ನವದೆಹಲಿ: ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಗೆ (Jagdeep Dhankhar) ವಿಪಕ್ಷಗಳ ನಾಯಕರಿಂದ ಅವಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಮುಕ್ತವಾಗಿರಬೇಕು. ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳಾಗಿರಬೇಕು ಎಂದರು.
ಆಗಿದ್ದೇನು..?: ಸಂಸತ್ ಇತಿಹಾಸದಲ್ಲೇ ಗರಿಷ್ಠಮಟ್ಟದಲ್ಲಿ ಅಮಾನತು ಆಗಿರೋ ಸಂಸದರು ಪ್ರತಿಭಟನೆ ವೇಳೆ ಅಣಕು ಸಂಸತ್ ನಿರ್ವಹಿಸಿದರು. ಈ ಸಂದರ್ಭದಲ್ಲಿ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಉಪರಾಷ್ಟ್ರಪತಿಯೂ ಆಗಿರೋ ರಾಜ್ಯಸಭೆ ಚೇರ್ಮನ್ ಜಗದೀಪ್ ಧನ್ಕರ್‍ರನ್ನು ಅನುಕರಿಸಿ ಮಿಮಿಕ್ರಿ ಮಾಡಿದ್ದಾರೆ.
ನನ್ನ ಬೆನ್ನು ಮೂಳೆ ನೆಟ್ಟಗಿದೆ, ನಾನು ಸಾಕಷ್ಟು ಉದ್ದ ಇದ್ದೇನೆ ಎನ್ನುತ್ತಾ ಕಲ್ಯಾಣ್ ಬ್ಯಾನರ್ಜಿ, ಧನ್ಕರ್ ದೈಹಿಕ ಸಂರಚನೆ ಬಗ್ಗೆ ಗೇಲಿ ಮಾಡಿದ್ದಾರೆ. ವಿಪರ್ಯಾಸ ಅಂದ್ರೆ ಇದನ್ನು ನೋಡಿ ನಗುತ್ತಾ ರಾಹುಲ್ ಗಾಂಧಿ ಮೊಬೈಲ್‍ನಲ್ಲಿ ಶೂಟ್ ಮಾಡಿದ್ದಾರೆ. ಬರೀ ರಾಹುಲ್ ಮಾತ್ರ ಅಲ್ಲ, ಅಲ್ಲಿ ನೆರೆದಿದ್ದವರೆಲ್ಲಾ ಗೊಳ್ಳೆಂದು ನಕ್ಕಿದ್ದಾರೆ. ರಾಹುಲ್ ಸೇರಿ ವಿಪಕ್ಷಗಳ ಈ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಖುದ್ದು ಧನ್ಕರ್ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
ನವದೆಹಲಿ: ಸಂವಿಧಾನಿಕ ಹುದ್ದೆಯಲಿರುವ ವ್ಯಕ್ತಿಗಳಿಗೆ ಅಪಮಾನ ಮಾಡುವ ಪರಂಪರೆ ಮುಂದುವರಿದಿದೆ. ಸಂಸತ್ (Parliament) ಇತಿಹಾಸದಲ್ಲೇ ಗರಿಷ್ಠಮಟ್ಟದಲ್ಲಿ ಅಮಾನತು ಆಗಿರೋ ಸಂಸದರು ಪ್ರತಿಭಟನೆ ವೇಳೆ ಅಣಕು ಸಂಸತ್ ನಿರ್ವಹಿಸಿದರು. ಈ ಸಂದರ್ಭದಲ್ಲಿ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಉಪರಾಷ್ಟ್ರಪತಿಯೂ ಆಗಿರೋ ರಾಜ್ಯಸಭೆ ಚೇರ್ಮನ್ ಜಗದೀಪ್ ಧನ್ಕರ್ (Jagadeep Dhankar) ರನ್ನು ಅನುಕರಿಸಿ ಮಿಮಿಕ್ರಿ ಮಾಡಿದ್ದಾರೆ.
If the country was wondering why Opposition MPs were suspended, here is the reason…
TMC MP Kalyan Banerjee mocked the Honourable Vice President, while Rahul Gandhi lustily cheered him on. One can imagine how reckless and violative they have been of the House! pic.twitter.com/5o6VTTyF9C
ನನ್ನ ಬೆನ್ನು ಮೂಳೆ ನೆಟ್ಟಗಿದೆ, ನಾನು ಸಾಕಷ್ಟು ಉದ್ದ ಇದ್ದೇನೆ ಎನ್ನುತ್ತಾ ಕಲ್ಯಾಣ್ ಬ್ಯಾನರ್ಜಿ, ಧನ್ಕರ್ ದೈಹಿಕ ಸಂರಚನೆ ಬಗ್ಗೆ ಗೇಲಿ ಮಾಡಿದ್ದಾರೆ. ವಿಪರ್ಯಾಸ ಅಂದ್ರೆ ಇದನ್ನು ನೋಡಿ ನಗುತ್ತಾ ರಾಹುಲ್ ಗಾಂಧಿ (Rahul Gandhi) ಮೊಬೈಲ್‍ನಲ್ಲಿ ಶೂಟ್ ಮಾಡಿದ್ದಾರೆ. ಬರೀ ರಾಹುಲ್ ಮಾತ್ರ ಅಲ್ಲ, ಅಲ್ಲಿ ನೆರೆದಿದ್ದವರೆಲ್ಲಾ ಗೊಳ್ಳೆಂದು ನಕ್ಕಿದ್ದಾರೆ. ರಾಹುಲ್ ಸೇರಿ ವಿಪಕ್ಷಗಳ ಈ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಖುದ್ದು ಧನ್ಕರ್ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತೀವ್ರ ಆಕ್ರೋಶದ ಬೆನ್ನಲ್ಲೇ ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಶಿಗೆ ಆಹ್ವಾನ
ಮೇಲ್ಮನೆ ಕಲಾಪದಲ್ಲಿ ದಿಗ್ವಿಜಯ್ ಸಿಂಗ್ (Digvijay Singh) ಉದ್ದೇಶಿಸಿ ಮಾತನಾಡಿದ ಧನ್ಕರ್, ಇದು ನಿಜಕ್ಕೂ ನಾಚಿಕೆಗೇಡು. ಚೇರ್ಮನ್ ಹುದ್ದೆ, ಸ್ಪೀಕರ್ ಹುದ್ದೆಗೆ ಸಾಕಷ್ಟು ವೈರುಧ್ಯಗಳಿವೆ. ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳಬಹುದು. ಆದರೆ ನಿಮ್ಮ ಪಕ್ಷದ ಸೀನಿಯರ್ ಒಬ್ಬರು ಮತ್ತೊಂದು ಪಕ್ಷದ ವ್ಯಕ್ತಿಯ ವೀಡಿಯೋ ಮಾಡುತ್ತಾರೆ. ಅವರಿಗೆ ಸದ್ಬುದ್ದಿ ಬರಲಿ ಎಂದಿದ್ದಾರೆ.
ಬಿಜೆಪಿ ಟ್ವೀಟ್ ಮಾಡಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದೆ. ವಿಪಕ್ಷ ಸದಸ್ಯರನ್ನು ಏಕೆ ಸಸ್ಪೆಂಡ್ ಮಾಡಲಾಗಿದೆ ಎಂಬುದಕ್ಕೆ ಇದಕ್ಕೆ ಉತ್ತರ ಎಂದು ಬಿಜೆಪಿ ಹೇಳಿದೆ. ಧನ್ಕರ್ ಬಗ್ಗೆ ಕಾಂಗ್ರೆಸ್ ಗೇಲಿ ಇದೇ ಮೊದಲಲ್ಲ, ಕಳೆದ ವಾರ ಪ್ರಧಾನಿಗೆ ಧನ್ಕರ್ ನಮಸ್ಕರಿಸ್ತಿರೋ ವೀಡಿಯೋವನ್ನು ಕಾಂಗ್ರೆಸ್ ಹಂಚಿಕೊಂಡು ವ್ಯಂಗ್ಯ ಮಾಡಿತ್ತು. ಇದಕ್ಕೆ ಆಗಲೂ ಧನ್ಕರ್ ಆಕ್ರೋಶ ಹೊರಹಾಕಿದ್ರು.
ಬ್ಯೂನಸ್ ಐರಿಸ್: ಅರ್ಜೆಂಟೀನಾದ ಉಪಾಧ್ಯಕ್ಷೆ ಕ್ರಿಸ್ಟಿನಾ ಫೆರ್ನಾಂಡಿಸ್ ಡಿ ಕಿರ್ಚ್ನರ್ ಅವರನ್ನು ಗುಂಡಿಕ್ಕಿ ಕೊಲ್ಲಲು ವ್ಯಕ್ತಿಯೊಬ್ಬ ಯತ್ನಿಸಿದ ಅಚ್ಚರಿ ಘಟನೆ ನಡೆದಿದೆ.
ಘಟನೆ ವೀಡಿಯೋ ವೈರಲ್ ಆಗಿದೆ. ಕ್ರಿಸ್ಟಿನಾ ಅವರು ಕಾರಿನಿಂದ ಇಳಿದಾಗ ಅವರನ್ನು ಮಾತನಾಡಿಸಲು ಅನೇಕರು ಮುಂದಾಗುತ್ತಾರೆ. ಈ ವೇಳೆ ಸುತ್ತಲೂ ಅಪಾರ ಸಂಖ್ಯೆಯಲ್ಲಿ ಜನ ನೆರೆದಿರುತ್ತಾರೆ. ಜನಸಂದಣಿ ನಡುವೆ ಇದ್ದ ವ್ಯಕ್ತಿಯೊಬ್ಬ ಕ್ರಿಸ್ಟಿನಾ ಅವರ ಹತ್ತಿರಕ್ಕೆ ಬಂದು, ಅವರ ತಲೆಗೆ ಗನ್ ಗುರಿಯಿಟ್ಟು ಟ್ರಿಗರ್ ಒತ್ತುತ್ತಾನೆ. ಈ ವೇಳೆ ಗುಂಡು ಹಾರಿಲ್ಲ. ತಕ್ಷಣ ಎಚ್ಚೆತ್ತ ರಕ್ಷಣಾ ಸಿಬ್ಬಂದಿ, ಆ ವ್ಯಕ್ತಿಯನ್ನು ವಶಕ್ಕೆ ಪಡೆಯುತ್ತಾರೆ. ಅದೃಷ್ಟವಶಾತ್ ಕ್ರಿಸ್ಟಿನಾ ಅವರು ಅಪಾಯದಿಂದ ಪಾರಾಗಿದ್ದಾರೆ. ದಾಳಿಕೋರನು ಬ್ರೆಜಿಲ್ ಮೂಲದ 35 ವರ್ಷದ ವ್ಯಕ್ತಿ ಎಂದು ಅಧಿಕಾರಿಗಳು ತಿಳಿಸಿದ್ದು, ತಕ್ಷಣ ಆತನನ್ನು ಬಂಧಿಸಿ ಗನ್ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಾಫಿ ದೈತ್ಯ ಸ್ಟಾರ್‌ಬಕ್ಸ್‌ಗೆ ಭಾರತ ಮೂಲದ ಲಕ್ಷ್ಮಣ್ CEO ಆಗಿ ನೇಮಕ
ಘಟನೆ ಬಗ್ಗೆ ಅರ್ಜೆಂಟೀನಾ ಅಧ್ಯಕ್ಷ ಆಲ್ಬರ್ಟೊ ಫೆರ್ನಾಂಡಿಸ್ ಆತಂಕ ವ್ಯಕ್ತಪಡಿಸಿದ್ದಾರೆ. ಬಂದೂಕಿನಲ್ಲಿ ಐದು ಗುಂಡುಗಳು ತುಂಬಿದ್ದವು ಎಂದು ಹೇಳಿರುವ ಅವರು, ಅರ್ಜೆಂಟೀನಾ ಪ್ರಜಾಪ್ರಭುತ್ವಕ್ಕೆ ಮರಳಿದ ನಂತರ ನಾವು ಎದುರಿಸಿದ ಗಂಭೀರ ಘಟನೆ ಇದಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
2007 ಮತ್ತು 2015ರ ನಡುವೆ ಎರಡು ಅವಧಿಗೆ ಅಧ್ಯಕ್ಷರಾಗಿ ಫೆರ್ನಾಂಡೀಸ್ ಡಿ ಕಿರ್ಚ್ನರ್ ಅರ್ಜೆಂಟೀನಾ ಸೇವೆ ಸಲ್ಲಿಸಿದ್ದರು. ಅರ್ಜೆಂಟೀನಾದಲ್ಲಿ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆ ಪರಿಣಾಮವಾಗಿ ಈ ದಾಳಿ ನಡೆದಿದೆ ಎನ್ನಲಾಗಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸಂಸತ್‌ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಸಾಧಿಸಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಸಂಸತ್ ಭವನದಲ್ಲಿ ನಡೆಯಿತು. ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ (71) ಅವರು 528 ಮತಗಳನ್ನು ಪಡೆಯುವ ಮೂಲಕ ಗೆಲುವು ದಾಖಲಿಸಿದ್ದಾರೆ. ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವಾ(80) ಅವರು 182 ಮತಗಳನ್ನಷ್ಟೇ ಪಡೆದು 346 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಇದನ್ನೂ ಓದಿ: ಟಿಕ್‍ಟಾಕ್ ಪ್ರಿಯರಿಗೆ ಶುಭ ಸುದ್ದಿ – ಭಾರತದಲ್ಲಿ ಮತ್ತೆ ಆ್ಯಪ್ ಆರಂಭ?
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶೇಕಡ 93ರಷ್ಟು ಮತದಾನವಾಗಿತ್ತು. 50ಕ್ಕೂ ಅಧಿಕ ಸಂಸದರು ಮತದಾನದಿಂದ ದೂರ ಉಳಿದಿದ್ದರು. ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು 780 ಸಂಸದರಿದ್ದು, ಸಂಜೆ 5 ಗಂಟೆ ವೇಳೆಗೆ 725 ಮಂದಿ ಮತದಾನ ಮಾಡಿದ್ದರು.
23 ಲೋಕಸಭಾ ಸದಸ್ಯರು ಸೇರಿ ಟಿಎಂಸಿಯ 39 ಸಂಸದರು ಮತದಾನ ಮಾಡಲಿಲ್ಲ. ಬಿಜೆಪಿಯು ಲೋಕಸಭೆಯಲ್ಲಿ ಸಂಪೂರ್ಣ ಬಹುಮತ ಹೊಂದಿದ್ದು, ರಾಜ್ಯಸಭೆಯಲ್ಲಿ 91 ಸದಸ್ಯರ ಬಲವಿದೆ. ಹೀಗಾಗಿ ಧನಕರ್ ಸುಲಭ ಗೆಲುವು ದಾಖಲಿಸಿದ್ದಾರೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಇದನ್ನೂ ಓದಿ: 75ನೇ ಸ್ವಾತಂತ್ರ್ಯೋತ್ಸವಕ್ಕೆ ಅಮೆರಿಕದ ಗಾಯಕಿ ಮೇರಿ ಮಿಲಬೆನ್ ಅತಿಥಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಹಾಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಅವಧಿ ಅಂತ್ಯವಾಗ್ತಿರುವ ಹಿನ್ನೆಲೆಯಲ್ಲಿ ಇಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಸಂಸತ್ ಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೂ ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ 788 ಸಂಸದರು ಮತ ಹಕ್ಕು ವಿನಿಯೋಗಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:
ಎನ್‌ಡಿಎಗೆ ಸ್ಪಷ್ಟ ಮೆಜಾರಿಟಿ ಇರುವ ಕಾರಣ ಜಗದೀಪ್ ಧನ್ಕರ್ ಉಪರಾಷ್ಟ್ರಪತಿ ಆಗೋದು ಬಹುತೇಕ ಖಚಿತವಾಗಿದೆ. ಜಗದೀಪ್ ಧನ್ಕರ್‌ಗೆ ಎನ್‌ಡಿಎಯೇತರ ಪಕ್ಷಗಳಾದ ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಎಐಎಡಿಎಂಕೆ, ಬಿಜೆಡಿ, ಆರ್‌ಎಲ್‌ಜೆಪಿ ಬೆಂಬಲ ಪ್ರಕಟಿಸಿವೆ. ಹಿಗಾಗಿ 510ಕ್ಕೂ ಹೆಚ್ಚು ಮತಗಳು ಧನ್ಕರ್‌ಗೆ ಲಭಿಸುವ ಸಾಧ್ಯತೆಯಿದೆ.
ಸೋಲುವುದು ಗೊತ್ತಿದ್ದರೂ ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಸ್ಪರ್ಧೆ ಮಾಡಿದ್ದಾರೆ. ವಿಪಕ್ಷಗಳ ಅಭ್ಯರ್ಥಿಯಾದ ಮಾರ್ಗರೇಟ್ ಆಳ್ವಾಗೆ ಕಾಂಗ್ರೆಸ್, ಎನ್‌ಸಿಪಿ, ಜೆಎಂಎಂ, ಡಿಎಂಕೆ, ಟಿಆರ್‌ಎಸ್, ಎಎಪಿ ಬೆಂಬಲ ಘೋಷಿಸಿವೆ. ಟಿಎಂಸಿ ಮತದಾನದಿಂದಲೇ ದೂರ ಉಳಿದಿದೆ. ಆಗಸ್ಟ್ 10ರಂದು ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಮುಗಿಯಲಿದೆ. ಆಗಸ್ಟ್ 11 ರಂದು ನೂತನ ಉಪರಾಷ್ಟ್ರಪತಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಲಕ್ನೋ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡಿದ್ದ ಬಿಎಸ್‌ಪಿ ಈಗ ಉಪರಾಷ್ಟ್ರಪತಿ ಚುನಾವಣೆಯಲ್ಲೂ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಬೆಂಬಲ ನೀಡಲು ನಿರ್ಧರಿಸಿದೆ. ಈ ಬಗ್ಗೆ ಪಕ್ಷದ ವರಿಷ್ಠೆ, ಮಾಜಿ ಮುಖ್ಯಮಂತ್ರಿ ಮಾಯಾವತಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಇಂದು ಟ್ವಿಟ್ ಮಾಡಿರವ ಅವರು, ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡದ ಕಾರಣ ಚುನಾವಣೆ ನಡೆದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈಗ ಅದೇ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆಯೂ ನಡೆಯಲಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ವಿಭೂತಿ ಹಚ್ಚಿ ಮುರುಘಾಶ್ರೀಗಳಿಂದ ಲಿಂಗಧಾರಣೆ
ದೊಡ್ಡ ಸಾರ್ವಜನಿಕ ಹಿತಾಸಕ್ತಿ ಮತ್ತು ಪಕ್ಷದ ಸ್ವಂತ ಚಳುವಳಿಯ ದೃಷ್ಟಿಯಿಂದ, ಉಪರಾಷ್ಟ್ರಪತಿ ಹುದ್ದೆಯ ಚುನಾವಣೆಯಲ್ಲಿ ಜಗದೀಪ್ ಧನಕರ್ ಅವರಿಗೆ ಬೆಂಬಲ ನೀಡಲು ಬಿಎಸ್‌ಪಿ ನಿರ್ಧರಿಸಿದೆ ಮತ್ತು ನಾನು ಇಂದು ಔಪಚಾರಿಕವಾಗಿ ಘೋಷಿಸುತ್ತಿದ್ದೇನೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಈ ಒಂದು ಸಣ್ಣ ತಪ್ಪಿನಿಂದ ಚಿನ್ನದ ಪದಕ ಕೈತಪ್ಪಿತು – ಪಿ.ವಿ.ಸಿಂಧು ವಿಷಾದ
ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಜಗದೀಪ್ ಧನಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದರೆ, ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಿಸಿವೆ. ಆಗಸ್ಟ್ 6ರಂದು ಈ ಚುನಾವಣೆ ನಡೆಯಲಿದೆ. ಬಿಎಸ್‌ಪಿ ಲೋಕಸಭೆಯಲ್ಲಿ 10 ಮತ್ತು ರಾಜ್ಯಸಭೆಯಲ್ಲಿ ಓರ್ವ ಸದಸ್ಯರನ್ನು ಹೊಂದಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಬಿಜೆಪಿ ನೇತೃತ್ವದ ಎನ್‍ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವಾಗ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಸುವ ಮೊದಲು ಧನಕರ್ ವಿವಿಧ ಪಕ್ಷದ ಸಂಸದರನ್ನು ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದರು.
ಉಪರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ.
ದೆಹಲಿ: ಬಿಜೆಪಿ ನೇತೃತ್ವದ ಎನ್‍ಡಿಎ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಿದೆ.
ಜಗದೀಪ್ ಧನಕರ್ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದಾರೆ. ಇದೀಗ ಮುಂಬರುವ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಹೆಸರನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ರೇವಡಿ ಹಂಚಿ ಮತ ಗಳಿಸುವ ಸಂಸ್ಕೃತಿಯನ್ನು ತೊಡೆದುಹಾಕಬೇಕು: ಮೋದಿ
ಜಗದೀಪ್ ಧನಕರ್ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದರು. ಕೆಲದಿನಗಳ ಹಿಂದೆ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ಬಳಿಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಭೇಟಿಯಾಗಿ ಸುಮಾರು 40 ನಿಮಿಷಗಳ ಮಾತುಕತೆ ನಡೆಸಿದ್ದರು. ಇದೀಗ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಉತ್ತರಾಧಿಕಾರಿಯನ್ನು ನಿರ್ಧರಿಸುವ ಚುನಾವಣೆಗೆ ಜುಲೈ 5 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಯುವಕನನ್ನು ಪ್ರೀತಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಮುಸ್ಲಿಂ ಯುವತಿ
Live Tv
[brid partner=56869869 player=32851 video=960834 autoplay=true]
ಡೆಹ್ರಾಡೂನ್: ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ಆರೋಪಿಸುತ್ತಾರೆ. ಶಿಕ್ಷಣ ಕೇಸರೀಕರಣಗೊಳಿಸುವುದರಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶ್ನಿಸಿದ್ದಾರೆ.
ದೇಶದ ಜನರು ತಮ್ಮ ?ವಸಾಹತುಶಾಹಿ ಮನಸ್ಥಿತಿ’ಯನ್ನು ಬಿಟ್ಟು ತಮ್ಮ ಸ್ವಂತ ಅಸ್ಮಿತೆ ಬಗ್ಗೆ ಹೆಮ್ಮೆ ಪಡುವುದನ್ನು ಕಲಿಯಬೇಕಿದೆ. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಿದರು. ಹೀಗಾಗಿ ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕøತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ನಮ್ಮ ರಾಷ್ಟ್ರ ಬೆಳವಣಿಗೆಯನ್ನು ನಿಧಾನಗೊಳಿಸಿತು. ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಹೆಚ್ಚಿನ ಜನಸಂಖ್ಯೆಯ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: 3 ಮಿಲಿಯನ್ ಬ್ಯಾರಲ್ ಕಚ್ಚಾ ತೈಲ ಆಮದಿಗೆ ರಷ್ಯಾದೊಂದಿಗೆ ಭಾರತ ಒಪ್ಪಂದ
ನಾವು ನಮ್ಮ ಪರಂಪರೆ, ಸಂಸ್ಕೃತಿ, ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಾವು ನಮ್ಮ ಬೇರುಗಳಿಗೆ ಹಿಂತಿರುಗಬೇಕು. ನಾವು ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ಧಿಕ್ಕರಿಸಬೇಕು. ನಮ್ಮ ಮಕ್ಕಳಿಗೆ ಭಾರತೀಯ ಅಸ್ಮಿತೆ ಬಗ್ಗೆ ಹೆಮ್ಮೆ ಪಡುವಂತೆ ಮಾಡಬೇಕು. ನಾವು ಸಾಧ್ಯವಾದಷ್ಟು ಭಾರತೀಯ ಭಾಷೆಗಳನ್ನು ಕಲಿಯಬೇಕು. ನಾವು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಗ್ರಂಥಗಳನ್ನು ತಿಳಿದುಕೊಳ್ಳಲು ಸಂಸ್ಕೃತವನ್ನು ಕಲಿಯಬೇಕು ಎಂದು ತಿಳಿಸಿದ್ದಾರೆ.
ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ನಿಮ್ಮ ಮಾತೃಭಾಷೆ ನಿಮ್ಮ ದೃಷ್ಟಿಯಂತಿದೆ. ಆದರೆ ವಿದೇಶಿ ಭಾಷೆಯ ನಿಮ್ಮ ಜ್ಞಾನವು ಕನ್ನಡಕವಿದ್ದಂತೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ಹೊಸ ಶಿಕ್ಷಣ ನೀತಿಯ ಕೇಂದ್ರವಾಗಿದೆ. ಇದು ಮಾತೃಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ ಎಂದಿದ್ದಾರೆ.
ನಾವು ಶಿಕ್ಷಣವನ್ನು ಕೇಸರಿಕರಣಗೊಳಿಸುತ್ತೇವೆ ಎಂದು ಆರೋಪಿಸುತ್ತಾರೆ. ಆದರೆ ಕೇಸರಿಕರಣದಲ್ಲಿ ತಪ್ಪೇನಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ ಕುಟುಂಬಕಂ (ಜಗತ್ತೇ ಒಂದು ಕುಟುಂಬ) ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಅಡಕವಾಗಿರುವ ತತ್ವಶಾಸ್ತ್ರಗಳು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ಸೂತ್ರಗಳಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ
ಮೂಲ ಬೇರಿನ ಬಾಂಧವ್ಯ ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಭಾರತ ಉತ್ತಮ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆಯ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿತು. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಇದು ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿದ ಯೋಧ ರಾಜ ಅಶೋಕನ ದೇಶ ಎಂದು ಬಣ್ಣಿಸಿದ್ದಾರೆ.
ಪ್ರಾಚೀನ ಭಾರತೀಯ ವಿಶ್ವವಿದ್ಯಾನಿಲಯಗಳಾದ ನಳಂದಾ ಮತ್ತು ತಕ್ಷಶಿಲಾದಲ್ಲಿ ಅಧ್ಯಯನ ಮಾಡಲು ವಿಶ್ವದ ಎಲ್ಲೆಡೆಯಿಂದ ಜನರು ಬರುತ್ತಿದ್ದ ಕಾಲವೊಂದಿತ್ತು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ. ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬಿದ್ದೇವೆ ಎಂದು ಹೇಳಿದ್ದಾರೆ.
ನವದೆಹಲಿ: ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಉನ್ನತಮಟ್ಟದ ಸಭೆ ನಡೆಸಿದ್ದು, ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್‍ರನ್ನು ಉಪರಾಷ್ಟ್ರಪತಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಇದನ್ನೂ ಓದಿ: ಗುಲಾಂ ನಬಿ ಆಜಾದ್ ಕಾರ್ಯ ನೆನೆದು ಭಾವುಕರಾದ ಪ್ರಧಾನಿ ಮೋದಿ
ಬಿಜೆಪಿ ವತಿಯಿಂದ ಗುಲಾಂ ನಬಿ ಆಜಾದ್‍ರನ್ನು ರಾಜ್ಯಸಭೆಗೆ ನಾಮಿನೇಟ್ ಮಾಡಿ, ಉಪರಾಷ್ಟ್ರಪತಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡುವ ಬಗ್ಗೆ ತಯಾರಿಗಳು ನಡೆದಿವೆ ಎಂದು ಮೂಲಗಳಿಂದ ವರದಿಯಾಗಿದ್ದು, ಫೆಬ್ರವರಿ ತಿಂಗಳಲ್ಲಿ ಪಂಚರಾಜ್ಯ ಚುನಾವಣೆ ಬಳಿಕ ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ಭಾರತಕ್ಕೆ ಆಹ್ವಾನಿಸಿದ ಪ್ರಧಾನಿ ಮೋದಿ
ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣೆಯ ಎಲೆಕ್ಟ್ರಾಲ್ ಕಾಲೇಜಿನಲ್ಲಿ ಮಾಡಬಹುದಾದ ಮಾರ್ಪಾಡುಗಳ ಬಗ್ಗೆ ಮೋದಿ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳವ ಸಾಧ್ಯತೆಗಳಿದ್ದು, ಇದಾದ ಬಳಿಕವೇ ಬಿಜೆಪಿ, ಪ್ರಾದೇಶಿಕ ಪಕ್ಷಗಳ ಮೇಲೆ ಎಷ್ಟರ ಮಟ್ಟಿಗೆ ಅವಲಂಬಿಸಲಿದೆ ಎಂಬುದು ಗೊತ್ತಾಗಲಿದೆ. ರಾಷ್ಟ್ರಪತಿ ಆಯ್ಕೆಗೆ ಶಾಸಕರು, ಸಂಸದರು ಮತ ಚಲಾಯಿಸಬೇಕಾಗುತ್ತದೆ. ಆದರೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸದರು ಮಾತ್ರ ಮತ ಹಾಕಲಿದ್ದಾರೆ. ಇದನ್ನೂ ಓದಿ: ಏನು ಹೇಳುತ್ತೇನೋ ಅದನ್ನೇ ಮಾಡುತ್ತೇನೆ, ವಿಶ್ವಾಸ ಉಳಿಸಿಕೊಳ್ಳುತ್ತೇನೆ: ರಾಹುಲ್ ಗಾಂಧಿ