Tag: vidya sagar school

  • ಹಿಜಬ್ ಗಲಾಟೆ ಬೆನ್ನಲ್ಲೇ ರಾಜೀನಾಮೆ ನೀಡಿದ ಬೆಂಗಳೂರು ಶಿಕ್ಷಕಿ

    ಹಿಜಬ್ ಗಲಾಟೆ ಬೆನ್ನಲ್ಲೇ ರಾಜೀನಾಮೆ ನೀಡಿದ ಬೆಂಗಳೂರು ಶಿಕ್ಷಕಿ

    ಬೆಂಗಳೂರು: ವಿದ್ಯಾಸಾಗರ ಶಾಲೆಯ ಶಿಕ್ಷಕಿ ಅನಾರೋಗ್ಯದ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.

    ವಿವಾದ ಬೆನ್ನಲ್ಲೇ ಶಶಿಕಲಾ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್‍ನ ವಿದ್ಯಾಸಾಗರ್ ಶಾಲೆಯಲ್ಲಿ ಹಿಜಬ್ ಧರಿಸದಂತೆ ಶಿಕ್ಷಕರು ಸೂಚನೆ ನೀಡಿದ್ದಕ್ಕೆ ಪೋಷಕರು ಶಿಕ್ಷಕರ ನಡುವೆ ವಾಗ್ವಾದ ನಡೆದಿತ್ತು.

    ಈ ಹಿನ್ನೆಲೆ ವಿವಾದಕ್ಕೆ ಕಾರಣವಾದ ಶಿಕ್ಷಕಿ ಶಶಿಕಲಾ ಅವರನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿತ್ತು. ಈ ಸಂಬಂಧ ಕೆಲವು ಸಂಘಟನೆಗಳು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

    ಸದ್ಯ ಅನಾರೋಗ್ಯ ಕಾರಣ ನೀಡಿ ಶಿಕ್ಷಕಿ ಶಶಿಕಲಾ ರಾಜೀನಾಮೆ ನೀಡಿದ್ದಾರೆ ಎಂದು ಶಶಿಕಲಾ ರಾಜೀನಾಮೆ ಬಗ್ಗೆ ವಿದ್ಯಾಸಾಗರ್ ಶಾಲೆ ಕಾರ್ಯದರ್ಶಿ ಡಾ.ರಾಜು ಸ್ಪಷ್ಟನೆ ನೀಡಿದ್ದಾರೆ. ನನಗೆ ಆರೋಗ್ಯ ಸರಿ ಇಲ್ಲ. ಕೆಲಸ ಮಾಡಲು ಆಗುವುದಿಲ್ಲ ಎಂದು ಶಿಕ್ಷಕಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

    ಘಟನೆಯೇನು?: ಹಿಜಬ್ ಬಗ್ಗೆ ಅವಹೇಳನಕಾರಿಯಾಗಿ 7ನೇ ತರಗತಿಯ ಬೋರ್ಡ್‍ನಲ್ಲಿ ಶಿಕ್ಷಕಿ ಶಶಿಕಲಾ ಬರೆದಿದ್ದಾರೆ ಎಂದು ಆರೋಪಿಸಿ ಪೋಷಕರು ಶನಿವಾರ ಶಾಲೆ ಮುಂಭಾಗದಲ್ಲಿ ಜಮಾಯಿಸಿ ಶಿಕ್ಷಕಿಯನ್ನು ವಜಾಗೊಳಿಸಲು ಒತ್ತಾಯಿಸಿದ್ದರು.

    ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಮತ್ತು ಡಿಡಿಪಿಐ ಉಪ ನಿರ್ದೇಶಕರು ಸ್ಥಳಕ್ಕೆ ಬಂದು ಪೋಷಕರ ಒತ್ತಾಯದ ಮೇರೆಗೆ ಶಿಕ್ಷಕಿ ಶಶಿಕಲಾರನ್ನು ವಜಾಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ನೀವು ಗಣಿತ ಶಿಕ್ಷಕಿಯಾಗಿ ನಿಮ್ಮ ಕಲಿಕೆಯ ವಿಷಯದ ಬಗ್ಗೆ ಮಾತ್ರ ಮಾತನಾಡಬೇಕು, ಬೇರೆ ಸೂಕ್ಷ್ಮ ವಿಚಾರಗಳನ್ನು ವಿದ್ಯಾರ್ಥಿಗಳ ಜೊತೆ ಮಾತನಾಡಬಾರದು ಎಂದು ಹೇಳಿದ್ದರು. ಇದನ್ನೂ ಓದಿ: ಜಮೀರ್ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು: ಡಿಕೆಶಿ

    POLICE JEEP

    ತರಗತಿಯ ಮೂರು ಮಕ್ಕಳ ಹೆಸರನ್ನು ಬೋರ್ಡ್‍ನಲ್ಲಿ ಕೆಎಲ್‍ಎಸ್ ಎಂದು ಇನ್ಶಿಯಲ್ ಮೂಲಕ ಬರೆದಿದ್ದರು. ತರಗತಿಯಲ್ಲಿ ಅತಿ ಹೆಚ್ಚು ಗಲಾಟೆ ಮಾಡುವ ವಿದ್ಯಾರ್ಥಿಗಳ ಹೆಸರನ್ನು ಬೋರ್ಡ್‍ನಲ್ಲಿ ಬರೆಯಲಾಗಿತ್ತು ಎಂಬ ವಿಚಾರ ನಂತರ ತಿಳಿದು ಬಂದಿತ್ತು. ಇದನ್ನೂ ಓದಿ: ಇವರ ಒತ್ತಡಕ್ಕೆ ಮಣಿಯುತ್ತಾ ಹೋದ್ರೆ ದೇಶವನ್ನೇ ತುಂಡರಿಸುತ್ತಾರೆ – ಖಾದರ್ ವಿರುದ್ಧ ಸಿಂಹ ಕಿಡಿ