Tag: Veterinary

  • ಎಂಜಿನಿಯರಿಂಗ್, ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಕೋರ್ಸುಗಳಿಗೆ ಪ್ರವೇಶಾತಿ ಅಕ್ಟೋಬರ್ 30ಕ್ಕೆ ವಿಶೇಷ ಸುತ್ತು: KEA

    ಎಂಜಿನಿಯರಿಂಗ್, ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಕೋರ್ಸುಗಳಿಗೆ ಪ್ರವೇಶಾತಿ ಅಕ್ಟೋಬರ್ 30ಕ್ಕೆ ವಿಶೇಷ ಸುತ್ತು: KEA

    ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಲಭ್ಯವಿರುವ ಎಂಜಿನಿಯರಿಂಗ್ ಸೀಟುಗಳ ಜೊತೆಗೆ 2ನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ನಂತರ ರದ್ದುಪಡಿಸಿಕೊಂಡಿರುವ ಪ್ರವೇಶ ಪಡೆಯದಿರುವ ಕಾರಣಕ್ಕೆ ಖಾಲಿ ಸೀಟುಗಳು ಎಂದು ಗುರುತಿಸಲಾಗಿರುವ ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಸೀಟುಗಳ ಹಂಚಿಕೆ ಅಕ್ಟೋಬರ್ 30ರಂದು ನಡೆಯಲಿದೆ. ಈ ಕುರಿತು ಮಾಧ್ಯಮ ಹೇಳಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಬಿಡುಗಡೆ ಮಾಡಿದೆ.

    ಅಕ್ಟೋಬರ್ 27ರ ಮಧ್ಯಾಹ್ನ 1:00 ರಿಂದ ಇಚ್ಚೆ ಆಯ್ಕೆಗಳನ್ನು ದಾಖಲಿಸಲು ಆನ್‌ಲೈನ್ ಪೋರ್ಟಲ್ ಸಕ್ರಿಯಗೊಳಿಸಲಾಗುವುದು. 2023ನೇ ಸಾಲಿನಲ್ಲಿ ಯಾವುದೇ ಕೋರ್ಸಿಗೆ ಸೀಟು ಹಂಚಿಕೆ ಮಾಡಿಕೊಳ್ಳದಿರುವವರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಇಚ್ಚೆ ಆಯ್ಕೆಗಳನ್ನು ದಾಖಲಿಸಲು ಅಕ್ಟೋಬರ್ 29ರ ಬೆಳಗ್ಗೆ 10 ರವರೆಗೆ ಕಾಲಾವಕಾಶವಿರುತ್ತದೆ. ಇಲ್ಲಿಯವರೆಗೆ 2023ನೇ ಸಾಲಿನಲ್ಲಿ ಯಾವುದೇ ಸೀಟನ್ನು ಪ್ರಾಧಿಕಾರದ ಮೂಲಕ ಹಂಚಿಕೆ ಮಾಡಿಕೊಳ್ಳದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಪೋರ್ಟಲ್‌ನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಹಾಗೂ ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಸೀಟುಗಳ ಲಭ್ಯತೆಯನ್ನು ಗಮನಿಸಿ, ನಂತರ ತಮ್ಮ ಇಚ್ಛೆ ಆಯ್ಕೆಗಳನ್ನು ಆದ್ಯತೆಯ ಮೇರೆಗೆ ದಾಖಲಿಸಬಹುದು. ಇದನ್ನೂ ಓದಿ: ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾ

    ವಿಶೇಷ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಅಕ್ಟೋಬರ್ 29ರ ಸಂಜೆ 6 ಗಂಟೆಯ ನಂತರ ಪ್ರಕಟಿಸಲಾಗುವುದು. ವಿಶೇಷ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಅಕ್ಟೋಬರ್ 30ರಂದು ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಿ, ಪ್ರವೇಶ ಆದೇಶ ಡೌನ್‌ಲೋಡಿ ಮಾಡಿಕೊಂಡು ಅದೇ ದಿನವೇ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು (Deemed Admission). ಉಳಿದಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಸೀಟುಗಳ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಎಂಜಿನಿಯರಿಂಗ್ ಕಾಲೇಜುಗಳನ್ನು ನೇರವಾಗಿ ಸಂಪರ್ಕಿಸಿ ಸರ್ಕಾರಿ ಕೋಟಾ ಶುಲ್ಕ ಪಾವತಿಸಿ ಎಂಜಿನಿಯರಿಂಗ್ ಸೀಟನ್ನು ಅಕ್ಟೋಬರ್ 30ರ ಸಂಜೆ 5:30 ರೊಳಗೆ ಪಡೆಯಬಹುದಾಗಿದೆ. ಇದನ್ನೂ ಓದಿ: 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಹುಲ್ ಗಾಂಧಿ ಒಬ್ಬ ಚೈಲ್ಡ್: ಭಗವಂತ್ ಖೂಬಾ

    ರಾಹುಲ್ ಗಾಂಧಿ ಒಬ್ಬ ಚೈಲ್ಡ್: ಭಗವಂತ್ ಖೂಬಾ

    ಬೀದರ್: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಒಬ್ಬ ಚೈಲ್ಡ್. ಮೊದಲನೆಯದಾಗಿ ಅವರಿಗೆ ಪ್ರಬುದ್ಧತೆ ಇಲ್ಲ ಎಂದು ಬೀದರ್‌ನ (Bidar) ಪಶು ವಿವಿಯಲ್ಲಿ  (Veterinary, Animal and Fisheries Sciences University) ಕೇಂದ್ರ ಸಚಿವ ಭಗವಂತ್ ಖೂಬಾ (Bhagawanth Khuba) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಹುಲ್ ಗಾಂಧಿಯವರಿಗೆ ದೇಶದ ಮೇಲೆ ಅಭಿಮಾನ ಹಾಗೂ ದೇಶದ ವ್ಯವಸ್ಥೆ ಬಗ್ಗೆ ತಿಳುವಳಿಕೆ ಇಲ್ಲ ಎಂದು ಕುಟುಕಿದರು. ಇದನ್ನೂ ಓದಿ: ಶಾಸಕ ಅಭಯ್ ಪಾಟೀಲ್‍ರಿಂದ ಶಾಲಾ ಮಕ್ಕಳಿಗೆ ಐಸ್‍ಕ್ರೀಂ ವಿತರಣೆ

    ದೇಶದ ಹೊರಗಡೆ ಹೋಗಿ ಪ್ರಚಾರವನ್ನು ಅನೇಕ ರೀತಿ ಪಡೆಯುತ್ತಾರೆ. ಇನ್ನೂ ಕೆಲವರು ಬಟ್ಟೆ ಬಿಚ್ಚಿ ಪ್ರಚಾರ ಪಡೆಯುತ್ತಾರೆ. ನಮ್ಮ ದೇಶವನ್ನು ನಿಂದಿಸಿ, ಸಂವಿಧಾನ (Constitution) ಹಾಗೂ ಪ್ರಜಾಪ್ರಭುತ್ವಕ್ಕೆ (Democrosy) ಪ್ರಶ್ನೆ ಮಾಡುತ್ತಾರೆ. ಒಬ್ಬ ನಾಗರಿಕನ ಜವಾಬ್ದಾರಿಯನ್ನೂ ರಾಹುಲ್ ನಿರ್ವಹಣೆ ಮಾಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಯುವತಿಯ ಹತ್ಯೆ – ದಲಿತಳು ಎಂದು ಕೊಲೆ ಆರೋಪ

  • ತೀವ್ರಗೊಂಡ ಹಕ್ಕಿ ಜ್ವರ ಭೀತಿ – ಕಳೆದೊಂದು ವಾರದಲ್ಲಿ 12 ಕೊಕ್ಕರೆಗಳು ಸಾವು

    ತೀವ್ರಗೊಂಡ ಹಕ್ಕಿ ಜ್ವರ ಭೀತಿ – ಕಳೆದೊಂದು ವಾರದಲ್ಲಿ 12 ಕೊಕ್ಕರೆಗಳು ಸಾವು

    ಮೈಸೂರು: ಕೊರೊನಾ ವೈರಸ್ ಹಾವಳಿಯ ನಡುವೆಯೇ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಎದುರಾಗಿದೆ. ನಗರದಲ್ಲಿ ಕಳೆದ ಒಂದು ವಾರದಿಂದ ಹನ್ನೆರಡು ಕೊಕ್ಕರೆಗಳು ಸಾವನ್ನಪ್ಪಿವೆ.

    ನೆರೆಯ ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದರಿಂದ ಕೊಕ್ಕರೆಗಳ ಸಾವು ಮೈಸೂರಿನಲ್ಲಿ ತಲ್ಲಣ ಉಂಟು ಮಾಡಿದೆ. ಮೈಸೂರಿನ ವಾರ್ಡ್ ನಂಬರ್ 55ರ ವ್ಯಾಪ್ತಿಯಲ್ಲೇ 12 ಕೊಕ್ಕರೆಗಳು ಸಾವನ್ನಪ್ಪಿದ್ದು, ಸ್ಥಳೀಯ ನಗರಪಾಲಿಕೆ ಸದಸ್ಯ ರಾಮಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ರಾಮಪ್ರಸಾದ್ ಅವರು ಮಹಾನಗರ ಪಾಲಿಕೆಯ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಾಗರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಡಾ.ನಾಗರಾಜ್ ಅವರು ಮೃತ ಕೊಕ್ಕರೆಗಳ ದೇಹದ ತುಣುಕುಗಳನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಕೊಕ್ಕರೆಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

  • ಅಮಾನವೀಯ ದುರಂತಗಳಿಗೆ ಅಂತ್ಯ ಹಾಡುವ ಸಮಯ ಇದು : ಪಶುವೈದ್ಯೆ ಪ್ರಕರಣಕ್ಕೆ ಕೊಹ್ಲಿ ಕಿಡಿ

    ಅಮಾನವೀಯ ದುರಂತಗಳಿಗೆ ಅಂತ್ಯ ಹಾಡುವ ಸಮಯ ಇದು : ಪಶುವೈದ್ಯೆ ಪ್ರಕರಣಕ್ಕೆ ಕೊಹ್ಲಿ ಕಿಡಿ

    ನವದೆಹಲಿ: ತೆಲಂಗಾಣದಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಅತ್ಯಾಚಾರ ಮಾಡಿ ನಂತರ ಸುಟ್ಟು ಹಾಕಿದ ಅಮಾನವೀಯ ಘಟನೆ ಕುರಿತು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಟ್ವೀಟ್ ಮಾಡಿದ್ದು, ಸಮಾಜವಾಗಿ ನಾವು ಈ ರೀತಿಯ ದುರಂತಗಳಿಗೆ ಅಂತ್ಯವಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದಾರೆ.

    ನವೆಂಬರ್ 27 ರಂದು 26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಬೈಕ್ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ, ಮೂವರು ಕ್ಲೀನರ್ ಗಳು ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದರು.

    ಪ್ರಿಯಾಂಕ ಅವರ ಹತ್ಯೆ ಪ್ರಕರಣ ಇಡೀ ದೇಶವನ್ನೇ ನಡುಗಿಸಿದ್ದು, ಭಾರತದದ್ಯಾಂತ ಸೆಲೆಬ್ರಿಟಿಗಳು ಸೇರಿದಂತೆ ಸಾರ್ವಜನಿಕರು ಈ ವಿಚಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈಗ ಈ ವಿಚಾರವನ್ನು ಖಂಡಿಸಿ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ ಅವರು, ಹೈದರಾಬಾದ್‍ನಲ್ಲಿ ನಡೆದದ್ದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ. ಸಮಾಜವಾಗಿ ನಾವು ಅಧಿಕಾರ ವಹಿಸಿಕೊಂಡು ಈ ಅಮಾನವೀಯ ದುರಂತಗಳಿಗೆ ಅಂತ್ಯ ಹಾಡುವ ಸಮಯ ಇದು ಎಂದು ಟ್ವೀಟ್ ಮಾಡಿದ್ದಾರೆ.

    ಹೈದರಾಬಾದ್‍ನಲ್ಲಿ ಪ್ರಿಯಾಂಕಾರೆಡ್ಡಿ ಆಗಿರಲಿ, ತಮಿಳುನಾಡಿನಲ್ಲಿ ರೋಜಾ ಆಗಿರಲಿ ಅಥವಾ ರಾಂಚಿಯಲ್ಲಿ ಕಾನೂನು ವಿದ್ಯಾರ್ಥಿ ಸಾಮೂಹಿಕ ಅತ್ಯಾಚಾರವಾಗಿರಲಿಲ್ಲ. ಈ ರೀತಿಯ ಕೃತ್ಯಗಳಿಂದ ನಾವು ಸಮಾಜವಾಗಿ ಮಾನವಿಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ತೋರುತ್ತದೆ. ನಿರ್ಭಯಾ ಪ್ರಕರಣ ನಡೆದು 7 ವರ್ಷಗಳು ಕಳೆದಿದೆ. ಆದರೆ ನಮ್ಮ ನೈತಿಕತೆ ಬದಲಾಗಿಲ್ಲ. ಇದನ್ನು ನಿಲ್ಲಿಸಲು ನಮಗೆ ಕಠಿಣ ಕಾನೂನುಗಳು ಬೇಕಾಗುತ್ತವೆ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ನಟಿ ಅನುಷ್ಕಾ ಶೆಟ್ಟಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿದ್ದು, ಅಮಾಯಕಿ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿ ಕೊಲ್ಲಲಾಗಿದೆ. ಇದು ಇಡೀ ಮನುಕುಲವನ್ನೇ ಕದಲಿಸುವ ವಿಚಾರ. ಪೈಶಾಚಿಕ ಕೃತ್ಯವೆಸಗಿ ಪ್ರಿಯಾಂಕಾಳನ್ನು ಕೊಂದ ಪಾಪಿಗಳನ್ನು ಪ್ರಾಣಿಗಳಿಗೆ ಹೋಲಿಸಿದರೆ ಅವು ಕೂಡ ನಾಚಿಕೆ ಪಟ್ಟುಕೊಳ್ಳುತ್ತವೆ ಎಂದಿದ್ದಾರೆ. ಅಲ್ಲದೆ ಈ ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ ಎಂದು ಪ್ರಶ್ನಿಸಿದ್ದಾರೆ. ಶಿಕ್ಷೆ ಆಗೋವರೆಗೂ ಹೋರಾಟ ನಡೆಸೋಣ ಎಂದು ಪಶುವೈದ್ಯೆಯ ದಾರುಣ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

    ರಶ್ಮಿಕಾ ಮಂದಣ್ಣ ಕೂಡ ತಮ್ಮ ಟ್ವಿಟ್ಟರಿನಲ್ಲಿ, ಸುರಕ್ಷತೆ ಎಲ್ಲಿದೆ? ಕೆಟ್ಟ ವಿಷಯಗಳು ಹಾಗೂ ಹಿಂಸಾಚಾರವನ್ನು ನಿರ್ಲಕ್ಷ್ಯಿಸುವುದರಿಂದ ಪರಿಹಾರ ಸಿಗುವುದಿಲ್ಲ. ನಿಮಗೆ ಅಸುರಕ್ಷತೆ ಎನಿಸಿದಾಗ ದಯವಿಟ್ಟು ಸಹಾಯಕ್ಕಾಗಿ ತಲುಪಿ. ಹಾಗೆಯೇ ನಿಮ್ಮ ಸಹಾಯದ ಅಗತ್ಯ ಇರುವವರ ಜೊತೆ ಇರಿ ಎಂದು ತೆಲಂಗಾಣ ರಾಜ್ಯದ ಪ್ರತಿ ಜಿಲ್ಲೆಯ ಪೊಲೀಸ್ ಠಾಣೆ ಫೋನ್ ನಂಬರ್ ಹಾಗೂ ಇಮೇಲ್ ಐಡಿ ಇರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

    https://www.instagram.com/p/B5cZd–HF3p/?utm_source=ig_embed

    ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಲಾರಿ ಡ್ರೈವರ್ ಆರೀಫ್ ಮತ್ತು ಇನ್ನುಳಿದ ಮೂವರು ಕ್ಲೀನರ್ ಗಳಾದ ಜೊಲ್ಲು ಶಿವ, ಜೊಲ್ಲು ನವೀನ್ ಮತ್ತು ಚಿಂತಕುಂಟ ಚೆನ್ನಾಕೇಶಾವುಲು ಅನ್ನು ಪೊಲೀಸ್ ಅರೆಸ್ಟ್ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶಿಸಿದೆ.

  • ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

    – ಕೃತ್ಯವೆಸುಗುವಾಲೇ ಉಸಿರುಗಟ್ಟಿಸಿ ಕೊಂದ್ರು

    ಹೈದರಾಬಾದ್: ತೆಲಂಗಾಣದ ಪಶುವೈದ್ಯೆಗೆ ಕೂಲ್ ಡ್ರಿಂಕ್ಸ್ ನಲ್ಲಿ ವಿಸ್ಕಿ ಬೆರಸಿ ಕುಡಿಸಿ ನಾಲ್ವರು ಆರೋಪಿಗಳು ಅತ್ಯಾಚಾರ ಮಾಡಿದ್ದಾರೆ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗಗೊಂಡಿದೆ.

    26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಬೈಕ್ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ, ಮೂವರು ಕ್ಲೀನರ್ ಗಳು ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದರು.

    ಈ ಪ್ರಕರಣದ ವಿಚಾರಣೆ ನಡೆಸಿದಾಗ, ಆರೋಪಿಗಳು ಒಂದೂವರೆ ಬಾಟಲು ವಿಸ್ಕಿ, ಸ್ಯ್ನಾಕ್ಸ್ ಮತ್ತು ಕೂಲ್ ಡ್ರಿಂಕ್ಸ್ ಅನ್ನು ತೋಂಡುಪಲ್ಲಿ ಗ್ರಾಮದ ಬಳಿ ಖರೀದಿಸಿದ್ದಾರೆ. ಶಂಶಾಬಾದ್ ಟೋಲ್ ಗೇಟ್ ಬಳಿ ನಾಲ್ವರು ಕುಳಿತು ಮದ್ಯಪಾನ ಮಾಡಿದ್ದಾರೆ. ನಂತರ ಕೂಲ್ ಡ್ರಿಂಕ್ಸ್‍ಗೆ ವಿಷ್ಕಿ ಬೆರೆಸಿ ಪ್ರಿಯಾಂಕಳಿಗೆ ಕಡಿಯಲು ಒತ್ತಾಯ ಮಾಡಿದ್ದಾರೆ. ಕೃತ್ಯ ಎಸಗುವಾಗ ಎಲ್ಲಾ ಆರೋಪಿಗಳು ಕಂಠ ಪೂರ್ತಿ ಕುಡಿದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

    ಟೋಲ್ ಗೇಟ್ ಸಮೀಪದಲ್ಲಿ ಮದ್ಯ ಖರೀದಿಸಿ ಕಂಠ ಪೂರ್ತಿ ಕುಡಿದಿರುವ ಆರೋಪಿಗಳು ನಂತರ ಯುವತಿಯನ್ನು ರೇಪ್ ಮಾಡಿದ್ದಾರೆ. ರೇಪ್ ಮಾಡುವ ಸಮಯದಲ್ಲಿ ಯುವತಿಯ ಬಾಯಿ ಮತ್ತು ಮೂಗುನ್ನು ಗಟ್ಟಿಯಾಗಿ ಮುಚ್ಚಿಕೊಂಡಿದ್ದರಿಂದ ಉಸಿರುಗಟ್ಟಿ ಪ್ರಿಯಾಂಕ ಸಾವನ್ನಪ್ಪಿದ್ದಾರೆ. ನಂತರ ಇವರು ದೇಹವನ್ನು ತೆಗೆದುಕೊಂಡು ಹೋಗಿ ಸೇತುವೆ ಕೆಳಗೆ ಪೆಟ್ರೋಲ್ ಹಾಕಿ ಸುಟ್ಟು ಬಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ರೇಪ್ ಮಾಡಿ ಮೃತ ದೇಹವನ್ನು ಸುಟ್ಟ ನಂತರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಮೊಹಮ್ಮದ್ ಆರೀಫ್ ಉಳಿದ ಮೂವರನ್ನು ಅರಮ್‍ಘರ್ ಎಕ್ಸ್ ರಸ್ತೆಗೆ ಡ್ರಾಪ್ ಮಾಡಿ ನಂತರ ನಾರಾಯಣಪೇಟೆಯಲ್ಲಿರುವ ತನ್ನ ಮನೆಗೆ ಹೋಗಿದ್ದಾನೆ. ಆದರೆ ತನಿಖೆ ವೇಳೆ ಟೋಲ್ ಗೇಟ್ ಸಿಬ್ಬಂದಿ ಲಾರಿ ಇಲ್ಲಿ ನಿಂತಿದ್ದನ್ನು ನೋಡಿದ್ದೇವೆ ಎಂದು ಹೇಳಿದ್ದಾರೆ. ನಂತರ ಲಾರಿ ಮಾಲೀಕ ಶ್ರೀನಿವಾಸ್ ರೆಡ್ಡಿಯನ್ನು ವಿಚಾರಣೆ ಮಾಡಿದಾಗ ಈ ನಾಲ್ವರ ಬಗ್ಗೆ ಗೊತ್ತಾಗಿದೆ.

    ಇದರಲ್ಲಿ ಪ್ರಮುಖ ಆರೋಪಿಯಾದ ಆರೀಫ್ ಲಾರಿ ಡ್ರೈವರ್ ಆಗಿದ್ದು, ಇನ್ನುಳಿದ ಜೊಲ್ಲು ಶಿವ, ಜೊಲ್ಲು ನವೀನ್ ಮತ್ತು ಚಿಂತಕುಂಟ ಚೆನ್ನಾಕೇಶಾವುಲು ಲಾರಿಯಲ್ಲಿ ಕ್ಲೀನರ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ನಾಲ್ವರನ್ನು ಪೊಲೀಸರು ಶುಕ್ರವಾರ ಅರೆಸ್ಟ್ ಮಾಡಿದ್ದಾರೆ. ಈ ನಾಲ್ವರು ಚಿಕ್ಕಂದಿನಿಂದಲೂ ಸ್ವೇಹಿತರಾಗಿದ್ದು, ಎಲ್ಲರೂ ಶಾಲೆಯನ್ನು ಬಿಟ್ಟು ಲಾರಿ ಓಡಿಸುವ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಬುಧವಾರ ನಾಪತ್ತೆಯಾಗಿದ್ದ ಪಶುವೈದ್ಯೆ ಇಂದು ಶವವಾಗಿ ಪತ್ತೆ

    ಬುಧವಾರ ನಾಪತ್ತೆಯಾಗಿದ್ದ ಪಶುವೈದ್ಯೆ ಇಂದು ಶವವಾಗಿ ಪತ್ತೆ

    – ಅಂಡರ್ ಬ್ರಿಡ್ಜ್  ಕೆಳಗೆ ಜೀವಂತವಾಗಿ ಸುಟ್ರು

    ಹೈದರಾಬಾದ್: ಬುಧವಾರ ರಾತ್ರಿ ನಾಪತ್ತೆಯಾಗಿದ್ದ 26 ವರ್ಷದ ಪಶುವೈದ್ಯೆಯ ಶವ ಇಂದು ಬೆಳಿಗ್ಗೆ ಸುಟ್ಟು ಕರಕಲಾದ ರೀತಿಯಲ್ಲಿ ಪತ್ತೆಯಾಗಿದೆ.

    ತೆಲಂಗಾಣದ ಕೊಲ್ಲೂರು ಗ್ರಾಮದ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಪಶುವೈದ್ಯೆಯಾದ ಪ್ರಿಯಾಂಕಾ ರೆಡ್ಡಿ, ಬುಧವಾರ ಬೆಳಗ್ಗೆ ಶಾದ್‍ನಗರದ ತನ್ನ ಮನೆಯಿಂದ ತಾನು ಕೆಲಸ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ನಂತರ ರಾತ್ರಿ ಬೈಕ್ ಪಂಕ್ಚರ್ ಆಗಿದೆ ಎಂದು ತನ್ನ ತಂಗಿಗೆ ಕರೆ ಮಾಡಿ ನಂತರ ನಾಪತ್ತೆಯಾಗಿದ್ದರು. ಆದರೆ ಇಂದು ಬೆಳಗ್ಗೆ ಶಾಡ್‍ನಗರದಲ್ಲಿ ಅಂಡರ್ ಬ್ರಿಡ್ಜ್ ನ ಕೆಳಗೆ ಶವವಾಗಿ ಪತ್ತೆಯಾಗಿದ್ದಾರೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪ್ರಿಯಾಂಕ ಅವರ ತಂಗಿ ಭವ್ಯ, ನನಗೆ ಪ್ರಿಯಾಂಕ ರಾತ್ರಿ 9:15 ಸುಮಾರಿಗೆ ಕರೆ ಮಾಡಿದಳು. ನನ್ನ ಬೈಕ್ ಪಂಕ್ಚರ್ ಆಗಿದೆ. ನನಗೆ ಭಯವಾಗುತ್ತಿದೆ ಎಂದು ಹೇಳಿದಳು. ನಂತರ ನಾನು ಅವಳಿಗೆ ಹತ್ತಿರದ ಟೋಲ್ ಬಳಿ ಹೋಗಲು ಹೇಳಿದೆ. ಆದರೆ ಅವಳು ನನಗೆ ತುಂಬಾ ಭಯವಾಗುತ್ತಿದೆ. ಇಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿದ್ದಾರೆ ಹಾಗೂ ತುಂಬಾ ಲಾರಿಗಳನ್ನು ಪಾರ್ಕ್ ಮಾಡಲಾಗಿದೆ ಎಂದು ಹೇಳಿದಳು ಎಂದು ತಿಳಿಸಿದ್ದಾರೆ.

    ನಾನು ನಂತರ ಅವಳಿಗೆ ಭಯಪಡಬೇಡ ಬೈಕನ್ನು ಅಲ್ಲೇ ನಿಲ್ಲಿಸಿ ನೀನು ಅಲ್ಲಿಂದ ಬಾ ಎಂದು ಹೇಳಿದೆ. ನಂತರ ಮತ್ತೆ ಅವಳ ಫೋನ್‍ಗೆ ಕರೆ ಮಾಡಿದಾಗ ಅವಳ ಫೋನ್ ಸ್ವಿಚ್ ಆಫ್ ಬಂತು. ಆದರೆ ಬೆಳಗ್ಗೆ ಶಾಡ್‍ನಗರದಲ್ಲಿ ಅಂಡರ್ ಬ್ರಿಡ್ಜ್ ಕೆಳಗೆ ಕಂಡು ಹಿಡಿಯಲು ಆಗದ ರೀತಿಯಲ್ಲಿ ಸುಟ್ಟು ಹೋದ ಅವಳ ದೇಹ ದೊರಕಿದೆ. ಆಕೆ ಹಾಕಿದ್ದ ಚೈನ್ ಲಾಕೆಟ್ ನೋಡಿ ನಾವು ದೇಹವನ್ನು ಗುರುತಿಸಿದೆವು ಎಂದು ಭವ್ಯ ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಶಂಶಾಬಾದ್ ಡಿಸಿಪಿ ಪ್ರಕಾಶ್ ರೆಡ್ಡಿ, ನಾವು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಸ್ಥಳೀಯರು ಸುಮಾರು 7:30 ಶವದ ಬಗ್ಗೆ ನಮಗೆ ಮಾಹಿತಿ ನೀಡಿದರು. ನಂತರ ಸ್ಥಳಕ್ಕೆ ಹೋಗಿ ನೋಡಿದಾಗ, ಸೀಮೆಎಣ್ಣೆ ಹಾಕಿ ದೇಹವನ್ನು ಸಂಪೂರ್ಣ ಸುಡಲಾಗಿದೆ. ಆಕೆ ಬೈಕ್ ಇನ್ನೂ ಸಿಕ್ಕಿಲ್ಲ. ಅದನ್ನು ಹುಡುಕುತ್ತಿದ್ದೇವೆ. ಆಕೆಯನ್ನು ಜೀವಂತವಾಗಿ ಸುಟ್ಟಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಪ್ರಕರಣವನ್ನು ತನಿಖೆ ಮಾಡಲು ಹತ್ತು ತಂಡಗಳನ್ನು ನೇಮಿಸಲಾಗಿದೆ ಎಂದು ಹೇಳಿದ್ದಾರೆ.

    ಮಗಳ ಸಾವಿನಿಂದ ಆಘಾತಕ್ಕೀಡಾಗಿರುವ ಸರ್ಕಾರಿ ನೌಕರ ಪ್ರಿಯಾಂಕ ಅವರ ತಂದೆ, ನನ್ನ ಮಗಳ ಸಾವಿಗೆ ನ್ಯಾಯ ಬೇಕು. ಅವಳನ್ನು ಕೊಲೆ ಮಾಡಿ ಸುಟ್ಟವರನ್ನು ನೇಣು ಹಾಕಬೇಕು ಎಂದು ಆಗ್ರಹಿಸಿದ್ದಾರೆ.

  • ಧರ್ಮನಿಂದನೆ ಆರೋಪ – ಪಾಕಿನಲ್ಲಿ ಹಿಂದೂ ಡಾಕ್ಟರ್ ಅರೆಸ್ಟ್

    ಧರ್ಮನಿಂದನೆ ಆರೋಪ – ಪಾಕಿನಲ್ಲಿ ಹಿಂದೂ ಡಾಕ್ಟರ್ ಅರೆಸ್ಟ್

    ನವದೆಹಲಿ: ಧರ್ಮನಿಂದನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ಹಿಂದೂ ಡಾಕ್ಟರ್ ಒಬ್ಬರನ್ನು ಅರೆಸ್ಟ್ ಮಾಡಲಾಗಿದೆ.

    ಈ ಘಟನೆ ಹಿಂದೂಗಳೇ ಹೆಚ್ಚಾಗಿ ವಾಸ ಮಾಡುವ ಪಾಕಿಸ್ತಾನದ ದಕ್ಷಿಣ ಸಿಂಧು ಪ್ರಾಂತ್ಯದಲ್ಲಿ ನಡೆದಿದ್ದು, ಬಂಧನಕ್ಕೊಳಪಟ್ಟ ಹಿಂದೂ ಪಶು ವೈದ್ಯನನ್ನು ರಮೇಶ್ ಕುಮಾರ್ ಎಂದು ಗುರುತಿಸಲಾಗಿದೆ.

    ಸ್ಥಳೀಯ ಮಸೀದಿಯೊಂದರ ಮುಖ್ಯಸ್ಥ ಮೌಲ್ವಿ ಇಶಾಕ್ ನೂಹಿ, ಪಶು ವೈದ್ಯ ರಮೇಶ್ ತಮ್ಮ ಧರ್ಮದ ಪವಿತ್ರ ಪುಸ್ತಕದ ಹಾಳೆಯನ್ನು ಹರಿದು ಅದರಲ್ಲಿ ಔಷಧಿಗಳನ್ನು ಸುತ್ತಿ ಜನರಿಗೆ ನೀಡಿದ್ದಾರೆ. ಈ ಮೂಲಕ ನಮ್ಮ ಧರ್ಮದ ನಿಂದನೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

    ಈ ದೂರಿನ ಅನ್ವಯ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ. ಈ ವಿಚಾರ ತಿಳಿದು ಕೋಪಗೊಂಡ ಮುಸ್ಲಿಮರು ಸಿಂಧು ಪ್ರಾಂತ್ಯದಲ್ಲಿರುವ ಹಿಂದೂ ಧರ್ಮದವರ ಅಂಗಂಡಿಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ. ಈ ಸಂಬಂಧ ಈಗ ಸಿಂಧು ಪ್ರಾಂತ್ಯದಲ್ಲಿ ಉದ್ವಿಗ್ನ ಪರಿಸ್ಥತಿ ಉಂಟಾಗಿದೆ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಪೊಲೀಸ್ ಅಧಿಕಾರಿ ಅಹಿದ್ ಹುಸೇನ್ ಲೆಘಾರಿ, ಮೌಲ್ವಿ ನೂಹಿ ಅವರು ನೀಡಿದ್ದ ದೂರಿನ ಅನ್ವಯ ರಮೇಶ್ ಕುಮಾರ್ ಎಂಬ ಪಶು ವೈದ್ಯರನ್ನು ಬಂಧಿಸಲಾಗಿದೆ. ನಗರದಲ್ಲಿ ಅಶಾಂತಿ ಉಂಟಾದ ಕಾರಣ ಅವರನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಈ ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ಮಾಡಿ ಕ್ರಮಕೈಗೊಳ್ಳಲಾಗುತ್ತೆದೆ ಎಂದು ಹೇಳಿದ್ದಾರೆ.

    https://twitter.com/timesofpak123/status/1132965562852810754

    ಪಾಕ್‍ನ ಸಿಂಧು ಪ್ರಾಂತ್ಯದಲ್ಲಿ ಅಪಾರ ಸಂಖ್ಯೆಯ ಹಿಂದೂ ಧರ್ಮದವರು ವಾಸಮಾಡುತ್ತಿದ್ದು, ನಮ್ಮ ಮೇಲೆ ಮುಸ್ಲಿಂ ಸಮುದಾಯದವರು ವೈಯಕ್ತಿಕ ದ್ವೇಷವನ್ನು ಇಟ್ಟಿಕೊಂಡಿದ್ದಾರೆ. ಈ ದ್ವೇಷದ ಪ್ರತೀಕಾರವನ್ನು ತೀರಿಸಿಕೊಳ್ಳಲು ಧರ್ಮನಿಂಧನೆ ಮಾಡಿದ್ದೇವೆ ಎಂದು ಆರೋಪ ಮಾಡಿ ನಮ್ಮನ್ನು ಜೈಲಿಗೆ ಕಳುಹಿಸುತ್ತಿದ್ದಾರೆ ಎಂದು ಪಾಕ್‍ನಲ್ಲಿರುವ ಹಿಂದೂ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

    ಪಾಕಿಸ್ತಾನದಲ್ಲಿ 75 ಲಕ್ಷ ಹಿಂದೂಗಳು ವಾಸವಿದ್ದಾರೆ. ಇದರಲ್ಲಿ 1987 ರಿಂದ 2016 ವರೆಗೆ ಸುಮಾರು 1,472 ಹಿಂದೂಗಳನ್ನು ಧರ್ಮನಿಂದನೆಯ ಆರೋಪದ ಮೇಲೆ ಜೈಲಿಗೆ ಕಳುಹಿಸಲಾಗಿದೆ ಎಂದು ಲಾಹೋರ್‍ ನ ವಕೀಲರ ಸಂಘವೊಂದು ಅಂಕಿಅಂಶಗಳನ್ನು ಬಿಡುಗಡೆ ಮಾಡಿತ್ತು.