂಕಯ್ಯನಾಯ್ಡು ಅವರ ವೈಯಕ್ತಿಕ ಟ್ವಿಟರ್ ಖಾತೆ (@MVenkaiahNaidu)ಗೆ ನೀಡಲಾಗಿದ್ದ ಈ ಬ್ಲ್ಯೂಟಿಕ್ ತೆಗೆದು ಹಾಕಲ್ಪಟ್ಟಿತ್ತು. ಆದರೆ ಅವರ ಕಚೇರಿಯ ಟ್ವಿಟರ್ ಖಾತೆ (@VPSecretariat)ದ ಬ್ಲ್ಯೂಟಿಕ್ ಇನ್ನೂ ಹಾಗೇ ಉಳಿಸಿತ್ತು. ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‍ಗೆ ಹೊಸ ಮಾನದಂಡ ಪ್ರಕಟ – ಪಬ್ಲಿಕ್ ಟಿವಿ ಸಲಹೆ ಸ್ವೀಕರಿಸಿದ ಶಿಕ್ಷಣ ಇಲಾಖೆ
ಕಾರಣವೇನು?
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ವೈಯಕ್ತಿಕ ಟ್ವಿಟರ್ ಖಾತೆಯ ದೃಢೀಕರಣ ಬ್ಯಾಡ್ಜ್ ತೆಗೆದುಹಾಕಲ್ಪಟ್ಟಿದ್ದಕ್ಕೆ ಉಪರಾಷ್ಟ್ರಪತಿ ಕಚೇರಿ ಸ್ಪಷ್ಟೀಕರಣ ನೀಡಿದೆ. ವೆಂಕಯ್ಯನಾಯ್ಡು ಅವರ ವೈಯಕ್ತಿಕ ಖಾತೆ ಕಳೆದ ಆರು ತಿಂಗಳಿಂದಲೂ ನಿಷ್ಕ್ರಿಯವಾಗಿತ್ತು. ಅಲ್ಲಿಂದ ಯಾವುದೇ ಟ್ವೀಟ್‍ಗಳನ್ನೂ ಮಾಡಲಾಗಿಲ್ಲ. ಹಾಗಾಗಿ ಬ್ಲ್ಯೂಟಿಕ್ ತೆಗೆಯಲ್ಪಟ್ಟಿದೆ ಎಂದು ತಿಳಿಸಿದೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ಇದನ್ನು ಪರಿಶೀಲಿಸಿದ ಬಳಿಕ ಟ್ವಿಟರ್ ಬ್ಲ್ಯೂಟಿಕ್ ವಾಪಸ್ ಕೊಟ್ಟಿದೆ ಎಂದೂ ಮಾಹಿತಿ ನೀಡಿದೆ.
ಟ್ವಿಟರ್ ಬ್ಲ್ಯೂಟಿಕ್ ದೃಢೀಕರಣ ಬ್ಯಾಡ್ಜ್ ನೀಡಿದ ಬಳಿಕ ಆ ಅಕೌಂಟ್ ಸಂಪೂರ್ಣವಾಗಿ ಬಳಕೆಯಾಗುತ್ತಿರಬೇಕು ಅಂದರೆ ಸಕ್ರಿಯವಾಗಿರಬೇಕು. ಅದಿಲ್ಲದಿದ್ದರೆ ಅದನ್ನು ತೆಗೆಯುತ್ತದೆ. ಇನ್ನು ಬ್ಲ್ಯೂಟಿಕ್ ಪಡೆದ ಯಾರಾರೂ ಯೂಸರ್ ನೇಮ್ (ಬಳಕೆದಾರರು ಹೆಸರು) ಬದಲಿಸಿಕೊಂಡರೆ, ಆ ಕ್ಷಣಕ್ಕೆ ಟ್ವಿಟರ್ ಬ್ಲ್ಯೂಟಿಕ್ ತೆಗೆದುಹಾಕುತ್ತದೆ.
ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಅಥವಾ ಟ್ವಿಟ್ಟರ್ ನಲ್ಲಿ ಉದ್ದೇಶಪೂರ್ವಕವಾಗಿ ಜನರನ್ನು ದಾರಿ ತಪ್ಪಿಸುವುದು ಸೇರಿದಂತೆ ಟ್ವಿಟರ್ ನಿಯಮಗಳ ತೀವ್ರ ಅಥವಾ ಪುನರಾವರ್ತಿತ ಉಲ್ಲಂಘನೆಯಲ್ಲಿ ಕಂಡುಬರುವ ಖಾತೆಗಳಿಂದ ಟ್ವಿಟರ್ ನೀಲಿ ಪರಿಶೀಲಿಸಿದ ಮಾರ್ಕ್ ನ್ನು ತೆಗೆದುಹಾಕಬಹುದು. ದ್ವೇಷಪೂರಿತ ನಡವಳಿಕೆ ನೀತಿ, ನಿಂದನೀಯ ನಡವಳಿಕೆ, ಹಿಂಸಾಚಾರ ನೀತಿಯ ವೈಭವೀಕರಣ, ನಾಗರಿಕ ಸಮಗ್ರತೆ ನೀತಿ, ಖಾಸಗಿ ಮಾಹಿತಿ ನೀತಿಯಲ್ಲಿ ಕೂಡ ಉಲ್ಲಂಘನೆ ಕಂಡುಬಂದರೆ ಸಂಸ್ಥೆ ಈ ಕ್ರಮ ಕೈಗೊಳ್ಳುತ್ತದೆ.