Tag: Vidhan Parishad results

  • ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ

    ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ

    ಲಕ್ನೋ: ಈ ಬಾರಿ ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ನಿ ಜೊತೆಗೆ ಇಂದು ವಾರಣಾಸಿಯಲ್ಲಿರುವ ಕಾಶಿಗೆ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆಸಲ್ಲಿಸಿದ್ದಾರೆ.

    Bommai

    ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಶಿ ವಿಶ್ವನಾಥ ಕಾರಿಡಾರ್ ಬಹಳ ಅದ್ಭುತವಾಗಿ ನಿರ್ಮಾಣಗೊಳಿಸಲಾಗಿದೆ. ಸರ್ಕಾರ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಎಂಬುವುದನ್ನು ಮೋದಿ ಅವರು ತೋರಿಸಿಕೊಟ್ಟಿದ್ದಾರೆ. ಅದಕ್ಕೆ ಯೋಗಿ ಅವರು ಬೆಂಬಲ ನೀಡಿದ್ದಾರೆ. ದಕ್ಷಿಣ ಭಾರತದಿಂದ ಹಲವಾರು ಜನರು ಈ ಕ್ಷೇತ್ರಕ್ಕೆ ಬರುತ್ತಾರೆ. ಇದು ಅವರೆಲ್ಲರಿಗೂ ಸಂತಸ ತರುವಂತಹ ವಿಚಾರವಾಗಿದೆ ಎಂದು ಹೇಳಿದರು. ದನ್ನೂ ಓದಿ: `ದಿವ್ಯ ಕಾಶಿ, ಭವ್ಯ ಕಾಶಿ’ ಪ್ರಧಾನಿ ಮೋದಿ ಕನಸಿನ ಯೋಜನೆ ಲೋಕಾರ್ಪಣೆ – ವಿಶೇಷತೆ ಏನು?

    ವಾರಾಣಸಿಯ ವಿಶ್ವನಾಥನ ಸನ್ನಧಿಯಲ್ಲಿ ಇಂದು ಬೆಳಗ್ಗೆ ರಾಜ್ಯಗಳ ಅಭಿವೃದ್ಧಿ, ಯೋಜನಾ ಅನುಷ್ಠಾನ, ಕೊರೊನಾ ನಿಯಂತ್ರಣ, ಆಡಳಿತದಲ್ಲಿ ಪಾರದರ್ಶಕತೆ ಸೇರಿ ಹಲವು ವಿಚಾರಗಳ ಬಗ್ಗೆ ಮೋದಿ ನೇತೃತ್ವದಲ್ಲಿ ರಾಜ್ಯದ 12 ರಾಜ್ಯಗಳ ಸಿಎಂಗಳ ಜೊತೆಗೆ ಚರ್ಚೆ ನಡೆಸಲಿದ್ದು, ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಅರುಣಾಚಲಪ್ರದೇಶ, ಅಸ್ಸಾಂ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಮಧ್ಯಪ್ರದೇಶ, ತ್ರಿಪುರಾ, ಮಣಿಪುರ, ಉತ್ತರ ಪ್ರದೇಶ, ಉತ್ತರಾಖಂಡ್ ಮುಖ್ಯಮಂತ್ರಿಗಳು ಸೇರಿದಂತೆ 9 ಡಿಸಿಎಂಗಳು ಇಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭಾಗಿಯಾಗಲಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿಗೆ ದೃಷ್ಟಿ ನಿವಾರಿಸಿದ ಅರ್ಚಕ

    ಒಟ್ಟಾರೆ ಹಾನಗಲ್ ಬೈ ಎಲೆಕ್ಷನ್ ಸೋಲು, 40% ಕಮೀಷನ್ ಆರೋಪ, ಬಿಟ್ ಕಾಯಿನ್ ದಂಧೆ ಆರೋಪಗಳಲ್ಲಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಪರಿಷತ್ ಎಲೆಕ್ಷನ್‍ನಲ್ಲಿ 12ಕ್ಕೂ ಹೆಚ್ಚು ಸ್ಥಾನ ಗೆದ್ದರೆ ಸಿಎಂ ಅಸ್ತಿತ್ವ ಇನ್ನಷ್ಟು ಭದ್ರವಾಗಲಿದೆ.