Tag: vetrimaran

  • ವಿಜಯ್ ಅಭಿಮಾನಿಗಳಿಗೆ ಶಾಕ್ ಕೊಟ್ಟ ನಿರ್ದೇಶಕ ವೆಟ್ರಿಮಾರನ್

    ವಿಜಯ್ ಅಭಿಮಾನಿಗಳಿಗೆ ಶಾಕ್ ಕೊಟ್ಟ ನಿರ್ದೇಶಕ ವೆಟ್ರಿಮಾರನ್

    ರಾಜಕೀಯ ಕಾರಣಕ್ಕಾಗಿ ತಮಿಳಿನ ಹೆಸರಾಂತ ನಟ ದಳಪತಿ ವಿಜಯ್ (Dalpati Vijay) ಶೀಘ್ರದಲ್ಲೇ ಚಿತ್ರರಂಗ ತೊರೆಯಲಿದ್ದಾರೆ ಎನ್ನುವ ಗುಸುಗುಸು ಕೇಳಿ ಬರುತ್ತಿದೆ. ಕೈಯಲ್ಲಿರೋ ಪ್ರಾಜೆಕ್ಟ್ ಮುಗಿದ ತಕ್ಷಣವೇ ಅವರು ರಾಜಕಾರಣದಲ್ಲಿ ಸಕ್ರೀಯರಾಗಿ, ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಿದ್ದಾರೆ ಎನ್ನುವುದು ಅವರ ಆಪ್ತರ ಮಾಹಿತಿ.

    ವಿಜಯ್ ಒಪ್ಪಿಕೊಂಡಂತೆ ಅವರ 69ನೇ ಸಿನಿಮಾವೇ ಕೊನೆಯ ಚಿತ್ರ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ವೆಟ್ರಿ ಮಾರನ್ (Vetrimaran) ನಿರ್ದೇಶನ ಮಾಡಲಿದ್ದಾರೆ ಎಂದು ಘೋಷಣೆಯೂ ಆಗಿದೆ. ಆದರೆ, ಈ ವಿಚಾರದಲ್ಲಿ ವೆಟ್ರಿ ಮಾರನ್ ಶಾಕಿಂಗ್ ಸಂಗತಿಯೊಂದನ್ನು ಹೇಳಿಕೊಂಡಿದ್ದಾರೆ. ಈ ಮಾತು ವಿಜಯ್ ಅಭಿಮಾನಿಗಳಿಗೆ ಶಾಕ್ ನೀಡಿದೆ.

    ವೆಟ್ರಿಮಾರನ್ ಮತ್ತು ವಿಜಯ್ ಕಾಂಬಿನೇಷನ್ (Combination) ಚಿತ್ರವೆಂದರೆ ಕಾಯುವಿಕೆ ಸಹಜ. ಮತ್ತೊಂದು ಅದ್ಭುತ ಸಿನಿಮಾ ತೆರೆಯ ಮೇಲೆ ಬರಲಿದೆ ಎಂದೇ ಅಭಿಮಾನಿಗಳ ಆಸೆ ಆಗಿತ್ತು. ಆದರೆ, ಈ ಸಿನಿಮಾ ತೆರೆ ಕಾಣೋದು ಅನುಮಾನ ಎಂದು ವೆಟ್ರಿ ಹೇಳಿಕೊಂಡಿದ್ದಾರೆ. ಈ ಮಾತು ಅಭಿಮಾನಿಗಳಲ್ಲಿ ನಿರಾಸೆ ತಂದಿದ್ದು ಸುಳ್ಳಲ್ಲ. ಯಾಕೆ ಅವರು ಹಾಗೆ ಹೇಳಿದರು ಎನ್ನುವುದನ್ನು ಮುಂದಿನ ದಿನಗಳಲ್ಲಿ ಅವರೇ ಸ್ಪಷ್ಟನೆ ನೀಡಬಹುದು.

    ವಿಜಯ್ 69ನೇ ಚಿತ್ರಕ್ಕೆ ಸಮಂತಾ (Samantha) ನಾಯಕಿಯಾಗಿ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಈ ಚಿತ್ರಕ್ಕೆ ಖ್ಯಾತ ನಿರ್ಮಾಣ ಸಂಸ್ಥೆಯೊಂದು ನಿರ್ಮಾಣದ ಹೊಣೆ ಹೊತ್ತಿದೆ ಎನ್ನುವ ಸುದ್ದಿಯೂ ಇತ್ತು. ಆದರೆ, ಸಿನಿಮಾನೇ ಬರೋದಿಲ್ಲ ಎನ್ನುವ ಸುದ್ದಿ ಆಘಾತ ಮೂಡಿಸಿದೆ.

  • ‘ಅನ್ನಪೂರ್ಣಿ’ ಡಿಲೀಟ್ ಮಾಡಿದ್ದಕ್ಕೆ ನಿರ್ದೇಶಕ ವೆಟ್ರಿಮಾರನ್ ಬೇಸರ

    ‘ಅನ್ನಪೂರ್ಣಿ’ ಡಿಲೀಟ್ ಮಾಡಿದ್ದಕ್ಕೆ ನಿರ್ದೇಶಕ ವೆಟ್ರಿಮಾರನ್ ಬೇಸರ

    ಕ್ಷಿಣದ ಹೆಸರಾಂತ ನಿರ್ದೇಶಕ ವೆಟ್ರಿಮಾರನ್ (Vetrimaran) ಅನ್ನಪೂರ್ಣಿ ಸಿನಿಮಾದ ಪರವಾಗಿ ಮಾತನಾಡಿದ್ದಾರೆ. ನಯನತಾರಾ (Nayantara) ನಟನೆಯ ಅನ್ನಪೂರ್ಣಿ ಸಿನಿಮಾದ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಓಟಿಟಿಯಿಂದ ತೆಗೆದು ಹಾಕಲಾಗಿತ್ತು. ಈ ಕ್ರಮವನ್ನು ಅವರು ವಿರೋಧಿಸಿದ್ದಾರೆ. ಸೆನ್ಸಾರ್ ಆದ ಮೇಲೂ ಈ ರೀತಿ ಒತ್ತಡ ಹಾಕುವುದು ಸರಿಯಾದದ್ದು ಅಲ್ಲವೆಂದು ಅವರು ಹೇಳಿದ್ದಾರೆ.

    ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನಿಗೆ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ಹಲವಾರು ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು. ಒಟಿಟಿಯಿಂದ ಚಿತ್ರವನ್ನು ಡಿಲಿಟ್ ಮಾಡಲಾಗಿತ್ತು. ನಂತರ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ನಯನತಾರಾ ಅವರ ಮೇಲೂ ಪ್ರಕರಣ ದಾಖಲಾಗಿತ್ತು. ಮಧ್ಯ ಪ್ರದೇಶದ ಜಬಲ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ವಿವಾದ (Controversy) ಭುಗಿಲೇಳುತ್ತಿದ್ದಂತೆಯೇಅನ್ನಪೂರ್ಣಿ‘ (Annapoorani)  ಸಿನಿಮಾವನ್ನು ಕೊನೆಗೂ ನೆಟ್ ಫಿಕ್ಸ್ ತೆಗೆದು ಹಾಕಿದೆ. ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು.

    ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಇಂತಹ ವಿವಾದಿತ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಅನ್ನಪೂರ್ಣಿ ಒಟಿಟಿಯಲ್ಲಿ ಸಿಗಲಾರದು.

     

    ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಇದು 75ನೇ ಸಿನಿಮಾ. ಸಿನಿಮಾದಲ್ಲಿ ನಯನತಾರಾ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಅವರ ಗೆಟಪ್ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದರು. ಪಕ್ಕಾ ಸಂಪ್ರದಾಯಸ್ಥ ಕುಟುಂಬದ ಹುಡುಗಿಯಾಗಿ ನಯನತಾರಾ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

  • ಪೋಷಕ ನಟನ ಕುಡಿತಕ್ಕೆ ಸಹಾಯಕ ನಿರ್ದೇಶಕ ಬಲಿ: ಕೇಸ್ ದಾಖಲು

    ಪೋಷಕ ನಟನ ಕುಡಿತಕ್ಕೆ ಸಹಾಯಕ ನಿರ್ದೇಶಕ ಬಲಿ: ಕೇಸ್ ದಾಖಲು

    ಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವೆಟ್ರಿಮಾರನ್ (Vetrimaran) ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಶರಣ್ ರಾಜ್ (Sharan Raj), ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಜೂನ್ 8 ರಂದು ರಾತ್ರಿ 11.30ರ ಸುಮಾರಿಗೆ ಶರಣ್ ರಾಜ್ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪೋಷಕ ನಟ ಪಳನಿಪ್ಪನ್ ಎನ್ನುವವರು ಶರಣ್ ರಾಜ್ ಬೈಕ್ ಗೆ ಢಿಕ್ಕೆ ಹೊಡೆದಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣದಿಂದಾಗಿ ಶರಣ್ ರಾಜ್ ನಿಧನರಾಗಿದ್ದಾರೆ.

    ಚೆನ್ನೈನ ಕೆಕೆ ನಗರದಲ್ಲಿ ಈ ಘಟನೆ ನಡೆದಿದ್ದು, ಕಾರು ಓಡಿಸಿಕೊಂಡು ಬರುತ್ತಿದ್ದ ಪೋಷಕ ನಟ ಪಳನಿಪ್ಪನ್ (Palanippan) ಮದ್ಯಪಾನ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಶರಣ್ ರಾಜ್ ಬೈಕ್ ಗೆ ಕಾರು ಗುದ್ದಿದ್ದರಿಂದ, ಅವರು ನೆಲಕ್ಕೆ ಉರುಳಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಯಾವುದೂ ಪ್ರಯೋಜನವಾಗಿಲ್ಲ. ಇದನ್ನೂ ಓದಿ:ಒಂದು ಸಾಹಸ ದೃಶ್ಯಕ್ಕೆ 10 ಕೋಟಿ ಖರ್ಚು: ಏನಿದು ಸಲಾರ್ ದುನಿಯಾ

    ಶರಣ್ ರಾಜ್ ಪ್ರತಿಭಾವಂತ ಸಹಾಯಕ ನಿರ್ದೇಶಕ. ಜೊತೆಗೆ ಹಲವು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನೂ ಕೂಡ ಮಾಡಿದ್ದಾರಂತೆ. ದಕ್ಷಿಣದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಬಳಿ ಅನೇಕ ವರ್ಷಗಳಿಂದ ಅವರು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ವೆಟ್ರಿಮಾರನ್ ನಿರ್ದೇಶನದ ಧನುಷ್ ನಟನೆಯ ಅಸುರನ್ ಸಿನಿಮಾದಲ್ಲಿ ಶರಣ್ ರಾಜ್ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಜೊತೆಗೆ ಪಾತ್ರವೊಂದನ್ನೂ ನಿರ್ವಹಿಸಿದ್ದರು.

    ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪಳನಿಪ್ಪನ್ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಹಸ್ತಾಂತರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕ ವಯಸ್ಸಿನಲ್ಲೇ ರಸ್ತೆ ಅಪಘಾತಕ್ಕೆ (Accident) ಬಲಿಯಾದ ಶರಣ್ ರಾಜ್ ಗೆ ಅನೇಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.

  • ಕನ್ನಡದಲ್ಲಿಯೂ ಲಭ್ಯ ತಮಿಳಿನ ‘ವಿಡುದಲೈ’ ಸಿನಿಮಾ

    ಕನ್ನಡದಲ್ಲಿಯೂ ಲಭ್ಯ ತಮಿಳಿನ ‘ವಿಡುದಲೈ’ ಸಿನಿಮಾ

    ಮಿಳು ಚಿತ್ರರಂಗದ ಮಾಸ್ ಡೈರೆಕ್ಟರ್ ವೆಟ್ರಿಮಾರನ್ (Vetrimaran) ನಿರ್ದೇಶನದ ವಿಡುದಲೈ (Vidudalai) ಸಿನಿಮಾ Zee5 ಒಟಿಟಿಯಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ವಿಜಯ್ ಸೇತುಪತಿ (Vijay Sethupathi), ಸೂರಿ, ಕನ್ನಡದ ಸರ್ದಾರ್ ಸತ್ಯ, ಪ್ರಕಾಶ್ ರೈ, ಗೌತಮ್ ಮೆನನ್ ಸೇರಿದಂತೆ ಹಲವರು ನಟಿಸಿರುವ ಈ ಚಿತ್ರ ಈಗ ಕನ್ನಡದಲ್ಲಿಯೂ ಲಭ್ಯವಿದೆ.

    ಇತ್ತೀಚೆಗೆ ಪರಭಾಷೆ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿವೆ. ಈಗ ವಿಡುದಲೈ ಸಿನಿಮಾ ಕೂಡ ಕನ್ನಡದಲ್ಲಿ ನೋಡುವ ಅವಕಾಶ ದೊರೆತಿದೆ. ಮೂಲ ತಮಿಳಿನ ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಿ Zee5 ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ.  ಇದನ್ನೂ ಓದಿ:ಕಂಗನಾ ಸಿನಿಮಾ ನೋಡಿ ಕಣ್ಣೀರಿಟ್ಟ ರಾಜಮೌಳಿ ತಂದೆ

    ಆರ್‌.ಎಸ್‌. ಇನ್ಫೋಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಎಸ್. ಎಲ್ರೆಡ್ ಕುಮಾರ್ ಅದ್ಧೂರಿಯಾಗಿ ವಿಡುದಲೈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಕಾನ್ಸ್ಟೆಬಲ್ ಹಾಗೂ ಶಸಸ್ತ್ರ ಕ್ರಾಂತಿಕಾರಿ ಹೋರಾಟಗಾರನೊಬ್ಬನ ನಡುವಿನ ಕತೆಯನ್ನು ಒಳಗೊಂಡ ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರ್ತಿದೆ. ಮೊದಲ ಪಾರ್ಟ್ ಗೆ ಈಗಾಗ್ಲೇ ಭಾರೀ ರೆಸ್ಪಾನ್ಸ್ ಸಿಕ್ಕಿದ್ದು, ಸದ್ಯ ಎರಡನೇ ಭಾಗದ ಶೂಟಿಂಗ್ ಭರದಿಂದ ಸಾಗುತ್ತಿದೆ.

  • ತಮಿಳಿನಲ್ಲಿ ಸದ್ದು ಮಾಡುತ್ತಿದ್ದಾರೆ ಕನ್ನಡದ ಮತ್ತೋರ್ವ ನಟ ಸರ್ದಾರ್ ಸತ್ಯ

    ತಮಿಳಿನಲ್ಲಿ ಸದ್ದು ಮಾಡುತ್ತಿದ್ದಾರೆ ಕನ್ನಡದ ಮತ್ತೋರ್ವ ನಟ ಸರ್ದಾರ್ ಸತ್ಯ

    ಮಿಳಿನ (Tamil) ಖ್ಯಾತ ನಿರ್ದೇಶಕ ವೆಟ್ರಿಮಾರನ್ (Vetrimaran) ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ವಿಡುದಲೈ’ (Vidudalai) ಕೆಲವು ದಿನಗಳ ಹಿಂದೆ ದೇಶಾದ್ಯಂತ ಬಿಡುಗಡೆಯಾಗಿ ಜನಮನ್ನಣೆ ಪಡೆಯುತ್ತಿದೆ. ಈ ಚಿತ್ರದ ವಿಶೇಷತೆಯೆಂದರೆ, ತಮಿಳಿನ ಖ್ಯಾತ ನಟರಾದ ವಿಜಯ್ ಸೇತುಪತಿ, ಸೂರಿ, ಗೌತಂ ವಾಸುದೇವ ಮೆನನ್ ಮುಂತಾದವರ ಜೊತೆಗೆ ಕನ್ನಡದ ಆ ದಿನಗಳು ಖ್ಯಾತಿಯ ಸರ್ದಾರ್ ಸತ್ಯ (Sardar Satya) ಸಹ ಪ್ರಮುಖ ಪಾತ್ರದಲ್ಲಿ  ಕಾಣಿಸಿಕೊಂಡಿರುವುದು. ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ S I Velmurugan ಪಾತ್ರದಲ್ಲಿ ಕಾಣಿಸಿಕೊಂಡಿರುವ ಸತ್ಯ, ತಮ್ಮ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.  ಆ ದಿನಗಳು’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸತ್ಯ, ಆ ನಂತರ ‘ಸ್ಲಂ ಬಾಲ’, ‘ರಾಜಧಾನಿ’, ‘ದ್ಯಾವ್ರೇ’, ‘ಚಂಬಲ್’ ಮುಂತಾದ ಚಿತ್ರಗಳಲ್ಲಿ ತಮ್ಮ ಅಭಿನಯದಿಂದ ಗುರುತಿಸಿಕೊಂಡವರು. ಆ ನಂತರ ‘ಗುಂಡ್ರು ಗೋವಿ’ ಮೂಲಕ ಹೀರೋ ಆಗಿಯೂ ಮಿಂಚಿದ್ದ ಅವರು, ಇತ್ತೀಚಿನ ವರ್ಷಗಳಲ್ಲಿ ತಮ್ಮದೇ ಸಾಯಿನಿರ್ಮಲ ಪ್ರೊಡಕ್ಷನ್ಸ್ ಸಂಸ್ಥೆಯಡಿ ‘ಪದ್ಮಾವತಿ’, ‘ಕನ್ನಡ ಕೋಗಿಲೆ’ ಮುಂತಾದ ಜನಪ್ರಿಯ ಕಾರ್ಯಕ್ರಮಗಳನ್ನು ನಿರ್ಮಿಸಿದರು, ಈಗ ದೊಡ್ಡ ಮಟ್ಟದಲ್ಲಿ ‘ವಿಡುದಲೈ’ ನಲ್ಲಿ ನಟಿಸಿದ್ದಾರೆ.

    ವೆಟ್ರಿಮಾರನ್ ನಿರ್ದೇಶನದ ‘ವಿಡುದಲೈ’ ಚಿತ್ರದಲ್ಲಿ ನಟಿಸುವುದಕ್ಕೆ ಮುಖ್ಯ ಕಾರಣ ನಿರ್ದೇಶಕ ಜೇಕಬ್ ವರ್ಗೀಸ್ ಎನ್ನುವ ಸತ್ಯ, ‘ನನ್ನ ಮತ್ತು ಜೇಕಬ್ ನಡುವೆ ಒಳ್ಳೆಯ ಬಾಂಧವ್ಯವಿದೆ. ಅವರ ‘ಚಂಬಲ್’ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ನಾನು ನಟಿಸಿದ್ದೆ. ಅವರು ಮತ್ತು ವೆಟ್ರಿಮಾರನ್ ಒಳ್ಳೆಯ ಸ್ನೇಹಿತರು. ಒಮ್ಮೆ ವೆಟ್ರಿಮಾರನ್ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ಅವರು ಒಂದು ನಿಮಿಷ ನನ್ನನ್ನು ಸೂಕ್ಷ್ಮವಾಗಿ ಗಮನಿಸಿದರು. ಅದಾಗಿ ಮೂರು ತಿಂಗಳಲ್ಲಿ ನಾನು ವಿಡುದಲೈ ಚಿತ್ರದ ಭಾಗವಾಗಿದ್ದೆ’ ಎಂದು ನೆನಪಿಸಿಕೊಳ್ಳುತ್ತಾರೆ ಸತ್ಯ.

    ತಮಿಳು ಚಿತ್ರವೊಂದರಲ್ಲಿ ನಟಿಸಬೇಕು ಎಂಬುದು ಸತ್ಯ ಅವರ ತಂದೆ-ತಾಯಿಯ ಆಸೆಯಾಗಿತ್ತಂತೆ. ‘ನಾನು ಮೂಲತಃ ಚಾಮರಾಜನಗರದವನು. ಕನ್ನಡದ ಜೊತೆಗೆ ತಮಿಳು ಸಹ ಬರುತ್ತದೆ. ಅಷ್ಟೇ ಅಲ್ಲ, ನನಗೆ ಐದು ಭಾಷೆಗಳು ಚೆನ್ನಾಗಿ ಮಾತನಾಡುವುದಕ್ಕೆ ಬರುತ್ತದೆ. ನಾನು ನಾಯಕನಾಗಿ ನಟಿಸಿದ ‘ಗುಂಡ್ರು ಗೋವಿ’ ಅಷ್ಟೇನೂ ಯಶಸ್ವಿಯಾಗಲಿಲ್ಲ. ಎರಡನೆಯ ಚಿತ್ರ ‘ಬೀರ’ ಬಿಡುಗಡೆಯಾಗಲೇ ಇಲ್ಲ. ಆ ಚಿತ್ರಕ್ಕಾಗಿ ಮೂರು ವರ್ಷ ಕಷ್ಟಪಟ್ಟಿದ್ದೆ. ಆದರೆ, ಚಿತ್ರ ಬಿಡುಗಡೆಯಾಗದಿದ್ದರಿಂದ ನನ್ನ ಶ್ರಮವೆಲ್ಲ ವ್ಯರ್ಥವಾಯಿತು. ಈ ಮಧ್ಯೆ, ನನಗೆ ಕನ್ನಡದಲ್ಲಿ ಸರಿಯಾಗಿ ಕೆಲಸ ಸಿಗುತ್ತಿರಲಿಲ್ಲ, ಸಿಕ್ಕರೂ ದುಡ್ಡು ಸಿಗುತ್ತಿರಲಿಲ್ಲ. ಆಗ ಹೆಂಡತಿ ನಿರ್ಮಲಾ ಆಸೆಯ ಮೇರೆಗೆ ಸಾಯಿ ನಿರ್ಮಲಾ ಪ್ರೊಡಕ್ಷನ್ಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದೆ. ಅಲ್ಲಿ  ಸಾಕಷ್ಟು ಯಶಸ್ಸನ್ನೂ ಕಂಡೆ. ಎರಡ್ಮೂರು ವರ್ಷಗಳ ಕಾಲ ಹಗಲು-ರಾತ್ರಿ ಎನ್ನದೆ ಕೆಲಸ ಮಾಡಿದ್ದೇವೆ. ಇದುವರೆಗೂ 1500 ದಿನಕ್ಕೂ ಹೆಚ್ಚು ಚಿತ್ರೀಕರಣ ಮಾಡಿರುವ ಸಂಸ್ಥೆ ನಮ್ಮದು. ನಮ್ಮ ಸಂಸ್ಥೆಯಲ್ಲಿ ನೂರಾರು ಜನ ಕೆಲಸ ಮಾಡಿದ್ದಾರೆ. ಸಾವಿರಾರು ಜನ ಊಟ ಮಾಡಿದ್ದಾರೆ. ಇದೆಲ್ಲವೂ ಖುಷಿ ಇದ್ದರೂ, ನಟನಾಗಿ ಏನಾದರೂ ಸಾಧಿಸಬೇಕು ಎಂಬ ಆಸೆ ಮಾತ್ರ ಹಾಗೆಯೇ ಹಸಿ ಹಸಿ ಯಾಗಿತ್ತು. ನನ್ನ ಪ್ರತಿಭೆ ವ್ಯರ್ಥವಾಗುತ್ತಿರುವುದನ್ನು ನೋಡಿ, ಇಲ್ಲಿ ಸಾಧ್ಯವಾಗದಿದ್ದರೆ ತಮಿಳಿಗೆ ಹೋಗು ಎಂದು ಸಲಹೆ ನೀಡಿದ್ದೇ ನನ್ನ ತಾಯಿ.  ಅಲ್ಲಿಯವರೆಗೂ ಕನ್ನಡದಲ್ಲೇ ನಟಿಸುತ್ತಿದ್ದೆ. ಆ ನಂತರ ತಮಿಳಿನಲ್ಲಿ ಅವಕಾಶ ಸಿಗುತ್ತದಾ ಎಂದು ಪ್ರಯತ್ನ ಮಾಡಿದೆ. ಆಗ ವೆಟ್ರಿಮಾರನ್ ಪರಿಚಯವಾಯಿತು. ಈಗ ನನ್ನ ಮೊದಲ ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ಆದರೆ, ಅದನ್ನು ನೋಡಲು ನನ್ನ ತಂದೆ-ತಾಯಿ ಇಬ್ಬರೂ ಇಲ್ಲ. Viduthalai ಚಿತ್ರೀಕರಣದ ಸಂದರ್ಭದಲ್ಲಿ  20 ದಿನಗಳ ಅಂತರದಲ್ಲಿ ಇಬ್ಬರೂ ನಿಧನರಾದರು. ಅವರ ಆಸೆಯೇನೋ ಈಡೇರಿಸಿದೆ. ಆದರೆ, ಅದನ್ನು ನೋಡಲು ಅವರೇ ಇಲ್ಲವಲ್ಲ ಎಂಬ ಬೇಸರವಿದೆ. ತನ್ನ ತಂದೆ ತಾಯಿ ಇಬ್ಬರನ್ನೂ ವೆಟ್ರಿಮಾರನ್ರವರಲ್ಲಿ ಕಾಣುತ್ತೇನೆ’ ಎನ್ನುತ್ತಾರೆ ಸತ್ಯ.

    ‘ವಿಡುದಲೆ ಚಿತ್ರಕ್ಕೆ ಸತ್ಯ ಆಯ್ಕೆಯಾದಾಗ, ಅದೊಂದು ಪೂರ್ಣಪ್ರಮಾಣವಾದ ಪಾತ್ರವಿರಬಹುದು ಎಂದು ಯೋಚಿಸಿರಲಿಲ್ಲವಂತೆ. ನಾನು ಆ ಚಿತ್ರಕ್ಕೆ ಆಯ್ಕೆಯಾದಾಗ, ಚಿಕ್ಕ ಪಾತ್ರವಿರಬಹುದು, ಮೂರ್ನಾಲ್ಕು ದಿನಗಳ ಕಾಲ ಕೆಲಸವಿರಬಹುದು ಅಂತಂದುಕೊಂಡಿದ್ದೆ. ಆದರೆ, ಆ ಚಿತ್ರದಲ್ಲಿ ನಾನು ಸುಮಾರು 120 ದಿನಗಳ ಕಾಲ ಕೆಲಸ ಮಾಡಿದ್ದೇನೆ. ನಾನು ನನ್ನ ಹಳೆಯ ನೆನಪುಗಳನ್ನೆಲ್ಲ ಬಿಟ್ಟು ಹೋಗಿದ್ದೆ. ವೆಟ್ರಿಮಾರನ್ ಏನು ಹೇಳಿದರೋ, ಅದನ್ನಷ್ಟೇ ಮಾಡಿದ್ದೇನೆ. ಅವರಿಂದ ತುಂಬಾ ಕಲಿತಿದ್ದೇನೆ. ಇಡೀ ಚಿತ್ರದಲ್ಲಿ ನನ್ನ ಪಾತ್ರವಿದೆ. ವಿಜಯ್ ಸೇತುಪತಿ, ಸೂರಿ, ಗೌತಮ್ ಮೆನನ್, ರಾಜೀವ್ ಮೆನನ್ ಮುಂತಾದ ಪ್ರತಿಭಾವಂತ ಕಲಾವಿದರ ಜತೆಗೆ ನಟಿಸುವ ಅವಕಾಶ ಸಿಕ್ಕಿದೆ. ನನ್ನ ಕೆಲಸ ಇನ್ನೂ ಪೂರ್ತಿ ಮುಗಿದಿಲ್ಲ. ಎರಡನೆಯ ಭಾಗದಲ್ಲೂ ನನ್ನ ಪಾತ್ರ ಸಾಕಷ್ಟಿದೆ. ಈಗಾಗಲೇ ಎರಡನೆಯ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಇನ್ನೂ 50 ದಿನಗಳಷ್ಟು ಚಿತ್ರೀಕರಣ ಬಾಕಿ ಇದೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ ಎನ್ನುತ್ತಾರೆ ಸತ್ಯ.

    ‘ವಿಡುದಲೈ’ಚಿತ್ರದಿಂದ ಕಷ್ಟಗಳ ಬಿಡುಗಡೆ ಆಯ್ತು ಎನ್ನುವ ಸತ್ಯ, ‘ನಾನು ಕಳೆದುಕೊಂಡಿದ್ದನ್ನೆಲ್ಲ ‘ವಿಡುದಲೈ’ ವಾಪಸ್ಸು ತಂದುಕೊಟ್ಟಿದೆ. ಇದಕ್ಕೂ ಮುನ್ನ ನಾನು ಕರ್ನಾಟಕಕ್ಕೆ ಮಾತ್ರ ಗೊತ್ತಿತ್ತು. ಈಗ ಆ ಚಿತ್ರದಲ್ಲಿ ತಮಿಳು ನಾಡು, ಆಂಧ್ರ ಮುಂತಾದ ಕಡೆಗಳಲ್ಲೂ ಪರಿಚಿತನಗಿದ್ದೇನೆ. ವೆಟ್ರಿಮಾರನ್ ಒಬ್ಬ ಸೂಕ್ಷ್ಮ ಸಂವೇದನೆಯ ನಿರ್ದೇಶಕ. ಅವರಿಗೆ ಜಾತಿ, ಬಣ್ಣ, ಭಾಷೆಯ ಬೇಧ-ಭಾವವಿಲ್ಲ. ಅವರು ಮನುಷ್ಯನನ್ನು ಮನುಷ್ಯನನ್ನಾಗಿಯೇ ನೋಡುತ್ತಾರೆ. ಚಿತ್ರ ಜನರಿಗೆ ಇಷ್ಟವಾಗಿದೆಯೆಂದರೆ, ಅದಕ್ಕೆ ಕಾರಣ ಪ್ರಸ್ತುತತೆ. ಇದು ಯಾವುದೋ ಒಂದು ಪ್ರದೇಶದ ಸಮಸ್ಯೆಯಲ್ಲ. ಪ್ರತಿ ರಾಜ್ಯದಲ್ಲೂ ನಡೆದ ಮತ್ತು ನಡೆಯಬಹುದಾದ ಘಟನೆಯಾಗಿದೆ. ಹಾಗಾಗಿ, ಅದನ್ನು ಎಲ್ಲರೂ ತಮಗೆ ಹೋಲಿಸಿಕೊಂಡು ನೋಡುತ್ತಿದ್ದಾರೆ. ಇವತ್ತು ಮಾನವಕುಲಕ್ಕೆ ದೊಡ್ಡ ಅಪಾಯವಿರುವುದು ಪ್ರಕೃತಿಯಿಂದಲ್ಲ. ಇವತ್ತು ಮನುಷ್ಯನಿಗೆ ದೊಡ್ಡ ಶತ್ರುವೆಂದರೆ ಅದು ಮನುಷ್ಯನೇ. ಮನುಷ್ಯನ ದುರ್ಗುಣದಿಂದ ಇನ್ನೊಬ್ಬ ಬಲಿಯಾಗುತ್ತಿದ್ದಾನೆ. ಅವನ ತಾರತಮ್ಯದಿಂದಾಗಿ ಹಲವರಿಗೆ ಸಮಸ್ಯೆ ಆಗುತ್ತಿದೆ. ಈ ನಿಟ್ಟಿನಲ್ಲಿ ಇದೊಂದು ಶ್ರೇಷ್ಠವಾದ ಚಿತ್ರ. ಎಲ್ಲ ಕಡೆ ಮೆಚ್ಚುಗೆ ಸಿಗುತ್ತಿದೆ. ಚಿತ್ರ ನೋಡಿದ ಅನ್ಯಭಾಷಿಕರು ಸಹ ಗುರುತು ಹಿಡಿದು ಮಾತನಾಡಿಸುತ್ತಿದ್ದಾರೆ’ ಎನ್ನುತ್ತಾರೆ ಸತ್ಯ.  ‘ವಿಡುದಲೈ’ ನಂತರ  ಸತ್ಯ ಮೂರು ಸ್ಕ್ರಿಪ್ಟ್ ಕೇಳಿದ್ದಾರಂತೆ. ಒಂದು ಚಿತ್ರವನ್ನೂ ಸದ್ದಿಲ್ಲದೆ ಮುಗಿಸಿದ್ದಾರಂತೆ. ‘ನನ್ನ ಮೊದಲ ಪ್ರಾಶಸ್ತ್ಯ ಯಾವತ್ತೂ ಕನ್ನಡಕ್ಕೇ. ಏಕೆಂದರೆ, ನನ್ನನ್ನು ಮೊದಲು ರೂಪಿಸಿದ್ದು ಕನ್ನಡಿಗರು. ನನ್ನನ್ನು ಇವತ್ತು ಬೇರೆ ಭಾಷೆಯವರು ಗುರುತಿಸುತ್ತಾರೆ ಎಂದರೆ, ಅದಕ್ಕೆ ಕಾರಣ ಕನ್ನಡ ಮತ್ತು ಕರ್ನಾಟಕ. ಈ ಭಾಷೆಗೆ ಮತ್ತು ಮಣ್ಣಿಗೆ ನಾನು ಯಾವತ್ತೂ ಚಿರಋಣಿ. ಈಗಾಗಲೇ ಕನ್ನಡದಿಂದ ಹಲವು ಅವಕಾಶಗಳು ಬರುತ್ತಿವೆ. ಇಲ್ಲಿಂದ ಸಾಯುವವರೆಗೂ ನನಗೆ ಕೆಲಸ ಸಿಗುತ್ತದೆ ಎಂಬ ನಂಬಿಕೆ ನನಗಿದೆ’ ಎಂದು ಖುಷಿಯಿಂದ ಹೇಳಿಕೊಳ್ಳುತ್ತಾರೆ ಸತ್ಯ.

  • ತಮಿಳಿನ ಖ್ಯಾತ ನಟ ಧನುಷ್ ಜೊತೆ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ತಮಿಳಿನ ಖ್ಯಾತ ನಟ ಧನುಷ್ ಜೊತೆ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ತ್ತರಕಾಂಡ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಳ್ಳುವ ಮೂಲಕ ಮೊನ್ನೆಯಷ್ಟೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದ ಸ್ಯಾಂಡಲ್ ವುಡ್ ಕ್ವೀನ್, ಇದೀಗ ಮತ್ತೊಂದು ಅಚ್ಚರಿ ಸುದ್ದಿ ನೀಡಿದ್ದಾರೆ. ಧನುಷ್ (Dhanush) ಜೊತೆಗಿನ ಫೋಟೋ ಹಂಚಿಕೊಳ್ಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ರಮ್ಯಾ (Ramya) ಹಂಚಿಕೊಂಡಿರುವ ಫೋಟೋಗೂ ಧನುಷ್ ಕೂಡ ಪ್ರತಿಕ್ರಿಯೆ ನೀಡಿರುವುದು ಮತ್ತೊಂದು ವಿಶೇಷ.

    ಹದಿನೈದು ವರ್ಷಗಳ ಹಿಂದೆ ಧನುಷ್ ಜೊತೆ ಪೊಲ್ಲಾಧವನ್ ಸಿನಿಮಾ ಮಾಡಿದ್ದಾರೆ ರಮ್ಯಾ. ಈ ಸಿನಿಮಾಗೆ 15 ವರ್ಷಗಳ ಆದ ಹಿನ್ನೆಲೆಯಲ್ಲಿ ಮತ್ತೆ ಸಿನಿಮಾ ಟೀಮ್ ಸೇರಿದೆ. ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಆ ಫೋಟೋಗಳನ್ನು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಆ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೇ, ಆ ದಿನಗಳಲ್ಲಿ ರಮ್ಯಾ ಹೇಗಿದ್ದರು ಎನ್ನುವ ಕುರಿತಾಗಿಯೂ ಹಲವು ಸಂಗತಿಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:`ಮಿಸ್ ಯೂ ಸಾನ್ಯ’ ಎಂದು ಬಿಕ್ಕಿ ಬಿಕ್ಕಿ ಅತ್ತ ರೂಪೇಶ್ ಶೆಟ್ಟಿ

    ಪೊಲ್ಲಾಧವನ್ (Polladhavan ನೆನಪಿನಲ್ಲಿ ನಾನು ಹಲವು ವರ್ಷಗಳ ಗೆಳೆಯನನ್ನು ಭೇಟಿಯಾದೆ. ಅಲ್ಲದೇ, ನಾನು ಮೆಚ್ಚುವ ಪ್ರತಿಭಾವಂತ ನಿರ್ದೇಶಕರನ್ನೂ ಭೇಟಿಯಾಗಿದ್ದು ಖುಷಿ ತಂದಿತು. ಈ ಟೀಮ್ ನಿಂದ ನಾನು ಸಾಕಷ್ಟು ಕಲಿತಿದ್ದೇನೆ. ಈ ಸಿನಿಮಾ ನನಗೆ ತುಂಬಾ ಒಳ್ಳೊಳ್ಳೆ ವಿಷಯಗಳನ್ನು ಕಲಿಸಿದೆ. ಮತ್ತೊಂದು ವಿಷಯ ಹೇಳುವುದೆಂದರೆ, ನಾನು ಪೊಲ್ಲಾಧವನ್ 2 ಚಿತ್ರಕ್ಕಾಗಿ ಕಾಯುತ್ತಿದ್ದೇನೆ ಎಂದು ರಮ್ಯಾ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪೊನ್ನಿಯಿನ್ ಸೆಲ್ವನ್ ‘ ಸಿನಿಮಾ ಎಫೆಕ್ಟ್: ‘ಚೋಳ ರಾಜರು ಹಿಂದೂಗಳಲ್ಲ’ ಕಮಲ್ ವಿವಾದಾತ್ಮಕ ಹೇಳಿಕೆ

    ‘ಪೊನ್ನಿಯಿನ್ ಸೆಲ್ವನ್ ‘ ಸಿನಿಮಾ ಎಫೆಕ್ಟ್: ‘ಚೋಳ ರಾಜರು ಹಿಂದೂಗಳಲ್ಲ’ ಕಮಲ್ ವಿವಾದಾತ್ಮಕ ಹೇಳಿಕೆ

    ಭಾರತೀಯ ಸಿನಿಮಾ ರಂಗದ ಖ್ಯಾತ ನಟ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಸಿನಿಮಾವನ್ನು ಸಿನಿ ಪ್ರೇಕ್ಷಕರು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸಿನಲ್ಲಿ ದಾಖಲೆ ರೀತಿಯಲ್ಲಿ ಈ ಚಿತ್ರ ಕಲೆಕ್ಷನ್ ಮಾಡುತ್ತಿದೆ. ಈವರೆಗೂ 250 ಕೋಟಿಗೂ ಅಧಿಕ ಹಣವನ್ನು ಈ ಚಿತ್ರ ಗಳಿಸಿದೆ. ದೇಶಕ್ಕೆ ದೇಶವೇ ಈ ಸಿನಿಮಾವನ್ನು ಕೊಂಡಾಡುತ್ತಿರುವ ಹೊತ್ತಿನಲ್ಲಿ ತಮಿಳಿನ ಖ್ಯಾತ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಿನ್ನೆಯಷ್ಟೇ ಈ ಸಿನಿಮಾವನ್ನು ಕಮಲ್ ಹಾಸನ್ (Kamal Haasan) ವೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಮಲ್ ಹಾಸನ್, ಚಿತ್ರದ ಬಗ್ಗೆ ಸಾಕಷ್ಟು ಸಕಾರಾತ್ಮಕ ಮಾತುಗಳನ್ನು ಹೇಳಿದ್ದಾರೆ. ಕಥೆ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎನ್ನುವುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ಹೇಳಿದ್ದಾರೆ. ಆಂಧ್ರದಲ್ಲಿ ಈ ಚಿತ್ರಕ್ಕೆ ಬೆಂಬಲ ಸಿಗುತ್ತಿಲ್ಲ ಎನ್ನುವ ಹೇಳಿಕೆಯನ್ನು ಅಲ್ಲಗಳೆದಿರುವ ಅವರು, ಯಾರೋ ಹೇಳುತ್ತಾರೆ ಅಂತ ನಂಬೋದು ಬೇಡ. ತೆಲುಗಿನಲ್ಲೂ ಈ ಚಿತ್ರಕ್ಕೆ ಬೆಂಬಲ ವ್ಯಕ್ತವಾಗಿದೆ ಅಂದಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಪೈಲ್ವಾನ್‌ಗಳು: ಎನು ಇದು ಹೊಸ ಟ್ವಿಸ್ಟ್

    ಪೊನ್ನಿಯಿನ್ ಸೆಲ್ವನ್ ಸಿನಿಮಾದ ಕಥಾ ಹಂದರದ ಬಗ್ಗೆ ಮಾತನಾಡಿರುವ ಕಮಲ್, ಚೋಳ ರಾಜರು ಹಿಂದೂಗಳಲ್ಲ (Hindu) ಎಂದು ಹೇಳಿದ್ದು, ಈ ಮಾತೇ ವಿವಾದಕ್ಕೆ ಕಾರಣವಾಗಿದೆ. ಚೋಳ ರಾಜರು ಯಾಕೆ ಹಿಂದೂಗಳಲ್ಲ ಅನ್ನುವುದನ್ನೂ ವಿವರಿಸಿರುವ ಅವರು, ‘ಚೋಳನ ಕಾಲದಲ್ಲಿ ಹಿಂದೂ ಧರ್ಮವೇ ಇರಲಿಲ್ಲ. ರಾಜರಾಜ ಚೋಳನು ಆಳುತ್ತಿದ್ದ ವೇಳೆ ಶೈವ ಮತ್ತು ವೈಷ್ಣವ ಧರ್ಮ ಮಾತ್ರವಿತ್ತು. ಬ್ರಿಟಿಷರು ನಮ್ಮ ದೇಶಕ್ಕೆ ಬಂದಾಗ ನಮ್ಮನ್ನ ಹೇಗೆ ಕರೆಯಬೇಕು ಎಂದು ಅವರಿಗೆ ಗೊತ್ತಾಗಲಿಲ್ಲ. ಆನಂತರ ಅವರು ಹಿಂದೂ ಅಂತ ಕರೆದರು ಎಂದಿದ್ದಾರೆ.

    ಕಮಲ್ ಹಾಸನ್ ಮಾತಿಗೂ ಮೊದಲು ತಮಿಳಿನ ಮತ್ತೋರ್ವ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಕೂಡ ‘ರಾಜರಾಜ ಚೋಳನು ಹಿಂದೂ ಆಗಿರಲಿಲ್ಲ’ ಎಂಬ ಹೇಳಿಕೆ ನೀಡಿದ್ದರು. ಇದು ಕೂಡ ವಿವಾದಕ್ಕೆ ಕಾರಣವಾಗಿತ್ತು. ಪೊನ್ನಿಯಿನ್ ಸೆಲ್ವನ್ ಸಿನಿಮಾ ನೋಡಿದ ನಂತರ ಮಾತನಾಡಿದ್ದ ವೆಟ್ರಿಮಾರನ್ ‘ನಿರಂತರವಾಗಿ ನಮ್ಮಅಸ್ಮಿತೆಯನ್ನು ಕಸಿದುಕೊಳ್ಳಲಾಗುತ್ತಿದೆ. ವಳ್ಳುವರ್ ಅವರನ್ನು ಕೇಸರಿಕರಣ ಮಾಡುವುದು ಹಾಗೂ ರಾಜ ರಾಜ ಚೋಳನನ್ನು ಹಿಂದೂ ಎಂದು ಕರೆಯುವುದು ನಡೆದೇ ಇದೆ’ ಎಂದು ತಿವಿದಿದ್ದರು. ಅವರ ಮಾತು ಪರ ವಿರೋಧದ ಚರ್ಚೆಗೆ ಕಾರಣವಾಗಿತ್ತು.

    ವೆಟ್ರಿಮಾರನ್ (Vetrimaran) ಆಡಿದ ಮಾತಿಗೆ ಬಿಜೆಪಿಯ ಮುಖಂಡ ಎಚ್.ರಾಜಾ (H.Raj)  ಅವರು ಪ್ರತಿಕ್ರಿಯೆ ನೀಡಿ, ‘ನಿರ್ದೇಶಕ ವೆಟ್ರಿಮಾರನ್ ಅವರಿಗೆ ಇತಿಹಾಸ ಚೆನ್ನಾಗಿ ತಿಳಿದಿಲ್ಲ. ಅವರು ಇತಿಹಾಸವನ್ನು ಸರಿಯಾಗಿಯೂ ಓದಿಕೊಂಡಿಲ್ಲ. ರಾಜ ರಾಜ ಚೋಳನು ನಿರ್ಮಿಸಿದ ಎರಡು ಮಸೀದಿ ಅಥವಾ ಚರ್ಚ್ ತೋರಿಸಲಿ’ ಎಂದು ಸವಾಲು ಹಾಕಿದ್ದಾರೆ. ಈ ಮಾತಿಗೆ ಪೂರಕ ಎನ್ನುವಂತೆ ಕಮಲ್ ಹಾಸನ್ ಮಾತನಾಡಿದ್ದಾರೆ. ವೆಟ್ರಿಮಾರನ್ ಮಾತಿಗೆ ಬೆಂಬಲ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ವಿಡುದಲೈ’ ಸಿನಿಮಾದ ಭರ್ಜರಿ ಆ್ಯಕ್ಷನ್ ದೃಶ್ಯಗಳ ಶೂಟಿಂಗ್ ನಲ್ಲಿ ವಿಜಯ್ ಸೇತುಪತಿ

    ‘ವಿಡುದಲೈ’ ಸಿನಿಮಾದ ಭರ್ಜರಿ ಆ್ಯಕ್ಷನ್ ದೃಶ್ಯಗಳ ಶೂಟಿಂಗ್ ನಲ್ಲಿ ವಿಜಯ್ ಸೇತುಪತಿ

    ಕಾಲಿವುಡ್ (Kollywood) ನ ಜನಪ್ರಿಯ ನಿರ್ದೇಶಕ ವೆಟ್ರಿಮಾರನ್ (Vetrimaran) ನಿರ್ದೇಶನದ ‘ವಿಡುದಲೈ’ (Vidudalai) ಚಿತ್ರವು ಎರಡು ಭಾಗಗಳಲ್ಲಿ ನಿರ್ಮಾಣವಾಗಲಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದಷ್ಟೇ ಹೊರಬಿದ್ದಿತ್ತು. ಈಗ ಈ ಚಿತ್ರಕ್ಕಾಗಿ ಕೊಡೈಕೆನಾಲ್ನಲ್ಲಿ ವಿಜಯ್ ಸೇತುಪತಿ (Vijay Sethupathi), ಸೂರಿ ಮತ್ತು ನೂರಾರು ಫೈಟರ್ಗಳ ಅಭಿನಯದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಆರ್‌ಎಸ್ ಇನ್ಫೋಟೈನ್‌ಮೆಂಟ್ನಡಿ ಎಲ್ಡ್ರೆಡ್ ಕುಮಾರ್ ಅವರು ‘ವಿಡುದಲೈ’ ಚಿತ್ರವನ್ನು ನಿರ್ಮಿಸುತ್ತಿದ್ದು, ರೆಡ್ ಜೈಂಟ್ ಮೂವೀಸ್ನ  ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.

    ಅದ್ಧೂರಿ ನಿರ್ಮಾಣಕ್ಕಾಗಿ ಸಾಕಷ್ಟು ಸುದ್ದಿಯಾಗಿರುವ ಈ ಚಿತ್ರಕ್ಕಾಗಿ ಇತ್ತೀಚೆಗೆ ಪೀಟರ್ ಹೇಯ್ನ್ ಅವರ ನೇತೃತ್ವದಲ್ಲಿ ಮೈನವಿರೇಳಿಸುವಂತಹ ಸಾಹಸ ಸನ್ನಿವೇಶಗಳನ್ನು ಚಿತ್ರೀಕರಿಸಲಾಗಿದೆ. ಈ ಸಾಹಸ ದೃಶ್ಯಗಳಿಗಾಗಿಯೇ ಬಲ್ಗೇರಿಯಾದಿಂದ ಫೈಟರ್ಗಳನ್ನು ಕರೆಸಲಾಗಿರುವುದು ವಿಶೇಷ. ಕೊಡೈಕೆನಾಲ್‌ನ ಪೂಂಬರೈನ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ಈ ಸನ್ನಿವೇಶಗಳು ಚಿತ್ರದ ಹೈಲೈಟ್ ಆಗಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಹೆರಿಗೆಯ ನಂತರ ಬದಲಾಯ್ತು ಪ್ರಣಿತಾ ಸುಭಾಷ್ ಲುಕ್

    ‘ವಿಡುದಲೈ’ ಚಿತ್ರವು ಈಗಾಗಲೇ ತನ್ನ ಅದ್ಭುತ ತಾರಾಗಣ, ತಾಂತ್ರಿಕ ವರ್ಗ, ಮೇಕಿಂಗ್ ಮತ್ತು ಫಸ್ಟ್ಲುಕ್ ಪೋಸ್ಟರ್ಗಳಿಂದ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಆಡಿಯೋ, ಟ್ರೈಲರ್ ಮತ್ತು ಚಿತ್ರ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸಲಾಗುತ್ತದೆ.

    ‘ವಿಡುದಲೈ’ ಚಿತ್ರದ ತಾರಾಬಳಗದಲ್ಲಿ ವಿಜಯ್ ಸೇತುಪತಿ, ಸೂರಿ (Suri), ಭವಾನಿ ಶ್ರೀ, ಪ್ರಕಾಶ್ ರಾಜ್, ಗೌತಮ್ ವಾಸುದೇವ್ ಮೆನನ್, ರಾಜೀವ್ ಮೆನನ್, ಚೇತನ್ ಮತ್ತು ಅನೇಕ ಪ್ರಮುಖ ನಟರು ನಟಿಸಿದ್ದು,  ಇಸೈಜ್ಞಾನಿ ಇಳಯರಾಜ (Ilayaraja) ಸಂಗೀತ ಸಂಯೋಜಿಸುತ್ತಿದ್ದಾರೆ. ವೇಲ್ರಾಜ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವೆಟ್ರಿಮಾರನ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ಸೇತುಪತಿ ಅಭಿಮಾನಿಗಳಿಗೆ ಡಬಲ್ ಧಮಾಕಾ: ‘ವಿಡುದಲೈ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್

    ವಿಜಯ್ ಸೇತುಪತಿ ಅಭಿಮಾನಿಗಳಿಗೆ ಡಬಲ್ ಧಮಾಕಾ: ‘ವಿಡುದಲೈ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್

    ವಿಜಯ್​ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುದಲೈ’ ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರವನ್ನು ರೆಡ್​ ಜಯಂಟ್​ ಮೂವಿಸ್​ನಡಿ ಉದಯನಿಧಿ ಸ್ಟಾಲಿನ್​ ಅರ್ಪಿಸಿದರೆ, ಆರ್​.ಎಸ್​. ಇನ್ಫೋಟೈನ್​ಮೆಂಟ್​ನಡಿ ಎಲ್ರೆಡ್​ ಕುಮಾರ್​ ನಿರ್ಮಿಸುತ್ತಿದ್ದಾರೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕರಲ್ಲಿ ವೆಟ್ರಿಮಾರನ್​ ಪ್ರಮುಖರು. ಕೆಲವು ತಿಂಗಳುಗಳ ಹಿಂದೆ ಅವರು ‘ವಿಡುದಲೈ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿರುವುದಾಗಿ ಘೋಷಿಸಿದಾಗಲೇ, ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಕ್ರಮೇಣ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ನರು ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ, ಈ ಚಿತ್ರದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ.

    ಸದ್ಯ, ‘ವಿಡುದಲೈ’ ಚಿತ್ರದ ಭಾಗ ಒಂದರ ಚಿತ್ರೀಕರಣ ಸಂಪೂರ್ಣವಾಗಿದ್ದು, ಪೋಸ್ಟ್​ಪ್ರೊಡಕ್ಷನ್​ ಕೆಲಸಗಳು ಪ್ರಗತಿಯಲ್ಲಿವೆ. ಎರಡನೆಯ ಭಾಗದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು ಸಿರುಮಲೈ, ಕೊಡೈಕೆನಾಲ್​ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಈ ಎರಡು ಚಿತ್ರಗಳು ದೊಡ್ಡ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿದ್ದು, ತಮಿಳಿನ ಕಾಸ್ಟ್ಲಿ ಚಿತ್ರಗಳ ಪೈಕಿ ‘ವಿಡುದಲೈ’ ಸಹ ಸೇರ್ಪಡೆಯಾಗಲಿದೆ. ಈ ಚಿತ್ರವನ್ನು ಕೋಟ್ಯಂತರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಿಸಲಾಗಿದ್ದು, ಚಿತ್ರಕ್ಕಾಗಿ ವಿಶೇಷವಾಗಿ 10 ಕೋಟಿ ರೂ. ವೆಚ್ಚದ ರೈಲು ಮತ್ತು ರೈಲ್ವೇ ಸೇತುವೆಯ ಸೆಟ್​ ನಿರ್ಮಾಣ ಮಾಡಲಾಗಿದೆ. ನಿಜವಾದ ರೈಲ್ವೆ ಬೋಗಿಗಳು ಮತ್ತು ಸೇತುವೆಯನ್ನು ನಿರ್ಮಿಸುವುದಕ್ಕೆ ಬಳಸಲಾಗುವ ಪರಿಕರಗಳನ್ನೇ ಈ ಸೆಟ್​ ನಿರ್ಮಾಣಕ್ಕೂ ಬಳಸಲಾಗಿರುವುದು ವಿಶೇಷ. ಇದಲ್ಲದೆ, ಸಿರುಮಲೈ ಬಳಿ ಜಾಕಿ ಅವರ ಕಲಾ ನಿರ್ದೇಶನದಲ್ಲಿ ಒಂದು ಹಳ್ಳಿಯನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಮತ್ತೆ ಶುರುವಾಯ್ತು ಬಾಲಿವುಡ್ ಬಾಯ್‌ಕಾಟ್ ಟ್ರೆಂಡ್: `ಬ್ರಹ್ಮಾಸ್ತ್ರʼ ಚಿತ್ರಕ್ಕೆ ವಿರೋಧ

    ಸದ್ಯ ಕೊಡೈಕೆನಾಲ್​ನಲ್ಲಿ ಪೀಟರ್​ ಹೇನ್ಸ್​ ನಿರ್ದೇಶನದಲ್ಲಿ ಸಾಹಸಮಯ ದೃಶ್ಯಗಳನ್ನು ಚಿತ್ರೀಕರಿಸುವುದಕ್ಕೆ ತಯಾರಿ ನಡೆಸಲಾಗಿದ್ದು, ಇದಕ್ಕಾಗಿ ಬಲ್ಗೇರಿಯಾದಿಂದ ಸಾಹಸ ಕಲಾವಿದರನ್ನು ಕರೆಸಲಾಗಿದೆ. ಈ ಆಕ್ಷನ್​ ದೃಶ್ಯಗಳಲ್ಲಿ ಬಲ್ಗೇರಿಯಾದ ಸಾಹಸ ಕಲಾವಿದರು ಸಹ ಭಾಗವಹಿಸುತ್ತಿರುವುದು ವಿಶೇಷ. ವಿಡುದಲೈ’ ಚಿತ್ರದಲ್ಲಿ ವಿಜಯ್​ ಸೇತುಪತಿ, ಸೂರಿ, ಭವಾನಿ ಶ್ರೀ, ಪ್ರಕಾಶ್​ ರಾಜ್​, ಗೌತಮ್​ ವಾಸುದೇವ ಮೆನನ್, ರಾಜೀವ್​ ಮೆನನ್​ ಮುಂತಾದವರು ನಟಿಸುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ‘ಇಸೈಜ್ನಾನಿ’ ಇಳಯರಾಜ ಈ ಚಿತ್ರದ ಸಂಗೀತದ ಜವಾಬ್ದಾರಿ ಹೊತ್ತಿದ್ದು, ವೇಲ್​ರಾಜ್​ ಛಾಯಾಗ್ರಹಣ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಾಲಾ ಪಠ್ಯದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸಲು ತಮಿಳು ನಾಡು ಸರಕಾರಕ್ಕೆ ಮನವಿ ಮಾಡಿದ ನಿರ್ದೇಶಕ ವೆಟ್ರಿಮಾರನ್

    ಶಾಲಾ ಪಠ್ಯದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸಲು ತಮಿಳು ನಾಡು ಸರಕಾರಕ್ಕೆ ಮನವಿ ಮಾಡಿದ ನಿರ್ದೇಶಕ ವೆಟ್ರಿಮಾರನ್

    ಶಾಲಾ ಮಕ್ಕಳು ಲೈಂಗಿಕ ಶಿಕ್ಷಣವನ್ನು ಕಲಿಯುವುದರ ಅವಶ್ಯಕತೆ ಇದೆ. ಶಾಲಾ ಪಠ್ಯಕ್ರಮದ ಭಾಗವಾಗಿ ಲೈಂಗಿಕ ಶಿಕ್ಷಣವನ್ನು ಸೇರ್ಪಡೆ ಮಾಡುವುದರ ಬಗ್ಗೆ ಕೇರಳ ಹೈಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿರುವ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್, ಇದನ್ನು ತಮಿಳುನಾಡಿನಲ್ಲೂ ಜಾರಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿಶ್ವ ಲೈಂಗಿಕ ಆರೋಗ್ಯ ದಿನ ಸಂದರ್ಭದಲ್ಲಿ ಮಾತನಾಡಿದ ಅವರು ಸಲಿಂಗ ವಿವಾಹವನ್ನೂ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

    ಬಾಂಗ್ಲಾದೇಶದ ಮಹಿಳೆ ಮತ್ತು ತಮಿಳುನಾಡಿನ ಮಹಿಳೆಯ ನಡುವೆ ನಡೆದ ಮದುವೆಯನ್ನು ಉದಾಹರಣೆಯಾಗಿ ತಗೆದುಕೊಂಡ ಅವರು ಇಂತಹ ಮದುವೆಯನ್ನು ನಾಗರೀಕ ಸಮಾಜ ಪ್ರೋತ್ಸಾಹಿಸಬೇಕು ಎಂದು ಅವರು ಮನವಿ ಮಾಡಿದರು. ಅಲ್ಲದೇ, ತಮಿಳುನಾಡಿನ ಸುಭಿಕ್ಷಾ ಸುಬ್ರಮಣಿ ಹಾಗೂ ಟೀನಾ ದಾಸ್ ಸಲಿಂಗಿಗಳು ತಮಿಳು ಸಾಂಪ್ರದಾಯಿಕ ಶೈಲಿಯಲ್ಲಿ ಮದುವೆಯಾಗಿದ್ದನ್ನೂ ಅವರು ನೆನಪಿಸಿಕೊಂಡರು. ಇದನ್ನೂ ಓದಿ: ಮತ್ತೆ ಶುರುವಾಯ್ತು ಬಾಲಿವುಡ್ ಬಾಯ್‌ಕಾಟ್ ಟ್ರೆಂಡ್: `ಬ್ರಹ್ಮಾಸ್ತ್ರʼ ಚಿತ್ರಕ್ಕೆ ವಿರೋಧ

    ಪ್ರತಿಯೊಬ್ಬರೂ ತಮ್ಮ ತಮ್ಮ ಹಕ್ಕುಗಳನ್ನು ಪಡೆದುಕೊಂಡು ಬದುಕಬೇಕು. ತೃತಿಯ ಲಿಂಗಿಗಳಿಗೆ ತಮ್ಮದೇ ಆದ ಬದುಕಿನ ಹಕ್ಕು ನೀಡುವಂತೆ ಕರೆಕೊಟ್ಟ ವೆಟ್ರಿಮಾರನ್, ಲೈಂಗಿಕ ಶಿಕ್ಷಣದ ಬಗ್ಗೆ ಒತ್ತು ನೀಡುವಂತೆ ಅವರು ಕೇಳಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]