Tag: vidhanasiudha

  • ಪ್ರಮೋದ್ ಮಧ್ವರಾಜ್‍ಗೆ ಕೆಪಿಸಿಸಿ, ಎಐಸಿಸಿಯಿಂದ ಬುಲಾವ್

    ಪ್ರಮೋದ್ ಮಧ್ವರಾಜ್‍ಗೆ ಕೆಪಿಸಿಸಿ, ಎಐಸಿಸಿಯಿಂದ ಬುಲಾವ್

    – ಕಾಂಗ್ರೆಸ್ಸಿನಲ್ಲೇ ಇದ್ದೇನೆ
    – ಬಿಜೆಪಿಗೆ ಮಾಜಿ ಸಚಿವ ಸವಾಲು
    – ಪ್ರಜಾಪ್ರಭುತ್ವಕ್ಕೆ ಬಿಜೆಪಿ ಕೊಡಲಿಯೇಟು

    ಉಡುಪಿ: ಮಂಜೇಶ್ವರ ವಿಧಾನಸಭಾ ಉಪಚುನಾವಣಾ ಪ್ರಚಾರಕ್ಕೆ ಬರುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್‍ಗೆ ಕೆಪಿಸಿಸಿ ಹಾಗೂ ಎಐಸಿಸಿಯಿಂದ ಬುಲಾವ್ ಬಂದಿದೆ. ಕೇರಳದ ಉಪ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಫೋನ್ ಕರೆ ಮಾಡಿರುವ ದಿನೇಶ್ ಗುಂಡೂರಾವ್ ಮತ್ತು ವಿಷ್ಣುನಾಥನ್, ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನಿಸಿದ್ದಾರೆ.

    ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಸೇರ್ಪಡೆಗೆ ಕಾಯುತ್ತಿದ್ದರು. ಪ್ರಮೋದ್ ಜೆಡಿಎಸ್ ಅಭ್ಯರ್ಥಿಯಾದ ನಂತರ ಮತ್ತೆ ಕಾಂಗ್ರೆಸ್ ಸೇರ್ಪಡೆ ಆಗಬೇಕಾದರೆ ಅಪ್ಲಿಕೇಶನ್ ಹಾಕಬೇಕು ಎಂದು ಮಾಜಿ ಸಿಎಂ ವೀರಪ್ಪ ಮೋಯ್ಲಿ ಹೇಳಿದ್ದರು. ಈ ಸಂಬಂಧ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಗೆ ಪತ್ರ ಬರೆದಿರುವ ಪ್ರಮೋದ್ ಮಧ್ವರಾಜ್, ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶಕ್ಕಾಗಿ ಪತ್ರದಲ್ಲಿ ಕೋರಿದ್ದೇನೆ. ಸೇರ್ಪಡೆ ಮಾಡಿ ಎಂದು ಪತ್ರ ಕೊಟ್ಟದ್ದಲ್ಲ ಎಂದು ಸ್ಪಷ್ಟಪಡಿಸಿದರು.

    ಬೇರೆ ಯಾವ ಪಕ್ಷದವರೂ ನನ್ನನ್ನು ಈವರೆಗೆ ಸಂಪರ್ಕ ಮಾಡಿಲ್ಲ. ನಾನು ಮೈತ್ರಿ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರಿಂದ ಸ್ಪರ್ಧೆ ಮಾಡಿದ್ದೇನೆ. ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ. ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ, ಕಾಂಗ್ರೆಸ್ ಪಕ್ಷ ನನ್ನನ್ನು ಉಚ್ಛಾಟನೆ ಮಾಡಿರಲಿಲ್ಲ. ಹಾಗಾಗಿ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಪ್ರಮೇಯ ಬರುವುದಿಲ್ಲ. ತಾಂತ್ರಿಕವಾಗಿ ಕೆಲವು ಸಮಸ್ಯೆಗಳಿತ್ತು, ಕಾಂಗ್ರೆಸ್ ನಾಯಕರೇ ಕರೆ ಮಾಡಿದ್ದರಿಂದ ಸಮಸ್ಯೆ ನಿವಾರಣೆಯಾಗಿದೆ. ದೈಹಿಕವಾಗಿ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ, ಎಲ್ಲೂ ಹೋಗಿಲ್ಲ ಎಂದರು.

    ಇದೇ ವೇಳೆ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಮತ್ತು ವಿಧಾನಸೌಧಕ್ಕೆ ಮಾಧ್ಯಮ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇಡೀ ದೇಶದಲ್ಲಿ ಬಿಜೆಪಿ ನಾಯಕರಿದ್ದಾರೆ. ನಮ್ಮ ಮಂತ್ರಿಗಳು ಲಂಚ ತಗೋಳೋದಿಲ್ಲ ಎಂದು ಬಿಜೆಪಿ ಘೋಷಣೆ ಮಾಡಲಿ. ನಮ್ಮಲ್ಲಿ ಕಪ್ಪು ಹಣ ಇಲ್ಲ, ನಾವು ಪಾರ್ಟಿ ಫಂಡ್ ಉಪಯೋಗಿಲ್ಲ ಎಂದು ಬಿಜೆಪಿ ಘೋಷಿಸಲಿ ಎಂದು ಸವಾಲು ಹಾಕಿದ್ದಾರೆ.

    ಬಿಜೆಪಿ ನಾಯಕರು ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಿರೋಧ ಪಕ್ಷವನ್ನು ಸಂಪೂರ್ಣ ಮುಗಿಸಲು ಬಿಜೆಪಿ ಮುಂದಾಗಿದೆ. ವಿಧಾನಸೌಧದೊಳಗೆ ಮಾಧ್ಯಮಗಳನ್ನು ಬಿಜೆಪಿ ನಿಷೇಧ ಮಾಡುತ್ತಿದೆ. ಪ್ರಜಾಪ್ರಭುತ್ವಕ್ಕೆ ಬಿಜೆಪಿ ಕೊಡಲಿಯೇಟು ಕೊಡುತ್ತಿದೆ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

  • ವಿಧಾನಸೌಧದೊಳಗೆ ನಿಂಬೆ ಹಣ್ಣು ಬ್ಯಾನ್

    ವಿಧಾನಸೌಧದೊಳಗೆ ನಿಂಬೆ ಹಣ್ಣು ಬ್ಯಾನ್

    ಬೆಂಗಳೂರು: ಸಿಗರೇಟ್, ಪಾನ್ ಹಾಗೂ ಗುಟ್ಕಾ ಲಿಸ್ಟ್ ಗೆ ನಿಂಬೆಹಣ್ಣು ಸೇರಿದ್ದು, ಇನ್ನು ಮುಂದೆ ವಿಧಾನ ಸೌಧದೊಳಗೆ ನಿಂಬೆ ಹಣ್ಣು ತೆಗೆದುಕೊಂಡು ಹೋಗುವಂತಿಲ್ಲ.

    ಹೌದು. ವಿಧಾನಸೌಧ ಮುಂಭಾಗ ಸೆಕ್ಯುರಿಟಿಯವರು ಚೆಕ್ ಮಾಡುತ್ತಿದ್ದಾರೆ. ಈ ವೇಳೆ ನಿಂಬೆ ಹಣ್ಣು ಸಿಕ್ಕರೆ ಸೆಕ್ಯುರಿಟಿಯವರು ಅದನ್ನು ತೆಗೆದುಕೊಳ್ಳುತ್ತಿರುವ ವಿಚಾರವೊಂದು ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ವೇಳೆ ಬೆಳಕಿಗೆ ಬಂದಿದೆ.

    ಸಾರ್ವಜನಿಕರು ತಮ್ಮ ಕೆಲಸ ಆಗಲೆಂದು ನಿಂಬೆ ಹಣ್ಣು ಹಿಡಿದುಕೊಂಡು ಬರುತ್ತಾರೆ. ಆದರೆ ಮಾಟ ಮಂತ್ರದ ಭೀತಿಗೆ ಈಗ ಮತ್ತೆ ನಿಂಬೆ ಹಣ್ಣು ಬ್ಯಾನ್ ಮಾಡಲಾಗಿದೆ. ಹೀಗಾಗಿ ಹೊರಗಡೆ ನಿಂಬೆಹಣ್ಣು ಟ್ರೇನಲ್ಲಿ ಇಟ್ಟು ವಿಧಾನ ಸೌಧಕ್ಕೆ ಹೋಗಬೇಕು. ಈ ಹಿಂದೆಯೂ ಬಿಜೆಪಿ ಸರ್ಕಾರ ಇರುವಾಗ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದೀಗ ಮತ್ತೆ ಕಟ್ಟುನಿಟ್ಟಾಗಿ ಪೊಲೀಸರು ಜನರನ್ನು ತಪಾಸಣೆ ಮಾಡುತ್ತಿದ್ದಾರೆ. ಆದರೆ ಈ ನಿಯಮ ನಿಂಬೆಹಣ್ಣು ಹಿಡಿದುಕೊಂಡು ಓಡಾಡೋ ಸಚಿವ ರೇವಣ್ಣನವರಿಗೆ ಅನ್ವಯವಾಗುತ್ತಾ ಎನ್ನುವ ಪ್ರಶ್ನೆಯನ್ನು ಜನ ಕೇಳುತ್ತಿದ್ದಾರೆ.

    ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಿಂಬೆ ಹಣ್ಣು ಭಾರೀ ಫೇಮಸ್ ಆಗಿತ್ತು. ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ನಿಂಬೆಹಣ್ಣು ಹಿಡಿದುಕೊಂಡು ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದರು. ಈ ವಿಚಾರ ರಾಜ್ಯಾದ್ಯಂತ ಸಖತ್ ಸುದ್ದಿಯಾಗಿತ್ತು.

  • ವಿಧಾನಸೌಧದಲ್ಲಿ 25 ಲಕ್ಷ ಸಿಕ್ಕಿದ್ದಕ್ಕೆ ಟ್ವಿಸ್ಟ್- ಸಚಿವ ಪುಟ್ಟರಂಗಶೆಟ್ಟಿಗೆ ನುಂಗಲಾರದ ತುತ್ತಾದ ಪ್ರಕರಣ!

    ವಿಧಾನಸೌಧದಲ್ಲಿ 25 ಲಕ್ಷ ಸಿಕ್ಕಿದ್ದಕ್ಕೆ ಟ್ವಿಸ್ಟ್- ಸಚಿವ ಪುಟ್ಟರಂಗಶೆಟ್ಟಿಗೆ ನುಂಗಲಾರದ ತುತ್ತಾದ ಪ್ರಕರಣ!

    ಬೆಂಗಳೂರು: ಇತ್ತೀಚೆಗೆ ವಿಧಾನಸೌಧದಲ್ಲಿ ಸಿಕ್ಕ 25 ಲಕ್ಷ ಹಣ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿಗೆ ನುಂಗಲಾರದ ತುತ್ತಾಗಿದೆ.

    ಸಚಿವರು ಗುತ್ತಿಗೆದಾರರಿಂದ ಹಣ ಪಡೆದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಲಂಚ ನೀಡಿದ ಆ ಗುತ್ತಿಗೆದಾರರು ಯೋಗೀಶ್ ಬಾಬು, ಜ್ಯೋತಿ ಪ್ರಕಾಶ್, ಉಮೇಶ್, ರಾಜು ಮತ್ತು ಸತೀಶ್ ಎಂಬುದಾಗಿ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಪ್ರಕರಣದ ತನಿಖೆಗೆ ಇಳಿದ ಎಸಿಬಿ ದಾಖಲೆ ಸಮೇತ ಗುತ್ತಿಗೆದಾರರನ್ನು ಪತ್ತೆ ಹಚ್ಚಿದೆ. ಈ ಐವರು ಗುತ್ತಿಗೆದಾರರ ಜೊತೆ ಸಚಿವ ಪುಟ್ಟರಂಗಶೆಟ್ಟಿ ಅವರು ನಿರಂತರವಾಗಿ ಫೋನ್ ಸಂಪರ್ಕದಲ್ಲಿರುತ್ತಿದ್ದರು. ಇವರೆಲ್ಲರು ರಸ್ತೆ ಗುತ್ತಿಗೆದಾರರಾಗಿದ್ದು, ಡಾಂಬರೀಕರಣದ ಗುತ್ತಿಗೆ ಪಡೆಯಲು ಸಚಿವರಿಗೆ ತಲಾ ಐದು ಲಕ್ಷ ಟೋಕನ್ ಅಡ್ವಾನ್ಸ್ ಪಡೆದಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ವಿಧಾನಸೌಧದ ಪಶ್ಚಿಮ ಗೇಟ್‍ನಲ್ಲಿ ಸಿಕ್ತು ಕಂತೆ ಕಂತೆ ಹಣ – ಸಚಿವರ ಕಚೇರಿ ಟೈಪಿಸ್ಟ್ ಬಳಿಯೇ ಹಣ ಪತ್ತೆ!

    ಬರೋಬ್ಬರಿ ಎರಡು ಕೋಟಿಗೆ ನಡೆದಿದ್ದ ಡೀಲ್‍ನಲ್ಲಿ ಸಚಿವರಿಗೆ 25 ಲಕ್ಷ ಟೋಕನ್ ಅಡ್ವಾನ್ಸ್ ಆಗಿತ್ತು. ಈ ಐವರು ಲಂಚ ನೀಡಿದವರ ಹೇಳಿಕೆ ಆಧರಿಸಿ ಇದೀಗ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ಇದೇ ವಾರದಲ್ಲಿ ಎಸಿಬಿ ನೋಟೀಸ್ ನೀಡುವ ಸಾಧ್ಯತೆಗಳಿವೆ. ಈ ಎಲ್ಲಾ ಬೆಳವಣಿಗೆಗಳಿಂದ ಮಾಜಿ ಸಿಎಂ ಆಪ್ತ ಮಿನಿಸ್ಟರ್ ಪುಟ್ಟರಂಗಶೆಟ್ಟಿ ಅರೆಸ್ಟ್ ಆಗ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಯಾವುದೇ ತನಿಖೆಗೂ ಸಿದ್ಧ, ನನ್ನ ವಿರುದ್ಧ ಷಡ್ಯಂತ್ರ: ಪುಟ್ಟರಂಗಶೆಟ್ಟಿ

    ಏನಿದು ಪ್ರಕರಣ..?:
    ಇತ್ತೀಚೆಗೆ ವಿಧಾನ ಸೌಧದ ಪಶ್ಚಿಮ ಗೇಟ್ ಬಳಿ ಕಾರು ಪರಿಶೀಲನೆ ನಡೆಸುತ್ತಿದ್ದ ವೇಳೆ ಮೋಹನ್ ಎಂಬಾತನ ಬಳಿ ಸುಮಾರು 25.76 ಲಕ್ಷ ರೂ. ಹಣ ಪತ್ತೆಯಾಗಿತ್ತು. ಮೋಹನ್ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಟೈಪಿಸ್ಟ್ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿತ್ತು. ಹಣ ಪತ್ತೆಯಾದ ಕೂಡಲೇ ಮೋಹನ್ ನನ್ನು ವಶಕ್ಕೆ ಪಡೆದು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಹಣದ ಮೂಲದ ಕುರಿತು ವಿಚಾರಣೆ ಆರಂಭಿಸಿದ್ದರು. ಈ ಕುರಿತು ಅಂದು ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಸಚಿವರು, ವಿಧಾನದಸೌಧದ ತಮ್ಮ ಕಚೇರಿಯಲ್ಲಿ ಸಿಬ್ಬಂದಿ ಬಳಿ ಹಣ ಸಿಕ್ಕಿರುವ ಹಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ, ಈ ಪ್ರಕರಣದ ಬಗ್ಗೆ ಯಾವುದೇ ತನಿಖೆಗೂ ಸಿದ್ಧನಿದ್ದೇನೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv