Tag: vijay bhaskar

  • ಉಡುಗೊರೆ ನೀಡಿದ್ದ ಚಿನ್ನದ ಕಿರೀಟವನ್ನ ಸರ್ಕಾರಕ್ಕೆ ಹಸ್ತಾಂತರಿಸಿದ ಕಾರಜೋಳ

    ಉಡುಗೊರೆ ನೀಡಿದ್ದ ಚಿನ್ನದ ಕಿರೀಟವನ್ನ ಸರ್ಕಾರಕ್ಕೆ ಹಸ್ತಾಂತರಿಸಿದ ಕಾರಜೋಳ

    – 140 ಗ್ರಾಂದ ಏಳು ಲಕ್ಷ ಮೌಲ್ಯದ ಕಿರೀಟ

    ಬೆಂಗಳೂರು: ಉಡುಗೊರೆಯಾಗಿ ನೀಡಿದ್ದ 140 ಗ್ರಾಂ ತೂಕವುಳ್ಳ ಚಿನ್ನದ ಕಿರೀಟವನ್ನ ಡಿಸಿಎಂ ಗೋವಿಂದ ಕಾರಜೋಳ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ನೀಡಿದ್ದಾರೆ.

    ಚಿನ್ನದ ಕಿರೀಟ ಹಸ್ತಾಂತರಿಸಿದ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿಗಳು, ವಿಜಯಪುರ ಜಿಲ್ಲೆಯ ಕಾರಜೋಳ ಗ್ರಾಮದ ಜನರು ಪ್ರೀತಿಯಿಂದ ಏಳು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟ ನೀಡಿದ್ದರು. ಇದೀಗ ನಿಯಮಗಳ ಪ್ರಕಾರ ವಿಜಯಭಾಸ್ಕರ್ ಅವರ ಮೂಲಕ ಉಡುಗೊರೆಯನ್ನ ಸರ್ಕಾರಕ್ಕೆ ಹಸ್ತಾಂತರಿಸಿದ್ದೇನೆ ಎಂದು ತಿಳಿಸಿದರು. ಚಿನ್ನದ ಕಿರೀಟ ಹಸ್ತಾಂತರಿಸಿದ ಕುರಿತು ಟ್ವಿಟ್ಟರ್ ಮೂಲಕ ಸಹ ಮಾಹಿತಿ ನೀಡಿದ್ದಾರೆ.

    ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮಸ್ಥರು ನನಗೆ ಸಮರ್ಪಿಸಿದ್ದ ಬಂಗಾರದ ಕಿರೀಟವನ್ನು ಇಂದು ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದೆ. ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ಕಾರಜೋಳ ಗ್ರಾಮದ ಅಭಿವೃದ್ಧಿಗಾಗಿ ರೂಪಿಸಿ ಅನುಷ್ಟಾನ ಗೊಳಿಸಿದ ಯೋಜನೆಗಳು, ನೀರಾವರಿ ಯೋಜನೆಗಳ ಅನುಷ್ಟಾನ, ಗ್ರಾಮದ ಮನೆಯ ಮಗನು ಉಪಮುಖ್ಯಮಂತ್ರಿಯಾಗಿರುವುದಕ್ಕೆ ಅತ್ಯಂತ ಪ್ರೀತಿ ಗೌರವದಿಂದ ಗ್ರಾಮಸ್ಥರು ಸನ್ಮಾನಿಸಿದ್ದರು. ಕಳೆದ 6 ವರ್ಷಗಳಿಂದ ಸನ್ಮಾನ ಮಾಡಲು ಪ್ರಯತ್ನಿಸುತ್ತಿದ್ದರು.  ಇದನ್ನೂ ಓದಿ: ನಮೋ ಹುಟ್ಟುಹಬ್ಬಕ್ಕೆ ಹನುಮನಿಗೆ 1.25 ಕೆಜಿ ತೂಕದ ಚಿನ್ನದ ಕಿರೀಟ ನೀಡಿದ ಅಭಿಮಾನಿ

    ಕಾರಜೋಳ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಒತ್ತಾಯ ಪೂರ್ವಕವಾಗಿ ಸನ್ಮಾನಿಸಿ, ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ಶಾಸಕ, ಸಚಿವರಾಗಿ ಸಲ್ಲಿಸಿದ ಸೇವೆಗಾಗಿ ಮಾಡಿದ ಸನ್ಮಾನ ಸರ್ಕಾರಕ್ಕೆ ಸಲ್ಲಬೇಕು. ಹೀಗಾಗಿ ಈ ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗೋವಿಂದ್ ಕಾರಜೋಳ, ಎಂ.ಬಿ ಪಾಟೀಲ್, ಶಿವಾನಂದ್ ಪಾಟೀಲ್‍ಗೆ ಚಿನ್ನದ ಕಿರೀಟ

  • ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಸೂಚನೆ

    ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಸೂಚನೆ

    ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

    ಕೊರೊನಾ ಭೀತಿಯಿಂದ ಕೆಲ ಸರ್ಕಾರಿ ಇಲಾಖೆಗಳಿಗೆ ರಜೆ ನೀಡಲಾಗಿತ್ತು. ಈಗ ಸೂಚಿಸಿರುವ ಎಲ್ಲ ಸರ್ಕಾರಿ ಅಧಿಕಾರಿಗಳು ಮರಳಿ ಕೆಲಸಕ್ಕೆ ಹಾಜರಗಬೇಕು ಎಂದು ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿ ಸೂಚಿಸಿದ್ದಾರೆ.

    ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯ ಸೇರಿದಂತೆ ರಾಜ್ಯಮಟ್ಟದ ಕಚೇರಿಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ರಾಜ್ಯದಲ್ಲಿರುವ ಎಲ್ಲಾ ಖಜಾನೆಗಳನ್ನು ಸೇರಿದಂತೆ ಆರ್ಥಿಕ ಇಲಾಖೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಮತ್ತು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ವರ್ಗದ ಅಧಿಕಾರಿ/ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು.

    ಮೇಲ್ಕಾಣಿಸಿದ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳಲ್ಲಿ ಸರ್ಕಾರಿ ನಿಗಮ ಮಂಡಳಿಗಳಲ್ಲಿ ಮತ್ತು ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್-ಎ ವೃಂದದ ಎಲ್ಲಾ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

    ಆದರೆ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ದೃಷ್ಟಿಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ ಅಥವಾ ಸಿಬ್ಬಂದಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

  • ಶೌಚಾಲಯವಿದ್ದರೂ ಬಳಸದ ಸಾರ್ವಜನಿಕರು- ವಿಜಯ್ ಭಾಸ್ಕರ್ ಫುಲ್ ಕ್ಲಾಸ್

    ಶೌಚಾಲಯವಿದ್ದರೂ ಬಳಸದ ಸಾರ್ವಜನಿಕರು- ವಿಜಯ್ ಭಾಸ್ಕರ್ ಫುಲ್ ಕ್ಲಾಸ್

    ಯಾದಗಿರಿ: ಸರ್ಕಾರ ಪ್ರತಿ ಮನೆಗೆ ಸಾವಿರಾರು ರೂಪಾಯಿ ನೀಡಿ, ಸಾರ್ವಜನಿಕರಿಗೆ ಮನೆಗೊಂದು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆದರೆ ಇದನ್ನು ಬಳಸಲು ಸಾರ್ವಜನಿಕರು ನಿರ್ಲಕ್ಷ್ಯ ವಹಿಸುತ್ತಿದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ವಿಜಯ ಭಾಸ್ಕರ್ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಯಾದಗಿರಿ ಜಿಲ್ಲೆಯ ಪ್ರವಾಸದಲ್ಲಿರುವ ವಿಜಯ್ ಭಾಸ್ಕರ್, ಇಂದು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಬಂದಳ್ಳಿ ಗ್ರಾಮದ ಮಾರ್ಗ ಮಧ್ಯೆ ಬಹಿರ್ದೆಸೆಗೆ ಹೋಗುತ್ತಿದ್ದ ವ್ಯಕ್ತಿಯನ್ನು ಕಂಡು ತಮ್ಮ ವಾಹನ ನಿಲ್ಲಿಸಿ, ವ್ಯಕ್ತಿಯನ್ನು ತಡೆದು ಶೌಚಾಲಯ ಬಳಕೆ ಬಗ್ಗೆ ಪಾಠ ಮಾಡಿದ್ದಾರೆ.

    ಈ ಗ್ರಾಮದಲ್ಲಿ ಗ್ರಾ.ಪಂ ವತಿಯಿಂದ ಮನೆಗೊಂದು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಅದನ್ನು ಬಳಸಲು ಗ್ರಾಮಸ್ಥರು ಆಸಕ್ತಿ ತೋರುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಶೌಚಾಲಯ ಬಳಸದಿದ್ದರೆ ಪಡಿತರ ಚೀಟಿ, ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ವಿಜಯ್ ಭಾಸ್ಕರ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಶೌಚಾಲಯ ನಿರ್ಮಾಣಕ್ಕಾಗಿ ಸರ್ಕಾರ ನೀಡಿದ ಪ್ರೋತ್ಸಾಹ ಧನ ಮರುಪಾವತಿ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಜಯ್ ಭಾಸ್ಕರ್ ಜೊತೆ ಧ್ವನಿಗೂಡಿಸಿದ, ಜಿ.ಪಂ ಸಿಇಓ ಶಿಲ್ಪಾ ಶರ್ಮಾ ಮತ್ತು ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಶೌಚಾಲಯ ಬಳಕೆ ಬಗ್ಗೆ ಗ್ರಾಮಸ್ಥರಿಗೆ ತಿಳಿ ಹೇಳಿದರು.

  • ಮಗಳ ಮದ್ವೆಗೆ ಒಂದು ದಿನ ರಜೆ ಹಾಕಿದ ಹಿರಿಯ ಐಎಎಸ್ ಅಧಿಕಾರಿ

    ಮಗಳ ಮದ್ವೆಗೆ ಒಂದು ದಿನ ರಜೆ ಹಾಕಿದ ಹಿರಿಯ ಐಎಎಸ್ ಅಧಿಕಾರಿ

    ಬೆಂಗಳೂರು: ಒಬ್ಬ ಐಎಎಸ್ ಅಧಿಕಾರಿಯ ಮಗಳ ಮದುವೆ ಅಂದರೆ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಅಷ್ಟೇ ಅಲ್ಲದೆ ತಿಂಗಳುಗಳ ಕಾಲ ರಜೆ ಹಾಕಿ ವಿಶೇಷವಾಗಿ ಲಗ್ನಪತ್ರಿಕೆ ಮಾಡಿಸಿ ಅದನ್ನು ಕೊಡುತ್ತಾರೆ. ಆದರೆ ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ತಮ್ಮ ಮಗಳ ಮದುವೆಗೆ ಕೇವಲ ಒಂದೇ ಒಂದು ದಿನ ರಜೆ ತೆಗೆದುಕೊಂಡಿದ್ದಾರೆ.

    ಇದೇ ಭಾನುವಾರ ವಿಜಯಭಾಸ್ಕರ್ ಅವರ ಮಗಳ ನಡೆಯಲಿದೆ. ವಿಜಯ ಭಾಸ್ಕರ್ ಅವರ ಮಗಳು ವೃತ್ತಿಯಲ್ಲಿ ವಕೀಲೆಯಾಗಿದ್ದು, ಉದ್ಯಮಿ ಗೌತಮ್ ಕುಮಾರ್ ಅವರನ್ನು ವರಿಸುತ್ತಿದ್ದಾರೆ. ಮದುವೆಯನ್ನು ಕೂಡ ಸರಳವಾಗಿ ಮಾಡಬೇಕೆಂದು ನಿರ್ಧಾರ ಮಾಡಿರುವ ವಿಜಯಭಾಸ್ಕರ್, ಮಲ್ಲೇಶ್ವರಂನಲ್ಲಿರುವ ಟಿಟಿಡಿ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ನಡೆಸುತ್ತಿದ್ದಾರೆ.

    ಕಲ್ಯಾಣ ಮಂಟಪದ ದಿನದ ಬಾಡಿಗೆ 1,44,500 ರೂ. ಆಗಿದೆ. ಮದುವೆಗೂ ಯಾವುದೇ ಸರ್ಕಾರಿ ವಾಹನಗಳನ್ನು ಬಳಸದೆ ಖಾಸಗಿ ಟ್ರಾವೆಲ್ಸ್ ಮೂಲಕ ವಾಹನಗಳನ್ನು ಬಾಡಿಗೆಗೆ ತರಿಸುತ್ತಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆಯೂ ಕೂಡ ಸರಳವಾಗಿ ಮಾಡಿಸಿದ್ದಾರೆ.

    ಸಾಮಾನ್ಯ ಜನರಂತೆ ಮದುವೆಯ ವೆಡ್ಡಿಂಗ್ ಕಾರ್ಡ್ ಪ್ರಿಂಟ್ ಮಾಡಿಸಿದ್ದಾರೆ. ಕಾರ್ಡ್ ನಲ್ಲಿ ತಮ್ಮ ಹುದ್ದೆ ಹಾಗೂ ಅಧಿಕಾರವನ್ನು ಉಲ್ಲೇಖಿಸದೆ ಕೇವಲ ವಿಜಯಭಾಸ್ಕರ್ ಎಂದು ನಮೂದಿಸಿದ್ದಾರೆ. ತಮ್ಮ ಸಿಬ್ಬಂದಿಗೆ ಖುದ್ದು ಆಮಂತ್ರಣ ಕೊಟ್ಟು ಮದುವೆಗೆ ಬರುವಂತೆ ವಿನಂತಿಸಿದ್ದಾರೆ.