Tag: vice presidential election

  • ಉಪರಾಷ್ಟ್ರಪತಿ ಚುನಾವಣೆ | ಮೋದಿ ಸಮ್ಮುಖದಲ್ಲಿ NDA ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ

    ಉಪರಾಷ್ಟ್ರಪತಿ ಚುನಾವಣೆ | ಮೋದಿ ಸಮ್ಮುಖದಲ್ಲಿ NDA ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ

    ನವದೆಹಲಿ: ಸೆ.9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ (CP Radhakrishnan) ಅವರಿಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಇದು ಎನ್‌ಡಿಎ ಕೂಟದ ಒಗ್ಗಟಿನ ಪ್ರದರ್ಶನವೂ ಆಗಿದೆ.

    ಮಹಾರಾಷ್ಟ್ರದ ಹಾಲಿ ರಾಜ್ಯಪಾಲರು ಆಗಿರುವ ರಾಧಾಕೃಷ್ಣನ್‌ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದು ಬೆಂಬಲ ಸೂಚಿಸಿದ್ದಾರೆ. ಒಟ್ಟು 4 ಸೆಟ್‌ ಅರ್ಜಿಯನ್ನು ಅಲ್ಲಿಸಲಾಗಿದ್ದು, ಮೊದಲ ಸೆಟ್‌ನಲ್ಲಿ ದಾಖಲೆ ಸಲ್ಲಿಸುವ ವೇಳೆ ಮೋದಿ ಮುಖ್ಯ ಪ್ರತಿಪಾದಕರಾಗಿದ್ದರು.

    CP Radhakrishnan Narendra Modi

    ನಾಮಪತ್ರ ಸಲ್ಲಿಕೆಗೂ ಮುನ್ನ ರಾಧಾಕೃಷ್ಣನ್‌ ಅವರು ಸಂಸತ್‌ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆ ನಮಸ್ಕರಿಸಿದರು. ಜೊತೆಗೆ ಮಹಾನ್‌ ವ್ಯಕ್ತಿಗಳ ಪುತ್ಥಳಿಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ

    ಕಳೆದ ಭಾನುವಾರ ಸಿ.ಪಿ ರಾಧಾಕೃಷ್ಣನ್‌ ಅವರನ್ನ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿತ್ತು. ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಜೆ.ಪಿ. ನಡ್ಡಾ ಅವರು ಎನ್‌ಡಿಎ ಒಮ್ಮತದ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಯಾರು ಸಿಪಿ ರಾಧಾಕೃಷ್ಣನ್‌?
    * ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್, ಕಳೆದ ವರ್ಷ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
    * 68 ವರ್ಷ ವಯಸ್ಸಿನ ಅವರು ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024 ರ ನಡುವೆ ಅವರು ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು.
    * 2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ನಾಲ್ಕು ತಿಂಗಳೊಳಗೆ, ರಾಧಾಕೃಷ್ಣನ್ ಅವರು ರಾಜ್ಯದ ಎಲ್ಲಾ 24 ಜಿಲ್ಲೆಗಳಿಗೆ ಪ್ರಯಾಣಿಸಿ ನಾಗರಿಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದರು.
    * ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನ ಸಂಘದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ಇವರು 1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
    * ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದಾಗ(2004-2007) ಅವರು 93 ದಿನಗಳ ಕಾಲ 19 ಸಾವಿರ ಕಿಮೀ ‘ರಥ ಯಾತ್ರೆ’ಯನ್ನು ಕೈಗೊಂಡಿದ್ದರು. ಭಾರತದ ಎಲ್ಲಾ ನದಿಗಳ ಜೋಡಣೆ, ಭಯೋತ್ಪಾದನೆ ನಿರ್ಮೂಲನೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಮತ್ತು ಮಾದಕ ದ್ರವ್ಯಗಳ ಪಿಡುಗನ್ನು ಎದುರಿಸುವುದು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಯಾತ್ರೆಯನ್ನು ಆಯೋಜಿಸಲಾಗಿತ್ತು. ಅವರು ವಿಭಿನ್ನ ಕಾರಣಗಳಿಗಾಗಿ ಇನ್ನೂ ಎರಡು ಪಾದಯಾತ್ರೆಗಳನ್ನು ಕೈಗೊಂಡಿದ್ದರು.
    * ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ರಾಧಾಕೃಷ್ಣನ್ ಅವರು ತಮಿಳುನಾಡಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಗೌರವಾನ್ವಿತ ಹೆಸರನ್ನು ಹೊಂದಿದ್ದಾರೆ.
    *1957 ರಲ್ಲಿ ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ಅವರು ಕೊಯಮತ್ತೂರಿನ ಚಿದಂಬರಂ ಕಾಲೇಜಿನಿಂದ ಬಿಬಿಎ ಪದವಿ ಪಡೆದಿದ್ದಾರೆ. ಒಬ್ಬ ಉತ್ಸಾಹಿ ಕ್ರೀಡಾಪಟುವಾಗಿರುವ ಇವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಚಾಂಪಿಯನ್ ಆಗಿದ್ದರು. ಅಷ್ಟೇ ಅಲ್ಲದೇ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದರು.
    * ಸಂಸದರಾಗಿದ್ದಾಗ ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಹಣಕಾಸು ಮತ್ತು ಸಾರ್ವಜನಿಕ ಉದ್ಯಮಗಳಿಗೆ ಸಂಬಂಧಿಸಿದ ಹಲವಾರು ಸಮಿತಿಗಳಿಗೆ ಕೊಡುಗೆ ನೀಡಿದ್ದಾರೆ.
    * ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (2004) ಸಂಸದೀಯ ನಿಯೋಗದ ಭಾಗವಾಗಿದ್ದರು ಮತ್ತು ತೈವಾನ್‌ಗೆ ತೆರಳಿದ್ದ ಮೊದಲ ಭಾರತೀಯ ನಿಯೋಗದ ಭಾಗವಾಗಿದ್ದರು. ಇದನ್ನೂ ಓದಿ: ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ – ಹಲ್ಲೆ ಖಂಡಿಸಿದ ಅತಿಶಿ

  • ಉಪರಾಷ್ಟ್ರಪತಿ ಚುನಾವಣೆ – ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ

    ಉಪರಾಷ್ಟ್ರಪತಿ ಚುನಾವಣೆ – ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ

    ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ಹಿನ್ನಲೆ ಇಂಡಿಯಾ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಆಂಧ್ರಪ್ರದೇಶ ಮೂಲದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ (Sudershan Reddy) ಅವರನ್ನು ಅಭ್ಯರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಘೋಷಿಸಿದ್ದಾರೆ.

    ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರು ಭಾರತದ ಸುಪ್ರೀಂಕೋರ್ಟ್ನ ಮಾಜಿ ನ್ಯಾಯಮೂರ್ತಿಯಾಗಿದ್ದರು (Former Supreme Court judge). ಅವರು 2008 ರಿಂದ 2011ರವರೆಗೆ ಸುಪ್ರೀಂಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮುಂಚೆ, ಅವರು ಆಂಧ್ರಪ್ರದೇಶ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್

    ನ್ಯಾಯಮೂರ್ತಿ ರೆಡ್ಡಿ ಅವರು, ತಮ್ಮ ವೃತ್ತಿಜೀವನದಲ್ಲಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ವಿಶೇಷವಾಗಿ ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳು, ಮತ್ತು ಸಂವಿಧಾನಿಕ ವಿಷಯಗಳಿಗೆ ಸಂಬಂಧಿಸಿದ ಆದೇಶ ನೀಡಿದ್ದಾರೆ. ಅವರ ಕಾನೂನು ಜ್ಞಾನ ಮತ್ತು ನ್ಯಾಯಾಂಗದ ಸೇವೆಯಿಂದಾಗಿ ಅವರು ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ: ನೇಮಕಾತಿ ಪರೀಕ್ಷೆಗಳ ಏಕರೂಪ ಶುಲ್ಕ; ಪ್ರಾಥಮಿಕ ಹಂತಕ್ಕೆ 100 ರೂ., ಮುಖ್ಯ ಪರೀಕ್ಷೆ ಉಚಿತ

    ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಉಪರಾಷ್ಟ್ರಪತಿ ಚುನಾವಣೆಯು ಸೈದ್ಧಾಂತಿಕ ಯುದ್ಧವಾಗಿದೆ. ಎಲ್ಲಾ ವಿರೋಧ ಪಕ್ಷಗಳು ನಮ್ಮ ಜೊತೆಗಿವೆ. ಪ್ರಜಾಪ್ರಭುತ್ವ ಮೌಲ್ಯಗಳು ದಾಳಿಗೆ ಒಳಗಾಗಿವೆ. ಎಲ್ಲಾ ವಿರೋಧ ಪಕ್ಷಗಳು ಒಂದೇ ಹೆಸರಿಗೆ ಒಪ್ಪಿಗೆ ನೀಡಿರುವುದು ನನಗೆ ಸಂತೋಷ ತಂದಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಸಾಧನೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.

    ಆಯ್ಕೆ ಬಗ್ಗೆ ಮಾತನಾಡಿದ ನ್ಯಾ.ಸುದರ್ಶನ್ ರೆಡ್ಡಿ, ಎನ್‌ಡಿಎ ಸೇರಿದಂತೆ ಎಲ್ಲಾ ಪಕ್ಷಗಳು ನನ್ನನ್ನು ಬೆಂಬಲಿಸುವಂತೆ ನಾನು ಮನವಿ ಮಾಡುತ್ತೇನೆ. ವಿರೋಧ ಪಕ್ಷದ ಅಭ್ಯರ್ಥಿಯಾಗಿ, ಭಾರತದ 60% ರಷ್ಟು ಪ್ರತಿನಿಧಿಸುವುದಾಗಿ ತಿಳಿಸಿ ಮುಂಬರುವ ಚುನಾವಣೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ

    ಮೂಲಗಳ ಪ್ರಕಾರ, ಆಂಧ್ರಪ್ರದೇಶದ ಎನ್‌ಡಿಎ ಮಿತ್ರಪಕ್ಷಗಳಾದ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಮೇಲೆ ಒತ್ತಡ ಹೇರಲು ಪ್ರತಿಪಕ್ಷಗಳು ನ್ಯಾಯಮೂರ್ತಿ ರೆಡ್ಡಿ ಅವರನ್ನು ಆಯ್ಕೆ ಮಾಡಿಕೊಂಡಿವೆ. ಎನ್‌ಡಿಎ ಆಯ್ಕೆಯ ಹಿಂದೆ ಈಗಾಗಲೇ ತಮ್ಮ ಬಲವನ್ನು ಹಾಕಿದ್ದ ಬಿಆರ್‌ಎಸ್ ಮತ್ತು ವೈಎಸ್‌ಆರ್‌ಸಿಪಿಯಂತಹ ಇತರ ತೆಲುಗು ಪಕ್ಷಗಳು ಸಹ ತಮ್ಮ ಆಯ್ಕೆಗಳನ್ನು ಪುನರ್ ವಿಮರ್ಶಿಸುತ್ತಿರಬಹುದು.

    ಬಿಜೆಪಿ ಎನ್‌ಡಿಎ ಅಭ್ಯರ್ಥಿಯಾಗಿ ಸಿಪಿ ರಾಧಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ. ಇಂದು ನಡೆದ ಸಂಸದೀಯ ಸಭೆಯಲ್ಲಿ ಎಲ್ಲ ಮೈತ್ರಿ ಪಕ್ಷದ ಸಂಸದರು ಹಾಗೂ ವಿರೋಧ ಪಕ್ಷಗಳು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಈ ನಡುವೆ ಇಂಡಿಯಾ ಒಕ್ಕೂಟ ತನ್ನ ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಘೋಷಿಸಿದೆ.

  • ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9ರಂದು ಚುನಾವಣೆ – ಚುನಾವಣಾ ಆಯೋಗ ಘೋಷಣೆ

    ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9ರಂದು ಚುನಾವಣೆ – ಚುನಾವಣಾ ಆಯೋಗ ಘೋಷಣೆ

    ನವದೆಹಲಿ: ಜಗದೀಪ್‌ ಧನಕರ್‌ (Jagdeep Dhankhar) ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್‌ 9ರಂದು ಚುನಾವಣೆ (Vice Presidential Election )ನಡೆಯಲಿದೆ.

    ಕೇಂದ್ರ ಚುನಾವಣಾ ಆಯೋಗ (Election Commission)ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಇದೇ ಆಗಸ್ಟ್‌ 7ರಂದು ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್‌ 21ರಂದು ಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಗಸ್ಟ್‌ 22ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

    ಆಗಸ್ಟ್‌ 25ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಇರಲಿದೆ. ಸೆಪ್ಟೆಂಬರ್‌ 9ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಎಫ್‌-35 ಖರೀದಿಸಲ್ಲ ಎಂದ ಭಾರತ – ತೆರಿಗೆ ಸಮರ ಆರಂಭಿಸಿದ ಟ್ರಂಪ್‌ಗೆ ಶಾಕ್‌

    Jagdeep Dhankhar narendra modi 1

    ಜಗದೀಪ್‌ ಧನಕರ್‌ ರಾಜೀನಾಮೆ ನೀಡಿದ್ದು ಯಾಕೆ?
    74 ವರ್ಷದ ಧನಕರ್‌ ಅವರು ಅನಾರೋಗ್ಯ ಕಾರಣ ನೀಡಿ ಜುಲೈ 21ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಈ ವೇಳೆ ಅವಕಾಶಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿದ್ದರು.

    ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರಾವಧಿ 2027ರ ಆಗಸ್ಟ್ 10ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಬಿಹಾರ ಸರ್ಕಾರದಿಂದ ಬಂಪರ್‌ ಗಿಫ್ಟ್‌ – ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಡಬಲ್‌

    Jagdeep Dhankhar 2

    ಜನತಾ ದಳದ ಅಭ್ಯರ್ಥಿಯಾಗಿ 1991ರಲ್ಲಿ ರಾಜಕೀಯ ಜೀವನ ಆರಂಭಸಿದ ಧನಕರ್‌ ಆ ಬಳಿಕ ಕಾಂಗ್ರೆಸ್‌ ಸೇರಿದ್ದರು. ನಂತರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಕೆಲಸ ನಿರ್ವಹಿಸುತ್ತಿದ್ದಾಗಲೇ ಬಿಜೆಪಿ ನಾಯಕತ್ವದ ಗಮನ ಸೆಳೆದ ಅವರು 2019ರಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ನೇಮಕಗೊಂಡರು. 2022ರಲ್ಲಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಇನ್ನು ಸರಿಸುಮಾರು 2 ವರ್ಷಗಳ ಕಾಲ ಉಪರಾಷ್ಟ್ರಪತಿ ಅವಧಿ ಬಾಕಿ ಇದ್ದರೂ ಧನಕರ್ ಆರೋಗ್ಯದ ಕಾರಣದಿಂದ ರಾಜೀನಾಮೆ ನೀಡಿದ್ದಾರೆ.

    ಉಪರಾಷ್ಟ್ರಪತಿ ಆಯ್ಕೆ ಹೇಗೆ ನಡೆಯುತ್ತದೆ?
    ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು. ಇದನ್ನೂ ಓದಿ: ಆ.1 ರಿಂದ ಹೊಸ UPI ನಿಯಮಗಳು ಜಾರಿಗೆ – ಏನದು ರೂಲ್ಸ್‌?

    ಪಕ್ಷಗಳ ವಿಪ್ ಅಗತ್ಯವಿಲ್ಲದೆ ಗೌಪ್ಯ ಮತಪತ್ರದ ಮೂಲಕ ಮತದಾನ ನಡೆಯುತ್ತದೆ. ರಾಷ್ಟ್ರಪತಿ ಚುನಾವಣೆಯಂತೆ ರಾಜ್ಯಗಳ ವಿಧಾನಸಭೆ ಶಾಸಕ ರಿಗೆ ಮತದಾನದ ಅವಕಾಶವಿಲ್ಲ. ಏಕಮತದಾನ ವರ್ಗಾವಣೆ ವಿಧಾನದಲ್ಲಿ ಪ್ರತಿಯೊಬ್ಬ ಮತದಾರ ಅಭ್ಯರ್ಥಿಗಳನ್ನು ಪ್ರಾಶಸ್ಯದ ಕ್ರಮದಲ್ಲಿ ಶ್ರೇಣೀಕರಿಸುತ್ತಾರೆ. ಅವರ ಪ್ರಾಶಸ್ಯವನ್ನು ಸಂಖ್ಯೆಗಳ ರೂಪದಲ್ಲಿ ಗುರುತಿಸುತ್ತಾರೆ. (ಮೊದಲ ಪ್ರಾಶಸ್ಯಕ್ಕೆ 1, 2ನೇ ಪ್ರಾಶಸ್ಯಕ್ಕೆ 2, ಇತ್ಯಾದಿ.) ಮತಪತ್ರವು ಮಾನ್ಯವಾಗಿರಲು ಮೊದಲ ಪ್ರಾಶಸ್ಯವನ್ನು ಗುರುತಿಸುವುದು ಕಡ್ಡಾಯವಾಗಿದೆ. ನಂತರದ ಆದ್ಯತೆಗಳು ಐಚ್ಛಿಕವಾಗಿರುತ್ತವೆ. ಎಣಿಕೆ ವೇಳೆ ಎಲ್ಲ ಅಭ್ಯರ್ಥಿಗಳಿಗೆ ಸಿಗುವ ಮೊದಲ ಪ್ರಾಶಸ್ಯದ ಮತಗಳನ್ನು ಆರಂಭಿಕವಾಗಿ ಎಣಿಕೆ ಮಾಡಲಾಗುತ್ತದೆ. ಮೊದಲ ಪ್ರಾಶಸ್ಯದ ಮತಗಳ ಎಣಿಕೆಯಲ್ಲಿ ಬಹುಮತ ದೊರೆಯದಿದ್ದಲ್ಲಿ 2ನೇ ಪ್ರಾಶಸ್ಯದ ಮತದಾನವನ್ನು ಪರಿಗಣಿಸಲಾಗುತ್ತದೆ. ಹೀಗೆಯೇ ಬಹುಮತ ಬರುವವರೆಗೂ ಮುಂದುವರಿಯುತ್ತದೆ.

  • ಜಗದೀಪ್‌ ಧನಕರ್‌ ರಾಜೀನಾಮೆ – ಉಪ ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗ

    ಜಗದೀಪ್‌ ಧನಕರ್‌ ರಾಜೀನಾಮೆ – ಉಪ ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗ

    ನವದೆಹಲಿ: ಅನಾರೋಗ್ಯ ಕಾರಣ ನೀಡಿ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ (Jagdeep Dhankhar) ರಾಜೀನಾಮೆ ನೀಡಿದ 2 ದಿನಗಳ ನಂತರ, ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ (Election Commission) ಶುರು ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

    ಆಯೋಗದ ಪ್ರಕಟಣೆಯಲ್ಲಿ ಏನಿದೆ?
    ಭಾರತದ ಚುನಾವಣಾ ಆಯೋಗವು, ವಿಧಿ 324ರ ಅಡಿಯಲ್ಲಿ, ಭಾರತದ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ (Vice Presidential Election) ನಡೆಸುವ ಅಧಿಕಾರವನ್ನು ಹೊಂದಿದೆ. ಭಾರತದ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆಯನ್ನು ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ಕಾಯ್ದೆ, 1952 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು, ಅಂದ್ರೆ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ನಿಯಮಗಳು, 1974ರ ಮೂಲಕ ನಿಯಂತ್ರಿಸಲಾಗುತ್ತದೆ.

    ಅದರಂತೆ ಭಾರತೀಯ ಚುನಾವಣಾ ಆಯೋಗವು 2025ರ ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಿದೆ. ಈ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡ ಬಳಿಕ, ಚುನಾವಣಾ ವೇಳಾಪಟ್ಟಿಯನ್ನ ಆದಷ್ಟು ಬೇಗ ಘೋಷಿಸಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

    74 ವರ್ಷದ ಧನಕರ್‌ ಅವರು ಅನಾರೋಗ್ಯ ಕಾರಣ ನೀಡಿ ಸೋಮವಾರ (ಜು.21) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಈ ವೇಳೆ ಅವಕಾಶಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿದ್ದರು.

    ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರಾವಧಿ 2027ರ ಆಗಸ್ಟ್ 10ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.

  • ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಆಯ್ಕೆ

    ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಆಯ್ಕೆ

    ನವದೆಹಲಿ: ಸಂಸತ್‌ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್‌ ಗೆಲುವು ಸಾಧಿಸಿದ್ದಾರೆ.

    ಬೆಳಿಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಸಂಸತ್ ಭವನದಲ್ಲಿ ನಡೆಯಿತು. ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ (71) ಅವರು 528 ಮತಗಳನ್ನು ಪಡೆಯುವ ಮೂಲಕ ಗೆಲುವು ದಾಖಲಿಸಿದ್ದಾರೆ. ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವಾ(80) ಅವರು 182 ಮತಗಳನ್ನಷ್ಟೇ ಪಡೆದು 346 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಇದನ್ನೂ ಓದಿ: ಟಿಕ್‍ಟಾಕ್ ಪ್ರಿಯರಿಗೆ ಶುಭ ಸುದ್ದಿ – ಭಾರತದಲ್ಲಿ ಮತ್ತೆ ಆ್ಯಪ್ ಆರಂಭ?

    ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶೇಕಡ 93ರಷ್ಟು ಮತದಾನವಾಗಿತ್ತು. 50ಕ್ಕೂ ಅಧಿಕ ಸಂಸದರು ಮತದಾನದಿಂದ ದೂರ ಉಳಿದಿದ್ದರು. ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು 780 ಸಂಸದರಿದ್ದು, ಸಂಜೆ 5 ಗಂಟೆ ವೇಳೆಗೆ 725 ಮಂದಿ ಮತದಾನ ಮಾಡಿದ್ದರು.

    23 ಲೋಕಸಭಾ ಸದಸ್ಯರು ಸೇರಿ ಟಿಎಂಸಿಯ 39 ಸಂಸದರು ಮತದಾನ ಮಾಡಲಿಲ್ಲ. ಬಿಜೆಪಿಯು ಲೋಕಸಭೆಯಲ್ಲಿ ಸಂಪೂರ್ಣ ಬಹುಮತ ಹೊಂದಿದ್ದು, ರಾಜ್ಯಸಭೆಯಲ್ಲಿ 91 ಸದಸ್ಯರ ಬಲವಿದೆ. ಹೀಗಾಗಿ ಧನಕರ್‌ ಸುಲಭ ಗೆಲುವು ದಾಖಲಿಸಿದ್ದಾರೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಇದನ್ನೂ ಓದಿ: 75ನೇ ಸ್ವಾತಂತ್ರ್ಯೋತ್ಸವಕ್ಕೆ ಅಮೆರಿಕದ ಗಾಯಕಿ ಮೇರಿ ಮಿಲಬೆನ್‌ ಅತಿಥಿ

    Live Tv
    [brid partner=56869869 player=32851 video=960834 autoplay=true]