Tag: Verification

  • 18ರಿಂದ 21ರವರೆಗೆ ಹೊರನಾಡು, ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳ ಸಿಇಟಿ ದಾಖಲಾತಿಗಳ ಪರಿಶೀಲನೆ: ಕೆಇಎ

    18ರಿಂದ 21ರವರೆಗೆ ಹೊರನಾಡು, ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳ ಸಿಇಟಿ ದಾಖಲಾತಿಗಳ ಪರಿಶೀಲನೆ: ಕೆಇಎ

    ಬೆಂಗಳೂರು : ಎಂಜಿನಿಯರಿಂಗ್ ಪ್ರವೇಶಾತಿ ಬಯಸಿ, ‘ಬಿ, ಸಿ, ಡಿ, ಇ, ಎಫ್, ಜಿ, ಎಚ್, ಐ, ಜೆ, ಕೆ, ಎಲ್, ಎಂ, ಎನ್ ಮತ್ತು ಓ’ ಅರ್ಹತಾ ಕಂಡಿಕೆಗಳನ್ನು (ಎಲಿಜಿಬಿಲಿಟಿ ಕ್ಲಾಸಸ್- ಉದಾಹರಣೆಗೆ ಹೊರನಾಡು ಕನ್ನಡಿಗರು, ರಾಜ್ಯದ ಸೈನಿಕರು, ರಕ್ಷಣಾ ಸಿಬ್ಬಂದಿ ಮಕ್ಕಳು ಇತ್ಯಾದಿ) ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆಯು ಜುಲೈ 18ರಿಂದ 21ರವರೆಗೆ ಬೆಂಗಳೂರಿನ (Bengaluru) ಮಲ್ಲೇಶ್ವರದಲ್ಲಿರುವ (Malleshwaram) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

    ಈ ಬಗ್ಗೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಮೇಲ್ಕಂಡ ನಾಲ್ಕೂ ದಿನ ಬೆಳಿಗ್ಗೆ 9:30ರಿಂದ ದಾಖಲಾತಿಗಳ ಪರಿಶೀಲನೆ ಆರಂಭವಾಗಲಿದೆ. ಯಾವ್ಯಾವ ರ‍್ಯಾಂಕ್ ಪಡೆದಿರುವ ಅಭ್ಯರ್ಥಿಗಳು ಯಾವ ದಿನದಂದು ಈ ಪ್ರಕ್ರಿಯೆಗೆ ಮೂಲದಾಖಲಾತಿಗಳು ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು ಎನ್ನುವುದನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಇದರಂತೆ ಅಭ್ಯರ್ಥಿಗಳು ಆಗಮಿಸಬೇಕು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಿಗದಿಗಿಂತ ಚುನಾವಣೆಯಲ್ಲಿ ಅಧಿಕ ವೆಚ್ಚ – ಇಬ್ಬರೂ ಬಿಜೆಪಿ ನಾಯಕರಿಗೆ ನೋಟಿಸ್

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಜಾಲತಾಣ http://kea.kar.nic.in ನೋಡಬಹುದು.

    ಇನ್ನು ಆರ್ಕಿಟೆಕ್ಚರ್ ಕೋರ್ಸಿಗೆ ಪ್ರವೇಶಾತಿ ಬಯಸಿ, ತಮ್ಮ ಅರ್ಜಿಯಲ್ಲಿ ಇದುವರೆಗೂ ನಾಟಾ- 1 ಅಥವಾ ನಾಟಾ-2 ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳನ್ನು ನಮೂದಿಸದೆ ಇರುವ ಅಭ್ಯರ್ಥಿಗಳು ನಿಯಮಾನುಸಾರ ರ‍್ಯಾಂಕಿಂಗ್ ಪಡೆಯಲು ಅನುಕೂಲವಾಗಲೆಂಬ ಹಿನ್ನೆಲೆಯಲ್ಲಿ, ಜುಲೈ 5ರ ಬೆಳಿಗ್ಗೆ 11 ಗಂಟೆಯವರೆಗೂ ಪ್ರಾಧಿಕಾರವು ಮತ್ತೊಂದು ಅವಕಾಶ ಕಲ್ಪಿಸಿದೆ ಎಂದು ಕೆಇಎ ತಿಳಿಸಿದೆ. ಇದನ್ನೂ ಓದಿ: ಸಿಎಂ ಕಚೇರಿಯಲ್ಲಿ ಕೆಲಸ ಆಗಬೇಕಾದ್ರೆ 30 ಲಕ್ಷ ಲಂಚ ಕೊಡಬೇಕು: ಕುಮಾರಸ್ವಾಮಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿ ಪರಿಶೀಲಿಸಿದ ರಾಯಚೂರು ಎಸ್ಪಿ

    ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿ ಪರಿಶೀಲಿಸಿದ ರಾಯಚೂರು ಎಸ್ಪಿ

    ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಸರ್ಕಾರಿ ಶಾಲೆಗೆ ದಿಢೀರ್ ಭೇಟಿನೀಡಿ ಪರಿಶೀಲನೆ ನಡೆಸಿ ಶಾಲಾ ಸಿಬ್ಬಂದಿಗೆ ಶಾಕ್ ನೀಡಿದ್ದಾರೆ.

    ರಾಯಚೂರು ನಗರದ ಪೊಲೀಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನ ಪರಿಶೀಲಿಸಿದರು. ಪೊಲೀಸ್ ಸಿಬ್ಬಂದಿ ಮಕ್ಕಳು ಹೆಚ್ಚಾಗಿ ಓದುವ ಶಾಲೆಯಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು.

    ಶಾಲೆಯಲ್ಲಿ ತಯಾರಾದ ಬಿಸಿಯೂಟದ ಗುಣಮಟ್ಟವನ್ನು ಪರೀಕ್ಷಿಸಿ ಬಳಿಕ ಮಕ್ಕಳೊಂದಿಗೆ ಸರತಿ ಸಾಲಿನಲ್ಲಿ ಕುಳಿತು ಬಿಸಿಯೂಟ ಸೇವಿಸಿದರು. ಶಾಲೆಯ ಮಕ್ಕಳೊಂದಿಗೆ ಮಾತನಾಡಿ ಶಾಲೆಯ ಬಗ್ಗೆ ಮತ್ತು ಸಮಸ್ಯೆ ಬಗ್ಗೆ ಮಾಹಿತಿ ಪಡೆದರು. ಕಷ್ಟಪಟ್ಟು ಚೆನ್ನಾಗಿ ಓದಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಮಕ್ಕಳಿಗೆ ಕರೆ ನೀಡಿದರು.

  • ಮೆಟ್ರೋದಲ್ಲಿ ಪ್ರಯಾಣಿಸಿ ಪರಿಶೀಲನೆ ನಡೆಸಿದ ಡಿಸಿಎಂ ಪರಮೇಶ್ವರ್

    ಮೆಟ್ರೋದಲ್ಲಿ ಪ್ರಯಾಣಿಸಿ ಪರಿಶೀಲನೆ ನಡೆಸಿದ ಡಿಸಿಎಂ ಪರಮೇಶ್ವರ್

    ಬೆಂಗಳೂರು: ಟ್ರಿನಿಟಿ ವೃತ್ತ ಸಮೀಪದ ಮೆಟ್ರೋ ಸೇತುವೆಯ ವಯಾಡಕ್ಟ್ ನಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಶನಿವಾರ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿ ಪರಿಶೀಲನೆ ನಡೆಸಿದರು.

    ಡಾ. ಅಂಬೇಡ್ಕರ್ ಮೆಟ್ರೋ ನಿಲ್ದಾಣದಿಂದ ಹಲಸೂರು ನಿಲ್ದಾಣದವರೆಗೆ ಪ್ರಯಾಣ ಬೆಳೆಸಿ ಡಿಸಿಎಂ ದೋಷ ಕಾಣಿಸಿಕೊಂಡ ಸ್ಥಳವನ್ನು ಪರಿಶೀಲನೆ ನಡೆಸಿದರು.

    ತಮ್ಮ ಪ್ರಯಾಣದ ವೇಳೆ ಮೆಟ್ರೋ ಪ್ರಯಾಣಿಕರೊಂದಿಗೆ ಮಾತನಾಡಿ ಮಾಹಿತಿ ಪಡೆದರು. ಅಲ್ಲದೇ ಮೆಟ್ರೋದಲ್ಲಿ ಯಾವುದೇ ದೋಷ ಇಲ್ಲ. ಅದ್ದರಿಂದಲೇ ನಾನು ಮೆಟ್ರೋದಲ್ಲೇ ಪ್ರಯಾಣಿಸುತ್ತಿದ್ದೇನೆ ಎಂದು ತಿಳಿಸಿದರು.

    ಟ್ರಿನಿಟಿ ಬಳಿಯ ಮೆಟ್ರೋ ಸೇತುವೆಯ ವಯಾಡಕ್ಟ್ ವೀಕ್ಷಿಸಿ ಬೆಂಗಳೂರು ಮೆಟ್ರೋ ಯೋಜನೆಯ ನಿರ್ದೇಶಕ ವಿಜಯ್ ಕುಮಾರ್ ಅವರಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮೆಟ್ರೋ ಪಿಲ್ಲರ್ ನಲ್ಲಿ ಯಾವುದೇ ದೋಷವಿಲ್ಲ. ಕಾಂಕ್ರೀಟ್ ಹಾಕುವಾಗ ಹನಿಕಾಂಬ್ (ಕಾಂಕ್ರೀಟ್ ಪದರ ಟೊಳ್ಳಾಗುವುದನ್ನು ಸಿವಿಲ್ ಎಂಜಿನಿಯರಿಂಗ್ ಭಾಷೆಯಲ್ಲಿ ಹನಿಕಾಂಬ್ ಎಂದು ಕರೆಯಲಾಗುತ್ತದೆ) ಆಗಿದೆ. ಅದ್ದರಿಂದ ಯಾವುದೇ ಆತಂಕ ಬೇಡ. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ದೆಹಲಿಯಿಂದ ಎಂಜಿನಿಯರ್ ಬಂದು ಸಲಹೆ ನೀಡಿದ್ದಾರೆ. ಇಂದು ಸಂಜೆಯಿಂದ ದುರಸ್ತಿ ಕಾರ್ಯ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬ್ಯಾಗ್‍ ನಲ್ಲಿ ಕಂತೆ ಕಂತೆ ಹಣ, ಅನುಮಾನಾಸ್ಪದವಾಗಿ ಓಡಾಡ್ತಿದ್ದ 3 ಯುವಕರು ಮಂಡ್ಯ ಪೊಲೀಸರ ವಶಕ್ಕೆ

    ಬ್ಯಾಗ್‍ ನಲ್ಲಿ ಕಂತೆ ಕಂತೆ ಹಣ, ಅನುಮಾನಾಸ್ಪದವಾಗಿ ಓಡಾಡ್ತಿದ್ದ 3 ಯುವಕರು ಮಂಡ್ಯ ಪೊಲೀಸರ ವಶಕ್ಕೆ

    – ಬೆಂಗ್ಳೂರು ಎಟಿಎಂ ಪ್ರಕರಣಕ್ಕೆ ನಂಟು?

    ಮಂಡ್ಯ: ದಾಖಲೆಯಿಲ್ಲದ ಲಕ್ಷಾಂತರ ರೂಪಾಯಿ ಹಣ ಇಟ್ಟುಕೊಂಡಿದ್ದ ಮೂವರು ಯುವಕರನ್ನು ಮಂಡ್ಯ ಜಿಲ್ಲೆ ಮಳವಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮೂವರು ಯುವಕರು ಬ್ಯಾಗ್ ನಲ್ಲಿ ಲಕ್ಷಾಂತರ ರೂಪಾಯಿ ಹಣ ಇಟ್ಟುಕೊಂಡು ಮಳವಳ್ಳಿಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಮದ್ಯಪಾನ ಮಾಡಿ ಪರಸ್ಪರ ಜಗಳವಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಯುವಕರನ್ನು ವಿಚಾರಿಸಲು ಮುಂದಾದರು.

    ಈ ವೇಳೆ ಮೂವರು ಯುವಕರು ಅಲ್ಲಿಯೇ ಇದ್ದ ಬಟ್ಟೆ ಅಂಗಡಿಯೊಳಗೆ ಹೋಗಿ ಅವಿತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಸ್ಥಳೀಯರು ಸೇರಿ ಯುವಕರನ್ನು ಹಿಡಿದು ಬ್ಯಾಗ್ ಪರಿಶೀಲನೆ ನಡೆಸಿದಾಗ ಕಂತೆ ಕಂತೆ ಹಣ ಪತ್ತೆಯಾಗಿದೆ.

    ಹಣದ ಬಗ್ಗೆ ಯಾರೂ ಸಮರ್ಪಕ ಉತ್ತರ ನೀಡಿಲ್ಲ. ಈ ಹಣಕ್ಕೆ ಬೆಂಗಳೂರಿನ ಜಾಲಹಳ್ಳಿ ಎಟಿಎಂ ದರೋಡೆ ಪ್ರಕರಣದ ನಂಟು ಇರಬಹುದು ಎಂದು ಶಂಕಿಸಲಾಗಿದೆ.

    ಬೆಂಗ್ಳೂರಲ್ಲಿ ಎಟಿಎಂ ಹಣ ದರೋಡೆ: ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾದ ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರದಂದು ನಡೆದಿತ್ತು. ಬೆಳಗ್ಗೆ 6 ಗಂಟೆ ಸುಮಾರಿಗೆ ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ 220 ಪಲ್ಸರ್ ಬೈಕ್‍ನಲ್ಲಿ ಹೆಲ್ಮಟ್ ಧರಿಸಿ ಬಂದಿದ್ದ ದುಷ್ರ್ಕಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದರು. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ರ್ಕಮಿಗಳು 18 ಲಕ್ಷ ರೂ. ಕಸಿದು ಪರಾರಿಯಾಗಿದ್ದರು.

    ಮೋಹನ್, ಸಾಗರ್ ಹಾಗೂ ಪ್ರಸನ್ನ ಸೆಕ್ಯೂರ್ ವೆಲ್ ಏಜ್ಸೇನಿಯ ಸಿಬ್ಬಂದಿಗಳು. ಎಟಿಎಂಗೆ ಹಣ ತುಂಬಲು ಒಟ್ಟು 1 ಕೋಟಿ, 25 ಲಕ್ಷ ರೂ. ಹಣ ತಂದಿದ್ದರು. ದುಷ್ಕರ್ಮಿಗಳು ಅದರಲ್ಲಿ 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿಯಾಗಿದ್ದರು. ಈ ಘಟನೆ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.