Tag: vidhan parishad

  • ಪರಿಷತ್‌ ಚುನಾವಣೆ – ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಕಾಂಗ್ರೆಸ್-ಬಿಜೆಪಿಯಲ್ಲಿ ಇನ್ನೂ ಅಂತಿಮವಾಗದ ಅಭ್ಯರ್ಥಿಗಳು

    ಪರಿಷತ್‌ ಚುನಾವಣೆ – ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಕಾಂಗ್ರೆಸ್-ಬಿಜೆಪಿಯಲ್ಲಿ ಇನ್ನೂ ಅಂತಿಮವಾಗದ ಅಭ್ಯರ್ಥಿಗಳು

    ಬೆಂಗಳೂರು: ವಿಧಾನಸಭೆ ಸದಸ್ಯರಿಂದ ಆಯ್ಕೆಯಾಗಿ ವಿಧಾನ ಪರಿಷತ್‌ 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯು ಪ್ರಮುಖ ರಾಜಕೀಯ ಪಕ್ಷಗಳಿಗೆ ಗೊಂದಲದ ಗೂಡಾಗಿ ಪರಿಣಮಿಸಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ.

    ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೇ 24 ಅಂದರೆ ನಾಳೆ ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಒಂದೇ ದಿನ ಬಾಕಿ ಇದೆ. ಆದರೆ ಪ್ರಮುಖ ಎರಡೂ ಪಕ್ಷಗಳು ಈವರೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಯಾರಿಗೆ ಟಿಕೆಟ್‌ ನೀಡಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದ ಸೂಚನೆ ಕಾಣುತ್ತಿಲ್ಲ. ಇದನ್ನೂ ಓದಿ: ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಅಖಾಡಕ್ಕೆ ರಾಕ್ ಲೈನ್ ವೆಂಕಟೇಶ್ : ಉಲ್ಟಾ ಆದ ಲೆಕ್ಕಾಚಾರ

    VIDHAN SHOUDHA

    ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿದ್ದು, ಹೈಕಮಾಂಡ್‌ ನಾಯಕ ಭೇಟಿಯಾಗಲಿದ್ದಾರೆ. ಟಿಕೆಟ್‌ ಹಂಚಿಕೆ ಬಗ್ಗೆ ಚರ್ಚೆ ನಡೆಸಿ ಸಂಜೆ ಹೊತ್ತಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಈ ಸಂಬಂಧ ಮೊನ್ನೆಯಷ್ಟೇ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸಭೆ ನಡೆಸಿದ್ದರು. ಈ ಪ್ರಮುಖ ನಾಯಕರಲ್ಲಿ ಯಾರ ಬೆಂಬಲಿಗರಿಗೆ ಹೆಚ್ಚು ಮಣೆ ಹಾಕಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

    ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಮತ್ತು ನಾನು ಸೇರಿ ಚರ್ಚೆ ನಡೆಸಿಯೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಿದ್ದೇವೆ. ಇಂದು ಸಂಜೆಯೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್

    ಬಿಜೆಪಿಯಲ್ಲೂ ಕೂಡ ಈವರೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ. ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡಲಾಗಿದ್ದರೂ, ಹೈಕಮಾಂಡ್‌ನಿಂದ ಅಧಿಕೃತ ಮುದ್ರೆ ಇನ್ನೂ ಸಿಕ್ಕಿಲ್ಲ. ಪಕ್ಷದಲ್ಲಿ ಯಾರಿಗೆ ಟಿಕೆಟ್‌ ನೀಡಲಾಗುವುದು ಎಂಬುದು ಕುತೂಹಲ ಮೂಡಿಸಿದೆ.

  • ಕಾಂಗ್ರೆಸ್ ರಾಜ್ಯಸಭಾ, ಪರಿಷತ್‌ ಅಭ್ಯರ್ಥಿಗಳ ಪಟ್ಟಿ ಸೋಮವಾರ ಪ್ರಕಟ

    ಕಾಂಗ್ರೆಸ್ ರಾಜ್ಯಸಭಾ, ಪರಿಷತ್‌ ಅಭ್ಯರ್ಥಿಗಳ ಪಟ್ಟಿ ಸೋಮವಾರ ಪ್ರಕಟ

    ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ.

    ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

    ಜೂನ್ 3 ರಂದು ವಿಧಾನಸಭೆಯಿಂದ ವಿಧಾನಪರಿಷತ್ 7 ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪಕ್ಷ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ನಾಮಪತ್ರ ಸಲ್ಲಿಸಲು ಮೇ 24 ಅಂದರೆ ಇದೇ ಮಂಗಳವಾರ ಅಂತಿಮ ದಿನವಾಗಿದ್ದು, ಸೋಮವಾರದೊಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಇದನ್ನೂ ಓದಿ: ರಾಜ್ಯಸಭೆ, ಪರಿಷತ್ ಚುನಾವಣೆ – ಬಿಜೆಪಿ ಟಿಕೆಟ್ ಶನಿವಾರ ಫೈನಲ್, ಸಿಎಂ ದೆಹಲಿಗೆ ದೌಡು

    ಅದೇ ರೀತಿ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಗೆಲ್ಲಬಹುದಾದ ಒಂದು ಸ್ಥಾನಕ್ಕೂ ಅಭ್ಯರ್ಥಿಯ ಆಯ್ಕೆ ಮಾಡಬೇಕಿದೆ. ಜೂನ್ 10 ರಂದು ನಡೆಯುವ ಚುನಾವಣೆಗೆ ಮೇ 31 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ಸಿನ ಮಹತ್ವದ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

    ಸಮಾಲೋಚನೆ ಬಳಿಕ ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಕಣಕ್ಕಿಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

  • ಗುರುವಾರ ಮಹತ್ವದ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸಭೆ – ಸಿಎಂ ದೆಹಲಿಗೆ

    ಗುರುವಾರ ಮಹತ್ವದ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸಭೆ – ಸಿಎಂ ದೆಹಲಿಗೆ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಿದ್ದಾರೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ನವದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ.

    ಇತ್ತೀಚೆಗೆ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪರಿಷತ್‌ ಹಾಗೂ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿತ್ತು. ಇದನ್ನು ಪರಾಮರ್ಶಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ನಾಳೆ ಚುನಾವಣೆ ಸಮಿತಿ ಸಭೆ ನಡೆಯಲಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಸಮಿತಿ ರಾಜ್ಯ ನಾಯಕರನ್ನು ಈ ಸಭೆಗೆ ಆಹ್ವಾನಿಸಿದೆ. ಕೊನೆ ಕ್ಷಣದ ಅಭಿಪ್ರಾಯ ಸಂಗ್ರಹಿಸಿ ಅಂತಿಮ ಪಟ್ಟಿ ಬಿಡುಗಡೆ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ.

    ಸಿಎಂ ದೆಹಲಿ ಭೇಟಿ ವೇಳೆ ನೆನೆಗುದಿಗೆ ಬಿದ್ದಿರುವ ಸಂಪುಟ ಪುನಾರಚನೆ ಕುರಿತಂತೆ ವರಿಷ್ಠರ ಜೊತೆ ಸಮಾಲೋಚನೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ 2 ಸುತ್ತಿನ ಚರ್ಚೆ ನಡೆದಿದ್ದು, ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ಗಾಗಿ ಸಿಎಂ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಆದರೆ ಇನ್ನೂ ವರಿಷ್ಠರಿಂದ ಯಾವುದೇ ಸೂಚನೆ ಬರದ ಹಿನ್ನೆಲೆಯಲ್ಲಿ ಕೊನೆಯ ಪ್ರಯತ್ನವಾಗಿ ದೆಹಲಿ ಭೇಟಿ ಮತ್ತೊಮ್ಮೆ ಚರ್ಚೆಗೆ ಅವಕಾಶ ಪಡೆಯಲು ಯತ್ನಿಸಲಿದ್ದಾರೆ. ಇದನ್ನೂ ಓದಿ: 2030ರ ವೇಳೆಗೆ ಭಾರತಕ್ಕೆ 6ಜಿ ನೆಟ್‌ವರ್ಕ್ – ಪ್ರಧಾನಿ ಮೋದಿ

  • ಪರಿಷತ್‌ ಅಭ್ಯರ್ಥಿಗಳ ಆಯ್ಕೆಗೆ ಇಂದು ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ

    ಪರಿಷತ್‌ ಅಭ್ಯರ್ಥಿಗಳ ಆಯ್ಕೆಗೆ ಇಂದು ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ

    ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ ಬೆಂಗಳೂರು ಹೊರವಲಯದ ರೆಸಾರ್ಟ್‌ವೊಂದರಲ್ಲಿ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ.ದೇವೇಗೌಡರ ಜನ್ಮದಿನದ ಪ್ರಯುಕ್ತ ಶಾಸಕರಿಗೆ ಔತಣ ಕೂಟದ ಜೊತೆಗೆ ಈ ಸಭೆ ಆಯೋಜಿಸಲಾಗಿದೆ.

    ಸಭೆಯಲ್ಲಿ ವಿಧಾನ ಪರಿಷತ್‌ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚೆ ನಡೆಯಲಿದೆ. ವಿಧಾನಸಭೆಯಲ್ಲಿ ಜೆಡಿಎಸ್‌ ಇರುವ ಸದಸ್ಯರ ಬಲದಲ್ಲಿ ಪರಿಷತ್‌ಗೆ ಒಬ್ಬರು ಅಭ್ಯರ್ಥಿ ಸುಲಭವಾಗಿ ಆಯ್ಕೆ ಆಗಬಹುದು. ಹೀಗಾಗಿ ಆ ಒಂದು ಸ್ಥಾನಕ್ಕಾಗಿ ತೀವ್ರ ಪೈಪೋಟಿ ಇದ್ದು, ವರಿಷ್ಠರ ಸಮ್ಮುಖದಲ್ಲಿ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ ರಾಜ್ಯಸಭೆಗೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತಂತೆಯೂ ಸಮಾಲೋಚನೆ ನಡೆಯಲಿದೆ. ಇದನ್ನೂ ಓದಿ: ದೇವೇಗೌಡರ ಜನ್ಮದಿನಕ್ಕೆ ಶುಭಕೋರಿದ ಮೋದಿ

    ಪಕ್ಷದ ವರಿಷ್ಠ ಹೆಚ್‌.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮೊದಲಾದವರು ಭಾಗವಹಿಸಲಿದ್ದಾರೆ.

  • ಪರಿಷತ್‌ ಹಂಗಾಮಿ ಸಭಾಪತಿ ಇಂದು ನೇಮಕ

    ಪರಿಷತ್‌ ಹಂಗಾಮಿ ಸಭಾಪತಿ ಇಂದು ನೇಮಕ

    ಬೆಂಗಳೂರು: ಬಸವರಾಜ ಹೊರಟ್ಟಿ ರಾಜೀನಾಮೆ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಹಂಗಾಮಿ ಸಭಾಪತಿ ನೇಮಕ ಇಂದು ನಡೆಯಲಿದೆ.

    ಹಂಗಾಮಿ ಸಭಾಪತಿ ಸ್ಥಾನಕ್ಕೆ ಎಮ್ಮೆಲ್ಸಿ ರಘುನಾಥ್ ರಾವ್ ಮಲ್ಕಾಪೂರೆ ಹೆಸರನ್ನು ರಾಜ್ಯಪಾಲರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಲ್ಕಾಪೂರೆ ಅವರೇ ವಿಧಾನ ಪರಿಷತ್‌ ಸಭಾಪತಿ ಆಗುವುದು ಬಹುತೇಕ ಖಚಿತವಾಗಿದೆ.

    ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹಂಗಾಮಿ ಸಭಾಪತಿ ನೇಮಕ ಮಾಡಲಿದ್ದಾರೆ. ಹಾಲಿ ಪರಿಷತ್‌ನ ಹಿರಿಯ ಸದಸ್ಯರಾದ ಶಶೀಲ್‌ ನಮೋಶಿ, ರಘುನಾಥ್‌ ಮಲ್ಕಾಪುರೆ, ಮಾಜಿ ಉಪಸಭಾಪತಿ ಎಂ.ಕೆ.ಪ್ರಾಣೇಶ್‌, ತೇಜಸ್ವಿನಿ ರಮೇಶ್‌ ಮೊದಲಾದವರ ಹೆಸರು ಹಂಗಾಮಿ ಸಭಾಪತಿ ಪಟ್ಟಿಯಲ್ಲಿ ಇತ್ತು.  ಇದನ್ನೂ ಓದಿ: ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್

    ಹಂಗಾಮಿ ಸಭಾಪತಿ ನೇಮಕವಾದರೆ ಪ್ರಮಾಣ ವಚನ ಮೊದಲಾದ ಪ್ರಕ್ರಿಯೆಗಳು ಇರುವುದಿಲ್ಲ. ಕೇವಲ ಸಭಾಪತಿ ಹುದ್ದೆಯ ಕಾರ್ಯನಿರ್ವಹಣೆ ಹೊಣೆಗಾರಿಕೆ ಮಾತ್ರ ಇರಲಿದೆ. ಹಂಗಾಮಿ ಸಭಾಪತಿ ನೇಮಕ ಬಳಿಕವಷ್ಟೇ ಬಸವರಾಜ ಹೊರಟ್ಟಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರೆ ಅಂಗೀಕಾರ ಪ್ರಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಅವರ ಉದ್ದೇಶಿತ ಬಿಜೆಪಿ ಸೇರ್ಪಡೆ ವಿಳಂಬವಾಗಲಿದೆ.

  • ವಿಧಾನ ಪರಿಷತ್ ಸಭಾಪತಿ ಸ್ಥಾನ, ಜೆಡಿಎಸ್‌ಗೆ ಬಸವರಾಜ ಹೊರಟ್ಟಿ ರಾಜೀನಾಮೆ

    ವಿಧಾನ ಪರಿಷತ್ ಸಭಾಪತಿ ಸ್ಥಾನ, ಜೆಡಿಎಸ್‌ಗೆ ಬಸವರಾಜ ಹೊರಟ್ಟಿ ರಾಜೀನಾಮೆ

    ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನ ಹಾಗೂ ಜೆಡಿಎಸ್ ಪಕ್ಷಕ್ಕೆ ಬಸವರಾಜ ಹೊರಟ್ಟಿ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಇವತ್ತಿನ ಕಲುಷಿತ ರಾಜಕಾರಣ ನಮ್ಮಂಥವರಿಗೆ ಅಲ್ಲ. ರಾಜಕಾರಣ ಡ್ರಗ್ ಆಡಿಕ್ಟ್ ಥರಾ, ಏನ್ ಮಾಡಬಹುದು ಎಂದು ಪ್ರಶ್ನಿಸಿದರಲ್ಲದೇ, ನಾನು ಸಭಾಪತಿ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ರಾಜರ ಆಳ್ವಿಕೆಯಲ್ಲಿ ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಿದ್ದಾರೆ: ಸಿ.ಟಿ.ರವಿ

    ನನ್ನ ಭವಿಷ್ಯದ ಬಗ್ಗೆ ಯಾರೂ ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಸಾಮಾನ್ಯ ಮನೆತನದಲ್ಲಿ ಹುಟ್ಟಿ ಸಾಮಾನ್ಯ ಶಿಕ್ಷಕನಾಗಿ ಇಷ್ಟು ದೊಡ್ಡ ಸ್ಥಾನ ಅನುಭವಿಸಿದ್ದೇನೆ. ಸಚಿವ ಸ್ಥಾನ ಸಿಕ್ಕಿಲ್ಲ ಅಂತ ಒಂದು ದಿವಸವೂ ನಾನು ಮಾತನಾಡಿಲ್ಲ. ಕೆಲವೊಂದು ಬಾರಿ ಅನಿವಾರ್ಯವಾಗಿ ತೀರ್ಮಾನ ಮಾಡಬೇಕಾಗುತ್ತದೆ. ದೇವೇಗೌಡರ ಕುಟುಂಬದ ಬಗ್ಗೆ ನನಗೆ ಬೇಸರ ಪಡುವಂತಹ ಘಟನೆ ಎಂದೂ ಆಗಿಲ್ಲ. ಮಂತ್ರಿ ಆದಾಗಲೂ ಇಲ್ಲದಿದ್ದಾಗಲೂ ನಾನು ಅವರ ಜೊತೆಗೆ ಇದ್ದೆ. ದೇವೇಗೌಡರ ಬಗ್ಗೆಯಾಗಲಿ ಉಳಿದವರ ಬಗ್ಗೆಯಾಗಲಿ ನನಗೆ ಅಸಮಾಧಾನ ಇಲ್ಲ. ದೇವೇಗೌಡರಿಗೆ ನಾನು ವಿವರವಾಗಿ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.

    ಜೆಡಿಎಸ್ ವರಿಷ್ಠರ ಉಪಕಾರ ಸ್ಮರಣೆ ಮಾಡುತ್ತೇನೆ. ಆಕಸ್ಮಿಕವಾಗಿ ಕೆಲವೊಮ್ಮೆ ಬದಲಾವಣೆಗಳು ತನ್ನಷ್ಟಕ್ಕೆ ತಾನೇ ಆಗುತ್ತವೆ. ಆತ್ಮೀಯರು ಹಾಗೂ ಶಿಕ್ಷಕರ ಒತ್ತಾಯವೂ ಇತ್ತು. ರಾಷ್ಟ್ರದಲ್ಲಿ ಯಾವ ಪಕ್ಷ ಜಾತಿ ಬಿಟ್ಟು ಇದ್ದಾವೆ ಹೇಳಿ? ಎಲ್ಲ ಪಕ್ಷದಲ್ಲೂ ಮೊದಲು ಯಾವ ಜಾತಿ, ಎಷ್ಟು ಖರ್ಚು ಮಾಡ್ತಿಯಾ ಅಂತ ಕೇಳ್ತಾರೆ. ಇದುವರೆಗೆ ಒಬ್ಬರನ್ನು ಬಿಟ್ಟು ಯಾರೂ ನಾನು ಬಿಜೆಪಿ ಸೇರುವುದನ್ನು ವಿರೋಧ ಮಾಡಿಲ್ಲ. ಸ್ವತಂತ್ರವಾಗಿ ಆರಿಸಿ ಬಂದಾಗ ಯಾವುದಾದರೂ ಪಕ್ಷದ ಆಸರೆ ಬೇಕಾಗುತ್ತದೆ. 42 ವರ್ಷದ ರಾಜಕೀಯ ಜೀವನದಲ್ಲಿ ಇದು ಮೊಟ್ಟ ಮೊದಲ ಬಾರಿಗೆ ಹೀಗಾಗಿದೆ. ಎಲ್ಲ ಅಧಿಕಾರ ಅನುಭವಿಸಿದ್ದೀನಿ. ಈಗಲೂ ಎಂಎಲ್ಸಿ ಆಗ್ತೀನಿ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಗೀತೆ ಕಡ್ಡಾಯ ಮಾಡಿದ್ರೆ ನಮಗೂ ಖುಷಿಯೇ: ಜಮೀರ್

    ಇವತ್ತಿನ ಸ್ಥಿತಿ ನೋಡಿದರೆ ರಾಜಕಾರಣದಲ್ಲಿ ಇರುವುದು ಒಳ್ಳೆಯದಲ್ಲ. ಆದರೆ ನಮಗೆಲ್ಲ ಡ್ರಗ್ ಅಡಿಕ್ಟ್ ಥರ ರಾಜಕೀಯ. ಇವತ್ತಿನ ಕಲುಷಿತ ರಾಜಕೀಯದಲ್ಲಿ ಜನರೂ ಹಾಗೆಯೇ ಆಗಿದ್ದಾರೆ, ನಾವೂ ಹಾಗೆಯೇ ಆಗಿದ್ದೇವೆ. ವ್ಯವಸ್ಥೆಯಲ್ಲಿ ಮನಸ್ಸು ಇರುತ್ತದೆಯೋ ಬಿಡುತ್ತದೆಯೋ ನಾವು ಇರಬೇಕಾಗುತ್ತದೆ ಎಂದು ಹೇಳಿದ್ದಾರೆ.

  • ಮೇಲ್ಮನೆಗೆ ವಿಜಯೇಂದ್ರ ಎಂಟ್ರಿ? ವಿಧಾನ ಪರಿಷತ್‌ ಒಂದು ಸ್ಥಾನಕ್ಕೆ ಬಿಎಸ್‌ವೈ ಪುತ್ರನ ಹೆಸರು ಅಂತಿಮ

    ಮೇಲ್ಮನೆಗೆ ವಿಜಯೇಂದ್ರ ಎಂಟ್ರಿ? ವಿಧಾನ ಪರಿಷತ್‌ ಒಂದು ಸ್ಥಾನಕ್ಕೆ ಬಿಎಸ್‌ವೈ ಪುತ್ರನ ಹೆಸರು ಅಂತಿಮ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ವಿಜಯೇಂದ್ರ ಹೆಸರನ್ನು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಮೇಲ್ಮನೆ ಎಂಟ್ರಿ ಬಹುತೇಕ ಖಚಿತವಾಗಿದೆ.

    ವಿಧಾನ ಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಬಿಜೆಪಿ ಪ್ರಮುಖ ನಾಯಕರ (ಕೋರ್ ಕಮಿಟಿ) ಸಭೆ ಶನಿವಾರ ನಡೆಯಿತು. ವಿಧಾನ ಪರಿಷತ್ 1 ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಹೆಸರು ಅಂತಿಮಗೊಳಿಸಲಾಗಿದೆ. ಉಳಿದ ಮೂರು ಸ್ಥಾನಕ್ಕೆ ತಲಾ 5 ಹೆಸರುಗಳಂತೆ 15 ಹೆಸರನ್ನು ಶಿಫಾರಸು ಮಾಡಲಾಗಿದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುವುದು.

    ಕೋರ್‌ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್‌ ಸ್ಥಾನಕ್ಕೆ ವಿಜಯೇಂದ್ರ ಹೆಸರು ಅಂತಿಮವಾಗಿದ್ದು, ಪರಿಷತ್ ಮೆಟ್ಟಿಲೇರಲು ವಿಜಯೇಂದ್ರಗೆ ಒಂದೇ ಮೆಟ್ಟಿಲು ಬಾಕಿ ಇದೆ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲೂ ಅವರ ಹೆಸರು ಅಂತಿಮವಾಗುವ ಸಾಧ್ಯತೆ ಇದೆ. ಬಿಜೆಪಿ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

    ವಿಜಯೇಂದ್ರ ಅವರಿಗೆ ಮಣೆ ಹಾಕಿರುವುದು ಬಿಜೆಪಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಿಎಂ ಯಡಿಯೂರಪ್ಪಗೆ ಈ ಮೊದಲೇ ಸಂದೇಶ ರವಾನೆ ಆಗಿತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಶುಕ್ರವಾರ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಭೇಟಿ ವೇಳೆ ವಿಜಯೇಂದ್ರ ಹೆಸರು ಪ್ರಸ್ತಾಪಿಸಲು ಯೋಜನೆ ರೂಪಿಸಲಾಗಿತ್ತಾ ಎಂಬ ಚರ್ಚೆ ನಡೆಯುತ್ತಿದೆ.

    BASAVARAJ BOMMAI

    ಮಾಜಿ ಸಚಿವ ಲಕ್ಷ್ಮಣ್ ಸವದಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಎಂ.ರಾಜೇಂದ್ರ, ನಿರ್ಮಲಾ ಕುಮಾರ್ ಸುರಾನಾ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಮಹೇಶ್ ಟೆಂಗಿನಕಾಯಿ, ಓಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೆಸರುಗಳನ್ನು ಉಳಿದ ಸ್ಥಾನಗಳಿಗೆ ಶಿಫಾರಸು ಮಾಡಲಾಗಿದೆ. ಒಂದು ಸ್ಥಾನವನ್ನು ಸಿನಿಮಾ ಅಥವಾ ಕಲೆ ಕ್ಷೇತ್ರದಿಂದ ಜನಪ್ರಿಯತೆ ಇರುವ ಒಬ್ಬ ವ್ಯಕ್ತಿ ಆಯ್ಕೆ ಮಾಡಲು ನಿರ್ಧಾರಿಸಲಾಗಿದೆ.

  • 7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ

    7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ

    ಬೆಂಗಳೂರು: 7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

    ಜೂನ್ 3 ರಂದು ಚುನಾವಣೆ ನಡೆಯಲಿದ್ದು ಅಂದು ಸಂಜೆಯೇ ಫಲಿತಾಂಶ ಪ್ರಕಟವಾಗಲಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.  ಇದನ್ನೂ ಓದಿ: ಸಿಐಡಿಗೆ ಪ್ರಕರಣ ದಾಖಲಾಗ್ತಿದ್ದಂತೆ ಡ್ಯಾಂಗೆ ಮೊಬೈಲ್ ಎಸೆದ ಆರೋಪಿ

    ಬಿಜೆಪಿಯ ಲಕ್ಷಣ ಸವದಿ, ಲೆಹರ್‌ ಸಿಂಗ್‌ ಕಾಂಗ್ರೆಸ್‌ನ ಆರ್‌ಬಿ ತಿಮ್ಮಾಪೂರ್‌, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್‌ನ ರಮೇಶ್‌ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್‌ 14ಕ್ಕೆ ಕೊನೆಯಾಗಲಿದೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ- ಆರೋಪಿ ಪತಿಯನ್ನೇ ಜೈಲಿಗಟ್ಟಿದ ಜೈಲರ್ ಪತ್ನಿ!

    ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್‌ನ 2, ಜೆಡಿಎಸ್‌ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ.

  • ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಬೆಂಗಳೂರು: ಹಿಜಬ್ ವಿವಾದದ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿಷಯ ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಕಾರಣವಾಯಿತು. ಬಜೆಟ್ ಚರ್ಚೆ ವೇಳೆ ಕಾಂಗ್ರೆಸ್‍ನ ಸದಸ್ಯ ಸಲೀಂ ಅಹಮದ್, ತೀರ್ಪು ಯಾಕೆ ಈ ರೀತಿ ಬಂದಿತು ಎನ್ನುವ ಕುರಿತು ಚರ್ಚೆ ನಡೆಯಬೇಕು ಎಂದರು. ಈ ವಿಚಾರಕ್ಕೆ ಸದನದಲ್ಲಿ ಗಲಾಟೆ ಪ್ರಾರಂಭ ಆಯಿತು.

    ಸಲೀಂ ಅಹಮದ್ ಮಾತನಾಡಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಏಕೆ ಬಂತು. ಹಿಜಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಯಾಕೆ ಹೀಗೆ ಬಂತು. ಸರ್ಕಾರದ ಆದೇಶವನ್ನೇ ಕೋರ್ಟ್ ಎತ್ತಿ ಹಿಡಿಯಿತು. ಹಿಜಬ್, ಬುರ್ಕಾ ನೂರಾರು ವರ್ಷದಿಂದ ಇದೆ. ಇದು ನಮ್ಮ ಧರ್ಮದ ಪದ್ಧತಿ. ಆದ್ರೆ ವಿವಾದ ಈಗ ಯಾಕಾಯಿತು ಎಂದು ಪ್ರಸ್ತಾಪಿಸಿದರು.

    ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಹೈಕೋರ್ಟ್ ತೀರ್ಪನ್ನು ಒಪ್ಪುತ್ತೀರಾ ಅಥವಾ ವಿರೋಧಿಸುತ್ತೀರಾ? ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಹರಿ ಪ್ರಸಾದ್, ನಮ್ಮ ನಿಲುವನ್ನು ಸುಪ್ರೀಂ ಕೋರ್ಟ್‍ಗೆ ಹೇಳುತ್ತೇವೆ. ನಾವು ಇಲ್ಲಿ ಅದನ್ನು ಹೇಳಬೇಕಿಲ್ಲ, ನಮ್ಮ ಸದಸ್ಯರು ಮಾತನಾಡುವುದನ್ನು ಕೇಳಿಸಿಕೊಳ್ಳಲು ಹೇಳಿ ಎಂದು ಆಗ್ರಹಿಸಿದರು.

    ಮತ್ತೆ ಮಾತು ಮುಂದುವರೆಸಿದ ಹರಿಪ್ರಸಾದ್, ಭಾಷಣದ ನಡುವೆ ನಮ್ಮ ಸದಸ್ಯರು ಸಮ್ಮತಿಸಲಿಲ್ಲ ಎಂದರೆ ಪ್ರತಿಪಕ್ಷ ನಾಯಕರಾಗಲಿ, ಸಭಾನಾಯಕರಿಗಾಗಲಿ ಮಧ್ಯದಲ್ಲಿ ಮಾತನಾಡಲು ಅವಕಾಶವಿಲ್ಲ. ಅವರಿಗೇನು ಕೊಂಬಿಲ್ಲ. ರೂಲ್ ಬುಕ್‍ನಲ್ಲಿಯೂ ಅವಕಾಶವಿಲ್ಲ ಎಂದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಇದು ಕೊಂಬಿನ ವಿಷಯ ಅಲ್ಲ. ಯಾರಿಗೇನು ಕೊಂಬು ಇಲ್ಲ. ಸರ್ಕಾರದ ವಿರುದ್ಧ ಆರೋಪ ಬಂದಾಗ ನಾವು ಕೆಲವೊಂದು ಸ್ಪಷ್ಟೀಕರಣ ನೀಡಬೇಕು ಆಗ ಮಾತನಾಡಬೇಕಾಗಲಿದೆ. ಅದಕ್ಕೆ ಎದ್ದು ನಿಂತಾಗ ಸಭಾಪತಿಗಳ ಸಮ್ಮತಿ ಮೇರೆಗೆ ಪ್ರತಿಪಕ್ಷ ನಾಯಕ, ಸಭಾ ನಾಯಕರಿಗೆ ಮಾತನಾಡಲು ಅವಕಾಶ ಕೊಡುವ ಸಂಪ್ರದಾಯ ಇದೆ ಎಂದು ಪ್ರತಿಪಾದಿಸಿದರು.

    ಭಾಷಣ ಮುಂದುವರೆಸಿದ ಸಲೀಂ ಅಹಮದ್, ಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಒಪ್ಪಬೇಕು. ನಾವು ಒಪ್ಪುತ್ತೇವೆ. ಆದರೆ ಈ ಘಟನೆ ಯಾಕಾಯಿತು? ಕೇಸರಿ ಶಾಲು ಪದ್ಧತಿ ಮೊದಲು ಇತ್ತಾ? ಅಣ್ಣ, ತಮ್ಮಂದಿರ ರೀತಿ ಇದ್ದ ವಿದ್ಯಾರ್ಥಿಗಳು ಈಗ ಮುಖ ಕೊಟ್ಟು ಮಾತನಾಡದ ಸ್ಥಿತಿ ಇದೆ. ಇದಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

    ಇದಕ್ಕೆ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ನೆಮ್ಮದಿಯಿಂದ ಇದ್ದ ಮಕ್ಕಳು ಇವರ ಚಿತಾವಣೆಯಿಂದ ಹಿಜಬ್ ಧರಿಸಿ ಹೋದರು ಎಂದು ಕಾಂಗ್ರೆಸ್ ವಿರುದ್ಧ ನೇರ ಆರೋಪ ಮಾಡಿದರು. ಈ ವೇಳೆ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದನ್ನೂ ಓದಿ: ಎಸ್‍ಎಫ್‍ಐ ಉಗ್ರರ ಸಂಘಟನೆಯಾಗಿದ್ದು ಬ್ಯಾನ್ ಮಾಡಿ: ಕಾಂಗ್ರೆಸ್ ಸಂಸದ ಆಕ್ರೋಶ

    ಮತ್ತೆ ಮಾತನಾಡಿದ ಸಲೀಂ ಅಹಮದ್, ಇಂದು ಕೋಮು ಸಾಮರಸ್ಯಕ್ಕೆ ಧಕ್ಕೆ ಬಂದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮಕ್ಕಳಲ್ಲಿ ಬೇಧ ಭಾವ ತಂದಿದ್ದಾರೆ ಇದಕ್ಕೆ ಯಾರು ಕಾರಣ? ವಿದ್ಯಾರ್ಥಿಗಳಲ್ಲಿ ಕಂದಕ ತರುವ ಹಿಂದೂ, ಮುಸ್ಲಿಂ ಯಾವುದೇ ಸಂಘಟನೆ ಇರಲಿ ಬ್ಯಾನ್ ಮಾಡಲಿ ಎಂದಿದ್ದೇವೆ. ಈ ಸರ್ಕಾರಕ್ಕೆ ಧಮ್ ಇದೆಯಾ? ಅಂತ ಪ್ರಶ್ನೆ ಮಾಡಿದ್ರು. ಶಿವಮೊಗ್ಗ ಹರ್ಷ ಕೊಲೆಗೆ 25 ಲಕ್ಷ ರೂ. ಕೊಟ್ಟರು. ಗದಗದಲ್ಲಿ ಮುಸ್ಲಿಂ ವ್ಯಕ್ತಿ ಕೊಲೆಗೆ ಪರಿಹಾರ ಕೊಟ್ಟಿಲ್ಲ. ಯಾಕೆ ಈ ತಾರತಮ್ಯ ಎಂದು ಪ್ರಶ್ನಿಸಿದರು. ಮತ್ತೆ ಸದನದಲ್ಲಿ ಗದ್ದಲ ಗಲಾಟೆ ಆಗಿ ಸಭಾಪತಿಗಳು ಮಧ್ಯೆ ಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: ಕಾಶ್ಮೀರ್ ಫೈಲ್ಸ್ ಡೌನ್ಲೋಡಿಂಗ್ ಲಿಂಕ್ ಕ್ಲಿಕ್ ಮಾಡಿದ್ರೆ ಬ್ಯಾಂಕ್ ಖಾತೆಗೆ ಕನ್ನ

  • ಸಭಾಪತಿ ಮೇಲೆ FIR ಹಾಕಿದ ಅಧಿಕಾರಿಯನ್ನ ಅಮಾನತು ಮಾಡಿ – ಪಕ್ಷಾತೀತವಾಗಿ ಒತ್ತಾಯ

    ಸಭಾಪತಿ ಮೇಲೆ FIR ಹಾಕಿದ ಅಧಿಕಾರಿಯನ್ನ ಅಮಾನತು ಮಾಡಿ – ಪಕ್ಷಾತೀತವಾಗಿ ಒತ್ತಾಯ

    ಬೆಂಗಳೂರು: ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಎಫ್‍ಐಆರ್ ದಾಖಲು ಮಾಡಿರುವ ಪ್ರಕರಣದಲ್ಲಿ ನಿಯಮಾವಳಿ ಪಾಲನೆಯಾಗಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಎಲ್ಲವನ್ನೂ ಪರಿಶೀಲಿಸಿ ಸಭಾಪತಿಗಳ ಘನತೆ ಎತ್ತಿಹಿಡಿಯುವ ರೀತಿಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

    ವಿಧಾನ ಪರಿಷತ್ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬೋಜೇಗೌಡ ವಿಷಯ ಪ್ರಸ್ತಾಪ ಮಾಡಿದರು. ದೂರು ಬಂದಿರುವುದು ಸಭಾಪತಿಗಳ ವಿರುದ್ಧ. ಪೂರ್ವಾನುಮತಿ ಪಡೆಯದೇ ಎಫ್‍ಐಆರ್ ದಾಖಲು ಮಾಡಿದ್ದು ಸರಿಯಲ್ಲ. ಸಭಾಪತಿ ಅವರಿಗೇ ಈ ರೀತಿ ಆಗಿರುವುದು ಸರಿಯಲ್ಲ. ಕೂಡಲೇ ತನಿಖಾಧಿಕಾರಿ ವಿರುದ್ಧ ಕ್ರಮ ಆಗಲೇಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಪುಟಿನ್‍ನನ್ನು ‘ಯುದ್ಧಾಪರಾಧಿ’ ಎಂದ ಬೈಡನ್

    ವಿಪಕ್ಷ ನಾಯಕ ಹರಿಪ್ರಸಾದ್ ಈ ವೇಳೆ ಮಾತನಾಡಿ, ಈ ಪ್ರಕರಣದಲ್ಲಿ ದಲಿತ ಎಸ್‍ಐನ ಅಮಾನತುಗೊಳಿಸಿ, ಬಲಿಪಶು ಮಾಡಲಾಗಿದೆ. ಯಾರೋ ಒಬ್ಬ ಹರಕೆಯ ಕುರಿ ಸಿಕ್ಕ ಎಂದು ಮಾಡುವುದು ಸರಿಯಲ್ಲ. ನಿಜವಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

    ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಎಫ್‍ಐಆರ್ ದಾಖಲಾದರೆ ಎಷ್ಟು ಸಮಯದಲ್ಲಿ ಎಸ್‍ಪಿ ಕಚೇರಿಗೆ ಮಾಹಿತಿ ಹೋಗಲಿದೆ. ಯಾಕೆ ಎಸ್‍ಪಿ ತನಿಖೆಗೆ ಆದೇಶಿಸಲಿಲ್ಲ. ಗೃಹ ಸಚಿವರ ಗಮನಕ್ಕಾದರೂ ತರಬಹುದಿತ್ತು. ಆದರೆ ಅವರು ಆ ಕೆಲಸವನ್ನೂ ಮಾಡಿಲ್ಲ. ಎಸ್‍ಪಿ ಜವಾಬ್ದಾರಿ ಕೂಡ ಇದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಈ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ ಅವರು, ಸಭಾಪತಿ ಸ್ಥಾನ ಬಹಳ ಮುಖ್ಯ. ರಾಜ್ಯಪಾಲರ ನಂತರದ ಸ್ಥಾನ ಅದು. ಸಾಂವಿಧಾನಿಕ ಹುದ್ದೆಗಳ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೊದಲು ನಿಯಮ ಪಾಲಿಸಬೇಕು. ಅದಕ್ಕಾಗಿಯೇ ಪೆÇ್ರೀಟೋಕಾಲ್ ಇದೆ ಎಂದು ವಿವರಿಸಿದರು. ಇದನ್ನೂ ಓದಿ: ಹ್ಯಾಪಿ ಬರ್ತ್ ಡೇ ಅಪ್ಪು : ದಕ್ಷಿಣದ ಸಿನಿತಾರೆಯರ ಭಾವುಕ ಸಂದೇಶ 

    ಈ ಕೇಸ್‍ನಲ್ಲಿ ಪ್ರೊಸೀಜರ್ ಫಾಲೋ ಆಗಿಲ್ಲ. ಹಾಗಾಗಿ ಎಫ್‍ಐಆರ್ ದಾಖಲಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಐಒ, ಡಿವೈಎಸ್‍ಪಿ ಇರುತ್ತಾರೆ ಹಾಗಾಗಿ ಎಲ್ಲ ಪರಿಶೀಲಿಸಲಾಗುತ್ತಿದೆ. ಸಭಾಪತಿ ಹುದ್ದೆ ಘನತೆ ಎತ್ತಿಹಿಡಿದು ಮತ್ತೆ ಇಂತಹ ಘಟನೆ ಮರುಕಳಿಸದಂತೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.