ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ನಗರದಲ್ಲಿ ಕೆಲ ಬಿಜೆಪಿ (BJP) ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ವಿಜಯಪುರ: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿಸಿದ (Assult) ಘಟನೆ ವಿಜಯಪುರದ (Vijayapura) ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ನಡೆದಿದೆ.
ಮಾಲೀಕ ಖೇಮು ರಾಠೋಡ ಹಾಗೂ ಸಂಬಂಧಿಕರು ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಮೇಲೆ ಹಲ್ಲೆ ನಡೆದಿದ್ದು ಕಾರ್ಮಿಕರು ಈಗ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿದಿನ ಕಾರ್ಮಿಕರಿಗೆ 600 ರೂ. ಕೂಲಿ ನೀಡಲಾಗುತ್ತಿತ್ತು. ಕಳೆದ ಸಂಕ್ರಮಣದಂದು ಮನೆಗೆ ತೆರಳಿದ್ದ ಕಾರ್ಮಿಕರು ಮರಳಿ 16 ರಂದು ಇಟ್ಟಿಗೆ ಭಟ್ಟಿಗೆ ಬಂದಿದ್ದರು. ಬಂದ ಕಾರ್ಮಿಕರು ತಮ್ಮ ಸಾಮಾನುಗಳನ್ನು ಕೊಂಡೊಯ್ಯಲು ಮುಂದಾಗುತ್ತಿದ್ದರು.
ಈ ವಿಚಾರ ತಿಳಿದ ಮಾಲೀಕ ಬೇರೆ ಕಡೆ ಕೆಲಸಕ್ಕೆ ಹೋಗುತ್ತಿರುವುದು ಯಾಕೆ ಎಂದು ಹೇಳಿ ತನ್ನ ಜನರನ್ನು ಕರೆಸಿ ಹಲ್ಲೆ ಮಾಡಿಸಿದ್ದಾನೆ. ಮೂರು ದಿನ ಕೂಡಿ ಹಾಕಿ ಪೈಪ್‌ನಿಂದ ಬೆನ್ನು, ಕಾಲು, ಸೊಂಟದ ಮೇಲೆ ಮನ ಬಂದಂತೆ ಥಳಿಸಿದ್ದಾರೆ.
ಬೆಂಗಳೂರು: ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ಶೀಘ್ರವಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂದು ಆರೋಗ್ಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಸಲ್ಲಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ನೇತೃತ್ವದ ಜಿಲ್ಲೆಯ ಶಾಸಕರ ನಿಯೋಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿವೆ ಮತ್ತು ಹೊಸದಾಗಿ ಬ್ಲ್ಯಾಕ್ ಫಂಗಸ್ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಇದರ ಚಿಕಿತ್ಸೆಗೆ ಸೂಕ್ತವಾದ ತಜ್ಞ ವೈದ್ಯರ ಅವಶ್ಯಕತೆ ಇದ್ದು ಕೂಡಲೇ ತಜ್ಞ ವೈದ್ಯರನ್ನು ನೇಮಕ ಮಾಡಬೇಕು ಎಂದು ಮನವಿ ಸಲ್ಲಿಸಿದರು.
ಮುಖ್ಯಮಂತ್ರಿಯವರ ಆದೇಶದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ಖುದ್ದಾಗಿ ಅಧಿಕಾರಿಗಳ ಜೊತೆಗೆ ಕೋವಿಡ್‍ಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು ಹಾಗೂ ಹಲವು ಹಳ್ಳಿಗಳಿಗೆ ಭೇಟಿ ನೀಡಿದ ವೇಳೆ ಪ್ರಮುಖವಾಗಿ ವೆಂಟಿಲೇಟರ್ ಬೆಡ್, ಆಕ್ಸಿಜನ್ ಬೆಡ್ ಸಮಸ್ಯೆ, ಅಗತ್ಯ ತಾಂತ್ರಿಕ ಸಿಬ್ಬಂದಿಯ ಅವಶ್ಯಕತೆ, ರೆಮಡಿಸಿವಿರ್ ಲಸಿಕೆಗೆ ಹೆಚ್ಚಿನ ಬೇಡಿಕೆ ಪ್ರಮುಖವಾಗಿ ಕಂಡುಬಂದಿದ್ದು ಅದರ ವಾಸ್ತವ ವರದಿಯನ್ನು ಮಾನ್ಯ ಸಚಿವರಿಗೆ ನೀಡಲಾಯಿತು.
ಸಚಿವರಿಗೆ ಸಲ್ಲಿಸಿದ ಪ್ರಮುಖ ವಿಷಯಗಳು :
1. ವಿಜಯಪುರ ಜಿಲ್ಲೆಯಲ್ಲಿ ನಿರ್ಮಿಸುತ್ತಿರುವ ಹೈಟೆಕ್ ಆಸ್ಪತ್ರೆಯನ್ನು ಅಗತ್ಯ ಸಿಬ್ಬಂದಿಯೊಂದಿಗೆ 100 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ಕೆಲಸ ಪ್ರಾರಂಭಿಸುವುದು.
2. ಜಿಲ್ಲೆಯ 13 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಿ ಮಾತ್ರ ತಾಲೂಕಾ ಆಸ್ಪತ್ರೆ ಇದ್ದು, ಉಳಿದ 9 ತಾಲೂಕಿನಲ್ಲಿ, ತಾಲೂಕಾ ಆಸ್ಪತ್ರೆ ಮಂಜೂರು ಮಾಡುವುದು ಹಾಗೂ ಶೀಘ್ರವೇ ಕಾಮಗಾರಿ ಪ್ರಾರಂಭಿಸುವುದು.
3. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೆಂಟಿಲೇಟರ್ ಬೆಡ್, ಆಕ್ಸಿಜನ್ ಬೆಡ್ ಹಾಗೂ ಸೂಕ್ತ ತಜ್ಞ ವೈದ್ಯರು ಹಾಗೂ ತಂತ್ರಜ್ಞರ ನೇಮಕ ಹಾಗೂ ಇವರಿಗೆ ಸೂಕ್ತವಾದ ತರಬೇತಿ ನೀಡುವುದು
4. ಎನ್ ಟಿ ಪಿ ಸಿ ಘಟಕದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ 100 ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು
ಎನ್ ಟಿ ಪಿ ಸಿ ಮುಖ್ಯಸ್ಥರಿಗೆ ಸೂಚನೆ ನೀಡುವುದು.
5.ಜಿಲ್ಲೆಯಲ್ಲಿ 81 ವಿವಿಧ ವೃಂದದ ತಜ್ಞ ವೈದ್ಯರ ಅವಶ್ಯಕತೆ ಇದ್ದು ಕೂಡಲೇ ವೈದ್ಯರನ್ನು ನೇಮಕ ಮಾಡಿಕೊಳ್ಳುವುದು.
6. ಸಿಂಧಗಿ ಹಾಗೂ ತಾಳಿಕೋಟೆ ತಾಲೂಕಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕ ನಿರ್ಮಿಸುವುದು.
7.ರೆಮಡಿಸಿವಿರ್ ಲಸಿಕೆಗೆ ಹೆಚ್ಚಿನ ಬೇಡಿಕೆಯಿದ್ದು, ಬೇಡಿಕೆ ನೀಗಿಸಲು ಅಗತ್ಯ ಲಸಿಕೆಗಳನ್ನು ಸರಬರಾಜು ಮಾಡುವುದರ ಕುರಿತು ಮನವಿ ಸಲ್ಲಿಸಲಾಯಿತು.
ಉಸ್ತುವಾರಿ ಸಚಿವರ ನೇತೃತ್ವದ ನಿಯೋಗದಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರುಣ್ ಶಹಾಪುರ, ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ್ ಹಾಜರಿದ್ದರು.
ವಿಜಯಪುರ: ಅಸ್ಸಾಂನ ಗುವಾಹಾಟಿಯಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸೇನಾ ಜೀಪ್ ನದಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಅರುಣಾಚಲ ಪ್ರದೇಶ ಹಾಗೂ ಆಸ್ಸಾಂ ರಾಜ್ಯಗಳ ಗಡಿಭಾಗದ ಬ್ರಹ್ಮಪುತ್ರ ಉಪ ನದಿಯಲ್ಲಿ ಈ ಅವಘಡ ಸಂಭವಿಸಿದೆ. ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಸಾಡಿಯಾ ಎಂಬ ಚಾಪಕೋವ ಮೂಲದ ಮದ್ರಾಸ್ ರೆಜಿಮೆಂಟ್ ಟೆರಿಟೋರಿಯಲ್ ಸೈನ್ಯದಿಂದ 18 ಮಂದಿ ಯೋಧರು ಜೀಪ್ ನಲ್ಲಿದ್ದರು. ಆದರೆ ರಾತ್ರಿ ಇಡುಲಿ ಮತ್ತು ಕಾಬಾಂಗ್ ಗ್ರಾಮಗಳ ನಡುವೆ ಇದ್ದ ನದಿಯೊಳಗೆ ಇದ್ದಕ್ಕಿದ್ದಂತೆ ವಾಹನವು ಬಿದ್ದಿದೆ.
ನದಿಗೆ ಬಿದ್ದ ಪರಿಣಾಮ ಮೂವರು ಯೋಧರು ಮೃತಪಟ್ಟಿದ್ದಾರೆ. ಇವರಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯ ಒಬ್ಬ ಯೋಧ ಕೂಡ ಸೇರಿದ್ದಾರೆ. ನಂತರ ಕೂಡಲೇ ಪೊಲೀಸ್ ಮತ್ತು ಸೇನೆಯವರು ರಕ್ಷಣಾ ಕಾರ್ಯಚರಣೆ ಮಾಡಿ 15 ಮಂದಿ ಯೋಧರನ್ನು ರಕ್ಷಿಸಿದ್ದಾರೆ. ಮೃತ ಮೂವರು ಯೋಧರಲ್ಲಿ ಒಬ್ಬರು ಇನ್ನು ಪತ್ತೆಯಾಗಿಲ್ಲ. ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇನ್ನು ಈ ಅವಘಡದಿಂದ ಗಾಯಗೊಂಡ ಸೈನಿಕರಲ್ಲಿ ನಾಲ್ವರನ್ನು ಚಿಕಿತ್ಸೆಗಾಗಿ ಚಾಪಕೋವಾ ಫಸ್ಟ್ ರೆಫರಲ್ ಘಟಕಕ್ಕೆ ರವಾನಿಸಲಾಗಿದೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ರೋಣಿಹಾಳ ಗ್ರಾಮದ ಯೋಧ ಪರಸುರಾಮ ಖ್ಯಾತನ್ನವರ(32) ಮೃತ ಯೋಧ. ಇವರು 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಫೆಬ್ರುವರಿ 9 ರಂದು ಕೋಲ್ಹಾರ ಪಟ್ಟಣದಲ್ಲಿ ನಿರ್ಮಿಸಿದ ನೂತನ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ಫೆ. 11 ರಂದು ಸೇವೆಗಾಗಿ ತೆರಳಿದ್ದರು.
ಮೃತರ ಕುಟುಂಬಕ್ಕೆ ಸೇನೆಯ ಮೇಜರ್ ಕರಿಯಪ್ಪ ಅವರಿಂದ ಮಾಹಿತಿ ರವಾನೆ ಆಗಿದೆ. ಇತ್ತ ಯೋಧನ ಮನೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ವಿಜಯಪುರ: ಸಾಲ ನೀಡಲು ನಿರಾಕರಿಸಿದ್ದಕ್ಕೆ ರೈತರೊಬ್ಬರು ಬ್ಯಾಂಕ್ ಮ್ಯಾನೇಜನರ್ ಮೇಲೆ ಹಲ್ಲೆ ನಡೆಸಿದ ಘಟನೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ನಿವಾಸಿ ಗುರುಲಿಂಗಪ್ಪ ಮೂಡಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿ) ಮ್ಯಾನೇಜರ್ ಅಶೋಕ್ ವಾಲಿ ಮೇಲೆ ಹಲ್ಲೆ ನಡೆಸಿದ್ದಾನೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬಳಿಕ ಗುರುಲಿಂಗಪ್ಪ ಪರಾರಿಯಾಗಿದ್ದಾನೆ.
ಏನಿದು ಪ್ರಕರಣ?
ಲಿಂಗಪ್ಪ ಹಲವು ದಿನಗಳಿಂದ ಬೆಳೆ ಸಾಲಕ್ಕಾಗಿ ಕೆವಿಜಿ ಬ್ಯಾಂಕ್‍ಗೆ ಅಲೆದಾಡುತ್ತಿದ್ದ. ಆದರೆ ಇವನ ಮತ್ತು ಸಹೋದರ ಗುರುಸಿದ್ದಪ್ಪ ಮೂಡಲಿಯ ನಡುವೆ 8 ಎಕರೆ ಜಮೀನು ಹಂಚಿಕೆ ವಿಚಾರದಲ್ಲಿ ವ್ಯಾಜ್ಯವಿತ್ತು. ಅಲ್ಲದೆ 8 ಎಕರೆ ಜಮೀನು ಇಬ್ಬರಿಗೂ ಹಂಚಿಕೆಯಾಗಿರಲಿಲ್ಲ. ಆದ್ದರಿಂದ ಬೆಳೆ ಸಾಲ ನೀಡಬೇಡಿ ಎಂದು ಗುರುಸಿದ್ದಪ್ಪ ಅವರು ಮ್ಯಾನೇಜರ್‍ಗೆ ತಿಳಿಸಿದ್ದರು. ಈ ಕಾರಣಕ್ಕೆ ಮ್ಯಾನೇಜರ್ ಗುರುಲಿಂಗಪ್ಪನಿಗೆ ಸಾಲ ನೀಡಲು ನಿರಾಕರಿಸಿದ್ದರು. ದಿನವೂ ಬ್ಯಾಂಕ್ ಗೆ ಬಂದು ಅಲೆದಾಡಿ ರೋಸಿಹೊಗಿದ್ದ ಗುರುಲಿಂಗಪ್ಪ ಕೋಪಗೊಂಡು ಮ್ಯಾನೇಜರ್‍ಗೆ ಕಪಾಳಮೋಕ್ಷ ಮಾಡಿ ಈಗ ಪರಾರಿಯಾಗಿದ್ದಾನೆ.
ವಿಜಯಪುರ: ಸರ್ಕಾರಿ ಆಂಬುಲೆನ್ಸ್ ನಲ್ಲಿ ವೈದ್ಯ ತನ್ನ ಮನೆ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಸಾರ್ಜಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ರವಿ ಕಟ್ಟಿಮನಿ ಎಂಬಾತ ವಿಜಯಪುರದಿಂದ ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ನಲ್ಲಿ ತನ್ನ ಮನೆಯ ಸಾಗ್ರಿಗಳನ್ನು ಕೊಂಡೊಯ್ಯುತ್ತಿದ್ದ. ಈ ವೇಳೆ ವಿಜಯಪುರದ ಹೊರವಲಯದಲ್ಲಿ ಸಾರ್ವಜನಿಕರ ಕೈಗೆ ವೈದ್ಯ ಮತ್ತು ಆಂಬುಲೆನ್ಸ್ ಚಾಲಕ ಸಿಕ್ಕಿ ಬಿದ್ದಿದ್ದಾರೆ.
ಆಂಬುಲೆನ್ಸ್ ನಲ್ಲಿ ಮನೆಯ ಸಾಮಗ್ರಿಗಳನ್ನು ನೋಡಿ ಜನರು ವೈದ್ಯನಿಗೆ ಛೀಮಾರಿ ಹಾಕಿದರು.
ವಿಜಯಪುರ: ಬಿಜೆಪಿಯವರು ಬಡ್ಡಿ ನನ್ನಮಕ್ಳು ಅಂತ ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಅವರು ಹೀಯಾಳಿಸಿ ಬೈದಿದ್ದಾರೆ.
ನಗರದ ಜೆ.ಬಿ ಗಾರ್ಡನ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ಲಾಕ್ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು, ದೇಶ ಭಕ್ತಿ ಬಿಜೆಪಿಯವರಿಗೆ ಮಾತ್ರವಿಲ್ಲ. ಕಾಂಗ್ರೆಸ್ಸಿಗರ ರಕ್ತ ಕಣ-ಕಣದಲ್ಲಿ ದೇಶ ಭಕ್ತಿ ಹರಿಯುತ್ತಿದೆ ಎಂದು ಹೇಳಿದರು.
ಬಡ್ಡಿ ಮಕ್ಳು ಬಿಜೆಪಿಯವರಿಂದ ದೇಶ ಭಕ್ತಿಯ ಬಗ್ಗೆ ನಾವು ಕಲಿಯಬೇಕಿಲ್ಲ. ಯಾವಾಗಲೂ ಬರೀ ಸುಳ್ಳು ಹೇಳುವುದೇ ಅವರ ಕೆಲಸ ಎಂದು ಬಿಜೆಪಿಯವರ ವಿರುದ್ಧ ಹರಿಹಾಯ್ದರು.
ಸಚಿವರು ಭಾಷಣದಲ್ಲಿ ಬಡ್ಡಿ ಮಕ್ಳು ಶಬ್ಧ ಬಳಸಿದಕ್ಕೆ ಬಿಜೆಪಿಯಲ್ಲಿ ವಿರೋಧ ಕೇಳಿ ಬಂದಿದೆ.
ವಿಜಯಪುರ: ಮಳೆಯಿಂದ ಹಳ್ಳ ದಾಟುವ ವೇಳೆ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬಳು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಕೊಟ್ಯಾಳ ಗ್ರಾಮದಲ್ಲಿ ನಡೆದಿದೆ.
ಶಾಲೆಯಿಂದ ಮನೆಗೆ ಮರುಳುತ್ತಿದ್ದ ವೇಳೆ ಈ ದುರಂತ ನಡೆದಿದ್ದು, ಐಶ್ವರ್ಯಾ ಸೋಲಂಕರ್ (9) ಮೃತಪಟ್ಟಿದ್ದಾಳೆ.
ಐಶ್ವರ್ಯಾ ಮತ್ತು ಗೀತಾ ಸೋಲಂಕರ್ ಶಾಲೆ ಮುಗಿಸಿ ಸಂಜೆ ಮನೆಗೆ ಬರುತ್ತಿದ್ದರು. ಕಿರು ಸೇತುವೆ ಮೇಲೆ ನಡೆಯುತ್ತಿದ್ದಾಗ ನೀರು ಬಂದಿದ್ದು ಇಬ್ಬರು ನೀರಿಗೆ ಬಿದ್ದಿದ್ದಾರೆ. ಇವರ ಹಿಂದೆಯೇ ಬರುತ್ತಿದ್ದ ಜನರು ಈ ದೃಶ್ಯವನ್ನು ನೋಡಿ ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಅಷ್ಟರಲ್ಲಾಗಲೇಐಶ್ವರ್ಯಾ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದಳು. ನೀರಿನಲ್ಲಿ ಸಹಾಯ ಬೇಡುತ್ತಿದ್ದ ಗೀತಾಳನ್ನು ಜನರು ಕೂಡಲೇ ರಕ್ಷಣೆ ಮಾಡಿದ್ದಾರೆ.
ಕೂಡಲೇ ಬುಲಾವ್ ಬಂದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಐಶ್ವರ್ಯಾಳ ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ರಾಮಚಂದ್ರ ಚೌಧರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆ ನಡೆಸಲು ಐಶ್ವರ್ಯಾ ಶವವವನ್ನು ಜಿಲ್ಲಾಸ್ಪತ್ರೆಗೆ ತರಲಾಗಿದೆ.
ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಳ್ಳಗಳು ತುಂಬಿ ಹರಿಯುತ್ತಿದೆ.
ವಿಜಯಪುರ: ಕಟ್ಟಡ ಕಾರ್ಮಿಕರಾಗಿದ್ದ ಇಲ್ಲಿನ ಶಿಕಾರಿಖಾನೆ ನಿವಾಸಿಯಾಗಿರೋ ಚಂದ್ರಕಾಂತ ದೊಡ್ಡಮನಿ 2 ವರ್ಷಗಳ ಹಿಂದೆ ಎಂದಿನಂತೆ ಕೂಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಮಹಾನಗರ ಪಾಲಿಕೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮುಚ್ಚದೆ ಬಿಟ್ಟಿದ್ದ ಗಟಾರಕ್ಕೆ ಬಿದ್ದಿದ್ದಾರೆ. ಆದರೆ ಈ ಗಟಾರಕ್ಕೆ ಒಳಚರಂಡಿಯ ಸಂಪರ್ಕವು ಇದ್ದು ಸಾಕಷ್ಟು ಹೂಳು ತುಂಬಿದ್ದ ಕಾರಣ ಚಂದ್ರಕಾಂತಗೆ ಮೇಲ್ಗಡೆ ಬರಲಾಗದೆ ಅಲ್ಲೆ ಸಾವನ್ನಪ್ಪಿದ್ದಾರೆ. ಮನೆಯ ಆಧಾರ ಸ್ತಂಭವಾಗಿದ್ದ ಚಂದ್ರಕಾಂತನ ಸಾವಿನಿಂದ ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ.
ಮಹಾನಗರ ಪಾಲಿಕೆಯ ಅಚಾತುರ್ಯಕ್ಕೆ ಇದೀಗ ಅಮಾಯಕ ಕೂಲಿ ಕಾರ್ಮಿಕನ ಕುಟುಂಬ ಬೀದಿಗೆ ಬಂದಿದೆ. ಚಂದ್ರಕಾಂತ್‍ಗೆ ಒಂದು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿದ್ದು, ಅದರಲ್ಲಿ ಒರ್ವ ಹೆಣ್ಣು ಮಗಳ ಮದುವೆಯಾಗಿದೆ. ಇನ್ನು ಜೀವನ ನಿರ್ವಹಣೆಗಾಗಿ ಚಂದ್ರಕಾಂತ ಹೆಂಡತಿ ನಿಂಗವ್ವ, ಮಗ ಸಂತೋಷ ಮತ್ತು ಮಗಳು ಬೋರಮ್ಮ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ.
ನಗರದಲ್ಲಿ ಜೀವನ ನಿರ್ವಹಣೆ ಹೆಚ್ಚಾಗಿದ್ದರಿಂದ ಚಂದ್ರಕಾಂತ ಕುಟುಂಬ ಜಿಲ್ಲೆಯ ಇಂಡಿ ತಾಲೂಕಿನ ತದ್ದೆವಾಡ ಗ್ರಾಮದಲ್ಲಿ ನೆಲೆಸಿದ್ದಾರೆ. ಇನ್ನು ಮಗಳು ಬೋರಮ್ಮಗೆ ಮದುವೆ ವಯಸ್ಸಾಗಿದ್ದು, ಮದುವೆ ಮಾಡಲು ನಿಂಗವ್ವ ಪರದಾಡುತ್ತಿದ್ದಾರೆ. ಚಂದ್ರಕಾಂತರ ಹಠಾತ್ ಸಾವಿನಿಂದ ಮಗ ಸಂತೋಷ ಜೀವನ ನಿರ್ವಹಣೆಗಾಗಿ ಅರ್ಧಕ್ಕೆ ಶಾಲೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿದ್ದಾನೆ.
ಮಹಾನಗರ ಪಾಲಿಕೆಯ ಅಚಾತುರ್ಯಕ್ಕೆ ಚಂದ್ರಕಾಂತ ಕುಟುಂಬ ಬೀದಿಗೆ ಬಿದ್ದಿದ್ದು, ಇವರಿಗೆ ಕಾರ್ಮಿಕ ಇಲಾಖೆಯಿಂದಾಗಲಿ ಅಥವಾ ಮಹಾನಗರ ಪಾಲಿಕೆಯಿಂದಾಗಲಿ ಯಾವುದೆ ಪರಿಹಾರ ಸಿಕ್ಕಿಲ್ಲ. ಹೀಗಾಗಿ ಬೆಳಕು ಕಾರ್ಯಕ್ರಮದಿಂದಾದರು ಈ ಕುಟುಂಬಕ್ಕೆ ಬೆಳಕಾಗಲಿ ಅನ್ನೋದು ನಮ್ಮ ಆಶಯ.