Tag: Veterinarians

  • ಕೆಲಸ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ

    ಕೆಲಸ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ

    ಬೆಂಗಳೂರು: ಇಲಾಖೆಯ ಬಲವರ್ಧನೆಗೆ ಶ್ರಮಿಸಿ ಇಲ್ಲವೇ ಜಾಗ ಖಾಲಿ ಮಾಡಿ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದರು.

    ಕೇಂದ್ರ ಸ್ಥಾನದಲ್ಲಿ ಅಧಿಕಾರಿಗಳು ಇರುವುದೇ ಇಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ ಎಂದು ಸಚಿವರು ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು. ಕೃಷಿಯೊಂದಿಗೆ ರೈತಾಪಿ ವರ್ಗ ಪಶುಸಂಗೋಪನೆಯನ್ನು ಅವಲಂಬಿಸಿದ್ದಾರೆ. ಸಕಾಲದಲ್ಲಿ ಜಾನುವಾರುಗಳ ಆರೋಗ್ಯ ನೋಡಿಕೊಳ್ಳಲು ಅವರೆಲ್ಲ ನಮ್ಮ ಇಲಾಖೆಯನ್ನು ಅವಲಂಬಿಸಿದ್ದಾರೆ. ಇಂತಹ ಸಮಯದಲ್ಲಿ ಕರ್ತವ್ಯ ಲೋಪವಾದರೆ ಪಶುಪಾಲಕರಿಗೆ ಆರ್ಥಿಕ ಸಂಕಷ್ಟ, ಜಾನುವಾರುಗಳು ಜೀವ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗುತ್ತದೆ ಎಂದು ಅವರು ಮಾತನಾಡಿದರು. ಇದನ್ನೂ ಓದಿ: ಕೋವಿಡ್ ಟಫ್‌ ರೂಲ್ಸ್‌ ಜಾರಿಯಾದ್ರೂ ಪಾದಯಾತ್ರೆ ಮಾಡೇ ಮಾಡ್ತೀವಿ: ಸಿದ್ದರಾಮಯ್ಯ

    ಉತ್ತರಪ್ರದೇಶದಲ್ಲಿ 17 ಸಾವಿರ ಜಾನುವಾರುಗಳಿಗೆ ಒಬ್ಬ ಪಶುವೈದ್ಯರಿದ್ದಾರೆ. ಆದರೆ ನಮ್ಮಲ್ಲಿ ಅಂದಾಜು 4 ಸಾವಿರ ಜಾನುವಾರುಗಳಿಗೆ ಒಬ್ಬ ಪಶುವೈದ್ಯರಿದ್ದಾರೆ. ಇಂತಹ ಸಮಯದಲ್ಲಿ ನಿರ್ಹವಣೆ ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮಲ್ಲಿ ಹೆಚ್ಚು ಒತ್ತಡವಿಲ್ಲ. ಹೀಗಾಗಿ ಜಾನುವಾರುಗಳಿಗೆ ಹೆಚ್ಚು ಸಮರ್ಪಕವಾಗಿ ಚಿಕಿತ್ಸೆ ನೀಡಬಹುದಾಗಿದೆ. ನಿಮಗೆ ಬೇರೆ ರಾಜ್ಯದ ಪಶುವೈದ್ಯರಷ್ಟು ಒತ್ತಡವಿಲ್ಲ. ಹೀಗಾಗಿ ಜವಾಬ್ದಾರಿಯಿಂದ ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯವರಿಗೆ ಮೆದುಳಿಗೆ ನಾಲಿಗೆಗೆ ಕನೆಕ್ಷನ್ ಇಲ್ಲ: ಶಿವರಾಜ್ ತಂಗಡಗಿ

  • 3 ದಿನದಲ್ಲಿ 200ಕ್ಕೂ ಹೆಚ್ಚು ಶ್ವಾನಗಳ ಸಾವು- ಜನರಲ್ಲಿ ಆತಂಕ

    3 ದಿನದಲ್ಲಿ 200ಕ್ಕೂ ಹೆಚ್ಚು ಶ್ವಾನಗಳ ಸಾವು- ಜನರಲ್ಲಿ ಆತಂಕ

    ಕೊಲ್ಕತ್ತಾ: ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶಾನ್ವಗಳು ಸಾವನ್ನಪ್ಪಿದೆ. ಈ ಮೂಲಕ ಜನರಲ್ಲಿ ಆತಂಕವನ್ನು ಮೂಡಿಸಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ನಡೆದಿದೆ.

    ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ. ಈ ಕುರಿತಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಮೃತಪಟ್ಟ ನಾಯಿಗಳ ದ್ರವವನ್ನು ಸಂಗ್ರಹಿಸಿ ಕೊಲ್ಕತ್ತಾಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ನಾಯಿಗಳ ಶವವನ್ನು ಬಿಷ್ಣುಪುರ ಪುರಸಭೆಯವರು ಒಂದು ಕಡೆ ತೆಗೆದುಕೊಂಡು ಡಂಪಿಂಗ್ ಮಾಡಲಾಗುತ್ತಿದೆ.

    200 ನಾಯಿಗಳು ಸೋಕಿನಿಂದ ಮೃತಪಟ್ಟಿವೆ ಎಂದು ಶಂಕಿಸಲಾಗಿದೆ. ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಬರುವುದು ಸಮಾನ್ಯವಾಗಿದೆ. ಈ ಕುರಿತಾಗಿ ಆತಂಕಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಇತರ ಪ್ರಾಣಿ ಅಥವಾ ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ ಪರೀಕ್ಷೆ ಮಾಡುತ್ತೇವೆ ಎಂದು ಪಶುವೈದ್ಯರು ಹೇಳಿದ್ದಾರೆ.