Tag: vhp

  • ದತ್ತಪೀಠದ ಗೋರಿಗಳು ನಕಲಿ – ಹಿಂದೂಪರ ಸಂಘಟನೆಗಳ ಆರೋಪ

    ದತ್ತಪೀಠದ ಗೋರಿಗಳು ನಕಲಿ – ಹಿಂದೂಪರ ಸಂಘಟನೆಗಳ ಆರೋಪ

    – ಪಂಚಾಯಿತಿ ದಾಖಲೆಯಲ್ಲಿಲ್ಲ ಶವ ಹೂತ ಮಾಹಿತಿ

    ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ಕಾಫಿನಾಡ ದತ್ತಪೀಠದ (Datta Peeta) ಗುಹೆ ಒಳಗೆ-ಹೊರಗೆ ಇರೋ ಗೋರಿಗಳು ನಕಲಿ ಅಂತ ಬಿಜೆಪಿ-ಹಿಂದೂ ಸಂಘಟನೆಗಳು 30 ವರ್ಷದಿಂದ ಹೇಳಿಕೊಂಡೇ ಬರುತ್ತಿವೆ. ಇದರ ನಡುವೆ ಇನಾಂ ದತ್ತಾತ್ರೇಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೊಟ್ಟಿರೋ ಉತ್ತರ ಎಲ್ಲರ ಕಿವಿಯನ್ನ ನೆಟ್ಟಗಾಗಿಸಿದೆ.

    ಹಿಂದೂಪರ ಸಂಘಟನೆಗಳು ಆರ್‌ಟಿಐನಲ್ಲಿ ಗೋರಿಗಳು ಯಾರದ್ದು? ನೀವು ಯಾರದ್ದಾದರೂ ಶವ ಹೂತಿದ್ದೀರಾ? ಸಾಧು-ಸಂತರು, ಮುಸ್ಲಿಂ ಧರ್ಮಗುರುಗಳು, ಪಕೀರರ ಶವ ಹೂತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ಈ ಮಾಹಿತಿಗೆ ಇನಾಂ ದತ್ತಾತ್ರೇಯ ಪೀಠ ಗ್ರಾಮ ಪಂಚಾಯಿತಿ ಯಾವುದೇ ಮಾಹಿತಿ ಗ್ರಾಮ ಪಂಚಾಯಿತಿಯಲ್ಲಿ ಇಲ್ಲ ಎಂದು ಹಿಂಬರಹ ನೀಡಿದ್ದಾರೆ. ಇದು ಬಿಜೆಪಿಗರು (BJP) ಇಷ್ಟು ವರ್ಷ ಮಾಡಿಕೊಂಡ ಬಂದ ಆರೋಪಕ್ಕೆ ಪುಷ್ಠಿ ಸಿಕ್ಕಿದ್ದು ಇನ್ಮುಂದೆ ಹೋರಾಟದ ಹಾದಿ ಬದಲಾಗೋ ಸಾಧ್ಯತೆ ಕೂಡ ಇದೆ. ಇದನ್ನೂ ಓದಿ: ದತ್ತಪೀಠ ವಿವಾದ; ಭೂ ದಾಖಲೆಗಳ ಆಧಾರದ ಮೇಲೆ ವಿವಾದ ಬಗೆಹರಿಯಲಿ: ಸಿ.ಟಿ ರವಿ

    ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಹೆಚ್‌ಪಿ (VHP) ಮುಖಂಡ ರಂಗನಾಥ್, ಗ್ರಾಮ ಪಂಚಾಯಿತಿಯ ಈ ಉತ್ತರ ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಆನೆ ಬಲ ತರಿಸಿದೆ. ಹಿಂದೂ ಪರ ಸಂಘಟನೆಗಳು 30 ವರ್ಷಗಳಿಂದ ದತ್ತಪೀಠ ಹಿಂದೂಗಳದ್ದು. ಧರ್ಮಸ್ಥಳದ ಉತ್ಖನನದ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ದತ್ತಪೀಠದಲ್ಲೂ ಅಂತಹದ್ದೇ ಷಡ್ಯಂತ್ರ ನಡೆದಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರೋದ್ರಿಂದ ಅಲ್ಲಿ ಯಾವುದೇ ಮುಸ್ಲಿಮರ ಕುರುಹುಗಳಿಲ್ಲ. ಹಾಗಾಗಿ, ದತ್ತಪೀಠವನ್ನು ಮುಸ್ಲಿಂ ಮುಕ್ತವನ್ನಾಗಿಸಿ ಸಂಪೂರ್ಣವಾಗಿ ಹಿಂದುಗಳಿಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.

    30 ವರ್ಷದ ದತ್ತಪೀಠದ ವಿವಾದ-ಹೋರಾಟ ಈಗ ಮತ್ತೊಂದು ರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಗ್ರಾಮ ಪಂಚಾಯಿತಿ ಅಲ್ಲಿನ ಗೋರಿಗಳ ಬಗ್ಗೆ ನಮಲ್ಲಿ ಯಾವುದೇ ಮಾಹಿತಿ-ದಾಖಲೆ ಇಲ್ಲ ಎಂದಿರೋದು ಹಿಂದೂಗಳ ಆರೋಪ-ಹೋರಾಟಕ್ಕೆ ಸಿಕ್ಕ ಅರ್ಧ ಜಯದಂತಾಗಿದೆ. ಆದರೆ, ಪ್ರಕರಣ ಕೋರ್ಟ್ ಕಟಕಟೆಯಲ್ಲಿದ್ದು ಅಂತಿಮವಾಗಿ ತೀರ್ಪು ಏನು ಬರುತ್ತೋ ಅನ್ನೋದು ಎರಡೂ ಧರ್ಮದವರಿಗೂ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ದತ್ತಪೀಠದ ಪೂಜಾ ಪದ್ಧತಿ – ಸುಪ್ರಿಂ ಸೂಚನೆಯಂತೆ ಕ್ಯಾಬಿನೆಟ್ ಸಬ್ ಕಮಿಟಿ ಸಭೆ

  • ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಜಪಿಸಲು VHP ಕರೆ

    ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಜಪಿಸಲು VHP ಕರೆ

    ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ (Dharmasthala) ಅಪಪ್ರಚಾರ, ಷಡ್ಯಂತ್ರ ದೂರವಾಗಿ, ಕ್ಷೇತ್ರದ ಶ್ರದ್ದೆಭಕ್ತಿ ಹೆಚ್ಚಾಗಲಿ ಎಂಬ ಸಂಕಲ್ಪದೊಂದಿಗೆ ಸಾಮೂಹಿಕ ಶಿವಪಂಚಾಕ್ಷರಿ ಓಂ ನಮಃ ಶಿವಾಯ ನಾಮ ಜಪ (Shiva Panchakshari Japa) ಪಠಿಸಲು ವಿಶ್ವ ಹಿಂದೂ ಪರಿಷದ್ (VHP) ಕರೆ ನೀಡಿದೆ.

    ಧರ್ಮಸ್ಥಳದ ಶ್ರೀ ಮಂಜುನಾಥನ ಶ್ರೀಕ್ಷೇತ್ರ ಕಳೆದ ಹಲವು ದಶಕಗಳಿಂದ ಸಹಸ್ರಾರು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ, ನೂರಾರು ಧಾರ್ಮಿಕ ಕ್ಷೇತ್ರಗಳನ್ನು ಜೀರ್ಣೋದ್ದಾರಗೊಳಿಸುವ ಪವಿತ್ರ ಕಾರ್ಯವನ್ನು ಮಾಡಿಕೊಂಡು ಬಂದಿದೆ. ಜೊತೆಗೆ ಕ್ಷೇತ್ರದಲ್ಲಿ ನಿರಂತರ ಅನ್ನದಾನದ ಪುಣ್ಯ ಕಾರ್ಯ ಮಾಡುತ್ತಿದೆ. ರಾಜ್ಯ ದೇಶ ವಿದೇಶಗಳಿಂದ ಕೋಟ್ಯಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶಿವನ ದರ್ಶನ ಪಡೆದು ಧನ್ಯರಾಗುತ್ತಾರೆ. ನೂರಾರು ವರ್ಷಗಳ ಪರಂಪರೆ ಇರುವ ಒಂದು ನಂಬಿಕೆಯ ಶ್ರದ್ಧಾಕೇಂದ್ರವನ್ನು ಇವತ್ತು ಧರ್ಮ ವಿರೋಧಿ ಶಕ್ತಿಗಳು ವ್ಯಾಪಕವಾಗಿ ಷಡ್ಯಂತ್ರ ಮಾಡಿ ಅಪಪ್ರಚಾರವೆಸಗುವ ಮೂಲಕ ಕ್ಷೇತ್ರಕ್ಕೆ ಕೆಟ್ಟ ಹೆಸರು ತರುವ ಸಂಚು ನಡೆಸುತ್ತಿದ್ದಾರೆ.  ಇದನ್ನೂ ಓದಿ: 500 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಹೊರಟ ಬಿಜೆಪಿ ಕಾರ್ಯಕರ್ತರು!

     

    ಧರ್ಮಸ್ಥಳ ಪವಿತ್ರ ಶ್ರದ್ಧಾಕೇಂದ್ರವು ಧರ್ಮ ವಿರೋಧಿ ಶಕ್ತಿಗಳ ಷಡ್ಯಂತ್ರದಿಂದ ವ್ಯಾಪಕವಾಗಿ ಅಪಚಾರಕ್ಕೆ ಗುರಿಯಾಗಿದೆ, ಇಂತಹ ಷಡ್ಯಂತ್ರಗಳಿಗೆ ಸೋಲುಂಟಾಗಲು ಮತ್ತು ಅಪಪ್ರಚಾರ ಕೊನೆಯಾಗಿ ಕ್ಷೇತ್ರದಲ್ಲಿ ಶ್ರದ್ದೆಭಕ್ತಿ ಬೆಳಗಿ ಶಾಂತಿ ನೆಲಸಲಿ ಎಂಬ ಸಂಕಲ್ಪದೊಂದಿಗೆ ರಾಜ್ಯದಾದ್ಯಂತ 18 ಆಗಸ್ಟ್ 2025 ಸೋಮವಾರದಿಂದ ಒಂದು ವಾರದ ಕಾಲ ಸಾಮೂಹಿಕ ಶಿವಪಂಚಾಕ್ಷರಿ ಓಂ ನಮಃ ಶಿವಾಯ ಜಪ ಅನುಷ್ಟಾನಕ್ಕೆ ಎಲ್ಲ ಭಕ್ತರಲ್ಲಿ ವಿಶ್ವ ಹಿಂದೂ ಪರಿಷದ್ ಕರೆ ನೀಡುತ್ತಿದೆ.

    ರಾಜ್ಯದ ಎಲ್ಲಾ ಹಿಂದೂ ಸಂಘಟನೆಗಳು, ಧಾರ್ಮಿಕ ಸಂಘಸಂಸ್ಥೆಗಳು ಹಾಗೂ ಮಠ ಮಂದಿರ, ಭಜನಾಮಂದಿರ, ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕವಾಗಿಯೂ ಮತ್ತು ಮನೆ ಮನೆಗಳಲ್ಲಿ ವೈಯುಕ್ತಿಕವಾಗಿಯೂ ಶಿವಪಂಚಾಕ್ಷರಿ ಮಂತ್ರದ ಓಂ ನಮಃ ಶಿವಾಯ ನಾಮ ಜಪ ಮಾಡುವಂತೆ ಸರ್ವ ಭಕ್ತರಲ್ಲಿ ವಿನಂತಿ ಮಾಡುತ್ತೇವೆ ಎಂದು ವಿಹೆಚ್‌ಪಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

  • ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

    ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಪ್ರಮಾಣ ಹೆಚ್ಚಾಗಿದ್ದು, ಜಿಲ್ಲೆಯ ನಾನಾ ಭಾಗಗಳಲ್ಲಿ ಮಳೆಯ ಅವಾಂತರಗಳು (Rain Effect) ಮುಂದುವರಿಯುತ್ತಿದೆ.

    ಈ‌ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿಂದು ಬೆಳಗ್ಗೆ 5:30ರ ಸುಮಾರಿಗೆ ಮಳೆ ಗಾಳಿಗೆ ಮನೆ ಕುಸಿದು ಬಿದ್ದು ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಇದನ್ನೂ ಓದಿ: ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

    ಮಹಿಳೆ ಮೃತಪಟ್ಟಿದ್ದು, ಆಕೆಯ ಮಕ್ಕಳು ಹಾಗೂ ಸಹೋದರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾನಗಲ್‌ ಗ್ರಾಮದ ಗಣಪತಿ ದೇವಸ್ಥಾನದ ಸಮೀಪದಲ್ಲಿರುವ ಸುಷ್ಮಾ (37) ಮೃತ ಮಹಿಳೆ ಆಗಿದ್ದಾರೆ. ಇವರ ಮೂವರು ಮಕ್ಕಳು ಹಾಗೂ ಸಹೋದರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದನ್ನೂ ಓದಿ: ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

    ಮಳೆಯಲ್ಲೇ ಕೊಡಗಿನಲ್ಲಿ ಕಾರ್ಗಿಲ್‌ ವಿಜಯೋತ್ಸವ
    ಇನ್ನೂ ಸೇನಾನಾಡು ಕೊಡಗಿನಲ್ಲಿ ಕಾರ್ಗಿಲ್‌ ವಿಜಯೋತ್ಸವವನ್ನ (Kargil Vijay Diwas) ಸಂಭ್ರಮದಿಂದ ಆಚರಿಸಲಾಯಿತು. ಮಳೆಯನ್ನು ಲೆಕ್ಕಿಸದೇ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ನಿಂದ ಮಡಿಕೇರಿ ನಗರದ ಯುದ್ಧ ಸ್ಮಾರಕ ಬಳಿ ಪುಷ್ಪ ನಮನ ಸಲ್ಲಿಸುವ ಮೂಲಕ ಯೋಧರಿಗೆ ಗೌರವ ಸಲ್ಲಿಲಾಯಿತು. ಇದನ್ನೂ ಓದಿ: ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

    ನೂರಾರೂ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಅಗಲಿದ ವೀರ ಸೇನಾನಿಗಳನ್ನ ಸ್ಮರಿಸಿದರು. ಅಲ್ಲದೇ ಅಂದಿನ ದಿನದಲ್ಲಿ ಸೈನಿಕರು ಹಾಗೂ ಅವರ ಕುಟುಂಬಸ್ಥರು ಯಾವ ರೀತಿಯ ನೋವು ಅನುಭವಿಸುತ್ತಿದ್ದರು, ಇಂದಿನ ದಿನಗಳಲ್ಲಿ ಸೈನಿಕರ ಕುಟುಂಬಗಳನ್ನ ಸರ್ಕಾರಿ ಅಧಿಕಾರಿಗಳು ಹೇಗೆ ನೋಡ್ತಿದ್ದಾರೆ ಅಂತ ಕೆಲ ಸೈನಿಕರು ನೋವು ಹಂಚಿಕೊಂಡರು. ಈ ಸಂದರ್ಭದಲ್ಲಿ ಹಿಂದೂ ಪರ ಕಾರ್ಯಕರ್ತರು ಸಿಹಿ ಹಂಚಿ ಕಾರ್ಗಿಲ್‌ ವಿಜಯೋತ್ಸವವನ್ನು ಸಂಭ್ರಮಿಸಿದರು.

  • ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಬಂಧನ – ಜಾಮೀನು

    ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಬಂಧನ – ಜಾಮೀನು

    -ಕದ್ರಿ ಪೊಲೀಸ್‌ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಜಮಾವಣೆ

    ಮಂಗಳೂರು: ಸುಹಾಸ್ ಶೆಟ್ಟಿ (Suhas Shetty) ಹತ್ಯೆ ದಿನ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ (Sharan Pumpwell) ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.

    ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಕದ್ರಿ ಠಾಣೆಯಲ್ಲಿ (Kadri Police Station) ಎಫ್‌ಐಆರ್ ದಾಖಲಾಗಿತ್ತು. ಶರಣ್ ಪಂಪ್‌ವೆಲ್ ಬಂಧನ ಬೆನ್ನಲ್ಲೇ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ. ಸದ್ಯ ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ಕದ್ರಿ ಠಾಣೆಯಿಂದ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಮಾನ್ಸೂನ್ ಅಬ್ಬರ – ಕೇರಳದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    ಈ ಕುರಿತು ವಿಹೆಚ್‌ಪಿ ಮುಖಂಡ ಪ್ರದೀಪ್ ಸರಿಪಲ್ಲ ಮಾಧ್ಯಮಗಳೊಂದಿಗೆ ಮಾತನಾಡಿ, ಮುಸ್ಲಿಮರನ್ನು ಓಲೈಕೆ ಮಾಡೋಕೆ ಸರ್ಕಾರ ಪೊಲೀಸರಿಗೆ ಒತ್ತಡ ತಂದಿದೆ. ಸುಹಾಸ್ ಹತ್ಯೆಯ ದಿನ ಬಂದ್‌ಗೆ ಕರೆ ನೀಡಿರೋದಕ್ಕೆ ಕೇಸ್ ಆಗಿತ್ತು. ಕೇಸ್ ಆಗಿ 20 ದಿನಗಳೇ ಕಳೆದುಹೋಗಿದೆ. ಈಗ ಬಂಧನ ಮಾಡಿರೋದು ಯಾಕೆ? ಇವತ್ತಿನ ಘಟನೆ ಹಿನ್ನೆಲೆ ಮುಸ್ಲಿಮರನ್ನು ಓಲೈಕೆ ಮಾಡೋಕೆ ಬಂಧನ ಮಾಡಿದ್ದಾರೆ. ಇದು ಜಾಮೀನಾಗುವ ಕೇಸ್. ಜೈಲಿಗೆ ಹಾಕಲ್ಲ ಎಂದು ಕಮಿಷನರ್ ಹೇಳಿದ್ದಾರೆ. ಶರಣ್ ಪಂಪ್ ವೆಲ್‌ನನ್ನು ಜೈಲಿಗೆ ಹಾಕಿದರೆ ಮುಂದೆ ಆಗುವ ಘಟನೆಗೆ ಸರ್ಕಾರವೇ ನೇರ ಹೊಣೆ ಎಂದು ಸರ್ಕಾರ ಮತ್ತು ಪೊಲೀಸರಿಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: 1200 ರೂ. ಬೆಲೆಯ ಟಿಕೆಟ್‌ 6000ಕ್ಕೆ ಸೇಲ್‌ – ಐಪಿಎಲ್‌ ಟಿಕೆಟ್‌ ಮಾರುತ್ತಿದ್ದ ಟೆಕ್ಕಿ ಬಂಧನ

    ಶರಣ್ ಪಂಪ್‌ವೆಲ್ ಬಂಧಿಸಿದ ಪೊಲೀಸರು ಮಂಗಳೂರಿನ ಬೋಂದೆಲ್‌ನ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿದ್ದಾರೆ.

  • ಪೇಜಾವರ ಶ್ರೀ ಅಪಮಾನಿಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅವಮಾನ: ಸಿಎಂ ವಿರುದ್ಧ ವಿಹೆಚ್‌ಪಿ ಕಿಡಿ

    ಪೇಜಾವರ ಶ್ರೀ ಅಪಮಾನಿಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅವಮಾನ: ಸಿಎಂ ವಿರುದ್ಧ ವಿಹೆಚ್‌ಪಿ ಕಿಡಿ

    – ಸಂವಿಧಾನದ ಬಗ್ಗೆ ಪೇಜಾವರ ಶ್ರೀಗಳು ಹೇಳಿಕೆ ನೀಡಿಲ್ಲ ಎಂದ ಎಂ.ಬಿ.ಪುರಾಣಿಕ್‌

    ಉಡುಪಿ: ಸಂವಿಧಾನ ಕುರಿತ ಪೇಜಾವರ ಶ್ರೀ (Pejawar Swamiji) ನೀಡಿದ್ದಾರೆ ಎನ್ನಲಾದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಾನು ಸಂವಿಧಾನ ಕುರಿತು ಮಾತನಾಡಿಲ್ಲ ಎಂದು ಪೇಜಾವರ ಶ್ರೀಗಳು ಸ್ಪಷ್ಟಪಡಿಸಿದರೂ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ವಿಶ್ವಹಿಂದೂ ಪರಿಷತ್ (Vishwa Hindu Parishad) ಮುಂದಾಗಿದೆ.

    ಉಡುಪಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡರು, ಪೇಜಾವರ ಶ್ರೀ ದೀನ-ದಲಿತ ಹಿಂದೂಗಳ ಸೇವೆ ಮಾಡುತ್ತಿದ್ದಾರೆ. ಶ್ರೀಗಳಿಗೆ ಮಾಡಿದ ಅವಮಾನ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ. ಅವರಿಗೆ ನೋವಾದರೆ ಇಡೀ ಹಿಂದೂ ಸಮಾಜಕ್ಕೆ ನೋವಾದಂತೆ. ಮಠಗಳು ಹಿಂದೂ ಸಮಾಜದ ಅವಿಭಾಜ್ಯ ಅಂಗ. ಪೇಜಾವರ ಶ್ರೀಗಳ ಮಾತುಗಳನ್ನು ತಿರುಚಲಾಗಿದೆ, ಇದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ: ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಆಕ್ರೋಶ

    ಶ್ರೀಗಳು ಸಂವಿಧಾನ ಬದಲು ಮಾಡುವ ಹೇಳಿಕೆ ನೀಡಿದ್ದಾಗಿ ಸಿದ್ದರಾಮಯ್ಯ ಹೇಳಿದ್ದಾರೆ, ಇದರಿಂದ ರಾಜ್ಯಾದ್ಯಂತ ಸಂಚಲನ ಉಂಟಾಗಿದೆ. ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸುತ್ತೇವೆ. ಹಿಂದು ನಾಯಕರು ಮಾತನಾಡಿದರೆ ಸುಮೋಟೊ ಕೇಸು ದಾಖಲಿಸುತ್ತೀರಿ. ಬಿಜಾಪುರದ ಹೋರಾಟ ಸೇರಿದಂತೆ ರಾಜ್ಯಾದ್ಯಂತ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಲಾಗಿದೆ. ಹಿಂದುಗಳ ಬಗ್ಗೆ ತಾರತಮ್ಯ ಮಾಡುತ್ತಿದ್ದೀರಿ ಎಂದು ಬೇಸರ ಹೊರಹಾಕಿದ್ದಾರೆ.

    ಶ್ರೀಗಳ ಬಗ್ಗೆ ಅಪಚಾರ ಮಾಡುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಆಗಬೇಕು. ಸ್ವಾಮಿಗಳನ್ನು ಟಾರ್ಗೆಟ್ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ಪೇಜಾವರ ಶ್ರೀಗಳಿಗೆ ಅವಮಾನ ಆದರೂ ಸರ್ಕಾರ ಸುಮ್ಮನೆ ಕುಳಿತಿದೆ. ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿದ್ದೇವೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಮನವಿ ಕೊಟ್ಟಿದ್ದೇವೆ. ಕಾನೂನು ತಜ್ಞರ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸಂಸತ್‌ ಭವನ ಮೇಲಿನ ದಾಳಿಗೆ 23 ವರ್ಷ – ಹುತಾತ್ಮಕರಿಗೆ ಮೋದಿ ಸೇರಿ ಗಣ್ಯರಿಂದ ನಮನ

  • ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

    ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

    – ಬೈಕ್ ರ‍್ಯಾಲಿ ವೇಳೆ ಹಸಿರು ಬಾವುಟ ಪ್ರದರ್ಶನ – ಬಜರಂಗದಳ, ವಿಹೆಚ್‌ಪಿ ಆಕ್ರೋಶ

    ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ ಬಳಿಕ ಬಂಟ್ವಾಳ (Bantwal) ತಾಲೂಕಿನ ಬಿ.ಸಿ ರೋಡ್‌ನಲ್ಲಿ (B C Road) ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

    ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿತ್ತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪೊಲೀಸರು ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿ ಅನುಮತಿ ನೀಡಿದ್ದರು. ಈ ವೇಳೆ ಬೈಕ್ ರ‍್ಯಾಲಿ ಮಾಡುತ್ತಾ ಯುವಕರು ಹಸಿರು ಧ್ವಜವನ್ನು ಹಾರಿಸಿದರು. ಇದನ್ನು ಕಂಡ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರ‍್ಯಾಲಿ ವಿರೋಧಿಸಿ ಬಜರಂಗದಳ ಹಾಗೂ ವಿಹೆಚ್‌ಪಿ ಹಿಂದೂ ಸಂಘಟನೆಗಳು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಅಲ್ಲದೇ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬಳಿಕ ಎಚ್ಚೆತ್ತ ಪೊಲೀಸರು ಮುಸ್ಲಿಂ ಯುವಕರಿಂದ ಹಸಿರು ಧ್ವಜ ಹಾಗೂ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

    ಏನಿದರ ಹಿನ್ನೆಲೆ?
    ಬಜರಂಗದಳ (Bajarangadala) ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು.ಇದನ್ನೂ ಓದಿ: ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ.

  • ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಮಂಗಳೂರು: ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಗಿರೀಶ್.ಎನ್  (Girish.N) ತಿಳಿಸಿದ್ದಾರೆ.

    ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ (B C Road) ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಕೊನೆಗೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಪೊಲೀಸರ ಬಿಗಿ ಬಂದೋಬಸ್ತಿನಿಂದಾಗಿ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿರುವ ಕುರಿತು ದ.ಕ ಎಸ್ಪಿ ಎನ್. ಯತೀಶ್ (N. Yatish) ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಎನ್.ಯತೀಶ್ ಮಾತನಾಡಿ, ಬಂಟ್ವಾಳದ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ದ.ಕ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೈಕಂಬ ಮಸೀದಿಯ ಈದ್ ಮಿಲಾದ್ ಮೆರವಣಿಗೆ ರೂಟ್ ಬದಲಾವಣೆ ನಾವು ಮಾಡಿಲ್ಲ. ಹಿಂದೂ ಸಂಘಟನೆಯವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದರು. ಹಾಗಾಗಿ ಬಿ.ಸಿ ರೋಡ್ ಜಂಕ್ಷನ್‌ನಲ್ಲಿ ಅವಕಾಶ ನೀಡಿದ್ದೇವು. ಏನಾದರೂ ಸಮಸ್ಯೆಯಾದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದೇವೆ ಅಷ್ಟೇ ಎಂದು ತಿಳಿಸಿದರು.

    ಪ್ರಚೋದನಾಕಾರಿ ಆಡಿಯೋ ಹರಿಬಿಟ್ಟ ಇಬ್ಬರ ಮೇಲೆಯೂ ಕ್ರಮವಾಗಿದೆ. ಶರೀಫ್ ಹಾಗೂ ಹಸೀನಾರ್ ಇಬ್ಬರನ್ನು ಬಂಧಿಸಿದ್ದೇವೆ. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಮುನ್ನವೇ ಶಾಂತಿ ಸಭೆ ಮಾಡಿದ್ದೇವೆ. ಈವರೆಗೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮುಂದೆಯೂ ಅಹಿತಕರ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳುತ್ತೇವೆ. ಪರಿಸ್ಥಿತಿಗೆ ಅನುಗುಣವಾಗಿ ಬಿ.ಸಿ ರೋಡಿನಲ್ಲಿ ಬಂದೋಬಸ್ತ್ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

    ಮತ್ತೋರ್ವ ಅಧಿಕಾರಿ ಗಿರೀಶ್.ಎನ್ ಮಾತನಾಡಿ, ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಿ.ಸಿ.ರೋಡ್ ಚಲೋ ಹಾಗೂ ಈದ್ ಮಿಲಾದ್ ಶಾಂತಿಯುತವಾಗಿ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ. ಘಟನೆಗೆ ಕಾರಣವಾದ ಆಡಿಯೋ ಹರಿಬಿಟ್ಟಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ಹದಿಹರೆಯದ ಹುಡುಗಿಯರ ಮಿದುಳಿಗೆ ಬೇಗ ವಯಸ್ಸಾಗ್ತಿದೆಯಂತೆ; ಯಾಕೆ ಗೊತ್ತಾ? – ಅಧ್ಯಯನ ಹೇಳೋದೇನು?

  • ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    – ಖಾಕಿ ಪಡೆ ಕಣ್ಗಾವಲು; ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ತಳ್ಳಾಟ ನೂಕಾಟ

    ಮಂಗಳೂರು: ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದಾರೆ.

    ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡ್‌ಗೆ ಬರದಂತೆ ಮುಂಜಾಗ್ರತಾ ಕ್ರಮವಾಗಿ ಕೈಕಂಬ ಮಸೀದಿ ಪಕ್ಕದಲ್ಲೇ ಮೆರವಣಿಗೆ ಪೊಲೀಸರು ರಸ್ತೆ ಬದಲಾವಣೆ ಮಾಡಿದ್ದಾರೆ. ಇದನ್ನೂ ಓದಿ: Mandya | ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ – ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಸರ್ಪಗಾವಲು

    ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಬಿ.ಸಿ ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಜಮಾಯಿಸಿದ್ದಾರೆ. ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಮುಖಂಡ ಪುನೀತ್ ಅತ್ತಾವರ ಸ್ಥಳಕ್ಕೆ ಆಗಮಿಸಿದ್ದಾರೆ. ಕೆಎಸ್‌ಆರ್‌ಪಿ ತುಕಡಿಗಳು, ಆರ್ಮ್ ರಿಸರ್ವ್ ಫೋರ್ಸ್ ಸೇರಿದಂತೆ ವಿವಿಧ ತುಕಡಿಗಳ ಮೊಕ್ಕಾಂ ಹೂಡಿವೆ. ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ – ಮಿನಿವಿಧಾನಸೌಧದಲ್ಲಿ ಸರ್ಕಾರದಿಂದ ಭರ್ಜರಿ ಸಿದ್ಧತೆ!

    ವಿಎಚ್‌ಪಿಯ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ಮಾತನಾಡಿ, ಭಜರಂಗದಳ ಹಾಗೂ ವಿಎಚ್‌ಪಿಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಿ.ಸಿ.ರೋಡ್ ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಎದುರು ಸೇರಿದ ಕಾರ್ಯಕರ್ತರು ನಾವು ಸವಾಲು ಸ್ವೀಕರಿಸಿ ಬಂದಿದ್ದೇವೆ. ನಮ್ಮ ಮುಖಂಡ ಶರಣ್ ಪಂಪ್ ವೆಲ್ ಬರುತ್ತಾರೆ ಅವರಿಗೆ ಸ್ವಾಗತ ಕೋರಲು ಬಂದಿರೋದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಪೊಲೀಸರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟವೂ ನಡೆದೆ. ಇದನ್ನೂ ಓದಿ:  ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ – ಆತಂಕ ಹೆಚ್ಚಿಸಿದ ಆ ಒಂದು ರೈಫಲ್‌, ದಾಳಿಕೋರ ಸಿಕ್ಕಿದ್ದು ಹೇಗೆ?

  • ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ – ಕೇರಳ ಮುಸ್ಲಿಮರ ಕೈವಾಡ ಇದ್ಯಾ? – ವಿಶ್ವ ಹಿಂದೂ ಪರಿಷತ್‌ ಆರೋಪ ಏನು?

    ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ – ಕೇರಳ ಮುಸ್ಲಿಮರ ಕೈವಾಡ ಇದ್ಯಾ? – ವಿಶ್ವ ಹಿಂದೂ ಪರಿಷತ್‌ ಆರೋಪ ಏನು?

    – FIRನಲ್ಲಿರೋ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರು!

    ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ (Nagamangala Violence) ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ ಈಗ ಸಹಜ ಸ್ಥಿತಿಗೆ ಮರಳಿದೆ. ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ತೆರವಾಗಿದೆ. ಈ ನಡುವೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಿಗೆ ಬಂದಿದೆ.

    ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ (Kerala Link) ಇರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೇ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಸದಸ್ಯರೂ ಈ ಗಲಭೆ ಹಿಂದಿದ್ದಾರೆ, ಕೃತ್ಯಕ್ಕೆ ಮೊದಲೇ ಪ್ಲ್ಯಾನ್‌ ಮಾಡಿದ್ದರು ಎಂಬ ಶಂಕೆಯೂ ವ್ಯಕ್ತವಾಗಿದೆ. ಇದನ್ನೂ ಓದಿ: ಭಾನುವಾರದ ಬಾಡೂಟ; ಆಂಧ್ರ ಶೈಲಿಯ ತಲೆಮಾಂಸದ ಸಾಂಬಾರ್ ಮಾಡೋದು ಹೇಗೆ?

    ಈ ಅನುಮಾನಕ್ಕೆ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ಆ ಎರಡು ಹೆಸರುಗಳು ಕಾರಣವಾಗಿದೆ. ಹೌದು. ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರಾಗಿದ್ದಾರೆ. ಪ್ರಕರಣದ 44ನೇ ಆರೋಪಿ ಯೂಸೂಫ್‌, 61ನೇ ಆರೋಪಿ ನಾಸೀರ್‌ ಇಬ್ಬರೂ ಕೇರಳ ರಾಜ್ಯದ ಮಲ್ಲಪುರಂ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ; ಸಂದೀಪ್‌ ಘೋಷ್‌ ಸೇರಿ ಸಿಬಿಐನಿಂದ ಇಬ್ಬರ ಬಂಧನ

    ಈ ನಡುವೆ ಆರೋಪಿಗಳಿಬ್ಬರೂ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರು ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಗಲಭೆ ನಡೆಸಲು ಪೂರ್ವ ತಯಾರಿ ನಡೆದಿದೆ. ಗಲಾಟೆ ನಡೆದ ದಿನ ಮೆಡಿಕಲ್‌ನಲ್ಲಿ 200 ಮಾಸ್ಕ್ ಖರೀದಿ ಮಾಡಲಾಗಿದೆ. ಪೆಟ್ರೋಲ್ ಬಾಂಬ್ ಬಳಕೆಯಲ್ಲೂ ಕೇರಳ ಮುಸ್ಲಿಮರ ಕೈವಾಡದ ಇದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನ ಎನ್‌ಐಎ ನಡೆಸಬೇಕು ಎಂದು ವಿಹೆಚ್‌ಪಿ ಆಗ್ರಹಿಸಿದೆ. ಇದನ್ನೂ ಓದಿ: ಪ್ರಧಾನಿ ಹುದ್ದೆಗೆ ಬೆಂಬಲಿಸುವ ಆಫರ್‌ ಬಂದಿತ್ತು, ನಾನೇ ತಿರಸ್ಕರಿಸಿದೆ: ನಿತಿನ್‌ ಗಡ್ಕರಿ

  • ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ: ಪ್ರತಾಪ್‌ ಸಿಂಹ

    ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ: ಪ್ರತಾಪ್‌ ಸಿಂಹ

    – ಪ್ರವೀಣ್ ನೆಟ್ಟಾರು, ಹರ್ಷ ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್ ಮಾಡದಕ್ಕೆ ಅಸಮಾಧಾನ

    ಮಂಗಳೂರು: ಕರ್ನಾಟಕಕ್ಕೆ (Karnataka) ಒಬ್ಬ ಯೋಗಿ ಆದಿತ್ಯನಾಥ್ (Yogi Adityanath) ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ (VHP) ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ‌ ಆಯೋಜಿಸಿದ್ದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಪ್ರವೀಣ್ ನೆಟ್ಟಾರು (Praveen Nettaru) ಮತ್ತು ಹರ್ಷನ (Harsha) ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್ ಮಾಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪರೋಕ್ಷವಾಗಿ ಜಾತಿವಾದಿ ಬಿಜೆಪಿ ನಾಯಕರ (BJP Leaders) ಮತ್ತು ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿ ಇರ್ತೀಯಾ ಅಂತ ಕೇಳಿದ್ದ ರೇಣುಕಾ – ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

     

    ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಹೋಗಿ ಬಾವುಟ, ಕರಪತ್ರ ಹಂಚಿ 2018 ರಲ್ಲಿ ಸರ್ಕಾರವನ್ನು ತಂದಿದ್ದೀರಿ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಯಿತು. ಮರ್ಡರ್ ಮಾಡಿದವರು ಎಲ್ಲಿ ಇದ್ದಾರೆ ಎಂದು ಪೊಲೀಸರಿಗೆ ಗೊತ್ತಿತ್ತು. ಪೊಲೀಸರ ಕೈಯಲ್ಲಿ ಬಂದೂಕು ಇತ್ತು. ಟ್ರಿಗರ್ ಎಳೆಯಲು ಬೆರಳು ಇತ್ತು. ಆದರೆ ಟ್ರಿಗರ್ ಎಳೆಯಬೇಡಿ ಎಂದು ಬಿಜೆಪಿ ಸರಕಾರಕ್ಕೆ ಆರ್ಡರ್ ಮಾಡಿದವರು ಯಾರು? ಪೊಲೀಸ್ ಇಲಾಖೆಯು ರಾಜಕಾರಣಿಗಳು ಎಂಬ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ ಎಂದು ಆರೋಪಿಸಿದರು.

    ಅಂದು ಬಿಜೆಪಿ ಸರಕಾರ ಆರ್ಡರ್ ಕೊಟ್ಟಿದ್ದರೆ, ದುರುಳರು ಇವತ್ತು ಸತ್ತಿರುತ್ತಿದ್ದರು. ಶಿವಮೊಗ್ಗ ಹರ್ಷನ ಮರ್ಡರ್ ಕೇಸ್‌ನಲ್ಲಿದ್ದ ಆರೋಪಿಗಳು ಒಂದು ಮನೆಯಲ್ಲಿದ್ದರು. ಅವರನ್ನು ಎನ್‌ಕೌಂಟರ್ ಮಾಡಿಸುವುದಕ್ಕೆ ತೊಂದರೆ ಏನಿತ್ತು ಎಂದು ಪ್ರಶ್ನಿಸಿದರು.