Tag: venugopal

  • ಮಾಧ್ಯಮಗಳ ಮೇಲೆ ಮತ್ತೆ ಸಿಎಂ ಮುನಿಸು – ನಿಮ್ಮ ಜೊತೆ ಮಾತನಾಡ್ಬಾರದೆಂದು ತೀರ್ಮಾನಿಸಿದ್ದೇನೆ ಎಂದ ಎಚ್‍ಡಿಕೆ

    ಮಾಧ್ಯಮಗಳ ಮೇಲೆ ಮತ್ತೆ ಸಿಎಂ ಮುನಿಸು – ನಿಮ್ಮ ಜೊತೆ ಮಾತನಾಡ್ಬಾರದೆಂದು ತೀರ್ಮಾನಿಸಿದ್ದೇನೆ ಎಂದ ಎಚ್‍ಡಿಕೆ

    ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಎಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೇಲೆ ಹರಿಹಾಯುತ್ತಿದ್ದು, ಇಂದು ಮತ್ತೆ ಗರಂ ಆಗಿದ್ದಾರೆ. ಮಾಧ್ಯಮಗಳ ಮೇಲೆ ಗರಂ ಆಗೋ ಸಿಎಂ ವರ್ತನೆ ಇದೇ ಮೊದಲಲ್ಲ. ಈ ಹಿಂದೆಯೂ ನಾನು ಯಾರ ಜೊತೆಯೂ ಮಾತನಾಡಲ್ಲ ಎಂದು ಹೇಳಿ ಅವರ ಮಾತನ್ನು ಅವರೇ ಮುರಿದುಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ.

    ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆಗಿನ ಸಭೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, ನಿಮ್ಮಲ್ಲಿನ ಚರ್ಚೆ ಹಾಗೂ ಸುದ್ದಿಗಳಿಂದ ನಾನು ನಿಮಗೆ ಬಹಿಷ್ಕಾರ ಹಾಕಿದ್ದೇನೆ. ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ (ಐ ಆಮ್ ಬಾಯ್ಕಾಟಿಂಗ್ ಯುವರ್ ಸೆಲ್ಫ್) ಎಂದು ಹೇಳಿ ಸಿಟ್ಟಿನಿಂದಲೇ ತೆರಳಿದ್ದಾರೆ.

    ಅದೇನು ಸ್ಟೋರಿನೋ, ಅದೇನು ಚರ್ಚೆ ಮಾಡುತ್ತೀರೋ ಮಾಡಿಕೊಳ್ಳಿ. ಆ ಮೂಲಕ ಮಜಾ ಮಾಡಿ. ನಾನು ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ತೀರ್ಮಾನವನ್ನು ಸ್ವತಃ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಯಾವಾಗ ಬದಲಾಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

    ಕೈ ಉಸ್ತುವಾರಿ ಜೊತೆ ಚರ್ಚೆ: ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ವೇಣುಗೋಪಾಲ್ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಅವರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಸಿಎಂ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಆಗಮಿಸಿದ್ದು, ದಿನೇಶ್ ಅವರು ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್‍ಗೆ ಬಿ ಫಾರಂ ನೀಡಿದರು.

    ಬಳಿಕ ಮಾತನಾಡಿದ ಚಿಂಚೋಳಿ ಕ್ಷೇತ್ರದ ಕೈ ಅಭ್ಯರ್ಥಿ ಸುಭಾಷ್ ರಾಥೋಡ್, ನನಗೆ ಟಿಕೆಟ್ ಕೊಟ್ಟಿದ್ದು ಸಂತೋಷ ಆಗಿದೆ. ನಮ್ಮ ನಾಯಕರು ಭರವಸೆ ಇಟ್ಟು ಟಿಕೆಟ್ ಕೊಟ್ಟಿದ್ದಾರೆ. ಉಮೇಶ್ ಜಾಧವ್ ಯಾವಾಗಲೂ ದ್ವಂದ್ವ ನೀತಿ ಅನುಸರಿಸುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾಧವ್ ಪುತ್ರ ವ್ಯಾಮೋಹ ಎಂದು ಆರೋಪಿಸಿದರು. ಈಗ ಉಮೇಶ್ ಜಾಧವ್ ಏನ್ ಮಾಡಿದ್ರು ಎಂದು ಪ್ರಶ್ನಿಸಿದರು.

    ಬಿಜೆಪಿ ಟಿಕೆಟ್ ಅನ್ನು ತಮ್ಮ ಪುತ್ರನಿಗೆ ಉಮೇಶ್ ಜಾಧವ್ ಕೊಡಿಸಿದರು. ನಿಜವಾದ ಪುತ್ರ ವ್ಯಾಮೋಹ ಉಮೇಶ್ ಜಾಧವ್‍ಗೆ ಇದೆ. ಜನ ಚುನಾವಣೆಯಲ್ಲಿ ಅವರಿಗೆ ತಕ್ಕ ಉತ್ತರ ಕೊಡ್ತಾರೆ ಎಂದು ವಾಗ್ದಾಳಿ ನಡೆಸಿದರು. ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಡಿಸಿಎಂ ಪರಮೇಶ್ವರ್ ಉಪಸ್ಥಿತರಿದ್ದರು.

  • ಮಂಡ್ಯ, ಮೈಸೂರು ಮೈತ್ರಿ ಕಗ್ಗಂಟು – ಕೈ ನಾಯಕರಿಗೆ ವೇಣುಗೋಪಾಲ್ ಖಡಕ್ ಸೂಚನೆ

    ಮಂಡ್ಯ, ಮೈಸೂರು ಮೈತ್ರಿ ಕಗ್ಗಂಟು – ಕೈ ನಾಯಕರಿಗೆ ವೇಣುಗೋಪಾಲ್ ಖಡಕ್ ಸೂಚನೆ

    ಬೆಂಗಳೂರು: ಮಂಡ್ಯ, ಮೈಸೂರಲ್ಲಿರುವ ಮೃತ್ರಿ ಕಗ್ಗಂಟು ವಿಚಾರದ ಗೊಂದಲವನ್ನ ಕೂಡಲೇ ಬಗೆಹರಿಸಬೇಕು. ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆ ಆಗಬಾರದು ಎಂದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕೈ ನಾಯಕರಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

    ಮಂಡ್ಯ, ಮೈಸೂರಲ್ಲಿರುವ ಗೊಂದಲವನ್ನ ಕೂಡಲೇ ಬಗೆಹರಿಸಿ. ಹೈಕಮಾಂಡ್ ತೀರ್ಮಾನ ಪಾಲನೆಯಾಗುತ್ತಿಲ್ಲ ಎಂದು ಕೆ.ಸಿ ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡ್ಯದ ನಮ್ಮ ಮುಖಂಡರಿಗೆ ಸೂಚನೆ ಕೊಡಿ. ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆ ಆಗಬಾರದು ಎಂದು ಮುಖಂಡರುಗಳಿಗೆ ವೇಣುಗೋಪಾಲ್ ಸೂಚನೆ ನೀಡಿದ್ದಾರೆ. ಜೊತೆಗೆ ರಾಹುಲ್ ಗಾಂಧಿ ಸಮಾವೇಶವನ್ನು ಸಮರ್ಥವಾಗಿ, ಅದ್ಧೂರಿಯಾಗಿ ನಡೆಯುವಂತೆ ಜಾಗೃತೆ ವಹಿಸಿ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

    ಇವತ್ತು ಸಭೆ ಕರೆದಿದ್ದೇನೆ, ಎಲ್ಲವನ್ನೂ ಸರಿ ಮಾಡುತ್ತೇನೆ. ಮೈಸೂರಲ್ಲಿಯೂ ಗೊಂದಲ ಇದೆ. ಸರಿ ಮಾಡುವ ಪ್ರಯತ್ನ ನಡೆದಿದೆ ಎಂದು ಮಾಜಿ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತ ತುಮಕೂರಲ್ಲಿಯೂ ಗೊಂದಲವಿತ್ತು. ಅದನ್ನು ಸರಿ ಮಾಡಿದ್ದೇವೆ. ಈಗ ದೇವೇಗೌಡರ ಗೆಲುವಿಗೆ ಯಾವುದೇ ಅಡ್ಡಿಯಿಲ್ಲ ಎಂದು ಡಿಸಿಎಂ ಪರಮೇಶ್ವರ್ ಮಾಹಿತಿಯನ್ನು ವೇಣುಗೋಪಾಲ್ ಅವರಿಗೆ ತಿಳಿಸಿದ್ದಾರೆ.

    ಏನಿದು ಗೊಂದಲ?
    ಹೈಕಮಾಂಡ್ ಸೂಚನೆ ಮೇರೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಾಗಿದೆ. ನಾಯಕರ ಮಧ್ಯೆ ಮೈತ್ರಿಯಾಗಿದ್ದರೂ ಕಾರ್ಯಕರ್ತರ ನಡುವೆ ಮೈತ್ರಿಯಾಗಿಲ್ಲ. ಪರಿಣಾಮ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಿಖಿಲ್ ಪರ ಪ್ರಚಾರಕ್ಕೆ ಹಿಂದೇಟು ಹಾಕಿದ್ದರೆ, ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ವಿಜಯ್‍ಶಂಕರ್ ಪರವಾಗಿ ಪ್ರಚಾರ ನಡೆಸಲು ಒಪ್ಪುತ್ತಿಲ್ಲ. ಹೀಗಾಗಿ ಮೈತ್ರಿ ಈಗ ಕಗ್ಗಂಟಾಗಿದ್ದು, ದೋಸ್ತಿ ನಾಯಕರು ಎಷ್ಟೇ ಸಭೆ ಮಾಡಿದರೂ ಕಾರ್ಯಕರ್ತರು ಮಾತ್ರ ಒಟ್ಟಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಅನಿವಾರ್ಯವಾಗಿ ಈ ಮೃತ್ರಿ ಗೊಂದಲಕ್ಕೆ ಹೈಕಮಾಂಡ್ ಎಂಟ್ರಿಯಾಗಿದೆ.

    https://www.youtube.com/watch?v=gOiC_apXmQg

  • `ಕೈ’ಕಮಾಂಡ್‍ಗೆ ಟ್ರಬಲ್ ಆದ ಟ್ರಬಲ್ ಶೂಟರ್ ಡಿಕೆಶಿ..!

    `ಕೈ’ಕಮಾಂಡ್‍ಗೆ ಟ್ರಬಲ್ ಆದ ಟ್ರಬಲ್ ಶೂಟರ್ ಡಿಕೆಶಿ..!

    ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‍ಗೆ ಬಿಗ್‍ಶಾಕ್ ಎದುರಾಗಿದ್ದು, `ಕೈ’ಕಮಾಂಡ್‍ಗೆ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರು ಟ್ರಬಲ್ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ನೇರ ಸಮರ ಸಾರಿದ್ದಾರೆ ಅನ್ನೋ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೊಸ ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಬೇಕೆಂದು ಬುಧವಾರ ಸಭೆ ನಡೆದಿತ್ತು. ಅದರಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ ಡಿಕೆ ಶಿವಕುಮಾರ್ ಅವರು ಕೂಡ ಹಾಜರಿದ್ದರು. ಈ ಸಭೆಯಲ್ಲಿ ಮಾತುಕತೆಯ ಸಂದರ್ಭದಲ್ಲಿ 2 ಖಾತೆಯಲ್ಲಿ ಒಂದು ಕೊಡಪ್ಪ ಅಂತಾ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಅವರು ಫುಲ್ ಗರಂ ಆಗಿದ್ದಾರಂತೆ. ಇದನ್ನೂ ಓದಿ: ಸಭೆಯಿಂದ ಗರಂ ಆಗಿ ಹೊರಬಂದ ಕೈ ಉಸ್ತುವಾರಿ ವೇಣುಗೋಪಾಲ್!

    ಎಲ್ಲಾ ನಿರ್ಧಾರ ಸಿದ್ದರಾಮಯ್ಯ ಅಭಿಪ್ರಾಯದಂತೆ ತೆಗೆದುಕೊಳ್ಳೋದ್ರೇ ಇನ್ನು ನಾವ್ಯಾಕೆ ಬೇಕು?. ಸುಮ್ಮನೆ ನಮ್ಮನ್ನೇಕೆ ಕೇಳ್ತೀರಿ.. ಟೈಂ ವೇಸ್ಟ್ ಯಾಕೆ ಮಾಡ್ಕೋತೀರಿ. ನಂಗೆ ಯಾವ ಖಾತೆನೂ ಬೇಡ.. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಡ್ತೀನಿ. ನನಗೆ ಮಂತ್ರಿಗಿರಿಯೂ ಬೇಡ.. ಪಕ್ಷದಲ್ಲಿ ಅಧಿಕಾರವೇ ಬೇಡ.. ಕನಕಪುರದಲ್ಲೇ ಇದ್ದು ಬಿಡ್ತೀನಿ. ನಾನು, ನಮ್ಮ ಬ್ರದರ್(ಸಂಸದ ಡಿಕೆ ಸುರೇಶ್) ನಮ್ಮ ನಮ್ಮ ಕ್ಷೇತ್ರಗಳ ಬಗ್ಗೆ ಮಾತ್ರ ತಲೆ ಕೆಡಿಸಿಕೊಳ್ತೀವಿ. ನಿಮ್ಮಿಷ್ಟ ಏನ್ ಬೇಕೋ ಅದನ್ನು ಮಾಡಿಕೊಳ್ಳಿ ಅಂತ ವೇಣುಗೋಪಾಲ್ ಮುಂದೆಯೇ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಗುಡುಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗರಂ!

    ವೈದ್ಯಕೀಯ ಶಿಕ್ಷಣ ಖಾತೆ ತುಕಾರಾಂಗೆ ಬಿಟ್ಟು ಕೊಡು ಎಂದ ಕೂಡಲೇ ರಾಜೀನಾಮೆ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಡಿಕೆಶಿ ಗರಂ ಆದ ರೀತಿ ಕಂಡು ಎರಡು ನಿಮಿಷ ಸುಮ್ಮನಾದ ಕೈ ಉಸ್ತುವಾರಿ ವೇಣುಗೋಪಾಲ್, ಮಿಸ್ಟರ್ ಡಿಕೆ ಶಿವಕುಮಾರ್ ಅವರೇ ಸಮಾಧಾನ ಮಾಡಿಕೊಳ್ಳಿ. ಹೀಗೆ ಮಾತಾಡಿದ್ರೆ ಹೇಗೆ ಅಂತ ಪ್ರಶ್ನಿಸಿದ್ದಾರೆ. ಅಲ್ಲ ಕಣಯ್ಯ ಡಿಕೆಶಿ, ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರ ತಗೋ. ಸುಮ್ನೆ ಕೋಪ ಮಾಡ್ಕೊಂಡ್ರೆ ಹೆಂಗೇ ಅಂತ ಸಿದ್ದರಾಮಯ್ಯ ಅವರು ಕೂಡ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಪಕ್ಷದ ಹಿತದೃಷ್ಟಿ ನಮ್ಗೂ ಗೊತ್ತು. ಪಕ್ಷಕ್ಕಾಗಿ ದುಡಿದವರಿಗೆ ಇದೇನಾ ಪ್ರಶಸ್ತಿ ಅಂತ ಮರು ಪ್ರಶ್ನೆ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಭೆಯಿಂದ ಗರಂ ಆಗಿ ಹೊರಬಂದ ಕೈ ಉಸ್ತುವಾರಿ ವೇಣುಗೋಪಾಲ್!

    ಸಭೆಯಿಂದ ಗರಂ ಆಗಿ ಹೊರಬಂದ ಕೈ ಉಸ್ತುವಾರಿ ವೇಣುಗೋಪಾಲ್!

    ಬೆಂಗಳೂರು: ಸಮ್ಮಿಶ್ರ ಸರ್ಕಾರದ 2ನೇ ಹಂತದ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಬಹು ದೊಡ್ಡ ಸಮಸ್ಯೆಯಾಗಿದೆ. ಇಂದು ನಡೆದ ಸಭೆ ಬಳಿಕ ಉಸ್ತುವಾರಿ ವೇಣುಗೋಪಾಲ್ ಅವರು ಗರಂ ಆಗಿ ಹೊರ ಬಂದಿದ್ದಾರೆ.

    ಸಂಪುಟ ವಿಸ್ತರಣೆ ಅಸಮಾಧಾನದ ಹಿನ್ನೆಲೆಯಲ್ಲಿ ಕೆಲ ಶಾಸಕರ ಬಂಡಾಯದ ಗೊಂಡಿದ್ದು, ಪಕ್ಷದ ಮುಖಂಡರ ಅಸಮಾಧಾನ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‍ನಲ್ಲಿ ವೇಣುಗೋಪಾಲ್ ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಉಪಸ್ಥಿತಿ ಇದ್ದರು. ಈ ಸಭೆ ಬಳಿಕ ಹೊರಬಂದ ವೇಣು ಗೋಪಾಲ್ ಅವರು ಗರಂ ಆಗಿ ಕಂಡರು. ತಮ್ಮ ಕಾರು ಬಳಿ ತೆರಳುವ ವೇಳೆ ಸಹಾಯಕನಿಗೆ ಗರಂ ಆಗಿ ಮಾತನಾಡಿಸಿದ ವೇಣುಗೋಪಾಲ್ ಬಳಿಕ ಕಾರಿನಲ್ಲಿ ತೆರಳಿದರು.

    ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ವೇಣುಗೋಪಾಲ್, ಖಾತೆ ಹಂಚಿಕೆ ಬಗ್ಗೆ ಚರ್ಚೆ ಮಾಡಿದ್ದು, ಪಕ್ಷದ ಅಧ್ಯಕ್ಷರು ಖಾತೆ ಅಂತಿಮಗೊಳಿಸುತ್ತಾರೆ. ಆದಷ್ಟು ಬೇಗ ಖಾತೆ ಹಂಚಿಕೆ ಆಗಲಿದೆ. ಕಾಂಗ್ರೆಸ್‍ನಲ್ಲಿ ಯಾವುದೇ ರೀತಿಯ ಅಸಮಾಧಾನ, ಗೊಂದಲ ಇಲ್ಲ. ಯಾರೂ ಕೂಡ ಕಾಂಗ್ರೆಸ್ ಬಿಟ್ಟು ಹೋಗುವುದು ಇಲ್ಲ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಸ್ಪಷ್ಟನೆ ಪಡಿಸಿದರು.

    ಇದೇ ವೇಳೆ ರಮೇಶ್ ಜಾರಕಿಹೊಳಿ ಅವರ ಅಸಮಾಧಾನದ ಬಗ್ಗೆ ಉತ್ತರಿಸಿದ ಅವರು, ರಮೇಶ್ ಜಾರಕಿಹೊಳಿ ನಮ್ಮ ಉತ್ತಮ ನಾಯಕರಾಗಿದ್ದು, ಅವರೊಂದಿಗೆ ಯಾವುದೇ ಸಮಸ್ಯೆ ಇಲ್ಲ. ಅಲ್ಲದೇ ಪಕ್ಷದ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಅವರರೊಂದಿಗೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದರು. ಇದನ್ನು ಓದಿ: ಫೈನಲ್ ಆಯ್ತು ಖಾತೆ ಹಂಚಿಕೆ – ಕೊನೆಗೂ ಗೆದ್ದ ಸಿದ್ದರಾಮಯ್ಯ: ಯಾರಿಗೆ ಯಾವ ಖಾತೆ?

    ಇತ್ತ ಖಾತೆ ಹಂಚಿಕೆ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಪರಮೇಶ್ವರ್ ನಡುವೆ ಕಿತ್ತಾಟ ನಡೆಸಿದ್ದಾರೆ ಎನ್ನಲಾಗಿದೆ. ಡಿಸಿಎಂ ಅವರ ಬಳಿ ಸದ್ಯ ಬೆಂಗಳೂರು ನಗರಾಭಿವೃದ್ಧಿ ಹಾಗೂ ಗೃಹ ಖಾತೆ ಹೊಂದಿದ್ದಾರೆ. ಈ 2 ಖಾತೆಗಳಲ್ಲಿ ಒಂದನ್ನು ಬಿಟ್ಟುಕೊಡುವಂತೆ ಸಿದ್ದರಾಮಯ್ಯ ಕೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪರಮೇಶ್ವರ್ ಅವರು ನಿರಾಕರಿಸಿದ್ದಾರೆ. ಆದರೆ ಪಕ್ಷಕ್ಕೆ ಒಳಿತಾಗುವ ಕಾರಣ ಹೇಳಿ ಒಂದು ಖಾತೆ ಬಿಟ್ಟು ಕೊಡಲು ಸಿದ್ದರಾಮಯ್ಯ ಕೇಳಿದ್ದರಿಂದ ಇಬ್ಬರ ನಡುವಿನ ಅಸಮಾಧಾನ ಉಂಟಾಗಿದ್ದು, ಈ ಚರ್ಚೆ ಸದ್ಯ ಹೈಕಮಾಂಡ್‍ಗೆ ತಲುಪಿದೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೋಸ್ತಿ ಸರ್ಕಾರದಲ್ಲಿ ಹೊಸ ಕುಸ್ತಿ-ಪವರ್ ಫುಲ್ ಖಾತೆಗಳ ಬೆನ್ನುಬಿದ್ದ ಪ್ರಭಾವಿಗಳು!

    ದೋಸ್ತಿ ಸರ್ಕಾರದಲ್ಲಿ ಹೊಸ ಕುಸ್ತಿ-ಪವರ್ ಫುಲ್ ಖಾತೆಗಳ ಬೆನ್ನುಬಿದ್ದ ಪ್ರಭಾವಿಗಳು!

    ಬೆಂಗಳೂರು: ಇಷ್ಟು ದಿನ ಸಂಪುಟ ವಿಸ್ತರಣೆ ಯಾವಾಗ ಎಂಬ ಪ್ರಶ್ನೆ ಸಮ್ಮಿಶ್ರ ಸರ್ಕಾರದ ಅಂಗಳದಲ್ಲಿ ಕೇಳಿಬರುತ್ತಿತ್ತು. ಕಾಂಗ್ರೆಸ್ ಇಬ್ಬರು ಸಚಿವರಿಗೆ ಕೊಕ್ ನೀಡಿ ಸಂಪುಟವನ್ನು ಪುನರ್ ರಚನೆ ಮಾಡಿದೆ. ನೂತನ ಸಚಿವರಾಗಿ 8 ಕಾಂಗ್ರೆಸ್ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಖಾತೆ ಹಂಚಿಕೆ ಯಾವಾಗ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಮತ್ತೆ ಕೆಲವರು ಇದೇ ಖಾತೆಯನ್ನು ನೀಡಿ ಅಂತಾ ಲಾಭಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಹಾಲಿ ಸಚಿವರು ಮತ್ತು ನೂತನ ಸಚಿವರ ನಡುವೆ ಖಾತೆಗಾಗಿ ಶೀತಲ ಸಮರ ಏರ್ಪಟ್ಟಿದೆ. ಎಂ.ಬಿ.ಪಾಟೀಲ್ ಮತ್ತು ಪರಮೇಶ್ವರ್, ಡಿಕೆ ಶಿವಕುಮಾರ್ ನಡುವೆ ಖಾತೆಗಾಗಿ ಮುಸುಕಿನ ಗುದ್ದಾಟ ಏರ್ಪಟ್ಟಿದ್ದು, ಗೃಹ ಅಥವಾ ಜಲಸಂಪನ್ಮೂಲ ಖಾತೆ ನೀಡಬೇಕೆಂದು ಪಾಟೀಲರು ಪಟ್ಟು ಹಿಡಿದಿದ್ದಾರಂತೆ. ಇದೇ ರೀತಿಯಲ್ಲಿ ಸತೀಶ್ ಜಾರಕಿಹೊಳಿ ಮತ್ತು ಕೃಷ್ಣಭೈರೇಗೌಡರ ಮಧ್ಯೆಯೂ ಖಾತೆಗಾಗಿ ಪೈಪೋಟಿ ಏರ್ಪಟ್ಟಿದೆಯಂತೆ. ಕೃಷ್ಣೌಭೈರೇಗೌಡರ ಬಳಿಯಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯನ್ನು ನೀಡಬೇಕೆಂದು ಸತೀಶ್ ಜಾರಕಿಹೊಳಿ ಕೇಳಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಡಿಕೆಶಿವಕುಮಾರ್ ಜಲಸಂಪನ್ಮೂಲ ಖಾತೆಯನ್ನು ಬಿಟ್ಟುಕೊಡಲು ಒಪ್ಪುತ್ತಿಲ್ಲ. ಇತ್ತ ಜಿ.ಪರಮೇಶ್ವರ್ ಸಹ ಗೃಹ ಖಾತೆ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಸುದ್ದಿ ಕಾಂಗ್ರೆಸ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಕಾಂಗ್ರೆಸ್ ಮನೆಯಲ್ಲಿ ಸದಸ್ಯರ ನಡುವೆಯೇ ನಾ ಕೊಡೆ, ನಾ ಬಿಡೇ ಆರಂಭವಾಗಿದೆ.

    ಈ ಸಮಸ್ಯೆಯನ್ನು ಬಗೆಹರಿಸಲು ರಾಜಧಾನಿ ರಾಜ್ಯ ಉಸ್ತುವಾರಿ ನಾಯಕ ವೇಣುಗೋಪಾಲ್ ಆಗಮಿಸಿದ್ದಾರೆ. ಕೆಕೆ ಗೆಸ್ಟ್ ಹೌಸ್‍ನಲ್ಲಿರುವ ವೇಣುಗೋಪಾಲ್ ಅವರನ್ನು ನೂತನ ಸಚಿವರಾದ ಎಂಟಿಬಿ ನಾಗರಾಜ್ ಮತ್ತು ರಹೀಂ ಖಾನ್ ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಎಂಟಿಬಿ ನಾಗರಾಜ್, ಪಕ್ಷದಲ್ಲಿ ಸಚಿವ ಸ್ಥಾನ ಸಿಗದವರಿಗೆ ಸಹಜವಾಗಿ ಅಸಮಾಧಾನ ಆಗುತ್ತೆ, ಹಾಗಂತ ಯಾರು ಪಕ್ಷ ಬಿಟ್ಟು ಹೋಗಲ್ಲ. ಅಸಮಾಧಾನವನ್ನ ನಮ್ಮ ನಾಯಕರು ಸರಿ ಮಾಡ್ತಾರೆ. ನನಗೆ ಇಂತಹದ್ದೇ ಖಾತೆ ಬೇಕು ಅಂತ ನಾನು ಕೇಳಿಲ್ಲ. ಯಾವುದೇ ಕೊಟ್ರು ಪ್ರಾಮಾಣಿಕವಾಗಿ ಕೆಲಸ ಮಾಡ್ತೀನಿ ಅಂತಾ ಹೇಳಿದ್ದಾರೆ.

    ಪ್ರತಿಬಾರಿಯೂ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯ ಆಗುತ್ತದೆ. ಈ ಅನ್ಯಾಯ ಸರಿಪಡಿಸುವಂತೆ ವೇಣುಗೋಪಾಲ್ ಅವರ ಬಳಿ ಮನವಿ ಮಾಡಿದ್ದೇನೆ. ಖಾತೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ. ಯಾವುದೇ ಖಾತೆ ಕೊಟ್ರು ನಿಭಾಯಿಸುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅಸಮಾಧಾನದ ಬಗ್ಗೆ ಗೊತ್ತಿಲ್ಲ. ಯಾವುದೇ ಖಾತೆ ನೀಡಿದರೂ ಓಕೆ ಅಂದಿದ್ದೇನೆ ಎಂದು ರಹೀಂ ಖಾನ್ ತಿಳಿಸಿದರು. ವೇಣುಗೋಪಾಲ್ ಅವರ ಸಮ್ಮುಖದಲ್ಲಿ ಸಭೆ ನಡೆಸಿ ಇಂದು ಸಂಜೆಯೊಳಗಾಗಿ ಖಾತೆ ಹಂಚಿಕೆಯಾಗುವ ಸಾಧ್ಯತೆಗಳಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಗ್ರಪ್ಪನ ಗೆಲ್ಲಿಸಿದ ರೂವಾರಿಗಳಿಗೆ ಸಚಿವ ಸ್ಥಾನದ ಕನಸು – ನ. 12ರ ನಂತರ ಸಂಪುಟ ವಿಸ್ತರಣೆ

    ಉಗ್ರಪ್ಪನ ಗೆಲ್ಲಿಸಿದ ರೂವಾರಿಗಳಿಗೆ ಸಚಿವ ಸ್ಥಾನದ ಕನಸು – ನ. 12ರ ನಂತರ ಸಂಪುಟ ವಿಸ್ತರಣೆ

    ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಹೊಸ ಲೆಕ್ಕಾಚಾರವೊಂದು ಶುರುವಾಗಿದೆ. ಉಗ್ರಪ್ಪರನ್ನು ಲೀಡ್ ಕೊಟ್ಟು ಗೆಲ್ಲಿಸಿದ್ದ ಕಾಂಗ್ರೆಸ್ ಶಾಸಕರ ಕನಸು ಚಿಗುರಿದೆ.

    ಉಗ್ರಪ್ಪರನ್ನ ಗೆಲ್ಲಿಸಿದ ಬಳ್ಳಾರಿಯ 6 ಜನ ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ…? ಯಾರಾಗಲಿದ್ದಾರೆ ಬಳ್ಳಾರಿ ಕೋಟೆಯ ಸಾಮ್ರಾಟ ಅನ್ನೋ ಕುತೂಹಲ ಮತ್ತೆ ಮೂಡಿದೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಸೋಲಿನ ಆತಂಕದಲ್ಲಿದ್ದ ಸಿದ್ದರಾಮಯ್ಯ, ಎಲ್ಲಾ ಶಾಸಕರನ್ನು ಕರೆದು ಯಾರು ಹೆಚ್ಚು ಲೀಡ್ ಕೊಡ್ತಾರೋ ಅವರ ಹೆಸರು ಮಂತ್ರಿ ಸ್ಥಾನಕ್ಕೆ ಪರಿಗಣಿಸುವುದಾಗಿ ಟಾಸ್ಕ್ ನೀಡಿದ್ದರು. ಹೀಗಾಗಿ ಮಂತ್ರಿ ಸ್ಥಾನದ ಹಟಕ್ಕೆ ಬಿದ್ದು 6 ಮಂದಿ ಶಾಸಕರು ತಲಾ 30 ಸಾವಿರ ಲೀಡ್ ಕೊಟ್ಟರು. ಈಗ ಮಂತ್ರಿಗಿರಿ ಯಾರಿಗೆ ಎಂಬುದೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

    ಸಚಿವ ಸ್ಥಾನದ ಆ ಆರು ಆಕಾಂಕ್ಷಿಗಳು ಯಾರು..?
    * ಸಂಡೂರಿನ ತುಕಾರಾಂ ಅವರು ಮೂರನೇ ಬಾರಿಗೆ ಕಾಂಗ್ರೆಸ್ ಶಾಸಕರಾಗಿರುವ ಇವರು ರಾಜ್ಯ ಕಾಂಗ್ರೆಸ್ ನಾಯಕರ ಪಾಲಿಗೆ ಮಂತ್ರಿ ಸ್ಥಾನದ ಡಾರ್ಕ್ ಹಾರ್ಸ್ ಆಗಿದ್ದಾರೆ. ಜಾತಿ ಲೆಕ್ಕಾಚಾರದಲ್ಲಿ ತುಕಾರಾಂ ಮೇಲೆ ಮಂತ್ರಿ ಸ್ಥಾನದ ಒಲವು ಹೆಚ್ಚಿದೆ.

    * ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು 30 ಸಾವಿರದಷ್ಟು ಲೀಡ್ ತಂದುಕೊಟ್ಟಿದ್ದಾರೆ. ಇವರು ಸತತವಾಗಿ 4 ಬಾರಿ ಗೆದ್ದಿದ್ದು ಕಳೆದ ಬಾರಿ ಸಚಿವರಾಗಿದ್ದವರು. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಮೂರೂವರೆ ವರ್ಷ ಸಚಿವರಾಗಿದ್ದರು. ಇದೀಗ ಮತ್ತೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

    * ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾಗಿರೋ ಭೀಮಾ ನಾಯಕ್ ಅವರು 2ನೇ ಬಾರಿಗೆ ಶಾಸಕರಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

    * ಬಳ್ಳಾರಿ ಗ್ರಾಮೀಣ ಭಾಗದ ಶಾಸಕರಾಗಿರುವ ನಾಗೇಂದ್ರ ಕೂಡ ಇದೀಗ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇವರು 3 ನೇ ಬಾರಿ ಶಾಸಕರಾಗಿದ್ದಾರೆ.

    * ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇವರು ಈ ಹಿಂದೆ ಹಲವು ಬಾರಿ ತನಗೆ ಸಚಿವ ಸ್ಥಾನ ನೀಡಲೇಬೇಕೆಂದು ಒತ್ತಾಯಿಸಿದ್ದರು.

    * ಕಂಪ್ಲಿ ಶಾಸಕ ಗಣೇಶ್ ಅವರು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿದ್ದರೂ ಕೂಡ ಸಚಿವ ಸ್ಥಾನ ನೀಡಬೇಕೆಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ನನ್ನ ಶರ್ಟ್ ಹಿಡಿದು ಕೇಳುವ ಹಕ್ಕು ಬಳ್ಳಾರಿ ಜನರಿಗಿದೆ: ವಿ.ಎಸ್ ಉಗ್ರಪ್ಪ

    ಒಟ್ಟಿನಲ್ಲಿ ಕಾಂಗ್ರೆಸ್ ಶಾಸಕರಿಗೆ ಈ ತಿಂಗಳ 12ರ ನಂತರ ಬಂಪರ್ ಗಿಫ್ಟ್ ಸಿಗೋದು ಗ್ಯಾರಂಟಿಯಾಗಿದೆ. ಸಂಪುಟ ವಿಸ್ತರಣೆಗೆ ನವಂಬರ್ 12ರ ನಂತರ ಮುಹೂರ್ತ ಫಿಕ್ಸ್ ಆಗಿದ್ದು, ಕಾಂಗ್ರೆಸ್-ಜೆಡಿಎಸ್ ಹೈಕಮಾಂಡ್ ಮಾತುಕತೆ ಪ್ರಕಾರ ನವೆಂಬರ್ 12 ರ ನಂತರ ಸಂಪುಟ ವಿಸ್ತರಣೆ ನಡೆಯಲಿದೆ.

    ಚುನಾವಣಾ ಫಲಿತಾಂಶ ದಿನದಂದೇ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ದೇವೇಗೌಡರನ್ನ ಭೇಟಿಯಾಗಿದ್ದರು. ಈ ವೇಳೆ ಆದಷ್ಟು ಬೇಗ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕಾತಿಗೆ ದೇವೇಗೌಡರು ಸೂಚನೆ ನೀಡಿದ್ದಾರೆ. ಅಲ್ಲದೇ ಈ ಕುರಿತು ವೇಣುಗೋಪಾಲ್ ಅವರು ನವೆಂಬರ್ 9 ರಂದು ರಾಹುಲ್ ಗಾಂಧಿ ಜೊತೆ ಸಹ ದೂರವಾಣಿಯಲ್ಲಿ ದೂರವಾಣಿಯಲ್ಲಿ ಚರ್ಚೆ ನಡೆಸಲಿದ್ದಾರೆ. ನವೆಂಬರ್ 09, 10ರಂದು ಕಾಂಗ್ರೆಸ್, ಜೆಡಿಎಸ್ ನಾಯಕರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಯಲಿದೆ. ನ.11ರ ಹೈಕಮಾಂಡ್‍ಗೆ ರಾಜ್ಯ ಕಾಂಗ್ರೆಸ್ ನಾಯಕರು ಅಂತಿಮ ಪಟ್ಟಿ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿಯೊಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ:  ಸೋಲು ಅನಾಥ, ನಾನೇ ಬಳ್ಳಾರಿ ಸೋಲಿನ ಹೊಣೆ ಹೊರುತ್ತೇನೆ: ಶ್ರೀರಾಮುಲು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚೆನ್ನಮ್ಮ ದೇವೇಗೌಡ, ಎಚ್‍ಡಿಕೆ, ರೇವಣ್ಣ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಂಎಲ್‍ಸಿ

    ಚೆನ್ನಮ್ಮ ದೇವೇಗೌಡ, ಎಚ್‍ಡಿಕೆ, ರೇವಣ್ಣ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಂಎಲ್‍ಸಿ

    ಬೆಂಗಳೂರು: ನೂತನವಾಗಿ ವಿಧಾನ ಪರಿಷತ್ ಗೆ ಆಯ್ಕೆಯಾದ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ಈ ವೇಳೆ ಜೆಡಿಎಸ್ ಪಕ್ಷದ ಸದಸ್ಯ ರಮೇಶ್ ಗೌಡ ಅವರು ಚೆನ್ನಮ್ಮ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ವೀಕರ್ ಮತ್ತೊಮ್ಮೆ ಪ್ರಮಾಣ ವಚನ ನೀಡಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಇಬ್ಬರು ನೂತನ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ ವಚನ ಬೋಧನೆ ಮಾಡಿದರು. ಜೆಡಿಎಸ್ ನ ರಮೇಶ್ ಗೌಡ ಹಾಗೂ ಕಾಂಗ್ರೆಸ್ ನ ವೇಣುಗೋಪಾಲ್ ಪರಿಷತ್ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದರು. ಮೊದಲು ಚೆನ್ನಮ್ಮ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಬಳಿಕ ರಮೇಶ್ ಗೌಡ ಅವರು 2ನೇ ಬಾರಿಗೆ ಸತ್ಯ, ನಿಷ್ಠೆ, ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

    ಡಿಸಿಎಂ ಬರೋವರೆಗೂ ಕಾದು ಕುಳಿತ ವೇಣುಗೋಪಾಲ್:
    ಜೆಡಿಎಸ್ ಪಕ್ಷದ ಸದಸ್ಯರ ಬಳಿಕ ಪ್ರಮಾಣ ಸ್ವೀಕರಿಸಬೇಕಾಗಿದ್ದ ಕಾಂಗ್ರೆಸ್ ಪಕ್ಷದ ವೇಣುಗೋಪಾಲ್ ಅವರು ಡಿಸಿಎಂ ಪರಮೇಶ್ವರ್ ಅವರು ಬರುವವರೆಗೂ ಪ್ರಮಾಣ ವಚನ ಸ್ವೀಕಾರ ಮಾಡಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು. ಹೀಗಾಗಿ ಬೆಳಗ್ಗೆ 11 ಗಂಟೆಗೆ ನಡೆಯಬೇಕಾಗಿದ್ದ ಪ್ರಮಾಣ ಸ್ವೀಕಾರ 10 ನಿಮಿಷ ತಡವಾಗಿ ನಡೆಯಿತು. ಸ್ವೀಕರ್ ಬಸವರಾಜ್ ಹೊರಟ್ಟಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡಿ ಡಿಸಿಎಂ ಪರಮೇಶ್ವರ್ ಅವರು ಆಗಮಿಸುವವರೆಗೂ ಕಾದುಕುಳಿತರು. ಪರಮೇಶ್ವರ್ ಆಗಮಿಸಿದ ಬಳಿಕ ವೇಣುಗೋಪಾಲ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್ ಭಿನ್ನಮತ ಶಮನಕ್ಕೆ ವೇಣುಗೋಪಾಲ್ ಸಭೆ

    ಕಾಂಗ್ರೆಸ್ ಭಿನ್ನಮತ ಶಮನಕ್ಕೆ ವೇಣುಗೋಪಾಲ್ ಸಭೆ

    – ಬಿಜೆಪಿಯವರು ನೈತಿಕವಾಗಿ ದಿವಾಳಿಯಾಗಿದ್ದಾರೆ

    ಬೆಂಗಳೂರು: ಕಾಂಗ್ರೆಸ್ ಭಿನ್ನಮತ ಶಮನಕ್ಕೆ ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೆಣುಗೋಪಾಲ್ ಕುಮಾರಕೃಪಾ ಅತಿಥಿ ಗೃಹದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

    ಪದಾಧಿಕಾರಿಗಳ ಬದಲಾವಣೆ, ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಇದಕ್ಕೂ ಮೊದಲು ಮಾತನಾಡಿದ ವೇಣುಗೋಪಾಲ್ ಬಿಜೆಪಿಯವರು ನೈತಿಕವಾಗಿ ದಿವಾಳಿಯಾಗಿದ್ದಾರೆ. ಈ ಎಲ್ಲವನ್ನ ಬಿಜೆಪಿಯವರೇ ಕ್ರಿಯೇಟ್ ಮಾಡ್ತಿದ್ದಾರೆ. ನಮ್ಮ ಶಾಸಕರಿಗೆ ದೂರವಾಣಿ ಕರೆ ಮಾಡಿ ಒಂದಲ್ಲ, ಎರಡಲ್ಲ. ಕೋಟಿ ಕೋಟಿ ಆಫರ್ ನೀಡಿದ್ದಾರೆ. ಇದೆಲ್ಲವೂ ಬಿಜೆಪಿ ನಾಯಕರ ಷಡ್ಯಂತ್ರ ಎಂದು ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಭಯವಿಲ್ಲ. ಸರ್ಕಾರ ನೂರು ದಿನ ಪೂರೈಸಿ ಮುನ್ನಡೆಯುತ್ತಿದೆ. ಆದ್ರೆ ಬಿಜೆಪಿ ಹಿಂಬಾಗಿಲಿನಿಂದ ಅಧಿಕಾರ ಪಡೆಯಲು ವಿಫಲ ಯತ್ನ ನಡೆಸುತ್ತಿದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಕಾಂಗ್ರೆಸ್ ಶಾಸಕರು ಯಾವುದೇ ಕಾರಣಕ್ಕೂ ಬಿಜೆಪಿ ಸೇರ್ಪಡೆ ಆಗಲ್ಲ. ನಮ್ಮ ಎಲ್ಲ ಶಾಸಕರ ಮೇಲೆ ನಮಗೆ ನಂಬಿಕೆ ಇದೆ. ಇದೇ ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡಲಿದ್ದೇವೆ ಅಂತಾ ತಿಳಿಸಿದರು.

    ಸಭೆಯಲ್ಲಿ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಜಾರಕಿಹೊಳಿ ಸಹೋದರರ ಸಮಸ್ಯೆ ಕುರಿತಾಗಿ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ. ಕುಮಾರಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಡಿಸಿಎಂ ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಸಹ ಭಾಗಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೈ ಹೈಕಮಾಂಡ್‍ಗೆ ತಲೆನೋವಾಯ್ತು ಬೆಳಗಾವಿ ಸಂಘರ್ಷ- ಸದ್ಯಕ್ಕೆ ಸುಮ್ಮನಿರಿ ಅಂದ್ರು ವೇಣುಗೋಪಾಲ್

    ಕೈ ಹೈಕಮಾಂಡ್‍ಗೆ ತಲೆನೋವಾಯ್ತು ಬೆಳಗಾವಿ ಸಂಘರ್ಷ- ಸದ್ಯಕ್ಕೆ ಸುಮ್ಮನಿರಿ ಅಂದ್ರು ವೇಣುಗೋಪಾಲ್

    ಬೆಳಗಾವಿ: ಕಾಂಗ್ರೆಸ್ ಹೈ ಕಮಾಂಡ್‍ಗೂ ಬೆಳಗಾವಿ ರಾಜಕೀಯ ಕಲಹ ತಲೆನೋವಾಗಿದೆ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಭುಗಿಲೆದ್ದಿದೆ.

    ತಡರಾತ್ರಿವರೆಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಎರಡು ಬಣದವರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ರು. ತಮಗಾಗುತ್ತಿರುವ ಕಿರಿಕಿರಿ ಬಗ್ಗೆ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಪರಸ್ಪರ ದೂರು ನೀಡಿದ್ರು. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ಸಹೋದರರಿಂದ ರಾಜ್ಯ ನಾಯಕರಿಗೆ ದೂರು!

    ಬಿಜೆಪಿ ಪ್ರಾಬಲ್ಯದ ನಡುವೆ ದೊಡ್ಡ ಜಿಲ್ಲೆಯಲ್ಲಿ ಕಷ್ಟಪಟ್ಟು ಪಕ್ಷ ಕಟ್ಟಿದ್ದು ನಾವು. ನಮಗೆ ಗೌರವ ಇಲ್ಲಾ ಅಂದ್ರೆ ಹೇಗೆ ಎಂದು ರಮೇಶ್ ಜಾರಕಿಹೊಳಿ ಪ್ರಶ್ನಿಸಿದ್ರು. ಅಷ್ಟೇ ಅಲ್ಲ ಏನೆ ಇದ್ದರು ನಮ್ಮ ಬಳಿ ಚರ್ಚಿಸಬಹುದು. ಅದು ಬಿಟ್ಟು ನಮ್ಮ ಮೇಲೆ ಡಾಮಿನೇಟ್ ಮಾಡೋಕೆ ಬಂದ್ರೆ ಕೈಕಟ್ಟಿ ಕೂರೋಕೆ ಆಗಲ್ಲ. ಪದೇ ಪದೇ ಸಹೋದರ ಸತೀಶ್ ಜಾರಕಿಹೋಳಿ ವಿರುದ್ಧ ಜಿದ್ದಿಗೆ ಬಿದ್ದಿದ್ದಾರೆ. ಅವರನ್ನ ಮನವೊಲಿಸೋದು ಕಷ್ಟ ಅಂದ್ರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ದೊಡ್ಡವರು ನನಗೆ ಆದರ್ಶ, ಮಹಾಗುರು: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಹೀಗೆ ರಾಜ್ಯ ನಾಯಕರಲ್ಲದೆ ಎಐಸಿಸಿ ಮಟ್ಟದಲ್ಲಿಯೂ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ಕೊನೆಗೆ ಎರಡು ಬಣಕ್ಕೂ ಸದ್ಯಕ್ಕೆ ಸುಮ್ಮನಿರಿ, ಯಾರು ಬಹಿರಂಗವಾಗಿ ಮಾತನಾಡಬೇಡಿ ಅಂತ ಸೂಚನೆ ನೀಡಿ ವೇಣುಗೋಪಾಲ್ ಸುಮ್ಮನಾಗಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ; ಪಿಎಲ್‍ಡಿ ಬ್ಯಾಂಕ್ ಚುನಾವಣೆ: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ಸಹೋದರರು ಗರಂ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟಗರು ಹೆಜ್ಜೆ ಹಿಂದಕ್ಕೆ ಇಟ್ಟಿದೆ ಅಂದ್ರೆ ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದರ್ಥ: ಸಿದ್ದು ಪರ ಕಾಗಿನೆಲೆ ಶ್ರೀ ಬ್ಯಾಟಿಂಗ್

    ಟಗರು ಹೆಜ್ಜೆ ಹಿಂದಕ್ಕೆ ಇಟ್ಟಿದೆ ಅಂದ್ರೆ ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದರ್ಥ: ಸಿದ್ದು ಪರ ಕಾಗಿನೆಲೆ ಶ್ರೀ ಬ್ಯಾಟಿಂಗ್

    ದಾವಣಗೆರೆ: ಟಗರು ಕಾಳಗದಲ್ಲಿ ಹೆಜ್ಜೆ ಹಿಂದಕ್ಕೆ ಇಟ್ಟಿದೆ ಎಂದರೆ ಅದು ಹೆದರಿ ಅಂತಾ ಅಲ್ಲ. ಮುಂದೆ ಹೆಜ್ಜೆ ಇಡಲು ಸಿದ್ಧವಾಗುತ್ತಿದೆ ಎಂದು ಸಿನಿಮೀಯ ಸ್ಟೈಲ್ ನಲ್ಲಿ ಹರಿಹರ ತಾಲ್ಲೂಕಿನ ಕಾಗಿನೆಲೆ ಮಠದ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.

    ಬೆಳ್ಳೂಡಿಯ ಕಾಗಿನೆಲೆ ಕನಕ ಗುರು ಪೀಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೌನವಾಗಿರುವುದನ್ನು ಶ್ರೀಗಳು, ಟಗರು ಕಾಳಗಕ್ಕೆ ಹೋಲಿಸಿದ್ದು, ಟಗರು ಕಾಲು ಕೆದರಿ ಮುನ್ನುಗ್ಗಿ ಹೊಡೆದರೆ ಎಲ್ಲಾ ಛಿದ್ರ ಛಿದ್ರವಾಗುತ್ತದೆ ಎಂದು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.

     

    ಸಮ್ಮಿಶ್ರ ಸರ್ಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗುತ್ತದೆ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಕಷ್ಟವಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಶ್ರೀಗಳು ಎಚ್ಚರಿಕೆ ನೀಡಿದರು.

    ಸಾಕಷ್ಟು ಅಧಿಕಾರಿಗಳು ನನ್ನ ಬಳಿ ಬಂದು ವರ್ಗಾವಣೆ ಮಾಡುತ್ತಿರುವ ಕುರಿತು ಅಳಲು ತೊಡಿಕೊಂಡಿದ್ದಾರೆ. ಆದರೆ ಅಧಿಕಾರಿಗಳ ಹೆಸರನ್ನು ಬಹಿರಂಗ ಪಡಿಸುವುದಿಲ್ಲ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆರ್.ಶಂಕರ್ ಅವರಿಗೆ ಮಂತ್ರಿಗಿರಿ ನೀಡಿದ್ದು, ಪಕ್ಷೇತರ ಎಂಬ ಉದ್ದೇಶಕ್ಕೆ ಹೊರತು ಕುರುಬರ ಸಮಾಜದವರು ಅಂತಾ ಅಲ್ಲ. ನಮ್ಮ ಸಮಾಜಕ್ಕೆ ಎರಡು ಸಚಿವ ಸ್ಥಾನ ಕೊಡಬೇಕಾಗಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಗೌಡರು, ಲಿಂಗಾಯತರ ಪ್ರಾಬಲ್ಯ ಹೆಚ್ಚಾಗಿದೆ. ಕುರುಬ ಸಮುದಾಯಕ್ಕೆ ಉತ್ತಮ ಸ್ಥಾನ ಮಾನ ಒದಗಿಸಿಕೊಡಬೇಕು ಇಲ್ಲದಿದ್ದರೇ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶ್ರೀಗಳು ಎಚ್ಚರಿಕೆ ನೀಡಿದರು.