– ಪಶುವೈದ್ಯೆ ಕುಟುಂಬಸ್ಥರಿಂದ ಸಂತಸ
ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದಾರೆ.
ವಿಶ್ವನಾಥ್ ಸಜ್ಜನರ್ ಎನ್‍ಕೌಂಟರ್ ಸ್ಪೆಷಲಿಸ್ಟ್ ಆಗಿದ್ದು, ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ವಿಶ್ವನಾಥ್ ಸಜ್ಜನರ್ ವಾರಂಗಲ್ ಎಸ್‍ಪಿ ಆಗಿದ್ದರು. ಆಗ ಆಸಿಡ್ ದಾಳಿ ಆರೋಪಿಗಳು ಎನ್‍ಕೌಂಟರ್ ನಲ್ಲಿ ಹತ್ಯೆಗೈದಿದ್ದರು. ಆ ಎನ್‍ಕೌಂಟರ್ ಬಳಿಕ ಆ್ಯಸಿಡ್ ದಾಳಿಯಲ್ಲಿ ಇಳಿಕೆ ಕಂಡಿತ್ತು.

ವೀರ ಕನ್ನಡಿಗ ವಿಶ್ವನಾಥ್ ಈಗ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ್ದಾರೆ. ಅಲ್ಲದೆ ಕಾಮುಕರನ್ನು ಎನ್‍ಕೌಂಟರ್ ಮಾಡಿದ್ದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ರೇಪಿಸ್ಟ್ ಗಳ ಎನ್‍ಕೌಂಟರ್ ಬೆನ್ನಲ್ಲೇ ಹೈದಾರಾಬಾದ್‍ನಲ್ಲಿ ವಿದ್ಯಾರ್ಥಿಗಳು ಪೊಲೀಸರಿಗೆ ಜೈಕಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು
ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. ಇದನ್ನೂ ಓದಿ: ಸುಡುವಾಗ ಪಶುವೈದ್ಯೆ ಜೀವಂತವಾಗಿದ್ಳು: ಸತ್ಯ ಬಾಯಿಬಿಟ್ಟ ಮೃಗೀಯ ಮನುಷ್ಯ
ಏನಿದು ಪ್ರಕರಣ?
ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಇದನ್ನೂ ಓದಿ: ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿ ಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ
ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿ ಪಾಷಾ ಬಾಯಿ ಬಿಟ್ಟಿದ್ದನು.