ಕಳೆದ ಕೆಲವು ದಿನಗಳಿಂದ ಕತ್ರಿನಾ ಕೈಫ್ (Katrina Kaif) ತಾಯಿಯಾಗುತ್ತಿರುವ ಬಗ್ಗೆ ವದಂತಿ ಹಬ್ಬಿತ್ತು. ಅಷ್ಟೇ ಅಲ್ಲದೇ ಮುಂದಿನ ತಿಂಗಳೇ ಮಗು ಆಗಮನದ ಕುರಿತಾಗಿಯೂ ಸುದ್ದಿಯಾಗಿತ್ತು. ವದಂತಿಗೆ ತೆರೆ ಬಿದ್ದಿದೆ.
ಇದೀಗ ತಮ್ಮ ಪ್ರೆಗ್ನೆನ್ಸಿಯನ್ನು ಕತ್ರಿನಾ ಖಚಿತಪಡಿಸಿದ್ದಾರೆ. ತುಂಬು ಗರ್ಭಿಣಿ ಕತ್ರಿನಾ ಕೈಫ್ ಇದೀಗ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ನಟ ವಿಕ್ಕಿ ಕೌಶಲ್‌ರನ್ನು (Vicky Kaushal) ಕತ್ರಿನಾ 2021ರಲ್ಲಿ ಮದುವೆಯಾಗಿದ್ದರು. ಇದೀಗ ಸ್ಟಾರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಸಂತಸವನ್ನ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಬೇಬಿ ಬಂಪ್ (Baby Bump) ಫೋಟೋಶೂಟ್‌ನ ಫೋಟೋವನ್ನ ಕೈಯಲ್ಲಿ ಹಿಡಿದು ಪೋಸ್ಟ್ ಮಾಡಿದ್ದಾರೆ.
ಫೋಟೋ ಜೊತೆ ಸ್ಟಾರ್ ದಂಪತಿ “ನಮ್ಮ ಜೀವನದ ಹೊಸ ಅಧ್ಯಾಯವನ್ನು ತುಂಬಿದ ಹೃದಯಗಳೊಂದಿಗೆ ಆರಂಭಿಸುವ ಹಾದಿಯಲ್ಲಿ ನಾವಿದ್ದೇವೆ” ಎಂದು ಹೇಳುವ ಮೂಲಕ ಖುಷಿ ಕ್ಷಣವನ್ನ ಹಂಚಿಕೊಂಡಿದ್ದಾರೆ.
ಬಾಲಿವುಡ್ ಸ್ಟಾರ್‌ಗಳಾದ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದಂಪತಿ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಆದಾಗ್ಯೂ, ಕತ್ರಿನಾ ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮಗು ಅಕ್ಟೋಬರ್-ನವೆಂಬರ್‌ನಲ್ಲಿ ಜನಿಸಲಿದೆ ಎಂದು ಮೂಲಗಳು ದೃಢಪಡಿಸಿವೆ.
ಕತ್ರಿನಾ ಗರ್ಭಧಾರಣೆಯ ಬಗ್ಗೆ ಹಲವು ತಿಂಗಳುಗಳಿಂದ ಊಹಾಪೋಹಗಳು ಹರಡುತ್ತಿದ್ದವು. ಆದರೆ, ದಂಪತಿ ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
ಬ್ಯಾಡ್ ನ್ಯೂಜ್ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕತ್ರಿನಾ ಕೈಫ್ ಗರ್ಭಧಾರಣೆಯ ವದಂತಿಯ ಬಗ್ಗೆ ವಿಕ್ಕಿ ಕೌಶಲ್ ಅವರನ್ನು ಪ್ರಶ್ನಿಸಲಾಯಿತು. ಈ ಬಗ್ಗೆ ಒಳ್ಳೆಯ ಸುದ್ದಿ ಬಂದರೆ, ನಾವು ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬಾ ಸಂತೋಷಪಡುತ್ತೇವೆ. ಆದರೆ ಸದ್ಯಕ್ಕೆ ಊಹಾಪೋಹಗಳಲ್ಲಿ ಯಾವುದೇ ಸತ್ಯವಿಲ್ಲ. ಅಲ್ಲಿಯವರೆಗೆ ಬ್ಯಾಡ್ ನ್ಯೂಜ್ ಚಿತ್ರವನ್ನು ಆನಂದಿಸಿ, ನಾವು ಒಳ್ಳೆಯ ಸುದ್ದಿಯೊಂದಿಗೆ ಖಂಡಿತ ನಿಮ್ಮ ಮುಂದೆ ಬರುತ್ತೇವೆ ಎಂದು ತಿಳಿಸಿದ್ದಾರೆ.
ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ 2021 ರಲ್ಲಿ ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಬರ್ವಾರಾದ ಸುಂದರವಾದ ಸ್ಥಳದಲ್ಲಿ ವಿವಾಹವಾದರು. ಕತ್ರಿನಾ-ವಿಕ್ಕಿ ಅವರ ವಿವಾಹದಲ್ಲಿ ಆಪ್ತರು ಹಾಜರಿದ್ದರು. ಇದನ್ನೂ ಓದಿ: ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
ನೈಜ ಕಥೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಸಿನಿಮಾ ಮಾಡಲು ಅಕ್ಷಯ್ ಕುಮಾರ್ ಮತ್ತು ವಿಕ್ಕಿ ಕೌಶಲ್ ನಡುವೆ ಪೈಪೋಟಿ ನಡೆಯುತ್ತಿದೆ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿತ್ತು. ಇದು ಅಕ್ಷಯ್ ಪತ್ನಿ ಟ್ವಿಂಕಲ್ ಖನ್ನಾ ಗಮನಕ್ಕೂ ಬಂದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿ ಫೇಕ್ ಸುದ್ದಿ ಎಂದಿದ್ದಾರೆ. ಈ ಸಿನಿಮಾಗಾಗಿ ಇಬ್ಬರೂ ಫೈಟ್ ಮಾಡ್ತಿಲ್ಲ. ಅಕ್ಷಯ್ ಮತ್ತು ವಿಕ್ಕಿ ತಾವು ಒಪ್ಪಿಕೊಂಡಿರುವ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರೆಡ್ಡಿ ಮಗನ ಜೊತೆ ಶ್ರೀಲೀಲಾ ಡ್ಯುಯೆಟ್- ‘ಜೂನಿಯರ್’ ಚಿತ್ರದ ಸಾಂಗ್ ಔಟ್
ಪಾಕ್‌ಗೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಮೂಲಕ ಭಾರತೀಯ ಸೇನೆ ತಕ್ಕ ಪಾಠ ಕಲಿಸುತ್ತಿದೆ. ಇದನ್ನೇ ಸಿನಿಮಾ ಮಾಡಲು ಬಾಲಿವುಡ್ ನಿರ್ಮಾಪಕರಲ್ಲಿ ಪೈಪೋಟಿ ನಡೆಯುತ್ತಿದೆ. ಈ ವೇಳೆ, ಅಕ್ಷಯ್ ಮತ್ತು ವಿಕ್ಕಿ ಸಿನಿಮಾ ಮಾಡಲು ಕಿತ್ತಾಡುತ್ತಿದ್ದಾರೆ ಎಂಬ ಸುದ್ದಿ ಫೇಕ್ ಎಂದು ಕ್ಲ್ಯಾರಿಟಿ ನೀಡಿದ್ದಾರೆ ಟ್ವಿಂಕಲ್ ಖನ್ನಾ.
ಹೌಸ್‌ಫುಲ್ 5, ಜಾಲಿ ಎಲ್‌ಎಲ್‌ಬಿ 3, ವೆಲ್‌ಕಮ್ ಟು ದಿ ಜಂಗಲ್, ಕಣ್ಣಪ್ಪ ಸೇರಿದಂತೆ ಹಲವು ಚಿತ್ರಗಳು ಟ್ವಿಂಕಲ್ ಖನ್ನಾ ಕೈಯಲ್ಲಿವೆ. ವಿಕ್ಕಿ ಕೌಶಲ್ ಛಾವಾ ಸಕ್ಸಸ್ ಬಳಿಕ ಲವ್ & ವಾರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
‘ಪುಷ್ಪ 2′ (Pushpa 2) ಸಕ್ಸಸ್ ಬಳಿಕ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಛಾವಾ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ವಿಕ್ಕಿ ಕೌಶಲ್ ಜೊತೆ ಅಮೃತಸರ (Amritsar) ಗೋಲ್ಡನ್ ಟೆಂಪಲ್‌ಗೆ (Golden Temple) ನಟಿ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ನಮ್ಮ ಸುತ್ತ ಒಳ್ಳೆಯ ಸ್ನೇಹಿತರಿರೋದು ಮುಖ್ಯ: ಚರ್ಚೆಗೆ ಗ್ರಾಸವಾಯ್ತು ಪವಿತ್ರಾ ಗೌಡ ಪೋಸ್ಟ್
ನಟಿ ರಶ್ಮಿಕಾ ಅವರು ಕಾಲು ನೋವಿನಿಂದ ಕೊಂಚ ಚೇತರಿಕೆ ಕಂಡಿದ್ದಾರೆ. ‘ಛಾವಾ’ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ಕೂಡ ನಡೆಯುತ್ತಿದೆ. ಸಿನಿಮಾ ರಿಲೀಸ್‌ಗೂ ಮುನ್ನವೇ ತಂಡದ ಜೊತೆ ನಟಿ ಗೋಲ್ಡನ್ ಟೆಂಪಲ್ ಭೇಟಿ ಕೊಟ್ಟಿದ್ದಾರೆ. ಕೆಲ ಕಾಲ ಸಮಯ ಕಳೆದಿದ್ದಾರೆ.
ಇನ್ನೂ ರಶ್ಮಿಕಾ ಬಣ್ಣದ ಬದುಕಿನಲ್ಲಿ ಮೊದಲ ಬಾರಿಗೆ ಐತಿಹಾಸಿಕ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅದುವೇ ‘ಛಾವಾ’ ಸಿನಿಮಾ. ಮೊದಲ ಬಾರಿಗೆ ಮಹಾರಾಣಿಯ ಪಾತ್ರಕ್ಕೆ ಶ್ರೀವಲ್ಲಿ ಜೀವ ತುಂಬಿದ್ದಾರೆ. ಅವರ ಮೊದಲ ಹಿಸ್ಟೋರಿಕಲ್ ಬಿಗ್ ಬಜೆಟ್ ಸಿನಿಮಾ ಆಗಿರೋ ಕಾರಣ ಈ ಚಿತ್ರದ ಮೇಲೆ ಫ್ಯಾನ್ಸ್ಗೆ ಭಾರೀ ನಿರೀಕ್ಷೆಯಿದೆ.
‘ಛಾವಾ’ ಸಿನಿಮಾದಲ್ಲಿ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ಕೌಶಲ್ ನಿಭಾಯಿಸಿದ್ದಾರೆ. ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದೆ. ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ಯಾವ ರೀತಿ ನಿರ್ವಹಿಸುತ್ತಿದ್ದರು ಎಂಬುದು ಕಥೆಯ ಹೈಲೈಟ್ ಆಗಿದೆ. ಇಲ್ಲಿ ವಿಕ್ಕಿ ಕೌಶಲ್ ರಶ್ಮಿಕಾ ನಾಯಕಿಯಾಗಿದ್ದಾರೆ. ಇದೇ ಫೆ.14ರಂದು ಸಿನಿಮಾ ರಿಲೀಸ್ ಆಗಲಿದೆ.
ರಶ್ಮಿಕಾ ಮಂದಣ್ಣ ಅವರು ಹೀರೋಗಳ ಪಾಲಿಗೆ ಲಕ್ಕಿ ನಟಿ. ಅವರು ನಟಿಸಿದ ಸಿನಿಮಾ ಫ್ಲಾಪ್ ಆಗಿದ್ದಕ್ಕಿಂತ ಸೂಪರ್ ಸಕ್ಸಸ್ ಕಂಡಿರೋದೆ ಜಾಸ್ತಿ. ಹಾಗಾಗಿ ರಶ್ಮಿಕಾ ಸಿನಿಮಾದಲ್ಲಿ ನಟಿಸಿದ್ದಾರೆ ಎಂದರೆ ಆ ಸಿನಿಮಾ ಬಿಗ್ ಸಕ್ಸಸ್ ಕಾಣಲಿದ ಎಂಬುದು ಸಿನಿಪಂಡಿತರ ಲೆಕ್ಕಚಾರ. ಈಗಾಗಲೇ ಪುಷ್ಪ, ಅನಿಮಲ್, ಪುಷ್ಪ 2 ಈ ಸಿನಿಮಾ ಭರ್ಜರಿ ಸಕ್ಸಸ್ ಕಂಡಿದೆ. ಸಿನಿಮಾದ ಲುಕ್, ಟ್ರೈಲರ್, ಸಾಂಗ್ಸ್ ಪ್ರೇಕ್ಷಕರ ಗಮನ ಸೆಳೆದಿದೆ.
ಇನ್ನೂ ತಮ್ಮ ಕಾಲಿಗೆ ನೋವಿನ ನಡುವೆಯೂ ಕೂಡ ಸಿನಿಮಾ ಪ್ರಚಾರಕ್ಕೆ ನಟಿ ಸಾಥ್ ನೀಡುತ್ತಿದ್ದಾರೆ. ಕುಂಟುತ್ತಲೇ ಸಮಾರಂಭಕ್ಕೆ ಆಗಮಿಸಿ ಈ ಸಿನಿಮಾ ತಮಗೆಷ್ಟು ಸ್ಪೆಷಲ್ ಅನ್ನೋದನ್ನು ಅವರು ತಿಳಿಸಿದ್ದಾರೆ. ಮೊದಲ ಐತಿಹಾಸಿಕ ಸಿನಿಮಾ ಆಗಿರೋದ್ರಿಂದ ನಟಿ ಹೆಚ್ಚು ಗಮನ ಕೊಡುತ್ತಿದ್ದಾರೆ. ಹಾಗಾಗಿ ರಶ್ಮಿಕಾ ನಟಿಸಿರುವ ‘ಛಾವಾ’ ಭವಿಷ್ಯ ಏನಾಗಲಿದೆ ಎಂದು ಕಾದುನೋಡಬೇಕಿದೆ.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಛಾವಾ’ (Chhaava) ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಇತ್ತೀಚೆಗೆ ಅವರು ಜಿಮ್‌ನಲ್ಲಿ ಕಾಲಿಗೆ ಏಟು ಮಾಡಿಕೊಂಡಿದ್ದು, ಅದನ್ನು ಲೆಕ್ಕಿಸದೇ ‘ಛಾವಾ’ ಚಿತ್ರದ ಪ್ರಚಾರಕ್ಕೆ ನಟಿ ಸಾಥ್ ನೀಡುತ್ತಿದ್ದಾರೆ. ಈ ವೇಳೆ, ಸಿನಿಮಾ ಸಮಾರಂಭಕ್ಕೆ ವ್ಹೀಲ್‌ಚೇರ್‌ನಲ್ಲಿ ಬಂದ ರಶ್ಮಿಕಾಗೆ ವಿಕ್ಕಿ ಕೌಶಲ್ ಆರೈಕೆ ಮಾಡಿದ್ದಾರೆ. ಇದನ್ನೂ ಓದಿ:ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ ವಾಸುದೇವನ್
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ನಟನೆಯ ‘ಛಾವಾ’ ಸಿನಿಮಾದ ಪ್ರಚಾರ ಕೆಲಸ ಭರದಿಂದ ನಡೆಯುತ್ತಿದೆ. ಇನ್ನೂ ಮೊದಲ ಬಾರಿಗೆ ಐತಿಹಾಸಿಕ ಸಿನಿಮಾದಲ್ಲಿ ನಟಿಸಿರುವ ಹಿನ್ನೆಲೆ ನಟಿಯ ಕೆರಿಯರ್‌ನಲ್ಲಿ ಈ ಚಿತ್ರ ವಿಶೇಷವಾಗಿದೆ. ಹಾಗಾಗಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರೂ ಲೆಕ್ಕಿಸದೇ ಸಿನಿಮಾ ಪ್ರಮೋಷನ್‌ಗೆ ಆಗಮಿಸಿದ್ದಾರೆ. ರಶ್ಮಿಕಾ ಕುಳಿತಿದ್ದ ವ್ಹೀಲ್‌ಚೇರ್ ಅನ್ನು ವಿಕ್ಕಿ ಕೌಶಲ್ ತಳ್ಳಿಕೊಂಡು ಬಂದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ವಿಕ್ಕಿ ನಡೆ ನೋಡಿ ಅನೇಕರು ಜೆಂಟಲ್ ಮ್ಯಾನ್ ಎಂದು ಹಾಡಿ ಹೊಗಳಿದ್ದಾರೆ.
ಇನ್ನೂ ‘ಛಾವಾ’ ಸಿನಿಮಾದಲ್ಲಿ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ಕೌಶಲ್ ನಿಭಾಯಿಸಿದ್ದಾರೆ. ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದೆ. ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ಯಾವ ರೀತಿ ನಿರ್ವಹಿಸುತ್ತಿದ್ದರು ಎಂಬುದು ಕಥೆಯ ಹೈಲೈಟ್ ಆಗಿದೆ.
ಇನ್ನೂ ಛತ್ರಪತಿ ಸಂಭಾಜಿ ಮಹಾರಾಜನ ಪತ್ನಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಪತಿಯ ಹೋರಾಟಕ್ಕೆ ಸಾಥ್ ಕೊಡುವ ಪತ್ನಿಯಾಗಿ ನಟಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಫೆ.14ರಂದು ರಿಲೀಸ್ ಆಗಲಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.
‘ಅನಿಮಲ್’, ‘ಪುಷ್ಪ 2’ ಯಶಸ್ಸಿನ ಬಳಿಕ ‘ಛಾವಾ’ (Chhaava) ಸಿನಿಮಾದ ಪ್ರಚಾರ ಕಾರ್ಯದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಬ್ಯುಸಿಯಾಗಿದ್ದಾರೆ. ಈ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದುವ ಬಗ್ಗೆ ನಟಿ ಮಾತನಾಡಿದ್ದಾರೆ. ಟಾಪ್ ನಟಿ ಹ್ಯಾಪಿ ಟು ರಿಟೈರ್ ಎಂದಿರೋದು ಸಹಜವಾಗಿ ಶ್ರೀವಲ್ಲಿ ಫ್ಯಾನ್ಸ್‌ಗೆ ಶಾಕ್ ಆಗಿದೆ. ಇದನ್ನೂ ಓದಿ:ರುದ್ರ ಗರುಡ ಪುರಾಣ: ಶಿವರಾಜ್ ಕೆ.ಆರ್ ಪೇಟೆಗೆ ಸಿಕ್ಕಿದ್ದು ಬೇರೆಯದ್ದೇ ಪಾತ್ರ!
ಇತ್ತೀಚೆಗೆ ಜಿಮ್ ಮಾಡುವಾಗ ನಟಿಯ ಕಾಲಿಗೆ ಪೆಟ್ಟಾಗಿದ್ದರೂ ಲೆಕ್ಕಿಸದೇ ‘ಛಾವಾ’ ಚಿತ್ರದ ಟ್ರೈಲರ್ ಕಾರ್ಯಕ್ರಮಕ್ಕೆ ಬಂದು ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಈವೆಂಟ್‌ನಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ರಶ್ಮಿಕಾ, ಇದು ಒಂದು ಗೌರವ. ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ದಕ್ಷಿಣದಿಂದ ಬಂದ ಹುಡುಗಿಯಾಗಿ ನಾನು ಈ ಜೀವಿತಾವಧಿಯಲ್ಲಿ ಕೇಳಬಹುದಾದ ಅತ್ಯಂತ ವಿಶೇಷ ಮತ್ತು ವಿಭಿನ್ನವಾದ ಪಾತ್ರವಾಗಿದೆ. ಇದಾದ ನಂತರ, ನಾನು ನಿವೃತ್ತಿ (Retirement) ಹೊಂದಿದರೂ ಬೇಸರವಿಲ್ಲ ಎಂದಿದ್ದಾರೆ. ನಾನು ಸಾಮಾನ್ಯವಾಗಿ ಅಳುವುದಿಲ್ಲ. ಆದರೆ ಈ ಟ್ರೈಲರ್ ನನ್ನನ್ನು ಕಣ್ಣೀರಾಗಿಸಿದೆ ಎಂದಿದ್ದಾರೆ.
ಯೇಸುಬಾಯಿ ಪಾತ್ರ ನನ್ನ ಪಾಲಿಗೆ ವಿಶೇಷವಾಗಿದೆ. ಈ ಸಿನಿಮಾದ ನಂತರ ನಿವೃತ್ತಿ ಹೊಂದಲು ನನಗೆ ಖುಷಿ ಇದೆ ಎಂದು ನಿರ್ದೇಶಕ ಲಕ್ಷ್ಮಣ್‌ಗೆ ಹೇಳಿದ್ದೇನೆ ಎಂದು ವೇದಿಕೆಯಲ್ಲಿ ನಟಿ ಹಂಚಿಕೊಂಡಿದ್ದಾರೆ. ಈ ಪಾತ್ರಕ್ಕೆ ಸೆಲೆಕ್ಟ್ ಮಾಡಿದ ಚಿತ್ರತಂಡಕ್ಕೆ ನಟಿ ಧನ್ಯವಾದ ತಿಳಿಸಿದ್ದಾರೆ.
ಇನ್ನೂ ರಶ್ಮಿಕಾಗೆ ಇನ್ನೂ 28 ವರ್ಷ. ವೃತ್ತಿರಂಗದಲ್ಲಿ ಟಾಪ್ 1 ನಟಿಯಾಗಿ ಬೇಡಿಕೆಯಿದೆ. ಹೀಗಿರುವಾಗ ಕ್ರೇಜ್ ಇರುವಾಗಲೇ ನಟಿ ನಿವೃತ್ತಿ ಬಗ್ಗೆ ಮಾತನಾಡಿರೋದು ನಟಿಯ ಫ್ಯಾನ್ಸ್‌ಗೆ ಬೇಸರವಾಗಿದೆ. ಸದ್ಯ ಬಿಗ್ ಬಜೆಟ್ ಸಿನಿಮಾಗಳು ಅವರ ಕೈಯಲ್ಲಿರುವ ಕಾರಣ, ಮುಂದಿನ ವರ್ಷಗಳಲ್ಲಿ ವಿವಾಹದ ಬಳಿಕ ಅವರು ನಟನೆಯಿಂದ ದೂರವಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.
ಇನ್ನೂ ವಿಕ್ಕಿ ಕೌಶಲ್ ಅವರು ಮರಾಠ ಸಾಮ್ರಾಟನಾಗಿ ಅಬ್ಬರಿಸಿದ್ದಾರೆ. ಚಿತ್ರದಲ್ಲಿ ವಿಕ್ಕಿ ಪತ್ನಿ ಮಹಾರಾಣಿಯಾಗಿ ರಶ್ಮಿಕಾ ಮಿಂಚಿದ್ದಾರೆ. ‘ಛಾವಾ’ ಸಿನಿಮಾ ಇದೇ ಫೆ.14ರಂದು ರಿಲೀಸ್ ಆಗಲಿದೆ.
ಬಾಲಿವುಡ್ ನಟ ವಿಕ್ಕಿ ಕೌಶಲ್ (Vicky Kaushal) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಛಾವಾ’ (Chhaava) ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್‌ನಲ್ಲಿ ವಿಕ್ಕಿ ಮರಾಠ ಸಾಮ್ರಾಟನಾಗಿ ಅಬ್ಬರಿಸಿದ್ದಾರೆ. ಕನ್ನಡತಿ ರಶ್ಮಿಕಾ ಮಹಾರಾಣಿಯ ಗೆಟಪ್‌ನಲ್ಲಿ ಮಿಂಚಿದ್ದಾರೆ. ಇದನ್ನೂ ಓದಿ:ಜೀವ ಉಳಿಸಿದ ಆಟೋ ಚಾಲಕನನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ ಸೈಫ್ ಅಲಿ ಖಾನ್
‘ಛಾವಾ’ ಸಿನಿಮಾದ ಟ್ರೈಲರ್‌ನಲ್ಲಿ ಯುದ್ಧದ ದೃಶ್ಯಗಳು ಹೈಲೆಟ್ ಆಗಿದೆ. ವಿಕ್ಕಿ ಕೌಶಲ್ ಆ್ಯಕ್ಷನ್ ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ಕೌಶಲ್ ನಿಭಾಯಿಸಿದ್ದಾರೆ. ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದೆ. ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ಯಾವ ರೀತಿ ನಿರ್ವಹಿಸುತ್ತಿದ್ದರು ಎಂಬುದು ಕಥೆಯ ಹೈಲೈಟ್ ಆಗಿದೆ. ಇದರ ಸಣ್ಣ ಝಲಕ್ ಅನ್ನು ಟ್ರೈಲರ್ ಮೂಲಕ ಚಿತ್ರತಂಡ ರಿವೀಲ್ ಮಾಡಿದೆ.
ಇನ್ನೂ ಛತ್ರಪತಿ ಸಂಭಾಜಿ ಮಹಾರಾಜನ ಪತ್ನಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಪತಿಯ ಹೋರಾಟಕ್ಕೆ ಸಾಥ್ ಕೊಡುವ ಪತ್ನಿಯಾಗಿ ನಟಿ ಕಾಣಿಸಿಕೊಂಡಿದ್ದಾರೆ.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ 2’ (Pushpa 2) ಸಕ್ಸಸ್ ನಂತರ ಮತ್ತೊಂದು ಬಿಗ್ ಬಜೆಟ್ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಐತಿಹಾಸಿಕ ಸಿನಿಮಾದಲ್ಲಿ ಮಹಾರಾಣಿಯ ಪಾತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡಿದೆ. ಇದನ್ನೂ ಓದಿ:ಹನುಮಂತ ಆ ಹುಡುಗಿಯ ಮನಸ್ಸನ್ನು ಗೆದ್ದಿದ್ದಾನೆ: ಗೆಳೆಯನ ಮದುವೆ ಬಗ್ಗೆ ಧನರಾಜ್ ಮಾತು
ಬಾಲಿವುಡ್ ನಟ ವಿಕ್ಕಿ ಕೌಶಲ್ ನಟನೆಯ ‘ಛಾವಾ’ (Chhaava) ಸಿನಿಮಾದಲ್ಲಿ ವಿಕ್ಕಿಗೆ ಜೋಡಿಯಾಗಿ ರಶ್ಮಿಕಾ ಮಿಂಚಿದ್ದಾರೆ. ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ನಟಿ ಕಂಗೊಳಿಸಿದ್ದಾರೆ. ನಟಿಯ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಚಿತ್ರವನ್ನು ಲಕ್ಷö್ಮಣ್ ಉತ್ತೇಕರ್ ಅವರು ನಿರ್ದೇಶನ ಮಾಡಿದ್ದಾರೆ.
ಜ.22ರಂದು ‘ಛಾವಾ’ ಸಿನಿಮಾ ಮೊದಲ ಟ್ರೇಲರ್ ರಿಲೀಸ್ ಆಗಲಿದೆ. ವಿಕ್ಕಿ ಕೌಶಲ್ (Vicky Kaushal) ಮತ್ತು ರಶ್ಮಿಕಾ ಕಾಂಬಿನೇಷನ್‌ನ ಐತಿಹಾಸಿಕ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
ಇನ್ನೂ ಅಲ್ಲು ಅರ್ಜುನ್ (Allu Arjun) ಜೊತೆ ನಟಿಸಿದ ‘ಪುಷ್ಪ 2’ ಚಿತ್ರ ರಶ್ಮಿಕಾ ಬಿಗ್ ಸಕ್ಸಸ್ ಕೊಟ್ಟಿದೆ. 1800 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.
ಬಾಲಿವುಡ್ ನಟ ವಿಕ್ಕಿ ಕೌಶಲ್ (Vicky Kaushal) ಅವರು ಎಂತಹದ್ದೇ ಪಾತ್ರ ಕೊಟ್ಟರೂ ಆ ಪಾತ್ರವೇ ತಾವಾಗಿ ನಟಿಸುತ್ತಾರೆ. ಸದಾ ಲವರ್ ಬಾಯ್ ಪಾತ್ರಗಳಲ್ಲಿ ನಟಿಸುತ್ತಿದ್ದ ವಿಕ್ಕಿ ಈಗ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪೌರಾಣಿಕ ಚಿತ್ರದಲ್ಲಿ ಪರಶುರಾಮನ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ಈ ಪಾತ್ರದ ಮೊದಲ ಲುಕ್ ಅನಾವರಣ ಆಗಿದೆ. ಇದನ್ನೂ ಓದಿ:‘ಕುಬೇರ’ ಸಿನಿಮಾದಲ್ಲಿ ನಾಗಾರ್ಜುನ ಅಕ್ಕಿನೇನಿ ಹೊಸ ಪೋಸ್ಟರ್ ಔಟ್
ಅಮರ್ ಕೌಶಿಕ್ ನಿರ್ದೇಶನದ ‘ಮಹಾವತಾರ್’ (Mahavatar) ಪೌರಾಣಿಕ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಚಿರಂಜೀವಿ ಪರಶುರಾಮನಾಗಿ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಎರಡು ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡಿದೆ. ಚಿತ್ರದ ಪೋಸ್ಟರ್‌ನಲ್ಲಿ ನಟ ಉಗ್ರ ಅವತಾರ ತಾಳಿದ್ದಾರೆ. ಈ ಸಿನಿಮಾ ಮುಂದಿನ ಕ್ರಿಸ್ಮಸ್ 2026ರ ವೇಳೆ ರಿಲೀಸ್ ಆಗಲಿದೆ. ಈ ಚಿತ್ರವನ್ನು ದಿನೇಶ್ ವಿಜನ್ ನಿರ್ಮಾಣ ಮಾಡಿದ್ದಾರೆ.
ಇನ್ನೂ ಈ ಸಿನಿಮಾದ ಜೊತೆ ಆಲಿಯಾ ಭಟ್ (Alia Bhatt) ಜೊತೆ ‘ಲವ್ & ವಾರ್’ ಚಿತ್ರವಿದೆ. ರಶ್ಮಿಕಾ (Rashmika Mandanna) ಜೊತೆ ‘ಛಾವಾ’ ಚಿತ್ರವಿದೆ. ಡಿ.6ರಂದು ಈ ಸಿನಿಮಾ ರಿಲೀಸ್ ಆಗಲಿದೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್ ವಾರ್’ (Love And War) ಚಿತ್ರದಲ್ಲಿ ರಣ್‌ಬೀರ್ ಕಪೂರ್ (Ranbir Kapoor), ಆಲಿಯಾ ಭಟ್ (Aliaa Bhatt), ವಿಕ್ಕಿ ಕೌಶಲ್ (Vicky Kaushal) ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಕೆಲ ತಿಂಗಳುಗಳಿಂದ ಸದ್ದು ಮಾಡಿತ್ತು. ಆದರೆ ಶೂಟಿಂಗ್ ಶುರುವಾಗೋದು ಯಾವಾಗ? ಎಂಬುದಕ್ಕೆ ಉತ್ತರ ಸಿಕ್ಕಿರಲಿಲ್ಲ. ಅದಕ್ಕೀಗ ಉತ್ತರ ಸಿಕ್ಕಿದೆ. ಇದನ್ನೂ ಓದಿ:ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದೀರಾ? ಎಂದವರಿಗೆ ತಕ್ಕ ಉತ್ತರ ಕೊಟ್ಟ ನಯನತಾರಾ
ಬಹುನಿರೀಕ್ಷಿತ ‘ಲವ್ ಆ್ಯಂಡ್ ವಾರ್’ ಸಿನಿಮಾದ ಶೂಟಿಂಗ್ ನವೆಂಬರ್ 7ರಿಂದ ಮುಂಬೈನಲ್ಲಿ ಶುರುವಾಗಲಿದೆ. ಮೊದಲ ಹಂತದ ಶೂಟಿಂಗ್‌ನಲ್ಲಿ ನಟ ರಣ್‌ಬೀರ್ ಕಪೂರ್ ಮಾತ್ರ ಭಾಗಿಯಾಗುತ್ತಿದ್ದಾರೆ. ಆ ನಂತರ ವಿಕ್ಕಿ ಕೌಶಲ್ ಮತ್ತು ಆಲಿಯಾ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಸದ್ಯ ರಣ್‌ಬೀರ್ ಭಾಗದ ಚಿತ್ರೀಕರಣ ಶುರುವಾಗಲಿದೆ.
ಇನ್ನೂ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣ್‌ಬೀರ್ ಮತ್ತು ಆಲಿಯಾ ಜೊತೆಯಾಗಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಈಗ ಮತ್ತೆ ‘ಲವ್ ಆ್ಯಂಡ್ ವಾರ್’ ಸಿನಿಮಾಗಾಗಿ ಕೈಜೋಡಿಸಿದ್ದಾರೆ. ವಿಕ್ಕಿ ಕೌಶಲ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಟ್ರಯಾಂಗಲ್ ಲವ್ ಸ್ಟೋರಿಯಾಗಿದ್ದು, ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ.