Tag: Vijay Kiragandur

  • ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು

    ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು

    ಮಂಗಳೂರು: ಕಾಂತಾರ ಚಾಪ್ಟರ್‌ 1 (Kantara Chapter 1) ಯಶಸ್ವಿ ಹಿನ್ನೆಲೆಯಲ್ಲಿ ನಿರ್ಮಾಪಕ ವಿಜಯ್‌ ಕಿರಗಂದೂರು (Vijay Kiragandur), ಕರಾವಳಿ ದೇವಿಯ ಮೊರೆ ಹೋಗಿದ್ದಾರೆ.

    ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ಶ್ರೀ ದುರ್ಗಾಪರಮೇಶ್ವರಿ ದೇವಿ (Kateel Durgaaparameshwari Temple) ದರ್ಶನ ಪಡೆದಿದ್ದಾರೆ. ಕಟೀಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್‌ 1 ಮಿಂಚಿನ ಓಟ – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್‌

    ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ವಿಜಯ್ ಕಿರಗಂದೂರು ಭೇಟಿ ನೀಡಿದರು. ಕ್ಷೇತ್ರದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದರು. ಇತ್ತ ಕಾಂತಾರ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

    ಕಾಂತಾರ ಅಧ್ಯಾಯ 1 ಚಿತ್ರ ಬಿಡುಗಡೆಯಾದ ಮೊದಲ ವಾರದಲ್ಲೇ ವಿಶ್ವಾದ್ಯಂತ 500 ಕೋಟಿ ಗಳಿಸಿದೆ ಎಂದು ಹೊಂಬಾಳೆ ಫಿಲಂಸ್ ಅಧಿಕೃತವಾಗಿ ತಿಳಿಸಿದೆ. ‘ಗಲ್ಲಾಪೆಟ್ಟಿಗೆಯಲ್ಲಿ ದೈವಿಕ ಸಿನಿಮೀಯ ಚಂಡಮಾರುತವು ಇನ್ನೂ ಹೆಚ್ಚಿನ ಗಳಿಕೆಯನ್ನು ಮಾಡುತ್ತಿದೆ. ಕಾಂತಾರ ಅಧ್ಯಾಯ 1 ಮೊದಲ ವಾರದಲ್ಲಿ ವಿಶ್ವಾದ್ಯಂತ 509.25 ಕೋಟಿ+ ಜಿಬಿಒಸಿಯನ್ನು ದಾಟಿದೆ! ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಬ್ಲಾಕ್ಬಸ್ಟರ್ ಕಾಂತಾರ’ ಎಂದು ಪೋಸ್ಟ್‌ ಹಂಚಿಕೊಂಡಿದೆ. ಇದನ್ನೂ ಓದಿ: ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – 1 ವಾರಕ್ಕೆ 509 ಕೋಟಿ ಕಲೆಕ್ಷನ್

    ಅ.2 ರಂದು ಕಾಂತಾರ ಚಿತ್ರ ವಿಶ್ವದಾದ್ಯಂತ 7 ಭಾಷೆಗಳಲ್ಲಿ ತೆರೆಕಂಡಿತ್ತು. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಕಾಂತಾರಕ್ಕೆ ಅತ್ಯದ್ಭುತ ರೆಸ್ಪಾನ್ಸ್ ಸಿಗುತ್ತಿದ್ದು, ವಿದೇಶದಲ್ಲೂ ಕಾಂತಾರ ಚಿತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಿಣಾಮ ಮೊದಲ ವಾರ 509 ಕೋಟಿ ಕಲೆಕ್ಷನ್ ಮಾಡಿದೆ.

  • ‘ಮಹಾವತಾರ ನರಸಿಂಹ’ ಚಿತ್ರದ ಮೋಷನ್ ಪೋಸ್ಟರ್ ರಿವೀಲ್ ಮಾಡಿದ ಹೊಂಬಾಳೆ ಫಿಲ್ಮ್ಸ್‌

    ‘ಮಹಾವತಾರ ನರಸಿಂಹ’ ಚಿತ್ರದ ಮೋಷನ್ ಪೋಸ್ಟರ್ ರಿವೀಲ್ ಮಾಡಿದ ಹೊಂಬಾಳೆ ಫಿಲ್ಮ್ಸ್‌

    ಟ ಡಾರ್ಲಿಂಗ್ ಪ್ರಭಾಸ್ ಜೊತೆ ಸಿನಿಮಾ ಮಾಡೋದಾಗಿ ಘೋಷಿಸಿದ ಬೆನ್ನಲ್ಲೇ ಹೊಸ ಚಿತ್ರವೊಂದನ್ನು ಹೊಂಬಾಳೆ ಫಿಲ್ಮ್ಸ್‌ ಘೋಷಿಸಿದೆ. ‘ಮಹಾವತಾರ ನರಸಿಂಹ’ (Mahavatar Narasimha) ಚಿತ್ರದ ಮೋಷನ್ ಪೋಸ್ಟರ್ ಅನ್ನು ಹೊಂಬಾಳೆ ಸಂಸ್ಥೆ ರಿವೀಲ್ ಮಾಡಿದೆ. ಇದನ್ನೂ ಓದಿ:ಇದು ವೈಯಕ್ತಿಕ ದ್ವೇಷ: ಧನುಷ್ ವಿರುದ್ಧ ನಯನತಾರಾ ಗರಂ

    ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಘೋಷಿಸಿದ ಬೆನ್ನಲ್ಲೇ ಹೊಸ ಸಿನಿಮಾದ ಪೋಸ್ಟರ್ ಅನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಹಂಚಿಕೊಂಡಿದೆ. ಪೋಸ್ಟರ್‌ನಲ್ಲಿ ಉಗ್ರಂ ನರಸಿಂಹನ ಅವತಾರವಿರುವ ಮೋಷನ್ ಪೋಸ್ಟರ್ ಅನ್ನು ತಂಡ ಘೋಷಿಸಿದೆ. ಕೈ ಮತ್ತು ಮೈ ತುಂಬಾ ಆಭರಣಗಳು ಇವೆ. ನಂಬಿಕೆಗೆ ಸವಾಲು ಬಂದಾಗ, ಅವನು ಕಾಣಿಸಿಕೊಳ್ಳುತ್ತಾನೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ದೇವರು ವಿಷ್ಣುವಿನ ಅವತಾರ ಎಂದು ಬರೆದಿದ್ದಾರೆ.

     

    View this post on Instagram

     

    A post shared by Hombale Films (@hombalefilms)

    ಈ ಚಿತ್ರ ಹಿಂದಿ, ಕನ್ನಡ, ತೆಲುಗು ಮತ್ತು ತಮಿಳು, ಮಲಯಾಳಂನಲ್ಲಿ ಮೂಡಿ ಬರಲಿದೆ. ಈ ಚಿತ್ರಕ್ಕೆ ಅಶ್ವಿನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ಸಂಸ್ಥೆ ಜೊತೆ ಕ್ಲೀನ್ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಲಿದೆ.

  • 400 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದ ಕೆಜಿಎಫ್ 2 : ಆದರೂ, ಯಶ್ ಅಭಿಮಾನಿಗಳಿಗೆ ನಿರಾಸೆ

    400 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದ ಕೆಜಿಎಫ್ 2 : ಆದರೂ, ಯಶ್ ಅಭಿಮಾನಿಗಳಿಗೆ ನಿರಾಸೆ

    ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ಬಿಡುಗಡೆ ಆಗಿ ಇಂದಿಗೆ 50 ದಿನಗಳನ್ನು ಪೂರೈಸಿದೆ. ವಿಶ್ವದಾದ್ಯಂತ 400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ 50 ದಿನಗಳನ್ನು ಪೂರೈಸುತ್ತಿದೆ ಎಂದು ಹೊಂಬಾಳೆ ಫಿಲ್ಮ್ಸ್ ಘೋಷಿಸಿದೆ. ಬಾಕ್ಸ್ ಆಫೀಸಿನಲ್ಲೂ ದಾಖಲೆ ಬರೆದ ಈ ಸಿನಿಮಾ 100 ದಿನಗಳತ್ತ ಮುನ್ನುಗ್ಗುತ್ತಿದೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    KGF 2 Prakash raj (4)

    50ನೇ ದಿನದ ಸಂಭ್ರಮದಲ್ಲಿ ಯಶ್ ಅಭಿಮಾನಿಗಳು ವಿಶೇಷ ಸುದ್ದಿಯೊಂದಕ್ಕಾಗಿ ಕಾದಿದ್ದರು. ಇವರ ಹೊಸ ಸಿನಿಮಾ ಇಂದು ಘೋಷಣೆ ಆಗಲಿದೆ ಎಂದು ಸುದ್ದಿಯಾಗಿದ್ದರಿಂದ,  ಈ ಸಿನಿಮಾದ ಕುರಿತು ಯಾವೆಲ್ಲ ಮಾಹಿತಿಗಳು ಹೊರ ಬೀಳಲಿವೆ ಎಂದು ಕುತೂಹಲಗೊಂಡಿದ್ದರು. ಆದರೆ, ಅಂತಹ ಯಾವುದೇ ಸುದ್ದಿಯು ಇಂದು ಹೊರ ಬಂದಿಲ್ಲ. ಹಾಗಾಗಿ ಸಹಜವಾಗಿಯೇ ಯಶ್ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    50ನೇ ದಿನ ಪೂರೈಸಿದ ಹಿನ್ನೆಲೆಯಲ್ಲಿ ಸಿನಿಮಾ ನೋಡುಗರಿಗೆ ಗುಡ್ ನ್ಯೂಸ್ ಕೂಡ ನೀಡಿದೆ ಚಿತ್ರತಂಡ. ನಾಳೆಯಿಂದ ಕೆಜಿಎಫ್ 2 ಸಿನಿಮಾ ಓಟಿಟಿಯಲ್ಲಿ ಲಭ್ಯವಿದೆ. ಥಿಯೇಟರ್ ಗೆ ಬಂದು ಸಿನಿಮಾವನ್ನು ಕಣ್ತುಂಬಿಕೊಳ್ಳದವರು ಮನೆಯಲ್ಲೇ ಕೂತು ಓಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲಿಯೂ ದಾಖಲೆ ಬರೆಯುವ ಮುನ್ಸೂಚನೆಗಳು ದಟ್ಟವಾಗಿದೆ. ಇದನ್ನೂ ಓದಿ : ಸರಾಯಿ ಜೊತೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನಟಿ

    ಕೆಜಿಎಫ್ 2 ಹಿಂದಿಯಲ್ಲಿ ಭಾರೀ ಯಶಸ್ಸು ಕಂಡಿದ್ದು, 440 ಕೋಟಿಗೂ ಅಧಿಕ ಹಣ ಕೇವಲ ಬಾಲಿವುಡ್ ನಿಂದ ಬಂದಿದೆ ಎಂದು ಹೇಳಲಾಗುತ್ತಿದೆ. ಇತರ ಭಾಷೆಯೂ ಸೇರಿದಂತೆ ಸಾವಿರಾರು ಕೋಟಿಯನ್ನು ಗಳಿಸುವ ಮೂಲಕ ಕೆಜಿಎಫ್ 2 ದಾಖಲೆ ಬರೆದಿದೆ.

  • ಜಗ್ಗೇಶ್ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್’

    ಜಗ್ಗೇಶ್ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್’

    ಸ್ಯಾಂಡಲ್‌ವುಡ್‌ನಲ್ಲಿ ಬಿಗ್ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡುವುದರಲ್ಲಿ ಖ್ಯಾತಿ ಪಡೆದಿರುವ ಹೊಂಬಾಳೆ ಫಿಲ್ಮ್ಸ್ ಈಗ ಮತ್ತೊಂದು ಚಿತ್ರಕ್ಕೆ ಚಾಲನೆ ಕೊಡಲು ಸಜ್ಜಾಗಿದೆ. ಇದು ಈ ಬ್ಯಾನರ್ ನ 12ನೇ ಸಿನಿಮಾವಾಗಿದೆ.

    ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರು ತಮ್ಮ ಬ್ಯಾನರ್ ನ 12ನೇ ಚಿತ್ರವನ್ನು ಇಂದು ಘೋಷಣೆ ಮಾಡಿದ್ದು, ಚಿತ್ರಕ್ಕೆ ರಾಘವೇಂದ್ರ ಸ್ಟೋರ್ ಎಂದು ಹೆಸರಿಟ್ಟಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನವಿದ್ದು, ನವರಸ ನಾಯಕ ಜಗ್ಗೇಶ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

    ಈ ಸಿನಿಮಾ ಫಸ್ಟ್ ಲುಕ್ ಹೊಂಬಾಳೆ ಫಿಲ್ಮ್ಸ್ ಕೂ ಹಾಗೂ ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ಗಮನಿಸಿದರೆ ಇದೊಂದು ಹೋಟೆಲ್ ಕುರಿತಾದ ಕಥೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದನ್ನೂ ಓದಿ: ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ

    ಸಾಲು ಸಾಲು ಚಿತ್ರ ಘೋಷಿಸಿರುವ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ಮೊದಲ ಚಿತ್ರ ‘ನಿನ್ನಿಂದಲೇ’. 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರ ತೆರೆಗೆ ಬಂದಿತ್ತು. ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಮಾಸ್ಟರ್‌ ಪೀಸ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು.

    2017ರಲ್ಲಿ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ‘ರಾಜಕುಮಾರ’ ಚಿತ್ರ ಸೂಪರ್ ಡ್ಯೂಪರ್ ಹಿಟ್ ಆಯ್ತು. ಕನ್ನಡ ಚಿತ್ರರಂಗದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ‘ರಾಜಕುಮಾರ’ ಚಿತ್ರವೂ ಒಂದು ಎನಿಸಿಕೊಂಡಿತು.

  • ಹೊಂಬಾಳೆ ಸಮೂಹದ ಆರ್ಥಿಕ ನೆರವು – ಮಂಡ್ಯ ಮೆಡಿಕಲ್ ಕಾಲೇಜ್‍ನಲ್ಲಿ ಅತ್ಯಾಧುನಿಕ ಐಸಿಯು

    ಹೊಂಬಾಳೆ ಸಮೂಹದ ಆರ್ಥಿಕ ನೆರವು – ಮಂಡ್ಯ ಮೆಡಿಕಲ್ ಕಾಲೇಜ್‍ನಲ್ಲಿ ಅತ್ಯಾಧುನಿಕ ಐಸಿಯು

    – ಐಸಿಯು ವೈಶಿಷ್ಟ್ಯಗಳೇನು?

    ಮಂಡ್ಯ: ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಷ್ಠಿತ ಹೊಂಬಾಳೆ ಸಮೂಹದ ಆರ್ಥಿಕ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 20 ಹಾಸಿಗೆಗಳ ಅತ್ಯಾಧುನಿಕ ಐಸಿಯು ಘಟಕವನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಉದ್ಘಾಟನೆ ನೆರೆವೇರಿಸಿದರು.

    ಕಟ್ಟಡ ನಿರ್ಮಾಣ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿಜಯ್ ಕಿರಗಂದೂರು ಅವರ ನೇತೃತ್ವದ ಹೊಂಬಾಳೆ ಸಮೂಹವು, ಮಂಡ್ಯ ಜಿಲ್ಲೆಯಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಒದಗಿಸಲು ಸುಮಾರು 2.35 ಕೋಟ ರೂ. ದೇಣಿಗೆ ನೀಡಿದೆ.

    ಈ ನೆರವಿನ ಮೂಲಕ ಜಿಲ್ಲೆಯ ವೈದ್ಯಕೀಯ ಕಾಲೇಜಿನಲ್ಲಿ 55 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಐಸಿಯು ಸ್ಥಾಪಿಸಲಾಗಿದೆ. ಇನ್ನು ತಲಾ 90 ಲಕ್ಷ ರೂ. ವೆಚ್ಚದಲ್ಲಿ ಪಾಂಡವಪುರ ಮತ್ತು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಘಟಕಗಳನ್ನು ಅಳವಡಿಸಲಾಗುತ್ತಿದೆ.

    ಪಾಂಡವಪುರ ಆಸ್ಪತ್ರೆಯ ಆಕ್ಸಿಜನ್ ಘಟಕಕ್ಕೆ ಭೂಮಿ ಪೂಜೆ ನೆರೆವರಿಸಲಾಗಿದೆ. ಕೆ.ಆರ್.ಪೇಟೆ ಆಸ್ಪತ್ರೆಯಲ್ಲಿ ಈಗಾಗಲೇ ಯಂತ್ರಗಳನ್ನು ಅಳವಡಿಸಲಾಗುತ್ತಿದ್ದು, 15 ದಿನಗಳಲ್ಲಿ ಕಾಮಗಾರಿ ಪೂರ್ಣ ವಾಗಲಿದೆ. ಎರಡೂ ಆಮ್ಲಜನಕ ಘಟಕಗಳು ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದಿಸಿ ಪೂರೈಕೆ ಮಾಡುವ ಸಾಮರ್ಥ್ಯ ಹೊಂದಿವೆ.

    ಐಸಿಯು ವೈಶಿಷ್ಟ್ಯಗಳೇನು?
    ಹೊಂಬಾಳೆ ಸಮೂಹದ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಕಿರಗಂದೂರು ಅವರು ತಮ್ಮ ತವರು ಜಿಲ್ಲೆ ಮಂಡ್ಯದಲ್ಲಿ ಆರೋಗ್ಯ ಮೂಲಭೂತ ಸೌಕರ್ಯ ಹೆಚ್ಚಿಸಲು ಸರ್ಕಾರದ ಜತೆ ಕೈ ಜೋಡಿಸಿ ದೇಣಿಗೆ ನೀಡಿದ್ದಾರೆ.

    ಅವರ ಆಶಯದಂತೆ ನೂತನ ಐಸಿಯುನಲ್ಲಿ ಜಾಗತಿಕ ಗುಣಮಟ್ಟದ ವೆಂಟಿಲೇಟರ್‍ಗಳು, ಮಾನಿಟರ್‍ಗಳನ್ನು ಅಳವಡಿಸಲಾಗಿದೆ. ಮುಖ್ಯವಾಗಿ ರಿಮೋಟ್ ಕಂಟ್ರೋಲ್ ವ್ಯವಸ್ಥೆ ಇದ್ದು, ವೈದ್ಯರು ಯಾವುದೇ ಭಾಗದಲ್ಲಿದ್ದರೂ ರೋಗಿಗೆ ಅತ್ಯುತ್ತಮ ಚಿಕಿತ್ಸೆ ನೀಡಬಹುದು. ಚತುಷ್ಮುಖಿ (four way communication system) ಸಂಪರ್ಕ ಜಾಲದ ಸೌಲಭ್ಯವನ್ನು ಈ ಐಸಿಯು ಹೊಂದಿದೆ. ಮಂಡ್ಯದಲ್ಲಿ ಇದೇ ಮೊದಲಿಗೆ ಇಂಥ ಆಧುನಿಕ ಐಸಿಯು ಸ್ಥಾಪನೆ ಆಗಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಜಯ್ ಕಿರಗಂದೂರು ಅವರು, ಕೋವಿಡ್ ಬಂದು ಇಡೀ ಜಗತ್ತಿನ ಆದ್ಯತೆಗಳು ಬದಲಾಗಿವೆ. ಆರೋಗ್ಯ ಎನ್ನುವುದು ಬಹಳ ಮುಖ್ಯ ಎನ್ನುವ ಅರಿವಾಗಿದೆ. ಹೀಗಾಗಿ ಬಡವ-ಬಲ್ಲಿದನೆಂಬ ಬೇಧವಿಲ್ಲದೆ ಪ್ರತಿಯೊಬ್ಬರಿಗೂ ಗುಣಮಟ್ಟದ ಚಿಕಿತ್ಸೆ ಸಿಗಬೇಕು ಎನ್ನುವುದು ನನ್ನ ಕಾಳಜಿ. ಆದ್ದರಿಂದ ನನ್ನ ತವರು ಜಿಲ್ಲೆ ಮಂಡ್ಯದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಒಂದು ಅಳಿಲು ಸೇವೆಯನ್ನು ಸಲ್ಲಿಸಿದ್ದೇನೆ ಎಂದರು.

    ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಶಾಸಕರಾದ ಎಂ.ಶ್ರೀನಿವಾಸ, ಕೆ.ಟಿ.ಶ್ರೀಕಂಠೇಗೌಡ, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಸಿ.ಪಿ.ಉಮೇಶ್, ಜಿಲ್ಲಾಧಿಕಾರಿ ಅಶ್ವತಿ, ಹೊಂಬಾಳೆ ಸಮೂಹದ ನಿರ್ದೇಶಕ ಚೆಲುವೇಗೌಡ, ವಿಮ್ಸ್ ನಿರ್ದೇಶಕ ಹರೀಶ ಜಿಲ್ಲೆಯ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು.

  • ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಅಪ್ಪು ಭರ್ಜರಿ ಸಿಹಿ ಸುದ್ದಿ

    ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಅಪ್ಪು ಭರ್ಜರಿ ಸಿಹಿ ಸುದ್ದಿ

    – ಹೊಂಬಾಳೆ ಫಿಲಂಸ್ ಬ್ಯಾನರಿ ಅಡಿ ಮತ್ತೊಂದು ಸಿನಿಮಾ

    ಬೆಂಗಳೂರು: ಯುಗಾದಿ ಹಬ್ಬದಂದು ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಯುವರತ್ನ ಸಿನಿಮಾ ಬಳಿಕ ಮತ್ತೆ ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ಪುನೀತ್ ರಾಜ್‍ಕುಮಾರ್ ಅಭಿನಯಿಸುತ್ತಿದ್ದಾರೆ.

    ಈ ಕುರಿತು ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ಪುನೀತ್ ರಾಜ್‍ಕುಮಾರ್ ಅವರಿಗೆ ಮತ್ತೊಂದು ಸಿನಿಮಾ ನಿರ್ಮಿಸುತ್ತಿರುವುದಾಗಿ ಘೋಷಿಸಿದ್ದಾರೆ. ಅಪ್ಪು ಸಹ ಇದನ್ನು ರೀ ಟ್ವೀಟ್ ಮಾಡಿದ್ದಾರೆ.

    ಇನ್ನೂ ವಿಶೇಷ ಎಂಬಂತೆ ಈ ಸಿನಿಮಾಗೆ ಯು ಟರ್ನ್ ಖ್ಯಾತಿಯ ಪವನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ. ಯಾವ ರೀತಿಯ ಸಿನಿಮಾ ಇರಬಹುದು, ಥ್ರಿಲ್ಲರ್ ಮೂವಿನಾ ಎಂದು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ. ಆದರೆ ಚಿತ್ರದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‍ಡೇಟ್ ಸಿಗಲಿದೆ. ನಿರ್ದೇಶಕ ಪವನ್ ಕುಮಾರ್ ಅವರು ಯು ಟರ್ನ್ ಹಾಗೂ ಲೂಸಿಯಾ ಸಿನಿಮಾಗಳ ಮೂಲಕ ಪರಿಚಿತರಾಗಿದ್ದಾರೆ, ಹೀಗಾಗಿ ನಿರೀಕ್ಷೆ ಹೆಚ್ಚಿದೆ.

    ಇನ್ನೂ ಸಂತಸ ಸಂಗತಿ ಎಂದರೆ ಜುಲೈ ತಿಂಗಳಲ್ಲಿ ಪ್ರಿನ್ಸಿಪಲ್ ಫೋಟೋಗ್ರಫಿ ಆರಂಭವಾಗಲಿದೆ ಎಂದು ವಿಜಯ್ ಕಿರಗಂದೂರ್ ತಮ್ಮ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಫೋಟೋ ಶೂಟ್ ಬಳಿಕ ಯಾವ ರೀತಿಯ ಸಿನಿಮಾ ಎಂಬ ಬಗ್ಗೆ ಸುಳಿವು ಸಿಗಲಿದೆಯೇ ಕಾದು ನೋಡಬೇಕಿದೆ. ಯುವರತ್ನ ಸಕ್ಸಸ್ ಬಳಿಕ ಜೇಮ್ಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಪುನೀತ್ ರಾಜ್‍ಕುಮಾರ್, ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಳ್ಳುವ ಮೂಲಕ ಮತ್ತೆ ಬ್ಯುಸಿಯಾಗುತ್ತಿದ್ದಾರೆ.

  • ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’ ರಿಲೀಸ್‍ಗೆ ಡೇಟ್ ಫಿಕ್ಸ್

    ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’ ರಿಲೀಸ್‍ಗೆ ಡೇಟ್ ಫಿಕ್ಸ್

    ಬೆಂಗಳೂರು: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ತೆರೆ ಮೇಲೆ ಬರಲು ಡೇಟ್ ಫಿಕ್ಸ್ ಆಗಿದೆ. 2022ರ ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

    ಕೆಜಿಎಫ್ ಚಾಪ್ಟರ್-1 ಮತ್ತು ಕೆಜಿಎಫ್-2 ಚಿತ್ರಗಳು ಭಾರತ ಸಿನಿಮಾ ರಂಗದಲ್ಲಿ ಸಖತ್ ಟ್ರೆಂಡ್ ಸೆಟ್ ಮಾಡಿವೆ. ಈ ಸಿನಿಮಾಗಳ ನಿರ್ದೇಶನ ಮತ್ತು ಮೇಕಿಂಗ್ ನೋಡಿದ ಎಲ್ಲರೂ ಪ್ರಶಾಂತ್ ನೀಲ್ ನಿರ್ದೇಶನಕ್ಕೆ ಬೌಲ್ಡ್ ಆಗಿದ್ದರು. ಕೆಜಿಎಫ್-2 ಸಿನಿಮಾ ಮುಗಿದ ಬಳಿಕ ಪ್ರಶಾಂತ್ ನೀಲ್ ಅವರು ಕೈಗೆತ್ತಿಕೊಂಡ ಸಿನಿಮಾ ಸಲಾರ್ ಇದೀಗ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಈ ಕುರಿತು ಹೊಂಬಾಳೆ ಫಿಲ್ಮ್ ಮುಂದಿನ ವರ್ಷ ಏಪ್ರಿಲ್ 14 ರಂದು ಸಲಾರ್ ತೆರೆಗೆ ಬರಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

    ಸಲಾರ್ ಸಿನಿಮಾದಲ್ಲಿ ಬಾಹುಬಲಿ ಖ್ಯಾತಿಯ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಹೀರೋ ಆಗಿ ಅಭಿನಯಿಸಿದ್ದಾರೆ. ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಜೋಡಿಯ ಮೊದಲ ಸಿನಿಮಾ ಸಲಾರ್ ಆಗಿದ್ದು ಇದೀಗ ಅಭಿಮಾನಿಗಳಲ್ಲಿ ಬಾರಿ ಕುತೂಹಲ ಕೆರಳಿಸಿದೆ. ಸಲಾರ್ ಚಿತ್ರ ಕೆಜಿಎಫ್ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಹೊಂಬಾಳೆ ಫಿಲ್ಮ್ ಬ್ಯಾನರ್ ಅಡಿಯಲ್ಲಿ ಸಿದ್ಧವಾಗಲಿದೆ.

    ಟಾಲಿವುಡ್ ಬಹು ನಿರೀಕ್ಷಿತ ಸಲಾರ್ ಸಿನಿಮಾದ ಮೂಹೂರ್ತ ಪೂಜೆ ಕೆಲ ತಿಂಗಳ ಹಿಂದೆ ಹೈದರಾಬಾದ್ ನಲ್ಲಿ ನಡೆದಿತ್ತು. ಮೂಹೂರ್ತ ಪೂಜೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ಡಿಸಿಎಂ ಅಶ್ವತ್ಥ ನಾರಾಯಣ ಭಾಗವಹಿಸಿದ್ದರು.

  • ಕೆಂಪಾದ ಗನ್‌ನಿಂದ ಸಿಗರೇಟ್‌ ಹೊತ್ತಿಸಿಕೊಂಡ ರಾಕಿ ಬಾಯ್‌‌ – ಕೆಜಿಎಫ್‌ 2 ಟೀಸರ್‌ ಬಿಡುಗಡೆ

    ಕೆಂಪಾದ ಗನ್‌ನಿಂದ ಸಿಗರೇಟ್‌ ಹೊತ್ತಿಸಿಕೊಂಡ ರಾಕಿ ಬಾಯ್‌‌ – ಕೆಜಿಎಫ್‌ 2 ಟೀಸರ್‌ ಬಿಡುಗಡೆ

    ಬೆಂಗಳೂರು: ಶುಕ್ರವಾರ ಬೆಳಗ್ಗೆ 10:18ಕ್ಕೆ ಬಿಡುಗಡೆಯಾಗಬೇಕಿದ್ದ ಕೆಜಿಎಫ್‌ ಚಾಪ್ಟರ್‌ 2 ಟೀಸರ್‌ ಇಂದು ರಾತ್ರಿ 9:29ಕ್ಕೆ ಬಿಡುಗಡೆಯಾಗಿದೆ.

    ಒಟ್ಟು 2 ನಿಮಿಷ 16 ಸೆಕೆಂಡ್‌ ವಿಡಿಯೋ ಇದ್ದು ಇದರರಲ್ಲಿ ರಾಕಿ ಬಾಯ್‌ ಯಶ್‌, ಅಧೀರ ಸಂಜಯ್‌ ದತ್‌, ರಮೀಕಾ ಸೇನ್‌ ರವೀನಾ ಟಂಡನ್‌, ರೀನಾ ದೇಸಾಯಿ ಶ್ರೀನಿಧಿ ಶೆಟ್ಟಿ ಪಾತ್ರವನ್ನು ತೋರಿಸಲಾಗಿದೆ. ವಿಶೇಷವಾಗಿ ರಾಕಿ ಬಾಯ್‌ ಮಿಷನ್‌ ಗನ್‌ನಿಂದ ಜೀಪುಗಳ ಮೇಲೆ ಫೈರ್‌ ಮಾಡಿದ್ದು ಎರಡು ಜೀಪುಗಳು ಮೇಲಕ್ಕೆ ಹಾರಿವೆ. ಬಳಿಕ ಫೈರ್‌ ಮಾಡಿದ ಕೆಂಪಾದ ಗನ್‌ನಿಂದ ರಾಕಿ‌ ಸಿಗರೇಟ್‌ ಹೊತ್ತಿಸುತ್ತಿರುವ ದೃಶ್ಯವನ್ನು ತೋರಿಸಲಾಗಿದೆ.

    ಶುಕ್ರವಾರ ಯಶ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಗಿಫ್ಟ್‌ ನೀಡಲು ಟೀಸರ್‌ ರಿಲೀಸ್‌ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ ಇಂದು ರಾತ್ರಿ ದಿಢೀರ್‌ ಆಗಿ ಕೆಜಿಎಫ್‌ ಸಿನಿಮಾ ಟೀಸರ್‌ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿತ್ತು.

    ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿ ಟ್ರೆಂಡಿಂಗ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕ ಪ್ರಶಾಂತ್‌ ನೀಲ್‌ ಗುರುವಾರ ರಾತ್ರಿ 9:02ಕ್ಕೆ ಟ್ವೀಟ್‌ ಮಾಡಿ ರಾತ್ರಿ 9:29ಕ್ಕೆ ರಿಲೀಸ್‌ ಮಾಡುತ್ತೇವೆ ಎಂದು ಟ್ವೀಟ್‌ ಮಾಡಿ ತಿಳಿಸಿದ್ದರು.

    https://twitter.com/prashanth_neel/status/1347204512159727616

    ವಿಶೇಷ ಏನೆಂದರೆ ಟೀಸರ್‌ ರಿಲೀಸ್‌ ಮಾಡುವ ವಿಚಾರ ತಿಳಿದು ಮೊದಲೇ ಅಭಿಮಾನಿಗಳು ಹೊಂಬಾಳೆ ಫಿಲ್ಮ್‌ ಯೂ ಟ್ಯೂಬ್‌ ಖಾತೆಗೆ ಬಂದಿದ್ದರು. ಒಟ್ಟು 74 ಸಾವಿರ ಜನ ರಾತ್ರಿ 9:29ಕ್ಕೆ ಹೊಂಬಾಳೆ ಫಿಲ್ಮ್‌ ಖಾತೆಯಲ್ಲಿ ಟೀಸರ್‌ ನೋಡಲು ಆಗಮಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈಗ ಕೆಜಿಎಫ್‌ ಚಾಪ್ಟರ್‌ 2 ನಂಬರ್‌ ಒನ್‌ ಟ್ರೆಂಡಿಂಗ್‌ನಲ್ಲಿದೆ.

  • ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ ಕೆಜಿಎಫ್ ಅಧೀರ

    ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ ಕೆಜಿಎಫ್ ಅಧೀರ

    ಬೆಂಗಳೂರು: ಮಾಸ್ಕ್ ಹಾಕಿಕೊಂಡು ಕೊರೊನಾ ವೈರಸ್‍ನಿಂದ ದೂರ ಇರಿ ಎಂದು ಕೆಜಿಎಫ್ ಚಿತ್ರದಲ್ಲಿ ಬರುವ ಖಳನಾಯಕ ಅಧೀರ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾನೆ.

    ಅಧೀರನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಂಜಯ್ ದತ್ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಕನ್‌ಫ್ಯೂಸ್ ಆಗಬೇಡಿ. ಬೊಮ್ಮನಹಳ್ಳಿಯ ಬಿಬಿಎಂಪಿಯವರು ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಆಧೀರನನ್ನು ಬಳಸಿದ್ದಾರೆ. ಕೆಜಿಎಫ್ ಚಿತ್ರದ ಅಧೀರ ರುಮಾಲಿನ ಬಟ್ಟೆಯಿಂದ ಬಾಯಿ ಮುಚ್ಚಿಕೊಂಡಿರುವ ಫೋಟೋ ಹಾಕಿ, ಮಾಸ್ಕ್ ಹಾಕಿಕೊಳ್ಳಿ, ನಿಮ್ಮನ್ನು ನೀವು ಕಾಪಾಡಿಕೊಳ್ಳಿ. ನೋಡಿ ಅಧೀರನು ಕೂಡ ಮಾಸ್ಕ್ ಹಾಕಿದ್ದಾನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: ಕತ್ತಿ ಹಿಡಿದು ಬೇಟೆಗೆ ಕಾಯ್ತಿರೋ ಅಧೀರನ ಲುಕ್ ಧಗ ಧಗ

    https://twitter.com/vkiragandur/status/1288672451245686785?s=21

    ಈ ಟ್ವೀಟ್ ಕಂಡು ಖುಷಿಯಾದ ಕೆಜಿಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್ ರೀಟ್ವೀಟ್ ಮಾಡಿದ್ದು, ಅಧೀರ ಕೆಜಿಎಫ್ ಚಿತ್ರದಲ್ಲಿ ಖಳನಾಯಕನಾಗಿರಬಹುದು. ಆದರೆ ಆತನೂ ಕೂಡ ಕೊರೊನಾ ವೈರಸ್ ವಿರುದ್ಧ ಒಳ್ಳೆಯ ಜಾಗೃತಿಯನ್ನು ಮೂಡಿಸುತ್ತಿದ್ದಾನೆ. ಹೌದು ಮಾಸ್ಕ್ ಧರಿಸಿ, ನಿಮ್ಮನ್ನು ನೀವು ಕಾಪಾಡಿಕೊಳ್ಳುವುದರ ಜೊತೆ ನಿಮ್ಮ ಸುತ್ತಮುತ್ತಲಿರುವ ಜನರನ್ನು ಕಾಪಾಡಿ. ಬನ್ನಿ ಇಡೀ ಜಗತ್ತನ್ನೆ ಸುರಕ್ಷಿತವಾಗಿ ಮಾಡೋಣ. ಒಳ್ಳೆ ಆಯ್ಕೆ ಬೊಮ್ಮನಹಳ್ಳಿ ಬಿಬಿಎಂಪಿ ಎಂದು ಬರೆದುಕೊಂಡಿದ್ದಾರೆ.

    ಇಡೀ ಭಾರತವೇ ಕೆಜಿಎಫ್-2 ಚಿತ್ರದ ಬಿಡುಗಡೆಗೆ ಕಾಯುತ್ತಿದೆ. ಜೊತೆಗೆ ಈ ಚಿತ್ರದಲ್ಲಿ ಬರುವ ಅಧೀರನ ಪಾತ್ರವೂ ಅಷ್ಟೇ ಕುತೂಹಲವನ್ನು ಹುಟ್ಟುಹಾಕಿದೆ. ಈ ಪಾತ್ರದಲ್ಲಿ ಬಾಲಿವುಡ್ ಸ್ಟಾರ್ ನಟ ಸಂಜಯ್ ದತ್ ಅವರು ಅಭಿನಯಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಶೂಟಿಂಗ್ ಮುಗಿದೆ. ಕಳೆದ ಬುಧವಾರ ಸಂಜಯ್ ದತ್ ಅವರ ಹುಟ್ಟು ಹಬ್ಬದ ಪ್ರಯಕ್ತ ಕೆಜಿಎಫ್ ಚಿತ್ರತಂಡ ಅಧೀರನ ಇನ್ನೊಂದು ಹೊಸ ಲುಕ್ ಅನ್ನು ಬಿಡುಗಡೆ ಮಾಡಿದೆ. ಕ್ರೂರತ್ವಕ್ಕೆ ಹಿಡಿದ ಕೈಗನ್ನಡಿಯಂತಿರುವ ಅಧೀರನ ಇನ್ನೊಂದು ಲುಕ್‍ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

  • ಐಟಿ ದಾಳಿ ಬಳಿಕ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲ ಪ್ರತಿಕ್ರಿಯೆ

    ಐಟಿ ದಾಳಿ ಬಳಿಕ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲ ಪ್ರತಿಕ್ರಿಯೆ

    ಬೆಂಗಳೂರು: ಕೆಜಿಎಫ್ ಸಿನಿಮಾ ದೊಡ್ಡ ಸಕ್ಸಸ್ ಆಗಿತ್ತು. ಚಿತ್ರ ಬಿಡುಗಡೆಯಾದ ಎರಡನೇ ವಾರವೇ ಐಟಿ ಅಧಿಕಾರಿಗಳು ನನ್ನ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದರು. ಸಿನಿಮಾ ಮತ್ತು ನನ್ನ ವೈಯಕ್ತಿಕ ಆದಾಯಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ನಮ್ಮಿಂದ ಕೆಲ ಮಾಹಿತಿಗಳನ್ನು ಪಡೆದುಕೊಂಡರು. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇವೆ. ಕೆಜಿಎಫ್ ದೊಡ್ಡ ಹಿಟ್ ಪಡೆದಿದ್ದರಿಂದ ನನ್ನ ಮೇಲೆ ಐಟಿ ದಾಳಿಯಾಗಿರುವ ಸಾಧ್ಯತೆಗಳಿವೆ. ಬೇರೆ ನಟ ಮತ್ತು ನಿರ್ಮಾಪಕರ ಮೇಲೆ ಯಾವ ಕಾರಣಕ್ಕೆ ದಾಳಿ ಆಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದಾರೆ.

    ಐಟಿ ದಾಳಿ ಅಂತ್ಯವಾಗಿದ್ದು, ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಸೂಚಿಸಿದ್ದಾರೆ. ಸಿನಿಮಾ ಬಿಡುಗಡೆಯಾದ ಎರಡನೇ ವಾರ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಚಿತ್ರದ ಪ್ರಮೋಷನ್ ಗೆ ಹೊಡೆತ ಬಿದ್ದಿದೆ. ಮೂರನೇ ವಾರದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡಬೇಕೆಂದು ಯಶ್ ಸೇರಿದಂತೆ ಎಲ್ಲರು ಪ್ಲಾನ್ ಮಾಡಿದ್ದೀವಿ. ಅಧಿಕಾರಿಗಳು ತಮಗೆ ಬಂದಿರುವ ಮಾಹಿತಿ ಸತ್ಯನೋ ಅಥವಾ ಸುಳ್ಳೋ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಬರುತ್ತಾರೆ. ಆದಾಯ ಅಧಿಕಾರಿಗಳು ತಮ್ಮ ಮೇಲಾಧಿಕಾರಿಗಳ ಆದೇಶದ ಮೇರೆಗೆ ಮನೆಗೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.

    ನಾನು ಯಾವುದೇ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿಲ್ಲ. ಕನ್ಸ್ಟ್ರಕ್ಷನ್ ಬ್ಯುಸಿನೆಸ್ ಜೊತೆ ಸಿನಿಮಾಗಳಿಗೆ ನಿರ್ಮಾಪಕನಾಗಿ ಕೆಲಸ ಮಾಡಿಕೊಂಡಿದ್ದೇನೆ. ಅಧಿಕಾರಿಗಳು ಮನೆಗೆ ಬಂದ ಮೊದಲ ದಿನವೇ ಎಲ್ಲ ಪರಿಶೀಲನೆ ಮುಗಿದಿತ್ತು. ಏಕಕಾಲದಲ್ಲಿ ಎಲ್ಲರ ಮನೆ ಮೇಲೆ ಐಟಿ ದಾಳಿ ನಡೆದಿದ್ದರಿಂದ ಬೇರೆಯವರ ವಿಚಾರಣೆ ಮುಗಿಯುವವರೆಗೂ ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಎರಡು ದಿನ ಹೊರಗೆ ಬರಲಿಲ್ಲ ಅಂತಾ ಹೇಳಿದರು.

    ಇದು ಆದಾಯಕ್ಕೆ ಸಂಬಂಧಿಸಿದಂತಹ ವಿಷಯ. ಯಾವುದೇ ರಾಜಕೀಯ ವಿಚಾರಕ್ಕೆ ಸಂಬಂಧಿಸಿಲ್ಲ. ಅಧಿಕಾರಿಗಳು ಕೇಳಿದ ದಾಖಲಾತಿಗಳನ್ನು ನಾವು ನೀಡಿದ್ದೇವೆ. ತನಿಖೆಗೂ ಸಹಕಾರ ನೀಡಿದ್ದೇವೆ. ಯಾವುದೇ ಗೊಂದಲ ಬೇಡ ಎಂದು ಅಭಿಮಾನಿಗಳಲ್ಲಿ ವಿಜಯ್ ಮನವಿ ಮಾಡಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv