Tag: vidhana parishad’s

  • ವಿಧಾನ ಪರಿಷತ್‍ ನ 6 ಸ್ಥಾನಗಳಿಗೆ ಚುನಾವಣಾ ದಿನಾಂಕ ಪ್ರಕಟ

    ವಿಧಾನ ಪರಿಷತ್‍ ನ 6 ಸ್ಥಾನಗಳಿಗೆ ಚುನಾವಣಾ ದಿನಾಂಕ ಪ್ರಕಟ

    ಬೆಂಗಳೂರು: ವಿಧಾನ ಪರಿಷತ್‍ ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದೆ.

    ಜೂನ್ 21ಕ್ಕೆ ತೆರವಾಗಲಿರುವ ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

    ಮೇ 22 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಜೂನ್ 8 ಮತದಾನ ನಡೆಯಲಿದೆ. ಇನ್ನು ಜೂನ್ 12ರಂದು ಮತ ಎಣಿಕೆ ನಡೆಯಲಿದೆ.