Tag: Vice chancellor

  • ಮಗಳ ಹುಟ್ಟುಹಬ್ಬಕ್ಕೆ ಸುತ್ತೋಲೆ ಹೊರಡಿಸಿದ ಕುವೆಂಪು ವಿವಿ ಕುಲಪತಿ – ನೆಟ್ಟಿಗರಿಂದ ಕ್ಲಾಸ್‌

    ಮಗಳ ಹುಟ್ಟುಹಬ್ಬಕ್ಕೆ ಸುತ್ತೋಲೆ ಹೊರಡಿಸಿದ ಕುವೆಂಪು ವಿವಿ ಕುಲಪತಿ – ನೆಟ್ಟಿಗರಿಂದ ಕ್ಲಾಸ್‌

    ಶಿವಮೊಗ್ಗ: ಮಗಳ ಹುಟ್ಟುಹಬ್ಬಕ್ಕೆ ಸುತ್ತೋಲೆ ಹೊರಡಿಸಿದ ಮಾದರಿಯಲ್ಲಿ ಅತಿಥಿಗಳಿಗೆ ಆಹ್ವಾನ ನೀಡಿರುವ ಕುವೆಂಪು ವಿಶ್ವವಿದ್ಯಾನಿಲಯದ (Kuvempu University) ಕುಲಪತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

    ತಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಯಾವುದೇ ರಾಜಕಾರಣಿ ಆಗಿರಲಿ, ಸರ್ಕಾರಿ ಉನ್ನತ ಅಧಿಕಾರಿಯೇ ಆಗಿರಲಿ ಖಾಸಗಿಯಾಗಿಯೇ ಆಹ್ವಾನ ನೀಡುತ್ತಾರೆಯೇ ಹೊರತು, ಸರ್ಕಾರದ ಲೆಟರ್‌ಹೆಡ್‌ನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಆದರೆ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಮ್ಮ ಮಗಳ ಹುಟ್ಟುಹಬ್ಬಕ್ಕೆ ಸರ್ಕಾರದ ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿ ಆಹ್ವಾನ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಅತ್ತೆ-ಸೊತೆ ಇದ್ರೆ ಯಾರಿಗೆ ದುಡ್ಡು ಹಾಕಬೇಕು, ಮನೆ ಯಜಮಾನಿ ಯಾರು? – ಗ್ಯಾರಂಟಿ ಬಗ್ಗೆ ಡಿಕೆಶಿ ಮಾತು

    ವಿವಿಯ ಕುಲಪತಿ‌ ಹೊರಡಿಸಿರುವ ಸುತ್ತೋಲೆ ಪತ್ರ ಎಲ್ಲೆಡೆ ವೈರಲ್ ಆಗಿದ್ದು, ಪರ-ವಿರೋಧಗಳ ಮಾತು ಕೇಳಿಬರುತ್ತಿದೆ. ಅಲ್ಲದೆ ಈ  ಮೂಲಕ ಕುಲಪತಿಯವರು ಎಡವಟ್ಟು ಮಾಡಿದ್ದಾರೆ ಎಂಬ ದೂರು ಕೇಳಿಬಂದಿದೆ.

    ಕುವೆಂಪು ವಿಶ್ವವಿದ್ಯಾನಿಲಯದ ಲೋಗೋ ಇರುವ ಸರ್ಕಾರಿ ಲೆಟರ್‌ನಲ್ಲಿ ಸುತ್ತೋಲೆ ಹೊರಡಿಸಿರುವ ಅವರು ಎಲ್ಲಾ ಅಧ್ಯಾಪಕರು, ಅಧ್ಯಾಪಕೇತರರು, ಅತಿಥಿ ಉಪನ್ಯಾಸಕರು, ಏಜೆನ್ಸಿ ಸಿಬ್ಬಂದಿ ತಮ್ಮ ಮನೆಯ ಖಾಸಗಿ ಸಮಾರಂಭಕ್ಕೆ ಖುದ್ದಾಗಿ ಹಾಜರಾಗುವಂತೆ ತಿಳಿಸಿದ್ಧಾರೆ. ಇದು ಫರ್ಮಾನು ಹೊರಡಿಸಿದ ರೀತಿಯಲ್ಲಿದೆ ಎಂಬ ಟೀಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಶವಸಂಸ್ಕಾರದ ವೇಳೆ ಕೊಲೆ ಶಂಕೆ ಪ್ರಕರಣಕ್ಕೆ ಟ್ವಿಸ್ಟ್ – ಪತ್ನಿಯೇ ಮಾಸ್ಟರ್‌ಮೈಂಡ್

  • `ಕುಲಪತಿ ಹುದ್ದೆಗೆ ಕೋಟಿ ಕೋಟಿ ಕೊಡ್ಬೇಕು’ – ಪ್ರತಾಪ್ ಸಿಂಹ ಹೇಳಿಕೆಗೆ ಅಶ್ವಥ್ ನಾರಾಯಣ ಸಮರ್ಥನೆ

    `ಕುಲಪತಿ ಹುದ್ದೆಗೆ ಕೋಟಿ ಕೋಟಿ ಕೊಡ್ಬೇಕು’ – ಪ್ರತಾಪ್ ಸಿಂಹ ಹೇಳಿಕೆಗೆ ಅಶ್ವಥ್ ನಾರಾಯಣ ಸಮರ್ಥನೆ

    ಚಿಕ್ಕೋಡಿ: `ಕುಲಪತಿ (Vice Chancellor) ಹುದ್ದೆಗಳಿಗೆ ಕೋಟಿ ಕೋಟಿ ಹಣ ಕೊಡಬೇಕಾಗಿದೆ’ ಎನ್ನುವ ಸಂಸದ ಪ್ರತಾಪ್‌ಸಿಂಹ (Pratap Simha) ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ (CN Ashwath Narayan) ಅವರು, ಆರೋಪವನ್ನು ಕಾಂಗ್ರೆಸ್ (Congress) ಕಡೆಗೆ ಹೊರಿಸಿದ್ದಾರೆ.

    ಬೆಳಗಾವಿಯಲ್ಲಿ (Belagavi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಲಪತಿ ಹುದ್ದೆಗೆ ಹಣ ನೀಡಬೇಕು ಎಂದು ಪ್ರತಾಪ್‌ಸಿಂಹ ಹೇಳಿರೋದು ಕಾಂಗ್ರೆಸ್ ಕಾಲದ ಬಗ್ಗೆ. ಭ್ರಷ್ಟಾಚಾರದ ಬಗ್ಗೆ ಕೆಪಿಸಿಸಿ (KPCC) ಅಧ್ಯಕ್ಷರೇ ಮಾತನಾಡಿದ್ದಾರಲ್ಲ, ಅದೇ ಖುಷಿಯ ವಿಚಾರ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಯನ್ನ ಕಾಂಗ್ರೆಸ್ ನಂಬಬೇಕು – ಪ್ರಹ್ಲಾದ್‌ ಜೋಶಿ

    ಕಾಂಗ್ರೆಸ್ ಪಕ್ಷ ಅಂದ್ರೆ ಅದು ಭ್ರಷ್ಟಾಚಾರದ ಪಕ್ಷ. ಆದ್ರೆ ನಮ್ಮ ಪಕ್ಷ ಭ್ರಷ್ಟಾಚಾರಕ್ಕೆ ಅವಕಾಶ ಕೊಡುವ ಪ್ರಮೇಯವೇ ಇಲ್ಲ. ಆಧಾರ ಇಟ್ಕೊಂಡು ಮಾತಾಡಿ ಜವಾಬ್ದಾರಿಯನ್ನು ಮೆರೆಯಲಿ. ನಾನಾಗಲಿ, ನಮ್ಮ ಇಲಾಖೆಯಾಗಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷ.. ಹಳೇ ವೈರಸ್‌; ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ – ಭಾರತದ ಕಥೆ ಏನು?

    ವಿಪಕ್ಷ ಯಾತ್ರೆಗಳ ವೇಳೆ ಕೋವಿಡ್ ಬರುತ್ತೆ ಅನ್ನೋ ಡಿಕೆಶಿ (DK Shivakumar) ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಇಷ್ಟು ದಿನ ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ರು. ನಾವ್ ಎನಾದ್ರೂ ಕೇಳಿದ್ವಾ? ನಮಗೆ ಕಾನೂನು ಪಾಲನೆ ಮುಖ್ಯ ಅಷ್ಟೆ. ಹಾಗೆಯೇ ಡಿಕೆಶಿ ಅವರು ಹೇಳಿದಂತೆ ಕೋವಿಡ್ ಕಾರಣ ಇಟ್ಟುಕೊಂಡು ಶೀಘ್ರ ಚುನಾವಣೆ ಮಾಡುವ ಉದ್ದೇಶ ಸರ್ಕಾರ ಹೊಂದಿಲ್ಲ. ಅವರೇ ಚುನಾವಣಾ ಆಯೋಗ ಆಗಿದ್ರೆ ಶೀಘ್ರ ದಿನಾಂಕ ಘೋಷಿಸಲು ಹೇಳಿ ಎಂದು ಟಾಂಗ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಲೀಜಾದ ಹಾಸಿಗೆಯಲ್ಲಿ ಮಲಗಲು ಹೇಳಿದ ಸಚಿವ – ಅವಮಾನದಿಂದ ರಾಜೀನಾಮೆ ಕೊಟ್ಟ ಉಪಕುಲಪತಿ

    ಗಲೀಜಾದ ಹಾಸಿಗೆಯಲ್ಲಿ ಮಲಗಲು ಹೇಳಿದ ಸಚಿವ – ಅವಮಾನದಿಂದ ರಾಜೀನಾಮೆ ಕೊಟ್ಟ ಉಪಕುಲಪತಿ

    ಚಂಡೀಗಢ: ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಪ್ರಸಿದ್ಧ ಆರೋಗ್ಯ ತಜ್ಞರೂ ಆಗಿರುವ ಡಾ.ರಾಜ್ ಬಹದ್ದೂರ್ ಅವರನ್ನು ಪಂಜಾಬ್‌ ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರು ಗಲೀಜಾದ ಹಾಸಿಗೆ ಮೇಲೆ ಮಲಗುವಂತೆ ಸೂಚಿಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಸಾರ್ವಜನಿಕವಾಗಿ ನನಗೆ ಅವಮಾನವಾಗಿದೆ ಎಂದು ರಾಜ್ ಬಹದ್ದೂರ್ ರಾಜೀನಾಮೆ ನೀಡಿದ್ದಾರೆ.

    ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ವಾರ್ಡ್‍ಗಳಲ್ಲಿ ಶುಚಿತ್ವದ ಬಗ್ಗೆ ದೂರುಗಳು ಬಂದ ನಂತರ, ಚೇತನ್ ಸಿಂಗ್ ಜೌರಮಜ್ರಾ ಅವರು ಮಾಧ್ಯಮಗಳು ಮತ್ತು ಕ್ಯಾಮೆರಾಮೆನ್‍ಗಳೊಂದಿಗೆ ಸರ್ಕಾರಿ ಆಸ್ಪತ್ರೆಗೆ ಪ್ರವೇಶಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರು ರಾಜ್ ಬಹದ್ದೂರ್ ಅವರಿಗೆ ರೋಗಿಯೊಬ್ಬರ ಗಲೀಜಾದ ಹಾಸಿಗೆಯ ಮೇಲೆ ಮಲಗಲು ಹೇಳಿದ್ದಾರೆ. ಇದನ್ನೂ ಓದಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ

    ರಾಜ್ ಬಹದ್ದೂರ್ ಅವರು ಸ್ವಲ್ಪ ಸಮಯ ಹಾಸಿಗೆ ಮೇಲೆ ಮಲಗಿಕೊಂಡಿದ್ದಾರೆ. ಈ ವೇಳೆ ಹಲವು ಜನರು ಸ್ಥಳದಲ್ಲಿ ಇದ್ದರು. ಅಲ್ಲದೇ ವೀಡಿಯೋವನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. ಈ ವೀಡಿಯೋವನ್ನು ವಿರೋಧಪಕ್ಷಗಳು ಹಂಚಿಕೊಂಡಿದ್ದು, ಆರೋಗ್ಯ ಸಚಿವರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದೆ.

    ಅವಮಾನಿತರಾದ ರಾಜ್ ಬಹದ್ದೂರ್ ಅವರು ಒಂದು ದಿನದ ನಂತರ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ನೀಡದ್ದಕ್ಕೆ ಸ್ನೇಹಿತರೊಂದಿಗೆ ಪತ್ನಿಯನ್ನೇ ಗ್ಯಾಂಗ್‌ರೇಪ್‌ಗೈದ

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರು ಉತ್ತರ ವಿವಿ ನೂತನ ಕುಲಪತಿಯಾಗಿ ಪ್ರೊ.ನಿರಂಜನ ವಾನಳ್ಳಿ ನೇಮಕ

    ಬೆಂಗಳೂರು ಉತ್ತರ ವಿವಿ ನೂತನ ಕುಲಪತಿಯಾಗಿ ಪ್ರೊ.ನಿರಂಜನ ವಾನಳ್ಳಿ ನೇಮಕ

    ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ನಿರಂಜನ ವಾನಳ್ಳಿ ನೇಮಕವಾಗಿದ್ದಾರೆ.

    ಈ ಸಂಬಂಧ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ರೂಪಾಂತರಿ ನಮ್ಮ ದೇಶದಲ್ಲೂ ಇರಬಹುದು: ಡಾ.ಸಿ.ಎಸ್ ಮಂಜುನಾಥ

    ಕೋಲಾರದಲ್ಲಿನ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಮೊದಲ ಕುಲಪತಿಯಾಗಿ ಪ್ರೊ.ಟಿ.ಡಿ.ಕೆಂಪರಾಜು ಜುಲೈ 26, 2017ರಲ್ಲಿ ನೇಮಕಗೊಂಡಿದ್ದರು. ಅವರ 4 ವರ್ಷಗಳ ಅವಧಿ ಜುಲೈ 25, 2021ಕ್ಕೆ ಅಂತ್ಯಗೊಂಡಿತ್ತು.  ಬಳಿಕ ಹಿರಿಯ ಡೀನ್ ಡಾ.ಡಿ.ಕುಮುದಾ ಅವರನ್ನು ಪ್ರಭಾರ ಕುಲಪತಿಯನ್ನಾಗಿ ನೇಮಕ ಮಾಡಲಾಗಿತ್ತು. ಇದನ್ನೂ ಓದಿ: ಕಾಲೇಜಿನ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

    ಇದೀಗ ಕುಲಪತಿ ಶೋಧನಾ ಸಮಿತಿ ಶಿಫಾರಸ್ಸಿನ ಆಧಾರದ ಮೇರೆಗೆ ಪ್ರಾಧ್ಯಾಪಕ ಪ್ರೊ.ನಿರಂಜನ ವಾನಳ್ಳಿ ಅವರನ್ನು ನೂತನ ಕುಲಪತಿಯಾಗಿ ನೇಮಕ ಮಾಡಲಾಗಿದೆ.

  • ಕಲಬುರಗಿ ಕೇಂದ್ರೀಯ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮಹೇಶ್ವರಯ್ಯ ನಿಧನ

    ಕಲಬುರಗಿ ಕೇಂದ್ರೀಯ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮಹೇಶ್ವರಯ್ಯ ನಿಧನ

    ಕಲಬುರಗಿ: ಹಿರಿಯ ಸಾಹಿತಿ ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಹೇಶ್ವರಯ್ಯ(70) ಧಾರವಾಡದಲ್ಲಿ ನಿಧನರಾಗಿದ್ದಾರೆ.

    ಧಾರವಾಡದ ಕರ್ನಾಟಕ ವಿವಿಯ ಭಾಷಾ ಶಾಸ್ತ್ರದ ಪ್ರಾಧ್ಯಾಪಕರಾಗಿ ನಿವೃತರಾಗಿದ್ದರು. ನಂತರ ಮೈಸೂರಿನ ಭಾಷಾ ಸಂಸ್ಥಾನದ ನಿರ್ದೇಶಕರಾಗಿದ್ದರು. 2015ರ ಏಪ್ರಿಲ್ 20 ರಿಂದ 2020ರ ನವೆಂಬರ್ 13ರ ರವರೆಗೆ ಕರ್ನಾಟಕ ಕೇಂದ್ರೀಯ ವಿವಿಯ ಕುಪತಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಸದ್ಯ ಧಾರವಾಡದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಇತ್ತೀಚಿಗೆ ಕೋವಿಡ್‍ನಿಂದ ಚೇತರಿಸಿಕೊಂಡಿದ್ದರು. ಇದನ್ನೂ ಓದಿ:ಬೆಳೆದ ಬೆಳೆ ಮಾರಲು ರೈತನ ಹೊಸ ಐಡಿಯಾ – ಜಾಲತಾಣ ಬಳಸಿಕೊಂಡು ಕಲ್ಲಂಗಡಿ ಮಾರಾಟ

    ಪ್ರೊ.ಮಹೇಶ್ವರಯ್ಯ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದಾಗ, ಅಲ್ಲಿ ನಡೆಯುತ್ತಿದ್ದ ಆಂತರಿಕ ಜಗಳಗಳಿಗೆ ಕಡಿವಾಣ ಹಾಕುವ ಮೂಲಕ ಅನ್ಯ ರಾಜ್ಯಗಳಿಂದ ಬಂದಂತಹ ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ಉತ್ತಮ ವಾತಾವರಣ ನಿರ್ಮಿಸಿದ್ದರು. ಇದೀಗ ಪತ್ನಿ ಮತ್ತು ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

  • ಪಶು ವಿವಿಯಲ್ಲಿ ಕಿಂಗ್ ಫಿಶರ್ ಬಿಯರ್ ಬಾಕ್ಸ್ – ವಿಸಿಗೆ ಸಚಿವರಿಂದ ತರಾಟೆ

    ಪಶು ವಿವಿಯಲ್ಲಿ ಕಿಂಗ್ ಫಿಶರ್ ಬಿಯರ್ ಬಾಕ್ಸ್ – ವಿಸಿಗೆ ಸಚಿವರಿಂದ ತರಾಟೆ

    – ನೀವಿಲ್ಲಿ ಪಾಠ ಮಾಡ್ತಿರೋ ಅಥವಾ ಪಾರ್ಟಿ ಮಾಡ್ತಿರೋ

    ಬೀದರ್: ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಕಿಂಗ್ ಫಿಶರ್ ಬಿಯರ್ ನ  ಖಾಲಿ ಬಾಕ್ಸ್ ಗಳು ಪತ್ತೆಯಾಗಿವೆ. ಇದನ್ನು ಕಂಡು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಕೆಂಡಾಮಂಡಲರಾಗಿದ್ದು, ಉಪಕುಲಪತಿ ನಾರಾಯಣ ಸ್ವಾಮಿಯ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ.

    ಕಮಠಾಣಾ ಬಳಿಯ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಿಗಳ ವಿವಿಗೆ ಸಚಿವರು ದಿಢೀರ್ ಭೇಟಿ ನೀಡಿದ್ದ ವೇಳೆ ಕಿಂಗ್ ಫಿಶರ್ ಖಾಲಿ ಕಾಟನ್ ಬಾಕ್ಸ್ ಪತ್ತೆಯಾಗಿವೆ. ಈ ವೇಳೆ ಕಾಲೇಜು ಒಳಗಡೆ ಕಿಂಗ್ ಫಿಶರ್ ಬಾಕ್ಸ್ ಬಂದಿದ್ದು ಹೇಗೆ? ನೀವು ಪಾರ್ಟಿ ಮಾಡ್ತಿರಾ ಎಂದು ಉಪಕುಲಪತಿಯವರನ್ನು ಪ್ರಶ್ನಿಸಿದ್ದಾರೆ.

    ಪಶು ವಿವಿ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದು, ಕಿಂಗ್ ಫಿಶರ್ ಕಾಟನ್ ಬಾಕ್ಸ್ ಗಳನ್ನು ನೋಡಿ ಉಪಕುಲಪತಿ ನಾರಾಯಣ ಸ್ವಾಮಿಯವರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಇದಕ್ಕೆ ಉತ್ತರಿಸಿದ ವಿಸಿ ಬೇರೆ ವಸ್ತುಗಳನ್ನು ಪ್ಯಾಕ್ ಮಾಡುವಾಗ ಇಂತಹ ಬಾಕ್ಸ್‍ಗಳಲ್ಲೇ ಪ್ಯಾಕ್ ಮಾಡುತ್ತಾರೆ ಎಂದು ಉತ್ತರಿಸಿದ್ದಾರೆ.

    ಇಷ್ಟಕ್ಕೇ ಸುಮ್ಮನಾಗದ ಸಚಿವರು, ಕಾಲೇಜಿನಲ್ಲಿ ಕಿಂಗ್ ಫಿಶರ್ ಬಾಟಲ್ ಬಾಕ್ಸ್ ಬಂದಿದ್ದು ಹೇಗೆ ಎಂದು ಫುಲ್ ಗರಂ ಆಗಿದ್ದಾರೆ. ನೋಡಿ ಇದರ ಮೇಲೆ ಕಿಂಗ್ ಫಿಶರ್ ಮೈಲ್ಡ್ ಬಿಯರ್ ಎಂದು ಬರೆದಿದೆ. ನೀವು ಇಲ್ಲಿ ಪಾಠ ಮಾಡುತ್ತೀರೋ ಅಥವಾ ಪಾರ್ಟಿ ಮಾಡುತ್ತಿರೋ ಎಂದು ಪ್ರಶ್ನಿಸಿ ಕೆಂಡಾಮಂಡಲರಾಗಿದ್ದಾರೆ.

  • 150 ವೈದ್ಯಕೀಯ ವಿದ್ಯಾರ್ಥಿಗಳ ತಲೆ ಬೋಳಿಸಿ ರ‍್ಯಾಗಿಂಗ್‌

    150 ವೈದ್ಯಕೀಯ ವಿದ್ಯಾರ್ಥಿಗಳ ತಲೆ ಬೋಳಿಸಿ ರ‍್ಯಾಗಿಂಗ್‌

    ಲಕ್ನೋ: 150 ವೈದ್ಯಕೀಯ ಕಿರಿಯ ವಿದ್ಯಾರ್ಥಿಗಳನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತಲೆ ಬೋಳಿಸಿ ರ‍್ಯಾಗಿಂಗ್‌ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ಉತ್ತರ ಪ್ರದೇಶದ ಸೈಫೈ ಎಂಬ ನಗರದಲ್ಲಿರುವ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆದಿದ್ದು, 150ಕ್ಕೂ ಹೆಚು ವಿದ್ಯಾರ್ಥಿಗಳು ತಲೆ ಬೋಳಿಸಿ ಬಿಳಿ ಬಣ್ಣದ ಬಟ್ಟೆ ತೊಟ್ಟು ಹಿರಿಯ ವಿದ್ಯಾರ್ಥಿಗಳಿಗೆ ನಮಸ್ಕಾರ ಮಾಡುತ್ತಿರುವುದನ್ನು ವಿಡಿಯೋ ಮಾಡಲಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಘಟನೆ ಮಂಗಳವಾರ ನಡೆದಿದ್ದು, ಒಟ್ಟು ಮೂರು ವಿಡಿಯೋಗಳು ವೈರಲ್ ಆಗಿವೆ. ಮೊದಲನೇ ವಿಡಿಯೋದಲ್ಲಿ ವಿದ್ಯಾರ್ಥಿಗಳು ತಲೆ ಬೋಳಿಸಿಕೊಂಡು ಬಿಳಿ ಬಟ್ಟೆ ಧರಿಸಿ ಒಂದೇ ಸಾಲಿನಲ್ಲಿ ಓಡುತ್ತಿರುತ್ತಾರೆ. ನಂತರ ಎರಡನೇ ವಿಡಿಯೋದಲ್ಲಿ ಅವರು ಹಿರಿಯ ವಿದ್ಯಾರ್ಥಿಗಳಿಗೆ ತಲೆ ಭಾಗಿ ನಮಸ್ಕಾರ ಮಾಡುತ್ತಿರುವುದು ಕಂಡು ಬಂದಿದೆ. ಕೊನೆಯ ವಿಡಿಯೋದಲ್ಲಿ ಇದನ್ನು ಗಮನಿಸಿದ ಸಂಸ್ಥೆಯ ಸೆಕ್ಯುರಿಟಿ ಗಾರ್ಡ್ ಕೂಡ ಇದನ್ನು ನೋಡಿಕೊಂಡು ಏನೂ ಮಾಡದೇ ಸುಮ್ಮನೆ ನಿಂತಿರುವುದು ಕಂಡು ಬಂದಿದೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ರಾಜ್ ಕುಮಾರ್, ಸಂಸ್ಥೆಯು ರ‍್ಯಾಗಿಂಗ್‌  ತಡೆಯಲು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಯಾರಾದರು ರ್‍ಯಾಂಗ್ ಮಾಡಿದರೆ ವಿದ್ಯಾರ್ಥಿಗಳು ಅದರ ಬಗ್ಗೆ ವಿರೋಧಿ ಸಮಿತಿಗೆ ಅಥವಾ ಅವರ ವಾರ್ಡನ್ ಗಳಿಗೆ ದೂರು ನೀಡಬಹುದು. ಈ ಹಿಂದೆ ಇದೇ ರೀತಿಯ ಮಾಡಿದಕ್ಕೆ ಕೆಲ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

    ಈ ವಿಚಾರದಲ್ಲೂ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ರ‍್ಯಾಗಿಂಗ್‌ನಲ್ಲಿ ಭಾಗಿಯಾದ ಕೆಲ ವಿದ್ಯಾರ್ಥಿಗಳನ್ನು ಆಗಲೇ ಅಮಾನತು ಮಾಡಿದ್ದೇವೆ. ಜೂನಿಯರ್ ವಿದ್ಯಾರ್ಥಿಗಳು ಇದರ ಬಗ್ಗೆ ಅತಂಕ ಪಡಬೇಕಿಲ್ಲ ಎಂದು ಭರವಸೆ ನೀಡಿದ್ದಾರೆ. ಸೈಫೈ ಗ್ರಾಮವು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ತವರು ಗ್ರಾಮವಾಗಿದೆ.

    ಕಳೆದ ತಿಂಗಳು 14 ವರ್ಷದ ಹೈದರಾಬಾದ್ ಬಾಲಕನೊಬ್ಬ ತನ್ನ ಸಹಪಾಠಿಗಳು ರ್‍ಯಾಂಗ್ ಮಾಡಿದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೇ ರೀತಿ ಕಳೆದ ಮಾರ್ಚ್ ನಲ್ಲಿ ತಮಿಳುನಾಡಿನ ಇಬ್ಬರು ಕಾಲೇಜು ವಿದ್ಯಾರ್ಥಿಗಳು ತಮ್ಮ ಸಿನಿಯರ್ಸ್ ರ್‍ಯಾಂಗ್ ಮಾಡಿದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಭಾರತದಾದ್ಯಂತ ವಿದ್ಯಾರ್ಥಿಗಳು ಮತ್ತು ಸಂಸ್ಥೆಗಳು ನೀಡಿದ ರ್‍ಯಾಗಿಂಗ್ ದೂರುಗಳ ಸಂಖ್ಯೆ 2015 ರಲ್ಲಿ 423 ಇತ್ತು ಆದರೆ ಎರಡು ವರ್ಷಗಳ ನಂತರ 901 ಕ್ಕೆ ಏರಿದೆ ಎಂದು ಕಳೆದ ವರ್ಷ ಸಂಸತ್ತಿನಲ್ಲಿ ಅಂದಿನ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ.

  • ರಾಣಿ ಚನ್ನಮ್ಮ ವಿವಿ ಕುಲಪತಿಯನ್ನು ಹಿಡಿದು ನೂಕಾಡಿದ್ರು – ಪೀಠೋಪಕರಣ ಎತ್ತಿ ಎಸೆದ ಕೈ ಕಾರ್ಯರ್ತರು

    ರಾಣಿ ಚನ್ನಮ್ಮ ವಿವಿ ಕುಲಪತಿಯನ್ನು ಹಿಡಿದು ನೂಕಾಡಿದ್ರು – ಪೀಠೋಪಕರಣ ಎತ್ತಿ ಎಸೆದ ಕೈ ಕಾರ್ಯರ್ತರು

    ಬೆಳಗಾವಿ: ರಾಣಿಚನ್ನಮ್ಮ ವಿಶ್ವವಿದ್ಯಾಲಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಲಪತಿ ಶಿವಾನಂದ ಹೊಸಮನಿ ಅವರನ್ನು ಮುತ್ತಿಗೆ ಹಾಕಿ ನೂಕಾಡಿದ ಘಟನೆ ನಡೆದಿದೆ.

    ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡದ್ದಕ್ಕೆ ಕೋಪಗೊಂಡ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದು ಸುಣಗಾರ್ ಹಾಗೂ ಕೆಲವು ಬೆಂಬಲಿಗರು ಕುಲಪತಿ ಅವರನ್ನು ಮುತ್ತಿಗೆ ಹಾಕಿ ನೂಕಾಡಿದ್ದಾರೆ ಎನ್ನಲಾಗಿದೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಕುಲಪತಿ ಶಿವಾನಂದ ಹೊಸಮನಿ ಹಿಂದೇಟು ಹಾಕಿದ್ದಾರೆ. ವಿಶ್ವವಿದ್ಯಾಲಯಕ್ಕೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಾರ್ಯಕ್ರಮಕ್ಕೆ ಅಡ್ಡಿ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

    ಆಗಿದ್ದು ಏನು?
    ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ರೆಡ್ ಕ್ರಾಸ್ ಸಂಸ್ಥೆಯಿಂದ ಇಂದು ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಸ್ಥಳೀಯ ಕೆಲವು ನಾಯಕರಿಗೆ ಆಹ್ವಾನ ನೀಡರಲಿಲ್ಲ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದು ಸುಣಗಾರ್ ಹಾಗೂ ಕೆಲವು ಬೆಂಬಲಿಗರು ಕಾರ್ಯಕ್ರಮವನ್ನು ತಡೆದಿದ್ದಾರೆ.

    ಕುಲಪತಿ ಶಿವಾನಂದ ಹೊಸಮನಿ ಅವರೊಂದಿಗೆ ವಾಗ್ವಾದಕ್ಕೆ ಇಳಿದ ಕಾಂಗ್ರೆಸ್ ಕಾರ್ಯಕರ್ತರು, ಪೀಠೋಪಕರಣಗಳನ್ನು ಎತ್ತಿ ಬೀಸಾಡಿದ್ದಾರೆ. ಕೆಲವರು ಕಿಟಕಿ ಗಾಜು ಒಡೆದು ಪುಂಡಾಟ ಪ್ರದರ್ಶಿಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ವಿಶ್ವವಿದ್ಯಾಲಯದ ಅನೇಕ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಇತ್ತ ಕುಲಪತಿ ಶಿವಾನಂದ ಹೂಗಾರ ಅವರು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ರಕ್ಷಣೆಗೆ ನಿಲ್ಲಬೇಕಾಗಿತ್ತು. ಆದರೆ ಅವರು ಹಾಗೇ ಮಾಡದೇ ಗಲಾಟೆಯ ಕುರಿತು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.

    ವಿಶ್ವವಿದ್ಯಾಲಯದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೂ ಬಿಜೆಪಿ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಆದರೆ ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ಕೆಲವರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv