Tag: venugopal

  • ನಾನು ತಪ್ಪು ಮಾಡಿದ್ರೆ, ಸಾರ್ವಜನಿಕ ಜೀವನದಿಂದ ನಿವೃತ್ತಿ: ವೇಣುಗೋಪಾಲ್

    ನಾನು ತಪ್ಪು ಮಾಡಿದ್ರೆ, ಸಾರ್ವಜನಿಕ ಜೀವನದಿಂದ ನಿವೃತ್ತಿ: ವೇಣುಗೋಪಾಲ್

    ಬೆಂಗಳೂರು: ನಾನು ತಪ್ಪು ಮಾಡಿದ್ದೇನೆಂದು ಸಾಬೀತಾದರೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

    ಶಾಂತಿನಗರದಲ್ಲಿ ಇಂದು ಬೆಂಗಳೂರಿನಿಂದ ಕೇರಳದ ಆಲೆಪ್ಪಿಗೆ ಜೆಎಸ್‍ಆರ್‍ಡಿಸಿ ಬಸ್ಸು ಸೇವೆಗೆ ಹಸಿರು ನಿಶಾನೆ ತೋರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಆರೋಪಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

    ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಈ ರೀತಿಯ ಆರೋಪಗಳನ್ನು ವಿಪಕ್ಷಗಳು ಮೊದಲಿನಿಂದಲೂ ಮಾಡಿಕೊಂಡು ಬಂದಿವೆ. ನಾನು ಚುನಾವಣೆಗೆ ನಿಂತಾಗ ಹೆಚ್ಚು ಅಪಪ್ರಚಾರ ಮಾಡಿದ್ದರು. ಸರೀತಾ ನಾಯರ್ ಮೇಲೆ 36 ಕ್ರಿಮಿನಲ್ ಕೇಸುಗಳಿವೆ. ಅವರು ನನ್ನ ಬಗ್ಗೆ ಆರೋಪ ಮಾಡಿದ್ದು ವಿರುದ್ಧ ನಾನು ಎರ್ನಾಕುಲಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದರು.

    ಬೆಂಗಳೂರಿನ ಮಳೆಗೆ 5 ಜನ ಸಾವನ್ನಪ್ಪಿದ್ದಾರೆ. ಇದು ಆಕಸ್ಮಿಕವಾಗಿ ಆಗಿರುವ ಘಟನೆ. ಇನ್ನು ಮುಂದೆ ಈ ರೀತಿ ಆಗದ ರೀತಿಯಲ್ಲಿ ಸರಿಪಡಿಸಿಕೊಳ್ಳುತ್ತೇವೆಂದು ತಿಳಿಸಿದರು.

    ಪ್ರಧಾನಿ ಮೋದಿ ವಿರುದ್ಧ ಸಚಿವ ರೋಷನ್ ಬೇಗ್ ಅವಾಚ್ಯ ಶಬ್ದ ಬಳಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಎಐಸಿಸಿಯ ಪರವಾಗಿ ಮಾತನಾಡುತ್ತಿದ್ದೇನೆ. ಬಿಜೆಪಿಯ ನಾಯಕರು ಇದಕ್ಕಿಂತ ಹೆಚ್ಚಾಗಿ ಕಾಮೆಂಟ್ ಮಾಡಿದ್ದಾರೆ. ರೋಷನ್ ಬೇಗ್‍ಗಿಂತ ಕೆಟ್ಟದಾಗಿ ಮಾತನಾಡಿದ್ದು ಕೇಳಿದ್ದೇನೆ. ರೋಷನ್ ಬೇಗ್ ಉದ್ದೇಶ ಪೂರಕವಾಗಿ ಮಾತನಾಡಿಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡಿದರೂ ಸಹ ಇಂತಹ ಪದ ಬಳಕೆ ಸರಿ ಅಲ್ಲ. ರಾಹುಲ್ ಗಾಂಧಿ ಅವರು ಕೆಲವೇ ದಿನಗಳಲ್ಲಿ ಎಐಸಿಸಿ ಅಧ್ಯಕ್ಷರಾಗಲಿದ್ದಾರೆ. ಕೆಪಿಸಿಸಿ ಸಹ ಇದರ ಪರವಾಗಿದೆ ಎಂದು ತಿಳಿಸಿದರು.

    ಏನಿದು ಪ್ರಕರಣ?
    ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ 2013ರ ಜುಲೈನಲ್ಲಿ ಜೈಲಿನಿಂದಲೇ ಒಂದು ಪತ್ರ ಬರೆದಿದ್ದರು. ಆ ಪತ್ರವನ್ನು ಆಧರಿಸಿ ರಾಜ್ಯದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗುವ ಸಾಧ್ಯತೆಯಿದೆ.

    ಸೋಲಾರ್ ಹಗರಣದ ಬಗ್ಗೆ ಈ ಹಿಂದೆ ತಿರುವನಂತಪುರಂನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್, ಸರಿತಾ ನಾಯರ್ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆದಿದೆ. ಹೀಗಾಗಿ ಸರಿತಾ ನಾಯರ್ ಪತ್ರದಲ್ಲಿ ಯಾರ ಹೆಸರನ್ನು ಬರೆದಿದ್ದಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ತಿಳಿಸಿದ್ದರು.

    ಕೇರಳ ಸಿಎಂ ಪಿಣರಾಯ್ ವಿಜಯನ್ ನೇತೃತ್ವದ ಎಡಪಕ್ಷಗಳ ಒಕ್ಕೂಟದ ಸರ್ಕಾರಕ್ಕೆ ಸೋಲಾರ್ ತನಿಖಾ ಆಯೋಗದ ವರದಿ ಬಂದಿದ್ದು, ಆರೋಪಿ ಸರಿತಾ ಪತ್ರದಲ್ಲಿ ಉಲ್ಲೇಖ ಮಾಡಿರುವ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಬಹುದು ಎಂದು ಹೇಳಿದೆ. ಲೈಂಗಿಕ ಬಯಕೆ ಈಡೇರಿಸುವಂತೆ ಬೇಡಿಕೆ ಇಡುವುದು ಭ್ರಷ್ಟಾಚಾರದ ಭಾಗವೆಂದು ಪರಿಗಣಿಸಲಾಗಿದೆ. ವರದಿಯನ್ನೇ ಆಧರಿಸಿ ಕಾಂಗ್ರೆಸ್‍ಗೆ ಶಾಕ್ ನೀಡಲು ಕೇರಳದ ಎಡಪಕ್ಷಗಳ ಸರ್ಕಾರ ಮುಂದಾಗಿದೆ.

    ಮಾಧ್ಯಮಗಳಿಗೆ ಸೋರಿಕೆಯಾಗಿರುವ ಮಾಹಿತಿ ಪ್ರಕಾರ ಮಾಜಿ ಸರಿತಾ ನಾಯರ್ ಪತ್ರದಲ್ಲಿ, ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಸಂಸದ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಆಗಿರುವ ವೇಣುಗೋಪಾಲ್, ಹೈಬಿ ಈಡನ್, ಅರ್ಯಾಡನ್ ಮೊಹಮ್ಮದ್, ಅಡೂರ್ ಪ್ರಕಾಶ್, ಲೋಕಸಭಾ ಸಂಸದ ಜೋಸ್ ಕೆ ಮನಿ, ಕೆಪಿ ಅನಿಲ್ ಕುಮಾರ್ ಹೆಸರು ಇದೆ.

     

  • ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್?

    ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್?

    ತಿರುವನಂತಪುರಂ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಬಹುಕೋಟಿ ಸೋಲಾರ್ ಹಗರಣದಲ್ಲಿ ಏಕಕಾಲಕ್ಕೆ ಭ್ರಷ್ಟಾಚಾರ ಹಾಗೂ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಲು ಕೇರಳ ಸರ್ಕಾರ ಚಿಂತನೆ ನಡೆಸಿದೆ.

    ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ 2013ರ ಜುಲೈನಲ್ಲಿ ಜೈಲಿನಿಂದಲೇ ಒಂದು ಪತ್ರ ಬರೆದಿದ್ದರು. ಆ ಪತ್ರವನ್ನು ಆಧರಿಸಿ ರಾಜ್ಯದ ಪ್ರಮಖ ರಾಜಕೀಯ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ.

    ಈ ವಿಚಾರದ ಬಗ್ಗೆ ತಿರುವನಂತಪುರಂನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್, ಸರಿತಾ ನಾಯರ್ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆದಿದೆ. ಹೀಗಾಗಿ ಸರಿತಾ ನಾಯರ್ ಪತ್ರದಲ್ಲಿ ಯಾರ ಹೆಸರನ್ನು ಬರೆದಿದ್ದಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

    ಕೇರಳ ಸಿಎಂ ಪಿಣರಾಯ್ ವಿಜಯನ್ ನೇತೃತ್ವದ ಎಡಪಕ್ಷಗಳ ಒಕ್ಕೂಟದ ಸರ್ಕಾರಕ್ಕೆ ಸೋಲಾರ್ ತನಿಖಾ ಆಯೋಗದ ವರದಿ ಬಂದಿದ್ದು, ಆರೋಪಿ ಸರಿತಾ ಪತ್ರದಲ್ಲಿ ಉಲ್ಲೇಖ ಮಾಡಿರುವ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಬಹುದು ಎಂದು ಹೇಳಿದೆ. ಲೈಂಗಿಕ ಬಯಕೆ ಈಡೇರಿಸುವಂತೆ ಬೇಡಿಕೆ ಇಡುವುದು ಭ್ರಷ್ಟಾಚಾರದ ಭಾಗವೆಂದು ಪರಿಗಣಿಸಲಾಗಿದೆ. ವರದಿಯನ್ನೇ ಆಧರಿಸಿ ಕಾಂಗ್ರೆಸ್‍ಗೆ ಶಾಕ್ ನೀಡಲು ಕೇರಳದ ಎಡಪಕ್ಷಗಳ ಸರ್ಕಾರ ಮುಂದಾಗಿದೆ.

    ಮಾಧ್ಯಮಗಳಿಗೆ ಸೋರಿಕೆಯಾಗಿರುವ ಮಾಹಿತಿ ಪ್ರಕಾರ ಮಾಜಿ ಸರಿತಾ ನಾಯರ್ ಪತ್ರದಲ್ಲಿ, ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಸಂಸದ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಆಗಿರುವ ವೇಣುಗೋಪಾಲ್, ಹೈಬಿ ಈಡನ್, ಅರ್ಯಾಡನ್ ಮೊಹಮ್ಮದ್, ಅಡೂರ್ ಪ್ರಕಾಶ್, ಲೋಕಸಭಾ ಸಂಸದ ಜೋಸ್ ಕೆ ಮನಿ, ಕೆಪಿ ಅನಿಲ್ ಕುಮಾರ್ ಹೆಸರು ಇದೆ.

  • ಪಕ್ಷ ಸಂಘಟನೆ ಮಾಡಿದವ್ರಿಗೆ ಮಾತ್ರ ಚುನಾವಣೆ ಟಿಕೆಟ್: ಶಾಸಕರಿಗೆ ವೇಣುಗೋಪಾಲ್ ವಾರ್ನಿಂಗ್

    ಪಕ್ಷ ಸಂಘಟನೆ ಮಾಡಿದವ್ರಿಗೆ ಮಾತ್ರ ಚುನಾವಣೆ ಟಿಕೆಟ್: ಶಾಸಕರಿಗೆ ವೇಣುಗೋಪಾಲ್ ವಾರ್ನಿಂಗ್

    ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸಂಘಟನೆ ಮಾಡಿದವರಿಗಷ್ಟೆ ಟಿಕೆಟ್ ನೀಡಲಾಗುವುದು ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಲಿ ಶಾಸಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಭಾಗವಹಿಸಿದ ಅವರು ಶಾಸಕರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ರಾಜ್ಯದಲ್ಲಿ ಪಕ್ಷ ಸಂಘಟನೆ ಕಾರ್ಯ ಕುಂಠಿತವಾಗಿದೆ. ಕಾಂಗ್ರೆಸ್ ಶಾಸಕರು ಇರುವ ಸ್ಥಳದಲ್ಲೇ ಪಕ್ಷ ಸಂಘಟನೆಗೆ ಹಿನ್ನಡೆಯಾಗಿದೆ. ಸದ್ಯ ಪಕ್ಷ ಸಂಘಟೆನಯಲ್ಲಿ ವಿಫಲರಾಗಿರುವ ಹಾಲಿ ಶಾಸಕರಿಗೆ ಟಿಕೆಟ್ ನೀಡಬಾರದು ಎಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ ನಿಷ್ಠೆಯಿಂದ ಪಕ್ಷ ಸಂಘಟನೆ ಮಾಡಿರುವ ಶಾಸಕರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಹೇಳಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮುಂದಿನ ಸಿಎಂ ಯಾರು ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆದಿದ್ದು ಈ ವೇಳೆ ಸಿಎಂ ಯಾರು ಅನ್ನೋ ವಿಚಾರ ವಿವಾದ ಮಾಡುವುದು ಬೇಡ. 2018ರ ಚುನಾವಣೆಯಲ್ಲಿ ತೀರ್ಮಾನವಾಗುತ್ತದೆ. ಈ ವಿಚಾರವಾಗಿ ಯಾರು ಬಹಿರಂಗವಾಗಿ ಹೇಳಿಕೆ ನೀಡಬೇಡಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

                                  

    ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ವಿಫಲ ಅನ್ನೋದೆಲ್ಲಾ ಸುಳ್ಳು. ಉತ್ತಮವಾಗಿ ನಡೆಯುತ್ತಿದೆ. ಕಾರ್ಯಕ್ರಮವನ್ನು ಮತ್ತಷ್ಟು ಚುರುಕುಗೊಳಿಸುವಂತೆ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಿಗೆ ಹಾಗೂ ಮುಖಂಡರಿಗೆ ಸೂಚನೆ ಕೊಟ್ಟ ವೇಣುಗೋಪಾಲ್ ಮುಂದಿನ ಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಬೇಕು ಅಂತಾ ಹೈಕಮಾಂಡ್ ಹೇಳಿದೆ. ಆದರೆ ಮುಂದಿನ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ಮುಂದೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

    ಸೋಷಿಯಲ್ ಮೀಡಿಯಾದಲ್ಲಿ ಭಾಗಿಯಾಗದೇ ಇರುವವರ ಬಗ್ಗೆ ಮಾತನಾಡಿದ ಅವರು, ಎಲ್ಲವನ್ನೂ ನೀವೇ ಮಾಡಲ್ಲ. ನಿಮಗೂ ಪಿಎ ಗಳಿದ್ದಾರೆ ಅಲ್ವಾ? ಅವರ ಕೈಲಿ ಮಾಡಿಸಿ. ಇಲ್ಲದೇ ಇದ್ದರೆ ಬೇರೆಯವರಿಗೆ ಕೊಟ್ಟು ಕೆಲಸ ಮಾಡಿಸಿ. ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಎಲ್ಲರೂ ಸಕ್ರೀಯರಾಗಿರಬೇಕು. ಜೊತೆಗೆ ಬೂತ್ ಕಮಿಟಿ ವರದಿಯನ್ನು ಆದಷ್ಟು ಬೇಗ ನೀಡುವಂತೆ ಕೆ.ಸಿ.ವೇಣುಗೋಪಾಲ್ ಮುಖಂಡರಿಗೆ ಹಾಗೂ ಶಾಸಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಸಚಿವೆಯಾಗಿ ಉಮಾಶ್ರೀ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿಲ್ಲ ಎಂಬುದು ಕೇಳಿ ಬಂದಿದೆ. ಬಳಿಕ ಸೋಷಿಯಲ್ ಮೀಡಿಯಾದ ಮಹತ್ವದ ಬಗ್ಗೆ ಕೆಲ ಹೊತ್ತು ಸಚಿವೆ ಉಮಾಶ್ರೀಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಜೊತೆಗೆ ಸಕ್ರಿಯಗೊಂಡಿದ್ದ 38 ಶಾಸಕರಿಗೆ ವೇಣುಗೋಪಾಲ್ ಅಭಿನಂದಿಸಿದರು ಎಂದು ಮೂಲಗಳು ತಿಳಿಸಿವೆ.

  • ಬಿಎಸ್‍ವೈ ಆಪ್ತರೇ ಮುಂದಿನ ಚುನಾವಣೆಯಲ್ಲಿ ವೇಣುಗೋಪಾಲ್‍ಗೆ ಟಾರ್ಗೆಟ್

    ಬಿಎಸ್‍ವೈ ಆಪ್ತರೇ ಮುಂದಿನ ಚುನಾವಣೆಯಲ್ಲಿ ವೇಣುಗೋಪಾಲ್‍ಗೆ ಟಾರ್ಗೆಟ್

    ಬೆಂಗಳೂರು: ಬಿಜೆಪಿ ತಂತ್ರಕ್ಕೆ ಟಿಟ್ ಫಾರ್ ಟ್ಯಾಟ್ ಕೊಡಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಅತ್ತ ಅಮಿತ್ ಶಾ ಕಾಂಗ್ರೆಸ್ ಕ್ಷೇತ್ರಗಳ ಮೇಲೆ ಕಣ್ಣು ಹಾಕುತ್ತಿರುವ ಬೆನ್ನಲ್ಲೇ ಬಿಜೆಪಿ ಕ್ಷೇತ್ರಗಳಲ್ಲಿ ಮೇಲೆ ಕಾಂಗ್ರೆಸ್ ತನ್ನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

    ಬಿಎಸ್‍ವೈಗೆ ಶಾಕ್ ಕೊಡಲು ಸಿದ್ದತೆ ನಡೆಸಿರುವ ಉಸ್ತುವಾರಿ ವೇಣುಗೋಪಾಲ್, ಬಿಎಸ್‍ವೈ ಆಪ್ತ ಅರವಿಂದ ಲಿಂಬಾವಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆ ಮನೆ ಪ್ರಚಾರ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

    ಯಶವಂತಪುರ ಕ್ಷೇತ್ರದಲ್ಲಿ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ರಮವನ್ನು ಕೊನೇ ಕ್ಷಣದಲ್ಲಿ ಮಹದೇವಪುರ ಕ್ಷೇತ್ರದಲ್ಲಿ ನಡೆಸಲು ವೇಣುಗೋಪಾಲ ಸೂಚನೆ ನೀಡಿದ್ದಾರೆ. ಹೀಗಾಗಿ  ಸೆ.23 ರಂದು ಅರವಿಂದ್ ಲಿಂಬಾವಳಿ ಕ್ಷೇತ್ರದಲ್ಲಿ ನಡೆಸಲು ನಿರ್ಧಾರಿಸಿದ್ದಾರೆ ಎನ್ನಲಾಗಿದೆ. ಈ ಕ್ಷೇತ್ರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ 6,149 ಮತಗಳ ಅಂತರದಿಂದ ಅಂತರದಿಂದ ಸೋಲು ಕಂಡಿದ್ದರು.ಈ ಕಾರಣದಿಂದ ಈ ಕ್ಷೇತ್ರದಿಂದ ಮನೆ ಮನೆ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕಾಂಗ್ರೆಸ್ ಮುಂದಾಗಿದೆ.

  • ಈ ಹೊತ್ತಲ್ಲಿ ಕನ್ನಡ ಧ್ವಜ ವಿವಾದ ಬೇಕಿರಲಿಲ್ಲ- ಸಿಎಂ ನಿರ್ಧಾರಕ್ಕೆ ಉಸ್ತುವಾರಿ ವೇಣುಗೋಪಾಲ್ ಆಕ್ಷೇಪ

    ಈ ಹೊತ್ತಲ್ಲಿ ಕನ್ನಡ ಧ್ವಜ ವಿವಾದ ಬೇಕಿರಲಿಲ್ಲ- ಸಿಎಂ ನಿರ್ಧಾರಕ್ಕೆ ಉಸ್ತುವಾರಿ ವೇಣುಗೋಪಾಲ್ ಆಕ್ಷೇಪ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಭೇಟಿ ಮಾಡಿ ಪ್ರತ್ಯೇಕ ಕನ್ನಡ ಧ್ವಜ ವಿಚಾರದ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಕನ್ನಡಕ್ಕೆ ಪ್ರತ್ಯೇಕ ಧ್ವಜ ವಿಚಾರವಾಗಿ ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಚುನಾವಣಾ ಸಂದರ್ಭದಲ್ಲಿ ಇದು ಅಗತ್ಯ ಇರಲಿಲ್ಲ ಎಂಬ ಹೈಕಮಾಂಡ್ ಅಭಿಪ್ರಾಯವನ್ನ ಸಿಎಂಗೆ ತಿಳಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಈ ಕುರಿತು ಪಕ್ಷದ ವೇದಿಕೆಯಲ್ಲಿ ನಿರ್ಣಯ ತೆಗೆದುಕೊಳ್ಳೊಣ ಅಂತ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ. ಚರ್ಚೆಯ ವೇಳೆ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಿದ್ದರು.

    ಸಿದ್ದರಾಮಯ್ಯ ಸರ್ಕಾರದ ಈ ನಿರ್ಧಾರ ಪ್ರಕಟವಾದ ಬಳಿಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿಶೇಷವಾಗಿ ಕಾಂಗ್ರೆಸ್ ಹಿರಿಯ ನಾಯಕ ಪ್ರದೀಪ್ ಭಟ್ಟಾಚಾರ್ಯ ಅವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.

    ಭಾರೀ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ 9 ಜನರ ಕಮಿಟಿಯನ್ನ ರಚಿಸಿ ಆದೇಶ ಹೊರಡಿಸಿತ್ತು. ನಾಡ ಧ್ವಜ ರೂಪಿಸುವ ಕಮಿಟಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಅಧ್ಯಕ್ಷರಾಗಿರುತ್ತಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗೃಹ ಇಲಾಖೆ,ಕಾನೂನು ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಇದರ ಜೊತೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು- ಹಾಗೂ ಹಂಪಿ ಕನ್ನಡ ವಿವಿ ಕುಲಸಚಿವರು ಸದಸ್ಯರಾಗಿರುತ್ತಾರೆ. ಉಳಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿತ್ತು.

    ಇದನ್ನೂ ಓದಿ: ಪ್ರತ್ಯೇಕ ಧ್ವಜದ ಬಗ್ಗೆ ಕಾನೂನು ಪಂಡಿತರು ಏನ್ ಹೇಳ್ತಾರೆ, ಡಿವಿಎಸ್ ಹೊರಡಿಸಿದ್ದ ಸುತ್ತೋಲೆ ಏನಾಯ್ತು?

    ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ನಟ ಜಗ್ಗೇಶ್ ವಾಗ್ದಾಳಿ

  • ಕಮ್ಯುನಿಸ್ಟ್ ವಾದಿ ವೇಣುಗೋಪಾಲ್ ವಿಚಾರಧಾರೆ ರಾಜ್ಯದಲ್ಲಿ ತುಂಬಲು ಬಿಡಲ್ಲ: ಎಬಿವಿಪಿ ಎಚ್ಚರಿಕೆ

    ಕಮ್ಯುನಿಸ್ಟ್ ವಾದಿ ವೇಣುಗೋಪಾಲ್ ವಿಚಾರಧಾರೆ ರಾಜ್ಯದಲ್ಲಿ ತುಂಬಲು ಬಿಡಲ್ಲ: ಎಬಿವಿಪಿ ಎಚ್ಚರಿಕೆ

    ಬೆಂಗಳೂರು: ಎಬಿವಿಪಿ, ಆರ್‍ಎಸ್‍ಎಸ್ ವಿಚಾರಧಾರೆಗಳಿಂದ ಪ್ರೇರಿತವಾಗಿದೆ. ಧೈರ್ಯ ಇದ್ರೆ ನಮ್ಮ ಸಂಘಟನೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮುಟ್ಟಲಿ ಎಂದು ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಸವಾಲು ಎಸೆದಿದ್ದಾರೆ.

    ವೇಣುಗೋಪಾಲ್ ಅವರು ಆರ್‍ಎಸ್‍ಎಸ್, ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಕಾಲೇಜುಗಳ ಪಟ್ಟಿಯನ್ನು ನೀಡುವಂತೆ ಕಾರ್ಯಕರ್ತರಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ವೇಣುಗೋಪಾಲ್ ಕಮ್ಯುನಿಸ್ಟ್ ವಾದಿಯಾಗಿದ್ದು,  ಅವರ ವಿಚಾರಧಾರೆ ರಾಜ್ಯದಲ್ಲಿ ತುಂಬಲು ನಾವು ಬಿಡುವುದಿಲ್ಲ. ಯಾರೋ ಯಾಕೆ ಲಿಸ್ಟ್ ಕೊಡಬೇಕು. ವೇಣುಗೋಪಾಲ್ ಎಬಿವಿಪಿ ಕಚೇರಿಗೆ ಬರಲಿ ನಾವೇ ಪಟ್ಟಿ ನೀಡುತ್ತೇವೆ ಎಂದು ಹೇಳಿದರು.

    ವೇಣುಗೋಪಾಲ್ ಅವರ ಅವರ ಧಮ್ಕಿ ಏನೇ ಇದ್ದರೂ ಕೇರಳದಲ್ಲಿ ಇರಲಿ. ರಾಜ್ಯದಲ್ಲಿ ಹಿಂಸಾತ್ಮಕ ಕೃತ್ಯ ಮಾಡಲು ಕಾಂಗ್ರೆಸ್ ಸಂಚು ರೂಪಿಸಿದ್ದು ಇದಕ್ಕೆ ಎಬಿವಿಪಿ ಹೆದರಲ್ಲ ಎಂದು ವಿನಯ್ ಬಿದರೆ ಖಡಕ್ ಎಚ್ಚರಿಕೆ ನೀಡಿದರು.

    ಇದನ್ನೂ ಓದಿ: ಆರ್‍ಎಸ್‍ಎಸ್, ಎಬಿವಿಪಿ ಪರ ಇರೋ ಕಾಲೇಜುಗಳ ಪಟ್ಟಿ ಕೊಡಿ: ವೇಣುಗೋಪಾಲ್

     

  • ಎಸ್‍ಎಂ ಕೃಷ್ಣ ಬಳಿಕ ಕಾಂಗ್ರೆಸ್‍ನ ಮತ್ತೊಂದು ವಿಕೆಟ್ ಪತನ?- ಪಕ್ಷ ತೊರೆಯಲು ಮುಂದಾದ ಹೆಚ್ ವಿಶ್ವನಾಥ್

    ಎಸ್‍ಎಂ ಕೃಷ್ಣ ಬಳಿಕ ಕಾಂಗ್ರೆಸ್‍ನ ಮತ್ತೊಂದು ವಿಕೆಟ್ ಪತನ?- ಪಕ್ಷ ತೊರೆಯಲು ಮುಂದಾದ ಹೆಚ್ ವಿಶ್ವನಾಥ್

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಹೆಚ್ ವಿಶ್ವನಾಥ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಕಾಂಗ್ರೆಸ್‍ಗೆ ವಿದಾಯ ಹೇಳಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದಾರೆ.

    ಮೂರು ಪುಟಗಳ ಪತ್ರದಲ್ಲಿ ವಿಶ್ವನಾಥ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾನು ವಿದ್ಯಾರ್ಥಿಯಾಗಿದ್ದ ದಿನಗಳಿಂದ ಕಾಂಗ್ರೆಸ್‍ನಲ್ಲಿದ್ದೇನೆ. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲ. ಸಿಎಂ ಸಿದ್ದರಾಮಯ್ಯ ವರ್ತನೆ ಸರಿಯಿಲ್ಲ. ಸಿಎಂ ವರ್ತನೆಯಿಂದ ಅನೇಕ ಹಿರಿಯ ಕಾಂಗ್ರೆಸಿಗರು ಪಕ್ಷ ಬಿಟ್ಟಿದ್ದಾರೆ. ಇನ್ನೂ ಅನೇಕ ಮುಖಂಡರು, ಶಾಸಕರು ಪಕ್ಷ ಬಿಡಲಿದ್ದಾರೆ. ಸಿಎಂ ನನ್ನನ್ನ ಕಡೆಗಣಿಸಿದ್ದಾರೆ, ಅವಮಾನಿಸಿದ್ದಾರೆ. ಇವೆಲ್ಲ ವಿದ್ಯಮಾನಗಳಿಂದ ಮನನೊಂದಿದ್ದೇನೆ. ಈ ಎಲ್ಲ ವಿಚಾರದಿಂದಾಗಿ ನಾನು ಕೂಡಾ ಕಾಂಗ್ರೆಸ್ ತೊರೆಯಬೇಕು ಎಂದಿದ್ದೇನೆ ಎಂದು ವಿಶ್ವನಾಥ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ನಾನು ಎಐಸಿಸಿ ಮತ್ತು ಕೆಪಿಸಿಸಿ ಸದಸ್ಯನಾಗಿದ್ದರೂ ಪಕ್ಷದ ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನವಿಲ್ಲ. ಸಕಾರಣವಿಲ್ಲದೆ ನನ್ನ ಬಾಯಿ ಮುಚ್ಚಿಸುವ ಪ್ರಯತ್ನ ನಡೆಯಿತು. ಸಿದ್ದರಾಮಯ್ಯ ಅವರ ದುರಹಂಕಾರದ ಸ್ವಭಾವದಿಂದ ಹಲವು ನಾಯಕರು ಕಾಂಗ್ರೆಸ್ ತೊರೆದಿದ್ದಾರೆ. ಹಾಲಿ ಶಾಸಕರು ಸೇರಿದಂತೆ ಕೆಲವರು ಪಕ್ಷ ತೊರೆಯಲು ಸಿದ್ದರಾಗಿದ್ದಾರೆ. ನನ್ನ ಬಗ್ಗೆ ಮುಖ್ಯಮಂತ್ರಿಗಳು ತೋರಿದ ನಿರ್ಲಕ್ಷ್ಯತನದಿಂದಾಗಿ ನಾನೂ ಕೂಡಾ ಕಾಂಗ್ರೆಸ್ ತೊರೆಯಬಹುದು. ನಾನು ಕಣ್ಣು ಮತ್ತು ಕಿವಿ ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ.

    ಎಂಜಾಯ್ ಮಾಡೋಕೆ ಅಧಿಕಾರ ಹಿಡಿದಿದ್ದಾರೆ: ಪಕ್ಷ ಮತ್ತು ಸರ್ಕಾರದ ಮಧ್ಯೆ ಸಮನ್ವಯತೆ ಇಲ್ಲ. ಸಚಿವರು ಸಿಎಂ ಜೊತೆ ಹೊಂದಾಣಿಕೆ ಇಲ್ಲ. ಹಿರಿಯ ಕಾಂಗ್ರೆಸ್ ನಾಯಕರ ಸಲಹೆಗಳನ್ನು ಪ್ರಮುಖ ವಿಚಾರಗಳಲ್ಲಿ ತೆಗೆದುಕೊಂಡಿಲ್ಲ. ಕೇವಲ ಎಂಜಾಯ್ ಮಾಡೋಕೆ ಅಧಿಕಾರ ಹಿಡಿದಿದ್ದಾರೆ. ಅನೇಕ ಸಚಿವರ ಮೇಲೆ ಕ್ರಿಮಿನಲ್ ಅಪರಾಧಗಳಿದ್ರು ಸರ್ಕಾರ ಮೌನವಾಗಿ ಕುಳಿತಿದೆ. ಇಂತಹ ಸಚಿವರಿಂದ ಪಕ್ಷದ, ಸರ್ಕಾರದ ಹೆಸರು ಕೆಟ್ಟಿದೆ. 4 ವರ್ಷಗಳಿಂದ ಪಕ್ಷಕ್ಕೆ ಸಾಕಷ್ಟು ಮುಜುಗರವಾಗಿದೆ ಎಂದು ಸಿಎಂ ಆಡಳಿತ ವೈಖರಿ ವಿರುದ್ಧ ವಿಶ್ವನಾಥ್ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ.

    ಇದನ್ನೂ ಓದಿ: ಕಾಂಗ್ರೆಸ್‍ನಲ್ಲೂ ಭಿನ್ನಮತ ಸ್ಫೋಟ: ಕಾರ್ಯಕರ್ತರಲ್ಲಿ ವೇಣುಗೋಪಾಲ್ ಕೇಳಿದ ಆ ಐದು ಪ್ರಶ್ನೆಗಳು ಇಲ್ಲಿದೆ

    ಸೋಮವಾರದಂದೇ ಕೆಸಿ ವೇಣುಗೋಪಾಲ್ ಅವರಿಗೆ ವಿಶ್ವನಾಥ್ ಪತ್ರ ಬರೆದಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ವೇಣುಗೋಪಾಲ್ ಅವರ ಜೊತೆ ವಿಶ್ವನಾಥ್ ಭೇಟಿ ನಿಗದಿಯಾಗಿದೆ. ನಿನ್ನೆ ಪಕ್ಷದ ಪದಾಧಿಕಾರಿಗಳ ಜೊತೆಗೆ ವೇಣುಗೋಪಾಲ್ ಮಾತುಕತೆ ನಡೆಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ಶಾಸಕರು, ಸಚಿವರು ಹಾಗೂ ಮಾಜಿ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

  • ಕಾಂಗ್ರೆಸ್‍ನಲ್ಲೂ ಭಿನ್ನಮತ ಸ್ಫೋಟ: ಕಾರ್ಯಕರ್ತರಲ್ಲಿ ವೇಣುಗೋಪಾಲ್ ಕೇಳಿದ ಆ ಐದು ಪ್ರಶ್ನೆಗಳು ಇಲ್ಲಿದೆ

    ಕಾಂಗ್ರೆಸ್‍ನಲ್ಲೂ ಭಿನ್ನಮತ ಸ್ಫೋಟ: ಕಾರ್ಯಕರ್ತರಲ್ಲಿ ವೇಣುಗೋಪಾಲ್ ಕೇಳಿದ ಆ ಐದು ಪ್ರಶ್ನೆಗಳು ಇಲ್ಲಿದೆ

    ಬೆಂಗಳೂರು: ರಾಜ್ಯದಲ್ಲಿ ಈಗ ಚುನಾವಣೆಯ ಗುಂಗು. ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗ್ಲೇ ಮೂರು ಪಕ್ಷಗಳು ಭರ್ಜರಿ ಕಸರತ್ತು ನಡೆಸ್ತಿವೆ. ಅದರಲ್ಲೂ ಆಡಳಿತರೂಢ ಕಾಂಗ್ರೆಸ್‍ಗೆ ಮತ್ತೆ ಅಧಿಕಾರಕ್ಕೆ ಬರಲು ಶತಪ್ರಯತ್ನ ಮಾಡ್ತಿದೆ.

    ಈ ನಿಟ್ಟಿನಲ್ಲಿ ಪಕ್ಷದ ಬಲವರ್ಧನೆಗೆಗಾಗಿ ಮೂರು ದಿನ ರಾಜ್ಯದಲ್ಲಿರೋ ಹೊಸ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ತಂಡ ಮೊದಲ ದಿನವಾದ ಇವತ್ತು ಸರಣಿ ಸಭೆ ನಡೆಸ್ತು. ಕೆಪಿಸಿಸಿ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ವೇಣುಗೋಪಾಲ್, ನಾನಿಲ್ಲಿ ಆದೇಶ ನೀಡಲು ಬಂದಿಲ್ಲ. ನಿಮ್ಮ ಜೊತೆ ಕೆಲಸ ಮಾಡಲು ಬಂದಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದಕ್ಕೂ ಲಾಬಿ ಬೇಡ ಅಂತ ಖಡಕ್ ಹೇಳಿದ್ರು.

    ಮೊದಲ ವಾರ್ನಿಂಗ್ ಎಂಬಂತೆ ಕಚೇರಿ ಮುಂದೆ ಪಟಾಕಿ ಸಿಡಿಸಲಿಲ್ಲ. ಇನ್ನು, ಪರಮೇಶ್ವರ್ ಮಾತನಾಡಿ, ಎರಡೂ ಸ್ಥಾನಗಳನ್ನ ನಿಭಾಯಿಸಲು ನಾನು ಸಮರ್ಥ ಅಂತ ಮುನಿಯಪ್ಪಗೆ ತಿರುಗೇಟು ಕೊಟ್ರು. ಜೊತೆಗೆ ಯಾವುದೇ ಭಯ ಇಲ್ಲದೇ ಉಸ್ತುವಾರಿ ಜೊತೆ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ ಅಂತ ನಾಯಕರಿಗೆ ಸೂಚಿಸಿದ್ರು.

    ಇದಾದ ಬಳಿಕ ಒಬ್ಬೊಬ್ಬರ ಜೊತೆ ಪ್ರತ್ಯೇಕವಾಗಿ ವೇಣುಗೋಪಾಲ್ ಚರ್ಚೆ ನಡೆಸಿದ್ರು. ಇನ್ನು, ಬೆಳಗ್ಗೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿಕೆ ಶಿವಕುಮಾರ್, ರೋಷನ್ ಬೇಗ್ ಜೊತೆ ಸಮಾಲೋಚಿಸಿದ್ರು.

    ಈ ವೇಳೆ, ಸಿದ್ದರಾಮಯ್ಯ ಅವರನ್ನು ಡೈನಾಮಿಕ್ ಸಿಎಂ ಅಂತ ವೇಣುಗೋಪಾಲ್ ಹೊಗಳಿದ್ರು. ಇನ್ನು, ಕೆಪಿಸಿಸಿ ಕುರ್ಚಿಗೆ ನಾನು ಅರ್ಜಿ ಹಾಕಿಲ್ಲ. ನಾನು ಪಕ್ಷ ಬಿಟ್ರೆ ನನ್ನಂಥವರು ನೂರು ಜನ ಕಾಂಗ್ರೆಸ್ ಅಲ್ಲಿ ಬರ್ತಾರೆ ಅಂತ ಡಿಕೆ ಶಿವಕುಮಾರ್ ಹೇಳಿದ್ರು. ಕಾಂಗ್ರೆಸ್ ಪಕ್ಷ ಅಸ್ತಿತ್ವ ಉಳಿಸಿಕೊಳ್ಳಬೇಕು ಅಂದ್ರೆ ನಾವು ಬದಲಾಗಲೇಬೇಕು ಅಂತ ರಮೇಶ್ ಕುಮಾರ್ ಸೂಚ್ಯವಾಗಿ ಹೇಳಿದ್ರು. ಈ ಮಧ್ಯೆ, ನಾಳೆ ವಿಶ್ವನಾಥ್ ಅವರನ್ನು ಭೇಟಿಯಾಗಲು ವೇಣುಗೋಪಾಲ್ ನಿರ್ಧರಿಸಿದ್ದಾರೆ.

    ಮೊದಲ ದಿನವೇ ಶಾಕ್:
    ಮೊದಲ ದಿನ ಜಿಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಸತತ 4 ಗಂಟೆ ಚರ್ಚಿಸಿದ ವೇಣುಗೋಪಾಲ್‍ಗೆ ಶಾಕ್ ಮೇಲೆ ಶಾಕ್ ಆಗಿದೆ. ಪಕ್ಷದ ಅಧ್ಯಕ್ಷರು ಮತ್ತು ಸಿಎಂ ಮೇಲೆ ದೂರುಗಳ ಸುರಿಮಳೆ ಬಂದಿದೆ. ಹೊಸಬರಿಗೆ ಪಕ್ಷದ ಅಧ್ಯಕ್ಷ ಪಟ್ಟ ಕಟ್ಟಿ ಮುಖ್ಯಮಂತ್ರಿಗೂ ಮೂಗುದಾರ ಹಾಕಿ ಅಂತ ಉಸ್ತುವಾರಿಗೆ ಜಿಲ್ಲಾಧ್ಯಕ್ಷರು ಹೇಳಿದ್ದಾಗಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ವೇಳೆ ವೇಣುಗೋಪಾಲ್ ಅವರು 5 ಪ್ರಶ್ನೆಗಳ ಪ್ರಶ್ನಾವಳಿ ಕೊಟ್ಟು ಪಕ್ಷ, ನಾಯಕರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ.

    ಆ ಐದು ಪ್ರಶ್ನೆಗಳು
    # 1: ಪಕ್ಷದಲ್ಲಿ ಗುಂಪುಗಾರಿಕೆ ಇದೆಯೇ?
    # 2: ಕೆಪಿಸಿಸಿ ಅಧ್ಯಕ್ಷ ಯಾರಾಗ್ಬೇಕು? ಏಕೆ ಆಗ್ಬೇಕು? ಹಾಗೂ ಎಂಥವರು ಬೇಕು?
    # 3: ಸಿದ್ದರಾಮಯ್ಯ ಸರ್ಕಾರದ ಪಾಸಿಟಿವ್ ಅಂಶಗಳು ಹಾಗೂ ನೆಗೇಟಿವ್ ಅಂಶಗಳೇನು?
    # 4: ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಿದೆಯಾ? ಇಲ್ಲವಾದಲ್ಲಿ ಹೇಗೆ ತಲುಪಿಸುವುದು?
    # 5: ಬಿಜೆಪಿ ಮಿಷನ್ 150 ಟಾರ್ಗೆಟ್ ಅನ್ನು ಡೈವರ್ಟ್ ಮಾಡೋದು ಹೇಗೆ?

     

     

  • ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಆಗಮನ – 3 ದಿನಗಳ ಪ್ರವಾಸದಲ್ಲಿ ಮಂತ್ರ-ತಂತ್ರ

    ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಆಗಮನ – 3 ದಿನಗಳ ಪ್ರವಾಸದಲ್ಲಿ ಮಂತ್ರ-ತಂತ್ರ

    ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿರುವಂತೆ ಆಡಳಿತಾರೂಢ ಕಾಂಗ್ರೆಸ್ ತನ್ನ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಪಕ್ಷದ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ವೇಣುಗೋಪಾಲ್ ಇದೇ ಮೊದಲ ಬಾರಿಗೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

    ಮೂರು ದಿನಗಳ ಪ್ರವಾಸದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಂದ ಹಿಡಿದು ತಳಮಟ್ಟದ ಪದಾಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ. ವೇಣುಗೋಪಾಲ್ ಜೊತೆಗೆ ನಾಲ್ವರು ಎಐಸಿಸಿ ಕಾರ್ಯದರ್ಶಿಗಳು ಆಗಮಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಣುಗೋಪಾಲ್ ತಂಡವನ್ನ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

    ಇವತ್ತು ಕುಮಾರಕೃಪ ಅತಿಥಿ ಗೃಹದಲ್ಲಿ ಸಿಎಂ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ಪ್ರಾರಂಭವಾಗಲಿದೆ. ಪಕ್ಷ ಸಂಘಟನೆಯ ಜೊತೆಗೆ 2018ರ ಚುನಾವಣೆಗೆ ತಂಡವನ್ನು ರಚಿಸುವುದು ಹಾಗೂ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

    ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮಂಗಳವಾರ ಹಿರಿಯ ಕಾಂಗ್ರೆಸ್ ನಾಯಕರು, ಸಂಸದರು, ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆ ಪ್ರತ್ಯೇಕ ಸಭೆ ನಡೆಯಲಿದೆ. ಬುಧವಾರ ಸಮನ್ವಯ ಸಮಿತಿ ಸಭೆ ನಡೆಯಲಿದೆ.