Tag: View

  • ‘ಕಾಟೇರ’ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

    ‘ಕಾಟೇರ’ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

    ರ್ಶನ್ (Darshan) ನಟನೆಯ ಕಾಟೇರ (Katera) ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಲ್ಲದೇ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿದೆ. ಸಿನಿಮಾ ರಂಗದ ಅನೇಕ ಗಣ್ಯರಷ್ಟೇ ಅಲ್ಲ, ರಾಜಕಾರಣಿಗಳು ಕೂಡ ಸಿನಿಮಾ ವೀಕ್ಷಿಸಿ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ. ಕಾಟೇರ ಸಿನಿಮಾ ವೀಕ್ಷಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Prahlad Joshi), ದರ್ಶನ್ ನಟನೆಗೆ ಫುಲ್ ಫಿದಾ ಆಗಿದ್ದಾರೆ.  ಚಿತ್ರತಂಡಕ್ಕೂ ಶುಭಾಶಯ ತಿಳಿಸಿದ್ದಾರೆ.

    ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಜೋಶಿ, ‘ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು. ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ. ದರ್ಶನ್ ಅವರ ಅದ್ಭುತ ನಟನೆ ಅಭಿಮಾನಿಗಳನ್ನು ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ಚಲನಚಿತ್ರ ತಂಡಕ್ಕೆ ಶುಭ ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

    ಜೋಶಿ ಅವರು ಸಿನಿಮಾ ವೀಕ್ಷಿಸುವ ಸಮಯದಲ್ಲಿ ಶಾಸಕ ಮಹೇಶ್‌ ಟೆಂಗಿನಕಾಯಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ನಾಗರಾಜ್ ಛಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಂದಗೋಳಮಠ ಸೇರಿದಂತೆ ಹಲವರು ಹಾಜರಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ಈ ಹಿಂದೆಯೂ ಪ್ರಹ್ಲಾದ್ ಜೋಶಿ ಅವರು ಕಾಟೇರ ಸಿನಿಮಾಗೆ ಸಾಥ್ ನೀಡಿದ್ದರು. ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ್ದರು.

  • ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

    ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

    ದೇಶದ ನಾನಾ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ಕಾಂತಾರ (Kantara) ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದೀಗ ಮಠಾಧೀಶರು ಮತ್ತು ರಾಜಕೀಯ ಮುಖಂಡರು ಚಿತ್ರವನ್ನು ನೋಡಿ ಪ್ರಶಂಸಿಸುತ್ತಿದ್ದಾರೆ. ಮೊನ್ನೆಯಷ್ಟೇ ಸದ್ಗುರು ಜಗ್ಗಿವಾಸುದೇವ್, ಶ್ರೀ ರವಿಶಂಕರ್ ಗುರೂಜಿ ತಮ್ಮ ಆಶ್ರಮದಲ್ಲೇ ಭಕ್ತರೊಟ್ಟಿಗೆ ಸಿನಿಮಾ ನೋಡಿದ್ದರು, ಈ ಸಿನಿಮಾದ ವಿಶೇಷತೆ ಬಗ್ಗೆ ಮಾತನಾಡಿದ್ದರು. ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿನಿಮಾ ನೋಡಿದ್ದಾರೆ.

    ಬೆಂಗಳೂರಿನಲ್ಲಿ ತಮ್ಮ ಆಪ್ತರು ಮತ್ತು ಸ್ವಯಂ ಸೇವಕರ ಜೊತೆ ಸಿನಿಮಾ ನೋಡಿರುವ ನಿರ್ಮಲಾ ಸೀತಾರಾಮನ್ (Nirmala Sitharaman) ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವಂತಹ ಚಿತ್ರ ಇದಾಗಿದೆ ಎಂದು ಬಣ್ಣಿಸಿದ್ದಾರೆ. ಇಂತಹ ಚಿತ್ರಗಳು ಹೆಚ್ಚೆಚ್ಚು ತೆರೆಯ ಮೇಲೆ ಬರಬೇಕು ಎನ್ನುವ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾವಿದು ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ

    ನಿರ್ಮಲಾ ಸೀತಾರಾಮನ್ ಮಾಡಿರುವ ಟ್ವೀಟ್‌ಗೆ ರಿಷಬ್ ಶೆಟ್ಟಿ (Rishabh Shetty) ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಹಣಕಾಸು ಸಚಿವರಿಗೆ ಧನ್ಯವಾದಗಳನ್ನೂ ಅವರು ತಿಳಿಸಿದ್ದಾರೆ. ಕಾಂತಾರ ಸಿನಿಮಾ ಈಗಾಗಲೇ ನಾನಾ ಭಾಷೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಹದಿನೈದು ಕೋಟಿಯಲ್ಲಿ ತಯಾರಾದ ಈ ಸಿನಿಮಾ ಅಂದಾಜು 300 ಕೋಟಿ ಗಳಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಹಿಂದಿಯಲ್ಲೂ ಅದು ಹೌಸ್ ಫುಲ್ ಕಾಣುವ ಮೂಲಕ ದಾಖಲೆ ಕೂಡ ಬರೆದಿದೆ.

    Live Tv
    [brid partner=56869869 player=32851 video=960834 autoplay=true]

  • ಭಕ್ತರೊಂದಿಗೆ ಆಶ್ರಮದಲ್ಲಿ ‘ಕಾಂತಾರ’ ವೀಕ್ಷಿಸಿದ ಶ್ರೀ ಶ್ರೀ ರವಿಶಂಕರ ಗುರೂಜಿ

    ಭಕ್ತರೊಂದಿಗೆ ಆಶ್ರಮದಲ್ಲಿ ‘ಕಾಂತಾರ’ ವೀಕ್ಷಿಸಿದ ಶ್ರೀ ಶ್ರೀ ರವಿಶಂಕರ ಗುರೂಜಿ

    ಮೊನ್ನೆಯಷ್ಟೇ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮದಲ್ಲಿ ಮುನ್ನೂರಕ್ಕೂ ಹೆಚ್ಚು ಭಕ್ತರು ಕಾಂತಾರ (Kantara) ಸಿನಿಮಾ ವೀಕ್ಷಿಸಿದ್ದರು. ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನೂ ಆಡಿದ್ದರು. ಇದೀಗ ಬೆಂಗಳೂರಿನಲ್ಲಿ ಶ್ರೀ ರವಿಶಂಕರ್ ಆಶ್ರಮದಲ್ಲೂ ಈ ಸಿನಿಮಾವನ್ನು ತೋರಿಸಲಾಗಿದ್ದು, ಸ್ವತಃ ರವಿಶಂಕರ್ ಗುರೂಜಿ (Ravi Shankar Guruji) ಅವರೇ ಚಿತ್ರವನ್ನು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ನಂತರ ಮಾತನಾಡಿರುವ ಅವರು, ‘ದಂಥಕಥೆಯನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಸಿನಿಮಾ ಭರ್ಜರಿಯಾಗಿ ಗೆಲ್ಲುತ್ತಿದ್ದಂತೆಯೇ ಒಂದೊಂದೇ ವಿಘ್ನಗಳು ಕೂಡ ಹಿಂದೆ ಸರಿಯುತ್ತಿವೆ.  ಈ ಹಿಂದೆ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿಗೆ ಕದ್ದಿರುವ ಆರೋಪ ಕೇಳಿ ಬಂದಿತ್ತು. ಈ ಹಾಡನ್ನು ತಮ್ಮ ನವರಸಂ ಗೀತೆಯಿಂದ ಕದ್ದಿರುವುದಾಗಿ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ದುಡ್ಡಿಗಾಗಿ ಅವರು ಆ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಇದೀಗ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸದಸ್ಯರು ಉತ್ತರಿಸಿದ್ದು, ನಮಗೆ ಯಾವುದೇ ಹಣ ಬೇಕಿಲ್ಲ. ಕ್ರೆಡಿಟ್ ಕೊಟ್ಟು ಉಚಿತವಾಗಿ ಬಳಸಿಕೊಳ್ಳಬಹುದು ಎಂದು ತಂಡದ ಸದಸ್ಯ ವಿಯಾನ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಪತ್ನಿ ಅಶ್ವಿನಿ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ ಹಾಡನ್ನು ಸಿನಿಮಾದಲ್ಲಿ ಬಳಸದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿತ್ತು. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರೂ, ಕೇರಳದ ಕೋಝಿಕ್ಕೋಡ್ ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ.

    ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೋಝಿಕೋಡ್ ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ ಸಿನಿಮಾವನ್ನು ಕುಟುಂಬ ಸಮೇತ ನೋಡಲಿದ್ದಾರೆ ವೀರೇಂದ್ರ ಹೆಗ್ಗಡೆ

    ಕಾಂತಾರ ಸಿನಿಮಾವನ್ನು ಕುಟುಂಬ ಸಮೇತ ನೋಡಲಿದ್ದಾರೆ ವೀರೇಂದ್ರ ಹೆಗ್ಗಡೆ

    ಬಿಡುಗಡೆಯಾದ ನಾಲ್ಕೂ ಭಾಷೆಗಳಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕಾಂತಾರ (Kantara) ಸಿನಿಮಾವನ್ನು ಇಂದು ಸಂಜೆ 7 ಗಂಟೆಗೆ ಡಾ. ವೀರೇಂದ್ರ ಹೆಗ್ಗಡೆಯವರು ನೋಡಲಿದ್ದಾರೆ. ಕುಟುಂಬ ಸಮೇತರಾಗಿ ಮಂಗಳೂರಿನ (Mangalore) ಭಾರತ್ ಮಾಲ್ ನಲ್ಲಿರುವ ಬಿಗ್ ಸಿನಿಮಾಸ್ ನಲ್ಲಿ ಅವರು ಚಿತ್ರವನ್ನು ವೀಕ್ಷಿಸುತ್ತಿದ್ದು, ಸಿನಿಮಾ ತಂಡ ಕೂಡ ಈ ಸಂದರ್ಭದಲ್ಲಿ ಹಾಜರಿರಲಿದೆ. ಕಾಂತಾರ ಸಿನಿಮಾ ಆಗುವಲ್ಲಿ ವೀರೇಂದ್ರ ಹೆಗ್ಗಡೆ (Virendra Heggade) ಅವರು ಕೂಡ ಪ್ರಮುಖ ಪಾತ್ರವಹಿಸಿದ್ದರಿಂದ ಅವರ ಪ್ರತಿಕ್ರಿಯೆ ಕೂಡ ಮಹತ್ವ ಪಡೆದುಕೊಳ್ಳಲಿದೆ.

    ಈಗಾಗಲೇ ಭಾರತೀಯ ಸಿನಿಮಾ ರಂಗದ ಅನೇಕ ಗಣ್ಯರು ಸಿನಿಮಾವನ್ನು ನೋಡಿದ್ದು, ಮೆಚ್ಚಿ ಮಾತನಾಡಿದ್ದಾರೆ. ಬಿಡುಗಡೆಯಾದ ನಾಲ್ಕೂ ಭಾಷೆಯ ಕಲಾವಿದರು ಕೂಡ ಚಿತ್ರವನ್ನು ಕೊಂಡಾಡಿದ್ದಾರೆ. ನಿನ್ನೆಯಷ್ಟೇ ಕಾಂತಾರ ಸಿನಿಮಾವನ್ನು ವೀಕ್ಷಿಸಿರುವ ಕಂಗನಾ ರಣಾವತ್, ಈ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲದೇ, ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಈ ಚಿತ್ರವನ್ನು ನೇರವಾಗಿ ಆಯ್ಕೆ ಮಾಡಿ ಎಂದು ಸರಕಾರದ ಗಮನ ಸೆಳೆದಿದ್ದಾರೆ. ಇಂತಹ ಚಿತ್ರಗಳೇ ಭಾರತದಿಂದ ಆಸ್ಕರ್ ಗಾಗಿ ಕಳುಹಿಸಬೇಕು. ಈ ಚಿತ್ರಕ್ಕೆ ಗೆಲ್ಲುವಂತಹ ಎಲ್ಲ ಅರ್ಹತೆಗಳೂ ಇವೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಿಷಬ್ ಹೇಳಿದ ಹಿಂದೂ ಪದ ಒಪ್ಪಲ್ಲ, ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ: ಸಮರ್ಥಿಸಿದ ಚೇತನ್

    ರಿಷಬ್ ಶೆಟ್ಟಿ (Rishabh Shetty) ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾವನ್ನು ನೋಡುವುದಾಗಿ ಈ ಹಿಂದೆ ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದ್ದರು. ಈ ಸಿನಿಮಾವನ್ನು ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದೇನೆ ಎಂದು ಹೇಳಿದ್ದರು. ಅದರಂತೆ ನಿನ್ನೆ ಸಿನಿಮಾ ನೋಡಿದ್ದಾರೆ. ಥಿಯೇಟರ್ ನಿಂದ ಆಚೆ ಬಂದು ಭಾವುಕರಾಗಿಯೇ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

    ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು ನೋಡಿದ ತೃಪ್ತಿ ನನಗಿದೆ. ಈ ಅನುಭವದಿಂದ ಆಚೆ ಬರಲು ನನಗೆ ಒಂದು ವಾರವಾದರೂ ಬೇಕು. ಆ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಿಂಚುಳ್ಳಿಗಾಗಿ 3 ಗಂಟೆ ಕಾಲ ಕಾವೇರಿ ನದಿ ತೀರದಲ್ಲಿ ದರ್ಶನ್!

    ಮಿಂಚುಳ್ಳಿಗಾಗಿ 3 ಗಂಟೆ ಕಾಲ ಕಾವೇರಿ ನದಿ ತೀರದಲ್ಲಿ ದರ್ಶನ್!

    ಮಂಡ್ಯ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಪ್ರೀತಿ. ಆದ್ದರಿಂದ ಆಗಾಗ ಕಾಡಿಗೆ ಹೋಗಿ ಪ್ರಾಣಿ ವೀಕ್ಷಣೆ ಮಾಡಿ ಬರುತ್ತಾರೆ. ಆದರೆ ಪ್ರಾಣಿ ಪ್ರೀತಿಯ ಜೊತೆ ಈಗ ಪಕ್ಷಿಯ ಮೇಲೂ ದರ್ಶನ್ ಪ್ರೀತಿ ತೋರಿಸಿದ್ದಾರೆ.

    ಹೌದು.. ನಟ ದರ್ಶನ್ ಇತ್ತೀಚೆಗಷ್ಟೆ ಮಿಂಚುಳ್ಳಿ ಪಕ್ಷಿಗಳ ವೀಕ್ಷಣೆಗಾಗಿ ಸಕ್ಕರೆನಾಡಿಲ್ಲಿ ಸಂಚಾರ ನಡೆಸಿದ್ದಾರೆ. ನಗುವನಹಳ್ಳಿಯಲ್ಲಿ ಮಿಂಚುಳ್ಳಿ ಪಕ್ಷಿಗಳು ಅಧಿಕವಾಗಿದೆ. ಆದ್ದರಿಂದ ದರ್ಶನ್ ಈ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಮಿಂಚುಳ್ಳಿ ಪಕ್ಷಿಗಳ ವೀಕ್ಷಣೆಗಾಗಿ ಹೋಗಿದ್ದ ದರ್ಶನ್ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಹರಿದಾಡುತ್ತಿವೆ.


    ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯ ಕಾವೇರಿ ನದಿ ದಂಡೆಯಲ್ಲಿ ಪಕ್ಷಿಗಳ ಫೋಟೋ ಶೂಟ್‍ಗೆ ದರ್ಶನ್ ಹೋಗಿದ್ದರು. ಅಲ್ಲಿ ಬಣ್ಣದ ಮಿಂಚುಳ್ಳಿ ಪಕ್ಷಿಗಳ ವೀಕ್ಷಣೆಗಾಗಿ ಸುಮಾರು ಮೂರು ಗಂಟೆಯ ಕಾಲ ಕಾವೇರಿ ನದಿ ತೀರದಲ್ಲಿ ಚಳಿಯಲ್ಲಿ ಕಾದು ಕುಳಿತ್ತಿದ್ದರು. ಬಳಿಕ ಮಿಂಚುಳ್ಳಿ ಪಕ್ಷಿಗಳು ಬಂದ ನಂತರ ಕ್ಯಾಮೆರಾದಲ್ಲಿ ವೀಕ್ಷಣೆ ಮಾಡಿದ್ದಾರೆ.

    ನಟ ದರ್ಶನ್ ಸ್ಥಳಕ್ಕೆ ಬಂದಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾವೇರಿ ಪಕ್ಷಿಪ್ರೇಮಿ ವಿನಯ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ. ಇತ್ತ ಯಜಮಾನ ಪಕ್ಷಿ ಪ್ರೀತಿ ಕಂಡು ವೃತ್ತಿಪರ ಪಕ್ಷಿ ಪ್ರೇಮಿಗಳು ದರ್ಶನ್ ಅವರಿಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv